Author: main-admin

ಉಡುಪಿ : ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜೊತೆ ಲಿಂಕ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಎನ್‌ಐಎ ಇಂದು ಶಂಕಿತ ವಿದ್ಯಾರ್ಥಿ ರಿಹಾನ್ ಶೇಖ್ ನ ಉಡುಪಿ ಜಿಲ್ಲೆಯ ಬ್ರಹ್ಮಾವರದ ವಾರಂಬಳ್ಳಿಯಲ್ಲಿರುವ ಫ್ಲಾಟ್ ಮಹಜರು ನಡೆಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ್ದ ಎನ್ ಐ ಎ ಅಧಿಕಾರಿಗಳ ತಂಡ ದಿನ ಪೂರ್ತಿ ಫ್ಲ್ಯಾಟ್ ನಲ್ಲಿ ಮಹಜರು ನಡೆಸಿ ಕೆಲ ಅಮೂಲ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದೇ ಸಂದರ್ಭ ರಿಹಾನ್ ಕುಟುಂಬದ ಸದಸ್ಯರನ್ನು ವಿಚಾರಣೆ ನಡೆಸಿ ಕೆಲ ವಿಷಯಗಳನ್ನು ಸಂಗ್ರಹಿಸಿದ್ದಾರೆ. ಬಳಿಕ ಸಂಜೆ ಹೊತ್ತಿಗೆ ಶಂಕಿತ ಯುವಕನನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

Read More

ಉಡುಪಿ: ಇಲ್ಲಿನ ಇಂದ್ರಾಳಿ ರೈಲ್ವೇ ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ರೈಲ್ವೇ ಹಳಿಗೆ ಬಳಸಾಗುವ ರಬ್ಬರ್ ಗೆ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಪರಿಣಾಮ ಇಂದ್ರಾಳಿ ಪರಿಸರದಲ್ಲಿ ದಟ್ಟ ಹೊಗೆ ಎದಿದ್ದು ಆತಂಕ ಮೂಡಿಸಿದೆ. ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಬೆಂಕಿಗಾಹುತಿಯಾಗಿದೆ. ಎರಡು ಅಗ್ನಿಶಾಮಕ ದಳದ ವಾಹನಗಳು, ಹತ್ತಕ್ಕೂ ಹೆಚ್ಚು ಮಂದಿ ಬೆಂಕಿ ನಂದಿಸಲು ಶ್ರಮಿಸಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Read More

ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ. ಇಂದು ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದೆ. ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದಂತ ಮಾಹಿತಿಯ ಆಧಾರ ಮೇಲೆ ಇಂದು ಪಿ ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ 7 ಎನ್‌ಐಎ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿದ್ದಾರೆ. ಇದೀಗ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹಲವು ಮಹತ್ವದ ಮಾಹಿತಿಯನ್ನು ಕಲೆಹಾಕುವ ಕೆಲಸದಲ್ಲಿ ಎನ್‌ಐಎ ಅಧಿಕಾರಿಗಳು ನಿರತರಾಗಿರೋದಾಗಿ ತಿಳಿದು ಬಂದಿದೆ. ಶಾರಿಕ್ ನೀಡಿದಂತ ಮಾಹಿತಿಯ ಆಧಾರದ ಮೇಲೆ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಂತ ಉಡುಪಿ ಮೂಲಕ ವಿದ್ಯಾರ್ಥಿ ರಿಹಾನ್ ಶೇಖ್ ಎಂಬಾತನನ್ನು ಎನ್‌ಐಎ…

