ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕರ್ನಾಟಕದ ಬಡ ಟೈಲರ್‌ಗೆ ಕೇರಳ ಲಾಟರಿಯ ಅದೃಷ್ಟ ಲಕ್ಷ್ಮಿ ಒಲಿದಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪಟ್ಟಣದ ಬಡ ಟೈಲರ್ ಆನಂದ್ ಅವರು ಅನಾರೋಗ್ಯದಿಂದ ವೃತ್ತಿ ನಿಲ್ಲಿಸಿದ್ದರು. ಅಪರೂಪಕ್ಕೆ ಕೇರಳಕ್ಕೆ ಹೋದಾಗ ಲಾಟರಿ ಖರೀದಿಸುತ್ತಿದ್ದರು. ನೀಲೇಶ್ವರದಲ್ಲಿರುವ ತನ್ನ ಮಗಳ ಮನೆಗೆ ಹೋಗಿದ್ದಾಗ ಟಿಕೆಟ್ ಖರೀದಿಸಿದ್ದರು. ಈ ಕೇರಳ ರಾಜ್ಯ ಲಾಟರಿಗೆ 80 ಲಕ್ಷ ರೂ. ಮೊದಲ ಬಹುಮಾನವಿತ್ತು. ಎಪ್ರಿಲ್ 15ರಂದು ಡ್ರಾ ಆಗಿದೆ.
Author: main-admin
ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಎಪ್ರಿಲ್ 27ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಅವರು ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ. ಉಡುಪಿ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ 40 ಮಂದಿ ಸ್ಟಾರ್ ಕ್ಯಾಂಪೆನರ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಹಲವು ಮಂದಿ ನಾಯಕರು ಜಿಲ್ಲೆಗೆ ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪರವಾದ ಅಲೆ ಇದ್ದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ಅಚ್ಚರಿ ಫಲಿತಾಂಶ ಹೊರಬೀಳಲಿದೆ ಎಂದರು.
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದಂತ ಯುವತಿಯೊಬ್ಬಳು, ನ್ಯಾಯಾಲಯದ ಆವರಣದಲ್ಲೇ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವಂತ ಆಘಾತಕಾರಿ ಘಟನೆ ಇಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ನಡೆದಿದೆ. ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್ ಬಳಿಯಿರುವಂತ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹರೀಶ್ ಎಂಬುವರಿಂದ ಕಾಂಚನಾ ಎಂಬುವರು 3 ಲಕ್ಷ ಸಾಲ ಪಡೆದ ಚೌಕ್ ಬೌನ್ಸ್ ಪ್ರಕರಣದ ವಿಚಾರಣೆ ನಡೆಸಲಾಗುತ್ತಿತ್ತು. ಮೊದಲ ಹಂತದ ವಿಚಾರಣೆ ವೇಳೆ ಹರೀಶ್ ಚೆಕ್ ಬೌನ್ಸ್ ಪ್ರಕರಣದ ಪರವಾಗಿ ಕೇಸ್ ಮುಂದುವರೆಸುವುದಾಗಿ ನ್ಯಾಯಾಲಯಕ್ಕೆ ಮನವರಿಕೆಯನ್ನು ವಕೀಲ ಕೃಷ್ಣಾರೆಡ್ಡಿ ಮಾಡಿದ್ದರು. ಈ ಬಳಿಕ ವಿರಾಮವನ್ನು ನ್ಯಾಯಾಲಯ ನೀಡಿತ್ತು. ಈ ವೇಳೆ ನ್ಯಾಯಾಲಯದ ಆವರಣಕ್ಕೆ ಹೊರಬಂದಿದ್ದಂತ ವಕೀಲ ಕೃಷ್ಣಾರೆಡ್ಡಿಯೊಂದಿಗೆ ಚೌಕ್ ಬೌನ್ಸ್ ಪ್ರಕರಣದ ಆರೋಪಿ ಕಾಂಚಾನ ಜಗಳ ತೆಗೆದಿದ್ದರು. ನೀನು ಕೇಸ್ ಮುಂದುವರೆಸುತ್ತೀಯ ಎಂಬುದಾಗಿ ಗಲಾಟೆ ಮಾಡಿದ್ದಾರೆ. ಅಲ್ಲದೇ ದಿಢೀರ್ ತಾವು ತಂದಿದ್ದಂತ ಚಾಕುವಿನಿಂದ ವಕೀಲ ಕೃಷ್ಣಾರೆಡ್ಡಿಗೆ ಹಲ್ಲೆ ಮಾಡಿದ್ದಾರೆ. ಈ ಬಳಿಕ ಅಲ್ಲಿಂದ ಎಸ್ಕೇಫ್ ಆಗಿರೋದಾಗಿ ತಿಳಿದು ಬಂದಿದೆ. ಕಾಂಚಾನ ಚಾಕುವಿನಿಂದ…
ಸುಳ್ಯ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿ ದರ್ಖಾಸು ಎಂಬಲ್ಲಿ ಏ. 20 ರಂದು ಸಂಭವಿಸಿದೆ.ಸುಬ್ಬಪ್ಪ (60)ಎಂಬವರೇ ಮೃತ ವ್ಯಕ್ತಿ. ಪಡ್ಪಿನಂಗಡಿ ದರ್ಖಾಸು ಎಂಬಲ್ಲಿರುವ ವಿಮಲ ರವರ ವಾಸದ ಮನೆಯ ಜಗಲಿಯಲ್ಲಿ ಛಾವಣಿಯ ಪಕ್ಕಾಸಿಗೆ ಶಾಲನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಚ್ಚಿ: ಮಲಯಾಳಂನ ಖ್ಯಾತ ನಟ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ (93) ಶುಕ್ರವಾರ (ಏಪ್ರಿಲ್ 21 ರಂದು) ನಿಧನರಾದರು. ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಭಾರತ ಸಿನಿಮಾರಂಗದ ಖ್ಯಾತ ನಟರಾಗಿರುವ ಮಮ್ಮುಟ್ಟಿ ಅವರ ತಾಯಿ ಕಳೆದ ಕೆಲ ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ವರದಿಯ ಪ್ರಕಾರ ಶುಕ್ರವಾರ ಸಂಜೆ ಕೊಟ್ಟಾಯಂನ ಚೆಂಪುವಿನ ಅವರ ಹುಟ್ಟೂರಲ್ಲಿ ದಫನ ಕಾರ್ಯ ನಡೆಯಲಿದೆ. ಫಾತಿಮಾ ಇಸ್ಮಾಯಿಲ್ ಅವರಿಗೆ ಮಮ್ಮುಟ್ಟಿ,ಇಬ್ರಾಹಿಂ ಕುಟ್ಟಿ , ಶಫೀನಾ, ಅಮೀನಾ, ಸೌದಾ ಮತ್ತು ಜಕರಿಯಾ ಎನ್ನುವ ಮಕ್ಕಳಿದ್ದಾರೆ. ಮಮ್ಮುಟ್ಟಿ ಹಿರಿಯ ಮಗನಾಗಿದ್ದಾರೆ. ಮಮ್ಮುಟ್ಟಿ ಅವರ ತಾಯಿಯ ನಿಧನಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಪುತ್ತೂರಿನ ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಂಡಿದೆ. ರಾಮಕಥಾ ಗಾಯಕಿ ಪ್ರೇಮಲತಾ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಸಂತ್ರಸ್ತೆ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹಿನ್ನೆಲೆ 2014ರ ಸೆ.1ರಂದು ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶಾಸ್ತ್ರಿ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಆರೋಪಪಟ್ಟಿ ದಾಖಲಿಸಿದ್ದರು. ನ್ಯಾ.ಹೇಮಂತ ಚಂದನಗೌಡರ್‌ರಿದ್ದ ಹೈಕೋರ್ಟ್ ಪೀಠ ಶ್ರೀಗಳ ಮತ್ತು ಕಲ್ಲಡ್ಕ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿದೆ.ರಾಘವೇಶ್ವರ ಭಾರತಿ ಸ್ವಾಮಿ ವಿರುದ್ಧ ಕೇಳಿ ಬಂದಿದ್ದ ಅತ್ಯಾಚಾರದ ಆರೋಪದಲ್ಲಿ ಶ್ಯಾಮ್ ಪ್ರಸಾದ್ ಶಾಸ್ತ್ರಿ ಪ್ರಮುಖ ಸಾಕ್ಷಿಯಾಗಿದ್ದರು. ಶ್ಯಾಮ್ ಪ್ರಸಾದ್ ಶಾಸ್ತ್ರಿ ಸಂತ್ರಸ್ತೆ ಮಹಿಳೆಯ ಮೈದುನ. 2014, ಆಗಸ್ಟ್ 31ರಂದು ಅವರು ತಮ್ಮ ಮನೆಯಲ್ಲಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ…
ಬಂಟ್ವಾಳ: ಯುವಕನೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ಮಾಡಮೆ ಎಂಬಲ್ಲಿ ನಡೆದಿದೆ. ಸಿದ್ದಕಟ್ಟೆ ದೇವಸ್ಯ ನಿವಾಸಿ ದುರ್ಗಾ ಪ್ರಸಾದ್ ಮೃತರು ಎಂದು ಗುರುತಿಸಲಾಗಿದೆ.ದುರ್ಗಾ ಪ್ರಸಾದ್ ಸಿದ್ಧಕಟ್ಟೆ ಸಮೀಪದ ಮಾಡಮೆ ಎಂಬಲ್ಲಿ ಮನೆಯೊಂದರಲ್ಲಿ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದ ಹಲವೆಡೆ ನಡೆದಿರುವ ಇಡಿ, ಐಟಿ ಅಧಿಕಾರಿಗಳ ದಾಖಲೆ ಪರಿಶೀಲನೆ ಕಾರ್ಯ ಉಡುಪಿಯಲ್ಲಿ ಕೂಡಾ ನಡೆದಿದ್ದು, ಉಡುಪಿಯ ಹಲವು ಉದ್ಯಮಿ, ಕಂಟ್ರಾಕ್ಟರ್ ದಾರರ ಮನೆಗಳಲ್ಲಿ ದಾಖಲೆ ಪರೀಶೀಲನೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಇಡಿ ಅಧಿಕಾರಿಗಳು ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರ ಸುದೇಶ್ ಶೆಟ್ಟಿ ಯ ಮಾಲಿಕತ್ವದ ಮಲ್ಪೆಯಲ್ಲಿರುವ ಗೆಸ್ಟ್ ಹೌಸ್ ನ ಕಚೇರಿ, ರೆಸ್ಟೋರೆಂಟ್, ಅಂಗಡಿ, ಮನೆ ಮತ್ತು ಇತರ ಕಡೆಗಳಲ್ಲಿ 10 ರಿಂದ 12 ಜನ ಡಿ ಅಧಿಕಾರಿಗಳು ಏಕಕಾಲಕ್ಕೆ ದಾಖಲೆ ಪರೀಶೀಲನೆ ನಡೆಸಿದ್ದಾರೆ.