Author: main-admin

ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ,ಪಿಎಸ್ ಐ ಮತ್ತು ಸಿಬ್ಬಂದಿ ಶವ ಪತ್ತೆಹಚ್ಚುವ ಕಾರ್ಯಾಚರಣೆಗೆ ಮಂಗಳವಾರ ಆಗಮಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ – ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಘಾಟಿಯ ಪ್ರದೇಶಗಳ ಕಣಿವೆಗಳಲ್ಲಿ ಸ್ಥಳೀಯ ಪೊಲೀಸರ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಘಟನೆಯ ಹಿನ್ನೆಲೆ : ಬೆಂಗಳೂರಿನ ಕೋಣನಕುಂಟೆ ನಿವಾಸಿ ಶರತ್ ಎಂಬಾತ ಸಾಲ ಪಡೆದು ಹಿಂತಿರುಗಿಸದೆ ಓಡಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಗ್ಯಾಂಗ್ ಶರತ್ ನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದರು. ಕೊಲೆಯಾದ ಎಚ್. ಶರತ್ ಚಿಕ್ಕಬಳ್ಳಾಪುರ ಹಾಗೂ ಯಲಹಂಕ ನಿವಾಸಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಸಬ್ಸಿಡಿ ದರದಲ್ಲಿ ವಾಹನ ಕೊಡಿಸುವುದಾಗಿ ನಂಬಿಸಿದ್ದ. ಆದರೆ ಕಾರು ಕೊಡಿಸದೆ ಅಲ್ಲಿನ‌ ಜನರಿಗೆ…

Read More

ನವದೆಹಲಿ : ದೆಹಲಿ ಹಿಟ್ ಅಂಡ್ ರನ್ ನಲ್ಲಿ ಮೃತಪಟ್ಟ ಯುವತಿಯ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಘಟನೆಯನ್ನು ನಾಚಿಕೆಗೇಡು ಎಂದು ಕರೆದಿರುವ ಕೇಜ್ರಿವಾಲ್, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದ ವಿರುದ್ಧ ಹೋರಾಡಲು ಸರ್ಕಾರವು ಉತ್ತಮ ವಕೀಲರನ್ನು ನೇಮಿಸುತ್ತದೆ ಎಂದು ಹೇಳಿದ್ದಾರೆ. ದೆಹಲಿಯ ಮಗಳಿಗೆ ನ್ಯಾಯ ಸಿಗಲಿದೆ. ಪ್ರಕರಣದ ಹೋರಾಟಕ್ಕೆ ಅತ್ಯುತ್ತಮ ವಕೀಲರನ್ನು ನೇಮಿಸುತ್ತದೆ. ಸಂತ್ರಸ್ತೆಯ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆಕೆಯ ಚಿಕಿತ್ಸೆಯ ವೆಚ್ಚವನ್ನು ದೆಹಲಿ ಸರ್ಕಾರ ಭರಿಸಲಿದೆ. ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು. ಸಂತ್ರಸ್ತೆಯ ಕುಟುಂಬದ ಜೊತೆಗಿದ್ದೇನೆ, ಭವಿಷ್ಯದಲ್ಲಿ ಉದ್ಭವಿಸುವ ಯಾವುದೇ ಅಗತ್ಯವನ್ನು ನಾವು ಪೂರೈಸುತ್ತೇವೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ದೆಹಲಿಯಲ್ಲಿ ಕಾರು ಎಳೆದೊಯ್ದು ಮೃತಪಟ್ಟ ಯುವತಿ ಕುಟುಂಬಕ್ಕೆ ಏಕೈಕ ಜೀವನಾಧಾರವಾಗಿದ್ದಳು. ಆಕೆಯ ತಾಯಿ ಮೂತ್ರಪಿಂಡಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದಾರೆ ಮತ್ತು ಡಯಾಲಿಸಿಸ್ ಅಗತ್ಯವಿದೆ ಎನ್ನಲಾಗುತ್ತಿದೆ. ಯುವತಿ ಸಾವಿಗೆ ಸಂಬಂಧಿಸಿದಂತೆ ದೆಹಲಿ…

