Author: main-admin

ನವದೆಹಲಿ: ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ (ನಿವೃತ್ತ) ಅವರನ್ನು, ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿಪ್ರಸ್ತುತ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರ ಅವಧಿ ಮೇ 30 ಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಜನರಲ್ ಅನಿಲ್ ಚೌಹಾಣ್ ಅವರ ಸ್ಥಾನವನ್ನು ರಾಜಾ ಸುಬ್ರಮಣಿ ವಹಿಸಿಕೊಳ್ಳಲಿದ್ದಾರೆ. ಲೆಫ್ಟಿನೆಂಟ್ ಜನರಲ್ ಸುಬ್ರಮಣಿ ಅವರು ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಮಿಲಿಟರಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಜುಲೈ 31 ರಂದು ಅವರು ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸೇನೆಯಿಂದ ನಿವೃತ್ತರಾಗಿದ್ದರು.ಕಳೆದ ವರ್ಷ ಸೆಪ್ಟೆಂಬರ್ 1 ರಂದು ಸುಬ್ರಮಣಿ ಅವರು ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದಲ್ಲಿ ಮಿಲಿಟರಿ ಸಲಹೆಗಾರರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು. ಅದಕ್ಕೂ ಮೊದಲು, ಜುಲೈ 2024 ರಿಂದ ಜುಲೈ 2025 ರವರೆಗೆ ಭೂಸೇನೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಅಷ್ಟೇ ಅಲ್ಲದೆ, ಮಾರ್ಚ್…

Read More

ಛತ್ತರ್ಪುರ್ (ಮಧ್ಯಪ್ರದೇಶ) : ಇದು ಸಿನೆಮಾ ಕಥೆಯಲ್ಲ, ಅಪ್ಪಟ ಸತ್ಯ ಘಟನೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿ ಬಿಡುಗಡೆಯಾದ ವ್ಯಕ್ತಿ ಮತ್ತು ಅದೇ ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಅಧಿಕಾರಿಯೊಬ್ಬರು ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸತ್ನಾ ಜೈಲಿನ ಉಪ ಜೈಲರ್ ಫಿರೋಜಾ ಖಾಟೂನ್ ಮತ್ತು ಮಾಜಿ ಕೈದಿ ಧರ್ಮೇಂದ್ರ ಸಿಂಗ್ ಅವರ ಈ ವಿವಾಹವು ಸಾಮಾಜಿಕ ಸಾಮರಸ್ಯದ ಹೊಸ ಚರ್ಚೆಗೆ ನಾಂದಿ ಹಾಡಿದೆ. ಸತ್ನಾ ಸೆಂಟ್ರಲ್ ಜೈಲಿನಲ್ಲಿ ಫಿರೋಜಾ ಖಾಟೂನ್ ಅವರು ವಾರಂಟ್ ಶಾಖೆಯ ಉಸ್ತುವಾರಿಯಾಗಿದ್ದರು. ಇದೇ ವೇಳೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಧರ್ಮೇಂದ್ರ ಸಿಂಗ್, ಜೈಲಿನ ವಾರಂಟ್ ವಿಭಾಗದ ಕೆಲಸಗಳಲ್ಲಿ ಸಹಾಯ ಮಾಡುತ್ತಿದ್ದರು. ಕೆಲಸದ ನಡುವೆ ಬೆಳೆದ ಇವರ ಸ್ನೇಹ ಕಾಲಕ್ರಮೇಣ ಪ್ರೀತಿಯಾಗಿ ಅರಳಿತು. ಧರ್ಮೇಂದ್ರ ಅವರ ಉತ್ತಮ ನಡವಳಿಕೆಯನ್ನು ಪರಿಗಣಿಸಿ 2022 ರಲ್ಲಿ ಅವರನ್ನು ಅವಧಿಗೂ ಮುನ್ನವೇ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಜೈಲಿನಿಂದ ಹೊರಬಂದ ನಂತರವೂ ಇಬ್ಬರ ನಡುವಿನ ಸಂಬಂಧ ಗಟ್ಟಿಯಾಗಿಯೇ ಇತ್ತು.…

