Author: main-admin

ಮಂಗಳೂರು: ಪದವೀಧರರಾಗಿ ರಾಜಕೀಯದಲ್ಲಿ ಆಸಕ್ತರಿರುವವರಿಗೆ ತರಬೇತಿ ನೀಡಲು ತರಬೇತಿ ಸಂಸ್ಥೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜಕೀಯದ ಬಗ್ಗೆ ಆಸಕ್ತ ಪದವೀಧರರಿಗೆ ತರಬೇತಿ ಪಡೆಯಲು ರಾಜ್ಯದಲ್ಲಿ ಪೊಲಿಟಿಕಲ್ ಸೆಂಟರ್‌ನ ಕೊರತೆಯಿದೆ. ಆದ್ದರಿಂದ ಈ ಕೊರತೆ ನೀಗಿಸಲು ತರಬೇತಿ ಸಂಸ್ಥೆಯೊಂದನ್ನು ಸ್ಥಾಪಿಸುವ ಚಿಂತನೆಯಿದೆ. ಪದವೀಧರರಿಗೆ ಒಂದು ವರ್ಷದ ಕೋರ್ಸ್ ಇದಾಗಿದ್ದು, ಆರು ತಿಂಗಳು ಪ್ರ್ಯಾಕ್ಟಿಕಲ್ ತರಗತಿಯಿದ್ದರೆ, ಇನ್ನಾರು ತಿಂಗಳು ಇಂಟರ್ ಶಿಪ್ ಇರುತ್ತದೆ. ಅದಕ್ಕೆ ರೂಪುರೇಷೆಗಳನ್ನು ಸಿದ್ಧಪಡಿಸಲು ಚರ್ಚೆ ನಡೆದಿದ್ದು, ಒಂದು ಹಂತಕ್ಕೆ ಬಂದಿದೆ. ಸರಕಾರದೊಂದಿಗೆ, ವಿಧಾನಸಭಾ ಸಭಾಧ್ಯಕ್ಷರೊಂದಿಗೆ ಮಾತನಾಡಿಕೊಂಡು ಈ ತರಬೇತಿ ಸಂಸ್ಥೆಯನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.ದೇಶದ ಪುಣೆಯಲ್ಲಿ ಇಂತಹ ರಾಜಕೀಯ ತರಬೇತಿ ನೀಡುವ ಸಂಸ್ಥೆಯೊಂದು ಇದೆ. ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ ಸಿಲೆಬಸ್‌ ಅನ್ನು ಮಾಡಲಾಗುತ್ತದೆ. ತರಬೇತಿ ಪಡೆದವರೆಲ್ಲಾ ರಾಜಕೀಯ ಪ್ರವೇಶಿಸಬೇಕು ಎಂದಲ್ಲ‌. ಅವರು ಎನ್‌ಜಿಒ ಕೂಡಾ ಆರಂಭಿಸಬಹುದು. ಸರಕಾರದ ಸಂಸ್ಥೆಗಳಲ್ಲೂ ಅವರಿಗೆ ಅವಕಾಶ ಇರಲಿದೆ. ತಾಲೂಕು ಪಂಚಾಯಿತಿ, ಗ್ರಾಮ…