Read More

ಚೆನ್ನೈ:ತೂಕ ಇಳಿಸಲು ಮಾತ್ರೆ ತೆಗೆದುಕೊಳ್ಳುತ್ತಿದ್ದ ಯುವಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಚೆನ್ನೈನಲ್ಲಿ ನಡೆದಿದೆ. ಶ್ರೀಪೆರಂಬದೂರು ಸಮೀಪದ ಸೂರ್ಯ (21) ಮೃತ ಯುವಕ. ಮೃತ ಸೂರ್ಯಗೆ ತೂಕ ಕಡಿಮೆ ಮಾಡಿಕೊಳ್ಳುವಂತೆ ಕಳೆದ ಕೆಲ ತಿಂಗಳ ಹಿಂದೆ ವೈದ್ಯರು ಸಲಹೆ ಮಾಡಿದ್ದರು. ಆದರೆ ಸ್ನೇಹಿತರ ಸಲಹೆ ಮೇಲೆ ಸೂರ್ಯ ಡಿ.22ರಿಂದ ತೂಕ ಕಡಿಮೆ ಮಾಡುವ ಮಾತ್ರೆಗಳನ್ನು ತೆಗೆದುಕೊಂಡಿದ್ದ. ವೈದ್ಯರ ಸಲಹೆ ಪಡೆಯದೆ ಮಾತ್ರೆ ತೆಗೆದುಕೊಂಡಿದ್ದರಿಂದ ಅವರು ತೂಕ ಕಳೆದುಕೊಂಡು ದುರ್ಬಲವಾಗತೊಡಗಿದ್ದರು. ಜನವರಿ 1ರಂದು ಪ್ರಜ್ಞಾಹೀನರಾಗಿ ಬಿದ್ದಿದ್ದ ಅವರನ್ನು ಕೂಡಲೇ ಮನೆಯವರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದರು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸಂತ್ರಸ್ತನ ತಂದೆ ಪಾಳ್ಯಂ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.ಮಾತ್ರೆಗಳು ಆತನ ಸಾವಿಗೆ ಕಾರಣವೇ ಎಂದು ತನಿಖೆ ನಡೆಸುತ್ತಿದ್ದಾರೆ.

Read More

ಉಡುಪಿ : ಉಡುಪಿ ಹಳೆ ಕೆ ಎಸ್‌ ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಕಾಪು ತೆಂಕ ಎರ್ಮಾಳ್ ನಿವಾಸಿ ಜಯಂತ್‌ ಸಾಲಿಯಾನ್‌ (46) ಹೆಬ್ರಿ ನಾಡ್ಪಾಲು ನಿವಾಸಿ ದಿನೇಶ್‌ ಎಸ್‌ (42) ಬಂಧಿತರು‌. ಉಡುಪಿ ಹಳೆ ಕೆ ಎಸ್‌ ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಲಾಡ್ಜ್ ಗೆ ದಾಳಿ ನಡೆಸಿದ್ದು, ಸಂತ್ರಸ್ಥೆಯನ್ನು ರಕ್ಷಿಸಿ ಆರೋಪಿಗಳಾದ ಜಯಂತ್ ಸಾಲಿಯಾನ್ ಮತ್ತು ದಿನೇಶ್ ಎಸ್ ಎನ್ನುವರನ್ನು ಬಂಧಿಸಿದ್ದು ಕೃತ್ಯಕ್ಕೆ ಸಂಬಂದಿಸಿದ 4 ಮೊಬೈಲ್ ಪೋನ್ , 5,600 ರೂ. ನಗದು, ಹಾಗೂ ಇತರೆ ಸಾಕ್ಷ್ಯ ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಶೇಖರ್, ಜಯಂತ್ ಮತ್ತು ದಿನೇಶ್ ಎನ್ನುವ ಆರೋಪಿಗಳು ಸಂತ್ರಸ್ತ ಮಹಿಳೆಯನ್ನು ಲಾಡ್ಜ್ ರೂಮಿನಲ್ಲಿರಿಸಿ ಹಣಕ್ಕಾಗಿ ವೇಶ್ಯವಾಟಿಕೆ ನಡೆಸಿ ಈ ಹಣದಿಂದ ಜೀವನ ನಡೆಸುತ್ತಿರುವುದು ತನಿಖೆಯಲ್ಲಿ ತಿಳಿದಿರುವುದಾಗಿ ಪೊಲೀಸ್ ಅಧಿಕಾರಿಗಳು…