Read More

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಬಿಜೆಪಿ ನಾಯಕ, ಸಿಎಂ ರೇಸ್​​​ನಲ್ಲಿ ಮುಂಚೂಣಿಯಲ್ಲಿರುವ ಸುವೇಂದು ಅಧಿಕಾರಿ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಥ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗಿಲು ಹುಟ್ಟಿಸುವ ಮಾಹಿತಿ ಬಯಲಾಗಿದೆ. ಈ ಹತ್ಯೆಯನ್ನು ಯೋಜಿತವಾಗಿ ನಡೆಸಲು ಬಿಹಾರದಿಂದ ಶಾರ್ಪ್ ಶೂಟರ್‌ಗಳನ್ನು ಕರೆಸಲಾಗಿತ್ತು ಹಾಗೂ ಬರೋಬ್ಬರಿ 40 ಲಕ್ಷ ರೂ.ಗಳ ಸುಪಾರಿ ನೀಡಲಾಗಿತ್ತು ಎಂಬ ವಿಷಯ ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಯೋಜಿತ ಸಂಚು ಮತ್ತು ಹತ್ಯೆ ಪೊಲೀಸ್ ಮೂಲಗಳ ಪ್ರಕಾರ, ಚಂದ್ರನಾಥ್ ರಥ್ ಅವರ ಚಲನವಲನದ ಮೇಲೆ ಹಂತಕರು ಕಳೆದ ಐದು ದಿನಗಳಿಂದ ಹದ್ದಿನ ಕಣ್ಣಿಟ್ಟಿದ್ದರು. ಜೂನ್ 5ರ ಬುಧವಾರ ರಾತ್ರಿ ಸುಮಾರು 10 ಗಂಟೆಗೆ ಚಂದ್ರನಾಥ್ ಅವರು ಜೆಸೋರ್ ರಸ್ತೆಯ ಮೂಲಕ ಹಿಂತಿರುಗುತ್ತಿದ್ದಾಗ, ಮಳೆಯಿಂದಾಗಿ ರಸ್ತೆಯಲ್ಲಿ ನೀರು ನಿಂತಿದ್ದ ಕಾರಣ ಅವರ ಕಾರಿನ ವೇಗ ಕಡಿಮೆಯಾಗಿತ್ತು. ಇದನ್ನೇ ಕಾಯುತ್ತಿದ್ದ ಇಬ್ಬರು ಬೈಕ್ ಸವಾರರು, ಕಾರಿನ ಕಿಟಕಿಯ ಬಳಿ ಬಂದು ಅತಿ ಸಮೀಪದಿಂದ ಹಲವು ಸುತ್ತು ಗುಂಡಿನ ದಾಳಿ ನಡೆಸಿ…

