Author: main-admin

ಮಣಿಪಾಲ: ಕೇಂದ್ರ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿಯೊರ್ವರ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಪೆರ್ಡೂರು ನಿವಾಸಿ 83 ವರ್ಷದ ಗೋಪಾಲ ನಾಯಕ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಮೃತಪಟ್ಟು ಮೂರು ದಿನಗಳು ಕಳೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತರು ದಶರಥ ನಗರದ ನರಸಿಂಗೆ ದೇವಸ್ಥಾನದ ಬಳಿ ಒಬ್ಬಂಟಿಯಾಗಿ ವಾಸವಾಗಿದ್ದರು. ಮಣಿಪಾಲ ಪೋಲಿಸ್ ಠಾಣೆಯ ಪೋಲಿಸ್ ಅಧಿಕಾರಿಗಳು ಘಟನಾ ಸ್ಥಳಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು.

Read More

ಮಂಗಳೂರು:‌ ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಉರ್ವ ಜಂಕ್ಷನ್ ಹತ್ತಿರದ ಮೈದಾನದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಆರೋಪದಡಿಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದೀಪಕ್ ಶೆಟ್ಟಿ ಕೋಡಿಕಲ್, ಅನಿಲ್ ಶೆಟ್ಟಿ ಕೋಡಿಕಲ್ ಹಾಗೂ ಗಿರೀಶ್ ರೈ ವಾಮಂಜೂರು ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಉರ್ವಾ ಠಾಣಾ ಪೊಲೀಸರು ತಿಳಿಸಿದ್ದಾರೆ.

Read More

ಉಡುಪಿ: ಅಪರೂಪ ಹಾಗೂ ಆಕರ್ಷಣೀಯವಾದ ‘ಸ್ಪಾಟೆಡ್ ಮೊರೈ ಈಲ್ಸ್’ ಮೀನು ಸುರತ್ಕಲ್ ಬೀಚ್ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದರ ವೈಜ್ಞಾನಿಕ ಹೆಸರು ಜಿಮ್ನೋಥೊರಾಕ್ಸ್ ಮೊರಿಂಗಾ. ಸ್ಥಳೀಯವಾಗಿ ಆರೋಳಿ ಮೀನು ಎಂಬುದಾಗಿ ಕರೆಯುತ್ತಾರೆ. ನೋಡಲು ಕನ್ನಡಿ ಹಾವಿನಂತೆ ಕಂಡು ಬರುವ ಈ ಮೀನು ಕಪ್ಪು ಚುಕ್ಕೆಗಳಿಂದ ಬಹಳಷ್ಟು ಆಕರ್ಷಣೀಯವಾಗಿದೆ.ಈ ಜಾತಿಯ ಮೀನು ಹೆಚ್ಚಾಗಿ ಕೆಂಪು ಬಣ್ಣದಿಂದ ಕೂಡಿರುತ್ತದೆ. ಆದರೆ ಈ ರೀತಿ ಚುಕ್ಕೆಗಳೊಂದಿಗೆ ಕಂಡುಬಂದಿರುವ ಈ ಮೀನು ಸ್ಥಳೀಯರಿಗೆ ಅಪರೂಪವಾಗಿದೆ.ದ್ವೀಪದ ಬಳಿ ಇರುವ ಹವಳ ದಿಬ್ಬದಂತಹ ಸ್ಥಳಗಳಲ್ಲಿ ವಾಸ ಮಾಡುತ್ತದೆ. ಪ್ರಕ್ಷುಬ್ಧವಾದ ಕಡಲಿನ ಅಲೆಗಳ ಅಬ್ಬರದಿಂದ ತೀರಕ್ಕೆ ಬಂದಿರಬಹುದು ಎಂದು ಮಂಗಳೂರು ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆಯ ಮಂಗಳೂರು ಪ್ರಾದೇಶಿಕ ಕೇಂದ್ರ ವಿಜ್ಞಾನಿ ರಾಜೇಶ್ ಕೆ ಎಂ ತಿಳಿಸಿದ್ದಾರೆ. ಇದು ಸಾಮಾನ್ಯವಾಗಿ 60 ಸೆಂಟೀ ಮೀಟರ್ ಉದ್ದ ಬೆಳೆಯುತ್ತದೆ.ಗರಿಷ್ಠ 2.51 ಕೇಜಿ ತೂಗುತ್ತದೆ. ಒಂಟಿಯಾಗಿ ವಾಸ ಮಾಡುತ್ತದೆ. ಉಷ್ಣ ವಲಯದ ನೀರಿನಲ್ಲಿ ವಾಸಿಸುವ ಈ ಮೀನುಗಳು ಮೊಟ್ಟೆ ಇಡಲು ವಲಸೆ ಹೋಗುತ್ತದೆ…

