Author: main-admin

ಉಳ್ಳಾಲ : ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆಯೊಂದರ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10 ರಂದು ಬೆಳಗ್ಗೆ ಸಂಭವಿಸಿರುತ್ತದೆ. ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್‌ಗಳಿಗೆ ಸಂಬಂಧಿಸಿದ ಹೊಲಿಗೆ ನೂಲು ಸೇರಿದಂತೆ ಇತರ ಕಚ್ಚಾ ವಸ್ತುಗಳನ್ನು ಪೂರೈಸುವ ಅಂಗಡಿಯನ್ನು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಗೈದಿದ್ದಾರೆ. ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿ‌ ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದಿದ್ದಾರೆ ಎಂದು ಹೇಳಲಾಗಿದೆ. ಮೃತರು ತಾಯಿ, ಪತ್ನಿ ಪುತ್ರನನ್ನು ಅಗಲಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ:ವಿಶ್ವದ ಶ್ರೇಷ್ಠ ಬೌದ್ಧ ಧರ್ಮಗುರು ದಲೈಲಾಮಾ ಅವರು ಬಾಲಕನ ತುಟಿಗೆ ಮುತ್ತು ಕೊಟ್ಟಿದ್ದು, ತನ್ನ ನಾಲಗೆಯನ್ನು ಹೀರುವಂತೆ ಹೇಳಿದ್ದಾರೆ ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ವಿಡಿಯೋಗೆ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ. ವಿಡಿಯೋದಲ್ಲಿ ದಲೈಲಾಮ ಅವರು ಬಾಲಕನ ತುಟಿಗೆ ಮುತ್ತು ಕೊಟ್ಟಿರುವುದು ಮಾತ್ರವಲ್ಲದೇ, ತನ್ನ ನಾಲಿಗೆಯನ್ನು ಹೀರುವಂತೆಯೂ ಕೇಳಿರುವುದನ್ನು ಕಾಣಬಹುದು. ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಜೂಸ್ಟ್ ಬ್ರೋಕರ್ಸ್ ಎಂಬವರು, “ದಲೈ ಲಾಮಾ ಬೌದ್ಧ ಸಮಾರಂಭದಲ್ಲಿ ಭಾರತೀಯ ಹುಡುಗನನ್ನು ಚುಂಬಿಸುತ್ತಿದ್ದಾರೆ.ಅವನ ನಾಲಿಗೆಯನ್ನು ಸ್ಪರ್ಶಿಸಲು ಪ್ರಯತ್ನಿಸುತ್ತಿದ್ದಾರೆ.”ನನ್ನ ನಾಲಿಗೆಯನ್ನು ಹೀರು” ಎಂದು ಹೇಳುತ್ತಾರೆ.ಹೀಗೆ ಮಾಡಿರುವುದೇಕೆ” ಎಂದು ಪ್ರಶ್ನಿಸಿದ್ದಾರೆ. ಇನ್ನು ಕೆಲವರು ದಲೈಲಾಮಾ ಅವರ ವರ್ತನೆಯನ್ನು ಯಾರೂ ಕೂಡಾ ಸಮರ್ಥಿಸಬಾರದು ಎಂದು ಸಾಮಾಜಿಕ ಜಾಲತಾಣ ಬಳಕೆದಾರರಾದ ದೀಪಿಕಾ ಪುಷ್ಕರ್ ನಾಥ್ ಟ್ವೀಟ್ ಮಾಡಿದ್ದಾರೆ. ಕೆಲವು ನೆಟ್ಟಿಗರು, ಸರಿಯಾದ ಹಿನ್ನೆಲೆ ತಿಳಿಯದೇ ಟೀಕಿಸುವುದು ಸರಿಯಲ್ಲ. ಸಾರ್ವಜನಿಕವಾಗಿ ಆಲಂಗಿಸುವುದು, ಮುತ್ತು ನೀಡುವುದು, ಕೆನ್ನೆಗಳಿಗೆ ಚುಂಬಿಸುವುದು ಟಿಬೆಟ್​ ಸಂಸ್ಕೃತಿಯಲ್ಲ. ಆದರೆ ನಾಲಿಗೆಯ ಮೂಲಕ ಶುಭ ಕೋರುವುದು ಬೌದ್ಧ…

Read More

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ ಗ್ರಾಮದ ಪಡುಶೆಡ್ಡೆ ಕಡೆಗೆ ಹೋಗುವ ಕಾಂಕ್ರಿಟ್ ರಸ್ತೆಯಲ್ಲಿ ಆಪಾದಿತ ಯುವಕನಾದ ಸುಹಾನ್ ಎಸ್.ಪೂಜಾರಿ( 23 ವರ್ಷ) ಎಂಬಾತನು ಗಾಂಜಾ ಮಾದಕ ಪದಾರ್ಥವನ್ನು ಸ್ಕೂಟರ್ ನಲ್ಲಿರಿಸಿ ಮಾರಾಟ ಮಾಡಲು ಬಂದವನನ್ನು ಪೊಲೀಸರು ವಶಕ್ಕೆ ಪಡೆದು, ಆಪಾದಿತನು ಮಾರಾಟ ಮಾಡಲು ತಂದಿದ್ದ ಖಾಕಿ ಬಣ್ಣದ ಪ್ಯಾಕೇಟ್ ನಲಿದ್ದ 1 ಕೆ.ಜಿ 990 ಗ್ರಾಂ ಗಾಂಜಾವನ್ನು, ಕೃತ್ಯಕ್ಕೆ ಬಳಸಿದ ಮೋಬೈಲ್ ಪೋನ್ ಹಾಗೂ ಸ್ಕೂಟರನ್ನು ಮುಂದಿನ ಕ್ರಮದ ಬಗ್ಗೆ ಸ್ವಾಧೀನಪಡಿಸಿ ಕೊಂಡಿದ್ದು, ಸದ್ರಿ ಸೊತ್ತುಗಳ ಒಟ್ಟು ಮೌಲ್ಯ: 76,000- ರೂ ಆಗಬಹುದು ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಗುರುರಾಜ್ ರವರು ಕೇಸು ದಾಖಲಿಸಿಕೊಂಡಿರುತ್ತಾರೆ. ಮಂಗಳೂರು ನಗರದ ಮಾನ್ಯ ಪೊಲೀಸ್ಆಯುಕ್ತರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆಯನ್ನು ಮಾನ್ಯ ಉಪ ಪೊಲೀಸ್ ಆಯುಕ್ತರಾದ ಆಯುಕ್ತರಾದ (ಕಾ&ಸು) ಮತು (ಅಪರಾಧ ಮತು ಸಂಚಾರ) ರವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಉಪ ಪೊಲೀಸ್ ಆಯುಕ್ತರ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಒಂಟಿ ಮಹಿಳೆಯ ಕೊಲೆ ನಡೆದಿರುವ ಘಟನೆ ನಡೆದಿದ್ದು,3 ದಿನಗಳ ಹಿಂದೆ ದುಷ್ಕರ್ಮಿಗಳು ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಕೆ.ಆರ್.ಪುರಂನ ಟಿಸಿ ಪಾಳ್ಯದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಳ್ಳಾರಿ ಮೂಲದ ಅಂಬಿಕಾ (40) ಕೊಲೆಯಾಗಿರುವ ಮಹಿಳೆ. ಕೂಲಿ ಕೆಲಸ ಮಾಡಿಕೊಂಡು ಒಂಟಿಯಾಗಿದ್ದ ನೆಲೆಸಿದ್ದ ಅಂಬಿಕಾ ಶವ ಮೂರು ದಿನಗಳ ಬಳಿಕ ಪತ್ತೆಯಾಗಿದೆ. ಅಂಬಿಕಾ ದೇಹದ ಮೇಲೆ ಗಾಯಾದ ಗುರುತುಗಳು ಪತ್ತೆಯಾಗಿದ್ದು, ಕೆಲ ತಿಂಗಳ ಹಿಂದೆ ಅಂಬಿ ಪತಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳ್ತಂಗಡಿ: ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾದ ಗೆಳತಿಯರಿಬ್ಬರು ಅನುಮಾನಸ್ಪದವಾಗಿ ಎ.6 ರಂದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಮೇಲ್ನೋಟದ ತನಿಖೆಯಲ್ಲಿ ವಿಷ ಪ್ರಾಶನವೇ ಕಾರಣ ಎಂಬುದು ತಿಳಿದುಬಂದಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಅವರ ಗೆಳತಿ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಒಂದೇ ದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವೆಂದು ನರಳಾಡಿ ಆಸ್ಪತ್ರೆಗೆ ದಾಖಲಾಗಿದ್ದರು. ರಕ್ಷಿತಾ ಮೊದಲಿಗೆ ಮೃತಪಟ್ಟರೆ ಲಾವಣ್ಯ ಬಳಿಕ ಸಾವನ್ನಪ್ಪಿದ್ದರು. ರಕ್ಷಿತಾ ಹಾಗೂ ಲಾವಣ್ಯ ಅವರಿಬ್ಬರೂ ಒಂದೇ ದಿನ ಒಂದೇ ಸಮಯಕ್ಕೆ ವಿಷಪ್ರಾಶನ ಮಾಡಿದರೇ ಎಂಬ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಶುಕ್ರವಾರ ಧರ್ಮಸ್ಥಳ ಪೊಲೀಸ್‌ ಠಾಣೆ ಎಸ್‌.ಐ. ಅನಿಲ್‌ ಹಾಗೂ ಸಿಬಂದಿ ಮೃತರ ಮನೆಗೆ ಭೇಟಿ ನೀಡಿ ಒಂದಷ್ಟು ಮಾಹಿತಿ ಕಲೆ ಹಾಕಿದ್ದಾರೆ. ಇಬ್ಬರು ಸೇವಾ ಪ್ರತಿನಿಧಿಗಳಾಗಿ ಕರ್ತವ್ಯದಲ್ಲಿದ್ದರು. ಇಬ್ಬರು ಉತ್ತಮ ಸೇವೆ ಸಲ್ಲಿಸುತ್ತಿದ್ದರು ಹಾಗೂ ಊರಿನಲ್ಲಿ ಇವರ ಬಗ್ಗೆ ಉತ್ತಮ ಅಭಿಪ್ರಾಯವಿದೆ. ಈ…