Read More

ನವದೆಹಲಿ: ಭಾರತದಲ್ಲಿ ಬಂಗಾರವನ್ನು ಎಂದೆಂದಿಗೂ ಸುರಕ್ಷಿತ ಹೂಡಿಕೆಯ ಪ್ರತೀಕವಾಗಿ ನೋಡಲಾಗುತ್ತದೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಯುದ್ಧ ಭೀತಿ ಮತ್ತು ಕರೆನ್ಸಿ ಮೌಲ್ಯದ ಏರಿಳಿತಗಳ ನಡುವೆ ಚಿನ್ನದ ಮೇಲಿನ ವಿಶ್ವಾಸ ಮತ್ತಷ್ಟು ಗಟ್ಟಿಯಾಗುತ್ತಿರುವ ಸಂದರ್ಭದಲ್ಲಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಕೂಡ ಮಹತ್ವದ ಹೆಜ್ಜೆ ಇಟ್ಟಿದೆ. ವಿದೇಶಗಳಲ್ಲಿ ಸಂಗ್ರಹಿಸಲಾಗಿದ್ದ ಚಿನ್ನವನ್ನು ಭಾರತಕ್ಕೆ ಮರಳಿ ತರಿಸುವ ಪ್ರಕ್ರಿಯೆಯನ್ನು ಆರ್‌ಬಿಐ ವೇಗಗೊಳಿಸಿದ್ದು, ದೇಶದ ಒಟ್ಟು ಚಿನ್ನದ ನಿಕ್ಷೇಪ ಇದೀಗ 880 ಮೆಟ್ರಿಕ್ ಟನ್‌ಗೂ ಅಧಿಕ ಮಟ್ಟ ತಲುಪಿದೆ. ಇದು ಬಂಗಾರ ಪ್ರಿಯರಿಗೆ ಮಾತ್ರವಲ್ಲ, ದೇಶದ ಆರ್ಥಿಕ ಭದ್ರತೆಗೆ ಸಹ ದೊಡ್ಡ ಸಂದೇಶವಾಗಿ ಪರಿಣಮಿಸಿದೆ. ಆರ್‌ಬಿಐ ಬಿಡುಗಡೆ ಮಾಡಿದ ಅರ್ಧವಾರ್ಷಿಕ ವರದಿ ಪ್ರಕಾರ, ಮಾರ್ಚ್ 2026ರ ವೇಳೆಗೆ ಭಾರತದ ಒಟ್ಟು ಚಿನ್ನದ ಸಂಗ್ರಹ 880.52 ಮೆಟ್ರಿಕ್ ಟನ್‌ಗೆ ಏರಿಕೆಯಾಗಿದೆ. ಇದರಲ್ಲಿ 680.05 ಮೆಟ್ರಿಕ್ ಟನ್ ಚಿನ್ನವನ್ನು ಭಾರತದಲ್ಲೇ ಸಂಗ್ರಹಿಸಲಾಗಿದೆ. ಕಳೆದ ಕೆಲವು ವರ್ಷಗಳ ಅಂಕಿ-ಅಂಶಗಳನ್ನು ಗಮನಿಸಿದರೆ, ಆರ್‌ಬಿಐ ತನ್ನ ಚಿನ್ನವನ್ನು ದೇಶೀಯವಾಗಿ ಸಂಗ್ರಹಿಸುವತ್ತ ನಿರಂತರವಾಗಿ ಹೆಜ್ಜೆ ಹಾಕುತ್ತಿರುವುದು…

Read More

ಬೆಂಗಳೂರು: ಬೆಂಗಳೂರಿನಲ್ಲಿ ಹಣದ ಆಸೆಗಾಗಿ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಆರಂಭದಲ್ಲಿ ಕೇವಲ ‘ಅಪಘಾತ’ ಎಂದು ಬಿಂಬಿಸಲಾಗಿತ್ತು. ಆದರೆ ಮಹಾಲಕ್ಷ್ಮಿ ಲೇಔಟ್ ಪೊಲೀಸರ ಚುರುಕಿನ ತನಿಖೆಯಿಂದಾಗಿ ಇದು ಸುಲಿಗೆಗಾಗಿ ನಡೆದ ವ್ಯವಸ್ಥಿತ ಕೊಲೆ ಎಂಬುದು ಸಾಬೀತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಕೇಶ್, ಮಂಜುನಾಥ್, ಚೇತನ್, ಪ್ರದೀಪ್ ಮತ್ತು ಯೋಹಾನ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿನಿಮೀಯ ರೀತಿಯ ಸ್ಕೆಚ್ ಆರೋಪಿ ಚೇತನ್ ಎಂಬಾತ ವಿಜಯಲಕ್ಷ್ಮಿ ಎಂಬುವರ ಪರಿಚಯ ಹೊಂದಿದ್ದ ಹಾಗೂ ಅವರ ಬಳಿ ಸಾಲ ಪಡೆದಿದ್ದ. ಆಕೆಯ ಬಳಿ ಹೆಚ್ಚಿನ ಹಣ ಮತ್ತು ಚಿನ್ನಾಭರಣ ಇದೆ ಎಂದು ತಿಳಿದಿದ್ದ ಚೇತನ್, ಸ್ನೇಹಿತರೊಂದಿಗೆ ಸೇರಿ ಕಳ್ಳತನಕ್ಕೆ ಸಂಚು ರೂಪಿಸಿದ್ದ. ಪ್ಲಾನ್‌ನಂತೆ ಏಪ್ರಿಲ್ 21ರಂದು ವಿಜಯಲಕ್ಷ್ಮಿ ಅವರು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ರಾಕೇಶ್ ಎಂಬಾತ ಬೈಕ್‌ನಿಂದ ಜೋರಾಗಿ ಡಿಕ್ಕಿ ಹೊಡೆದಿದ್ದಾನೆ. ಕೂಡಲೇ ಅಲ್ಲಿಗೆ ಆಟೋದಲ್ಲಿ…

