ಕಠ್ಮಂಡು: ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಟರ್ಕಿಶ್ ಏರ್‌ಲೈನ್ಸ್ ವಿಮಾನವೊಂದು ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ದುರಂತವೊಂದು ತಪ್ಪಿದೆ. ವಿಮಾನದಲ್ಲಿದ್ದ 278 ಪ್ರಯಾಣಿಕರು ಹಾಗೂ 11 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಇಸ್ತಾನ್‌ಬುಲ್‌ನಿಂದ ನೇಪಾಳದ ರಾಜಧಾನಿ ಕಠ್ಮಂಡುವಿಗೆ ಆಗಮಿಸಿದ ಟರ್ಕಿಶ್ ಏರ್‌ಲೈನ್ಸ್‌ನ ಏರ್‌ಬಸ್ A330 ವಿಮಾನವು ರನ್‌ವೇ ಮೇಲೆ ಇಳಿಯುತ್ತಿದ್ದಂತೆ ಅದರ ಬಲಭಾಗದ ಹಿಂಬದಿ ಚಕ್ರಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನವು ‘ಟ್ಯಾಕ್ಸಿವೇ ಬ್ರಾವೋ’ ಬಳಿ ನಿಂತ ತಕ್ಷಣ ಅಲರ್ಟ್ ಆದ ವಿಮಾನ ನಿಲ್ದಾಣದ ಅಗ್ನಿಶಾಮಕ ದಳವು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನದ ತುರ್ತು ನಿರ್ಗಮನ ದ್ವಾರಗಳ ಮೂಲಕ ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಸಲಾಯಿತು. ತುರ್ತು ಸ್ಲೈಡ್‌ಗಳ ಮೂಲಕ ಇಳಿಯುವ ಸಂದರ್ಭದಲ್ಲಿ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗೆ ಒಳಪಡಿಸಲಾಗಿದೆ. ಉಳಿದಂತೆ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದಾಗಿ ರನ್‌ವೇ ಸಂಚಾರಕ್ಕೆ…
Author: main-admin
ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿತನದಿಂದಾಗಿ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸುತ್ತಿರುವ ಘಟನೆ ಸೋಮವಾರ ವರದಿಯಾಗಿದೆ. ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತ ದುರ್ದೈವಿ. ಎರಡು ತಿಂಗಳ ಹಿಂದೆಯಷ್ಟೇ ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದ ನರ್ಮದಾ, ಕುಟುಂಬ ನಿಯಂತ್ರಣಕ್ಕಾಗಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಸ್ತ್ರೀರೋಗ ತಜ್ಞೆ ಆಕಸ್ಮಿಕವಾಗಿ ಸಣ್ಣ ಕರಳನ್ನು ಕತ್ತರಿಸಿದ್ದಾರೆ ಎಂಬುದು ಕುಟುಂಬಸ್ಥರ ಗಂಭೀರ ಆರೋಪವಾಗಿದೆ. ಈ ಎಡವಟ್ಟಿನಿಂದಾಗಿ ದೇಹದಾದ್ಯಂತ ಸೋಂಕು ಹರಡಿ, ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು ಮತ್ತು ಗ್ರಾಮಸ್ಥರು, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನ್ಯಾಯ ಕೋರಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಆರೋಪದ ಕುರಿತು ಪ್ರತಿಕ್ರಿಯಿಸಿರುವ ವೈದ್ಯರು “ಶಸ್ತ್ರಚಿಕಿತ್ಸೆ ವೇಳೆ ಕರಳು ಅಂಟಿಕೊಂಡಿದ್ದರಿಂದ ಸಣ್ಣ ಪ್ರಮಾಣದ…