Read More

ಕಾಪು: ಕಾರ್ಮಿಕರಿಬ್ಬರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಕೊನೆಗೊಂಡಿರುವ ಘಟನೆ ಕಟಪಾಡಿ ಪೇಟೆಯಲ್ಲಿ ಜು.17ರಂದು ಸಂಜೆ ನಡೆದಿದೆ. ಮೃತರನ್ನು ಒರಿಸ್ಸಾ ಮೂಲದ ಕಾರ್ಮಿಕ ಗಣೇಶ್(50) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಟಪಾಡಿ -ಶಿರ್ವ ರಸ್ತೆಯಲ್ಲಿರುವ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಇವರಿಬ್ಬರ ಮಧ್ಯೆ ಕೆಲಸದ ವಿಚಾರವಾಗಿ ನಡೆದ ಹೊಡೆದಾಟದಲ್ಲಿ ಗಣೇಶ್ ಗಂಭೀರವಾಗಿ ಗಾಯಗೊಂಡಿದ್ದರೆನ್ನಲಾಗಿದೆ. ಕೂಡಲೇ ಸ್ಥಳೀಯರು ಹಾಗೂ ಇತರ ಕಾರ್ಮಿಕರು ಗಣೇಶ್‌ನನ್ನು ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯೆ ಗಣೇಶ್ ಮೃತಪಟ್ಟರೆಂದು ತಿಳಿದುಬಂದಿದೆ. ಸ್ಥಳಕ್ಕೆ ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ, ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕುಲಗುಜ್ಜಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ, ಕಾಪು ಎಸ್ಸೈ ಶ್ರೀಶೈಲ ಮುರಗೋಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ದೇವಾಲಯಗಳಿಗೆ ತೆರಳಿ ಪೋಟೋ ಕ್ಲಿಕ್ಕಿಸಲೆಂದೇ ತೆರಳುವವರಿಗೆ ರಾಜ್ಯ ಸರ್ಕಾರ ಶಾಕಿಂಗ್​ ನ್ಯೂಸ್​ ನೀಡಿದೆ. ಕರ್ನಾಟಕದ ದೇಗುಲಗಳಲ್ಲಿ ಮೊಬೈಲ್​ ಬಳಕೆಗೆ ನಿಷೇಧ ಹೇರಿ ನೂತನ ಆದೇಶ ಹೊರಡಿಸಿದೆ. ಇಂದು ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಈ ಆದೇಶವನ್ನು ಹೊರಡಿಸಿದ್ದು ದತ್ತಿ ಇಲಾಖೆಗಳ ಅಡಿಯಲ್ಲಿ ಬರುವ ಯಾವುದೇ ದೇಗುಲಗಳಲ್ಲಿ ಇನ್ಮೇಲೆ ಮೊಬೈಲ್​ ಬಳಕೆ ಮಾಡುವಂತಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರ 30 ಸಾವಿರಕ್ಕೂ ಅಧಿಕ ದೇವಾಲಯಗಳು ಇರುತ್ತದೆ. ಈಗಾಗಲೇ ದತ್ತಿ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ದೇಗುಲಗಳಿಗೆ ಮೊಬೈಲ್​ ಬಳಕೆ ಮಾಡದಂತೆ ಫಲಕಗಳನ್ನು ಅಳವಡಿಸಲಾಗಿದೆಯಾದರೂ ಸಹ ಅದನ್ನು ಯಾರೂ ಪಾಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಈ ಆದೇಶ ಹೊರಬಿದ್ದಿದೆ.