Read More

ಬೆಳ್ತಂಗಡಿ: ಬಾಲಕಿ ಮೇಲೆ ನೆರೆಮನೆಯ ಯುವಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಆಕೆ ಗರ್ಭವತಿಯಾಗಿರುವುದನ್ನು ತಿಳಿದು, ಗರ್ಭಪಾತ ಮಾಡಿಸಿದ ಆರೋಪದಡಿ ಕಡಿರುದ್ಯಾವರ ಗ್ರಾಮದ ನಾಲ್ವರ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಜ.2ರಂದು ಪ್ರಕರಣ ದಾಖಲಿಸಲಾಗಿದೆ. ಕಡಿರುದ್ಯಾವರ ಗ್ರಾಮದ ಕೊಪ್ಪದಗುಂಡಿ ನಿವಾಸಿಗಳಾದ ಸುಧೀರ್‌, ಪಾರ್ವತಿ, ಮನೋಹರ್‌, ಮಾದು ಎಂಬವರು ಈ ಆರೋಪಕ್ಕೆ ಒಳಗಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯವರು ನೀಡಿದ ದೂರಿನ ಮೇಲೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ನೊಂದ ಬಾಲಕಿ ಭಾನುವಾರ ಹಾಗೂ ಶಾಲಾ ರಜಾ ದಿನಗಳಲ್ಲಿ ಸುಧೀರ್‌ ಎಂಬಾತನ ಮನೆಗೆ ಆಗಾಗ ಟಿ.ವಿ ನೋಡಲು ಹೋಗುತ್ತಿದ್ದು, ಕಳೆದ ಡಿ.26ರಂದು ಆತ ಆಕೆಯನ್ನು ತನ್ನ ಅಜ್ಜಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿ, ಈ ವಿಚಾರವನ್ನು ಮನೆಯವರಲ್ಲಿ ಹೇಳಿದರೆ ಪೊಲೀಸರಿಗೆ ದೂರು ಕೊಡುವುದಾಗಿ ಹೆದರಿಸಿದನೆಂದು ಆರೋಪಿಸಲಾಗಿದೆ. ಬಾಲಕಿ ಗರ್ಭವತಿ ಆಗುತ್ತಿದ್ದಂತೆ ಈ ವಿಚಾರವನ್ನು ತಿಳಿದ ಆರೋಪಿ ಮತ್ತು ಇತರರು ಆಕೆಯನ್ನು ಕಾರಿಯಲ್ಲಿ ಕರೆದುಕೊಂಡು ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿರುವುದಾಗಿ ದೂರಿನಲ್ಲಿ ಅರೋಪಿಸಲಾಗಿದೆ.ಬಾಲಕಿಯ ಮೇಲೆ ನಡೆದ ಈ ಕೃತ್ಯದ ಬಗ್ಗೆ…

