Author: main-admin

ಉಳ್ಳಾಲ: ಕರ್ಕಷ ಹಾರ್ನ್ ಬಳಸುತ್ತಿದ್ದ ವಾಹನಗಳನ್ನು ತಡೆದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಮೂರು ದಿನಗಳಲ್ಲಿ ಒಟ್ಟು 130 ವಾಹನಗಳ ಹಾರ್ನ್ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಠಾಣಾಧಿಕಾರಿ ರಮೇಶ್ ಹಾನಾಪುರ ನೇತೃತ್ವದ ಪೊಲೀಸರ ತಂಡ ತಲಪಾಡಿಯಲ್ಲಿ ತಪಾಸಣೆ ನಡೆಸಿ ಕ್ರಮಕೈಗೊಂಡಿದ್ದಾರೆ. ಟ್ರಕ್ ಗಳಲ್ಲಿ ಕಾನೂನು ಉಲ್ಲಂಘಿಸಿ ಕರ್ಕಶವಾದ ಹಾರ್ನ್ ಬಳಕೆ ಮಾಡುತ್ತಿರುವ ಕುರಿತು ಸಾರ್ವಜನಿಕ ವಲಯದಿಂದ ದೂರುಗಳು ಬಂದ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ. ಮಾ.31 ರಿಂದ ಎ.3 ರವರೆಗೆ ತಪಾಸಣೆ ನಡೆಸಿದ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ.

Read More

ಉಪ್ಪಿನಂಗಡಿ; ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದು ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ.ಘಟನೆಯಲ್ಲಿ ಬಟ್ಟೆಗಳು ಬೆಂಕಿಗೆ ಆಹುತಿಯಾಗಿರುವ ಬಗ್ಗೆ ಮಾಹಿತಿ ಇದೆ. ಸ್ಥಳದಲ್ಲಿ ಬೆಂಕಿ‌ ನಂದಿಸುವ ಕಾರ್ಯ ನಡೆಯುತ್ತಿದೆ.ಬಹುಮಡಿ ಕಟ್ಟಡದ ಒಂದು ಮತ್ತು ಎರಡನೇ ಹಂತಸ್ತಿನಲ್ಲಿ ಬಟ್ಟೆ ಅಂಗಡಿ ಇದೆ.‌ಬೆಳಿಗ್ಗೆ ಮಳಿಗೆಯಿಂದ ಹೊಗೆ ಬರುವುದು ಕಂಡು ಜನರು ಮಾಹಿತಿ ನೀಡಿದ್ದಾರೆ.

Read More

ಮಂಗಳೂರು : ಖದೀಮ ಕಳ್ಳನೋರ್ವನು ನಗರದ ದಕ್ಕೆಯಲ್ಲಿ ಮೀನು ವ್ಯಾಪಾರಿಯ 1.50 ಲಕ್ಷ ರೂ. ಕಸಿದು ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ಬೆಳ್ಳಂಬೆಳಗ್ಗೆ ಸುಮಾರು 6:45ಕ್ಕೆ ವ್ಯಾಪಾರಿ ಮೀನು ಖರೀದಿಗೆಂದು ದಕ್ಕೆಯ ಕಡೆಗೆ ತೆರಳುತ್ತಿದ್ದರು‌. ಈ ವೇಳೆ ಅವರಲ್ಲಿ ಮೀನು ಖರೀದಿಗೆಂದು ಇಟ್ಟಿದ್ದ 1.50 ಲಕ್ಷ ರೂ. ಹಣವಿತ್ತು. ಆದರೆ, ಕಳ್ಳನೋರ್ವನು ಈ ಬ್ಯಾಗ್‌ನ್ನೇ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಕಳ್ಳನ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.

Read More

ಮಂಗಳೂರು: ಜೀವಬೆದರಿಕೆ ಇದ್ದ ಹಿನ್ನೆಲೆ ಹಿಂದುತ್ವ ಹೋರಾಟಗಾರ ಸತ್ಯಜಿತ್‌ ಸುರತ್ಕಲ್‌, ವಿಚಾರವಾದಿ ನರೇಂದ್ರ ನಾಯಕ್ ಜೊತೆ ಬಿಜೆಪಿ ಮುಖಂಡರುಗಳಾದ ರಹೀಂ ಉಚ್ಚಿಲ್‌ ಹಾಗೂ ಜಗದೀಶ್‌ ಶೇಣವ ಅವರಿಗೆ ಸರಕಾರ ನೀಡಿದ್ದ ಪೊಲೀಸ್ ಭದ್ರತಾ ಸಿಬ್ಬಂದಿ ಸೇವೆಯನ್ನು ಹಿಂಪಡೆಯಲಾಗಿದೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ 2006ರಲ್ಲೇ ಹಿಂದುತ್ವ ಹೋರಾಟಗಾರ ಸತ್ಯಜಿತ್‌ ಸುರತ್ಕಲ್‌ಗೆ ಅಂದಿನ ಕಾಂಗ್ರೆಸ್‌ ಸರಕಾರ ಭದ್ರತೆ ನೀಡಿತ್ತು. ಅದಾದ ನಂತರದ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಬಿಜೆಪಿ ಮುಖಂಡ ರಹೀಂ ಉಚ್ಚಿಲ್‌, ಜಗದೀಶ್‌ ಶೇಣವ ಹಾಗೂ ವಿಚಾರವಾದಿ ನರೇಂದ್ರ ನಾಯಕ್‌ ಅವರಿಗೆ ಸರಕಾರ ಭದ್ರತೆ ನೀಡಿತ್ತು. ಇದೀಗ ನೀಡಿದ್ದ ಭದ್ರತೆಯನ್ನು ಪೊಲೀಸ್‌ ಇಲಾಖೆ ಹಿಂಪಡೆದಿದೆ.

Read More

ಬಂಟ್ವಾಳ: ಶಂಕಿತ ರೇಬಿಸ್‌ಗೆ ಯುವಕನೋರ್ವ ಬಲಿಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಅಶೋಕ ಹೆಗ್ಡೆ ಎಂಬವರ ಪುತ್ರ ಪ್ರಶಾಂತ ಹೆಗ್ಡೆ(31) ಮೃತ ಯುವಕ.ಮೂರು ತಿಂಗಳ ಹಿಂದೆ ಪ್ರಶಾಂತ್ ಅವರಿಗೆ ಅವರ ಮನೆಯ ಸಾಕು ನಾಯಿ ಕಚ್ಚಿದ್ದು, ಬಳಿಕ ನಾಯಿ ಮೃತ ಪಟ್ಟಿತ್ತು. ಆದರೆ ಪ್ರಶಾಂತ್ ಅವರು ನಾಯಿ ಕಚ್ಚಿರುವುದಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ಬಳಿಕ ತೀವ್ರ ಸಂಕಟ, ಜ್ವರದಿಂದ ಒದ್ದಾಡಿದ್ದು, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ತೆರಳಿದ್ದಾರೆ.ಇನ್ನು ಜ್ವರ ತಪಾಸಣೆ ನಡೆಸಿದ ಸಂದರ್ಭ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಶಾಂತ್ ಮೃತಪಟ್ಟಿದ್ದಾರೆ.ಪ್ರಶಾಂತ್ ಅವರ ಕ್ಲಿನಿಕಲ್ ಪರೀಕ್ಷೆ ವರದಿಗಳು ರೇಬಿಸ್ ಲಕ್ಷಣ ಹೊಂದಿದ್ದವು. ಆದರೆ ಅವರು ಯಾವ ಕಾರಣದಿಂದ ಮೃತರಾಗಿದ್ದಾರೆಂದು ನಿಖರವಾಗಿ ತಿಳಿದು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಅವರು ತಿಳಿಸಿದ್ದಾರೆ.

