ಉಡುಪಿ: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತರಬೇತಿ ಸಂದರ್ಭದಲ್ಲಿ ಚುನಾವಣಾ ಕರ್ತವ್ಯ ಸಂಬಂಧಿತ ಕಾರ್ಯಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು, ಅವುಗಳ ಬಗ್ಗೆ ಇರುವ ಸಂದೇಹಗಳನ್ನು ಬಗೆಹರಿಸಿಕೊಂಡು, ಮತದಾನ ದಿನದಂದು ಯಾವುದೇ ಗೊಂದಲಗಳಿಗೆ ಒಳಗಾಗದಂತೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಉಡುಪಿಯ ಸೈಂಟ್ ಸಿಸಿಲಿ ವಿದ್ಯಾಸಂಸ್ಥೆಯಲ್ಲಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ತರಬೇತಿ ಸಮಯದಲ್ಲಿ ಇ.ವಿ.ಎಂ ಗಳ ಬಳಕೆ, ವಿವಿ ಪ್ಯಾಟ್ ಬಳಕೆ ಸೇರಿದಂತೆ , ಮತದಾನ ದಿನದಂದು ಚುನಾವಣಾ ಆಯೋಗದ ನಿರ್ದೇಶನಗಳ ಅನ್ವಯ ನಡೆಯುವ ಎಲ್ಲಾ ಪ್ರಕ್ರಿಯೆಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವ ಬಗ್ಗೆ ಸವಿವರವಾಗಿ ತಿಳಿದುಕೊಳ್ಳುವಂತೆ ಹಾಗೂ ಈ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ತರಬೇತುದಾರರಿಂದ ಅದನ್ನು ಬಗೆಹರಿಸಿಕೊಂಡು, ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಚುನಾವಣಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.ಚುನಾವಣಾ ಪ್ರಕ್ರಿಯೆಯ ಯಶಸ್ಸಿಗೆ ಮತಗಟ್ಟೆ ಮಟ್ಟದಲ್ಲಿ ನಡೆಯುವ ಕಾರ್ಯವು ಅತ್ಯಂತ ಪ್ರಮುಖವಾಗಿರುವುದರಿಂದ ,ಎಲ್ಲಾ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಮತ್ತು ಪರಸ್ಪರ ಸಮನ್ವಯದಿಂದ…
Author: main-admin
ಮಂಗಳೂರು : ರಾತ್ರಿ 9.30 ಕ್ಕೆ ಬೆಂಗಳೂರಿಗೆ ತೆರಳಬೇಕಿದ್ದ ದುರ್ಗಂಬಾ ಮೋಟರ್ಸ್ KA 51B 3129, ಬಸ್ಸು, ಪ್ರಯಾಣಿಕರ ಮೇಲೆ ಯಾವುದೇ ಕಾಳಜಿ ತೋರಿಸದೆ,ಯಾವುದೇ ಬದಲಿ ವ್ಯವಸ್ಥೆ ಮಾಡದೇ,ಬಹಳ ತಡವಾಗಿ ತಡರಾತ್ರಿ 1.15 ಕ್ಕೆ ಜ್ಯೋತಿ ಯಿಂದ ಹೊರಟಿತು. ದುರ್ಗಂಬಾ ಮೋಟರ್ಸ್ ನ ಬಸ್ಸು ಮಣ್ಣಗುಡ್ಡೆಯಲ್ಲಿ ಒಂದು ಜೀಪ್ ಗೆ ಡಿಕ್ಕಿ ಹೊಡೆದ ಕಾರಣದಿಂದ, ಕದ್ರಿ ಸ್ಟೇಷನ್ ನಲ್ಲಿ ನಿಲ್ಲಿಸಿದರೂ, ಪಾಂಡೇಶ್ವರ ಠಾಣೆಯ ಪರಿಧಿಗೆ ಬರುವುದರಿಂದ ಪುನಹ ಜ್ಯೋತಿಯಲ್ಲಿ ಬಸ್ಸನ್ನು ನಿಲ್ಲಿಸಲಾಯಿತು. ಅಧಿಕ ಬಸ್ ಗಳನ್ನು ಹೊಂದಿರುವ ದುರ್ಗಂಬ ಮೋಟರ್ಸ್ ನವರು, ಕೂಡಲೇ ಬದಲಿ ವ್ಯವಸ್ಥೆ ಮಾಡದುದರಿಂದ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲಾ ಶಾಪ ಹಾಕಿದರು. ಕೊನೆಗೆ ಡ್ರೈವರ್ ನ ಅಲ್ಕೋಹೋಲಿಕ್ ಟೆಸ್ಟ್ ನ ನಂತರ, ಕೇಸನ್ನು ಧಾಖಲಿಸುವ ಒಪ್ಪಂದದ ಮೇರೆಗೆ, ಅದೇ ಚಾಲಕನು ಬಸ್ ನ್ನು ಚಲಾಯಿಸಿಕೊಂಡು ತಡರಾತ್ರಿ 1.15 ಕ್ಕೆ ಜ್ಯೋತಿಯಿಂದ ತೆರಳಲಾಯಿತು. ದುರ್ಗಂಬ ಮೋಟರ್ಸ್ ನವರು ಪ್ರಯಾಣಿಕರ ಮೇಲೆ ತೋರಿಸಿದ ಕಡೆಗಣಿಸುವ ಮನೋಭಾವವನ್ನು ಇಲ್ಲಿ ನೆರೆದಿದ್ದ ಜನರು ಖಂಡಿಸಿದರು.
