Author: main-admin

ಪೆರೋಲ್ ಮೇಲೆ ಬಂದು ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಬೆಂಗಳೂರಿನ ಮಡಿವಾಳ ಪೊಲೀಸರು 15 ವರ್ಷಗಳ ಬಳಿಕ ಇದೀಗ ಬೆಳ್ತಂಗಡಿಯಲ್ಲಿ ಬಂಧಿಸಿದ ಘಟನೆ ನಡೆದಿದೆ. ಸುಹೇಲ್ ಅಲಿಯಾಸ್ ಮೊಹಮ್ಮದ್ ಅಯಾಜ್ ಬಂಧಿತ ಆರೋಪಿಯಾಗಿದ್ದಾನೆ. 2007 ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಪೆರೋಲ್ ಮೇಲೆ ತೆರಳಿದ್ದ ಅಸಾಮಿ, 30 ದಿನಗಳ ಪೆರೋಲ್ ಮೇಲೆ ಹೋಗಿದ್ದ ಬಳಿಕ ಬೆಳ್ತಂಗಡಿಯಲ್ಲಿ ತಲೆಮರೆಸಿಕೊಂಡಿದ್ದ ಬೆಳ್ತಂಗಡಿಯಲ್ಲಿ ಮಹಮ್ಮದ್ ಅಯಾಜ್ ಎಂದು ಹೆಸರು ಬದಲಿಸಿಕೊಂಡು ವಾಸಿಸುತ್ತಿದ್ದ ಈತ, ಆಯುರ್ವೇದಿಕ್ ಮೆಡಿಸಿನ್ ಬಿಜಿನೆಸ್ ಮಾಡಿಕೊಂಡಿದ್ದ. ಸುಹೇಲ್ ಕೊಲೆ, ಕಳವು, ಸುಲಿಗೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ.  ಇದೀಗ ಆರೋಪಿಯನ್ನು ಮತ್ತೆ ಬಂಧಿಸಿದ  ಮಡಿವಾಳ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

Read More

ಮಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಹೊಸವರ್ಷ ಬರಲಿದ್ದು, ಇದೀಗ ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದವರ ಮೇಲೆ ಹಿಂದೂ ಸಂಘಟನೆಗಳ ಕಣ್ಣು ಬಿದ್ದಿದ್ದು, ಹೊಸ ವರ್ಷದ ಪಾರ್ಟಿಗಳನ್ನು ನಿಲ್ಲಿಸಲು ಮಂಗಳೂರು ಪೊಲೀಸರಿಗೆ ಭಜರಂಗದಳ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ. ಹೊಸ ವರ್ಷದ ಹೆಸರಲ್ಲಿ ಪಬ್, ಹೊಟೇಲ್, ಸಾರ್ವಜನಿಕ ಸ್ಥಳಗಳಲ್ಲಿ ಆಯೋಜಿಸುವ ಪಾರ್ಟಿಗಳಲ್ಲಿ ಲವ್‌ ಜಿಹಾದ್‌ ಬಗ್ಗೆ ಭಜರಂಗದಳ ಕಿಡಿಕಾರಿದೆ. ಡ್ರಗ್ಸ್‌ ಮತ್ತು ಸೆಕ್ಸ್ ಮಾಫಿಯಾಗಳಲ್ಲಿ ಕೇರಳದ ಅನ್ಯಕೋಮಿನ ಯುವಕರ ಭಾಗಿಯಾಗುತ್ತಾರೆ ಎಂಬ ಆರೋಪ ಕೇಳಿಬಂದಿದ್ದು, ನ್ಯೂ ಇಯರ್‌ ಪಾರ್ಟಿಗಳಿಗೆ ನಿರ್ಬಂಧ ಹೇರುವಂತೆ ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ. ಹೊಸ ವರ್ಷಾಚರಣೆಗೆ ನೈತಿಕ ಪೊಲೀಸ್‌ಗಿರಿಯ ಕರಿನೆರಳು ಬೀಳುವ ಸುಳಿವಿನ ಬೆನಲ್ಲೇ ಮಂಗಳೂರು ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಸಿಆರ್‌ಪಿಸಿ 107 ಅಸ್ತ್ರ ಪ್ರಯೋಗಿಸಿದ್ದಾರೆ. ಭಜರಂಗದಳ ಸೇರಿ ಹಿಂದೂ ಪರ ಸಂಘಟನೆಗಳ ಪ್ರಮುಖರಿಗೆ ನೋಟಿಸ್ ನೀಡಿದ್ದಾರೆ. ಭಜರಂಗದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಸೇರಿ ಕೆಲ ನಾಯಕರು ಹಾಗೂ ಕಾರ್ಯಕರ್ತರಿಗೆ ಪೊಲೀಸರು ನೋಟಿಸ್ ನೀಡಿದ್ದು, ಸಿಆರ್‌ಪಿಸಿ 107ರ…