Read More

ಮಂಗಳೂರು: ಕರ್ನಾಟಕದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Read More

ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಘೋಷಿಸಿದೆ. ಅವುಗಳಲ್ಲಿ ಒಂದು ಈಗಾಗಲೇ ಜಾರಿಗೆ ಬಂದಿದೆ. ಇನ್ನೊಂದು, ಗೃಹಲಕ್ಷ್ಮೀ ಯೋಜನೆಗಳ ಜೊತೆಗೆ ಇನ್ನೊಂದು ಗ್ಯಾರಂಟಿ ನೀಡಿದ್ದಾರೆ. ತಮ್ಮ ಚುನಾವಣಾ ಪ್ರಚಾರದ ಸಮಯದಲ್ಲಿ ಸಿದ್ದರಾಮಯ್ಯನವರು ಮಹಿಳೆಯರ ಶ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಈಗ ಮಹಿಳಾ ಸಂಘಟನೆಗಳು ಈ ವಿಷಯವನ್ನು ಗಟ್ಟಿಯಾಗಿ ಹಿಡಿದುಕೊಂಡಿವೆ. ನಿನ್ನೆ ಕೂಡ ಸಿದ್ದರಾಮಯ್ಯನವರ ನಿವಾಸ ಎದುರು ಕೋಲಾರ ಮತ್ತು ಚಿಕ್ಕಬಳ್ಳಾಪುರದ ಮಹಿಳಾ ಸಂಘ ಸಂಸ್ಥೆಗಳು ಸಾಲ ಮನ್ನಾ ಮಾಡುವಂತೆ ಪ್ರತಿಭಟನೆ ನಡೆಸಿದ್ದವು.ಬುಧವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಸ್ತ್ರೀಶಕ್ತಿ ಸಂಘದ ಸಾಲ ಮನ್ನಾ ಮಾಡುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಬುಧವಾರ ಬೆಳಗ್ಗೆಯಿಂದಲೇ ಸಿಎಂ ಸಿದ್ದರಾಮಯ್ಯ ಅವರ ಮನೆಯ ಎದುರು ಮಹಿಳೆಯರ ದೊಡ್ಡ ದಂಡೇ ಜಮಾಯಿಸಿತ್ತು. ಚುನಾವಣಾ ಸಂದರ್ಭ ಕೊಟ್ಟ ಮಾತಿನಂತೆ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡಬೇಕು ಎಂದು ಮಹಿಳೆಯರು ಆಗ್ರಹಿಸಿ ಪ್ರತಿಭಟನೆ ಮಾಡಿದ್ದಾರೆ. ತಮ್ಮ ಸಂಪುಟ ಸಭೆಯ ಮುಗಿಸಿದ ನಂತರ ಸಿದ್ದರಾಮಯ್ಯನವರು ಪ್ರತಿಭಟನೆ ಮಾಡುತ್ತಿದ್ದ…

Read More

ಮಂಗಳೂರು: ವಿದ್ಯಾರ್ಥಿನಿಯೋರ್ವಳನ್ನು ಮದುವೆಯಾಗುವೆನೆಂದು ನಂಬಿಸಿ ಹೊಟೇಲ್ ನಲ್ಲಿರಿಸಿ 20 ದಿನಗಳ ಕಾಲ ನಿರಂತರ ಅತ್ಯಾಚಾರಗೈದ ವಿವಾಹಿತನನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಕಡಬ ಮೂಲದ ಅನೀಶ್ ರೆಹಮಾನ್ ಬಂಧಿತ ಕಾಮುಕ. ಇನ್ ಸ್ಟಾಗ್ರಾಂ ಮೂಲಕ ವಿದ್ಯಾರ್ಥಿನಿಗೆ ಅನೀಶ್ ರೆಹಮಾನ್ ಪರಿಚಯವಾಗಿದ್ದಾನೆ. ಆರೋಪಿ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಮಂಗಳೂರಿನ ಪೂಂಜಾ ಇಂಟರ್ ನ್ಯಾಷನಲ್ ಹೊಟೇಲ್ ಗೆ ಕರೆದೊಯ್ದಿದ್ದಾನೆ. ಅಲ್ಲಿ ರೂಂ ಪಡೆದ ಆತ ಮೇ 28 ರಿಂದ ಸುಮಾರು 20 ದಿನಗಳ ಕಾಲ ನಿರಂತರವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಆ ಬಳಿಕ ಆರೋಪಿ ತಾನು ವಿವಾಹಿತ ಎಂಬ ಸತ್ಯ ಬಿಚ್ಚಿಟ್ಟಿದ್ದಾನೆ. ಇದರಿಂದ ಕಂಗಾಲಾದ ವಿದ್ಯಾರ್ಥಿನಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಇದೀಗ ಮಹಿಳಾ ಠಾಣಾ ಪೊಲೀಸರು ಆರೋಪಿ ಅನೀಶ್ ರೆಹಮಾನ್ ನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು:ವಿದ್ಯುತ್ ಕಂಬಕ್ಕೆ ನಿಯಂತ್ರಣ ತಪ್ಪಿದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಪದವಿನಂಗಡಿ ಬಳಿ ನಡೆದಿದೆ. ಪಚ್ಚನಾಡಿ‌ ಮೂಲದ ಪವನ್ ಮತ್ತು ಚಿರಾಗ್ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಸವಾರನ ನಿಯಂತ್ರಣ ತಪ್ಪಿ ಸ್ಕೂಟರ್ ವಿದ್ಯತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಮತ್ತೋರ್ವ ಆಸ್ಪತ್ರೆಗೆ ರವಾನಿಸುವ ಸಂದರ್ಭ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ನೀಡಿದ್ದಾರೆ. ಅಪಘಾತ ನಡೆದಿರುವುದನ್ನು ಗಮನಿಸಿದ ಖಾಸಗಿ ಬಸ್ ಚಾಲಕ ಹಾಗೂ ನಿರ್ವಾಹಕ ಇಬ್ಬರನ್ನು ತಕ್ಷಣವೇ ಬಸ್ ನಲ್ಲೇ ಆಸ್ಪತ್ರೆಗೆ ರವಾನಿಸಿದ್ದಾರೆ ಎನ್ನಲಾಗಿದೆ.