ಮಂಗಳೂರು: ಅನಾಮಧೇಯ ವ್ಯಕ್ತಿಯೋರ್ವನು ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರ ಮೊಬೈಲ್ ಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯನ್ನೊಡ್ಡಿರುವ ಬಗ್ಗೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ದೂರು ದಾಖಲಾಗಿದೆ. ಎಪ್ರಿಲ್ 20ರಂದು ಮಧ್ಯಾಹ್ನ 2.28ರ ಸುಮಾರಿಗೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಮ್ಮ ಕಚೇರಿಯಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕರೊಂದಿಗೆ ಸಭೆ ನಡೆಸುತ್ತಿದ್ದರು. ಈ ವೇಳೆ 7353998242 ಮೊಬೈಲ್ ಸಂಖ್ಯೆಯಿಂದ ಜಿಲ್ಲಾಧಿಕಾರಿಯವರ ಮೊಬೈಲ್ ಗೆ ಕರೆ ಬಂದಿದೆ. ಜಿಲ್ಲಾಧಿಕಾರಿಯವರು ಕಾಲ್ ರಿಸೀವ್ ಮಾಡಿದಾಗ ಅತ್ತ ಕಡೆಯಿಂದ ಅಪರಿಚಿತ ವ್ಯಕ್ತಿಯೋರ್ವನು ಅನವಶ್ಯಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ ಜಿಲ್ಲಾಧಿಕಾರಿಯವರನ್ನು ಉದ್ದೇಶಿಸಿ ‘ಒಂದೂವರೆ ತಿಂಗಳ ಕಾಣಿಕೆ ನೀಡುತ್ತೇವೆ. ತಕ್ಷಣ ಓರ್ವ ಕೆಎಂಎಫ್ ಸಿಬ್ಬಂದಿಯನ್ನು ಮಂಗಳೂರಿನಿಂದ ತುಮಕೂರಿಗೆ ಕಳುಹಿಸಿಕೊಡಬೇಕು’ ಎಂದು ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ಚುನಾವಣೆ ಹೊತ್ತಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಮತ್ತು ದಾವಣಗೆರೆ ಎಸ್ಪಿ ರಿಷ್ಯಾಂತ್ ವರ್ಗಾವಣೆ ಮಾಡಲಾಗಿದೆ. ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿ. ಅರೂಣ್ ಕೆ ದಾವಣಗೆರೆ ನೂತನ ಡಿಸಿಪಿಯಾಗಿ ನೇಮಕವಾಗಿದ್ದಾರೆ.
