ಮೂಲ್ಕಿಯ ಕೋಳ್ನಾಡುವಿನಲ್ಲಿ ನವಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಮೀನುಗಾರರ ಸಂಕಷ್ಟಗಳು ಕಣ್ಣಿಗೆ ಕಾಣಲಿಲ್ಲ. ಉಡುಪಿಯಲ್ಲಿ ನನ್ನ ಸಹೋದರರ ಮೀನುಗಾರರ ಕುಟುಂಬಗಳಿವೆ ಎಂದು ಮೋದಿಗೆ ಗೊತ್ತಿತ್ತು. ಇದೇ ಕಾರಣಕ್ಕೆ ಮೀನುಗಾರರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗಿದೆ ಎಂದರು.ಕರ್ನಾಟಕದ ಮೀನುಗಾರರಿಗೆ ಕಾಂಗ್ರೆಸ್ ದ್ರೋಹ ಬಗೆದಿದೆ. ದೆಹಲಿಯಲ್ಲಿ ಕುಳಿತಿರುವ ಸರ್ಕಾರಕ್ಕೆ ಮೀನುಗಾರಿಕೆ ಅಸ್ತಿತ್ವದಲ್ಲಿದೆ ಎಂದು ತಿಳಿದಿರಲಿಲ್ಲ! ಮತ್ತು ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ನಾವು ಪ್ರತ್ಯೇಕ ಮೀನುಗಾರಿಕೆ ಸಚಿವಾಲಯವನ್ನು ಸ್ಥಾಪಿಸಿದ್ದೇವೆ ಎಂದರು. ಸ್ವಾತಂತ್ರ್ಯದ ನಂತರ 2014 ರವರೆಗೆ ಒಳನಾಡು ಮೀನುಗಾರಿಕೆಯು 60 ಲಕ್ಷ ಟನ್‍ಗಳಷ್ಟು ಉತ್ಪಾದನೆಯನ್ನು ಹೊಂದಿತ್ತು. ಆದಾಗ್ಯೂ, ನಂತರ ಬಿಜೆಪಿ ನೇತೃತ್ವದ ಸರಕಾರ 2014ರಲ್ಲಿ ಬಂದ ಸರಕಾರ ಕೇವಲ 9 ವರ್ಷಗಳಲ್ಲಿ 120 ಲಕ್ಷ…
Author: main-admin
ಬೆಂಗಳೂರು;ಟಿಕೆಟ್ ಕೈತಪ್ಪಿದ ಹಿನ್ನೆಲೆ ಪಕ್ಷದ ವಿರುದ್ಧ ಬಂಡಾಯವೆದ್ದು ಪಕ್ಷೇತರರಾಗಿ ಕಣಕ್ಕಿಳಿದ 24 ಮಂದಿಯನ್ನುಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಉಚ್ಚಾಟಿಸಿದೆ. ಗದಗದ ಶಿರಹಟ್ಟಿಯ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿತುಮಕೂರಿನ ಕುಣಿಗಲ್ ನ ಮಾಜಿ ಶಾಸಕ ಬಿಬಿ ರಾಮಸ್ವಾಮಿಗೌಡ,ಬಳ್ಳಾರಿಯ ಹರಪ್ಪನಹಳ್ಳಿಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಪಿ ಲತಾ ಮಲ್ಲಿಕಾರ್ಜುನ, ಕಾಂಗ್ರೆಸ್ ನಾಯಕ ಕೃಷ್ಣೇಗೌಡ (ಅರಕಲಗೂಡು), ಕೆಪಿಸಿಸಿ ಸಂಯೋಜಕ ಚಂದ್ರಾ ಸಿಂಗ್ (ಬೀದರ್ ದಕ್ಷಿಣ), ಚಿಕ್ಕಮಗಳೂರು ಡಿಸಿಸಿ ಉಪಾಧ್ಯಕ್ಷ ಗೋಪಿಕೃಷ್ಣ (ತರೀಕೆರೆ), ಬೆಳಗಾವಿ ಯುವ ಕಾಂಗ್ರೆಸ್ ಮುಖಂಡ ಇರ್ಫಾನ್ ತಾಳಿಕೋಟೆ (ಖಾನಾಪುರ), ಕಿಸಾನ್ ಸೆಲ್ ಉಪಾಧ್ಯಕ್ಷ ಪದ್ಮಜಿತ್ ನಾಡಗೌಡ (ತೇರದಾಳ), ಬಸವರಾಜ್ ಮಲ್ಕಾರಿ ( ಹುಬ್ಬಳ್ಳಿ–ಧಾರವಾಡ ಪಶ್ಚಿಮ), ಉಮಾದೇವಿ (ನೆಲಮಂಗಲ), ಯೂಸುಫ್ ಅಲಿ ಜಾಮದಾರ್ (ಬೀದರ್ ದಕ್ಷಿಣ), ನಾರಾಯಣ ಬಂಗಿ (ಬೀದರ್ ದಕ್ಷಿಣ), ವಿಜಯಕುಮಾರ್ ಬರೂರು (ಬೀದರ್ ದಕ್ಷಿಣ), ಸವಿತಾ ಮಲ್ಲೇಶ್ ನಾಯಕ್ (ಮಾಯಕೊಂಡ), ಪಿ.ಎಚ್. ಚಂದ್ರಶೇಖರ್ (ಶ್ರೀರಂಗಪಟ್ಟಣ), ಪುಟ್ಟ ಆಂಜನಪ್ಪ (ಶಿಡ್ಲಘಟ್ಟ), ಶಂಭು ಕೋಲ್ಕರ್ (ರಾಯಬಾಗ್),…
