Author: main-admin

ಹುಬ್ಬಳ್ಳಿ: ಇತ್ತ ಕಡೆ ಜಗದೀಶ್‌ ಶೆಟ್ಟರ್‌ ಬಿಜೆಪಿಯಿಂದ ಹೊರಗೆ ಕಾಲಿಡುತ್ತಿದ್ದಂತೆ ಮತ್ತೊಂದೆಡೆ ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್‌ ಸಿಗದೆ ಬಂಡಾಯವೆದ್ದಿರುವ ಶಾಸಕ ನೆಹರು ಓಲೇಕಾರ ಇಂದು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇಂದು ಶಿರಸಿಗೆ ತೆರಳಿ ಸ್ವೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಅಲ್ಲಿಂದ ಬೆಂಗಳೂರಿಗೆ ತೆರಳುತ್ತಿದ್ದು, ಅಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ಸಂಜೆ ವೇಳೆ ಜೆಡಿಎಸ್‌ ಕಚೇರಿಗೆ ತೆರಳಿ ಪಕ್ಷ ಸೇರುತ್ತೇನೆ ಎಂದು ಹೇಳಿದ್ದಾರೆ. ಜಿಗಿಯಲು ರೆಡಿಯಾದ ಕರಡಿ ಸಂಗಣ್ಣ ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ನೀಡಲು ಪಕ್ಷದ ವರಿಷ್ಠರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಂಸದ ಸಂಗಣ್ಣ ಕರಡಿ ಇಂದು ಬೆಂಬಲಿಗರ ಸಭೆ ಕರೆದಿದ್ದಾರೆ. ನಿನ್ನೆ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಗಣ್ಣ ಅವರಿಗೆ ಫೋನ್‌ ಕರೆ ಮಾಡಿ ‘ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ. ಭಾನುವಾರ ಎಲ್ಲವೂ ಪರಿಹಾರವಾಗಲಿದೆ’ ಎಂದು ಭರವಸೆ ನೀಡಿದ್ದಾರೆ. ‘ಮೊದಲು…

Read More

ಮಂಗಳೂರು: ಪುತ್ತೂರು ಕ್ಷೇತ್ರದಿಂದ ಈ ಬಾರಿ ಪಕ್ಷೇತರನಾಗಿ ಸ್ಪರ್ಧಿಸಿ ಈ ಬಾರಿ ಗೆದ್ದು ಮತ್ತೆ ಬಿಜೆಪಿ ಪಕ್ಷಕ್ಕೆ ಸಹಕಾರ ಮತ್ತು ಬೆಂಬಲ ನೀಡುತ್ತೇನೆ. ಅದು ಬಿಟ್ಟು ಬೇರೆ ಪಕ್ಷಕ್ಕೆ ಇನ್ನಿತರ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ ಎಂದು ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಹೇಳಿದ್ದಾರೆ. ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, 15 ವರ್ಷದಿಂದ ಬೂತ್‌ಮಟ್ಟದಿಂದ ಪಕ್ಷಕ್ಕೆ ದುಡಿದಿದ್ದೇನೆ. ಲೋಕಸಭೆ, ವಿಧಾಸಭೆ ಚುನಾವಣೆಯಿಂದ ಹಿಡಿದು ಗ್ರಾ.ಪಂ ಮಟ್ಟದ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಕಳೆದ ಬಾರಿ ಟಿಕೆಟ್‌ ತಪ್ಪಿದರೂ ಸಂಜೀವ ಮಠಂದೂರು ಅವರ ಗೆಲುವಿಗೆ ಶ್ರಮಿಸಿದ್ದೇನೆ. ಕೊನೇ ಕ್ಷಣದಲ್ಲಿ ನನಗೆ ಟಿಕೆಟ್‌ ತಪ್ಪಿಸಿ ಬೇರೆಯವರಿಗೆ ಕೊಟ್ಟರು ಎಂದು ಬೇಸರ ವ್ಯಕ್ತಪಡಿಸಿದರು. ಆದ್ದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದೇನೆ. ಈ ಬಾರಿ ಗೆದ್ದು ಮತ್ತೆ ಬಿಜೆಪಿ ಪಕ್ಷಕ್ಕೆ ಸಹಕಾರ ಮತ್ತು ಬೆಂಬಲ ನೀಡುತ್ತೇನೆ. ಅದು ಬಿಟ್ಟು ಬೇರೆ ಪಕ್ಷಕ್ಕೆ ಇನ್ನಿತರ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ ಎಂದರು. ನನಗೆ ಏ.17 ರಂದು ನಾಮಪತ್ರ…