Read More

“ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ” ಹೀಗೆಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗೇಲ್ ಕಂಪೆನಿಯ ಅಧಿಕಾರಿಗಳಿಗೆ ಬಹಿರಂಗ ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು. ದೇರೆಬೈಲ್ ಕೊಂಚಾಡಿ ಬಳಿ ರಸ್ತೆ ಕಾಮಗಾರಿಯ ಗುದ್ದಲಿಪೂಜೆಗೆ ಬಂದಿದ್ದ ಶಾಸಕರಲ್ಲಿ ಸ್ಥಳೀಯರು ಗೇಲ್ ಕಂಪೆನಿ ಅಧಿಕಾರಿಗಳು ಎಲ್ಲೆಂದರಲ್ಲಿ ರಸ್ತೆಯನ್ನು ಅಗೆಯುತ್ತಿದ್ದು ಇದರಿಂದ ನೀರಿನ ಪೈಪ್ ಒಡೆದು ಸಮಸ್ಯೆ ಸೃಷ್ಟಿಯಾಗಿದೆ ಎನ್ನುವುದನ್ನು ಗಮನಕ್ಕೆ ತಂದರು. ಈ ವೇಳೆ ಸ್ಥಳದಲ್ಲೇ ಇದ್ದ ಕಂಪೆನಿ ಅಧಿಕಾರಿಗಳನ್ನು ಕರೆದ ಶಾಸಕರು, “ಬೇಕಾಬಿಟ್ಟಿ ಕಾಮಗಾರಿ ಮಾಡಬೇಡಿ, ಏನೇ ಮಾಡೋದಿದ್ರೂ ಸ್ಥಳೀಯ ಕಾರ್ಪೋರೇಟರ್ ಹಾಗೂ ಸಾರ್ವಜನಿಕರ ಗಮನಕ್ಕೆ ತಂದು ಬಳಿಕ ಮಾಡಿ. ನಿಮ್ಮಿಂದಾಗಿ ನಗರ ಪಾಲಿಕೆಯ ಎಲ್ಲಾ ಕಡೆಗಳಲ್ಲಿ ಸಮಸ್ಯೆಯಾಗುತ್ತಿದೆ. 10-15 ದಿನಗಳು ನೀರಿಲ್ಲದಿದ್ದರೆ ಜನರು ಏನು ಮಾಡಬೇಕು? ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ…

Read More

ನವದೆಹಲಿ : ಅಮೆರಿಕ-ದೆಹಲಿ ಏರ್‌ ಇಂಡಿಯಾ ವಿಮಾನದ ಬಿಸಿನೆಸ್‌ ಕ್ಲಾಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಸಂಬಂಧ ಏರ್ ಇಂಡಿಯಾ ಕ್ರಮ ಕೈಗೊಂಡಿದೆ. ಆಂತರಿಕ ಸಮಿತಿಯ ನಿರ್ಧಾರದವರೆಗೆ ತಪ್ಪಿತಸ್ಥ ಪ್ರಯಾಣಿಕನಿಗೆ ಏರ್‌ ಇಂಡಿಯಾದಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದರೆ, ನಿಯಂತ್ರಣ ಮಾರ್ಗಸೂಚಿಗಳ ಪ್ರಕಾರ ಅಶಿಸ್ತಿನ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ನವೆಂಬರ್ 26 ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ 70 ವರ್ಷದ ಮಹಿಳೆ ಮೇಲೆ ಕುಡಿದಿದ್ದ ಪ್ರಯಾಣಿಕನೋರ್ವ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಘಟನೆ ಸಂಬಂಧ ಮಹಿಳೆ ಟಾಟಾ ಗ್ರೂಪ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರಿಗೆ ಪತ್ರ ಬರೆದ ನಂತರ , ವ್ಯಕ್ತಿಯ ವಿರುದ್ಧ ವಿಮಾನಯಾನ ಸಂಸ್ಥೆ ಕ್ರಮ ಕೈಗೊಂಡಿದೆ. ಇತ್ತ ಪೊಲೀಸ್ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

