ಮಂಗಳೂರು: ಎನ್ಎಂಪಿಎಗೆ ಪನಾಮದಿಂದ ಎಂಎಸ್‌ಸಿ ಮಾಕೊಟೊ-2 ನೌಕೆ ಬಂದಿಳಿದಿದೆ. ಈ ಹಡಗು ಈವರೆಗಿನ ಗರಿಷ್ಠ ಪ್ರಮಾಣದ ಒಟ್ಟು 2,689 ಟಿಇಯು ಕಂಟೇನರ್‌ಗಳನ್ನು ಒಳಗೊಂಡಿತ್ತು ಎಂದು ನವಮಂಗಳೂರು ಬಂದರು ನಿಗಮದ ಟ್ರಾಫಿಕ್ ವ್ಯವಸ್ಥಾಪಕರು ತಿಳಿಸಿದ್ದಾರೆ. ನವಮಂಗಳೂರು ಬಂದರಿನ 14ನೇ ಬರ್ತ್‌ನಲ್ಲಿ ಯಾಂತ್ರೀಕೃತ ಚಟುವಟಿಕೆ ಆರಂಭಗೊಂಡಿದೆ. ಜೆಎಸ್‌ಡಬ್ಲ್ಯುನ ಮಂಗಳೂರು ಕಂಟೈನರ್ ಟರ್ಮಿನಲ್ ಜೊತೆಗೂಡಿ ಪಿಪಿಪಿ ಮಾದರಿಯಲ್ಲಿ ಇದನ್ನು ನಿರ್ವಹಿಸಲಾಗುತ್ತಿದೆ. ಇದರೊಂದಿಗೆ ವಲಯಮಟ್ಟದಲ್ಲಿ ಕಂಟೈನರ್ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿರುವ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 2689 ಟಿಇಯು ಕಂಟೈನರ್‌ಗಳನ್ನು ನಿರ್ವಹಿಸುವುದರ ಮೂಲಕ ಬಂದರು ಮೈಲುಗಲ್ಲೊಂದನ್ನು ದಾಟಿದೆ. ಗ್ರಾಹಕರಿಗೆ ವಿಶ್ವದರ್ಜೆಯ ಸೇವೆಯನ್ನು ನೀಡುತ್ತಿರುವುದಕ್ಕೆ ಇದೊಂದು ನಿದರ್ಶನ ಎಂದು ನಿಗಮದ ಅಧ್ಯಕ್ಷ ಎ.ವಿ.ರಮಣ ಹೇಳಿದ್ದಾರೆ.
Author: main-admin
ಪುತ್ತೂರು: ಮಗ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ನೇಣಿಗೆ ಶರಣಾದ ಘಟನೆ ಪುರುಷರಕಟ್ಟೆ ಇಂದಿರಾನಗರದಲ್ಲಿ ಸಂಭವಿಸಿದೆ. ಇಂದಿರಾನಗರದ ದಿ| ಪ್ರವೀಣ್ ಅವರ ಪತ್ನಿ ಕಾವ್ಯಾ (38) ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್ ಕೂಡ ಯಾವುದೋ ಕಾರಣಕ್ಕೆ 7 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಅದೇ ಸ್ಥಳದಲ್ಲಿ ಕಾವ್ಯಾ ಇಹಲೋಕ ತ್ಯಜಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ರ ಕಾವ್ಯ ಅವರ ಪುತ್ರ ಪ್ರತೀಕ್ ಜೂ.30ರಂದು ಬೆದ್ರಾಳ ಸಮೀಪ ಸಂಭವಿಸಿದ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಮಂಗಳೂರು: ಅಪ್ರಾಪ್ತರಿಗೆ ವಾಹನ ನೀಡಿದ್ದಲ್ಲಿ ಆರ್‌ಸಿ ಓನರ್ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಅವರು ಫೋನ್ ಇನ್ ಕಾರ್ಯಕ್ರಮದಲ್ಲಿ ಬಂದಿರುವ ದೂರೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಒಟ್ಟು 31 ಫೋನ್ ಕರೆಗಳನ್ನು ಪೊಲೀಸ್ ಕಮಿಷನರ್ ಸ್ವೀಕರಿಸಿದರು. ಬಹಳಷ್ಟು ಟ್ರಾಫಿಕ್ ಸಮಸ್ಯೆಗಳ ದೂರುಗಳೇ ಕೇಳಿ ಬಂದಿದೆ. ಅದರಲ್ಲೂ ಹೆಲ್ಮೆಟ್ ರಹಿತ ಚಾಲನೆ, ಅಪ್ರಾಪ್ತರಿಂದ ವಾಹನ ಚಾಲನೆ, ವಾಹನಗಳ ಕರ್ಕಶ ಹಾರ್ನ್, ಬೈಕ್‌ಗಳ ಕರ್ಕಶ ಸೈಲೆನ್ಸರ್‌ಗಳಿಂದ ತೊಂದರೆಗಳಾಗುವ ದೂರುಗಳು ಬಂದಿದೆ. ಈ ಬಗ್ಗೆ ದೂರು ಸ್ವೀಕರಿಸಿದ ಪೊಲೀಸ್ ಕಮಿಷನರ್ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಿತ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಹೆಲ್ಮೆಟ್ ರಹಿತ ಚಾಲನೆ ಹಾಗೂ ಅಪ್ರಾಪ್ತರಿಂದ ವಾಹನ ಚಾಲನೆ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಅಪ್ರಾಪ್ತರು ಸೇರಿದಂತೆ ಅವರ ಮನೆಯವರನ್ನು ಠಾಣೆಗೆ ಕರೆದು ಕೌನ್ಸೆಲಿಂಗ್ ಮಾಡಲಾಗುತ್ತದೆ ಎಂದು ಹೇಳಿದರು. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸೀಝ್…
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಮನವಿ ಮಾಡಿದ್ದಾರೆ. ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕರು ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಸದರಿ ಪೇಜ್ ಗಳ ಅಡ್ಮಿನ್ ಗಳ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಮಂಡಲ ಭಾಜಪಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಉಪಸ್ಥಿತರಿದ್ದರು.
