ಪಡುಬಿದ್ರಿ: ಒಂದೇ ದಿನ ಒಂದೇ ಮನೆಯಲ್ಲಿ ತಂದೆ ಮತ್ತು ಮಗ ಮೃತಪಟ್ಟ ಘಟನೆ ನಡೆದಿದೆ. ಪಡುಬಿದ್ರಿ ಕಂಚಿನಡ್ಕದ ಸಂಜೀವ(72) ಹಾಗೂ ಅವರ ಪುತ್ರ ಉದಯ (45) ಒಂದೇ ದಿನ ಸಾವನ್ನಪ್ಪಿದ ಅಪರೂಪದ ಘಟನೆ ನಡೆದಿದೆ. ಸಂಜೀವ ಹಾಗೂ ಉದಯ್ ಅವರು ಚಾಲಕರಾಗಿ ಕೆಲಸ ಮಾಡುತ್ತಿದ್ದರು.ಸಂಜೀವ ಅವರು 40 ವರ್ಷ ಹಾಗೂ ಉದಯ 20 ವರ್ಷ ಚಾಲಕರಾಗಿ ದುಡಿದಿದ್ದರು. ಸಂಜೀವ್ ಅವರು ಕೆಲವು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಹಾಸಿಗೆ ಹಿಡಿದಿದ್ದರು. ಉದಯ ಕೆಲವು ದಿನಗಳ ಹಿಂದೆ ಜ್ವರದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ನಿಧನರಾಗಿದ್ದರು. ಅವರ ಅಂತ್ಯ ಸಂಸ್ಕಾರ ಪೂರ್ಣಗೊಂಡ ಬಳಿಕ ಹಾಸಿಗೆ ಹಿಡಿದಿದ್ದ ಸಂಜೀವ ಅವರೂ ಸಾವನ್ನಪ್ಪಿದ್ದಾರೆ. ಬಡತನದಲ್ಲಿ ಜೀವಿಸುತ್ತಿದ್ದ ಈ ಕುಟುಂಬಕ್ಕೆ ಇಬ್ಬರ ಅಗಲಿಕೆ ದೊಡ್ಡ ಆಘಾತವನ್ನು ನೀಡಿದೆ.
Author: main-admin
ಸುಳ್ಯ;ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಎಡಮಂಗಲ ಗ್ರಾಮದ ಕೊಳಂಬೆ ಶಿವರಾಮ ವಿರುದ್ಧ ಕೇಸ್ ದಾಖಲಾಗಿದೆ. ಶಿವರಾಮ್ ಎಂಬಾತ ಬಾಲಕಿ ಮನೆಯಲ್ಲಿ ಒಬ್ಬಳೆ ಇದ್ದ ಸಂದರ್ಭ ಮನೆಯೊಳಗೆ ನುಗ್ಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಶಿವರಾಮ ವಿರುದ್ಧ ಇದೀಗ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ರಕ್ಷಿತ್ ಶಿವರಾಂ ರೋಡ್ ಶೋ ನಡೆಸಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಂತರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರು: ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಅವರ ನೂತನ ಚುನಾವಣಾ ಕಚೇರಿಯನ್ನು ಏಪ್ರಿಲ್ 17 ಸೋಮವಾರ ಕದ್ರಿ-ನಂತೂರು ರಸ್ತೆಯಲ್ಲಿರುವ ಒರೇನಿಯ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು. ಪಕ್ಷದ ಕಾರ್ಯಕರ್ತರಾದ ಪದ್ಮನಾಭ್ ಅಮೀನ್, ಸದಾಶಿವ ಅಮೀನ್ ಅವರು ಇತರ ಗಣ್ಯರೊಂದಿಗೆ ದೀಪ ಬೆಳಗಿಸಿ ವಿಧ್ಯುಕ್ತವಾಗಿ ಉದ್ಘಾಟಿಸಿದರು.ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಸ್.ಮಸೂದ್ ಮಾತನಾಡಿ, ಜೆ.ಆರ್.ಲೋಬೊ ಅವರನ್ನು ಶಾಸಕರನ್ನಾಗಿ ಮಾಡಲು ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸಬೇಕು, ಜಾತಿ, ಧರ್ಮದ ಭೇದವಿಲ್ಲದೆ ಲೋಬೊ ಅವರ ಗೆಲುವಿಗೆ ಎಲ್ಲರೂ ಅವಿರತವಾಗಿ ಶ್ರಮಿಸಬೇಕು ಎಂದರು.ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ, ಸಂವಿಧಾನ ಉಳಿಸಲು ಹಾಗೂ ಸಮಾಜದಲ್ಲಿ ಶಾಂತಿ-ಕಾನೂನು ಸುವ್ಯವಸ್ಥೆ ಕಾಪಾಡಲು ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು, ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಜನರು ಚುನಾವಣೆಯಲ್ಲಿ ಆದ್ಯತೆ ನೀಡಬೇಕು ಎಂದರು. ನಗರದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳಿದ್ದರೂ ಯುವಕರು ಉದ್ಯೋಗದಿಂದ ವಂಚಿತರಾಗಿದ್ದಾರೆ. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ಮತ್ತು ಅಭಿವೃದ್ಧಿಗಾಗಿ ಜನರು ಬದಲಾವಣೆ ತಂದು ರಾಜ್ಯದಲ್ಲಿ ಉತ್ತಮ ಸರ್ಕಾರವನ್ನು ಆಯ್ಕೆ ಮಾಡಬೇಕು ಎಂದರು. ಪಂಡಿತ್ ವಿಶ್ವನಾಥ…
ಮಂಗಳೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿದ್ದ ಕುಖ್ಯಾತ ಅಂತರ್ ಜಿಲ್ಲಾ ಮನೆ ಕಳ್ಳತನದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಗರದ ಮೇಟಗಳ್ಳಿ ಮೂಲದ ಸಿದ್ಧರಾಜು@ ಮೂರ್ತಿ (52) ಬಂಧಿತ ಆರೋಪಿ. ಬಂಧಿತನಿಂದ ಕಳವು ಮಾಡಿದ ಸುಮಾರು ರೂ 15,00,000/- ಮೌಲ್ಯದ 20 ಗ್ರಾಂ ಚಿನ್ನಾಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಹೀರೋ ಹೋಂಡಾ ಸ್ನೇಂಡರ್ ಪ್ಲಸ್ ಮೋಟಾರ್ ಸೈಕಲ್ ಹಾಗೂ 2 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನದ ಮತ್ತು ಉಡುಪಿ ಜಿಲ್ಲೆಯ ಮಣಿಪಾಲ, ಕಾರ್ಕಳ, ಶಿವಮೊಗ್ಗ ಜಿಲ್ಲೆಯ ಆಗುಂಬೆ, ತೀರ್ಥಹಳ್ಳಿ, ಮಾಲೂರು, ಕಾರ್ಗಲ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನ ಕಳ್ಳತನ ಮಾಡಿ ಚಿನ್ನಾಭರಣಗಳನ್ನು ಕಳವು ಮಾಡಿದ್ದಾನೆ. ಆರೋಪಿತನು ಮಂಗಳೂರು ನಗರ, ಉಡುಪಿ ಜಿಲ್ಲೆಯ ಮಣಿಪಾಲ ಮತ್ತು ಕಾರ್ಕಳ ಪೊಲೀಸ್ ಠಾಣೆಯ ಒಟ್ಟು 2 ಪ್ರಕರಣಗಳು, ಶಿವಮೊಗ್ಗ ಜಿಲ್ಲೆ ಅಗುಂಬೆ,…
ಮಂಜೇಶ್ವರಂ ರೈಲು ನಿಲ್ದಾಣದಲ್ಲಿ ಹಳಿ ಮೇಲೆ ರೈಲಿಗೆ ಸಿಲುಕಿ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಟಿಯಾನ್ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಮಂಜೇಶ್ವರಂ ಪೊಲೀಸ್ ಠಾಣೆ ಅಥವಾ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ಮಂಜೇಶ್ವರಂ ಪೊಲೀಸ್ ಠಾಣೆ ದೂರವಾಣಿ: 9497 928800 SHO (ಮಂಜೇಶ್ವರಂ): 9497 947263 ದೂರವಾಣಿ : 9497 98 O92
ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಇಂದ್ರಾಳಿಯಲ್ಲಿ ಇಂದು ನಸುಕಿನ ವೇಳೆ 1:30ರ ಸುಮಾರಿಗೆ ನಡೆದಿದೆ. ಕಾರು ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರಿಗೆ ಸೇರಿದ್ದಾಗಿದ್ದು, ಅವರು ನಿನ್ನೆ ರಾತ್ರಿ ಕೋಲ ಮುಗಿಸಿ ತನ್ನ ರಿಟ್ಸ್ ಕಾರಿನಲ್ಲಿ ಮಣಿಪಾಲ ಕಡೆಯಿಂದ ಉಡುಪಿ ಕಡೆ ಬರುತ್ತಿದ್ದರು. ಈ ವೇಳೆ ಕಾರಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಇಳಿದ ಮುರಳಿಧರ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದರು. ಆದರೆ ಬೆಂಕಿಯು ಇಡೀ ಕಾರಿಗೆ ವಿಸ್ತರಿಸಿದ್ದು, ಕೂಡಲೇ ಇವರು ಕಾರಿನಿಂದ ಇಳಿದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಬೆಂಕಿಯಿಂದ ಇಡೀ ಕಾರು ಹೊತ್ತಿ ಭಸ್ಮ ವಾಯಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಇದರಿಂದ ಲಕ್ಷಾಂತರ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