ಬೆಂಗಳೂರು: ದಿನಾಂಕ 10-05-2023ರ ಬುಧವಾರದಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಂದು ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ, ಸಂಘ-ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ. ಅಲ್ಲದೇ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವಂತ ಅಧಿಕಾರಿ, ಸಿಬ್ಬಂದಿ ಹಾಜರಾಗುವುದು ಕಡ್ಡಾಯಗೊಳಿಸಿದೆ. ಅಲ್ಲದೇ ಮತಗಟ್ಟೆ ಕೇಂದ್ರ, ಮತಏಣಿಕೆ ಕೇಂದ್ರಗಳಿಗೆ ರಜೆಯನ್ನು ಘೋಷಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ ಅಂದರೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಸರ್ಕಾರವು ಆಯಾ ಚುನಾವಮಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲು ದಿನಾಂಕದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ…
ಪುತ್ತೂರು:ಪುತ್ತೂರಿನಲ್ಲಿ ಅನೈತಿಕ ಪೊಲೀಸ್ ಗಿರಿ ನಡೆದಿದ್ದು, ಅಮಾಯಕ ಕಾಲೇಜು ವಿದ್ಯಾರ್ಥಿ ಮೇಲೆ ಸಹಪಾಠಿ ಜೊತೆ ಮಾತನಾಡಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಗಂಭೀರ ಗಾಯಗೊಂಡಿದ್ದು, ಯುವಕನಿಗೆ ಒಂದು ಕಿವಿ ಕೇಳಿಸದಂತಾಗಿದೆ ಎಂದು ತಿಳಿದು ಬಂದಿದೆ. ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ರೂಂ ಒಂದರಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಂತ್ರಸ್ತ ಫಾರಿಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಪಾರಿಶ್ ಹೇಳಿದ್ದೇನು? ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೊಹಮ್ಮದ್ ಪಾರಿಶ್, ಬಜರಂಗದಳದ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. ನನ್ನ ಕ್ಲಾಸ್‌ಮೇಟ್ ಮತ್ತು ನಾನು ಇಬ್ಬರೂ ಅಂಗಡಿಯಲ್ಲಿ ಜ್ಯೂಸ್ ಕುಡಿಯುತ್ತಿದ್ದೆವು. ಇದಾದ ಬಳಿಕ 15 ಜನ ನನ್ನನ್ನು ಕರೆದರು. ನಾನು ಹೆಸರು ಹೇಳಿದ ಬಳಿಕ ನಿನ್ನಲ್ಲಿ ಮಾತನಾಡಲಿದೆ ಎಂದು ನನ್ನನ್ನು ರೂಂ ಒಂದಕ್ಕೆ ಕರೆದೊಯ್ದರು. ಅಲ್ಲಿ ಸುಮಾರು 50 ಮಂದಿ ಸೇರಿಕೊಂಡು ನನ್ನ ಮೇಲೆ ವೈರ್ ಮತ್ತು…
ಮಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ವಿವಿಧ ಪಕ್ಷದ ಪ್ರಮುಖ ನಾಯಕರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದಿನ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಗೆ ಆಗಮಿಸಲಿದ್ದು, ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಭದ್ರತೆ ಹಾಗೂ ಸಂಚಾರ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಬೆಳಗ್ಗೆ 7ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ಸಮಾವೇಶ ಸ್ಥಳದ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕುದೀಪ್ ಕುಮಾರ್ ಜೈನ್ ಹೇಳಿದ್ದಾರೆ. ಬೆಳಗ್ಗೆ 10:30ರ ನಂತರ ಮೂಲ್ಕಿಯ ಕೊಲ್ನಾಡ್ ನ ಹೆಲಿಪ್ಯಾಡ್ ನಿಂದ ಕಾರ್ಯಕ್ರಮಕ್ಕೆ ಹೋಗುವ ಸ್ಥಳದಲ್ಲಿ ಹಾಗೂ ಹಳೆಯಂಗಡಿ ಜಂಕ್ಷನ್ ಬಳಿಯ ಕಾರ್ನಾಡ್ ಬೈಪಾಸ್ ಬಳಿ ಕಾರ್ಯಕ್ರಮಕ್ಕೆ ಬರುವ ವಾಹನವನ್ನು ಬಿಟ್ಟು ಉಳಿದ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಸದ್ಯ ಉಡುಪಿ ಕಡೆಯಿಂದ ಮಂಗಳೂರು ಹಾಗೂ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುವವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುವ…
ಬೆಂಗಳೂರು : ವಿಧಾನ ಸಭೆ ಚುನಾವಣಾ ಪ್ರಚಾರಕ್ಕಾಗಿ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್‌ಗೆ ರಣಹದ್ದು ಬಡಿದು ವಿಂಡೋ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಹತ್ತಿದ್ದಾರೆ. ಕೊಂಚ ದೂರ ಸಾಗುತ್ತಿದ್ದಂತೆ ಹೆಲಿಕಾಪ್ಟರ್‌ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್ ವಿಂಡೋ ಗ್ಲಾಸ್ ಪುಡಿಪುಡಿಯಾಗಿದ್ದು ತಕ್ಷಣ ಎಚ್ಚೆತ್ತ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಕೆಲ ಕಾಲ ಡಿಕೆಶಿ ಭಯಭೀತರಾಗಿದ್ದು.ಯಾವುದೇ ಹಾನಿಯಾಗಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುರಕ್ಷಿತರಾಗಿದ್ದಾರೆ ಎಂದು ಹೆಲಿಕಾಪ್ಟರ್ ಸಿಬ್ಬಂದಿ ತಿಳಿಸಿದ್ದಾರೆ . ಘಟನೆ ಬಳಿಕ ಡಿ.ಕೆ.ಶಿವಕುಮಾರ್ ಹೆಚ್ಎಎಲ್ ಏರ್ಪೋರ್ಟ್ಗೆ ಮತ್ತೆ ಬಂದಿಳಿದಿದ್ದಾರೆ. ಇದೀಗ ಬಂದ ಸುದ್ದಿಯಾಗಿದ್ದು , ಹೆಚ್ಚಿನ ಮಾಹಿತಿ ತಿಳಿದ ತಕ್ಷಣ ಅಪ್‌ಡೇಟ್ ಮಾಡಲಾಗುತ್ತದೆ.