Read More

ಉಡುಪಿ:  ಬೀಗ ಹಾಕಿದ ಮನೆಗಳ ಸುರಕ್ಷತೆ ಮತ್ತು ಭದ್ರತೆಯನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಉಡುಪಿ ಜಿಲ್ಲಾ ಪೊಲೀಸರು “ಲಾಕ್ಡ್ ಹೌಸ್ ಬೀಟ್ ಸಿಸ್ಟಮ್” (LHBS) ಎಂಬ ವಿನೂತನ ಕಾರ್ಯಕ್ರಮವನ್ನು ಪರಿಚಯಿಸಿದೆ. ಈ ಯೋಜನೆ ನಿವಾಸಿಗಳು ಕೆಲಸ, ಪ್ರವಾಸ ಅಥವಾ ಇತರ ವೈಯಕ್ತಿಕ ಕಾರಣಗಳಿಗಾಗಿ ಪ್ರಯಾಣಿಸುವಾಗ ಬೀಗ ಹಾಕಿಕೊಂಡಿರುವ ಮನೆಗಳ ಮೇಲೆ ಪೊಲೀಸ್ ಸಿಬ್ಬಂದಿ ವಿಶೇಷ ನಿಗಾ ಇಡುತ್ತಾರೆ. ಸೂಕ್ತ ಭದ್ರತೆ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಬೀಟ್ ಸಿಬ್ಬಂದಿ ಹಗಲು ಮತ್ತು ರಾತ್ರಿ ಎರಡೂ ಸಮಯದಲ್ಲಿ ಅಂತಹ ಮನೆಗಳಿಗೆ ಭೇಟಿ ನೀಡುತ್ತಾರೆ.ಉಡುಪಿ ಜಿಲ್ಲೆಯ ನಿವಾಸಿಗಳು ಪ್ರಯಾಣ ಮಾಡುವಾಗ ಮನೆಗಳಿಗೆ ಬೀಗ ಹಾಕಿಕೊಂಡು ಹೋಗಲು ಯೋಜಿಸುತ್ತಿದ್ದರೆ, ಉಡುಪಿ ಜಿಲ್ಲಾ ನಿಯಂತ್ರಣ ಕೊಠಡಿಗೆ ಮೀಸಲಾದ ಸಹಾಯವಾಣಿ ಸಂಖ್ಯೆ 0820-2526709 ಗೆ ಕರೆ ಮಾಡುವ ಮೂಲಕ ತಿಳಿಸಲು ಕೋರಲಾಗಿದೆ.ನಿವಾಸಿಗಳು ನಿಯಂತ್ರಣ ಕೊಠಡಿಯಿಂದ ಒದಗಿಸಲಾದ ವಾಟ್ಸಾಪ್ ಸಂಖ್ಯೆಗೆ ನಿರ್ಗಮನ ಮತ್ತು ವಾಪಸಾತಿ ದಿನಾಂಕ ಮತ್ತು ಸಮಯ, ನಿಖರವಾದ ವಸತಿ ವಿಳಾಸ ಮತ್ತು ಮನೆಯ ಮುಂದೆ…