Read More

ಚೀನಾದ ಪ್ರಸ್ತುತ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗುವ ಕೋವಿಡ್ ತಳಿಯಾದ ಒಮಿಕ್ರಾನ್ ಉಪ-ರೂಪಾಂತರ ಬಿಎಫ್ .7 ರ ಕನಿಷ್ಠ ನಾಲ್ಕು ಪ್ರಕರಣಗಳು ಭಾರತದಲ್ಲಿ ಈವರೆಗೆ ಪತ್ತೆಯಾಗಿವೆ ಎನ್ನಲಾಗಿದೆ. ಇಲ್ಲಿಯವರೆಗೆ, ಗುಜರಾತ್ನಿಂದ ಎರಡು, ಒಡಿಶಾದಿಂದ ಎರಡು ಪ್ರಕರಣಗಳು ವರದಿಯಾಗಿವೆ, ಇದರಲ್ಲಿ ಬಿಎಫ್.7 ರೂಪಾಂತರವನ್ನು ಪತ್ತೆಹಚ್ಚಲಾಗಿದೆ. ಚೀನಾ ಸಹಿತ ವಿದೇಶಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್‌ ನ ರ್ಯಾಂಡಮ್ ಪರೀಕ್ಷೆಗೆ ಸೂಚನೆ ನೀಡಲಾಗಿದೆ. ವಿಶ್ವದ ಕೆಲವು ಭಾಗಗಳಲ್ಲಿ ಇತ್ತೀಚಿನ ಪ್ರಕರಣಗಳ ಉಲ್ಬಣ ಗಮನದಲ್ಲಿಟ್ಟುಕೊಂಡು ಅಂತಾರರಾಷ್ಟ್ರೀಯ ಪ್ರಯಾಣಿಕರಿಗೆ ರ್ಯಾಂಡಮ್ ಮಾದರಿ ಪರೀಕ್ಷೆಯನ್ನು ವಿಮಾನ ನಿಲ್ದಾಣಗಳಲ್ಲಿ ನಡೆಸಲಾಗುವುದು ಎಂದು ಹೇಳಲಾಗಿದೆ. ಪ್ರಸುತ್ತ ದೇಶದಲ್ಲಿ ಒಮಿಕ್ರಾನ್ ಸಬ್‌ವೇರಿಯಂಟ್ BF.7 ನ ಮೂರು ಪ್ರಕರಣಗಳು ಪತ್ತೆಯಾಗಿದೆ. ಎಲ್ಲರಿಗೂ ಎಚ್ಚರಿಕೆ ವಹಿಸುವಂತೆ ಮತ್ತು ಕಣ್ಗಾವಲು ಬಲಪಡಿಸಲು ನಾನು ನಿರ್ದೇಶನ ನೀಡಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿರ್ವಹಿಸಲು ನಾವು ಸಿದ್ಧರಿದ್ದೇವೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

