ಬೆಂಗಳೂರು: ಹೆತ್ತ ತಾಯಿಯನ್ನು ಕೊಂದು ಸೂಟ್ಕೇಸ್ನಲ್ಲಿ ಶವವಿಟ್ಟು ಪೊಲೀಸ್ ಠಾಣೆಗೆ ಹೊತ್ತು ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮಗಳು ಸೇನಾಲಿ ಸೇನ್ ಎಂಬಾಕೆ ತಾಯಿ ಬೀವಾ ಪಾಲ್ (70) ಎಂಬಾಕೆಯನ್ನು ಕೊಲೆ ಮಾಡಿ, ಸೂಟ್ಕೇಸ್ನಲ್ಲಿ ತಂದೆಯ ಫೋಟೋ ಜತೆಗೆ ತಾಯಿ ಶವವಿಟ್ಟು, ಮೈಕೊಲೇಔಟ್ ಪೊಲೀಸ್ ಠಾಣೆಗೆ ಹೊತ್ತು ತಂದು ಶರಣಾಗಿದ್ದಾಳೆ. ನೀನು ನನ್ನ ತಂದೆ ಬಳಿ ಹೋಗು: ಈ ಪ್ರಕರಣದ ವಿಚಾರಣೆ ವೇಳೆ ಸೆನಾಲಿ ಸೇನ್ ಮತ್ತಷ್ಟು ಮಾಹಿತಿಯನ್ನು ಬಿಚ್ಚಿಟ್ಟಿದ್ದಾಳೆ. ತಾಯಿಯೇ ಮಗಳ ಬಳಿ ನಿದ್ರೆ ಮಾತ್ರೆ ಕೊಟ್ಟು ಸಾಯಿಸುವಂತೆ ಹೇಳಿದಳು ಎಂಬ ಅಂಶ ಬೆಳಕಿಗೆ ಬಂದಿದೆ. ಕೆಲವು ವರ್ಷಗಳ ಹಿಂದೆ ಸೆನಾಲಿ ತಂದೆ ತೀರಿ ಹೋಗಿದ್ದಾರೆ. ನೀನು ನನ್ನ ತಂದೆ ಬಳಿ ಹೋಗು, ನಾನು ಜೈಲಿಗೆ ಹೋಗ್ತೀನಿ ಎಂದು ಕೊಲೆ ಮಾಡುವ ಮುಂಚೆಯೇ ತಾಯಿ-ಮಗಳು ಮಾತನಾಡಿದ್ದರು ಎಂಬ ಸಂಗತಿ ಬಯಲಾಗಿದೆ. ಮಾನಸಿಕವಾಗಿ ಕುಗ್ಗಿ ಹೋಗಿದ್ದಳು: ಆರೋಪಿ ಸೆನಾಲಿ ಸೇನ್, ತಾಯಿ ಬೀವಾ ಪಾಲ್ ಮತ್ತು ಸೆನಾಲಿ ಅತ್ತೆ…
Author: main-admin
ಕನ್ನಡಲ್ಲಿ ಹಬ್ಬ, ಗ್ರಾಮದೇವತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ದಕ್ಷಿಣದ ಖ್ಯಾತ ಖಳನಟ ಕಜನ್ ಖಾನ್ ನಿಧನರಾಗಿದ್ದಾರೆ. ನಿನ್ನೆ ಅವರಿಗೆ ಹೃದಯಾಘಾತವಾಗಿದ್ದು , ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.1992ರಲ್ಲಿ ತೆರೆಕಂಡ ಸೆಂತಮೀಜ್ ಪಾಟ್ವು ಎಂಬ ತಮಿಳು ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅವರು, ನಂತರ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದರು. 1999ರಲ್ಲಿ ತೆರೆಕಂಡ ಹಬ್ಬ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದರು. ಹಬ್ಬ ಬಳಿಕ ಅವರು ನಾಗದೇವತೆ ಸಿನಿಮಾದಲ್ಲಿ ಖಳನಟರಾಗಿ ಕಾಣಿಸಿಕೊಂಡಿದ್ದರು. ಕನ್ನಡ, ತಮಿಳು, ಮಲಯಾಳಂ ಸಿನಿಮಾ ರಂಗದಲ್ಲಿ ವಿಲನ್ ಪಾತ್ರದ ಮೂಲಕವೇ ಗುರುತಿಸಿಕೊಂಡಿದ್ದ ಕಜನ್ ಖಾನ್, ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದರು. ಅಗಲಿದ ನಟನಿಗೆ ಅನೇಕ ತಾರೆಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಹಠಾತ್ ನಿಧನ ಚಿತ್ರರಂಗಕ್ಕೆ ಆಘಾತ ಮೂಡಿಸಿದೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ಹೊಸ ಬಾಡಿಗೆದಾರರು ಮತ್ತು ಹೊಸ ಮನೆ ಕಟ್ಟಿದವರಿಗೂ ಮಾಸಿಕ 53 ಯುನಿಟ್ ಜೊತೆಗೆ 10% ಉಚಿತ ವಿದ್ಯುತ್ ಸಿಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಬಾಡಿಗೆದಾರರು, ಹೊಸ ಮನೆ ನಿರ್ಮಿಸಿದವರಿಗೆ ಸರಾಸರಿ 53 ಯುನಿಟ್ ಜೊತೆಗೆ ಹೆಚ್ಚುವರಿಯಾಗಿ ಶೇ. 10% ರಷ್ಟು ಯುನಿಟ್ ಬಳಕೆಯ ಮಿತಿಯನ್ನು ವಿಧಿಸಲು ನಿರ್ಧರಿಸಲಾಗಿದೆ.ಒಂದು ವರ್ಷದವರೆಗೆ ಲೆಕ್ಕ ಸಿಗದವರಿಗೆ ಇದು ಅನ್ವಯವಾಗಲಿದೆ. 12 ತಿಂಗಳ ಬಳಿಕ ಸರಾಸರಿ ತೆಗೆದುಕೊಂಡು ಹೊಸ ಸರಾಸರಿ ನಿಗದಿ ಮಾಡಲಾಗುವುದು ಎಂದು ಹೇಳಿದ್ದಾರೆ. 200 ಯುನಿಟ್ ಉಚಿತ ವಿದ್ಯುತ್ ಷರತ್ತು ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 100 ಯುನಿಟ್ ಬಳಕೆ ನಂತರ 7 ರೂ. ದರ ವಿಧಿಸಲಾಗುತ್ತಿದ್ದು, 200 ಯುನಿಟ್ ದಾಟಿದ ಬಳಿಕ 8.20 ರೂ. ವಿಧಿಸಲಾಗುತ್ತಿದೆ. ದರ ಏರಿಕೆಯಲ್ಲಿ ತಪ್ಪಾಗಿದೆ ಎಂಬುದರ ಬಗ್ಗೆ ಅಧಿಕಾರಿಗಳು ಪರಿಶೀಲಿಸಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳೂರು: ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಸಿ ರೋಡ್ ತಲಪಾಡಿ ನಿವಾಸಿಯಾಗಿರುವ ಅಬ್ಬುಲ್ ರಶೀದ್ ಮೊಯದ್ದೀನ್ (41), ದೇರಳಕಟ್ಟೆಯ ಪಿ ಆರೀಫ್ (40) ಬಂಧಿತ ಆರೋಪಿಗಳು. ರವಿವಾರ ಕೊಣಾಜೆ ಪೊಲೀಸ್ ಠಾಣಾ ಪಿ.ಎಸ್.ಐ ಅಶೋಕ್ ರವರಿಗೆ ನೆತ್ತಿಲಪದವು ಸೈಟ್ ಕಂಬಳ ನಡೆಸುವ ಜಾಗದ ಬಳಿ ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ವೇಳೆ ಇಬ್ಬರು ಆರೋಪಿಗಳು ಖಾಕಿ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳಿಂದ 20 ಗ್ರಾಂ ಮೆಥಾಂಪೆಟಾಮೈನ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 1,06,500/ ಎಂದು ಪೊಲೀಸರು ಹೇಳಿದ್ದಾರೆ. ಈ ಕಾರ್ಯಾಚರಣೆಯನ್ನು ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ಐಪಿಎಸ್ ಹಾಗೂ ಅಂಶು ಕುಮಾರ್, ಉಪ ಪೊಲೀಸ್ ಆಯುಕ್ತರು ಕಾನೂನು ಮತ್ತು ಸುವ್ಯವಸ್ಥೆ ಹಾಗೂ ದಿನೇಶ್ ಕುಮಾರ್, ಉಪ ಪೊಲೀಸ್ ಆಯುಕ್ತರು (ಅಪರಾಧ…
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ 83 ರೌಡಿ ಶೀಟರ್‌ಗಳ ಮನೆಗಳಲ್ಲಿ ಪೊಲೀಸರು ಜೂ.11ರ ಭಾನುವಾರ ದಿಢೀರ್ ತಪಾಸಣೆ ನಡೆಸಿದ್ದಾರೆ. ಅಕ್ರಮ ಆಯುಧಗಳ ಬಗ್ಗೆ ಶೋಧ ನಡೆಸಿ ಯಾವುದೇ ರೌಡಿ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. ತಪಾಸಣೆ ವೇಳೆ ಯಾವುದೇ ಅಯುಧಗಳು ಪತ್ತೆಯಾಗಿಲ್ಲ. ಪೊಲೀಸ್ ಇಲಾಖೆ ಆಗಾಗ್ಗೆ ಇಂತಹ ತಪಾಸಣೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಇದರಿಂದಾಗಿ ರೌಡಿಗಳ ಮೇಲೆ ನಿರಂತರ ನಿಗಾ ಸಾಧ್ಯವಾಗುತ್ತದೆ ಎಂದು ಎಸ್ಪಿ ತಿಳಿಸಿದ್ದಾರೆ.ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲೂ 148 ಮಂದಿ ರೌಡಿ ಶೀಟರ್, ಹಳೆ ಆರೋಪಿಗಳನ್ನು ತಪಸೆಣೆಗೊಳಪಡಿಸಲಾಗಿದೆ.
ಬೆಂಗಳೂರು:ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವಕ & ಯುವತಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚಿಕ್ಕಜಾಲ ವ್ಯಾಪ್ತಿಯ ತರಬನಹಳ್ಳಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ಮೂಲದ ಚಂದ್ರಶೇಖರ್ ಹಾಗೂ ಗೋಕಾಕ್ನ ಸುಧಾರಾಣಿ ಮೃತ ದುರ್ವೈವಿಗಳು. ತರಬನಹಳ್ಳಿಯಲ್ಲಿ ವಾಸವಿದ್ದ ಚಂದ್ರಶೇಖರ್ ಬಾಡಿಗೆ ಮನೆಗೆ ಸುಧಾರಾಣಿ ತೆರಳಿದ್ದಳು.ಇಬ್ಬರಿಗೆ ವಿವಾಹ ನಿಶ್ಚಯವಾಗಿತ್ತು ಎನ್ನಲಾಗಿದೆ. ಇಬ್ಬರು ಕೂಡ ರಾತ್ರಿ ಸ್ನಾನಕ್ಕೆಂದು ಗ್ಯಾಸ್ ಗೀಸರ್ ಆನ್ ಮಾಡಿ ಬಾತ್ರೂಮ್ಗೆ ಹೋಗಿದ್ದಾರೆ. ಆ ವೇಳೆ ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆಯಾಗಿದೆ.
ಉಪ್ಪಿನಂಗಡಿ : ಕ್ಷುಲ್ಲಕ ಕಾರಣಕ್ಕೆ ಎರಡು ವಿಧ್ಯಾರ್ಥಿಗಳ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದಲ್ಲಿ ನಡೆದಿದೆ. ಇದೀಗ 8 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಸಂಘರ್ಷ ನಿರತ ವಿದ್ಯಾರ್ಥಿಗಳ ಗುಂಪನ್ನು ಕರ್ತವ್ಯದಲ್ಲಿದ್ದ ಪೊಲೀಸರು ಸಮಾಧಾನ ಪಡಿಸಿ ಚದುರಿಸಲು ಯತ್ನಿಸಿದರೂ, ಅದನ್ನು ಲೆಕ್ಕಿಸದೆ ಹೊಡೆದಾಟದಲ್ಲಿ ತೊಡಗಿದ್ದರು. ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಗಿರೀಶ್, ಅಭಿಷಿತ್, ಧನುಷ್, ಮೋಹನ್, ನಂದನ್, ವಿನ್ಯಾಸ್, ರೂಪೇಶ್, ಹಿತೇಶ್ ಎಂಬುವರನ್ನು ವಶಕ್ಕೆ ಪಡೆದು ಅವರ ವಿರುದ್ದ ಸಾರ್ವಜನಿಕ ಶಾಂತಿಭಂಗದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ
ಉಪ್ಪಿನಂಗಡಿ: ಟ್ಯಾಂಕರ್ ಲಾರಿ ತಡೆದು ತಂಡವೊಂದು ಚಾಲಕನ ಮೇಲೆ ದಾಳಿ ನಡೆಸಿ ನಗದು ದೋಚಿ ಪರಾರಿಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದಲ್ಲಿ ನಡೆದಿದೆ. ಸುರತ್ಕಲ್ ನಿವಾಸಿ ಆಸ್ಕರ್ ವಿನ್ಸೆಂಟ್ ಸೋನ್ಸ್ (61) ಹಲ್ಲೆಗೊಳಗಾದ ವ್ಯಕ್ತಿ. ವಿನ್ಸೆಂಟ್ ಕುಳೂರಿನಿಂದ ಟ್ಯಾಂಕರ್ ನ್ನು ಚಲಾಯಿಸಿ ಬರುತ್ತಿದ್ದು ಉಪ್ಪಿನಂಗಡಿ ಬಳಿ ಖಾಸಗಿ ಬಸ್‌ನಿಂದ ವ್ಯಕ್ತಿಯೊಬ್ಬ ಇಳಿದು ಟ್ಯಾಂಕರ್ ನಿಲ್ಲಿಸುವಂತೆ ಸೂಚಿಸಿದ್ದಾನೆ. ಇವರು ಟ್ಯಾಂಕರ್ ನಿಲ್ಲಿಸದೆ ಮುಂದೆ ಹೋದಾಗ ಕಾರೊಂದು ಬಂದು ಲಾರಿಗೆ ಅಡ್ಡ ಹಾಕಿ ಮೂವರು ವ್ಯಕ್ತಿಗಳು ಕಾರಿನಿಂದ ಇಳಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದರೋಡೆ ನಡೆಸಿದ ವೇಳೆ ಅವರ ಕೈ, ಬಾಯಿ ಮತ್ತು ಕಣ್ಣಿಗೆ ಗಾಯಗಳಾಗಿದ್ದು, ಅವರ ಬಳಿಯಿದ್ದ 6000 ರೂಪಾಯಿ ನಗದನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದೆ.
ಹೆಬ್ರಿ: ಸೀತಾನದಿ ಜಕ್ಕನಮಕ್ಕಿ ಬಳಿ ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟು, ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ. ಇನ್ನು ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದ್ದಾರೆ.
ವಿಟ್ಲ : ಕೆಲಸಕ್ಕೆಂದು ತೆರಳಿದ ವಿಟ್ಲದ ಯುವತಿಯೊಬ್ಬಳು ನಾಪತ್ತೆಯಾಗಿರುವ ಪ್ರಕರಣ ನಡೆದಿದೆ. ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ನಿವಾಸಿ ಬಾಲಕೃಷ್ಣ ಎಂಬವರ ಪುತ್ರಿ ಶ್ರೀದೇವಿ (23) ನಾಪತ್ತೆಯಾದವರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ವಲಯ ಸೇವಾ ಪ್ರತಿನಿಧಿಯಾಗಿರುವ ಶ್ರೀದೇವಿ ಜೂ.9 ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದವರು ಸಂಜೆ ವರೆಗೂ ಬಾರದ ಹಿನ್ನಲೆಯಲ್ಲಿ ವಿಟ್ಲ ಪೇಟೆ, ಸಂಬಂಧಿಕರ ಮನೆ ಸಹಿತ ವಿವಿಧೆಡೆ ಹುಡುಕಾಟ ನಡೆಸಲಾಗಿತ್ತು. ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಎಲ್ಲೂ ಕಂಡುಬರದ ಹಿನ್ನಲೆಯಲ್ಲಿ ವಿಟ್ಲ ಠಾಣೆಗೆ ತಂದೆ ಬಾಲಕೃಷ್ಣ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪತ್ತೆ ಕಾರ್ಯ ನಡೆಯುತ್ತಿದೆ.










