Author: main-admin

ಮಂಗಳೂರು;ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಬಂಧಿತರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ ಎಂದು ತಿಳಿದು ಬಂದಿದೆ. ಗುರುತು ಪತ್ತೆ ಆಗುವವರೆಗೆ ಆರೋಪಿಗಳ ಮಾಹಿತಿ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ. ನಿನ್ನೆ ರಾತ್ರಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಕೊಲೆಗೆ ಕಾರಣ ಏನು ಎಂಬುವುದನ್ನು ಪೂರ್ಣ ತನಿಖೆ ಬಳಿಕ ಹೇಳಲಾಗುವುದು ಎಂದು ಕಮಿಷನರ್ ಹೇಳಿದರು. ಮೂವರಲ್ಲಿ ಇಬ್ಬರು ಈ ಹಿಂದೆ ನಡೆದ ಹಲವು ಪ್ರಕರಣಗಳ ಆರೋಪಿಗಳು ಎಂದು ಹೇಳಿದ್ದಾರೆ. ಜಲೀಲ್ ಕೇಸ್ ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನು ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು 3 ಜನರನ್ನು ಮಾತ್ರ ಬಂಧನ ಮಾಡಲಾಗಿದೆ ಎಂದು ಕಮಿಷನರ್ ಹೇಳಿದ್ದಾರೆ.

Read More

ಕಾಸರಗೋಡು:ದುಬೈಯಿಂದ ಒಳ ಉಡುಪಿನಲ್ಲಿ ಬಚ್ಚಿಟ್ಟು ಒಂದು ಕೋಟಿ ರೂ.ಮೌಲ್ಯದ ಚಿನ್ನಾಭರಣವನ್ನು ಸಾಗಾಟ ಮಾಡುತ್ತಿದ್ದ ಯುವತಿಯನ್ನು ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡಿನ ಶಹಲಾ (19) ಬಂಧಿತ ಯುವತಿ.ಈಕೆ 1 ಕೋಟಿ ಮೌಲ್ಯದ ಚಿನ್ನಾಭರಣವನ್ನು ಮೂರು ಪ್ಯಾಕೇಟ್ ಮಾಡಿ ಒಳ ಉಡುಪಿನಲ್ಲಿ ಇಟ್ಟು ಸಾಗಾಟಕ್ಕೆ ಯತ್ನಿಸಿದ್ದರು. ಭಾನುವಾರ ರಾತ್ರಿ ದುಬೈಯಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಬಂದಿದ್ದ ಈಕೆ ಕಸ್ಟಮ್ಸ್ ತಪಾಸಣೆ ಬಳಿಕ ರಾತ್ರಿ 11 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದರು. ಪೊಲೀಸರು ಲಭಿಸಿದ ಖಚಿತ ಮಾಹಿತಿಯಂತೆ ಯುವತಿಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನಾಭರಣ ಸಾಗಾಟ ಪತ್ತೆಯಾಗಿದೆ.

Read More

ಮಂಗಳೂರು: ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮಹಿಳೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಲೀಲ್‌ ಹತ್ಯೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಅವರಿಗೆ ಗಾಂಜಾ ಮಾಫಿಯಾ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಹಿನ್ನೆಲೆ;ಶನಿವಾರ ಸಂಜೆ ಜಲೀಲ್‌ ಅಂಗಡಿಯಲ್ಲಿದ್ದ. ಆಗಾ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಜಲೀಲ್ ಜೊತೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ ಬಳಿಕ ಏಕಾಏಕಿ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಈ ಬಗ್ಗೆ ಅಲ್ಲೇ ಇದ್ದ ಪ್ರತ್ಯಕ್ಷದರ್ಶಿಗಳು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ಆರೋಪಿಗಳು ಯಾರು ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟ ಸುಳಿವು ಪೊಲೀಸರಿಗೆ ಸಿಕ್ಕಿಲ್ಲ.ಅನುಮಾನ ಇದ್ದ ಹಲವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ನಡುವೆ ಸುರತ್ಕಲ್ ಠಾಣೆಗೆ ಇಬ್ಬರು ಮಹಿಳೆಯರನ್ನು ಕರೆಸಿಕೊಂಡ ಪೊಲೀಸರು ಸಾಕಷ್ಟು ವಿಚಾರಣೆ ನಡೆಸಿದ್ದಾರೆ.