Read More

ಗುಂಡ್ಯ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ಎ.2ರ ಬೆಳಗ್ಗೆ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(ವ.50) ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿಯು ಮೂಲತಃ ಕೇರಳದವನಾಗಿದ್ದು, ಕಳೆದ 15 ವರ್ಷದಿಂದ ಗುಂಡ್ಯ ಪರಿಸರದಲ್ಲಿ ಒಬ್ಬಂಟಿಯಾಗಿ ಜೀವಿಸುತ್ತಾ, ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು ರಸ್ತೆಯ ಬದಿಯಲ್ಲಿ ಮಲಗುತ್ತಿದ್ದ.ವಿಷಯ ತಿಳಿಯುತ್ತಿದ್ದಂತೆ ಉಪ್ಪಿನಂಗಡಿ ಸರ್ಕಲ್ ಇನ್ಸ್ಪೆಕ್ಟರ್ ರವಿ ಬಿ.ಎಸ್ ನೇತೃತ್ವದಲ್ಲಿ ಸಭೆ ಇನ್ಸ್ಪೆಕ್ಟರ್ ರಾಜೇಶ್ ಹಾಗೂನೆಲ್ಯಾಡಿ ಹೂರಠಾಣೆ ಹೆಡ್‍ಕಾನ್‍ಸ್ಟೇಬಲ್ ಕುಶಾಲಪ್ಪ ನಾಯ್ಕ, ಬಾಲಕೃಷ್ಣ, ಪ್ರತಾಪ್ ರೆಡ್ಡಿ, ನಾಗರಾಜ್ ಪಂಜಳ ಸಮೀಪ ಲಾರಿ ಚಾಲಕ ಅಜಯ್ ನನ್ನು ಬಂಧಿಸಿ ಲಾರಿ ಸಮೇತ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನಿಂದ ಉಡುಪಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಆಗಿದ್ದು ಚಾಲಕ ಅಜಯ್ ಮೂಲತಃ ಬೆಂಗಳೂರಿನವನಾಗಿದ್ದಾನೆ. ಮೃತ ದೇಹವನ್ನು ಉಪ್ಪಿನಂಗಡಿ ಆಸ್ಪತ್ರೆಯ ಶವಗಾರಕ್ಕೆ ಕಳಿಸಲಾಗಿದೆ.

Read More

ಉಡುಪಿ: ವಿದೇಶಿ ಕರೆನ್ಸಿ ವಿನಿಮಯದ ನೆಪದಲ್ಲಿ ಹಲವು ವ್ಯಕ್ತಿಗಳಿಗೆ ವಂಚನೆ ಮಾಡಿದ ಅಂತರರಾಜ್ಯ ಖದೀಮರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲದ, ಉತ್ತರ ಪ್ರದೇಶದಲ್ಲಿ ನೆಲಿಸಿದ್ದ ಮೊಹಮ್ಮದ್ ಪೋಲಾಶ್ ಖಾನ್ (42), ಮುಂಬೈ ಮೂಲದ, ಮಹಮ್ಮದ್ ಮಹತಾಬ್ ಬಿಲ್ಲಾಲ್ ಶೇಕ್ (43), ಪಶ್ಚಿಮ ಬಂಗಾಳದ ಮಹಮ್ಮದ್ ಫಿರೋಜ್ (30), ದೆಹಲಿಯಲ್ಲಿ ವಾಸವಾಗಿರುವ ನೂರ್ ಮಹಮ್ಮದ್ (36) ಹರಿಯಾಣದ ಮೀರಜ್ ಮತ್ತು ದೆಹಲಿ ಮೂಲದ ಮೊಹಮ್ಮದ್ ಜಹಾಂಗೀರಾ (60) ಎಂದು ಗುರುತಿಸಲಾಗಿದೆ. ಆರೋಪಿಗಳು ಕರೆನ್ಸಿ ವಿನಿಮಯದಲ್ಲಿ ಕಡಿಮೆ ಬೆಲೆಗೆ ಯುಎಇ ದಿರ್ಹಾಮ್ ನೀಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಗಳ ವಿರುದ್ಧ ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣೆಗಳಲ್ಲಿ ವಂಚನೆಗೆ ಒಳಗಾದವರು ದೂರು ದಾಖಲಿಸಿದ್ದರು. ಈ ಪ್ರಕರಣವನ್ನು ಭೇದಿಸಲು ಉಡುಪಿ ಎಸ್ಪಿ ಅಕ್ಷಯ ಎಂ.ಹೆಚ್ ವಿಶೇಷ ತಂಡ ರಚಿಸಿದ್ದರು. ಆರೋಪಿಗಳು ಕಡಿಮೆ ದರದಲ್ಲಿ ಭಾರತೀಯ ಕರೆನ್ಸಿಗೆ ಬದಲಾಗಿ ಯುಎಇ ದಿರ್ಹಾಮ್‌ಗಳನ್ನು ನೀಡುವ ಮೂಲಕ ಸಂತ್ರಸ್ತರನ್ನು ಮೊದಲು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ. ನಂತರ, ಸಂತ್ರಸ್ತರಿಗೆ ತಮ್ಮ ಬಳಿ ಹೆಚ್ಚು…

