ನವದೆಹಲಿ:ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರ ನಿವಾಸಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಉತ್ತರ ಪ್ರದೇಶ, ಬಿಹಾರ, ಪಂಜಾಬ್ ಮತ್ತು ಗೋವಾದ 16 ಸ್ಥಳಗಳಲ್ಲಿ ಶೋಧ ನಡೆಸಿದೆ. ಉತ್ತರ ಪ್ರದೇಶ, ಬಿಹಾರ, ಪಂಜಾಬ್ ಮತ್ತು ಗೋವಾದಲ್ಲಿ ಪಿಎಫ್‌ಐ ಜೊತೆಗಿನ ನಂಟು ಹೊಂದಿರುವವರು ಮತ್ತು ಶಂಕಿತ ಸ್ಥಳಗಳಲ್ಲಿ ಈ ದಾಳಿಗಳನ್ನು ನಡೆಸಲಾಗಿದೆ. ಎನ್‌ಐಎ ಶೋಧಿಸಿದ ಸ್ಥಳಗಳಲ್ಲಿ ಬಿಹಾರದಲ್ಲಿ 12, ಉತ್ತರ ಪ್ರದೇಶದಲ್ಲಿ ಎರಡು ಮತ್ತು ಪಂಜಾಬ್‌ನ ಲೂಧಿಯಾನ ಮತ್ತು ಗೋವಾದಲ್ಲಿ ತಲಾ ಒಂದು ಸ್ಥಳಗಳು ಸೇರಿವೆ ಎಂದು ಮೂಲಗಳು ತಿಳಿಸಿದೆ. ರಾಜ್ಯ ಪೊಲೀಸ್ ಪಡೆಗಳೊಂದಿಗೆ ನಿಕಟ ಸಮನ್ವಯದಲ್ಲಿ NIA ತಂಡಗಳು ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿದೆ. ಗೃಹ ವ್ಯವಹಾರಗಳ ಸಚಿವಾಲಯವು PFI ಅನ್ನು ನಿಷೇಧಿಸಿರುವುದರಿಂದ ಮತ್ತು ಅದರ ಉನ್ನತ ನಾಯಕರನ್ನು ಜೈಲಿಗೆ ಹಾಕಿರುವುದರಿಂದ, ಸಂಘಟನೆಯು ತನ್ನ ಕಾರ್ಯಕರ್ತರನ್ನು ಮರುಸಂಘಟಿಸಲು ಮತ್ತು ಬಲಪಡಿಸಲು ಶ್ರಮಿಸುತ್ತಿದೆ ಎಂದು ಆರೋಪಿಸಲಾಗಿದೆ. ಸೆಪ್ಟೆಂಬರ್ 2022 ರಲ್ಲಿ ‘ಕಾನೂನುಬಾಹಿರ ಸಂಘ’ ಎಂದು ಪಿಎಫ್…
Author: main-admin
ನವದೆಹಲಿ: ಅಪರೇಷನ್ ಕಾವೇರಿ ಅಡಿಯಲ್ಲಿ ಸುಡಾನ್’ನಿಂದ ಭಾರತೀಯರ ಮೊದಲ ಬ್ಯಾಚ್ ತವರು ದೇಶಕ್ಕೆ ಹೊರಟಿದೆ. ಸುಮಾರು 278 ಪ್ರಯಾಣಿಕರನ್ನ ಹೊತ್ತ ಭಾರತೀಯ ನೌಕಾಪಡೆಯ ಗಸ್ತು ನೌಕೆ ಐಎನ್ಎಸ್ ಸುಮೇಧಾ ಹಡಗು ಸುಡಾನ್ ದೇಶದ ಪೋರ್ಟ್ ನಿಂದ ಜೆಡ್ಡಾ ಪ್ರಯಾಣಿಸಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ. ಐಎನ್‌ಎಸ್ ಸುಮೇಧಾದಲ್ಲಿದ್ದ ಭಾರತೀಯರ ಫೋಟೋಗಳನ್ನ ಟ್ವೀಟ್ ಮಾಡಿದ್ದು, ತಮ್ಮ ಸ್ಥಳಾಂತರಕ್ಕೆ ವ್ಯವಸ್ಥೆ ಮಾಡಿದ್ದಕ್ಕಾಗಿ ಸರ್ಕಾರಕ್ಕೆ ಧನ್ಯವಾದ ಹೇಳಲು ಕೆಲವರು ರಾಷ್ಟ್ರಧ್ವಜವನ್ನ ಹಿಡಿದಿದ್ದರು ಎಂದು ಟ್ವೀಟ್ ಮಾಡಿದ್ದಾರೆ. ಸೇನೆ ಮತ್ತು ಅರೆಸೇನಾ ಗುಂಪಿನ ನಡುವೆ ಭೀಕರ ಕಾಳಗ ನಡೆಯುತ್ತಿರುವ ಸುಡಾನ್‌ನಿಂದ ಸ್ಥಳಾಂತರಿಸಿದ ಭಾರತೀಯರ ಗುಂಪಿನಲ್ಲಿ ಮಕ್ಕಳೂ ಸೇರಿದ್ದಾರೆ. ಸುಡಾನ್‌ನಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರಲು ‘ಆಪರೇಷನ್ ಕಾವೇರಿ’ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸುಮಾರು 500 ಭಾರತೀಯರು ಸುಡಾನ್ ಬಂದರನ್ನು ತಲುಪಿದ್ದಾರೆ. ಅವರನ್ನು ಕರೆತರಲು ನಮ್ಮ ಹಡಗುಗಳು ಮತ್ತು ವಿಮಾನಗಳು ಸಜ್ಜಾಗಿವೆ.