ಮಹಾರಾಷ್ಟ್ರ: ಮಹಾತ್ಮ ಗಾಂಧಿಜೀಯವರ ಮೊಮ್ಮಗ ಅರುಣ್ ಗಾಂಧಿ(89) ಅವರು ಇಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಿಧನರಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತರಾಗಿದ್ದ ಅರುಣ್ ಗಾಂಧಿ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇದೀಗ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಕೊಲ್ಹಾಪುರದಲ್ಲಿ ನೆರವೇರಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ. ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಜನಿಸಿದ ಅರುಣ್ ಗಾಂಧಿ, ಸಾಮಾಜಿಕ ಕಾರ್ಯಕರ್ತರಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನು ಅರುಣ್ ಗಾಂಧಿ ಕೂಡ ಕೆಲವು ಪುಸ್ತಕಗಳನ್ನು ಬರೆದಿದ್ದು, ಅವುಗಳಲ್ಲಿ ದಿ ಗಿಫ್ಟ್ ಆಫ್ ಆ್ಯಂಗರ್ ಆಂಡ್ ಅದರ್ ಲೆಸ್ಸನ್ಸ್ ಫ್ರಂ ಮೈ ಗ್ರ್ಯಾಂಡ್ಫಾದರ್ ಹಮಾತ್ಮ ಗಾಂಧಿ ಪ್ರಮುಖವಾದವು.
ಉಳ್ಳಾಲ:ವ್ಯಕ್ತಿಯೋರ್ವನ ಕೊಲೆಗೆ ಯತ್ನಿಸಿದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ತಲಪಾಡಿ ನಿವಾಸಿ ಮಕರೇಂದ್ರ ಎಂಬಾತನ ಮೇಲೆ ಪರಿಚಿತ ವ್ಯಕ್ತಿಯೇ ಹಲ್ಲೆ ನಡೆಸಿದ್ದಾನೆ. ತಲಪಾಡಿಯ ಬಾರ್ ಆಂಡ್ ರೆಸ್ಟೋರೆಂಟ್ ವೊಂದರ ಸಮೀಪ ಎ.28ರ ಸಂಜೆ ಘಟನೆ ನಡೆದಿದೆ.ಮಕರೇಂದ್ರ ಎಂಬಾತ ಬಾರ್ ನತ್ತ ಬಂದು ಪರಿಚಿತ ವಿಲ್ಫ್ರೆಡ್ ಮೈಕಲ್ ಡಿಸೋಜ ಬಳಿ ಕುಡಿಯಲು ಹಣ ಕೇಳಿದ್ದಾನೆ. ಇದಕ್ಕೆ ಕೋಪಗೊಂಡ ವಿಲ್ಫ್ರೆಡ್, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿ, ಹಲ್ಲೆ ನಡೆಸಿದಾಗ ಮಕರೇಂದ್ರ ರಸ್ತೆಗೆ ಬಿದ್ದಿದ್ದಾನೆ. ಈ ವೇಳೆ ರಸ್ತೆಯಲ್ಲಿದ್ದ ಕಲ್ಲು ಮಕರೇಂದ್ರನ ತಲೆಗೆ ಬಡಿದು ಗಂಭೀರವಾಗಿ ಗಾಯವಾಗಿದೆ.ಆತನಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಾಯಲಿ ಎಂಬ ಉದ್ದೇಶದಿಂದ ಹಲ್ಲೆ ಮಾಡಲಾಗಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಇದೀಗ ಮದುವೆ ಮನೆಯ ಸಂಭ್ರಮ, ಸಡಗರ ಮನೆ ಮಾಡಿದೆ.