Read More

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಅಫಜಲಪುರದ ದೇಸಾಯಿ ಕಲ್ಲೂರ ನಿವಾಸಿ ಕುಪೇಂದ್ರ ಬಾಸಗಿ ಬಂಧಿತ ಆರೋಪಿ. ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ಗೆ ಕುಪೇಂದ್ರ ಬಾಸಗಿ ಅಭ್ಯರ್ಥಿಗಳನ್ನು ಪರಿಚಯಿಸುತ್ತಿದ್ದ. ಈಗಾಗಲೇ ಪಿಎಸ್‌ಐ ಹಗರಣದಲ್ಲಿ ಬಂಧಿತಳಾಗಿರುವ ಸುಪ್ರಿಯಾಳನ್ನು ಆರ್.ಡಿ. ಪಾಟೀಲ್ ಗೆ ಪರಿಚಯಿಸಿದ್ದ. ಸುಪ್ರಿಯಾ ಪಿಎಸ್‌ಐ ಹುದ್ದೆ ಲಿಖಿತ ಪರೀಕ್ಷೆಯಲ್ಲಿ ಅಕ್ರಮವಾಗಿ ಬ್ಲುಟೂಥ್ ಬಳಸಿ ಪರೀಕ್ಷೆ ಬರೆದಿದ್ದಳು.

Read More

ನವದೆಹಲಿ: ಚೀನಾದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗಿರುವ ಒಮಿಕ್ರಾನ್ ರೂಪಾಂತರ BF.7 ನ ಮೂರು ಪ್ರಕರಣಗಳು ಇಲ್ಲಿಯವರೆಗೆ ಭಾರತದಲ್ಲಿ ಕಂಡುಬಂದಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗುಜರಾತ್ ಬಯೋಟೆಕ್ನಾಲಜಿ ಸಂಶೋಧನಾ ಕೇಂದ್ರವು ಅಕ್ಟೋಬರ್‌ನಲ್ಲಿ ಭಾರತದಲ್ಲಿ ಮೊದಲ BF.7 ಪ್ರಕರಣವನ್ನು ಕಂಡುಹಿಡಿದಿದೆ. ಗುಜರಾತ್‌ನಲ್ಲಿ ಎರಡು ಮತ್ತು ಒಡಿಶಾದಲ್ಲಿ ಒಂದು ಪ್ರಕರಣ ವರದಿಯಾಗಿದೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಪರಿಶೀಲನಾ ಸಭೆ ನಡೆಸಿದ್ದರು. ಈ ವೇಳೆ ಸದ್ಯಕ್ಕೆ ಕೋವಿಡ್ ಪ್ರಕರಣಗಳಲ್ಲಿ ಯಾವುದೇ ಹೆಚ್ಚಳವಿಲ್ಲ, ಅಸ್ತಿತ್ವದಲ್ಲಿರುವ ಮತ್ತು ಉದಯೋನ್ಮುಖ ರೂಪಾಂತರಗಳ ಜಾಡನ್ನು ಇರಿಸಲು ನಿರಂತರ ಕಣ್ಗಾವಲು ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ ಎನ್ನಲಾಗುತ್ತಿದೆ. ಚೀನಾದಲ್ಲಿ ಒಮಿಕ್ರಾನ್ ಸಬ್ ವೇರಿಯೆಂಟ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಬೀಜಿಂಗ್‌ನಲ್ಲಿ ಅಧಿಕ ಸಂಖ್ಯೆ ಕೇಸ್ ಗಳು ಪತ್ತೆಯಾಗುತ್ತಿವೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಮೈಸೂರು, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಐವರು ಐಪಿಎಸ್ ಅಧಿಕಾರಿಗಳನ್ನು ( IPS Officer ) ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಮೈಸೂರು ಎಸ್ಪಿಯಾಗಿದ್ದಂತ ಆರ್ ಚೇತನ್ ಅವರನ್ನು ಇಂಟೆಲಿಜೆನ್ಸಿ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಇನ್ನೂ ಬೆಂಗಳೂರು ಕ್ರೈಂ ವಿಭಾಗದ ಎಐಜಿಪಿ ಸೀಮ ಲೇಟ್ಕರ್ ಅವರನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಮೈಸೂರಿನ ಇಂಟಲಿಜೆನ್ಸಿ ಎಸ್ಪಿಯಾಗಿದ್ದಂತ ಮುತುರಾಜು ಎಂ ಎವರನ್ನು ಮೈಸೂರು ನಗರ ಲಾ ಅಂಡ್ ಆರ್ಡರ್ ವಿಭಾಗಡ ಡಿಸಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಲೋಕಾಯುಕ್ತ ಎಸ್ಪಿಯಾಗಿದ್ದಂತ ಬಾಬಾಸಾಬ್ ನೇಮಗೌಡ ಅವರನ್ನು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಶಿವಪ್ರಕಾಶ್ ದೇವರಾಜು ಅವರನ್ನು, ಬೆಂಗಳೂರಿನ ಕ್ರೈ ವಿಭಾಗದ ಎಐಜಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