Read More

ಉಡುಪಿ: ಸೂಕ್ತ ದಾಖಲೆ ಇಲ್ಲದೆ ವಾಹನವೊಂದರಲ್ಲಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕಾರ್ಕಳದ ಸಾಣೂರು ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದೆ. ಕಾರಿನಲ್ಲಿ ನಗದನ್ನು ಸಾಗಿಸುತ್ತಿದ್ದು ಪೊಲೀಸರ ತಪಾಸಣೆ ವೇಳೆ ನಗದು ಪತ್ತೆಯಾಗಿದೆ. ಸಾಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಇದೇ ಚೆಕ್‌ಪೋಸ್ಟ್‌ನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ 1.2 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ

Read More

ಭಟ್ಕಳ : ಬಂಡೆಗಳ ಮಧ್ಯೆ ಸಿಲುಕಿಕೊಂಡಿದ್ದ ಯುವಕನನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಹಡೀನ್‌ನಲ್ಲಿರುವ ಹುಯ್ಲಮಿಡಿ ಇಕೋ ಪಾರ್ಕ್‌ನಲ್ಲಿ ನಡೆದಿದೆ. ಸಮೀರ್​​ ಸುಲೇಮಾನ್ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಯುವಕ. ಭಟ್ಕಳದ ಹಳೆ ಬಸ್‌ನಿಲ್ದಾಣ ಬಳಿಯ ನಿವಾಸಿ. ನಿನ್ನೆ ಸಂಜೆ ಸ್ನೇಹಿತನೊಂದಿಗೆ ಇಕೋ ಪಾರ್ಕ್‌ಗೆ ತೆರಳಿದ್ದಾರೆ. ಸಂಜೆ ಹೋದವನು ವಾಪಸ್ಸಾಗದ ಹಿನ್ನೆಲೆ ಸ್ನೇಹಿತ ಆತಂಕಗೊಂಡಿದ್ದಾನೆ. ಮಗನಿಗಾಗಿ ಪಾಲಕರು ರಾತ್ರಿ ಹುಡುಕಾಟ ನಡೆಸಿದ್ದಾರೆ. ಇಕೋ ಪಾರ್ಕ್ ತೆರಳಿದ್ದ ವಿಷಯ ತಿಳಿದು ಪಾಲಕರು ಇಂದು ಹುಡುಕಾಟ ನಡೆಸಿದ್ದಾರೆ. ಕಡಲತೀರದ ಬಳಿ ಬಂಡೆಗಲ್ಲುಗಳ ನಡುವೆ ಸಿಲುಕಿದ್ದನ್ನ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಯಿಂದ ಯುವಕನ ರಕ್ಷಣೆ ಮಾಡಿದ್ದು, ಪಾಲಕರು ಮತ್ತು ಯುವಕ ನಿಟ್ಟುಸಿರುಬಿಟ್ಟಿದ್ದಾರೆ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಮಂಗಳೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಹಾಗು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೆಡಿಕಲ್ ವಿದ್ಯಾರ್ಥಿಸಹಿತ ಮೂರು ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಮತ್ತು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದು, 1,40,000 ರೂ ಮೌಲ್ಯದ 5 ಕೆಜಿ 400 ಗ್ರಾಂ ಗಾಂಜಾ ಹಾಗೂ 4 ಮೊಬೈಲ್ ಫೋನ್ ಗಳನ್ನು ಮತ್ತು 1 ಟ್ಯಾಬ್ ವಶಪಡಿಸಿಕೊಳ್ಳಲಾಗಿದೆ. ಬೀದರ್ ನಿವಾಸಿ ಸದ್ಯ ನಗರದ ಗೋರಿಗುಡ್ಡೆಯಲ್ಲಿ ವಾಸವಿರುವ ಪ್ರಜ್ವಲ್ ಫಿನಹಾಸ್(26), ಮೂಲತ: ಹಾಸನ ಜಿಲ್ಲೆಯ ಸದ್ಯ ನಗರದ ಕುಲಶೇಖರದ ಅಪಾರ್ಟ್ಮೆಂಟ್‌ನಲ್ಲಿ ಇರುವ ಧ್ರುವ ಶೆಟ್ಟಿ (19) , ನಗರದ ಕುಳಾಯಿ ನಿವಾಸಿ ಶಿವಾನಿ (22) ಬಂಧಿತರು. ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯ ಪಿಎಸ್‌ಐ ಶೀತಲ್‌ ಅಲಗೂರು ಅವರಿಗೆ ಬಂದ ಮಾಹಿತಿ ಮೇರೆಗೆ ಆರೋಪಿ ಪ್ರಜ್ವಲ್ ಫಿನಹಾಸ್​ನನ್ನು ಬಂಧಿಸಿ ಆತನ ನೀಡಿದ ಮಾಹಿತಿ ಮೇರೆಗೆ ಉಳಿದ ಆರೋಪಿಗಳನ್ನು ಸಿಸಿಬಿ ಘಟಕದ…