Read More

ನವದೆಹಲಿ: ಪ್ಯಾನ್ ಕಾರ್ಡ್ ಜೊತೆಗೆ ಆಧಾರ್ ಜೋಡಿಸಲು ನಾಳೆ (ಜೂನ್‌ 30) ಕೊನೆಯ ದಿನವಾಗಿದೆ. ಪ್ಯಾನ್ ಕಾರ್ಡ್ ಹಾಗೂ ಆಧಾರ್ ಜೋಡಣೆಗೆ ಕೊನೇ ದಿನಾಂಕವನ್ನು ಕೇಂದ್ರ ಹಣಕಾಸು ಇಲಾಖೆಯು ಈ ಹಿಂದೆ ಮಾರ್ಚ್ 31ಕ್ಕೆ ನಿಗದಿ ಮಾಡಿತ್ತು. ಆದರೆ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದರು. ಅದರ ಬೆನ್ನಲ್ಲೇ ದಿನಾಂಕವನ್ನು ಜೂನ್‌ 30ರ ವರೆಗೆ ವಿಸ್ತರಿಸಲಾಗಿತ್ತು. ಪ್ಯಾನ್ ಕಾರ್ಡ್ ಹಾಗೂ ಆಧಾರ್ ಲಿಂಕ್ ಮಾಡಲು 2022ರ ಮಾರ್ಚ್ 31ರವರೆಗೆ ಉಚಿತವಾಗಿತ್ತು. 2022ರ ಏಪ್ರಿಲ್ 1ರಿಂದ ₹ 500 ಪಾವತಿಸಿ ಆಧಾರ್ ಲಿಂಕ್ ಮಾಡಬೇಕಾಗಿತ್ತು. 2022ರ ಜೂನ್‌ನಿಂದ 2023ರ ಮಾರ್ಚ್ 31ರವರಗೆ ಲಿಂಕ್ ಮಾಡಬೇಕಾದರೆ ₹1,000 ಪಾವತಿಸಬೇಕು ಎಂದು ಹೇಳಲಾಗಿತ್ತು. ಒಂದು ವೇಳೆ ಈ ಗಡುವಿನ ಒಳಗೆ ಲಿಂಕ್ ಮಾಡದಿದ್ದರೇ ಆ ನಂತರ ಬರುವ ಅರ್ಜಿಗಳಿಗೆ ₹10 ಸಾವಿರ ದಂಡ ಹಾಕಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಗುಡುವು…

Read More

ಮಂಗಳೂರು:  ಉದ್ಯೋಗ ನೀಡುವುದಾಗಿ ನಂಬಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ಇ-ಮೇಲ್‌ಗೆ TELEPHONE SKYPE ಎಂಬ ಅಪರಿಚಿತನೋರ್ವ hr@teams-subaru.com ನಿಂದ ಮಾ. 18ರಂದು ವಿದೇಶದಲ್ಲಿ ಉದ್ಯೋಗದ ಬಗ್ಗೆ ಸಂದೇಶ ಕಳುಹಿಸಿದ್ದ. ಅನಂತರ ಆಫ‌ರ್‌ ಲೆಟರ್‌ ಕಳುಹಿಸಿದ್ದ. ಅನಂತರ ನೇಮಕಾತಿ ಸಂಬಂಧವಾಗಿ ಠೇವಣಿ ಹಣ ನೀಡಬೇಕೆಂದು ತಿಳಿಸಿ ಹಂತ ಹಂತವಾಗಿ ಒಟ್ಟು 1,12,760 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಲಾಗಿದೆ.