ಮತ್ತೊಂದು ಘಟನೆಯಲ್ಲಿ ಉಡುಪಿಯ ಪ್ರಥಮ ದರ್ಜೆ ಪಿ ಡ್ಬ್ಲೂಡಿ ಕಂಟ್ರಕ್ಟರ್ ಡಾ. ಜಿ ಶಂಕರ್ ಸಂಸ್ಥೆಗಳಲ್ಲಿ ಕೂಡಾ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನೋಂದಣಿಯ ವಾಹನದಲ್ಲಿ ಆಗಮಿಸಿದ ಅಧಿಕಾರಿಗಳು ಏಕಕಾಲದಲ್ಲಿ ಜಿ.ಶಂಕರ್ ಮನೆ ಸೇರಿ, ಸಂಸ್ಥೆಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಕಡಬ: ಗ್ಯಾಸ್ ದರವು ಕಡಿಮೆಯಾಗಿದ್ದರು ಹಿಂದಿನ ದರವನ್ನೇ ಪಡೆದ ಸಿಬ್ಬಂದಿಯನ್ನು ಆಟೋ ಚಾಲಕ ಪ್ರಶ್ನಿಸಿದಾಗ ಉಡಾಫೆ ಉತ್ತರ ನೀಡಿದ್ದು, ಇದರಿಂದ ಆಕ್ರೋಶಗೊಂಡ ಆಟೋ ಚಾಲಕರು ಪಂಪ್‌ಗೆ ಮುತ್ತಿಗೆ ಹಾಕಿದ ಕಡಬದಲ್ಲಿ ನಡೆದಿದೆ ಆಟೋ ಎಲ್‌ಪಿಜಿ ದರದಲ್ಲಿ ಕಡಿತವಾಗಿದ್ದರೂ ಮುಂಜಾನೆ 6ರಿಂದ 9ರವರೆಗೆ ಎಲ್‌ಪಿಜಿ ಪಂಪಿನಲ್ಲಿ ಹಳೆ ದರದಲ್ಲಿಯೇ ಗ್ಯಾಸ್ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಆಟೋ ಚಾಲಕನಿಗೆ ಗ್ಯಾಸ್ ಸಿಬ್ಬಂದಿ “ಹೋಗಿ ಹಗ್ಗ ತಗೊಳ್ಳಿ” ಎಂದು ಉಡಾಫೆ ಉತ್ತರ ನೀಡಿದ್ದಾರೆನ್ನಲಾಗಿದೆ. ಈ ವಿಷಯ ತಿಳಿದು ಆಟೋ ಚಾಲಕರು ಪಂಪ್‌ಗೆ ದೌಡಾಯಿಸಿ ಆಟೋ ಚಾಲಕರಿಂದ ಪಡೆದ ಅಧಿಕ ದರವನ್ನು ವಾಪಾಸು ನೀಡುವುದಲ್ಲದೆ ಸಿಬ್ಬಂದಿ ಕ್ಷಮೆ ಹೇಳಬೇಕೆಂದು ಹಠ ಹಿಡಿದಿದ್ದಾರೆ. ಕೂಡಲೇ ಸೇಲ್ಸ್ ಮ್ಯಾನೇಜರ್ ಮಧ್ಯಪ್ರವೇಶಸಿ ಸಿಬ್ಬಂದಿಗಳಿಂದ ಆಗಿರುವ ಪ್ರಮಾದವನ್ನು ಒಪ್ಪಿಕೊಂಡು, ಬೆಳಿಗ್ಗೆ 6 ಗಂಟೆಯಿಂದ 9 ಗಂಟೆ ತನಕ ಗ್ಯಾಸ್ ಹಾಕಿರುವ ಆಟೋಗಳಿಂದ ಹೆಚ್ಚುವರಿಯಾಗಿ ಪಡೆದುಕೊಂಡಿರುವ ಹಣವನ್ನು ತಮ್ಮ ವೈಯುಕ್ತಿಕ ಖಾತೆಯಿಂದ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು: ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ. ಜೆಸಿಬಿಯ ಚಾಲಕ ಝಾರ್ಖಂಡ್ ಕೊಸಾರ್ ಅನ್ಸಾರಿ (22) ಮೃತರು.ಇನ್ನು ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಅದರಲ್ಲಿ ಜೆಸಿಬಿಯ ಚಾಲಕ ಸಿಲುಕಿಕೊಂಡ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ಧಾವಿಸಿ ಬಂದಿದ್ದರು. ಸ್ಥಳೀಯರು ಹಾಗೂ ಎರಡು ಜೆಸಿಬಿ ಸಹಾಯದಿಂದ ಮಣ್ಣು ತೆಗೆಯಲಾಯಿತಾದರೂ, ಅದಾಗಲೇ ಚಾಲಕ ಮೃತಪಟ್ಟಿದ್ದರು ಎನ್ನಲಾಗಿದೆ.










