Author: main-admin

ನವದೆಹಲಿ: ಇಂದು (ಏಪ್ರಿಲ್ 20) ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದ್ದು, ಭಾರತೀಯ ಕಾಲಮಾನದ ಸೂರ್ಯಗ್ರಹಣವು ಬೆಳಗ್ಗೆ 7:04 ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 12:29 ಕ್ಕೆ ಕೊನೆಗೊಳ್ಳುತ್ತದೆ. ಒಟ್ಟು ಸಮಯವು ಐದು ಗಂಟೆಗಳಿಗಿಂತ ಹೆಚ್ಚು ಇರುತ್ತದೆ. ಸೂರ್ಯಗ್ರಹಣ ಎಲ್ಲೆಲ್ಲಿ ಗೋಚರಿಸುತ್ತದೆ? ಗ್ರಹಣವು ಆಸ್ಟ್ರೇಲಿಯಾ, ಪೂರ್ವ ಮತ್ತು ದಕ್ಷಿಣ ಏಷ್ಯಾ, ಪೆಸಿಫಿಕ್ ಮಹಾಸಾಗರ, ಅಂಟಾರ್ಟಿಕಾ ಮತ್ತು ಹಿಂದೂ ಮಹಾಸಾಗರದಿಂದ ಗೋಚರಿಸುತ್ತದೆ. ಆದರೆ ಭಾರತದಲ್ಲಿ ಗೋಚರಿಸುವುದಿಲ್ಲ. ‘ವಾರ್ಷಿಕ ರಿಂಗ್ ಆಫ್ ಫೈರ್’ಸಮಯದಲ್ಲಿ ಇದು ಭಾರತೀಯ ಮತ್ತು ಪೆಸಿಫಿಕ್ ಸಾಗರಗಳಲ್ಲಿ ಕೆಲವು ಸೆಕೆಂಡುಗಳ ಕಾಲ ಗೋಚರಿಸುತ್ತದೆ. ಸ್ಪೇಸ್ ಡಾಟ್ ಕಾಮ್ ಪ್ರಕಾರ, ಎಕ್ಸ್‌ಮೌತ್, ವೆಸ್ಟರ್ನ್ ಆಸ್ಟ್ರೇಲಿಯಾ, ಟಿಮೋರ್ ಲೆಸ್ಟೆ ಮತ್ತು ವೆಸ್ಟ್ ಪಪುವಾ ಸೇರಿದಂತೆ ಭೂಮಿಯ ಮೇಲಿನ ಮೂರು ಸ್ಥಳಗಳಲ್ಲಿ ಮಾತ್ರ ಸಂಪೂರ್ಣ ಗ್ರಹಣ ಗೋಚರಿಸುತ್ತದೆ. ಈ ಗ್ರಹಣವು ಒಂದು ವಿಧದ ಸೂರ್ಯಗ್ರಹಣವಾಗಿದ್ದು, ಅದು ವಾರ್ಷಿಕ ಸೂರ್ಯಗ್ರಹಣ ಅಥವಾ ಸಂಪೂರ್ಣ ಸೂರ್ಯಗ್ರಹಣದಂತೆ ಕಾಣುತ್ತದೆ. ಇದು ಕೇಂದ್ರ ಗ್ರಹಣದ ಹಾದಿಯಲ್ಲಿ ವೀಕ್ಷಕರ ಸ್ಥಳವನ್ನು ಅವಲಂಬಿಸಿರುತ್ತದೆ. ಸೌರ ಗ್ರಹಣದ ಸಮಯದಲ್ಲಿ,…

Read More

ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್’ನ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ನಿರೀಕ್ಷೆಯಂತೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಅಲಿ ಅವರಿಗೆ ಟಿಕೆಟ್ ನೀಡಲಾಗಿದೆ.‌ ಈ ಕ್ಷೇತ್ರದಲ್ಲಿ ಇನಾಯತ್ ಅಲಿ ಮತ್ತು ಮೊಯ್ದೀನ್ ಬಾವ ನಡುವೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕೊನೆಗೂ ಈ ಸ್ಪರ್ಧೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತ ಇನಾಯತ್ ಅಲಿ ಜಯಗಳಿಸಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಟಿಕೆಟ್ ವಂಚಿತ ಮೊಯ್ದೀನ್ ಬಾವ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ. ಉಳಿದಂತೆ ರಾಯಚೂರು – ಮುಹಮ್ಮದ್ ಷಾ ಆಲಂ, ಶಿಡ್ಲಘಟ್ಟ – ಜಿ.ವಿ. ರಾಜಿವ್ ಗೌಡ, ಸಿವಿ ರಾಮನ್‌ನಗರ ಎಸ್ಸಿ- ಎಸ್. ಆನಂದ್‌ ಕುಮಾರ್, ಅರಕಲಗೂಡು – ಎಚ್.ಪಿ.‌ ಶ್ರೀಧರ ಗೌಡ ಅವರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ.

Read More

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಇದೀಗ ನಾಮಪತ್ರ ಸಲ್ಲಿಕೆಯ ಪರ್ವ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳಲ್ಲಿ ಕೋಟ್ಯಧೀಶ್ವರರೇ ಅಧಿಕ ಮಂದಿ. ನಾಮಪತ್ರದೊಂದಿಗೆ ಅಭ್ಯರ್ಥಿಗಳು ಸಲ್ಲಿಸಿರುವ ಆಸ್ತಿ ವಿವರದ ಅಫಿಡವಿಟ್‌ನಲ್ಲಿ ಮಾಹಿತಿ ಪ್ರಕಾರ ಅಧಿಕ ಮಂದಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಸ್ತಿ ಹೊಂದಿದ್ದಾರೆ. ಹರೀಶ್ ಪೂಂಜ ಆಸ್ತಿ ವಿವರ ಬೆಳ್ತಂಗಡಿಯ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಸ್ವಂತ ಚರಾಸ್ತಿ ಒಟ್ಟು 1,24,46,101 ರೂ. ಹಾಗೂ 1,05,32,500 ರೂ. ಮೌಲ್ಯದ ಚರಾಸ್ತಿಯನ್ನು ಹೊಂದಿದ್ದಾರೆ. ಪತ್ನಿ ಹೆಸರಿನಲ್ಲಿ ಒಟ್ಟು 97,55,280 ರೂ. ಚರಾಸ್ತಿ ಇದ್ದು, ಯಾವುದೇ ಸ್ಥಿರಾಸ್ತಿ ಹೊಂದಿಲ್ಲ. 1,06,29,074 ರೂ. ಸಾಲ ಹೊಂದಿದ್ದರೆ, ಪತ್ನಿ 5 ಲಕ್ಷ ರೂ. ಸಾಲ ಹೊಂದಿದ್ದಾರೆ. ಬರೋಬ್ಬರಿ 2.20 ಲಕ್ಷ ರೂ.ಗಳ ಐಫೋನ್‌ಅನ್ನು ಇರುವ ಹರೀಶ್ ಪೂಂಜಾ ಇನ್ನೋವಾ ಕ್ರಿಸ್ಟಾ, ಇನ್ನೋವಾ, ಸ್ವಿಫ್ಟ್ ಮೋಟಾರ್ ಕಾರ್ ಗಳನ್ನು ಹೊಂದಿದ್ದಾರೆ. 179 ಗ್ರಾಂ ಮೌಲ್ಯದ ಚಿನ್ನ ಇದ್ದರೆ, ಪತ್ನಿ…