ಮಂಗಳೂರು: ಬ್ಲಾಕ್‌ಬಸ್ಟರ್ ತುಳು ಸಿನಿಮಾ ‘ಜೈ’ಯ 100 ದಿನಗಳ ಭವ್ಯ ಸಂಭ್ರಮ ಶನಿವಾರ ಸಂಜೆ ಮಾರಾವೂರಿನ ಶೂಲಿನ್ ಪ್ಯಾಲೆಸ್‌ನಲ್ಲಿ ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಹಾಗೂ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ನಟ-ನಿರ್ದೇಶಕ ರೂಪೇಶ್ ಶೆಟ್ಟಿ ಅವರ ಮುಂದಿನ ಸಿನಿಮಾ ‘BRO’ ಎಂಬ ಶೀರ್ಷಿಕೆಯೊಂದಿಗೆ ಅಧಿಕೃತವಾಗಿ ಘೋಷಣೆಯಾಗಿದ್ದು, ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದಿತು. ಕಾರ್ಯಕ್ರಮದಲ್ಲಿ ಇಸ್ಸಾರ್ ಫೈನಾನ್ಷಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಆರ್.ಕೆ. ಶೆಟ್ಟಿ, ಡಾ. ಹಂಸರಾಜ್ ಆಳ್ವ, ಮಿಥುನ್ ಎಂ. ರೈ ಹಾಗೂ ಮುಗ್ರೋಡಿ ಕನ್‌ಸ್ಟ್ರಕ್ಷನ್ಸ್ ಸಂಸ್ಥಾಪಕ ಡಿ. ಸುಧಾಕರ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು. ‘ಜೈ’ ಚಿತ್ರದ ತಂಡದ ಕಲಾವಿದರಾದ ಅಧ್ವಿತಿ ಶೆಟ್ಟಿ, ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು ಸೇರಿದಂತೆ ಕರಾವಳಿ ಭಾಗದ ಮತ್ತು ಚಿತ್ರರಂಗದ ಅನೇಕ ಖ್ಯಾತ ವ್ಯಕ್ತಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅತಿಥಿಗಳು, ‘ಜೈ’ ಚಿತ್ರದ 100 ದಿನಗಳ ಯಶಸ್ಸಿಗೆ ರೂಪೇಶ್ ಶೆಟ್ಟಿ ಹಾಗೂ…
ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಶ್ರೀ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ದೂರದೃಷ್ಟಿಯ ಸೇವೆಯನ್ನು ಸ್ಮರಿಸಲಾಯಿತು ಹಾಗೂ ಸಹಕಾರಿ ಕ್ಷೇತ್ರದಲ್ಲಿ ಬ್ಯಾಂಕ್ ಸಾಧಿಸಿರುವ ನಿರಂತರ ಪ್ರಗತಿ ಹಾಗೂ ಸ್ಥೈರ್ಯವನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ಇದರ ಉಪಕುಲಪತಿ ರೆವ್. ಡಾ. ಪ್ರವೀಣ್ ಮಾರ್ಟಿಸ್ SJ ಕರ್ನಾಟಕ ಬ್ಯಾಂಕಿನ ಮಾಜಿ ಮಹಾಪ್ರಬಂಧಕ ಹಾಗೂ ಮುಖ್ಯ ಅನುಸರಣಾಧಿಕಾರಿ ಡಾ| ಮೀರಾ ಅರನ್ಹಾ, ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಅಧ್ಯಕ್ಷ ಶ್ರೀ ರಾಯ್ ಕ್ಯಾಸ್ಟೆಲಿನೋ ಹಾಗೂ ಕೆನರಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಮಾಜಿ ಅಧ್ಯಕ್ಷ ಶ್ರೀ ಐಸಾಕ್ ವಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬ್ಯಾಂಕಿನ ಮಹಾಪ್ರಬಂಧಕರಾದ ಶ್ರೀ ಸುನಿಲ್…