Read More

ಕೊಣಾಜೆ : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ದಿ. ಅಬ್ದುಲ್ ಖಾದ್ರಿ ಅವರ ಪತ್ನಿ ನೆಬಿಸಾ ಎಂಬವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ರವಿವಾರ ರಾತ್ರಿ ಸಂಭವಿಸಿದೆ ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್’ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಪ್ರಾಣ ಹಾನಿಯಾಗಿಲ್ಲ, ಆದರೆ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಮನೆಯ ಪೀಠೋಪಕರಣಗಳು, ಪಾತ್ರೆಗಳು, ವಿದ್ಯುತ್ ಉಪಕರಣಗಳು, ಗೃಹ ಉಪಯೋಗಿ ಪರಿಕರಗಳು, ಮಕ್ಕಳ ಶಾಲಾ ಪಠ್ಯ ಪುಸ್ತಕ ಇನ್ನಿತರ ವಸ್ತುಗಳು ಸಂಪೂರ್ಣ ಭಸ್ಮಗೊಂಡಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದು ಶಾಸಕ ಯು ಟಿ ಖಾದರ್ ಭೇಟಿ ನೀಡಿದ್ದು, ಅದೇ ರೀತಿ ಸ್ಥಳೀಯ ಪಂಚಾಯತ್ ಪ್ರತಿನಿಧಿಗಳಾದ ರೆಹನಾ ನಝೀರ್, ಅನೀಸ್, ಹನೀಫ್, ರೆಹನಾ ಮುಹಮ್ಮದ್, ಅಬ್ದುಲ್ ಬಶೀರ್ ಎಸ್ .ಎಂ.‌ ಮತ್ತಿತರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕದಳ ಭೇಟಿ ನೀಡಿ, ಸ್ಥಳೀಯರೊಂದಿಗೆ ಸೇರಿಕೊಂಡು ಬೆಂಕಿ ನಂದಿಸುವಲ್ಲಿ…

Read More

ಮಂಗಳೂರು ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಕುಲ್‌ದೀಪ್‌ ಆರ್‌ ಜೈನ್‌ ನೇತೃತ್ವದಲ್ಲಿ ಇಂದು ಪೊಲೀಸರು ದಾಳಿ ನಡೆಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ 150 ಕ್ಕೂ ಅಧಿಕ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರು ನಗರ ಕಮೀಷನರೇಟ್‌ ವ್ಯಾಪ್ತಿಯ 5 ಪೊಲೀಸ್‌ ಠಾಣೆಗಳ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಈ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ನಿನ್ನೆ ಮುಂಜಾನೆ ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ 60 ಮಂದಿಯ ಮನೆಗೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದರು. ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ, ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆ ಮಾಡಿದರು.

Read More

ವಿಟ್ಲ: ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಲಮುಡ್ನೂರು ಗ್ರಾಮದ ಏಲ್ಕಾಜೆ ಎಂಬಲ್ಲಿ ನಡೆದಿದೆ. ಯಮುನಾ ಆತ್ಮಹತ್ಯೆ ಮಾಡಿಕೊಂಡವರು. ಈ ಬಗ್ಗೆ ಅವರ ಪುತ್ರ ಉಮೇಶ್ ಪೂಜಾರಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ. ತನ್ನ ತಾಯಿಗೆ ಸಕ್ಕರೆ ಕಾಯಿಲೆ, ರಕ್ತದ ಒತ್ತಡವಿದ್ದು, ಔಷಧ ತೆಗೆದುಕೊಂಡರೂ ಗುಣವಾಗದ ಹಿನ್ನಲೆಯಲ್ಲಿ ಜಿಗುಪ್ಸೆಗೊಂಡು ಮನೆಯ ಊಟದ ಕೋಣೆಯ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More