Read More

ಮಂಗಳೂರು: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಈ ಕುರಿತು ತನ್ನ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ ನಿವಾಸಿ ನಿಝಾಮುದ್ದೀನ್ ಯಾನೆ ನಿಝಾಮ್ (32) ಹಾಗು ಜಪ್ಪುವಿನ‌ ನಿವಾಸಿ ರಝೀಮ್ ಯಾನೆ‌ ರಾಫಿ (31) ಎಂಬವರನ್ನು ಬಂಧಿಸಲಾಗಿದೆ. ಇವರಿಬ್ಬರು ಸೋಮವಾರ ನಗರದ ನಂತೂರು ಜಂಕ್ಷನ್ ಬಳಿ ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದಾಗ ವಶಕ್ಕೆ ಪಡೆದು ವಿಚಾರಿಸಿದಾಗ ಖೋಟಾ ನೋಟುಗಳನ್ನು ಚಲಾವಣೆಯ ಜಾಲ ಬಯಲಿಗೆ ಬಂದಿದೆ. ಆರೋಪಿಗಳಿಂದ 500 ರೂಪಾಯಿ ಮುಖಬೆಲೆಯ 4.50 ಲಕ್ಷ ರೂಪಾಯಿ ಖೋಟಾ ನೋಟುಗಳನ್ನು ವಶಪಡಿಸಲಾಗಿದೆ. ಬೆಂಗಳೂರಿನ ಡ್ಯಾನಿಯಲ್ ಎಂಬಾತನಿಂದ ಖೋಟಾ ನೋಟುಗಳನ್ನು ಪಡೆದಿರುವ ಆರೋಪಿಗಳು ನಗರದಲ್ಲಿ ಸ್ಕೂಟರ್‌ವೊಂದನ್ನು ಕದ್ದು ಅದರಲ್ಲಿ ಹಣ ಚಲಾವಣೆಗೆ ಯತ್ನಿಸುತ್ತಿದ್ದರು ಎಂದು ತಿಳಿಸಿದರು.

Read More

ಕಡಬ: ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದಲ್ಲಿ ನಡೆದಿದೆ. ಕೊಣಾಲು ಗ್ರಾಮದ ದಿವಗಂತ ವೆಂಕಪ್ಪಗೌಡ ಅವರ ಪತ್ನಿ ಚೆನ್ನಮ್ಮ (70) ಎಂಬವರು ಬಾವಿಗೆ ಬಿದ್ದು ಮೃತಪಟ್ಟ ಮಹಿಳೆಯಾಗಿದ್ದಾರೆ. ಚೆನ್ನಮ್ಮ ಅವರು ತೋಟಕ್ಕೆ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಿ,ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಮೃತರು ಇಬ್ಬರು ಗಂಡು ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಯಗೊಂಡಿರುವ ಜನತೆ ಬೂಸ್ಟರ್ ಲಸಿಕೆ ಪಡೆಯಲು ಮುಂದಾಗಿದ್ದಾರೆ. ಹೇಗೂ ಕೊರೊನಾ ಕಡಿಮೆಯಾಗಿದೆ ಎಂದು ಬೂಸ್ಟರ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕಿದ್ದರು. ಆದರೆ ಮತ್ತೆ ಇದೀಗ ಜನ ಲಸಿಕೆ ಪಡೆಯುವತ್ತ ಒಲವು ತೋರಿದರೂ ಲಸಿಕೆ ಕೊರತೆ ಎದುರಾಗಿದೆ. ದ.ಕ. ಜಿಲ್ಲೆಯ ಶೇ. 80ರಷ್ಟು ಅರ್ಹರು ಲಸಿಕೆ ಪಡೆದುಕೊಳ್ಳಲು ಇನ್ನೂ ಬಾಕಿ ಇದ್ದಾರೆ. ಕೋವಿಶೀಲ್ಡ್‌ ಲಸಿಕೆ ಪಡೆದ ಮಂದಿ, ಎರಡನೇ ಡೋಸ್‌ ಮತ್ತು ಬೂಸ್ಟರ್‌ ಡೋಸ್‌ ಲಸಿಕೆಯನ್ನು ಕೋವಿಶೀಲ್ಡ್‌ ಮಾತ್ರವೇ ಪಡೆಯಬೇಕಾಗುತ್ತದೆ. ಆದರೆ ಲಸಿಕೆ ಪಡೆಯುವ ಅವಧಿ ಕಳೆದರೂ ಲಸಿಕೆ ಸಿಗುತ್ತಿಲ್ಲ ಎನ್ನುತ್ತಾರೆ ಸಾರ್ವಜನಿಕರು.ಆರೋಗ್ಯ ಇಲಾಖೆ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಉಡುಪಿ ಹಾಗೂ ದ.ಕ ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯಾದ್ಯಾಂತ ಲಸಿಕೆ ಕೊರತೆ ಎದುರಾಗಿದೆ. ಶೀಘ್ರವೇ ಹೊಸ ಲಸಿಕೆ ಬರಲಿದೆ. ಲಸಿಕೆ ಬಂದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.ಇನ್ನೊಂದೆಡೆ ವಿದೇಶದಲ್ಲಿ ಕೊವೀಡ್ ಏರಿಕೆಯಾಗುತ್ತಿರುವುದರಿಂದ ಮತ್ತೆ ಲಸಿಕೆ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

Read More

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಮಂಜ ಕಜೆ ನಿವಾಸಿ ಸುರೇಶ್ ಅವರ ಪತ್ನಿ, ಸುಂದರಿ(25) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ.ಮದ್ಯ ಸೇವನೆಯ ಚಟ ಹೊಂದಿದ್ದರು ಎನ್ನಲಾಗಿದ್ದು, ವಿಷ ಸೇವಿಸಿದ್ದು ಡಿ 27ರಂದು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