Read More

ಉಳ್ಳಾಲ: ಸಮಾರಂಭವೊಂದರಿಂದ ವಾಪಸ್ಸಾಗುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿ ವೈಭವ್ ಬಾರ್ ಎದುರುಗಡೆ ನಿನ್ನೆ ರಾತ್ರಿ ವೇಳೆ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದೊಳಗಿದ್ದ ನಾಲ್ವರು ಅಲ್ಪಗಾಯಗಳಿಂದ ಪಾರಾಗಿದ್ದು, ಸ್ಥಳೀಯರು ಹಾಗೂ ಕೊಣಾಜೆ ಪೊಲೀಸರು ತಕ್ಷಣಕ್ಕೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಜೊತೆಗೆ ಕರ್ತವ್ಯ ಮೆರೆದರು. ಇನೋಳಿ ಯಲ್ಲಿ ನಡೆಯುತ್ತಿದ್ದ ಮದುವೆಯ ರೋಸ್ ಸಮಾರಂಭಕ್ಕೆ ರಿಕ್ಷಾ ಚಾಲಕ ಸಹಿತ ಮೂವರ ಕುಟುಂಬ ರೋಸ್ ಸಮಾರಂಭಕ್ಕೆ ಆಗಮಿಸಿತ್ತು. ತಡರಾತ್ರಿ ಅಡ್ಯಾರ್ ಕಡೆಗೆ ರಿಕ್ಷಾದಲ್ಲಿ ಕುಟುಂಬ ವಾಪಸ್ಸಾಗುವ ವೇಳೆ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಅಸೈಗೋಳಿ ಜಂಕ್ಷನ್ನಿನಲ್ಲಿ ರಸ್ತೆಗೆ ಉರುಳಿದೆ. ರಿಕ್ಷಾದೊಳಗಿದ್ದ ಒಂದೇ ಕುಟುಂಬದ ಓರ್ವ ವೃದ್ದ ಮಹಿಳೆ, ಇನ್ನೋರ್ವ ಮಹಿಳೆ ಹಾಗೂ ಓರ್ವ ಪುರುಷ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡರು. ತಕ್ಷಣ ಸ್ಥಳದಲ್ಲೇ ಇದ್ದ ಸಾರ್ವಜನಿಕರು ಹಾಗೂ ಅಲ್ಲೇ ಇದ್ದ ಕೊಣಾಜೆ ಪೊಲೀಸರು ಕುಟುಂಬವನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Read More

ಕಾರವಾರ: ಗೋವಾ ಪೊಲೀಸರ ಲಾಠಿ ಏಟಿಗೆ ಕಾರವಾರದ ಯುವಕನೊಬ್ಬನ ಕೈಬೆರಳುಗಳು ಮುರಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಚಿತ್ತಾಕುಲದ ನಿವಾಸಿ ಕಿಶನ್ ಶೆಟ್ಟಿ(22) ಎನ್ನುವ ಯುವಕ ಗೋವಾದಲ್ಲಿ ಕೆಲಸ ಮಾಡುತ್ತಿದ್ದು, ತಮ್ಮ ಗೆಳೆಯರ ಜತೆಯಲ್ಲಿ ಹೊಸ ವರ್ಷಾಚರಣೆಯನ್ನು ಕಾಣಕೋಣ ಬೀಚ್‌ನಲ್ಲಿ ಆಚರಿಸಿದ್ದಾರೆ. ಬೀಚಿನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಪೊಲೀಸ್‌ ಸಿಬ್ಬಂದಿಯೊಬ್ಬರು ಧಾವಿಸಿ ಬಂದು ಲಾಠಿ ಬೀಸಿದ್ದು, ಈ ಏಟಿಗೆ ಇವರ ಬೆರಳು ಮೂಳೆಗಳು ಮುರಿದು ಹೋಗಿದೆ. ಇವರಿಗೆ ಸೋಮವಾರ ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಈ ಅಮಾನವೀಯ ಹಲ್ಲೆಯನ್ನು ಖಂಡಿಸಿರುವ ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರಾಘು ನಾಯ್ಕ, ಗೋವಾದ ಸಿಎಂ ಹಾಗೂ ಮಡಗಾಂವ್ ಎಸ್‌ಪಿ ಅವರಿಗೆ ಮನವಿ ನೀಡುವುದಾಗಿಯೂ, ಅಗತ್ಯ ಬಿದ್ದರೆ ಬಗ್ಗೆ ಮಾನವ ಹಕ್ಕು ಆಯೋಗಕ್ಕೂ ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ.

Read More