ಕಡಬ: ಅಸ್ವಸ್ಥಗೊಂಡು ತಿರುಗಾಡುತ್ತಿದ್ದ ಕಾಡಾನೆಯೊಂದು ಕಡಬ ಸಮೀಪದ ಕೊಂಬಾರು ಸಮೀಪದ ಬಗ್ಪುಣಿ ಎಂಬಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕಾಡಾನೆಯುವ ಸಂಪೂರ್ಣ ನಿತ್ರಾಣಗೊಂಡ ಸ್ಥಿತಿಯಲ್ಲಿ ಕೊಂಬಾರು ನಿನ್ನೆ ಚೇರು ಎಂಬಲ್ಲಿ ಬಳಿ ಹಳ್ಳವೊಂದರಲ್ಲಿ ನಿತ್ರಾಣ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಎರ್ಮಾಯಿಲ್ ಎಂಬಲ್ಲಿ ರಸ್ತೆಯಲ್ಲೇ ನಡೆದಾಡಲು ಕಷ್ಟಪಡುವ ರೀತಿಯಲ್ಲಿ ಈ ಕಾಡಾನೆ ಸ್ಥಳೀಯರಿಗೆ ಕಾಣಸಿತ್ತು. ಅರಣ್ಯ ಅಧಿಕಾರಿಗಳ ತಂಡ ಮಾಹಿತಿ ಮಾಹಿತಿ ಲಭ್ಯವಾದ ತಕ್ಷಣವೇ ನುರಿತ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲನೆಗೂ ಮುಂದಾಗಿದ್ದರು.ವೈದ್ಯಕೀಯ ತಜ್ಞರು ಹೇಳುವ ಪ್ರಕಾರ ವಯೋ ಸಹಜ ತೊಂದರೆಗಳಿಂದ ಬಳಲುತ್ತಿರುವುದಲ್ಲದೆ ಆನೆಯ ಹಲ್ಲುಗಳು ಉದುರಿರುವ ಶಂಕೆ ವ್ಯಕ್ತಪಡಿಸಿದ್ದರು.
Author: main-admin
ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್, ವಿಮೆ, ಹಾಗೂ ಮೀನುಗಾರ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಈ ಪ್ರಮುಖ ಮೂರು ಯೋಜನೆಯ ಭರವಸೆಯನ್ನು ರಾಹುಲ್ ಗಾಂಧಿ ಘೋಷಿಸಿದ್ದಾರೆ. ಕಾಪುವಿನ ಉಚ್ಚಿಲ ಶಾಲಿನಿ ಡಾ.ಜಿ. ಶಂಕರ್ ಸಭಾಂಗಣದಲ್ಲಿ ಆಯೋಜಿಸಿದ ಮೀನುಗಾರರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೀನುಗಾರರಿಗೆ 10 ಲಕ್ಷ ವಿಮೆ, ಮೀನುಗಾರ ಮಹಿಳೆಯರಿಗೆ ಒಂದು ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಹಾಗೂ ಪ್ರತಿದಿನ 500 ಲೀಟರ್‌ಗೆ ಮೀನುಗಾರರಿಗೆ 25 ರೂ. ಸಬ್ಸಿಡಿ ನೀಡುವುದಾಗಿ ಭರವಸೆ ನೀಡಿದ್ದಾರೆ.ಸಹಸ್ರ ಸಂಖ್ಯೆಯಲ್ಲಿ ಮೀನುಗಾರ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶಕ್ಕೆ ಆಗಮಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಮಾಧ್ಯಮ ಜೊತೆ ಮಾತನಾಡಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ವಾಗ್ದಾಳಿ ನಡೆಡಿಸಿದ್ದಾರೆ.ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ, ದೇವಸ್ಥಾನದ ದುಡ್ಡು ಹೊಡೆದ, ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ ಅರುಣ್ ಪುತ್ತಿಲ, ಗೋ ಸಾಗಾಟ ಮಾಡುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದಾಗ ಅರುಣ್ ಕೂಡಾ ಅದರಲ್ಲಿ ಒಬ್ಬನಾಗಿದ್ದ ಅಷ್ಟೇ. ಅದು ಬಿಟ್ಟು ಬೇರೆ ಹಿಂದುತ್ವದ ಕಾರ್ಯ ಅವನಿಂದ ನಡೆಯಲಿಲ್ಲ, ಕೇಂದ್ರದ ಗೃಹಸಚಿವ ಅಮಿತ್ ಶಾ ಮಾತನಾಡುವುದಾಗಿ ಹೇಳಿದಾಗ ಧಿಕ್ಕರಿಸಿದ ವ್ಯಕ್ತಿ ಅರುಣ್ ಪುತ್ತಿಲ, ಕಾರ್ಯಕರ್ತರು ಕೆಲವರು ಈ ವಿಚಾರ ತಿಳಿಯದೆ ಅವನ ಹಿಂದೆ ಓಡಾಡುತ್ತಿದ್ದಾರೆಅವರಿಗೆ ಸದ್ಯದಲ್ಲೇ ಈ ವಿಚಾರ ತಿಳಿಯಲಿದೆ ಎಂದು ಪ್ರಭಾಕರ್ ಭಟ್ ಹೇಳಿದ್ದಾರೆ.
ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಎಂಬವರನ್ನು ಜೀವ ಬೆದರಿಕೆಯೊಡ್ಡಿ ನಾಮಪತ್ರ ವಾಪಸ್ ಪಡೆದಿರುವ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಿಬ್ಬರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ ಪುರಸಭೆಯ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಾದ ಮುಸ್ತಾಫ ಯಾನೆ ಖಬುರು ಮುಸ್ತಾಫ, ಉಸ್ಮಾನ್ ಕಲ್ಲಾಪು , ರಿಯಾಝ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಎ.21 ರಂದು ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಎ ಮತ್ತು ಬಿ ಫಾರಂ ಪಡೆದು ಉಳ್ಳಾಲ ನಗರಸಭೆ ಚುನಾವಣಾ ಕಚೇರಿಯಲ್ಲಿ ಅಲ್ತಾಫ್ ಕುಂಪಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆಯಲ್ಲಿ ಸಿಂಧುತ್ವಗೊಂಡ ಘೋಷಣೆ ನಂತರ ಅದೇ ದಿನ ಸಂಜೆ 3 ಗಂಟೆಗೆ ಮೇಲಂಗಡಿ ದರ್ಗಾ ಹಿಂಭಾಗದಲ್ಲಿ ಮುಸ್ತಾಫ, ಉಸ್ಮಾನ್, ರಿಯಾಝ್ ಹಾಗೂ ಇತರರು ಸೇರಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಅವರನ್ನು ಬೆದರಿಕೆ ಹಾಕಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ, ಬೆದರಿಕೆ ಒಡ್ಡಿ,…
ಪುತ್ತೂರು: ನವ ವಿವಾಹಿತೆಯೋರ್ವರು ಎರಡು ತಿಂಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈಕೆ ತವರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ ಏ.25ರಂದು ನಡೆದಿದೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಪೂಜಾರಿಯವರ ಪುತ್ರಿ ಹರ್ಷಿತಾ(28ವ.) ಮೃತಪಟ್ಟವರು. ಹರ್ಷಿತಾ ಮತ್ತು ಬಲ್ನಾಡು ದಿ.ನಾರಾಯಣ ಪೂಜಾರಿಯವರ ಮಗ, ಕೆಮ್ಮಿಂಜೆ ದೇವಳದ ಮ್ಯಾನೇಜರ್ ಆಗಿರುವ ಪ್ರಶಾಂತ್ ಅವರ ವಿವಾಹವು ಇದೇ ಫೆ.10 ರಂದು ನಡೆದಿತ್ತು. ಮದುವೆಯಾದ ಬಳಿಕ ಗಂಡನ ಮನೆಯಲ್ಲಿ ವಾಸ್ತವ್ಯವಿದ್ದ ಹರ್ಷಿತಾರವರು ಏ.23ರಂದು ತನ್ನ ತಾಯಿ ಮನೆಯ ನೆರೆಮನೆಯಲ್ಲಿ ನಡೆದ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹೋಗಲೆಂದು ಪತಿ ಮನೆಯಿಂದ ತಾಯಿ ಮನೆಗೆ ಹೋಗಿದ್ದರು. ಅಲ್ಲಿ ಏ.24 ರಂದು ರಾತ್ರಿ ಬಚ್ಚಲು ಮನೆಗೆ ಹೋಗಿ ಬಂದ ಆಕೆ, ತಾನು ಕ್ರಿಮಿನಾಶಕ ವಿಷ ಪದಾರ್ಥವನ್ನು ಸೇವಿಸಿರುವುದಾಗಿ ತಾಯಿಯೊಂದಿಗೆ ಹೇಳಿ ಅಸ್ವಸ್ಥಗೊಂಡಿದ್ದರು. ಬಳಿಕ ತಾಯಿ, ಮಗ ಮತ್ತು ಸಂಬಂಧಿ ಅಣ್ಣ ಚೆನ್ನಪ್ಪ ಅಂಚನ್‌ರವರು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ…
ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆ ಇದೇ ಏ.29 ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಮಂಗಳೂರು ನಗರದಲ್ಲಿ ರೋಡ್ ಷೋ ನಡೆಸಲಿದ್ದಾರೆ ಏ.29 ರಂದು ಸಂಜೆ 4 ಗಂಟೆಗೆ ಪುರಭವನದ ಕ್ಲಾಕ್ ಟವರ್‌ನಿಂದ ಪ್ರಾರಂಭವಾಗಿ ಹಂಪನಕಟ್ಟೆ ವೃತ್ತದ ಮೂಲಕ ಕೆ.ಎಸ್ ರಾವ್ ರಸ್ತೆಯಲ್ಲಿ ಸಾಗಿ ಮಂಜೇಶ್ವರ ಗೋವಿಂದ ಪೈ ವೃತ್ತದ ವರೆಗೆ ಬೃಹತ್ ರೋಡ್ ಷೋ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಉಳ್ಳಾಲ: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಉಳ್ಳಾಲದ ಧರ್ಮನಗರ ನಿವಾಸಿ ಯುವಕ ನಾಪತ್ತೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ. ಜಿನ್ನಪ್ಪ ಪೂಜಾರಿ ಎಂಬವರ ಪುತ್ರ ವಸಂತ್ ಅಮೀನ್ (49) ನಾಪತ್ತೆಯಾದವರು.ಕಾರು ಡೀಲರ್ ಆಗಿರುವ ಅಮೀನ್ ಅವರ ಚಪ್ಪಲಿ, ಮೊಬೈಲ್ ಮತ್ತು ಕಾರು ಸಮುದ್ರದ ಬಳಿ ಪತ್ತೆಯಾಗಿದೆ.ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳುಗಳ ಹಿಂದೆ ಮನೆಯನ್ನು ಕಟ್ಟಿದ್ದರು. ಇಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ. ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪಸ್೯ ,ಚಪ್ಪಲಿ ಹಾಗೂ ಮೊಬೈಲ್ ಅನ್ನು ಪತ್ತೆಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ನಡೆಯುತ್ತಿದೆ.
ಫರಂಗಿಪೇಟೆ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ತಪಾಸಣೆ ನಡೆಯುತ್ತಿದ್ದ ಸಂದರ್ಭ ವಾಹನ ತಪಾಸಣೆ ವೇಳೆ ದಾಖಲೆ ರಹಿತ ನಗದು ಸಾಗಾಟ ಪ್ರಕರಣ ಪತ್ತೆಯಾಗಿದೆ. ಒಟ್ಟು 3 ಲಕ್ಷ ರೂ ವಾಹನದಲ್ಲಿದ್ದು, ಈ ಕುರಿತು ವಾಹನದವರಲ್ಲಿ ದಾಖಲೆ ಕೇಳಿದಾಗ ಸಮರ್ಪಕ ಉತ್ತರ ದೊರೆಯಲಿಲ್ಲ. ಈ ಹಿನ್ನೆಲೆಯಲ್ಲಿ ತಪಾಸಣಾಧಿಕಾರಿಗಳು ನಗದನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದ ವೇಳೆ ನಗದು ಕಂಡುಬಂದಿದ್ದು, ಕೂಡಲೇ ಅದನ್ನು ಚುನಾವಣಾ ಸಂಬಂಧಿ ಪರಿಶೀಲನಾ ಸಮಿತಿಗೆ ಹಸ್ತಾಂತರಿಸಿದ್ದು, ತನಿಖೆ ನಡೆಯುತ್ತಿದೆ
ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯುವ ಹಿನ್ನೆಲೆ, ಮೇ 8 ರಂದು ಸಂಜೆ 6 ಗಂಟೆಯಿಂದ ಮೇ 10 ರಂದು ಮತದಾನ ಮುಕ್ತಾಯವಾಗುವವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳ ಸುತ್ತಲೂ 200 ಮೀ. ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ, ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ಈ ಕೆಳಗಿನಂತೆ ಷರತ್ತುಗಳನ್ನು ವಿಧಿಸಿ, ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ. ಜಿಲ್ಲಾ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಮತದಾನದ ದಿನದ ಹಿಂದಿನ 48 ಗಂಟೆಗಳ ಅವಧಿಯಲ್ಲಿ ಮನೆ-ಮನೆ ಪ್ರಚಾರಕ್ಕೆಸಂಬಂಧಿಸಿದಂತೆ ಮನೆ-ಮನೆಗೆ ಭೇಟಿ ನೀಡುವುದನ್ನು ನಿರ್ಬಂಧಿಸಿರುವುದಿಲ್ಲ. ಶಸ್ತ್ರ, ಬಡಿಗೆ ಬರ್ಚಿ, ಖಡ್ಗ, ಗದೆ, ಬಂದೂಕು, ಊರಿ, ಲಾಠಿ, ದೊಣ್ಣೆ, ಚಾಕು ಹಾಗೂ ದೇಹಕ್ಕೆ ಅಪಾಯವನ್ನು ಉಂಟು ಮಾಡುವ ಯಾವುದೇ…
ಮುಂಬಯಿ : ಮುಂಬಯಿಯ ಹೋಟೆಲ್ ಉದ್ಯಮಿಯೊಬ್ಬರು ಅಪಹರಣಕ್ಕೊಳಗಾದ ಘಟನೆ ಸೋಮವಾರ ಸಂಭವಿಸಿದೆ. ಅಪಹರಣಕ್ಕೊಳಗಾದ ಹೋಟೆಲ್ ಉದ್ಯಮಿ ಕರಾವಳಿ ಅನೂಪ್ ಶೆಟ್ಟಿ ಎನ್ನಲಾಗಿದೆ. ಸೋಮವಾರ ಮಧ್ಯಾಹ್ನದ ವೇಳೆ ಅಂಧೇರಿ ಪೂರ್ವದ ಚಕಾಲದ ಸರ್ ಚಥುರ್‌ದಾಸ್ ವಾಸಂಜಿ ರಸ್ತೆಯಲ್ಲಿರುವ ಅವರ ವೀರ ರೆಸಿಡೆನ್ಸಿ ಹೋಟೆಲ್‌ಗೆ ಬಂದ ನಾಲ್ವರು ಏರ್‌ಗನ್ ತೋರಿಸಿ ಅನೂಪ್ ಶೆಟ್ಟಿಯವರನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದಾರೆ. ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಅನೂಪ್ ಶೆಟ್ಟಿಯವರನ್ನು ಮಂಗಳವಾರ ಮಧ್ಯಾಹ್ನ ಪಾರು ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.ಹಣಕಾಸಿನ ವ್ಯವಹಾರದ ತಗಾದೆಯ ಹಿನ್ನೆಲೆಯಲ್ಲಿ ಈ ಅಪಹರಣವಾಗಿದೆ. ಕೆಲ ಸಮಯ ಹೋಟೆಲ್ ವ್ಯವಹಾರದಲ್ಲಿ ಪಾಲುದಾರನಾಗಿದ್ದ ವ್ಯಕ್ತಿಯೇ ಹಣಕಾಸಿನ ವಿಚಾರದಲ್ಲಿ ತಗಾದೆ ಬಂದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಅಪಹರಣಕಾರರಲ್ಲಿ ಇಬ್ಬರು ವೈಟರ್‌ಗಳ ಸೋಗು ಹಾಕಿ ಬೆಳಗ್ಗೆ ಹೋಟೆಲ್‌ನಲ್ಲಿ ಕೆಲಸಕ್ಕೆ ಸೇರಿ ಅನೂಪ್ ಶೆಟ್ಟಿಯವರ ಮಾಹಿತಿಯನ್ನು ರವಾನಿಸಿದ್ದರು. ಈ ಮೂವರಲ್ಲದೆ ಕಾರು ಚಾಲಕನನ್ನು ಪೊಲೀಸರು ಪಾಡ್ಗಾ ಎಂಬಲ್ಲಿಂದ ಬಂಧಿಸಿ ಅನೂಪ್ ಶೆಟ್ಟಿಯವರನ್ನು ಪಾರು ಮಾಡಿದ್ದಾರೆ. ಅಪಹರಿಸುವ ಮೊದಲು ಆರೋಪಿಗಳು ಗಾಳಿಯಲ್ಲಿ ಒಂದು ಸುತ್ತು…