Read More

ಬಂಟ್ವಾಳ: ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ಗುಂಡಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಸೊಪ್ಪು ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯ ನಿವಾಸಿಗಳಿಗೆ ಮೊಬೈಲ್ ಪತ್ತೆಯಾಗಿದೆ. ಇದನ್ನು ಗಮನಿಸಿ ಅಕ್ಕಪಕ್ಕದ ನೋಡಿದ ಸಂದರ್ಭದಲ್ಲಿ ಮೃತದೇಹ ಪತ್ತೆಯಾಗಿದ್ದು, ಭಯಗೊಂಡು ಓಡಿಹೋಗಿದ್ದಾರೆನ್ನಲಾಗಿದೆ. ಪಕ್ಕದಲ್ಲಿರುವ ಮರದಲ್ಲಿ ಹಗ್ಗವೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದ್ದು, ಕೊಳೆತು ಅಸ್ಥಿಪಂಜರ ಮಾತ್ರ ಕಾಣುತ್ತಿದ್ದು ಸತ್ತು ಹಲವು ಸಮಯ ಕಳೆದಿದೆ ಎನ್ನಲಾಗಿದೆ.

Read More

ಮಂಗಳೂರು; 8ನೇ ತರಗತಿಯ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ. ನಗರದ ಖಾಸಗಿ ಶಾಲೆಯೊಂದರ 8ನೇ ತರಗತಿಯ ವಿದ್ಯಾರ್ಥಿ ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಯಾವಾಗಲೂ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.ಇದು ಶಿಕ್ಷಕರಿಗೂ ತಿಳಿದು ಶಿಕ್ಷಕರು ಎಚ್ಚರಿಕೆ ನೀಡಿದ್ದರು. ನಿನ್ನೆ ಕೂಡ ವಿದ್ಯಾರ್ಥಿಗಳ ಗಲಾಟೆ ಮಾಡಿಕೊಂಡಿದ್ದು, 9ನೇ ತರಗತಿಯ ವಿದ್ಯಾರ್ಥಿಗಳು ಮೊದಲು 8ನೇ ತರಗತಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದರು.ಇದಲ್ಲದೆ ವಿದ್ಯಾರ್ಥಿ ಸಂಜೆ ಶಾಲೆ ಬಿಟ್ಟ ಬಳಿಕ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.ಈ ವೇಳೆ ಅಲ್ಲಿದ್ದ ಜನರು ತಡೆದಿದ್ದಾರೆ. ಗಾಯಗೊಂಡ ವಿದ್ಯಾರ್ಥಿಯನ್ನು ವೆನ್ಲಾಕ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಈ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ನೇಮಕಾತಿ ಹಗರಣ ಬಯಲಿಗೆ ಬಂದಿದ್ದು, ನಕಲಿ ದಾಖಲೆ ಸೃಷ್ಟಿಸಿ ಅನುಕಂಪದ ಆಧಾರದ ಮೇಲೆ ಬೆಸ್ಕಾಂ ಇಲಾಖೆಯಲ್ಲಿ ಉದ್ಯೋಗ ಪಡಿದಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದಲ್ಲಿ ಅನುಕಂಪ ಆಧಾರದ ಮೇಲೆ ನಕಲಿ ದಾಖಲೆ ಸೃಷ್ಟಿಸಿ ಬೆಸ್ಕಾಂನಲ್ಲಿ ಉದ್ಯೋಗ ಪಡೆದಿದ್ದ ಆರೋಪದಡಿ ಬೆಸ್ಕಾಂ ಇಂಜಿನಿಯರ್ ಸೇರಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗ ಕೋಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಅನುಕಂಪದ ಆಧಾರದಲ್ಲಿ ಹುದ್ದೆ ಪಡೆಯಲು ನಕಲಿ ದಾಖಲೆ ಸೃಷ್ಟಿ 6 ಜನ ಹುದ್ದೆ ಪಡೆದಿದ್ದ ಪ್ರಕರಣವನ್ನು ಬಯಲು ಮಾಡಿದ್ದಾರೆ. ಎಲ್‌.ರವಿ, ಪ್ರೇಮ್ ಕುಮಾರ್, ಶಾಂತಮಲ್ಲಪ್ಪ, ವಿರೇಶ್, ರಘು ಕಿರಣ್, ಹರೀಶ್, ಶಿವಪ್ರಸಾದ್​ ನನ್ನು ಪೊಲೀಸರು ಬಂಧಿಸಿದ್ದಾರೆ.