Read More

ಮಂಗಳೂರು: ಕೊಲೆ ಪ್ರಕರಣವೊಂದರ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ. ಮಂಗಳೂರು ತಾಲೂಕಿನ ಬಡಗ ಎಡಪದವು ನಿವಾಸಿ ರಮೇಶ್ ಶೆಟ್ಟಿಗಾರ್(41) ಮತ್ತು ನಿತ್ಯಾನಂದ (41) ಶಿಕ್ಷೆಗೊಳಗಾದ ಆರೋಪಿಗಳು. ಇವರು ಬಡಗ ಎಡಪದವಿನ ನವೀನ (28) ಎಂಬವರನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದರು.ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಆರೋಪಿಗಳು 2019ರ ಮೇ 17ರಂದು ರಾತ್ರಿ 11:50ಕ್ಕೆ ಬಡಗ ಎಡಪದವು ಗ್ರಾಮದ ದೂಮ ಚಡವು ದಡ್ಡಿ ಕ್ರಾಸ್ ಎಂಬಲ್ಲಿ ನವೀನರ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದರು ಎನ್ನಲಾಗಿದೆ. ಬಳಿಕ ತಮ್ಮ ಬಟ್ಟೆ ಬರೆಗಳನ್ನು ಕಾಡಿನಲ್ಲಿ ಸುಟ್ಟು ಸಾಕ್ಷ್ಯ ನಾಶ ಮಾಡಿದ್ದರು.ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ನಿರೀಕ್ಷಕ ಕೆ.ಆರ್.ನಾಯ್ಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಗೆ ಐಪಿಸಿ ಕಲಂ 302ರಡಿ ಜೀವಾವಧಿ ಶಿಕ್ಷೆ, 2 ಲ.ರೂ.ದಂಡ, ದಂಡ ಪಾವತಿಸಲು…

Read More

ಕೇಂದ್ರ ಸರ್ಕಾರ ಅಕ್ಕಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡಿದೆ ಎಂದು ಆರೋಪಿಸಿದ್ದ ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯ ಅನುಷ್ಠಾನದ ಕುರಿತಂತೆ ಇಂದು ಮಹತ್ವದ ಮಾಹಿತಿಯನ್ನು ನೀಡಿದೆ. ಇಂದು ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಕೆ ಹೆಚ್​ ಮುನಿಯಪ್ಪ , ಪಡಿತರದಾರರಿಗೆ ಅಕ್ಕಿಯ ಬದಲು ಹಣ ನೀಡುತ್ತೇವೆ ಎಂದು ಹೇಳಿದ್ದಾರೆ. ಜುಲೈ 1ರಿಂದ 10 ಕೆಜಿ ಆಹಾರಧಾನ್ಯ ನೀಡುವುದಾಗಿ ಭರವಸೆ ನೀಡಿದ್ದೆವು. ಜನರಿಗೆ ನಾವು ನೀಡಿದ ಭರವಸೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಜನರಿಗೆ ಅಕ್ಕಿಯನ್ನು ನೀಡೋಕೆ ಅಕ್ಕಿಯ ಕೊರತೆಯಿದೆ . ಹೀಗಾಗಿ ಪ್ರತಿ ಕೆಜಿಗೆ 34 ರೂಪಾಯಿಯಂತೆ ಮನೆಯ ಪ್ರತಿಯೊಬ್ಬ ಸದಸ್ಯನಿಗೆ ರಾಜ್ಯ ಸರ್ಕಾರವು 170 ರೂಪಾಯಿಗಳನ್ನು ನೀಡಲಿದೆ. ಅನ್ನಭಾಗ್ಯ ಯೋಜನೆಯ ಬದಲಾಗಿ ಈ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. ಕಾರ್ಡ್​ ಹೋಲ್ಡರ್​ ಖಾತೆಗೆ ನೇರವಾಗಿ ಈ ಹಣ ಸಂದಾಯವಾಗಲಿದೆ ಎಂದು ವಿಧಾನಸೌಧದಲ್ಲಿ ಸಚಿವ ಮುನಿಯಪ್ಪ ಹೇಳಿಕೆ ನೀಡಿದ್ದಾರೆ. ಬಿಪಿಎಲ್​…

Read More

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಫ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಘೋಷಣೆ ಮಾಡಲಾಗಿದೆ. ಎನ್‌ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯ ಪೊಲೀಸ್ ಸಿಬ್ಬಂದಿಯವರು ಅನೌನ್ಸ್ ಮಾಡಿದ್ದಾರೆ. ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ. ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿ ಆರೋಪಿ ಮುಸ್ತಫರವರ ಮನೆಗೂ ಹೋಗಿ ಆದೇಶ ಪ್ರತಿ ಅಂಟಿಸಿ ಬಂದಿದ್ದಾರೆಂದು ತಿಳಿದುಬಂದಿದೆ.

Read More