ಬೆಂಗಳೂರು: ಪ್ರೀತಿ ಮಾಡಿದ ತಮ್ಮನ ತಪ್ಪಿಗೆ ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಕರನ ಅಣ್ಣನನ್ನೇ ಕಿಡ್ನಾಪ್ ಮಾಡಿ, ಕೈಕಾಲು ಕಟ್ಟಿ ಹಾಕಿ ದೌರ್ಜನ್ಯ ನಡೆಸಿರುವ ವೀಡಿಯೋ ಈಗ ಆತಂಕ ಸೃಷ್ಟಿಸಿದೆ. ಬ್ಯಾಡರಹಳ್ಳಿಯ ಶಿವಕುಮಾರ್ ಎಂಬಾತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೆ ಇವರ ಪ್ರೀತಿಗೆ ಯುವತಿಯ ಮನೆಯವರಿಂದ ತೀವ್ರ ವಿರೋಧವಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ ಇತ್ತೀಚೆಗೆ ಮನೆ ಬಿಟ್ಟು ಓಡಿ ಹೋಗಿದ್ದರು. ಇದರಿಂದ ಕೆರಳಿದ ಯುವತಿಯ ತಂದೆ ಬಸವರಾಜ್ ಮತ್ತು ಅವರ ಸಂಬಂಧಿಕರು, ಶಿವಕುಮಾರ್ ಸಿಗದಿದ್ದಕ್ಕೆ ಆತನ ಅಣ್ಣ ಕೊಟ್ರೇಶ್ ಎಂಬಾತನ ಮೇಲೆ ಸೇಡು ತೀರಿಸಿಕೊಳ್ಳಲು ಸಂಚು ರೂಪಿಸಿದ್ದರು. ಕೊಟ್ರೇಶ್ ಬ್ಯಾಡರಹಳ್ಳಿಯ ದೇವಸ್ಥಾನವೊಂದರಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. “ಪೊಲೀಸ್ ಸ್ಟೇಷನ್‌ಗೆ ಹೋಗೋಣ ಬಾ” ಎಂದು ನಂಬಿಸಿ ಆರೋಪಿಗಳು ಕೊಟ್ರೇಶ್‌ನನ್ನು ಕಾರಿನಲ್ಲಿ ಅಪಹರಿಸಿದ್ದಾರೆ. ಅಜ್ಞಾತ ಸ್ಥಳಕ್ಕೆ ಕರೆದೊಯ್ದು, ಕೊಟ್ರೇಶ್‌ನ ಕೈಕಾಲುಗಳನ್ನು ಕಟ್ಟಿ ಹಾಕಿ ಮನಬಂದಂತೆ ಥಳಿಸಿದ್ದಾರೆ. ಹಲ್ಲೆ ನಡೆಸುವಾಗ ಆರೋಪಿಗಳು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. “ಶಿವು ಎಲ್ಲೇ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಯುವಕನ ವಿಚಾರಣೆ ನಡೆಸಿದ ರೈಲ್ವೆ ಪೊಲೀಸರಿಗೆ ಶಾಕ್ ಆಗಿದ್ದು, ವಿಚಾರಣೆ ವೇಳೆ ಯುವಕ ಕುಖ್ಯಾತ ದರೋಡೆಕೋರನಾಗಿದ್ದು, ಇದೀಗ ಆತನನ್ನು ರೈಲ್ವೇ ರಕ್ಷಣಾ ಪಡೆ (RPF) ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನಿಂದ ಅಂದಾಜು ₹13.06 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಈತ ಕೇರಳದ ತ್ರಿಶೂರ್ ಜಿಲ್ಲೆಯ ಪಾವರಟ್ಟಿ ಎಂಬಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಪಾವರಟ್ಟಿ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಈಗಾಗಲೇ ಪ್ರಕರಣ (Crime No. 516/2026) ದಾಖಲಾಗಿದ್ದು, ಎರ್ನಾಕುಳಂ ಮತ್ತು ಕಾಸರಗೋಡು ವ್ಯಾಪ್ತಿಯಲ್ಲಿ ನಡೆದ ಹಲವು ಕಳವು ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯ ವಿರುದ್ಧ ಹಲವು ಬಾಕಿ ವಾರಂಟ್‌ಗಳಿದ್ದು, ಹೆಚ್ಚಿನ ತನಿಖೆಗಾಗಿ ಆತನನ್ನು ಕೇರಳ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಮಂಗಳೂರು: ರಜೆಯ ಮೋಜು ಇಬ್ಬರು ವಿದ್ಯಾರ್ಥಿನಿಯರ ಪ್ರಾಣಕ್ಕೆ ಎರವಾದ ಘಟನೆ ಕಡಬದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನಾಲ್ವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಡಬದ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯ ಹೊಳೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಕುಟ್ರುಪ್ಪಾಡಿ ನಿವಾಸಿಗಳಾದ ಸುನೀತಾ (21), ಅರ್ಪಿತಾ (15) ಎಂಬ ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ನಾಲ್ವರು ವಿದ್ಯಾರ್ಥಿನಿಯರು ಶಾಲೆ-ಕಾಲೇಜಿಗೆ ರಜೆ ಇರುವ ಕಾರಣ ಸಂಜೆ ಹೊತ್ತು ಈಜಾಡಲು ನದಿಗಿಳಿದಿದ್ದರು. ಈ ಪೈಕಿ ಸುನೀತಾ ಮತ್ತು ಅರ್ಪಿತಾ ನೀರಿನ ಆಳ ತಿಳಿಯದೆ ಮುಂದೆ ಮುಂದೆ ಹೋಗಿ ಮುಳುಗಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ಫಲಕೊಡಲಿಲ್ಲ. ಇಬ್ಬರೂ ಒಂದೇ ಕುಟುಂಬದ ಯುವತಿಯರು. ಸ್ಥಳೀಯರು ಇವರಿಬ್ಬರ ಮೃತದೇಹ ಹೊರ ತೆಗೆದರು. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳ ಸಾವಿನಲ್ಲಿ ಯಾವುದೇ ಅನುಮಾನ ಇಲ್ಲ ಎಂಬುದಾಗಿ ಮೃತರ ಸಂಬಂಧಿಕರು ಹೇಳಿದ್ದಾರೆ. ಕರುಳ ಕುಡಿಗಳನ್ನು ಕಳೆದುಕೊಂಡ ಕುಟುಂಬದ ದುಃಖ ಮುಗಿಲುಮುಟ್ಟಿದೆ.
ಬೆಂಗಳೂರು: ನಗರದಲ್ಲಿ ಲಿವಿನ್ ರಿಲೇಷನ್ಶಿಪ್ನಲ್ಲಿದ್ದವರು ಸಾವಿಗೆ ಶರಣಾಗುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾದಂತಿದೆ. ಶ್ರೀಗಂಧನಗರದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತನನ್ನು ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಎಂದು ಗುರುತಿಸಲಾಗಿದೆ. ನಡೆದಿದ್ದೇನು? ತಿಪ್ಪೇಸ್ವಾಮಿ ಹಾಗೂ ದಾವಣಗೆರೆ ಮೂಲದ ಮಹಿಳೆಯೊಬ್ಬರಿಗೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಈಕೆ ರೀಲ್ಸ್ ಮಾಡುವುದರಲ್ಲಿ ಸಕ್ರಿಯಳಾಗಿದ್ದು, ಇಬ್ಬರೂ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಬಂದಿದ್ದ ಈಕೆ, ಕಳೆದ ಎರಡು ತಿಂಗಳಿನಿಂದ ತಿಪ್ಪೇಸ್ವಾಮಿ ಜೊತೆ ಶ್ರೀಗಂಧನಗರದ ಬಾಡಿಗೆ ಮನೆಯಲ್ಲಿ ಲಿವಿನ್ ರಿಲೇಷನ್ಶಿಪ್ನಲ್ಲಿದ್ದಳು. ಮನೆ ಮಾಲೀಕರಿಗೆ ತಾವು ದಂಪತಿಗಳೆಂದು ಸುಳ್ಳು ಹೇಳಿ ವಾಸವಿದ್ದರು ಎನ್ನಲಾಗಿದೆ. ಕಿರುಕುಳದ ಆರೋಪ ನನ್ನನ್ನು ಮೇಂಟೇನ್ ಮಾಡಲು ನಿನ್ನಿಂದ ಸಾಧ್ಯವಿಲ್ಲ, ನನ್ನನ್ನು ಬಿಟ್ಟು ಹೋಗು ಎಂದು ಮಹಿಳೆ ತಿಪ್ಪೇಸ್ವಾಮಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಮನನೊಂದ ತಿಪ್ಪೇಸ್ವಾಮಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಕುಟುಂಬಸ್ಥರು ಮಹಿಳೆಯ ಕಿರುಕುಳವೇ ಸಾವಿಗೆ…