Read More

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಸುಳ್ಯ ತಾಲೂಕಿನ ಕಳಂಜ ಗ್ರಾಮದ ಮಣಿಮಜಲು ನಿವಾಸಿ ಯತೀಶ ಮೃತ ಯುವಕ. ಇವರು ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು ಎ. 13 ರಂದು ರಾತ್ರಿ ತಾನಿದ್ದ ರೂಮ್ ನ ಬಳಿ ಮಹಡಿಯಿಂದ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದರೆನ್ನಲಾಗಿದೆ. ಈ ವೇಳೆ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕಳೆದೊಂದು ವಾರದಿಂದ ನೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಿನ್ನೆ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಗಳೂರು:  ಅಪರಿಚಿತ ವ್ಯಕ್ತಿಯೋರ್ವ ಕೋರಿಯರ್ ಕಂಪೆನಿಯವನೆಂದು ನಂಬಿಸಿದ ಲಿಂಕ್ ಕಳುಹಿಸಿ 72,444 ರೂ. ಬ್ಯಾಂಕ್ ಖಾತೆಯಿಂದ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರು ಪಾರ್ಸೆಲ್‌ಗಾಗಿ ಗೂಗಲ್‌ನಲ್ಲಿ ಕೋರಿಯರ್ ಕಂಪೆನಿಯೊಂದರ ಬಗ್ಗೆ ಮಾಹಿತಿ ಹುಡುಕಾಡುತ್ತಿದ್ದಾಗ ಅವರಿಗೆ 9827698553 ಮೊಬೈಲ್ ಸಂಖ್ಯೆ ದೊರೆತಿತ್ತು. ಆ ಸಂಖ್ಯೆಗೆ ಕರೆ ಮಾಡಿದಾಗ ಆತ ಕೊರಿಯರ್ ಕಂಪೆನಿಯೊಂದರಲ್ಲಿ ಕೆಲಸ ಮಾಡಿಕೊಂಡಿರುವುದಾಗಿ ಹೇಳಿ ಲಿಂಕ್‌ವೊಂದನ್ನು ಕಳುಹಿಸಿದ್ದ. ಬಳಿಕ ಗೂಗಲ್ ಪೇನಲ್ಲಿ 5 ರೂ. ಕಳುಹಿಸುವಂತೆ ತಿಳಿಸಿದ. ದೂರುದಾರ ವ್ಯಕ್ತಿ ಹಣ ಪಾವತಿಸಿದರೂ, ಅವರಲ್ಲಿದ್ದ ಪಾರ್ಸೆಲ್ ಕೊಂಡು ಹೋಗಲು ಯಾರೂ ಬಂದಿರಲಿಲ್ಲ.ಎ.15ರಂದು ದೂರುದಾರರ ಬ್ಯಾಂಕ್ ಖಾತೆಗೆ ಪರ್ಸನಲ್ ಲೋನ್ ಮಂಜೂರಾದ ಸಂದೇಶ ಬಂದಿತ್ತು. ಅವರು ಖಾತೆಯನ್ನು ಪರಿಶೀಲಿಸಿದಾಗ 72,444 ರೂ. ಕಡಿತಗೊಂಡಿರುವುದು ಗಮನಕ್ಕೆ ಬಂದಿತ್ತು. ಕೊರಿಯರ್ ಕಂಪೆನಿಯವನೆಂದು ಪರಿಚಯಿಸಿಕೊಂಡ ವ್ಯಕ್ತಿ ಕಳುಹಿಸಿದ ಲಿಂಕ್‌ಗೆ ಬ್ಯಾಂಕ್‌ನ ವಿವರ ನೀಡಿದ್ದರಿಂದ ಮೋಸದಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Read More

ಸುಳ್ಯ: ಜೇನು ತೆಗೆಯುವಾಗ ಮರದಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಏ.18 ರ ಸಂಜೆ ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಕರಿಕೆ ಮೂಲದ ವಿಜಯ್ ಮೃತ ಯುವಕ. ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದರು.   ಈ ವೇಳೆ ವಿಜಯ್ ಜೇನು ತೆಗೆಯುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೆ ಜೊತೆಗಿದ್ದವರು ಅವರನ್ನು ಆಸ್ಪತ್ರೆಗೆ ಸಾಗಿಸಲು ತಯಾರಿಯಲ್ಲಿದ್ದಾಗಲೇ ಆತ ಮೃತಪ್ಪಟ್ಟಿದ್ದರು ಎನ್ನಲಾಗಿದೆ.

Read More

ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್‌ ಬಳಿಯ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜನಾರ್ದನ್‌ ಎಂದು ಗುರುತಿಸಲಾಗಿದೆ. ಜನಾರ್ದನ್‌ ಪೊಳಲಿ ಮೂಲದವರಾಗಿದ್ದು ಡ್ರೈವರ್‌ ವೃತ್ತಿ ನಿರ್ವಹಿಸುತ್ತಿದ್ದರು. ಇವರು ಬಿಜೆಪಿ ಕಾರ್ಯಕರ್ತರಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ. ‘ಮೃತದೇಹದಲ್ಲಿ ಯಾವುದೇ ಗಾಯಗಳು ಪತ್ತೆಯಾಗಿಲ್ಲ. ಜನಾರ್ದನ ಅವರ ಜತೆ ನಾಲ್ವರು ಜಗಳವಾಡಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ

Read More

ಮೈಸೂರು : ನಗರ ಟಿ. ಕೆ ಬಡಾವಣೆಯ ವರುಣ ವಿಧಾನ ಸಭೆ ಕ್ಷೇತ್ರದಲ್ಲಿ ರಾಜಕೀಯ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಾರು ಚಾಲಕ ನಾಪತ್ತೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಾರು ಚಾಲಕ ನಾಪತ್ತೆಯಾಗಿರುವುದನ್ನು ಕಂಡು ತಬ್ಬಿಬ್ಬಾಗಿದ್ದು, ಕಾರು ಬಿಟ್ಟು ಸಿದ್ದರಾಮಯ್ಯ ಮಗ ಯತೀಂದ್ರ ಕಾರಿನಲ್ಲಿ ಪ್ರಯಾಣ ಮಾಡಿದ್ದಾರೆ. ಸಭೆಯೂ ತುಂಬ ಸಮಯ ಇರಬಹುದೆಂದು ಕಾರು ಚಾಲಕ ಎಲ್ಲೋ ಹೋದ ಕಾರಣದಿಂದಾಗಿ ಸಿದ್ದರಾಮಯ್ಯ ಕಾರು ಚಾಲಕನನ್ನು ಕಾದು ಕಾದು ಸುಸ್ತಾಗಿದ್ದಾರೆ. ಅಲ್ಲಿದ್ದ ಸ್ಥಳೀಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದೀಗ ಸುದ್ದಿ ಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಕಡಬ: ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನೆಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Read More

ಮಂಗಳೂರು: ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದ ಮೇಲೆ ಕೇವಲ ತುಳುನಾಡಿನ ಇಬ್ಬರು ಮುಖ್ಯ ಮಂತ್ರಿಗಳನ್ನು ಹೊರತು ಪಡಿಸಿ ಬಹುತೇಕ ಬೇರೆಯವರಿಗೇ ಸ್ಥಾನ ಮಾನ ದೊರಕಿದೆ.ಹಾಗೂ ತುಳುನಾಡಿಗೆ ಯಾವುದೇ ಸಹಕಾರ ದೊರಕಿರುವುದಿಲ್ಲ ಹಲವಾರು ಸಮಯದ ಈ ಕೆಳಗಿನ ಬೇಡಿಕೆಗಳು ಇದುವರೆಗೆ ಈಡೇರದೇ ಇರುವುದು ವಿಪರ್ಯಾಸವೇ ಸರಿ.ಈ ಹಿನ್ನೆಲೆ ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಯೋಗೀಶ್‌ ಶೆಟ್ಟಿ ಜಪ್ಪು ರವರು ತುಳುನಾಡಿನಲ್ಲಿ ಆಯ್ಕೆಯಾದ ಶಾಸಕರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿ ಎಂದರು. ಹಲವಾರು ಸಮಯಗಳಿಂದ ಇಟ್ಟುಕೊಂಡು ಬಂದತುಳುವರ ಬೇಡಿಕೆಗಳನೆಂದರೆ :1. ತುಳುನಾಡಿನಲ್ಲಿ ಆಯ್ಕೆಯಾದಜನಪ್ರತಿನಿಧಿಗಳು ತುಳುವಪ್ಪೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಬೇಕು.2. ತುಳು ಭಾಷೆಯನ್ನುರಾಜ್ಯದ ಅಧಿಕೃತ ಎರಡನೇ ಭಾಷೆಯಾಗಿ ಘೋಷಿಸುವುದು.3. ತುಳು ಭಾಷೆಯನ್ನುಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವುದು.4. ಮಂಗಳೂರಿನಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ5. ತುಳುನಾಡು ಅಭಿವೃದ್ಧಿ ಪ್ರಾಧಿಕಾರ ರಚನೆ6. ಕಚೇರಿ, ಕೋರ್ಟುಗಳಲ್ಲಿ ತುಳು ಭಾಷೆಗೆ ಪ್ರಾಧಾನ್ಯತೆ7. ತುಳುನಾಡಿಗೆ ಪ್ರತ್ಯೇಕ ಹೈಕೋರ್ಟು ಪೀಠ ಸ್ಥಾಪನೆ8. ತುಳುನಾಡಿನ ಜನಪದಕಲಾವಿದರಿಗೆ ಮಾಶಾಸನ ನೀಡುವುದು9. ತುಳುನಾಡಿನ ಜಾತಿ, ಮತ, ಭಾಷಾ ಸಾಮರಸ್ಯಕ್ಕೆಒತ್ತುಕೊಡುವುದು10.…

Read More