Read More

ಉಡುಪಿ : ಟಿಪ್ಪರ್ ಲಾರಿಯೊಂದರ ಡಂಪರ್ ಗೆ ಸ್ಯಾಂಟ್ರೋ ಕಾರು ಸಿಲುಕಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದೀಗ ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ. ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರ್ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗಿದೆ. ಈ ವೇಳೆ ಹೆದರಿಕೆಯಿಂದ ಟಿಪ್ಪರ್ ಚಾಲಕ ಲಾರಿಯನ್ನು ವೇಗವಾಗಿ ಚಲಾಯಿಸಿದ್ದಾನೆ. ಆದರೆ ಟಿಪ್ಪರ್ ನ ಹಿಂಬದಿಗೆ ಕಾರು ಸಿಲುಕಿರುವ ವಿಚಾರ ಚಾಲಕನಿಗೆ ಗೊತ್ತಿಲ್ಲ, ಈ ನಡುವೆ ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದ ಸಾರ್ವಜನಿಕರು ಟಿಪ್ಪರ್ ಚಾಲಕನಿಗೆ ಬೈದು ನಿಲ್ಲಿಸಿದ ಸಾರ್ವಜನಿಕರು. ಬಳಿಕ ಟಿಪ್ಪರನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಶಿಮ್ಲಾ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಯಿಂದ ಹಿಮಾಚಲ ಪ್ರದೇಶ ತತ್ತರಿಸಿ ಹೋಗಿದ್ದು, ಈ ನಡುವೆ ಕುಲು ಜಿಲ್ಲೆಯ ಕಿಯಾಸ್ ಮತ್ತು ನ್ಯೋಲಿಯಲ್ಲಿ ಮೇಘಸ್ಫೋಟ ಸಂಭವಿಸಿ, ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಇಂದು ಮುಂಜಾನೆ ನಡೆದ ಮೇಘಸ್ಫೋಟದಿಂದ 9 ವಾಹನಗಳು ಕೂಡ ಜಖಂಗೊಂಡಿವೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಇದೂವರೆಗೂ ಸುಮಾರು 8 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ.

Read More

ಉಡುಪಿ: ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿರುವ ನಕಲಿ ಅಪ್ಲಿಕೇಷನ್‌ಗಳ ಕುರಿತು ಸಾರ್ವಜನಿಕರು ಎಚ್ಚರ ವಹಿಸುವಂತೆ ಉಡುಪಿ ಪೊಲೀಸ್ ಇಲಾಖೆ ಮನವಿ ಮಾಡಿದೆ. ಈ ರೀತಿಯ ನಕಲಿ ಅಪ್ಲಿಕೇಷನ್‌ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ನ್ನು ಬಳಸಬಾರದು. ಈ ರೀತಿಯಾದ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾವುದೇ ಹೆಲ್ಪ್‌ಡೆಸ್ಕ್ ನಿಂದ ಕರೆ ಮಾಡಿ ನೀವು ಈ ಯೋಜನೆಗೆ ಆಯ್ಕೆಯಾಗಿದ್ದಿರಿ, ನಿಮ್ಮ ವೈಯುಕ್ತಿಕ ವಿವರಗಳನ್ನು ನೀಡುವಂತೆ ತಿಳಿಸಿದ್ದಲ್ಲಿ ಕೂಡ ಯಾವುದೇ ಮಾಹಿತಿ ನೀಡಬಾರದು. ಸಾರ್ವಜನಿಕರು ಇಂತಹ ನಕಲಿ ಅಪ್ಲಿಕೇಷನ್‌ಗಳ ಮೂಲಕ ತಮ್ಮ ವೈಯಕ್ತಿಕ ಆಧಾರ್, ಪ್ಯಾನ್ ಕಾರ್ಡ್ ಮಾಹಿತಿ ನೀಡಿ ಮೋಸ ಹೋಗಬಾರದು. ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸರಕಾರವು ಇದುವರೆಗೂ ಯಾವುದೇ ಅಂಡ್ರಾಯ್ಡಾ ಅಪ್ಲಿಕೇಷನ್ ಅನ್ನು…