ಮಂಗಳೂರು: ಯುವಕನನ್ನು ಹೊಡೆದು ಸಾಯಿಸಿದ ಅಪರಾಧಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮಂಗಳೂರಿನ ಬಡಗ ಎಡಪದವು ನಿವಾಸಿಗಳಾದ ರಮೇಶ್ ಶೆಟ್ಟಿಗಾರ್(41) ಹಾಗೂ ನಿತ್ಯಾನಂದ (41) ಶಿಕ್ಷೆಗೊಳಗಾದ ಅಪರಾಧಿಗಳು. ನ್ಯಾಯಾಧೀಶ ಕಾಂತರಾಜು ಎಸ್.ವಿ.ಯವರು ಜೀವಾವಧಿ ಶಿಕ್ಷೆ ವಿಧಿಸಿದ ತೀರ್ಪು ನೀಡಿದ್ದಾರೆ. ಹಣದ ವ್ಯವಹಾರ ಮತ್ತು ರಮೇಶ ಶೆಟ್ಟಿಗಾರ್ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾನೆಂಬ ದ್ವೇಷದಿಂದ ಆರೋಪಿಗಳು 2019ರ ಮೇ 17ರ ರಾತ್ರಿ 11.50ಕ್ಕೆ ಬಡಗ ಎಡಪದವು ಗ್ರಾಮದ ದೂಮಚಡವು ದಡ್ಡಿ ಕ್ರಾಸ್ ಎಂಬಲ್ಲಿ ಬಡಗ ಎಡಪದವು ನಿವಾಸಿ ನವೀನ (28) ಎಂಬವರ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದರು.ಬಳಿಕ ತಮ್ಮ ಬಟ್ಟೆ ಬರೆಗಳನ್ನು ಕಾಡಿನಲ್ಲಿ ಸುಟ್ಟು ಸಾಕ್ಷ್ಯ ನಾಶ ಮಾಡಿದ್ದರು. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ನಿರೀಕ್ಷಕ ಕೆ.ಆರ್.ನಾಯ್ಕ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ ಐಪಿಸಿ ಕಲಂ 302ರಡಿ…
ಮಂಗಳೂರು: ವಸತಿ ಸಂಕೀರ್ಣವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಶುಕ್ರವಾರ ಬಾವುಟಗುಡ್ಡೆಯಲ್ಲಿ ನಡೆದಿದೆ.ಇಲ್ಲಿನ 21 ಅಂತಸ್ತುಗಳ ಈ ವಸತಿ ಸಂಕೀರ್ಣದ ಲಿಫ್ಟ್‌ನ ಡೆಕ್ ವಯರಿಂಗ್ ಸ್ಥಳದಲ್ಲಿ ಸಂಜೆ ಸುಮಾರು 6:30ರ ವೇಳೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ದಟ್ಟ ಹೊಗೆ ಆವರಿಸಿದೆ. ಆಗ ಕೆಲವರು ವಸತಿ ಸಂಕೀರ್ಣದಿಂದ ಹೊರಗೆ ಬಂದಿದ್ದಾರೆ. ಮಾಹಿತಿ ಪಡೆದ ಪಾಂಡೇಶ್ವರ ಅಗ್ನಿಶಾಮಕ ದಳದ ಅಧಿಕಾರಿ, ಸಿಬ್ಬಂದಿ ವರ್ಗವು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಉಸಿರಾಟದ ಸಮಸ್ಯೆಯಿಂದ ಕೆಲವರು ಬಳಲಿದ್ದು, ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು ಎನ್ನಲಾಗಿದೆ.