ಯಾದಗಿರಿ: ಜಿಲ್ಲೆಯಲ್ಲಿ ಇನ್ಸ್‌ಪೆಕ್ಟರ್ ಒಬ್ಬರು ಬರೋಬ್ಬರಿ ಒಂದು ಲಕ್ಷ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಕ್ರಿಮಿನಲ್ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ನಡೆದಿದ್ದೇನು? ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬುವವರ ವಿರುದ್ಧ ಜಾತಿ ನಿಂದನೆ ಪ್ರಕರಣವೊಂದು ದಾಖಲಾಗಿತ್ತು. ಈ ಕೇಸ್‌ನಲ್ಲಿ ಅವರನ್ನು ಬಂಧಿಸದೆ ಇರಲು ಮತ್ತು ಇನ್ನೊಂದು ಕೇಸ್‌ನಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಅವರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆನಂದ್ ದೂರು ನೀಡಿದ್ದಾರೆ. ಈ ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಟ್ಟು ಒಂದು ಲಕ್ಷ ರೂಪಾಯಿ ಹಣವನ್ನು ಪಡೆಯುವ ಒಪ್ಪಂದವಾಗಿತ್ತು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ ಗುರುಮಠಕಲ್‌ನ ಪೊಲೀಸ್ ವಸತಿ ಗೃಹದಲ್ಲಿ ಆನಂದ್ ಅವರಿಂದ ಒಂದು ಲಕ್ಷ ರೂಪಾಯಿ ಲಂಚದ ಹಣವನ್ನು…
ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದಾನೆ. 2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಕುಲಪತಿಗಳು ಪತ್ತೆಹಚ್ಚಿ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಈ ಬೆದರಿಕೆ ಹಾಕಲಾಗಿದೆ. ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಕುಲಪತಿಗಳ ವಿರುದ್ಧ ಈ ಮಟ್ಟದ ಬೆದರಿಕೆ ಬಂದಿರುವುದು ಇದೇ ಮೊದಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಅಕ್ರಮಕ್ಕೆ ತಡೆಯೊಡ್ಡಿದ್ದೇ ಮುಳುವಾಯಿತೇ? ಕಳೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು ವಿವಿಯ ಆಂತರಿಕ ಸಮಿತಿಯ ವರದಿಯಿಂದ ದೃಢಪಟ್ಟಿತ್ತು. ಕುಲಪತಿಗಳು ಈ ವಿಷಯವನ್ನು ತಕ್ಷಣವೇ ಸರ್ಕಾರ ಮತ್ತು ರಾಜ್ಯಪಾಲರ ಗಮನಕ್ಕೆ ತಂದಿದ್ದರು. ರಾಜ್ಯಪಾಲರ ಆದೇಶದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆಯಾಗಿದ್ದು, ಸಮಿತಿಯ ಸೂಚನೆಯ ಮೇರೆಗೆ ಸದ್ಯ ಮರುಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ. ಈ ಮರುಮೌಲ್ಯಮಾಪನದಿಂದಾಗಿ ಅಕ್ರಮವಾಗಿ ಅಂಕ ಪಡೆದವರಿಗೆ ಸಂಕಷ್ಟ ಎದುರಾಗಿದೆ. ಬೆದರಿಕೆ ಪತ್ರದಲ್ಲೇನಿತ್ತು? ‘2 ಲಕ್ಷ ರೂಪಾಯಿ ನೀಡಿ ಬಿಇಡಿ ಪ್ರವೇಶ ಪಡೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ.…










