ಮಂಗಳೂರು;ಶಾಲೆಗೆ ಹೊರಟಿದ್ದ 9ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಜ.10ರಂದು ನಡೆದಿದೆ. ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ ಬಾಲಕ. ಶಾಲೆಗೆ ಹೋಗಲು ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತಿ ಬಿದ್ದಿದ್ದಾನೆ ಮನೆಯವರು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೂ ಬದುಕಿಸುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು.ಅಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆಗೆ ಪಟ್ಟು ಹಿಡಿದ ಹಿನ್ನೆಲೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.ಬಳಿಕ ಮಾಜಿ ಶಾಸಕ ಮೊಯ್ದೀನ್ ಬಾವ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಳಿಸಲಾಗಿದೆ.
Author: main-admin
ಮೈಸೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಸ್ಯಾಂಟ್ರೋ ರವಿ ಪತ್ತೆಗೆ ಮೈಸೂರು ಪೊಲೀಸರು ಮುಂದಾಗಿದ್ದು, . ಆತನ ಬಂಧನಕ್ಕೆ 11 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಯಾಂಟ್ರೊ ರವಿ ವಿರುದ್ಧ ದಾಖಲಾಗಿರುವ ದೂರಿನ ತನಿಖೆ ನಡೆಸಲು ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ದೂರು ದಾಖಲಾದ ಬಳಿಕ ಸ್ಯಾಂಟ್ರೊ ರವಿ ನಾಪತ್ತೆಯಾಗಿದ್ದು, ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸ್ಯಾಂಟ್ರೋ ರವಿ ವಿಚಾರ ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿದೆ. ಬೆಂಗಳೂರಿನಲ್ಲಿ ‘ಸ್ಯಾಂಟ್ರೋ ರವಿ’ 3 ಫ್ಲಾಟ್ ಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಮೈಸೂರಿನ ವಿಜಯನಗರ ಠಾಣೆ ಪೊಲೀಸರು ಬೆಂಗಳೂರಿನ ಶೇಷಾದ್ರಿಪುರಂ, ಬಸವನಗುಡಿ, ಟ್ರಿನಿಟಿ ಸರ್ಕಲ್ ನಲ್ಲಿರುವ ಫ್ಲಾಟ್ ಗಳ ಮೇಲೆ ದಾಳಿನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮಂಜುನಾಥ್ ಆಲಿಯಾಸ್ ಸ್ಯಾಂಟ್ರೋ ರವಿ ಕಳೆದ ನಾಲ್ಕು ತಿಂಗಳ ಹಿಂದೆಯೇ ಫ್ಲಾಟ್ ಖಾಲಿ ಮಾಡಿದ್ದನು, ಫ್ಲ್ಯಾಟ್ ನಲ್ಲಿ…
ಮಂಗಳೂರು: ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಇಬ್ಬರು ಸ್ಥಳೀಯ ಮುಖಂಡರಿಗೆ ಕೋರ್ಟ್ ದಂಢ ವಿಧಿಸಿದೆ. ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ಕೋರ್ಟ್ 25,000 ದಂಡ ವಿಧಿಸಿ ಕ್ಷಮೆಯಾಚನೆಗೆ ಸೂಚನೆ ನೀಡಿದೆ. ಕೆಲವು ತಿಂಗಳ ಹಿಂದೆ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ ಸುನಿಲ್ ಕುಮಾರ್ ವಿರುದ್ಧ ಫೇಸಬುಕ್ ಸೇರಿದಂತೆ ಇತರೆ ಜಾಲತಾಣದಲ್ಲಿ ಅವಹೇಳನಕಾರಿ ಬರಹವನ್ನು ಪ್ರಕಟಿಸಿದ್ದರು.ನಂತರ ಸುನೀಲ್ ಕುಮಾರ್ ಇಬ್ಬರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇದೀಗ ಕೋರ್ಟ್ ಈ ಬಗ್ಗೆ ಆದೇಶ ಹೊರಡಿಸಿದೆ.
ಉಡುಪಿ : ಬ್ರೈನ್ ಟ್ಯೂಮರ್‌ನಿಂದಾಗಿ ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರನೊಬ್ಬ ಸಾವನ್ನಪ್ಪಿದ ಘಟನೆ ಹೆಬ್ರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಪೆಡೂ೯ರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29) ಎಂದು ಗುರುತಿಸಲಾಗಿದೆ. ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ ರಕ್ಷಿತ್ ಶೆಟ್ಟಿ ಕ್ರಿಕೆಟ್ ಆಟವನ್ನು ಪ್ರಾರಂಭಿಸಿದ್ದರು. ಬಳಿಕ ವಿವಿಧ ಜಿಲ್ಲಾ ಮಟ್ಟದ ತಂಡಗಳಲ್ಲಿ ಆಡಿ ಕ್ರಿಕೆಟ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ರಾಜ್ಯ ಮಟ್ಟದಲ್ಲಿಯೂ ರಕ್ಷಿತ್ ಗುರುತಿಸಿಕೊಂಡಿದ್ದರು. ಬೌಲಿಂಗ್‌ನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಅವರು, ತಮ್ಮ ಆಕರ್ಷಕ ಶೈಲಿಯ ಬೌಲಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳಿಂದ ಪ್ರಶಂಸೆ ಗಿಟ್ಟಿಸಿಕೊಂಡಿದ್ದರು. ಎಸ್.ಝಡ್.ಸಿ.ಸಿ ಮತ್ತು ಎಮ್.ಬಿ.ಸಿ.ಸಿ ತಂಡಗಳ ಪರವಾಗಿ ಆಡಿದ್ದರು.
ದೇಶದಲ್ಲಿ ರಣಹದ್ದುಗಳ ಸಂಖ್ಯೆ ತೀರಾ ಕಡಿಮೆಯಾಗುತ್ತಿದ್ದು, ಇದೀಗ ಅಪರೂಪದ ಬಿಳಿಯ ರಣಹದ್ದುವೊಂದನ್ನು ಉತ್ತರ ಪ್ರದೇಶದ ಕಾನ್ಪುರದ ಸ್ಥಳೀಯರು ಸೆರೆ ಹಿಡಿದಿದ್ದಾರೆ. ಹಿಮಾಲಯನ್ ಗ್ರಿಫನ್ ಎಂಬ ಜಾತಿಗೆ ಸೇರಿದ ರಣಹದ್ದು ಇದಾಗಿದ್ದು, ಕರ್ನಲ್ಗಂಜ್ನ ಈದ್ಗಾ ಸ್ಮಶಾನದಲ್ಲಿ ಸಿಕ್ಕಿದೆ. ಸುಮಾರು ಒಂದು ವಾರದಿಂದ ಈ ಪ್ರದೇಶದಲ್ಲಿ ಓಡಾಡುತ್ತಿತ್ತು ಎಂದು ಹೇಳಲಾಗುತ್ತಿದೆ. ಸ್ಥಳೀಯರೊಬ್ಬರು ಈ ಬಗ್ಗೆ ಮಾತನಾಡಿದ್ದು, ‘ರಣಹದ್ದು, ಒಂದು ವಾರದಿಂದ ಇಲ್ಲಿತ್ತು. ನಾವು ಅದನ್ನು ಹಿಡಿಯಲು ಪ್ರಯತ್ನಿಸಿದೆವು, ಆದರೆ ಯಶಸ್ವಿಯಾಗಲಿಲ್ಲ. ಆದರೆ ಅದು ಹಾರುತ್ತಾ ಕೆಳಗೆ ಬಂದಂತೆ ಸೆರೆ ಹಿಡಿದಿದ್ದೇವೆ. ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಹಸ್ತಾಂತರಿಸಿದ್ದೇವೆ‘ ಎಂದರು. ಸ್ಥಳೀಯರು ಸಿಕ್ಕ ಅಪರೂಪದ ಹಿಮಾಲನ್ ಗ್ರಿಫನ್ ರಣಹದ್ದುವಿನ ಜೊತೆಗೆ ವಿಡಿಯೋ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳೂರು : ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡ ಕರ್ನಾಟಕ ಲೋಕಾಯುಕ್ತದ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀಗಣೇಶ್ ವರ್ಗಾವಣೆಯಾಗಿದ್ದಾರೆ. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದ ಪ್ರಧಾನ ಕಚೇರಿಯಲ್ಲಿ ಖಾಲಿ ಇರುವ ಪೊಲೀಸ್ ಅಧೀಕ್ಷಕರ ಹುದ್ದೆಗೆ ಆಡಳಿತದ ಹಿತದೃಷ್ಟಿಯಿಂದ ಆಂತರಿಕ ವರ್ಗಾವಣೆಗೆ ಆದೇಶಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸದರಿ ಹುದ್ದೆ ಪ್ರಭಾರವನ್ನು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರ ಚಲುವರಾಜು ಅವರಿಗೆ ನೀಡಲಾಗಿದೆ. ನೂತನ ಅಧೀಕ್ಷಕರಾಗಿ ಸಿ ಎ ಸೈಮನ್ ಕರ್ತವ್ಯಕ್ಕೆ ನಿಯೋಜನೆಗೊಂಡ ಬಳಿಕ ಹುದ್ದೆಯ ಪ್ರಭಾರವನ್ನು ಅವರಿಗೆ ಹಸ್ತಾಂತರಿಸಲು ಸೂಚಿಸಲಾಗಿದೆ.