ಬುಧವಾರ ಸಂಜೆ ಗಂಟೆ 6.40 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲು ಈಗಾಗಲೇ ಹೆಸರು ನೋಂದಾಯಿಸಿದ್ದಾರೆ. ಮಂಗಳವಾರ ಅವರ ದಾಖಲೆಗಳನ್ನೆಲ್ಲಾ ಪರಿಶೀಲಿಸಿ ವಧುವಿಗೆ ಸೀರೆ ಮತ್ತು ರವಿಕೆ ಕಣ ಹಾಗೂ ವರನಿಗೆ ಧೋತಿ-ಶಾಲು ನೀಡಲಾಗುತ್ತದೆ. ಬುಧವಾರ ಸಂಜೆ 5 ಗಂಟೆಯಿಂದ ಭವ್ಯ ಮೆರವಣಿಗೆಯಲ್ಲಿ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ಹೋಗಲಿದ್ದಾರೆ. ಅಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು, ಚಲನಚಿತ್ರ ನಟ ತೂಗುದೀಪ ದರ್ಶನ್ ಮೊದಲಾದ ಗಣ್ಯರು ಮಂಗಳಸೂತ್ರ ವಿತರಿಸಲಿದ್ದಾರೆ. ವೇದ-ಮಂತ್ರ ಘೋಷ ಪಠಣದೊಂದಿಗೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ವಿವಾಹ ಸಮಾರಂಭವು ಅವರವರ ಜಾತಿ ಸಂಪ್ರದಾಯದಂತೆ ನಡೆಯುತ್ತದೆ. ಬಳಿಕ ದೇವರ ದರ್ಶನ ಮಾಡಿ ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿ ನೂತನ ದಂಪತಿ ಅವರ ಊರಿಗೆ ತೆರಳಲಿದ್ದಾರೆ. ವರದಕ್ಷಿಣೆ ಹಾಗೂ ಮದುವೆಗಾಗಿ ಆಗುವ…
ಉಪ್ಪಿನಂಗಡಿ: ಏಳು ಅಂಗಡಿಗಳಿಗೆ ಕಳ್ಳನೊಬ್ಬ ನುಗ್ಗಿ ಸಾಮಗ್ರಿಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಉಪ್ಪಿನಂಗಡಿಯ ಬ್ಯಾಂಕ್ ಸ್ಟ್ರೀಟ್ ನಲ್ಲಿರುವ ಅಂಗಡಿಗಳಲ್ಲಿ ಕಳ್ಳತನವಾಗಿದೆ ಎನ್ನಲಾಗಿದೆ.ಕಳ್ಳನು ಚಿನ್ನದ ಅಂಗಡಿಯೊಂದಕ್ಕೆ ನುಗ್ಗಿ ಸೇಫ್ ಲಾಕರ್ ಅನ್ನು ತೆರೆಯಲು ಯತ್ನಿಸಿದ್ದಾನೆ. ಬಳಿಕ ಅಲ್ಲಿ ಡ್ರವರ್ ನಲ್ಲಿದ್ದ ಹಣ ಕಳ್ಳತನ ಮಾಡಿದ್ದಾನೆ. ಮತ್ತೊಂದು ಅಂಗಡಿಗೆ ನುಗ್ಗಿ ಮೊಬೈಲ್ ಕಳ್ಳತನ ಮಾಡಿದ್ದು, ನಂತರ ಬಟ್ಟೆ ಅಂಗಡಿಗೆ ನುಗ್ಗಿದ ಕಳ್ಳ ಎರಡು ಬಾತ್ ಟವೆಲ್ ಕದ್ದಿದ್ದಾನೆ. ಇದಲ್ಲದೆ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಬಳಿಯ ಹೋಟೆಲ್, ಪೀಠೋಪಕರಣಗಳ ಅಂಗಡಿ, ಜನರಲ್ ಸ್ಟೋರ್, ದಿನಸಿ ಅಂಗಡಿಗಳಿಗೂ ಕಳ್ಳರು ನುಗ್ಗಿ ಸಿಕ್ಕಿದ್ದನ್ನೆಲ್ಲಾ ತೆಗೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ.ಫರ್ನಿಚರ್ ಅಂಗಡಿಯಲ್ಲಿದ್ದ ದುಬಾರಿ ಬೆಲೆಯ ವಾಚ್ ಕಳ್ಳತನವಾಗಿದೆ. ಈ ಎಲ್ಲಾ ಏಳು ಕಳ್ಳತನಗಳು ಒಂದೇ ರೀತಿಯದ್ದಾಗಿದ್ದು, ಒಬ್ಬ ವ್ಯಕ್ತಿ ಮಾತ್ರ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.ಇನ್ನು ಶಂಕಿತ ಕಳ್ಳನ ಸಿಸಿಟಿವಿ ದೃಶ್ಯ ಕೂಡ ಸೆರೆಯಾಗಿದೆ. ಪ್ರತಿಯೊಂದು ಅಂಗಡಿಯೊಳಗೆ ನುಗ್ಗಿದ ಕಳ್ಳ ಸಿಸಿಟಿವಿಯ ದಿಕ್ಕು ಬದಲಾಯಿಸುವ ಪ್ರಯತ್ನ ಮಾಡಿದ್ದು, ಆ ವೇಳೆ ಆತನ…