Read More

ಕೋಲ್ಕತ್ತಾ: ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು, ಪಾನಿಹಾಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನ ದೇವನಾಥ್ ನಿವಾಸದ ಬಳಿ ಬಾಂಬ್ ಸ್ಫೋಟಗೊಂಡಿದೆ. ಆರ್​.ಜಿ ಕರ್ ಆಸ್ಪತ್ರೆಯಲ್ಲಿನ ಅತ್ಯಾಚಾರ ಸಂತ್ರಸ್ತೆ ತಾಯಿ ರತ್ನ ದೇವನಾಥ್​ ಮನೆ ಸಮೀಪ ನಡೆದ ಈ ಘಟನೆಯಲ್ಲಿ ಬಿಜೆಪಿಯ ಐವರು ಕಾರ್ಯಕರ್ತರಿಗೆ ಗಾಯಗಳಾಗಿವೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿರುವ ವಿಚಾರ ದೇಶಾದ್ಯಂತ ಸುದ್ದಿಯಾಗಿರುವ ನಡುವೆ, ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ.

Read More

ಚಿಕ್ಕಬಳ್ಳಾಪುರ: ಪ್ರೀತಿ ಕುರುಡು ಎಂಬ ಮಾತಿಗೆ ಸಾಕ್ಷಿಯೆಂಬಂತೆ, ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಾದವರೇ ಪ್ರೀತಿಸಿ ಮದುವೆಯಾಗಿ ಪೋಷಕರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ  ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾವಕನಹಳ್ಳಿಯ ಶಶಿಕಲಾ (29), ಹೊಸಕೋಟೆ ತಾಲ್ಲೂಕಿನ ಹಳೆಊರಿನ ಪ್ರವೀಣ್ (24) ಎಂಬಾತನನ್ನು ಮದುವೆಯಾಗುವ ಮೂಲಕ ಸಮಾಜ ಮತ್ತು ಕುಟುಂಬದ ವಿರೋಧದ ನಡುವೆಯೂ ಒಂದಾಗಿದ್ದಾರೆ. ಅಷ್ಟೇ ಅಲ್ಲದೆ, ತಮಗೆ ರಕ್ಷಣೆ ನೀಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಪೋಷಕರ ವಿರೋಧದ ನಡುವೆ ಮದುವೆ ಶಶಿಕಲಾ ಮತ್ತು ಪ್ರವೀಣ್ ಸಂಬಂಧಿಕರಾಗಿದ್ದು, ಶಶಿಕಲಾಳ ತಾಯಿಯ ತಂಗಿಯ ಮಗನೇ ಪ್ರವೀಣ್. ಅಂದರೆ, ವರಸೆಯಲ್ಲಿ ಇವರಿಬ್ಬರು ಅಕ್ಕ-ತಮ್ಮನಾಗಬೇಕು. ಇವರ ಪ್ರೀತಿಯ ವಿಷಯ ತಿಳಿದ ಪೋಷಕರು, ಈ ಸಂಬಂಧ ಸಮಾಜದಲ್ಲಿ ಒಪ್ಪಿತವಲ್ಲ ಎಂದು ವಿರೋಧಿಸಿದ್ದರು. ಅಲ್ಲದೆ, ಶಶಿಕಲಾಗೆ ಬೇರೊಬ್ಬ ಹುಡುಗನೊಂದಿಗೆ ನಿಶ್ಚಿತಾರ್ಥ ನಡೆಸಿ ಇದೇ ಮೇ 29ಕ್ಕೆ ಮದುವೆ ದಿನಾಂಕವನ್ನೂ ನಿಗದಿಪಡಿಸಿದ್ದರು. ಆದರೆ ಮದುವೆಗೆ ಕೆಲವೇ ದಿನ ಬಾಕಿ ಇರುವಾಗ ಶಶಿಕಲಾ ಮನೆಯಿಂದ ಹೊರಬಂದು ಪ್ರವೀಣ್‌ನನ್ನು ಮದುವೆಯಾಗಿದ್ದಾಳೆ.…

