Author: main-admin

ಬೆಳ್ತಂಗಡಿ : ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟ ಘಟನೆ, ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡು ಬಂದಿದೆ. ಘಟನ ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು, ಮುಂಜಾಗ್ರತ ಕ್ರಮವನ್ನು ಕೈಗೊಂಡಿದ್ದಾರೆ. ಬೆಳ್ತಂಗಡಿ -ಬಂಟ್ವಾಳ ತಾಲೂಕು ಗಡಿ ಭಾಗದಲ್ಲಿರುವ ಬಾಡಾರು ಎಂಬಲ್ಲಿ ಈ ಕೊರಗಜ್ಜನ ದೇವಾಸ್ಥಾನವಿದ್ದು, ನೇಮೋತ್ಸನ ನಡೆಯುತ್ತಿತ್ತು ಎನ್ನಲಾಗಿದ್ದು, ದೇವಾಲಯದ ಜಾಗಕ್ಕೆ ಸಂಬಂಧಪಟ್ಟಂತೆ ಆಗಾಗ್ಗಾ ಜಗಳ ನಡೆಯುತ್ತಿತ್ತು, ಎನ್ನಲಾಗಿದೆ. ಈ ನಡುವೆ ಕಿಡಿಗೇಡಿಗಳು ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟಿ ಅಟ್ಟಹಾಸ ಮರೆದಿದ್ದಾರೆ ಎನ್ನಲಾಗಿದೆ. ಈ ನಡುವೆ ಘಟನೆ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

Read More

ಕಡಬ ತಾಲೂಕಿನ ಕಲ್ಲುಗುಡ್ಡೆಯ ಆರ್ಲ ನಿವಾಸಿ ಸೈನಿಕ ಅಝೀಝ್ ಅವರ ಪತ್ನಿ ಫೌಝಿಯಾ ಮೇಲೆ ಹಲ್ಲೆ ನಡೆದ ಘಟನೆ ನಡೆದಿದೆ. ಆರ್ಲ ನಿವಾಸಿ ಸೈನಿಕ ಅಝೀಝ್ ಅವರ ಪತ್ನಿ ಫೌಝಿಯಾ ಮೇಲೆ ಹಲ್ಲೆ ನಡೆದಿದ್ದು, ಜಾಗದ ತಕರಾರಿನ ವಿಚಾರದಲ್ಲಿ ಪಕ್ಕದ ಮನೆಯ ನಾಲ್ವರಿಂದ ಫೌಝಿಯಾ ಮೇಲೆ ಹಲ್ಲೆ ಮಾಡಿದ್ದಾರೆ. ನಿತ್ಯ ಜಾಗದ ವಿಚಾರದಲ್ಲಿ ವಿನಾಕಾರಣ ಪುಂಡರ ಗ್ಯಾಂಗ್ ವೊಂದು ಜಗಳವಾಡುತ್ತಿದ್ದರು. ಕಲ್ಲುಗುಡ್ಡೆಯಲ್ಲಿ ತಂದೆಯ ಮನೆಗೆ ಫೌಝಿಯಾ ಹೋಗಿದ್ದರು, ಈ ಸಂದರ್ಭ ತಂದೆ ಹಾಗೂ ಮಗಳು ಫೌಝಿಯಾ ಮೇಲೆ ಪುಂಡರ ಗ್ಯಾಂಗ್ ಹಲ್ಲೆ ಮಾಡಿದೆ. ಕಡಬ ಸರ್ಕಾರಿ ಆಸ್ಪತ್ರೆಗೆ ಫೌಝಿಯಾ ದಾಖಲಾಗಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಸುಬ್ರಹ್ಮಣ್ಣ: ಕುಕ್ಕೆ ಕ್ಷೇತ್ರದಿಂದ ಅನತಿ ದೂರದಲ್ಲಿರುವ ನೂಚಿಲದ ಗುಡ್ಡ ಕುಸಿಯುವ ಭೀತಿ ಇರುವ ಹಿನ್ನೆಲೆಯಲ್ಲಿ ಅಲ್ಲಿನ 8 ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂರಿಸಲಾಗಿದೆ. ಯಾವುದೇ ಸಮಯದಲ್ಲಿ ಈ ಗುಡ್ಡ ಕುಸಿಯುವ ಸಂಭವವಿದ್ದು ಮುಂಜಾಗ್ರತೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಅಭಯ ಪ್ರವಾಸಿ ಮಂದಿರದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ 8 ಕುಟುಂಬಗಳನ್ನು ಸ್ಧಳಾಂತರಿಸಲಾಗಿದೆ. ಗೀತಾ ಸತೀಶ್ ನೂಚಿಲ, ಪದ್ದಯ್ಯ ನೂಚಿಲ, ದುಗ್ಗಣ್ಣ ನೂಚಿಲ, ದಿನೇಶ್‌ ನೂಚಿಲ, ಶೋಭಾ ಭಾಸ್ಕರ ನೂಚಿಲ, ದೇವಕಿ ಬಾಲಕೃಷ್ಣ, ಶೋಭಾ ಪ್ರಮೋದ್ ಕುಮಾರ್ ಮತ್ತು ಬಿ.ಎನ್. ರಾಧಾಕೃಷ್ಣ ಅವರ ಮನೆಗಳು ಬೆಟ್ಟದ ತಪ್ಪಲ್ಲಿನಲ್ಲಿವೆ. ಕಡಬ ತಹಶೀಲ್ದಾರ್ ರಮೇಶ್ ಬಾಬು ಅವರು ಈ ಕುಟುಂಬಗಳಿಗೆ ನೋಟಿಸ್ ಜಾರಿ ಮಾಡಿದ್ದು, ತಕ್ಷಣವೇ ಮನೆಗಳಿಂದ ತೆರವುಗೊಳಿಸಿ ಬೇರೆ ಕಡೆ ವಾಸ್ತವ್ಯ ಹೂಡಬೇಕು ಅಥವಾ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಸುಬ್ರಹ್ಮಣ್ಯದ ನೂಚಿಲದಲ್ಲಿ ಬೆಟ್ಟದ ತಪ್ಪಲಿನಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮನೆಗಳನ್ನು ಮಳೆಗಾಲ ಮುಗಿಯುವವರೆಗೆ ಬಳಸದಂತೆಯೂ ಸೂಚನೆ ನೀಡಲಾಗಿದೆ. ಎಸ್‌ಡಿಆರ್‌ಎಫ್ ತಂಡ ಸ್ಥಳ ಪರಿಶೀಲಿಸಿ…

Read More

ಬಜ್ಪೆ: ನೀರಿನ ಸಮಸ್ಯೆಯನ್ನು ಪರಿಹರಿಸಿ ಕೊಡುವಂತೆ ಕಂದಾವರ ಪಂಚಾಯತ್ ನ ಮೆಂಬರ್ ಸವಿತಾ ಎಂಬವರಿಗೆ ಯುವತಿಯೊಬ್ಬರು ಮನವಿ ಮಾಡಿದ್ದು, ಆದರೆ ಅವರು ಪುರುಷನೋರ್ವನಿಗೆ ಆ ಯುವತಿಯ ನಂಬರ್ ನೀಡಿ ಕರೆ ಮಾಡಿಸಿ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿ ಬಂದಿದೆ. ಹೌದು..! ಘಟನೆ ಸಂಬಂಧ ಯುವತಿಯ ಸಹೋದರ ಹಾಗೂ ಸ್ಥಳೀಯರು ಸೇರಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ದೂರು ದಾಖಲಿಸಿಕೊಂಡು ತಕ್ಷಣದಲ್ಲಿ ಕ್ರಮಕೈಗೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಗ್ರಾಮಸ್ಥರು ಪೊಲೀಸ್ ಠಾಣೆ ಬಳಿ ಜಮಾಯಿಸಿ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಯುವತಿಯ ಸಹೋದರ ಚರಣ್ ಎಂಬವರು ಈ ಬಗ್ಗೆ ಮಾತನಾಡಿದ್ದು, ನಾನು ಮುಂಡಾಲ ಸಮುದಾಯದ ಯುವಕನಾಗಿದ್ದೇನೆ, ನಮ್ಮ ಗ್ರಾಮದಲ್ಲಿ ಹಲವು ಸಮಯಗಳಿಂದಲೂ ನೀರಿನ ಸಮಸ್ಯೆ ಇದೆ. ಇದರ ಬಗ್ಗೆ ನನ್ನ ತಂಗಿ ಪಂಚಾಯತ್ ಸದಸ್ಯೆ ಸವಿತಾ, ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಗೂ ಪಿಡಿಓಗೆ ಕರೆ ಮಾಡಿ ತಿಳಿಸಿದ್ದಾಳೆ. ಆದ್ರೆ ಸವಿತಾ ಅವರು, ನನ್ನ ತಂಗಿಯ ನಂಬರ್ ಸುದರ್ಶನ್ ಎಂಬ ವ್ಯಕ್ತಿಯೋರ್ವನಿಗೆ…