ಮಂಗಳೂರು: ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಇಂದು(ಜು.1) ಬೆಳಗ್ಗೆ 10ರಿಂದ 11ರವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದೆ. ನಗರ ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಫೋನ್-ಇನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರ ಕರೆಗೆ ಪ್ರತಿಕ್ರಿಯಸಲಿದ್ದಾರೆ. ಸಾರ್ವಜನಿಕರು 0824-2220801/2220830 ಸಂಖ್ಯೆಗೆ ಕರೆ ಮಾಡಿ ಸಲಹೆ-ಸೂಚನೆ, ದೂರು ನೀಡಬಹುದಾಗಿದೆ ಎಂದು ಕಮಿಷನರ್ ಕಚೇರಿಯ ಪ್ರಕಟನೆ ತಿಳಿಸಿದೆ.
ಡಿಶ್ ರಿಪೇರಿ ಮಾಡುತ್ತಿದ್ಧ ವೇಳೆ ವಸತಿ ನಿಲಯದ ಮೂರನೇ ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೈಕಂಬ ಎಂಬಲ್ಲಿ ನಡೆದಿದೆ. ಯತೀಶ್, ಮೃತಪಟ್ಟ ದುರ್ದೈವಿ. ಯತೀಶ್ ಅವರು ಕೈಕಂಬದಲ್ಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ. ವಸತಿ ನಿಲಯದ ಕೆಲ ಭಾಗದಲ್ಲಿರುವ ಬಾವಿಯ ಮೇಲೆ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು ತಲೆಗೆ ಗಾಯವಾಗಿದ್ದು, ಸ್ಥಳದಲ್ಲಿ ಸಾಕಷ್ಟು ರಕ್ತ ಚೆಲ್ಲಿದೆ. ಘಟನೆ ನಡೆದ ತಕ್ಷಣ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ತಲೆಗೆ ಗಂಭೀರವಾದ ಗಾಯವಾಗಿದ್ದರಿಂದ ಸಾವನ್ನಪ್ಪಿದ ಬಗ್ಗೆ ವೈದ್ಯರು ದೃಢಪಡಿಸಿದರು.
ಕಡಬ; ನಾಪತ್ತೆಯಾದ ಹೋರಿ ಪತ್ತೆ ಹಚ್ಚಿದವರಿಗೆ ಮಾಲೀಕ ಬಹುಮಾನ ಘೋಷಿಸಿದ ಘಟನೆ ಕಡಬದಲ್ಲಿ ನಡೆದಿದೆ. ಕಡಬದ ಅಡ್ಡಗದ್ದೆಯ ಇಕ್ಬಾಲ್ ಎಂಬವರಿಗೆ ಸೇರಿದ ಹೋರಿ ಇದಾಗಿದ್ದು ಜೂನ್.15 ರಿಂದ ಅಡ್ದಗದ್ದೆ ಸುತ್ತಮುತ್ತಲಿಂದ ಕಾಣೆಯಾಗಿದೆ. ಹೋರಿಯ ಬಲಕಿವಿಯಲ್ಲಿ ಆಧಾರ್ ಟ್ಯಾಗ್ ಇದ್ದು ಹೋರಿಯನ್ನು ಪತ್ತೆ ಹಚ್ಚಿಕೊಟ್ಟವರಿಗೆ ಸೂಕ್ತ ಬಹುಮಾನ ನೀಡುವುದಾಗಿ ಮಾಲೀಕರು ಘೋಷಿಸಿದ್ದಾರೆ. 2 ಹೋರಿಯ ಚಿತ್ರವಿರುವ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿದೆ. ವಿಪರ್ಯಾಸವೆಂದರೆ ಇದುವರೆಗೂ ಹೋರಿಯ ಬಗ್ಗೆ ಯಾವುದೇ ಸುಳಿವಿಲ್ಲ. ಇದು ಗೋ ಕಳ್ಳರ ಪಾಲಾಗಿರುವ ಶಂಕೆ ವ್ಯಕ್ತವಾಗಿದೆ.
ಮಂಗಳೂರು : ದಕ್ಷಿಣ ಕನ್ನಡ ಜಿಪಂನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ.ಆನಂದ್ ಕೆ ಅಧಿಕಾರ ಸ್ವೀಕರಿಸಿದ್ದಾರೆ. ಈವರೆಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೇ ದ.ಕ.ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದರು. ಇದೀಗ ನೂತನ ಸಿಇಒ ಡಾ.ಆನಂದ್ ಕೆಯವರಿಗೆ ಜಿಲ್ಲಾಧಿಕಾರಿ ಅಧಿಕಾರ ಹಸ್ತಾಂತರಿಸಿ ಶುಭಹಾರೈಸಿದರು.