ಬೆಂಗಳೂರು : ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಗೆ ಹೈಕೋರ್ಟ್ ರಿಲೀಫ್ ನೀಡಿದ್ದು, ನಟ ಚೇತನ್ ಗೆ ಷರತ್ತುಬದ್ದ ರಿಲೀಫ್ ನೀಡಿದೆ. ನಟ ಚೇತನ್ ಗೆ ನೀಡಿದ್ದ OCI ರದ್ದು ಹಿನ್ನೆಲೆ ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಗೆ ಹೈಕೋರ್ಟ್ ರಿಲೀಫ್ ನೀಡಿದೆ.ನ್ಯಾಯಾಂಗದ ಬಗ್ಗೆ ಚೇತನ್ ಟ್ವೀಟ್ ಮಾಡುವಂತಿಲ್ಲ, ವಿಚಾರಣೆಗೆ ಬಾಕಿ ಇರುವ ಕೇಸ್ ಗಳ ಬಗ್ಗೆ ಟ್ವೀಟ್ ಮಾಡುವಂತಿಲ್ಲ. ಜೂನ್ 2 ರವರೆಗೆ ಕ್ರಮ ಬೇಡ ಎಂದು ಹೈಕೋರ್ಟ್ ನ್ಯಾಯಮೂರ್ತಿ M. ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಚೇತನ್ ಉಲ್ಲಂಘನೆ ಮಾಡಿದ್ದಾರೆ ಎಂದು ಪೊಲೀಸ್ ಇಲಾಖೆಯು ಸರಕಾರಕ್ಕೆ ವರದಿ ಸಲ್ಲಿಸಿತ್ತು. ಚೇತನ್ ಅಹಿಂಸಾ ಅವರಿಗೆ ಭಾರತದಲ್ಲಿ ಬಂದು ವಾಸಿಸಲು ನೀಡಲಾಗಿದ್ದ ಭಾರತೀಯ ಸಾಗರೋತ್ತರ ಪೌರತ್ವವನ್ನು (Overseas Citizenship of India – OCI) ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು.. ಹಿಂದುತ್ವದ ಬಗ್ಗೆ ಟ್ವೀಟ್ ಮಾಡಿ ಅರೆಸ್ಟ್ ಆಗಿದ್ದ ಚೇತನ್, ಜಾಮೀನು ಪಡೆದು…
ತಲೆಮರೆಸಿಕೊಂಡಿದ್ದ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ. ಖಲಿಸ್ತಾನ್ ಮುಖಂಡ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ.ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಪಂಜಾಬ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಖಲಿಸ್ತಾನಿ ಉಗ್ರ ಅಮೃತ್ಪಾಲ್ ಸಿಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇತ್ತೀಚೆಗಷ್ಟೇ ಅಮೃತ್ ಪಾಲ್ ಸಿಂಗ್ ಪತ್ನಿಯನ್ನು ವಶಕ್ಕೆ ಪಡೆಯಲಾಗಿತ್ತು. ಮಾರ್ಚ್ 18 ರಿಂದ ಖಲಿಸ್ತಾನಿ ಉಗ್ರ ಅಮೃತ್ ಪಾಲ್ ಸಿಂಗ್ ಗಾಗಿ ದೇಶದಲ್ಲಿ ಹುಡುಕಾಟ ನಡೆಯುತ್ತಲೇ ಇತ್ತು. ನೇಪಾಳಕ್ಕೆ ಪರಾರಿಯಾಗಿದ್ದಾರೆ ಎಂದೂ ಹೇಳಲಾಗಿತ್ತು.
ಮೂಡಬಿದಿರೆ: ಜೈನ ಕಾಶಿ ಮೂಡಬಿದಿರೆಯಲ್ಲಿರುವ ವಿಶ್ವ ಪ್ರಸಿದ್ಧಿ ಪಡೆದ ಸಾವಿರ ಕಂಬದ ಬಸದಿಯಲ್ಲಿ ʼಮತದಾನ ಮಾಡಬನ್ನಿʼ ಎಂಬ ವಿನೂತನ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು ಪರಮ ಪೂಜ್ಯ ಭಾರತ ಭೂಷಣ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮೂಡಬಿದಿರೆ ಇ.ಡಿ ದಯಾವತಿ ಹಾಗೂ ಮೂಡಬಿದಿರೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ರಮೇಶ್ ರಾಥೋಡ್ ಮತ್ತು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು ಮತದಾನದ ಪ್ರಾಮುಖ್ಯತೆ ಬಗ್ಗೆ ಮತದಾರರಿಗೆ ಮಾಹಿತಿ ನೀಡಿದರು.ಮೂಡಬಿದಿರೆ ಪುರಸಭೆಯ ಬಿಲ್ ಕಲೆಕ್ಟರ್ ದಯಾ ಪ್ರಕಾಶ್, ಜೈನ್ ಮಿಲನ್ ಮೂಡಬಿದಿರೆಯ ಅಧ್ಯಕ್ಷರಾದ ನೇಮಿರಾಜ್ ಜೈನ್ ಮತ್ತು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, ಶಾರದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು
ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಇಲ್ಲಿನ ಕಳಂಜಿಬೈಲ್ ನಿವಾಸಿ ಜಾಫರ್ (35) ಎಂದು ಗುರುತಿಸಲಾಗಿದೆ. ಈದುಲ್ ಫಿತರ್ ಸಂಭ್ರಮದಲ್ಲಿ ನೆಂಟರಿಷ್ಟರ ಮನೆಗೆ ತನ್ನೆರೆಡು ಮಕ್ಕಳ ಜತೆ ತೆರಳುತ್ತಿದ್ದ ಜಾಫರ್ ರವರ ಸ್ಕ್ಯೂಟರ್ ಗೆ ಎದುರಿನಿಂದ ಬಂದ ಕಾರೊಂದು ಢಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಜಾಫರ್ ರವರ ಸ್ಕೂಟರ್ ಪೊದೆಗೆ ಹೋಗಿ ಬಿದ್ದಿದ್ದು ಜಾಫರ್ ರವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಬ್ಬದ ಸಂಭ್ರಮದಲ್ಲಿ ಈ ಅಪಘಾತ ನಿಜಕ್ಕೂ ಆಘಾತ ಮೂಡಿಸಿದೆ.