Read More

ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾಶಿಪಟ್ಣದ ಉಮೇಶ್ ( 49) ಮೃತಪಟ್ಟ ವ್ಯಕ್ತಿ. ಉಮೇಶ್ ಅವರು ಮೂಡುಬಿದಿರೆ ಕಡೆಯಿಂದ ಮಹಾವೀರ ಕಾಲೇಜು ರಸ್ತೆಗೆ ಹೋಗುತ್ತಿದ್ದು ಜ್ಯೋತಿನಗರದಲ್ಲಿ ಕ್ರಾಸ್ ಆಗಿ ಲಾಡಿಯಲ್ಲಿರುವ ಪತ್ನಿ ಆಗಿ ಹೋಗುವ ಸಂದರ್ಭ ಬಂಟ್ವಾಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕಾರು ಬೈಕ್ ಗೆ ಢಿಕ್ಕಿ ಹೊಡೆದು ರಸ್ತೆಯ ಪಕ್ಕಕ್ಕೆ ಎಸೆಯಲ್ಪಟ್ಟಿದ್ದರು. ರಕ್ತ ಸೋರುತ್ತಿದ್ದ ಉಮೇಶ್ ಅವರನ್ನು ತಕ್ಷಣ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದು ಅಲ್ಲಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಮೂಡುಬಿದಿರೆ ಪೆÇಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮನೆ ನಿರ್ಮಿಸಲು ಸಹಾಯ ಮಾಡ್ತೀನಿ ಅಂತಾ ಹೇಳಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತಿಕಾ ಎಂಬುವವರನ್ನು ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ ಭೇಟಿಯಾದ ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸು ತನ್ನ ಹೆಸರು ರಶೀದ್ ಎಂಬುದಾಗಿ ಪರಿಚಯ ಮಾಡಿಕೊಂಡಿದ್ದ. ಬಳಿಕ ಅದೇ ದಿನ ಆತೀಕಾ ವಾಸವಿರುವ ಬಾಡಿಗೆ ಮನೆಗೆ ಬಂದಿದ್ದ ರಶೀದ್ ‘ನೀವು ಇಷ್ಟು ಬಾಡಿಗೆ ಕೊಟ್ಟು ಈ ಮನೆಯಲ್ಲಿ ಇರುತ್ತೀರಾ. ನೀವು ಬೇರೆ ಮನೆ ಮಾಡಲು ನಾನು ವ್ಯವಸ್ಥೆ ಮಾಡುತ್ತೇನೆ. ನಾಳೆ ಬಂದರ್ ಮಸೀದಿಯಲ್ಲಿ ನನಗೆ ಸಿಗಬೇಕು’ ಎನ್ನುತ್ತಾ ಎರಡು ಮೊಬೈಲ್ ಸಂಖ್ಯೆಗಳನ್ನು ನೀಡಿ ಹೋಗಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅದರಂತೆ ಆತಿಕಾ ಈ ಮಾತನ್ನು ನಂಬಿ ಮಂಗಳೂರು ನಗರದ ಬಂದರ್ ಮಸೀದಿಗೆ ಬಂದಾಗ ಅವರನ್ನು ರಶೀದ್ ಮಧ್ಯಾಹ್ನ ಫಳ್ನೀರ್ ರಸ್ತೆಯ ಹೊಟೇಲ್‌ ವೊಂದರ ರೂಮಿಗೆ ಕರೆದುಕೊಂಡು ಹೋಗಿ ‘ಈಗ ಶೇಖ್‌ ಮತ್ತು ಶೇಖ್ ನ ಹೆಂಡತಿ ಬರುತ್ತಾರೆ. ನಿನ್ನ ಮೈಮೇಲಿರುವ ಚಿನ್ನಾಭರಣ…

Read More

ಮಂಗಳೂರು: ಆನ್‌ಲೈನ್‌ನಲ್ಲಿ ಹಣ ದ್ವಿಗುಣ ಮಾಡಲು ಹೋಗಿ ವಂಚನೆಗೊಳಗಾಗಿ ವ್ಯಕ್ತಿಯೊಬ್ಬರು 8.78 ಲಕ್ಷ ರೂ. ಕಳೆದುಕೊಂಡ ಬಗ್ಗೆ ನಗರದ ಸೆನ್ ಠಾಣೆಗೆ ದೂರು ದಾಖಲಿಸಿದ್ದಾರೆ ದೂರುದಾರ ವ್ಯಕ್ತಿಯ ವಾಟ್ಸ್ಆ್ಯಪ್ ಗೆ ಅಪರಿಚಿತ ವ್ಯಕ್ತಿಯ +447468726354 ದೂರವಾಣಿ ಸಂಖ್ಯೆಯಿಂದ . ಮಾ.13ರಂದು ಪಾರ್ಟ್‌ ಟೈಂ ಉದ್ಯೋಗದ ಸಂದೇಶ ಬಂದಿತ್ತು. ಬಳಿಕ ಟಾಸ್ಕ್ ನೀಡಿದ ಅಪರಿಚಿತ 100 ರೂ. ಪಾವತಿಸಲು ಸೂಚಿಸಿದ್ದ. ಅದರಂತೆ ದೂರುದಾರ ತಮ್ಮ ಫೋನ್ ಪೇಯಿಂದ ಹಣ ಪಾವತಿಸಿದ್ದಾರೆ. ಬಳಿಕ ಅಪರಿಚಿತ ವ್ಯಕ್ತಿಯು ಟೆಲಿಗ್ರಾಂ ಆ್ಯಪ್ ಲಿಂಕ್ ಕಳುಹಿಸಿ ಅದರಲ್ಲಿ ಹಣವನ್ನು ಆನ್‌ಲೈನ್ ಮೂಲಕ ದ್ವಿಗುಣ ಮಾಡಲು 8 ಟಾಸ್ಕ್ ಮಾಡುವಂತೆ ಸೂಚಿಸಿ ವಿವಿಧ ಬ್ಯಾಂಕ್‌ಗಳಿಗೆ ಹಂತ ಹಂತವಾಗಿ 4,25,068 ರೂ. ವರ್ಗಾಯಿಸಿಕೊಂಡಿದ್ದ. ಆ ಬಳಿಕ ಅಪರಿಚಿತ ಬಜಾಜ್ ಲೋನ್‌ನ ಆಫರ್ ನೀಡಿ ಪ್ರೋಸೆಸ್ ಚಾರ್ಜಸ್, ಟಿಡಿಎಸ್, ಜಿಎಸ್‌ಟಿ, ಬ್ಯಾಂಕ್ ಸೆಕ್ಯುರಿಟಿ ಡಿಪಾಸಿಟ್ ಎಂಬುದಾಗಿ ನಂಬಿಸಿ ವಿವಿಧ ಬ್ಯಾಂಕ್ ಖಾತೆಗಳಿಗೆ ಮತ್ತೆ 4,53,638 ರೂ.ವನ್ನು ವರ್ಗಾಯಿಸಿದ್ದಾನೆ. ಈ ಮೂಲಕ ಒಟ್ಟು 8,78,706…