ಕೇರಳ(Kerala) ದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ರೈಲು ಪ್ರಮುಖವಾಗಿ 11 ಜಿಲ್ಲೆಗಳಿಗೆ ಸಂಚರಿಸಲಿದೆ, ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಳಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಸೇರಿದಂತೆ ವಿವಿಧ ನಗರಗಳನ್ನು ಸಂಪರ್ಕಿಸಲಿದೆ. ಮೊದಲ ಹಂತದ ಅಡಿಯಲ್ಲಿ ಕಾಸರಗೋಡಿನಿಂದ ತಿರುವನಂತಪುರದವರೆಗಿನ ಸಂಪೂರ್ಣ ಹಳಿಯನ್ನು ಗಂಟೆಗೆ 110 ಕಿ.ಮೀ ವೇಗಕ್ಕೆ ಪರಿವರ್ತಿಸಲು 381 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ತಿರುವುಗಳನ್ನು ನೇರಗೊಳಿಸುವುದು ಮತ್ತು ಇತರ ಅಗತ್ಯ ಹೊಂದಾಣಿಕೆಗಳನ್ನು ಒಳಗೊಂಡಿರುವ ಎರಡನೇ ಹಂತವು ಪೂರ್ಣಗೊಳ್ಳಲು ಎರಡರಿಂದ ಮೂರೂವರೆ ವರ್ಷ ಬೇಕಾಗುತ್ತದೆ. ಬಳಿಕ ಈ ಟ್ರ್ಯಾಕ್‌ನ ವೇಗವನ್ನು ಗಂಟೆಗೆ 130 ಕಿಮೀಗೆ ಹೆಚ್ಚಿಸಲಾಗುತ್ತದೆ. ಏಪ್ರಿಲ್ 17 ರಂದು ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು, ತಿರುವನಂತಪುರ ರೈಲು ನಿಲ್ದಾಣದಿಂದ ಬೆಳಗ್ಗೆ 5:10ಕ್ಕೆ ಆರಂಭವಾದ ಪ್ರಾಯೋಗಿಕ ರೈಲು ಓಡಾಟ ಮಧ್ಯಾಹ್ನ 12:30ಕ್ಕೆ ಕಣ್ಣೂರು ತಲುಪಿತ್ತು. ಆರಂಭಿಕ ಹಂತದಲ್ಲಿ, ವಂದೇ ಭಾರತ್ ಗಂಟೆಗೆ…
ಮಂಗಳೂರು: ಮುಂಬೈ- ಮಂಗಳೂರು ರೈಲಿನಲ್ಲಿ ಊರಿಗೆ ಮರಳುತ್ತಿದ್ದ ವ್ಯಕ್ತಿಯೊಬ್ಬರು ರೈಲಿನ ಶೌಚಾಲಯದಲ್ಲೇ ಮೃತಪಟ್ಟಿದ್ದು, ಈ ವಿಷಯ ರೈಲಿನ ಸಿಬ್ಬಂದಿಯ ಗಮನಕ್ಕೇ ಬಾರದೆ ಮೃತದೇಹವು ಮತ್ತೆ ಅದೇ ರೈಲಿನಲ್ಲಿ ಮುಂಬಯಿಗೆ ಹೋಗಿರುವ ಘಟನೆ ನಡೆದಿದೆ. ಕಿನ್ನಿಗೋಳಿಯ ಮೆನ್ನ ಬೆಟ್ಟಿ ನವರಾದ ಮೋಹನ್ ಬಂಗೇರ (56) ಅವರು ಮುಂಬಯಿಯಿಂದ ಊರಿಗೆ ಮರಳುವ ವೇಳೆಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆದರೆ ಈ ವಿಷಯ ಗೊತ್ತಾಗದೆ ಅವರ ಕುಟುಂಬಿಕರು ಮುಂಬಯಿವರೆಗೂ ಹುಡುಕಾಡಿದ್ದಾರೆ. ಆದರೆ ಅವರಿದ್ದ ಬೋಗಿಯ ಶೌಚಾಲಯ ಸಹಿತ ತಪಾಸಣೆ ಮಾಡಬೇಕಿದ್ದ ರೈಲು ಸಿಬಂದಿ ಕರ್ತವ್ಯಲೋಪ ಮಾಡಿದ್ದಲ್ಲದೆ ತಾವು ತಪಾಸಣೆ ಮಾಡಿದ್ದಾಗಿ ವರದಿ ಕೊಟ್ಟಿ ರುವುದು ನೋವು ತಂದಿದೆ.ಮೃತದೇಹವನ್ನು ರೈಲಿನಲ್ಲೇ ಮತ್ತೆ ಹಿಂದೆ ಕಳುಹಿಸಲು, ಮರಣೋತ್ತರ ಪರೀಕ್ಷೆಗೆ 10 ಸಾವಿರ ರೂ.ಗಳನ್ನು ಪಾವತಿಸಿದ್ದು ಏಜೆನ್ಸಿಯೊಂದು ಪ್ಯಾಕ್ ಮಾಡಿ ಕಳಿಸಿದೆ. ಆದರೆ ಪಾರ್ಸೆಲ್ ಇಲ್ಲಿಗೆ ಬರುವಾಗ ದೇಹ ಪೂರ್ಣ ಕೊಳೆತು ದುರ್ವಾಸನೆ ಬೀರುತ್ತಿತ್ತು.ಮೋಹನ್ ಬಂಗೇರ ಹಲವು ವರ್ಷ ಗಳಿಂದ ಮುಂಬಯಿನಲ್ಲಿ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರರು ಕಿನ್ನಿಗೋಳಿಯ…
ಮಂಗಳೂರು ಎಪ್ರಿಲ್ 25 : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಕೇಂದ್ರ ನಾಯಕರ ದಂಡೆ ಇದೀಗ ಕರ್ನಾಟಕದತ್ತ ಆಗಮಿಸುತ್ತಿದ್ದು, ಇದೀಗ ಕರಾವಳಿಗೆ ಪ್ರಚಾರಕ್ಕೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬಿಜೆಪಿ ವತಿಯಿಂದ ಮುಲ್ಕಿಯಲ್ಲಿ ಮೇ 3ರಂದು ಹಮ್ಮಿಕೊಂಡಿರುವ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ಮೇ 6 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದು, ಸಮಾವೇಶ ಏರ್ಪಡಿಸುವ ಸ್ಥಳ ಇನ್ನೂ ನಿಗದಿ ಆಗಿಲ್ಲ. ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಕೂಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು. ಫಕೀರ ಎಂದು ಕರೆಸಿಕೊಳ್ಳುವ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು 7 ಕೋಟಿಗೂ ಹೆಚ್ಚು ಆಸ್ತಿ ಘೋಷಿಸಿದ ಕುರಿತು ಪ್ರತಿಕ್ರಿಯಿಸಿದ ಕೋಟ, ಅವರು ಯಾವುದೋ ದೀಕ್ಷೆ ತೊಟ್ಟು ಬರಿಗಾಲಿನಲ್ಲಿ ನಡೆಯುತ್ತಾರೆ. ಹಾಗಾಗಿ…
ಬೆಳಗಾವಿ : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಧುರೀಣ ಡಿ.ಬಿ ಇನಾಂದಾರ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಚಿಕಿತ್ಸೆ ಫಲಿಸದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 74ವರ್ಷದ ಇನಾಂದಾರ್ ಶ್ವಾಸಕೋಶ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಸಿರಸಂಗಿ ದೇಸಾಯಿ ಫೌಂಡೇಷನ್ ಟ್ರಸ್ಟ್ ಕಾಯಂ ಸದಸ್ಯರಾಗಿದ್ದರು.ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು.
