ಕುಂಬಳೆ: ಇಂಟರ್‌ಲಾಕ್ ಲೋಡ್‌ಗೆ ರಿಕ್ಷಾ ಡಿಕ್ಕಿ ಹೊಡೆದು, ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಪೆರ್ಮುದೆಯ ರಸ್ತೆಯಲ್ಲಿ ಮಲೆನಾಡು ಹೈವೇ ನಿರ್ಮಾಣಕ್ಕಾಗಿ ಇಳಿಸಿದ್ದ ಇಂಟರ್‌ಲಾಕ್ ಲೋಡಿಗೆ ರಿಕ್ಷಾ ಬಡಿದು ಕವುಚಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಚೇವಾರು ಮಿತ್ತಡ್ಕದ ರಾಮ ಎಂಬವರ ಪುತ್ರ, ರಿಕ್ಷಾ ಚಾಲಕ ಕಿಶೋರ್ ಯಾನೆ ಪ್ರಕಾಶ್ ಸಿ. ಎಚ್ (34) ಮೃತಪಟ್ಟ ಯುವಕ. ಇಂದು (ಜು.9) ಬೆಳಿಗ್ಗೆ 11 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದೆ. ಪ್ರತಿದಿನ ಚೇವಾರು ರಿಕ್ಷಾ ಸ್ಟ್ಯಾಂಡಿನಲ್ಲಿ ಇರಿಸಿ ಬಾಡಿಗೆ ನಡೆಸುತ್ತಿದ್ದ ಕಿಶೋರ್ ಇಂದು ಪೆರ್ಮುದೆಗೆ ಔಷಧಿಗಾಗಿ ತೆರಳಿರುವ ವೇಳೆ ದುರ್ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಗಾಯಗೊಂಡ ಕಿಶೋರ್‌ನನ್ನು ಬಂದ್ಯೋಡಿನ ಖಾಸಗೀ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಿಲ್ಲ. ಮೃತರು ಸ್ಥಳೀಯ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಈ ಬಗ್ಗೆ ಕುಂಬಳೆ ಪೊಲೀಸ ರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Author: main-admin
ಮಂಗಳೂರು: ಕಳೆದ 8 ದಿನಗಳಿಂದ ನಾಪತ್ತೆಯಾಗಿರುವ ಪುತ್ರನನ್ನು ಹುಡುಕಿ ಕೊಡುವಂತೆ ತಾಯಿ ಕಾವೂರು ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಗುರುಪುರ ಕೈಕಂಬದ ಸರ್ಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಗರಾಜ ಭರಮಪ್ಪ ಕೊಂಗವಾಡ(17) ಕಾಣೆಯಾದ ಯುವಕ. ಮಗ ನಾಗರಾಜ ಹುಷಾರಿಲ್ಲವೆಂದು 2 ದಿನ ಮನೆಯಲ್ಲೇ ಇದ್ದ. ಜು. 1ರಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ತಿಳಿಸದೆ ಮನೆ ಬಿಟ್ಟು ಹೋಗಿದ್ದಾನೆ. ಮಗನನ್ನು ಯಾರೋ ಪುಸಲಾಯಿ ಅವರ ಜೊತೆ ಕರೆದುಕೊಂಡು ಹೋಗಿರಬಹುದು ಎಂಬ ಸಂಶಯವಿದೆ ಎಂದು ಆತನ ತಾಯಿ ಎದುರುಪದವು ನಿವಾಸಿ ರೇಣವ್ವ ಎಂಬಾಕೆ ದೂರು ನೀಡಿದ್ದು, ಮಗನನ್ನು ಹುಡುಕಿ ಕೊಡುವಂತೆ ಮನವಿ ಮಾಡಿದ್ದಾರೆ. ನಾಗರಾಜನ ವಯಸ್ಸು 17 ವರ್ಷ, ಎತ್ತರ 