Read More

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ. ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿರುವುದು ವಿಶೇಷ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಕಂಬಳ ಕೋಣ ಓಡಿಸುವುದರಲ್ಲೇ ಪರಿಣಿತಿ ಹೊಂದಿರುವ ಶ್ರೀನಿವಾಸ್ ಗೌಡ ಕೂಡ ಈ ಸಿನಿಮಾದಲ್ಲಿ ಪಾತ್ರ ಮಾಡಿದ್ದಾರೆ. ಇವರೊಂದಿಗೆ ಕಲಾವಿದ ಸ್ವರಾಜ್ ಶೆಟ್ಟಿ ಕೂಡ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳುತ್ತಿರುವುದು ಮತ್ತೊಂದು ವಿಶೇಷ. ಪ್ರಕಾಶ್, ರವಿಶಂಕರ್, ರಾಧಿಕಾ ಚೇತನ್, ನವೀನ್ ಪಡೀಲ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿ ಇದ್ದಾರೆ.  ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ವೀರ ಕಂಬಳ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ. ಈ ಭಾಗದ…

Read More

ಮಂಗಳೂರು: ಪೊಲೀಸರು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ತಂಡವೊಂದು ಕ್ರಿಕೆಟ್‌ನಲ್ಲಿ ಜಯಗಳಿಸಿ ವಾಪಸ್ಸು ತೆರಳುವ ಸಂದರ್ಭದಲ್ಲಿ ಜಯಘೋಷಗಳನ್ನು ಮೊಳಗಿಸಿ ಹೋಗುತ್ತಿದ್ದರು. ಈ ಸಂದರ್ಭ ಕೆಲವು ಪೊಲೀಸರು ಯುವಕರನ್ನು ತಡೆ ಹಿಡಿದು ವಿಚಾರಣೆ ನಡೆಸಿದ್ದಾರೆ. ಪೊಲೀಸ್‌ ಸಿಬ್ಬಂದಿಯೊಬ್ಬ ಪುಟ್ಟ ಬಾಲಕನ ಮೇಲೆ ಬಾಸುಂಡೆ ಬರುವ ಹಾಗೆ ಎಡಕೈಗೆ ಲಾಠಿಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಕೆಳಕ್ಕೆ ಬಿದ್ದ ಬಾಲಕನನ್ನು ಸ್ಥಳೀಯರೇ ಹೊತ್ತುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಸ್ಥಳೀಯರು ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರಲ್ಲದೇ, ಬಳಿಕ ಪಣಂಬೂರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದಾರೆ. ಈ ಘಟನೆ ಬಗ್ಗೆ ಸ್ಥಳೀಯರು ಹೇಳುವಂತೆ ‘ಈ ಬಾಲಕನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು ದೌರ್ಜನ್ಯ ಅಂತಾನೇ ಹೇಳಬಹುದು. ಆ ಬಾಲಕನಿಗೆ ಮೊದಲೇ…

Read More

ನೆಲ್ಯಾಡಿ: ಕಾಡಾನೆ ದಾಳಿಯಿಂದ ತಂದೆ ಮೃತಪಟ್ಟು ಮಗ ತೀವ್ರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಅರಣ್ಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಬಳಿ ಇರುವ ಶಿರಾಡಿಯ ಕೊಟ್ಟಿಕ್ಕಲ್ ಎಂಬಲ್ಲಿ ನಡೆದಿದೆ. ತಿಮ್ಮಪ್ಪ (45) ಮೃತರು. ಇವರ ಮಗ ಶರಣ್ (18) ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಿಮ್ಮಪ್ಪ ಅವರು ಶಿರಾಡಿ ಜನತಾ ಕಾಲೋನಿಯ ನಿವಾಸಿ ಎಂದು ತಿಳಿದುಬಂದಿದೆ. ಕಾರ್ಯದ ನಿಮಿತ್ತ ಕೊಟ್ಟಿಕ್ಕಲ್ ಸಮೀಪ ಮಗನ ಜೊತೆ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ರಸ್ತೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಫೋಟಕ ಬಳಸಿ ಬಂಡೆ ಹೊಡೆಯುವ ಶಬ್ದಕ್ಕೆ ಬೆದರಿದ ಒಂಟಿ ಸಲಗ ಇವರ ಮೇಲೆ ದಾಳಿ ಮಾಡಿರಬಹುದು ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಕಾಸರಗೋಡು: ಖಾಸಗಿ ಬಸ್ ಢಿಕ್ಕಿಯಾಗಿ ಮಗು ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚೆರ್ಕಳದಲ್ಲಿ ನಿನ್ನೆ ಸಂಜೆ ನಡೆದಿದೆ. ಸೀತಾಂಗೋಳಿಯ ಆಶಿಕ್ – ಝುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಮೃತಪಟ್ಟ ಬಾಲಕ. ಜೊತೆಗಿದ್ದ ತಾಯಿ ಸುಬೈದಾ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಚೆರ್ಕಳ ಬಸ್ಸು ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

Read More