Read More

ಪ್ರೀತಿಯ ಸಂಕೇತ ಎಂದು ಕರೆಯುವ ತಾಜ್‌ಮಹಲ್‌ಗೆ ಸಂಕಷ್ಟ ಬಂದಿದೆ. ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್ ತಾಜ್ ಮಹಲ್‌ಗೆ ಮನೆ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿದೆ. 1.9 ಕೋಟಿ ನೀರಿನ ತೆರಿಗೆ, ರೂ. 1.5 ಲಕ್ಷ ಆಸ್ತಿ ತೆರಿಗೆ ಬಿಲ್ ಪಾವತಿಸುವಂತೆ ಆಗ್ರಾ ಪುರಸಭೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. 15ರೊಳಗೆ ಬಾಕಿ ಪಾವತಿಸದಿದ್ದರೆ ತಾಜ್ ಮಹಲ್ ಸೀಜ್‌ ಮಾಡುವುದಾಗಿ ಪುರಸಭೆ ಅಧಿಕಾರಿಗಳು ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಪಾಲಿಕೆ ಅಧಿಕಾರಿಗಳು ನೀಡಿದ ಈ ನೋಟಿಸ್ ನೋಡಿ ಪುರಾತತ್ವ ಸರ್ವೇಕ್ಷಣಾ ಇಲಾಖೆ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ತಾಜ್ ಮಹಲ್ ಕಲಾತ್ಮಕ ಹಾಗೂ ಐತಿಹಾಸಿಕ ಕಟ್ಟಡವಾಗಿದ್ದು, ಇದಕ್ಕೆ ಮನೆ ತೆರಿಗೆ ಕಟ್ಟುವುದೇನು ಎಂದು ಅಚ್ಚರಿ ವ್ಯಕ್ತಪಡಿಸಿದರು. ಈ ರೀತಿಯ ನೋಟಿಸ್ ಬರುತ್ತಿರುವುದು ಇದೇ ಮೊದಲು ಅಂತಿದಾರೆ. ಈ ಕುರಿತು ಎಎಸ್‌ಐ ಸೂಪರಿಂಟೆಂಡೆಂಟ್ ರಾಜ್‌ಕುಮಾರ್ ಪಟೇಲ್ ಮಾತನಾಡಿ, ತಾಜ್ ಮಹಲ್‌ಗೆ ಎರಡು ನೋಟೀಸ್ ಬಂದಿದ್ದು, ಒಂದು ನೀರಿನ ತೆರಿಗೆ ಮತ್ತು ಎರಡು ಆಸ್ತಿ ತೆರಿಗೆ ಬಗ್ಗೆ. ನೋಟಿಸ್ ಗಳಲ್ಲಿ ಒಟ್ಟು 1.9 ಕೋಟಿ…

Read More