Read More

ಮಂಗಳೂರು; 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಕಣ್ಣೂರು ಅಡ್ಯಾರ್‌ ನಿವಾಸಿ ಹಸೈನಾರ್‌ ಆಲಿಯಾಸ್‌ ಹಸೈನ್‌(35) ಬಂಧಿತ ಆರೋಪಿ. ಈತ 2012ರಲ್ಲಿ ಯುವತಿಯೋರ್ವಳು ಲೇಡಿಹಿಲ್‌ ಸಮೀಪ ಫ್ಲ್ಯಾಟ್‌ ಕಡೆಗೆ ಹೋಗುತ್ತಿದ್ದಾಗ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಉರ್ವ ಠಾಣೆಗೆ ಯುವತಿ ದೂರು ನೀಡಿದ್ದಳು. ಈ ವೇಳೆ ಆರೋಪಿಯನ್ನು ಬಂಧಿಸಲಾಗಿತ್ತು.ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಈತನಿಗೆ 2014ರ ಅ.18ರಂದು 4 ತಿಂಗಳ ಕಾರಾಗೃಹ ಶಿಕ್ಷೆ ತೀರ್ಪು ಪ್ರಕಟವಾಗಿತ್ತು.ಆದರೆ ಆರೋಪಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ವಾರಂಟ್‌ ಹೊರಡಿಸಲಾಗಿದ್ದು, ಈ ಹಿನ್ನೆಲೆ ಈತನನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

Read More

ನೋಯ್ಡಾ: ಗ್ರೇಟರ್ ನೋಯ್ಡಾದ ಗೌರ್ ಸಿಟಿಯಲ್ಲಿ ಮಹಿಳೆಯೊಬ್ಬರು ತನ್ನ ಪತಿ ಪೊಲೀಸ್ ಸಿಬ್ಬಂದಿ ಮತ್ತು ವಕೀಲನಂತೆ ಪೋಸ್‌ ಕೊಡುತ್ತಾ ಇತರರಿಗೆ ತೊಂದರೆ ಕೊಡುತ್ತಿದ್ದಾನೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ. ನಿಶಾ ಎಂದು ಗುರುತಿಸಲಾದ ಮಹಿಳೆ, ತನ್ನ ಪತಿ ತನುಜ್ ಸಿಂಗ್ ಈ ನಕಲಿ ಗುರುತನ್ನು ಇತರರನ್ನು ಬೆದರಿಸಲು ಬಳಸಿದ್ದಾನೆ ಎಂದು ಹೇಳಿಕೊಂಡಿದ್ದಾಳೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯ ಮನೆಯಿಂದ ಪೊಲೀಸ್ ಸಮವಸ್ತ್ರ, ಐ-ಕಾರ್ಡ್ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ನಿಶಾ ಸಿಂಗ್ ಕೂಡ ತನ್ನ ಪತಿಯನ್ನು ಕೌಟುಂಬಿಕ ದೌರ್ಜನ್ಯದ ಆರೋಪ ಮಾಡಿದ್ದಾಳೆ. ತನುಜ್ ತನ್ನನ್ನು ಮತ್ತು ತನ್ನ ಮಕ್ಕಳನ್ನು ಥಳಿಸುತ್ತಿದ್ದರು. ಪೊಲೀಸ್ ಅಧಿಕಾರಿ ಮತ್ತು ವಕೀಲರನ್ನು ಸೋಗು ಹಾಕುವ ಮೂಲಕ ತನುಜ್ ಜನರಿಂದ ಹಣ ವಸೂಲಿ ಮಾಡುತ್ತಿದ್ದ ಎಂದು ಆಕೆ ಆರೋಪಿಸಿದ್ದಾರೆ. ಏತನ್ಮಧ್ಯೆ, ಗೌರ್ ಸಿಟಿ 14 ನೇ ಅಡ್ಡರಸ್ತೆಯ ನಿವಾಸಿ ತನುಜ್ ಸಿಂಗ್ ಶುಕ್ರವಾರ (ಜುಲೈ 14) ವರದಿ ಸಲ್ಲಿಸಿದ್ದಾರೆ ಎಂದು ಬಿಸ್ರಖ್ ಪೊಲೀಸ್ ಠಾಣೆ ಪ್ರಭಾರಿ…

Read More