Read More

ಮಂಗಳೂರು: ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ. ಕೊಡ್ಯಡ್ಕ ಮಿತ್ತಬೈಲ್ ನಿವಾಸಿ ಶ್ರವಣ್ (19) ಮತ್ತು ಮುಲ್ಲಕಾಡು ನಿವಾಸಿ ಪ್ರಥಮ್ (21) ಬಂಧಿತ ಆರೋಪಿಗಳಾಗಿದ್ದಾರೆ. ಕಾವೂರು ಪೊಲೀಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು ಮತ್ತು ಸಿಬ್ಬಂದಿ ಮಧ್ಯಾಹ್ನ ಗಸ್ತು ನಿರತರಾಗಿದ್ದ ವೇಳೆ ಮುಲ್ಲಕಾಡು ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಈ ಯುವಕರು ಮಾದಕ ಸೇವನೆ ಮಾಡಿದಂತೆ ಕಂಡುಬಂದಿದ್ದರು. ತಕ್ಷಣ ವಶಕ್ಕೆ ಪಡೆದು ಕೂಲಂಕಷವಾಗಿ ವಿಚಾರಿಸಿದಾಗ ಮಾದಕ ಸೇವನೆ ಮಾಡಿ ರುವುದನ್ನು ಒಪ್ಪಿಕೊಂಡಿದ್ದರು. ಬಳಿಕ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದಯೆಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಹೈದರಾಬಾದ್: ಸಿನಿಮೀಯ ಶೈಲಿಯಲ್ಲಿ ಕಳ್ಳನನ್ನು ಬೆನ್ನಟ್ಟಿ ಹಿಡಿದು, ಮಹಿಳೆಯೊಬ್ಬರ ಚಿನ್ನದ ಸರವನ್ನು ಕಾಪಾಡಿದ ಹೈದರಾಬಾದ್‌ನ ಆಟೋ ಚಾಲಕನೊಬ್ಬ ಈಗ ಇಂಟರ್ನೆಟ್‌ನಲ್ಲಿ ಹೀರೊ ಆಗಿ ಮಿಂಚುತ್ತಿದ್ದಾರೆ. ಈತನ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಹೈದರಾಬಾದ್ ಪೊಲೀಸರು ಸೂಕ್ತ ಬಹುಮಾನ ನೀಡಿ ಗೌರವಿಸಿದ್ದಾರೆ. ನಗರದ ಜನನಿಬಿಡ ರಸ್ತೆಯಲ್ಲಿ ಮಹಿಳೆಯೊಬ್ಬರು ನಡೆದು ಹೋಗುತ್ತಿದ್ದಾಗ, ಬೈಕ್‌ನಲ್ಲಿ ಬಂದ ದುಷ್ಕರ್ಮಿಯೊಬ್ಬ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ಈ ದೃಶ್ಯವನ್ನು ಗಮನಿಸಿದ ಆಟೋ ಚಾಲಕ ಮಹಮ್ಮದ್ ಶಫಿ, ಒಂದು ಕ್ಷಣವೂ ತಡಮಾಡದೆ ತನ್ನ ಆಟೋದಲ್ಲಿ ಕಳ್ಳನನ್ನು ಬೆನ್ನಟ್ಟಿದ್ದಾರೆ. ಸುಮಾರು ಅರ್ಧ ಕಿಲೋಮೀಟರ್ ದೂರದವರೆಗೆ ಕಳ್ಳನನ್ನು ಹಿಂಬಾಲಿಸಿದ ಶಫಿ, ಅಂತಿಮವಾಗಿ ಕಳ್ಳನ ಬೈಕ್‌ಗೆ ತನ್ನ ಆಟೋವನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆ. ಕಳ್ಳ ಕೆಳಗೆ ಬೀಳುತ್ತಿದ್ದಂತೆ ಸಾರ್ವಜನಿಕರ ಸಹಾಯದಿಂದ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಫಿ ಅವರ ಈ ಕೆಚ್ಚೆದೆಯ ನಿರ್ಧಾರದಿಂದಾಗಿ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಸರ ವಾಪಸ್ ಸಿಕ್ಕಿದೆ. ಆಟೋ ಚಾಲಕನ ಈ ಧೈರ್ಯದ ಕೆಲಸದ ವಿಡಿಯೋ…

Read More