ಬೆಂಗಳೂರು : ಹ್ಯಾಂಡ್ ಬ್ರೇಕ್ ಹಾಕಲು ಮರೆತ ಲಾರಿ ಚಾಲಕನ ಎಟವಟ್ಟಿನಿಂದ ಬೆಂಗಳೂರಿನಲ್ಲಿ ಸರಣಿ ಅಪಘಾತ ನಡೆದಿದೆ. ಅದೃಷ್ಟವಶಾತ್ ಮುಂಜಾನೆ ಈ ಘಟನೆ ನಡೆದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟೈಲ್ಸ್ ಲೋಡ್ ಆಗಿದ್ದ ಲಾರಿಯನ್ನು ಚಾಲಕ ನಿಲ್ಲಿಸಿದ್ದಾನೆ. ಆದರೆ ಹ್ಯಾಂಡ್ ಬ್ರೇಕ್ ಹಾಕೋದನ್ನು ಮರೆತಿದ್ದಾನೆ. ಇದರಿಂದ ಲಾರಿ ಮುಂದೆ ಹೋಗಿದ್ದು ಸರಣಿ ಅಪಘಾತ ಸಂಭವಿಸಿದೆ.ಲಾರಿ ನೇರವಾಗಿ ಕಾರು, ಟಾಟಾ ಏಸ್ ವಾಹ ನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಟ್ಲ: ಮಹಿಳೆಯೋರ್ವರಿಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಪಟ್ಟಣ ಪಂಚಾಯತ್ ಸದಸ್ಯಯೋರ್ವರಿಗೆ ಸಾರ್ವಜನಿಕರ ಎದುರಲ್ಲೇ ಗೂಸಾ ನೀಡಿದ ಘಟನೆ ನಡೆದಿದೆ. ಮಾಜಿ ಪಟ್ಟಣ ಪಂಚಾಯತ್ ಸದಸ್ಯ ಶ್ರೀಕೃಷ್ಣ ಪುತ್ತೂರು ಮೂಲದ ಮಹಿಳೆಗೆ ಪದೇ ಪದೇ ಅವಾಚ್ಯವಾಗಿ ಮೆಸೇಜ್ ಮಾಡುತ್ತಾ ಕಿರುಕುಳ ನೀಡುತ್ತಿದ್ದ. ವಿಷಯ ತಿಳಿದ ಮಹಿಳೆಯ ಪತಿ ಸಾರ್ವಜನಿಕರ ಎದುರೇ ವಿಟ್ಲ ಬಸ್ ನಿಲ್ದಾಣದಲ್ಲಿ ಮಾಜಿ ಪಟ್ಟಣ ಪಂಚಾಯತ್ ಸದಸ್ಯನಿಗೆ ಧರ್ಮದೇಟು ನೀಡಿದ್ದಾರೆ. ಈ ಮೊದಲು ಶ್ರೀಕೃಷ್ಣ ಪುತ್ತೂರು ಶಾಸಕ ಸಂಜೀವ ಮಠಂದೂರುರವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಮತ್ತೊಂದು ಪ್ರಕರಣದಲ್ಲಿ ಪಟ್ಟಣ ಪಂಚಾಯತ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವರಿಗೆ ಜಾತಿ ನಿಂದನೆ ಮಾಡಿ ಬೆದರಿಕೆ ಒಡ್ಡಿದ ಆರೋಪದಲ್ಲಿ ಈತನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಸಾರ್ವಜನಿಕರ ಮಾಹಿತಿಯಂತೆ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.