5 ಅಡಿ, ದುಂಡು ಮುಖ, ಗೋಧಿ ಮೈ ಬಣ್ಣ, ನಾಪತ್ತೆಯಾಗುವ ಸಂದರ್ಭ ಕಪ್ಪು ಬಣ್ಣದ ಪ್ಯಾಂಟ್, ಬನಿಯನ್ ಧರಿಸಿದ್ದ. ಕನ್ನಡ ಬಲ್ಲವನಾಗಿದ್ದು, ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿಕೊಂಡಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈತನ ಬಗ್ಗೆ ಯಾರಿಗಾದರೂ ತಿಳಿದು…
ಉಳ್ಳಾಲ: ಕಾರೊಂದು ರಸ್ತೆ ಮೇಲೆ ಮಲಗಿದ್ದ ದನಗಳ ಮೇಲೆ ಹರಿದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬೆಳಗ್ಗಿನ ಜಾವ 3:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ವೇಗವಾಗಿದ್ದ ಕಾರು ಹರಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ. ಘಟನೆಯಿಂದ ಮೂರು ದನಗಳು ಸಾವಿಗೀಡಾಗಿವೆ ಎಂದು ತಿಳಿದು ಬಂದಿದೆ. ಕಾರು ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟಿನತ್ತ ಸಂಚರಿಸುತ್ತಿತ್ತು ಎಂದು ಹೇಳಲಾಗಿದೆ.
ಮಂಗಳೂರು: ತನ್ನ ಬಳಿ ನೌಕರಿಗಿದ್ದ ಯುವಕನೊಬ್ಬನನ್ನು ಬೆಂಕಿ ಹಚ್ಚಿ ಸುಟ್ಟು ಹತ್ಯೆ ಮಾಡಿ, ಕರೆಂಟ್ ಶಾಕ್ ನಿಂದ ಸತ್ತಿದ್ದಾನೆಂದು ನಾಟಕವಾಡಿರುವ ಘಟನೆ ನಗರದ ಮುಳಿಹಿತ್ಲು ಎಂಬಲ್ಲಿ ನಡೆದಿದೆ. ಮುಳಿಹಿತ್ಲು ಜಂಕ್ಷನ್ ನಲ್ಲಿ ಮಶುಪಾ ಜನರಲ್ ಸ್ಟೋರ್ ನಲ್ಲಿ ಕೆಲಸಕ್ಕಿದ್ದ ಗಟ್ಯಾನ್ ಥಿ ಜಗು ಎಂಬಾತ ಕೊಲೆಯಾದ ದುರ್ದೈವಿ. ಪಾಂಡೇಶ್ವರದ ತೌಲಿನ್ ಹಸನ್ (32) ಹತ್ಯೆಗೈದ ಆರೋಪಿ. ಮಂಗಳೂರು ನಗರದ ಮುಳಿಹಿತ್ಲು ಜಂಕ್ಷನ್ ನಲ್ಲಿರುವ ಮಶುಪಾ ಜನರಲ್ ಸ್ಟೋರ್ ನಲ್ಲಿ ಈತ ಕೆಲಸಕ್ಕಿದ್ದ. ತೌಲಿನ್ ಹಸನ್ ಆತನಿಗೆ ಅದೇ ಕಟ್ಟಡದ ಹಿಂದೆ ಕೊಠಡಿ ಕೊಟ್ಟು ಉಳಿಯಲು ವ್ಯವಸ್ಥೆ ಮಾಡಿದ್ದ. ಶನಿವಾರ ಬೆಳಗ್ಗೆ 8:30 ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಆತನನ್ನು ಬೆಂಕಿ ಕೊಟ್ಟು ಸುಟ್ಟಿದ್ದಾನೆ. ಬಳಿಕ ಸಾಕ್ಷಿ ನಾಶ ಮಾಡುವ ಹಾಗೂ ಪ್ರಕರಣದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಅಂಗಡಿಯ ಸುತ್ತಮುತ್ತಲಿನ ಸಾರ್ವಜನಿಕರಿಗೆ ವಿದ್ಯುತ್ ಆಘಾತವಾಗಿದ್ದಾಗಿ ಸ್ಥಳೀಯರಿಗೂ, ಪೊಲೀಸರಿಗೆ ತಪ್ಪು ಮಾಹಿತಿ ನೀಡಿದ್ದಾನೆ. ಬೆಂಕಿ ಹಚ್ಚಲ್ಪಟ್ಟು ಗಂಭೀರ ಗಾಯಗೊಂಡಿದ್ದ ಗಟ್ಯಾನ್ ಥಿ ಜಗು ನನ್ನು ವೆನ್ನಾಕ್ ಜಿಲ್ಲಾ…
ಮಂಗಳೂರು : ತುಳುನಾಡಿನ ದೈವಾರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಸೆನ್ ಕ್ರೈಂ ಠಾಣಾ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ಉತ್ತರ ಮೂಲದ ಶಿವರಾಜ್ ಹೆಚ್.ಕೆ (37) ಎಂದು ಗುರುತಿಸಲಾಗಿದೆ. ಟ್ವಿಟರ್ ನಲ್ಲಿ ನಕಲಿ ಖಾತೆಯ ಮೂಲಕ ತುಳುನಾಡಿನ ದೈವಾರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಸಂಘಟನೆ ಸೆನ್ ಕ್ರೈಂ ಪೋಲಿಸರಿಗೆ ದೂರು ನೀಡಿತ್ತು. ಸಂಘಟನೆಯು ನೀಡಿದ ದೂರಿನಂತೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ, ಅಕ್ರ: 100/2022 ಕಲಂ 67 ಐಟಿ ಮತ್ತು 153(ಎ),505(2) ಐಪಿಸಿ ರಂತೆ ಪ್ರಕರಣ ದಾಖಲಾಗಿತ್ತು. ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ಅವರ ಮಾರ್ಗದರ್ಶನದಂತೆ ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗ್ಡೆ ಅವರ ನೇತೃತ್ವದ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್…
ಮಂಗಳೂರು : ಆನ್ ಲೈನ್ ಮೂಲಕ ಕೆಲಸ ಮಾಡುವ ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1,65,800 ಲಕ್ಷ ಹಣ ವಂಚನೆ ಎಸಗಿರುವ ಬಗ್ಗೆ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರು ನಗರದ ನಿವಾಸಿಯೊಬ್ಬರ ವಾಟ್ಸ್ಆ್ಯಪ್ ಗೆ ಅಪರಿಚಿತನೋರ್ವನು ಜುಲೈ 5ರಂದು 1(626)4772787 ಸಂಖ್ಯೆಯಿಂದ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಬಗ್ಗೆ ಮೆಸೇಜ್ ರವಾನಿಸಿದ್ದಾನೆ. ಇದನ್ನು ನಂಬಿದ ದೂರುದಾರ ವ್ಯಕ್ತಿ ಆನ್ ಲೈನ್ ಕೆಲಸದ ಬಗ್ಗೆ ವಿಚಾರಿಸುವ ಉದ್ದೇಶದಿಂದ ಸಂದೇಶಕ್ಕೆ ಉತ್ತರಿಸಿದ್ದಾರೆ. ಆಗ ಅಪರಿಚಿತ ಗೂಗಲ್ ಮ್ಯಾಪ್ ಮೂಲಕ ಕೆಲಸ ಮಾಡುವ ಬಗ್ಗೆ J-The New Generation ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರಿಸಿ ಅದರಲ್ಲಿ ಪ್ರಿಪೇಡ್ ಟಾಸ್ಕ್ ಆಡಬೇಕೆಂದು ತಿಳಿಸಿದ್ದರು. ಮೊದಲಿಗೆ 150 ರೂಪಾಯಿ ಹಣವನ್ನು ದೂರುದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸಲು ಹೇಳಿದ್ದಾನೆ. ಹೀಗೆ ದೂರುದಾರರು ಹೂಡಿಕೆ ಮಾಡಿದ ಕೆಲವು ಮೊತ್ತಗಳಿಗೆ ಅತ್ತಕಡೆಯಿಂದ ಹೆಚ್ಚಿನ ಹಣವನ್ನು ಅವರ ಖಾತೆಗೆ ವರ್ಗಾಯಿಸುತ್ತಿದ್ದರು. ಉತ್ತೇಜಿತರಾದ ದೂರುದಾರರು ಹೆಚ್ಚಿನ…
ಕಾಸರಗೋಡು; ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾಸರಗೋಡು ಶಾಖೆಯ ಮ್ಯಾನೇಜರ್, ಅವರ ಪತಿ ಮತ್ತು ಇಬ್ಬರು ಮಕ್ಕಳ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಲಪ್ಪುರಂ ಮುಂಡುಪರಂಬ ಮೈತ್ರಿ ಕಾಲನಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಎಸ್‌ಬಿಐಯ ಕಾಸರಗೋಡು ಶಾಖೆಯ ಮ್ಯಾನೇಜರ್ ಶೀನಾ(35), ಅವರ ಪತಿ ಮಲಪ್ಪುರಂನ ಖಾಸಗಿ ಹಣಕಾಸು ಸಂಸ್ಥೆಯ ಮ್ಯಾನೇಜರ್ ಮೇಲೋಕಾಟಿಲ್ ಪರಂಬಿಲ್ ಸಬೀಶ್ (37), ಮಕ್ಕಳಾದ ಹರಿಗೋವಿಂದ್(6) ಮತ್ತು ಶ್ರೀವರ್ಧನ್(2) ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಬೀಶ್ ಮನೆಯ ಒಂದು ಕೊಠಡಿಯೊಳಗೆ ಹಾಗೂ ಶೀನಾ ಇನ್ನೊಂದು ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಬೀಶ್ ನೇಣು ಬಿಗಿದ ಕೊಠಡಿಯ ಹಾಸಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಕೆಳಗೆ ನೆಲದಲ್ಲಿ ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬಂಟ್ವಾಳ: ಸರಕಾರಿ ನೌಕರನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಮೇಗಿನಪೇಟೆ ನಿವಾಸಿ ಪ್ರಶಾಂತ್ ( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ.ಗ್ರೂಪ್ ನೌಕರರನಾಗಿ ಕೆಲಸ ಮಾಡುತ್ತಿದ್ದ ಈತ ಕೌಟುಂಬಿಕ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ವಿಟ್ಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಲಪ್ಪುಝ: ಕೇರಳದ ಅಲಪ್ಪುಝ ಜಿಲ್ಲೆಯಲ್ಲಿ ಅಪರೂಪದ ಖಾಯಿಲೆಗೆ ಬಾಲಕ ಬಲಿಯಾಗಿದ್ದಾನೆ. ಪಾನವಳ್ಳಿ ಪಂಚಾಯತ್‌ನ 15 ವರ್ಷದ ಬಾಲಕ ಈ ಅಪರೂಪದ ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಪಾನವಳ್ಳಿ ಪೂರ್ವ ಮೈತಾರದ ಅನಿಲ್ ಕುಮಾರ್ ಮತ್ತು ಶಾಲಿನಿ ದಂಪತಿಯ ಪುತ್ರ ಗುರುದತ್ (15) ಮೃತ ದುರ್ದೈವಿ. ಈ ಬಾಲಕ 10ನೇ ತರಗತಿ ಓದುತ್ತಿದ್ದ. ಹೊಳೆಯಲ್ಲಿ ಸ್ನಾನ ಮಾಡಿದ ಬಳಿಕ ಬಾಲಕ ಅಸ್ವಸ್ಥಗೊಂಡಿರುವುದಾಗಿ ವರದಿಯಾಗಿದೆ. ಕೆಸರಿನ ಜಲಮೂಲಗಳಲ್ಲಿ ನೇಗ್ಲೇರಿಯಾ ಫೌಲೆರಿ ಕಂಡುಬರುತ್ತವೆ. ಮನುಷ್ಯರು ಧುಮುಕಿದಾಗ ಮೂಗಿನ ಮೂಲಕ ತಲೆಯನ್ನು ತಲುಪಿ, ಮೆದುಳಿನ ಸೋಂಕು ಉಂಟಾಗುತ್ತದೆ. ಜೊತೆಗೆ ಜೀವಕ್ಕೂ ಹಾನಿಯಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಪರಾವಲಂಬಿ ಸ್ವಭಾವವಿಲ್ಲದೇ ನೀರಿನಲ್ಲಿ ಮುಕ್ತವಾಗಿ ವಾಸಿಸುವ ಅಮೀಬಾ ವರ್ಗಕ್ಕೆ ಸೇರಿದ ರೋಗಕಾರಕಗಳು ಚರಂಡಿ ಅಥವಾ ಕೊಳಕು ನೀರಿನಲ್ಲಿ ಸ್ನಾನ ಮಾಡುವುದರಿಂದ ಮೂಗಿನ ತೆಳ್ಳಗಿನ ಚರ್ಮದ ಮೂಲಕ ಮಾನವ ದೇಹವನ್ನು ಪ್ರವೇಶಿಸುವ ಈ ಜೀವಿ ಮೆದುಳು ಜ್ವರವನ್ನು ಉಂಟು ಮಾಡುತ್ತದೆ. ಇದು ಮೆದುಳಿನ ಮೇಲೆ ಗಂಭೀರವಾದ ಪರಿಣಾಮ ಬೀರುತ್ತದೆ. ಇದರ ಮುಖ್ಯ…
ಮಂಗಳೂರು: ಶಾಲೆಯ ನಿವೃತ್ತ ಶಿಕ್ಷಕಿಯ ಪೆನ್ಷನ್ ಹಣಕ್ಕೆ ಅಗತ್ಯವಾಗಿರುವ ದಾಖಲೆ ನೀಡಲು ಶಾಲೆಯ ಸಂಚಾಲಕಿ 5 ಲಕ್ಷ ರೂಪಾಯಿ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಅಗಿ ಮಂಗಳೂರು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಮಂಗಳೂರು ಹೊರವಲಯದ ಬಜ್ಪೆ ನಿರಂಜನ ಸ್ವಾಮಿ ಸರ್ಕಾರಿ ಅನುದಾನಿತ ಶಾಲೆಯ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿಯಾಗಿದ್ದಾರೆ. ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಹಾಗು ಮುಖ್ಯ ಶಿಕ್ಷಕಿಯಾಗಿ 42 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಶೋಭಾರಾಣಿರವರು ದಿನಾಂಕ 31.07.2023 ರಂದು ವಯೋನಿವೃತ್ತಿ ಹೊಂದಲಿದ್ದು, ತನ್ನ ವಯೋ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುವಂತೆ ದಿನಾಂಕ 25.05.2023 ರಂದು ಶ್ರೀ ನಿರಂಜನ ಸ್ವಾಮೀ ಅನುದಾನಿತ ಶಾಲೆಯ ಮ್ಯಾನೇಜ್‌ಮೆಂಟ್ ಸಂಚಾಲಕರಾದ ಶ್ರೀಮತಿ ಜ್ಯೋತಿ ಎನ್ ಪೂಜಾರಿರವರಿಗೆ ಮನವಿ ಪತ್ರದೊಂದಿಗೆ ವಿನಂತಿಸಿಕೊಂಡು ಸ್ವೀಕೃತಿಯನ್ನು ನೀಡುವಂತೆ ಕೋರಿಕೊಂಡಿದ್ದರು.…