ಹಿಂದೂ ಹುಡುಗಿಯ ಜೊತೆ ತಿರುಗಾಟ ನಡೆಸಿದ ಆರೋಪದಲ್ಲಿ ಮುಸ್ಲಿಂ ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ. ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರೆಂದು ಹೇಳಲಾದ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿತ್ತು. ಜ.5ರಂದು ಕಲ್ಲುಗುಂಡಿಯ ಹಫೀದ್ ಎಂಬಾತ ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಘಟನೆಯಿಂದ ಗಾಯಗೊಂಡ ಹಫೀದ್ ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಹಫೀದ್ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ವಿಟ್ಲ : ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ. ಮೃತ ಬಾಲಕನನ್ನು ಪುಣಚ ಮಣಿಲ ನಿವಾಸಿ, ದೇವಿನಗರ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಹೇಮಂತ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಹೇಮಂತ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ನೈಟ್ ಶಿಫ್ಟ್‌ನಲ್ಲಿ ಕೆಲಸ ಮಾಡುವ ಪೊಲೀಸರಿಗೆ ಬಿಗ್ ಶಾಕ್ ಎದುರಾಗಿದ್ದು, ಇನ್ಮುಂದೆ ಅಪ್ಪಿತಪ್ಪಿಯೂ ನಿದ್ರೆಗೆ ಜಾರುವಂತಿಲ್ಲ ಈ ಬಗ್ಗೆ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳಲು ಹೊಸ ಪ್ಲ್ಯಾನ್ ಹಾಕಿದ್ದಾರೆ. ಈಗಾಗಲೇ ಬೆಂಗಳೂರಿನ ಆಗ್ನೇಯ ವಿಭಾಗ ಪೊಲೀಸರು ನಿದ್ದೆ ಮಾಡುತ್ತಾರೆ, ಬೇರೆ ಕಡೆ ಹೋಗಿ ಕಾಲಾಹರಣ ಮಾಡುತ್ತಾರೆ ಎನ್ನುವ ಗಂಭೀರ ಆರೋಪದ ಮೇರೆಗೆ ಪೊಲೀಸರಿಗೆ ಬಾಡಿವೋರ್ನ್ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಪೊಲೀಸರು ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಬಾಡಿವೋರ್ನ್ ಕ್ಯಾಮೆರಾ ಆನ್‌ನಲ್ಲೇ ಇಟ್ಟು ಕೊಂಡಿರಬೇಕು. ಆ ಕ್ಯಾಮೆರಾ ಎಲ್ಲವನ್ನೂ ರೆಕಾರ್ಡ್ ಮಾಡಿಕೊಂಡು ಇರಬೇಕು. ಕ್ಯಾಮೆರಾದಲ್ಲಿ ಈ ಕೃತ್ಯಗಳು ಕಂಡು ಬಂದ್ರೆ ಅಂತಹ ಪೊಲೀಸರ ಮೇಲೆ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನೈಟ್ ಶಿಫ್ಟ್ ಪೊಲೀಸರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ
ಮಡಿಕೇರಿ: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ಕೊಡಗಿನ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಕೀರ್ತನ್(12) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಈತ ಕೊಪ್ಪ ಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಶನಿವಾರ ತಡ ರಾತ್ರಿ ವೇಳೆ ಎದೆ ನೋವೆಂದು ಬಾಲಕ ಹೇಳಿಕೊಂಡಿದ್ದು, ಪೋಷಕರು ಗಾಬರಿಯಿಂದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆ ವೇಳೆಗೆ ಕೀರ್ತನ್ ಮೃತಪಟ್ಟಿದ್ದ ಎಂದು ಹೇಳಲಾಗಿದೆ. ಕೀರ್ತನ್ ನ ತಂದೆ ಮಂಜಾಚಾರಿ ಕೀರ್ತನ್ ಓದುತ್ತಿದ್ದ ಶಾಲೆಯ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ಅವರ ಇಡೀ ಕುಟುಂಬವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಎಳೆಯ ಪ್ರಾಯದ ಮಕ್ಕಳು ಕೂಡ ಹೃದಯಾಘಾತದಿಂದ ಮೃತಪಡುತ್ತಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.