Read More

ಮಂಗಳೂರು : ಸುರತ್ಕಲ್ ನ ಕಾಟಿಪಳ್ಳದಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ. ಮೃತ ವ್ಯಕ್ತಿಯ ಅಂತ್ಯ ಸಂಸ್ಕಾರ ಕೂಡ ಶಾಂತಿಯುವಾಗಿ ನಡೆದಿದೆ. ತನಿಖೆ ಪ್ರಗತಿಯಲ್ಲಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಜನರು ಊಹಾ ಪೋಹಗಳಿಗೆ ಕಿಗೊಡದೆ ಪರಸ್ಪರ ವಿಶ್ವಾಸದಿಂದ ಇರುವ ಅಗತ್ಯವಿದೆ. ಪೊಲೀಸರು ಯಾವುದೆ ಒತ್ತಡ ಇಲ್ಲದೇ ಮುಕ್ತವಾಗಿ ತನಿಖೆ ಮಾಡಲಿದ್ದಾರೆ. ಆರೋಪಿಗಳು ಯಾರೇ ಇದ್ದರೂ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

Read More

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ನಡೆದ ಯುವಕರಿಬ್ಬರ ಬರ್ಬರ ಹತ್ಯೆಯು ಬೆಳಗಾವಿ ಜನತೆಯನ್ನು ಬೆಚ್ಚಿಬೀಳಿಸಿದೆ. ನಗರದ ಹೊರ ವಲಯದಲ್ಲೇ ಈ ಘಟನೆ ನಡೆದಿದ್ದು, ಜನರನ್ನು ಆತಂಕಕ್ಕೆ ದೂಡಿದೆ.ಬಸವರಾಜ್ ಬೆಳಗಾಂವ್ಕರ್ (22), ಗಿರೀಶ್​ ನಾಗಣ್ಣವರ (22) ಹತ್ಯೆಯಾದ ಯುವಕರು. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಯುವಕರು ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಆಡುತ್ತಿದ್ದರು. ಈ ವೇಳೆ ಮೈದಾನಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ವಾಹನ ನುಗ್ಗಿಸಿದ್ದ. ಮೈದಾನದಲ್ಲಿ ವಾಹನ ನುಗ್ಗಿಸಿದಕ್ಕೆ ಯುವಕರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಸಿಟ್ಟಾದ ಚಾಲಕ, ವಾಹನದಿಂದ ಕೆಳಗಿಳಿದು ಚಾಕುವಿನಿಂದ ಚುಚ್ಚಿ ಯುವಕರಿಬ್ಬರನ್ನು ಬರ್ಬರ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾಡಿ, ಎಸಿಪಿ ನಾರಾಯಣ ಭರಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕರಿಬ್ಬರ ಮೃತದೇಹಗಳನ್ನು ಬಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.

Read More

ಮಂಗಳೂರು : ಸುರತ್ಕಲ್‌ನಲ್ಲಿ ಮುಸ್ಲಿಂ ವ್ಯಾಪಾರಿ ಜಲೀಲ್‌ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಮಹಿಳೆಯರು ಸೇರಿ 4-5 ಜನರು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ ಕೂಳೂರು ಮುಹಿಯುದ್ದೀನ್‌ ಜುಮಾ ಮಸೀದಿಯಲ್ಲಿ ಧಪನ ಮಾಡುವ ವೇಳೆ ಮುಸ್ಲಿಂ ಮುಖಂಡರು ಪೊಲೀಸ್‌ ಆಯುಕ್ತರ ಬಳಿ ಈ ಪ್ರಕರಣ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಒತ್ತಾಯಿಸಿದ್ದಾರೆ ಈ ಘಟನೆ ಸಂಬಂದ 4-5 ಮಂದಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು ಇದರಲ್ಲಿ ಇಬ್ಬರು ಮಹಿಳೆಯರನ್ನ ಕೂಡಾ ವಿಚಾರಣೆ ನಡೆಸಲಾಗುತ್ತಿದ ಎಂದು ಮಾಹಿತಿ ಲಭ್ಯವಾಗಿದೆ ಮಂಗಳೂರು ನಗರದ ಸುರತ್ಕಲ್ ಸಮೀಪದ ಕೃಷ್ಣಾಪುರದ ನಾಲ್ಕನೇ ಬ್ಲಾಕ್‌ನ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳಿಬ್ಬರು, ಅಂಗಡಿ ಮಾಲೀಕ ಜಲೀಲ್ ಎಂಬುವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 6ರಿಂದ ಡಿಸೆಂಬರ್ 27ರ ಬೆಳಗ್ಗೆ 6 ರವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