ಉಡುಪಿ ವಿಧಾನಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯಯವರು ತುಳುನಾಡ ರಕ್ಷಣಾ ವೇದಿಕೆಯ ಬೆಂಬಲಯಾಚಿಸಿದರು. ಇತ್ತೀಚೆಗೆ ಕರಾವಳಿ ಭಾಗದಲ್ಲಿ ತುಳು ಭಾಷೆಯಾಗಿರಬಹುದು ತುಳುವಿನ ಬಗ್ಗೆ ಜನರಲ್ಲಿ ಅಪಾರವಾದ ಅಭಿಮಾನ ಅದೇ ರೀತಿ ಬೇಡಿಕೆ ಉಂಟಾಗಿದ್ದು ಈ ಸಂದರ್ಭದಲ್ಲಿ ಎಲ್ಲಾ ಪಕ್ಷದ ಅಭ್ಯರ್ಥಿಗಳು ತುಳು ಶಾಲು,ತುಳು ಫ್ಲಾಗ್ ಗಳನ್ನು ಬಳಸುತ್ತಿರುವುದು ಕಂಡು ಬಂದಿದೆ. ಈ ಮಧ್ಯೆ ಹಲವಾರು ಅಭ್ಯರ್ಥಿಗಳು ಬೇರೆ ಬೇರೆ ತುಳು ಪರ ಸಂಘಟನೆ ಮುಖಂಡರುಗಳನ್ನು ಭೇಟಿಯಾಗಿ ಬೆಂಬಲ ಯಾಚಿಸುವುದು ಕಂಡು ಬಂದಿದೆ. ಈ ಮಧ್ಯೆ ಉಡುಪಿ ವಿಧಾನಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿಯವರು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು, ಉಡುಪಿ ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿ ಹಾಗೂ ಉಡುಪಿ ಪ್ರಧಾನ ಕಾರ್ಯದರ್ಶಿ ಅಝರುದ್ದೀನ್ ಸುಬ್ರಹ್ಮಣ್ಯ ನಗರ, ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬರವರಲ್ಲಿ ಮಾತುಕತೆ ನಡೆಸಿ ಬೆಂಬಲ ನೀಡುವಂತೆ ಕೋರಿದರು. ತುಳುನಾಡ ತುಳು ಭಾಷೆ ತುಳು ಅಭಿವೃದ್ಧಿಗೋಸ್ಕರ ಶ್ರಮಿಸುವುದು ಅದೇ…
ಬೆಂಗಳೂರು: ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ಶರತ್ ಬಾಬು ಅವರ ಆರೋಗ್ಯ ಸ್ಥಿತಿ ಬಹು ಅಂಗಾಂಗ ಹಾನಿಯಿಂದ ಮತ್ತಷ್ಟು ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ನಿನ್ನೆಯಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲ ದಿನಗಳಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಹಿರಿಯ ನಟ ಶರತ್ ಬಾಬು ಅವರನ್ನು, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಸ್ಯಾಂಡಲ್ ವುಡ್ ನಟ ಶರತ್ ಬಾಬು ಅವರು ಬಹು ಅಂಗಾಂಗ ಹಾನಿಯಿಂದ ಬಳಲುತ್ತಿದ್ದು, ಕಿಡ್ನಿ, ಲಂಗ್ಸ್, ಲಿವರ್ ಸೇರಿದಂತೆ ಮತ್ತಿತರೇ ಅಂಗಗಳು ತೊಂದರೆಗೆ ಒಳಗಾಗಿರುವುದಾಗಿ ತಿಳಿದು ಬಂದಿದೆ. ಶ್ವಾಸಕೋಶ ಸಮಸ್ಯೆಯಿಂದಲೂ ಬಳಲುತ್ತಿರುವಂತ ಅವರಿಗೆ ವೆಂಟಿಲೇಟರ್ ನಲ್ಲಿ ಹೈದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಬಹು ಅಂಗಾಂಗ ತೊಂದರೆಯಿಂದ ಬಳಲುತ್ತಿರುವಂತ ಅವರಿಗೆ ಸೂಕ್ತ ಕಾಲದಲ್ಲಿ ಚಿಕಿತ್ಸೆ ಸಿಗದೇ ಹೋದ್ರೇ, ಬಹು ಅಂಗಾಂಗ ವೈಫಲ್ಯದಿಂದ ಜೀವಕ್ಕೂ ಹಾನಿ ಉಂಟಾಗಲಿದೆ ಎನ್ನಲಾಗುತ್ತಿದೆ. ಅಂದಹಾಗೆ…