Read More

ಕಾಂಗ್ರೆಸ್ ಪಕ್ಷ 5ಗ್ಯಾರಂಟಿ ಯೋಜನೆಗಳಲ್ಲಿ ಒಂದೊಂದೇ ಯೋಜನೆಗಳ ಜಾರಿಗೆ ಕ್ರಮ ಕೈಗೊಂಡಿದ್ದು, ಇದೀಗ ಸರಕಾರವು ಅನ್ನಭಾಗ್ಯ ಯೋಜನೆ ಜಾರಿ ತರಲು ಅಕ್ಕಿ ಕೊರತೆ ಹಿನ್ನೆಲೆಯಲ್ಲಿ ನೇರ ನಗದು ವರ್ಗಾವಣೆಗೆ (ಡಿಬಿಟಿ) ಚಾಲನೆ ನೀಡಲಿದ್ದಾರೆ. ಆದರೆ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಸುಮಾರು 22 ಲಕ್ಷ ಕುಟುಂಬಗಳಿಗೆ ಬ್ಯಾಂಕ್ ಖಾತೆಗಳಿಲ್ಲದ ಕಾರಣ ತಕ್ಷಣವೇ ನೆರವು ಸಿಗುವುದಿಲ್ಲ.ಕರ್ನಾಟಕವು ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟುಂಬಗಳ 1.28 ಕೋಟಿ ಪಡಿತರ ಚೀಟಿಯನ್ನು ಹೊಂದಿದೆ. ಇವುಗಳಲ್ಲಿ ಶೇ 99 ರಷ್ಟು ಕಾರ್ಡ್‌ಗಳು ಆಧಾರ್ ಸಂಖ್ಯೆಗಳೊಂದಿಗೆ ಸೀಡ್ ಆಗಿವೆ. ಅವುಗಳಲ್ಲಿ, 1.06 ಕೋಟಿ ಕಾರ್ಡ್‌ಗಳನ್ನು ಹೊಂದಿರುವ ಶೇ 82 ರಷ್ಟು ಸಕ್ರಿಯ ಬ್ಯಾಂಕ್ ಖಾತೆಗಳೊಂದಿಗೆ ಲಿಂಕ್ ಆಗಿದೆ. ಅಂತವರಿಗೆ ಹಣವನ್ನು ವರ್ಗಾಯಿಸಲಾಗುತ್ತದೆ. ಉಳಿದವರಿಗೆ ಹೊಸ ಖಾತೆಗಳನ್ನು ತೆರೆಯಲು ತಿಳಿಸಲಾಗುವುದು ಎಂದು ಭಾನುವಾರ ತಿಳಿಸಿದೆ. ಒಟ್ಟು 1.27 ಕೋಟಿ ಪಡಿತರ ಚೀಟಿಗಳಲ್ಲಿ ಒಬ್ಬ ಸದಸ್ಯರನ್ನು ಕುಟುಂಬದ ಮುಖ್ಯಸ್ಥರಾಗಿ (ಎಚ್ಒಎಚ್) ಪರಿಗಣಿಸಲಾಗಿದೆ. ‘ಈ ಎಚ್‌ಒಎಚ್‌ಗಳ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾಯಿಸಲಾಗುತ್ತದೆ.…

Read More

ಸುಳ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌  ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ವಿಷಯ ತಿಳಿದ ಬಳಿಕ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಆ ದೂರಿನಂತೆ ಪೊಲೀಸರು ಆರೋಪಿ ಮೇಲೆ  ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಸುಳ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌  ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ವಿಷಯ ತಿಳಿದ ಬಳಿಕ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಆ ದೂರಿನಂತೆ ಪೊಲೀಸರು ಆರೋಪಿ ಮೇಲೆ  ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜು. 7ರಂದು ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್‌ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್‌ ದೈಹಿಕ ಸಂಪರ್ಕ ಎಸಗಿರುವುದನ್ನು ತಿಳಿಸಿದ್ದಾಗಿ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Read More

ಹೈದರಾಬಾದ್‌: ಯುವಕನೊಬ್ಬ ಶಿಶ್ನವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಗದ್ಗಿರಿಗುಟ್ಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಎಂಬಿಬಿಎಸ್ ವಿದ್ಯಾರ್ಥಿ ದೀಕ್ಷಿತ್ ಆತ್ಮಹತ್ಯೆ ಮಾಡಿಕೊಂಡವರು.ಜಗದ್ಗಿರಿಗುಟ್ಟ ವ್ಯಾಪ್ತಿಯ ಪಾಪಿರೆಡ್ಡಿ ನಗರ ರಸ್ತೆ ಸಂಖ್ಯೆಯಲ್ಲಿನ ಮನೆಯಲ್ಲಿಯೇ ದೀಕ್ಷಿತ್ ಶಿಶ್ನವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದೀಕ್ಷಿತ್ ರೆಡ್ಡಿ ಆತ್ಮಹತ್ಯೆಗೆ ಕಾರಣಗಳು ಇನ್ನಷ್ಟೇ ತಿಳಿದುಬರಬೇಕಿದೆ. ದೀಕ್ಷಿತ್ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ದೀಕ್ಷಿತ್ ಶಿಶ್ನವನ್ನು ಕತ್ತರಿಸಿದ ರೀತಿ ಪತ್ತೆಯಾದ ಕಾರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.ಇದು ಕೊಲೆಯಾ ಅಥವಾ ಆತ್ಮಹತ್ಯೆಯ ಎಂಬ ಶಂಕೆ ಕೂಡ ಮೂಡಿದೆ ಎನ್ನಲಾಗಿದೆ.

Read More

ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಟಿ. ನರಸೀಪುರ ಪಟ್ಟಣದಲ್ಲಿ ಹನುಮಜಯಂತಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಬಳಿಕ ಪಟ್ಟಣದ ಹೊರವಲಯದಲ್ಲಿ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಹತ್ಯೆ ಮಾಡಲಾಗಿದೆ. ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿದ್ದ ವೇಣುಗೋಪಾಲನನ್ನು ಪಟ್ಟಣದ ಹೊರವಲಯದಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಲಾಗಿದ್ದು, ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳ್ತಂಗಡಿ: ಪಿಕಪ್ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ. ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

Read More