Read More

ಮಂಗಳೂರು: ಕೇಂದ್ರ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೀಕ್ಷಕರನ್ನು ನಿಯೋಜಿಸಿದೆ. ಈ ಪೈಕಿ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಖರ್ಚುಗಳ ವೀಕ್ಷಕರು (ಎಕ್ಸೆಂಡಿಚರ್ ಅಬ್ಸರ್ ವರ್) ಜಿಲ್ಲೆಗೆ ಆಗಮಿಸಿದ್ದಾರೆ. ವಿವರ ಇಂತಿದೆ:204 ಮಂಗಳೂರು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಪ್ರದೀಪ್ ಸಿಂಗ್ ಗೌತಮ್ (ಐಆರ್‌ಎಸ್) ಅವರು ಖರ್ಚು ವೆಚ್ಚಗಳ ವೀಕ್ಷಕರಾಗಿ ಆಗಮಿಸಿದ್ದಾರೆ ಅವರ ಮೊಬೈಲ್ ಸಂಖ್ಯೆ: 9141046507 ಆಗಿದೆ. 206 ಪುತ್ತೂರು ಹಾಗೂ 207 ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ವಿವೇಕ್ ನಾಗರಥ್(ಐಆರ್‌ಎಸ್) ಅವರನ್ನು ವೆಚ್ಚ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ, ಅವರ ಮೊಬೈಲ್ ಸಂಖ್ಯೆ 9141046505 ಆಗಿದೆ. ಆಗಿದೆ.ಚುನಾವಣಾ ಖರ್ಚುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಈ ವೆಚ್ಚ ವೀಕ್ಷಕರಿಗೆ ದೂರು, ಅವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಅಪರ ಜಿಲ್ಲಾಧಿಕಾರಿ ಎಚ್.ಕೃಷ್ಣಮೂರ್ತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಬಂಟ್ವಾಳ ನಿವಾಸಿ ಧೀರಜ್ ಮೃತ ಯುವಕ. ವೃತ್ತಿಯಲ್ಲಿ ಚಾಲಕನಾಗಿದ್ದ ಧೀರಜ್ ಗುರುವಾರ ರಾತ್ರಿ ಊಟ ಮಾಡಿ ಮಲಗಿದ್ದರು. ಶುಕ್ರವಾರ ಬೆಳಗ್ಗೆ ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಈ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Read More

ನವದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯ ಬಿಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಟಿಯಾಲ ರಸ್ತೆಯಲ್ಲಿರುವ ಅವರ ಕಚೇರಿಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ಶುಕ್ರವಾರ ಸಂಜೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ನಿನ್ನೆ ರಾತ್ರಿ 7:30 ರ ಸುಮಾರಿಗೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕಚೇರಿಗೆ ನುಗ್ಗಿ ಮನಬಂದಂತೆ ಗುಂಡು ಹಾರಿಸಿದರು ಎಂದು ಮೃತ ರಾಮ್ ಸಿಂಗ್ ಅವರ ಸೋದರ ಸಂಬಂಧಿ ತಿಳಿಸಿದ್ದಾರೆ. ‘ಶುಕ್ರವಾರ ರಾತ್ರಿ 7:30 ರ ಸುಮಾರಿಗೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕೈಯಲ್ಲಿ ಹೆಲ್ಮೆಟ್‌ನೊಂದಿಗೆ ಕಚೇರಿಗೆ ಪ್ರವೇಶಿಸಿದರು ಮತ್ತು ಇದ್ದಕ್ಕಿದ್ದಂತೆ ಅವರು ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು. ದುಷ್ಕರ್ಮಿಗಳು ಹಲವಾರು ಸುತ್ತು ಗುಂಡು ಹಾರಿಸಿದರು. ಅದರಲ್ಲಿ 4-5 ಗುಂಡುಗಳು ಸುರೇಂದ್ರಗೆ ತಗುಲಿದವು. ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದು ಅವರು ತಿಳಿಸಿದರು. ಕಚೇರಿಯೊಳಗಿದ್ದ ಜನರು ಸುರೇಂದ್ರನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು. ಆದ್ರೆ, ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

Read More

ಮಂಗಳೂರು: ಅಕ್ರಮ ಸಾಗಾಟದ ಬರೋಬ್ಬರಿ 67ಲಕ್ಷ ರೂ. ದಾಖಲೆ ರಹಿತ ಹಣವನ್ನು ಕಾಸರಗೋಡಿನ ಕಲ್ಲೂರಾವಿಯಲ್ಲಿ ವಶಪಡಿಸಿಕೊಂಡ ಕಾಸರಗೋಡು ಡಿವೈಎಸ್‌ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡವು ಓರ್ವನನ್ನು ಬಂಧಿಸಿದೆ. ಪುಂಜಾವಿ ನಿವಾಸಿ ಹ್ಯಾರಿಸ್ (39) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಡಿವೈಎಸ್‌ಪಿ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ಕಲ್ಲೂರಾವಿಯಲ್ಲಿ ವಾಹನ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಹ್ಯಾರಿಸ್ ಸ್ಕೂಟರನ್ನು ತಡೆದು ತಪಾಸಣೆ ನಡೆಸಿದಾಗ ಬರೋಬ್ಬರಿ 67 ಲಕ್ಷ ರೂ. ಹಣ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

Read More

ಸುಳ್ಯ: ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಬಳಿ ಕೆ.ಎಸ್.ಆರ್ ಟಿ. ಸಿ ಹಾಗೂ ಕಾರೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ. ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವುದಾಗಿ ತಿಳಿದುಬಂದಿದೆ. ಮಡಿಕೇರಿ ಕಡೆಯಿಂದ ಬಂದ ಶಿಪ್ಟ್ ಕಾರು ಸಂಪಾಜೆ ಪೆಟ್ರೋಲ್ ಪಂಪ್ ಪೆಟ್ರೋಲ್ ಹಾಕಿ ರಸ್ತೆಗೆ ಇಳಿಯುತ್ತಿದ್ದಂತೆ ಸುಳ್ಯದಿಂದ ಮಡಿಕೇರಿಗೆ ಹೋಗುತ್ತಿದ್ದ ಕೆಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದೆ.ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಹೇಳಲಾಗಿದ್ದು, ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ.ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಮೃತಪಟ್ಟಿದ್ದಾರೆ. ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ.ಕಾರಿನಲ್ಲಿ ಒಟ್ಟು 8 ಮಂದಿ ಇದ್ದರು ಎಂದು ಹೇಳಲಾಗಿದೆ, ಒಬ್ಬ ಗಂಡಸು ಮತ್ತು…

Read More