Read More

ಬಂಟ್ವಾಳ : ನಿನ್ನೆ ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ತಡರಾತ್ರಿ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬುವರ ಪುತ್ರ, ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13) ಮೃತ ಬಾಲಕ. ನಿನ್ನೆ ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಲ್ಲಿ ತನ್ನ ಸ್ನೇಹಿತರೊಂದಿಗೆ ಇದ್ದುದನ್ನು ಆ ಪರಿಸರದ ಮಂದಿ ಗಮನಿಸಿದ್ದರು, ಆದರೆ ಮಧ್ಯಾಹ್ನದ ಬಳಿಕ ಬಾಲಕ ಹಠಾತ್ ಕಾಣೆಯಾಗಿದ್ದ. ಬಾಲಕನನ್ನು ಸಾಕಷ್ಟು ಹುಡುಕಾಟ ನಡೆಸಿದರು ಸಿಕ್ಕಿರಲಿಲ್ಲ. ಬಾಲಕನ ಕೈಯಲ್ಲಿದ್ದ ಮೊಬೈಲ್ ರಿಂಗಿಣಿಸುತ್ತಿದ್ದರೂ ಕರೆ ಸ್ವೀಕಾರ ಆಗದ ಹಿನ್ನಲೆಯಲ್ಲಿ ಆತಂಕಗೊಂಡ ಪೋಷಕರು ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದರು. ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ದೊರೆತ ಮಾಹಿತಿಯಂತೆ ಕಳ್ಳಿಗೆ ಗ್ರಾಮದ ಕೆರೆಯ ಬಳಿ ಹುಡುಕಾಟ ನಡೆಸಿದಾಗ ಕೆರೆಯ ಮೇಲ್ಭಾಗದಲ್ಲಿ ಬಾಲಕ…

Read More

ಬೆಂಗಳೂರು: ರೌಡಿ ಶೀಟ್‌ನಲ್ಲಿ ಫೈಟರ್ ರವಿ ಅಲಿಯಾಸ್ ಬಿ.ಎಂ. ಮಲ್ಲಿಕಾರ್ಜುನ ಅವರ ಹೆಸರನ್ನು ಮುಂದುವರಿಸುವುದಕ್ಕೆ ಹೈಕೋರ್ಟ್ ತಡೆ ನೀಡಿದೆ. ರೌಡಿ ಶೀಟ್‌ನಿಂದ ಹೆಸರು ಕೈಬಿಡಲು ನಿರಾಕರಿಸಿದ್ದ ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಈ ಮೊದಲು ಮಲ್ಲಿಕಾರ್ಜುನ ಅವರು ತಮ್ಮ ಹೆಸರನ್ನು ರೌಡಿ ಶೀಟ್‌ನಲ್ಲಿ ಸೇರಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 2019ರಲ್ಲಿ ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ‘ರೌಡಿ ಶೀಟ್‌ನಿಂದ ಮಲ್ಲಿಕಾರ್ಜುನ ಅವರ ಹೆಸರು ತೆಗೆಯುವ ಕುರಿತಾದ ಮನವಿಯನ್ನು ಪರಿಗಣಿಸಿ’ ಎಂದು ಪೊಲೀಸ್ ಇಲಾಖೆಗೆ ನಿರ್ದೇಶಿಸಿತ್ತು. ಆದರೆ, ಮಲ್ಲಿಕಾರ್ಜುನ ಅವರು ಸಲ್ಲಿಸಿದ್ದ ಮನವಿಯನ್ನು ಪೊಲೀಸ್ ಇಲಾಖೆ 2020ರಲ್ಲಿ ತಿರಸ್ಕರಿಸಿ, ರೌಡಿಶೀಟ್‌ನಲ್ಲಿ ಹೆಸರನ್ನು ಮುಂದುವರಿಸಿತ್ತು. ಇದನ್ನು ಆಕ್ಷೇಪಿಸಿ ಮಲ್ಲಿಕಾರ್ಜುನ ಇದೇ 5ರಂದು ಮತ್ತೆ ರಿಟ್ ಅರ್ಜಿ ಸಲ್ಲಿಸಿದ್ದರು. ‘ಈ ಹಿಂದೆ ನನ್ನ ವಿರುದ್ಧ ದಾಖಲಾಗಿದ್ದ ಆರು ಅಪರಾಧ ಪ್ರಕರಣಗಳನ್ನು ಹೈಕೋರ್ಟ್ ಈಗಾಗಲೇ ರದ್ದುಪಡಿಸಿದೆ.…

Read More