Read More

ಕುದುರೆಯೊಂದಕ್ಕೆ ಸರ್ಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿದ್ದು, ಕುದುರೆ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಡಿ.25 ರ ಭಾನುವಾರ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತಿದ್ದ ಸರ್ಕಾರಿ ಬಸ್ ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಉಪ್ಪಿನಂಗಡಿ ಸಮೀಪ ಪಿಲಿಗೂಡಿನ ಮೋನು ಎಂಬವರಿಗೆ ಸೇರಿದ ಕುದುರೆ ಇದಾಗಿದ್ದು, ಅಪಘಾತದ ಬಳಿಕ ಚಿಕಿತ್ಸೆ ಫಲಿಸದೆ ಕುದುರೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.

Read More

ಉಪ್ಪಿನಂಗಡಿ: ಕುದುರೆಯೊಂದಕ್ಕೆ ಸರ್ಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿದ್ದು, ಕುದುರೆ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಡಿ.25 ರ ಭಾನುವಾರ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತಿದ್ದ ಸರ್ಕಾರಿ ಬಸ್ ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಉಪ್ಪಿನಂಗಡಿ ಸಮೀಪ ಪಿಲಿಗೂಡಿನ ಮೋನು ಎಂಬವರಿಗೆ ಸೇರಿದ ಕುದುರೆ ಇದಾಗಿದ್ದು, ಅಪಘಾತದ ಬಳಿಕ ಚಿಕಿತ್ಸೆ ಫಲಿಸದೆ ಕುದುರೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.

Read More

ಮಂಗಳೂರು ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಇದಾಗಿದ್ದು, ಡಿ. 26 ರಿಂದ 28 ರವರೆಗೆ ಸರ್ಕಾರಿ ಬಸ್ಸುಗಳ ಸಂಚಾರ ವ್ಯತ್ಯಯವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ ಮೂಡಬಿದರೆಯಲ್ಲಿ ಇದೇ ಡಿ.21 ರಿಂದ 27ರ ವರೆಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ಸುಮಾರು 50,000 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಆಗಮಿಸಿದ್ದಾರೆ. ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಇತರೆ ವಿಭಾಗಗಳಿಂದ ಹಾಗೂ ವಾ.ಕರಸಾ.ನಿಗಮ, ಕ.ಕ.ರ.ಸಾ.ನಿಗಮಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದು, ಆ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಡಿ. 27 ರಂದು ಕಾರ್ಯಕ್ರಮ ಮುಕ್ತಾಯಗೊಂಡು ಹಿಂತಿರುಗುವ ವೇಳೆಗೆ ಮೂಡಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ/ರೈಲ್ವೇ ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ. ಆದ್ದರಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳಲ್ಲಿ ಡಿ. 26 ರಿಂದ 28 ರವರೆಗೆ ದೈನಂದಿನ ಮಾರ್ಗ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಗಳು…

Read More

ಮಂಗಳೂರು:ಸುರತ್ಕಲ್ ನಲ್ಲಿ ಜಲೀಲ್ ಕೊಲೆ ಬೆನ್ನಲ್ಲೇ ಪಣಂಬೂರು, ಬಜ್ಪೆ, ಕಾವೂರು, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಕಮಿಷನರ್ ಆದೇಶಿಸಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಡಿ.25 ರ ಬೆಳಗ್ಗೆ 6 ಗಂಟೆಯಿಂದ ಡಿ.27 ರ ಬೆಳಗ್ಗೆ 6 ಗಂಟೆಯವರೆಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ. ಈ ನಿಷೇಧಾಜ್ಞೆ ಕ್ರಿಸ್ ಮಸ್ ಆಚರಣೆ, ತುರ್ತು ಸೇವೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

Read More