ಮಂಗಳೂರು: ಹನ್ನೊಂದು ವರ್ಷಗಳಿಂದ ಸರ್ಕಾರ ನನಗೆ ನೀಡಿದ್ದ ಗನ್ ಮ್ಯಾನ್ ಭದ್ರತೆಯನ್ನು ಚುನಾವಣೆ ಘೋಷಣೆಯಾದ ದಿನದಿಂದ ವಾಪಸ್ ಪಡೆಯಲಾಗಿದ್ದು ಭಯದಿಂದ ಬದುಕಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದ್ದಾರೆ. ತಾಯಿ ಜತೆ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, 2012 ರಲ್ಲಿ ಅಕಾಡೆಮಿ ಅಧ್ಯಕ್ಷನಾಗಿದ್ದಾಗ ಏಳು ಮಂದಿಯ ತಂಡ ಕಚೇರಿಗೆ ನುಗ್ಗಿ ಯದ್ವಾತದ್ವಾ ಕೊಚ್ಚಿ ಕೊಲೆಯತ್ನ ನಡೆಸಿತ್ತು. ಅದರಲ್ಲಿ ಇಬ್ಬರು ಆರೋಪಿಗಳ ಆರೋಪ ಸಾಬೀತಾಗಿ ನ್ಯಾಯಾಲಯ ನಾಲ್ಕೂವರೆ ವರ್ಷ ಸಜೆ ವಿಧಿಸಿದೆ. ಆರೋಪಿಗಳು ಇದರ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ ಅಲ್ಲಿ ತೀರ್ಪು ಬರುವ ಮೊದಲೇ ಗನ್ ಮ್ಯಾನ್ ಭದ್ರತೆ ವಾಪಸ್ ಪಡೆದುಕೊಳ್ಳಲಾಗಿದೆ. ಇದರಿಂದ ಭಯ ಮತ್ತು ನನಗೆ ಆತಂಕ ನನ್ನನ್ನು ಕಾಡುತ್ತಿದೆ ಎಂದರು. ನನ್ನ ತಾಯಿಯವರ ಮನವೊಲಿಸಿ ಪ್ರಕರಣವನ್ನು ಹಿಂದಕ್ಕೆ ಪಡೆಯಲು ಆರೋಪಿಗಳು ಪ್ರಯತ್ನಿಸಿದ್ದಾರೆ. ಅಷ್ಟೇ ಅಲ್ಲ ನನ್ನ ಗನ್‌ಮ್ಯಾನ್‌ಗೂ ಬೆದರಿಕೆ ಹಾಕಿದ್ದರು. ಇಷ್ಟೆಲ್ಲಾ ಇದ್ದರೂ ನನ್ನ ಗನ್‌ಮ್ಯಾನ್ ಹಿಂದಕ್ಕೆ ಪಡೆದುಕೊಂಡಿರುವುದು ಎಷ್ಟು…
ನವದೆಹಲಿ: ತಿರುವನಂತಪುರಂ ಮತ್ತು ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಂದ್ರೆ, ನಾಳೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್‌ನಲ್ಲಿ ಚಾಲನೆ ನೀಡಲಿದ್ದಾರೆ. ಪ್ರಧಾನಿ ಕಾರ್ಯಾಲಯದ ಪ್ರಕಾರ, ವಂದೇ ಭಾರತ್ ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಥಳೀಯವಾಗಿ ತಯಾರಿಸಿದ, ಅರೆ-ಹೈ ಸ್ಪೀಡ್ ಮತ್ತು ಸ್ವಯಂ ಚಾಲಿತ ರೈಲು ಸೆಟ್ ಆಗಿದೆ. ರೈಲು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿದ್ದು, ಪ್ರಯಾಣಿಕರಿಗೆ ವೇಗವಾದ, ಹೆಚ್ಚು ಆರಾಮದಾಯಕ ಮತ್ತು ಹೆಚ್ಚು ಅನುಕೂಲಕರ ಪ್ರಯಾಣದ ಅನುಭವವನ್ನು ಒದಗಿಸುತ್ತದೆ. ಅ.25ರಂದು ಕೇರಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು 3,200 ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ. ನಗರದೊಂದಿಗೆ ತಡೆರಹಿತ ಸಂಪರ್ಕಕ್ಕಾಗಿ ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ಹೈಬ್ರಿಡ್ ಬೋಟ್‌ಗಳ ಮೂಲಕ ಕೊಚ್ಚಿ ಸುತ್ತಮುತ್ತಲಿನ 10…