ಶಿಕ್ಷಕಲಿರು ತಾವು ಕಲಿಸುತ್ತಿರುವ ಶಾಲೆಯ ವಿಧ್ಯಾರ್ಥಿಗಳೊಂದಿಗೆ ಲೈಂಗಿಕ ಸಂಪರ್ಕಹೊಂದಿದ ಆರೋಪದ ಮೇಲೆ 6 ಮಂದಿಯನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಎಮಿಲಿ ಹ್ಯಾನ್‌ಕಾಕ್ (26), ಹೀದರ್ ಹೇರ್ (32), ಎಲೆನ್ ಶೆಲ್ (38), ಕ್ರಿಸ್ಟನ್ ಗ್ಯಾಂಟ್ (36), ಅಲಿಹ್ ಖೇರಾಡ್‌ಮಂಡ್ (33), ಹನ್ನಾ ಮಾರ್ತ್ (26) ಎನ್ನಲಾಗಿದ್ದು, ಕಳೆದ ಎರಡು ದಿನಗಳಲ್ಲಿ ಈ ಆರು ಮಂದಿ ಶಿಕ್ಷಕಿಯರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ.ಈ ಶಿಕ್ಷಕಿಯರು ವಿವಿಧ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದರು. ತಾವು ಕೆಲಸ ಮಾಡುವ ಶಾಲೆಗಳಲ್ಲಿ 15 ರಿಂದ 16 ವರ್ಷದೊಳಗಿನ ಬಾಲಕರೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ಪೋಷಕರು ಶಾಲೆಯ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಬಳಿಕ ಶಾಲೆಯ ಮುಖ್ಯಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಬಂಧನಕ್ಕೆ ಒಳಗಾಗಿರುವ ಶಿಕ್ಷಕಿಯರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಶಿಕ್ಷಕಿಯರು ವಿದ್ಯಾರ್ಥಿಗಳೊಂದಿಗೆ ಸಂಬಂಧ ಹೊಂದಿದ್ದರು ಎಂಬುದು ದೃಢಪಟ್ಟಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಂಗಳೂರು: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಎಪ್ರಿಲ್ 15 ರ ಶನಿವಾರ ರಾತ್ರಿ ನಿದ್ದೆಯ ಮಂಪರಿನಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದ್ದು, ಬಾವಿಗೆ ಬಿದ್ದಿರುವ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಕಲ್ಲಾಪು ನಿವಾಸಿ ವಾಲ್ಟರ್ ಮೊಂತೇರೊ (65) ಮೃತ ವ್ಯಕ್ತಿ.ಶನಿವಾರ ಸಂಜೆ ತೊಕ್ಕೊಟ್ಟು ಚರ್ಚ್‌ಗೆ ಹೋಗಿದ್ದ ಅವರು ಸಂಜೆ 7 ಗಂಟೆ ಸುಮಾರಿಗೆ ಮನೆಗೆ ಮರಳಿದ್ದರು. ರಾತ್ರಿ 7.23ರ ಸುಮಾರಿಗೆ ಬಾವಿಯ ಕಟ್ಟೆಯ ಮೇಲೆ ಕುಳಿತಿದ್ದ ವಾಲ್ಟರ್ ಅವರು ಅಲ್ಲೆ ನಿದ್ದೆಗೆ ಜಾರಿ ಬಾವಿಗೆ ಬಿದ್ದಿದ್ದಾರೆ. ಬಾವಿ ಆಳವಿಲ್ಲದ ಕಾರಣ ಕುಟುಂಬಸ್ಥರು ಕೂಡಲೇ ಏಣಿಯ ಮೂಲಕ ಅವರನ್ನು ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತಲೆಗೆ ಬಲವಾದ ಗಾಯ ಆಗಿದ್ದರಿಂದ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮಂಗಳೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿ ಅವರ ನಗರದ ಮನೆ ಮತ್ತು ಕಚೇರಿಗೆ ಶನಿವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಚಿಕ್ಕಮಗಳೂರು ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಆಗಿರುವ ವಿವೇಕ್ ರಾಜ್, ಅವರ ಮನೆಗೆ 2 ಕಾರಿನಲ್ಲಿ ಬಂದಿರುವ 8 ಮಂದಿ ಅಧಿಕಾರಿಗಳ ತಂಡ ವಿವೇಕ್ ರಾಜ್ ಅವರ ನಿವಾಸ ಹಾಗೂ ಕಚೇರಿಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿವೇಕ್ ರಾಜ್ ಪೂಜಾರಿ ಅವರು, “ಚಿಕ್ಕಮಗಳೂರಿನ ಚುನಾವಣಾ ಉಸ್ತುವಾರಿ ಹಿನ್ನಲೆ ನನ್ನ ಮನೆಗೆ ಐಟಿ ದಾಳಿ ನಡೆಸಲಾಗಿದೆ. ನನ್ನ ವ್ಯವಹಾರದ ದಾಖಲೆಪತ್ರಗಳು ಸಮರ್ಪಕವಾಗಿದ್ದು ತೆರಿಗೆ ವಂಚಿಸಿ ವ್ಯವಹರಿಸುವುದಿಲ್ಲ. ದುರುದ್ದೇಶಪೂರಿತವಾಗಿ ನನ್ನ ಮನೆಗೆ ಐಟಿ ದಾಳಿ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ










