ಬಂಟ್ವಾಳ: ಸಿದ್ದಕಟ್ಟೆಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಗೆ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ಪೋಷಕರಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಕಳೆದ ಆಗಸ್ಟ್‌ನಲ್ಲಿ ಸಿದ್ದಕಟ್ಟೆಯಲ್ಲಿ ಸ್ಕೂಟರ್ ಮತ್ತು ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಿದ ಎಎಸ್‌ಐ ವಿಜಯ್ ಅವರು ನೋಟಿಸ್ ಜಾರಿ ಮಾಡಿದ್ದರು. ಪ್ರಸ್ತುತ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಬಾಲಕಿಯ ತಾಯಿಗೆ ದಂಡ ವಿಧಿಸಿ ಆದೇಶ ನೀಡಿದೆ.
Author: main-admin
ಮಂಗಳೂರು: ನಗರದ ತೆಂಕ ಎಕ್ಕಾರು ಗ್ರಾಮದಲ್ಲಿ ಕಂಠ ಪೂರ್ತಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಪತ್ನಿಯೊಂದಿಗೆ ಜಗಳವಾಡಿ ಕೊಲೆಗೈದಿರುವ ಘಟನೆ ನಡೆದಿದೆ. ದುರ್ಗೇಶ್ ಎಂಬಾತ ಕುಡಿದ ಮತ್ತಿನಲ್ಲಿ ತನ್ನ ಹೆಂಡತಿ ಸರಿತಾಳೊಂದಿಗೆ ಜಗಳವಾಡಿದ್ದಾನೆ. ಜಗಳ ತಾರಕಕ್ಕೇರಿ ಮರದ ರೀಪಿನಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ತಾಯಿಯ ಹತ್ಯೆ ಕಂಡು ಮಗ ರಾಹುಲ್ ಹೆದರಿ ತನ್ನ ಅಜ್ಜಿ ಮನೆಗೆ ಓಡಿ ಹೋಗಿದ್ದಾನೆ. ಸ್ವತಃ ಆರೋಪಿಯೇ ಇಂದು ಬೆಳಗ್ಗೆ ತನ್ನ ಅಣ್ಣ ಮಧುಗೆ ಕರೆ ಮಾಡಿ ಸರಿತಾ ಮೃತಪಟ್ಟಿರುವುದಾಗಿ ತಿಳಿಸಿದ್ದಾನೆ. ಮಧು ಸ್ಥಳಕ್ಕೆ ಬಂದು ನೋಡಿದಾಗ ದುರ್ಗೇಶನೇ ಸರಿತಾಳನ್ನು ಕೊಲೆ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮೇರ್ಲ ಎಂಬಲ್ಲಿ ಮಹಿಳೆ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತ ಮಹಿಳೆ ಸ್ಥಳೀಯ ನಿವಾಸಿ ರವಿ ಎಂಬವರ ಪತ್ನಿ ಬಿಂದು(48)ಎಂಬಾಕೆಯಾಗಿದ್ದಾರೆ. ಈಕೆ ನ.27ರಂದು ಮನೆಯಲ್ಲಿ ರಬ್ಬರಿಗೆ ಉಪಯೋಗಿಸುವ ಆ್ಯಸಿಡ್ ಸೇವಿಸಿದ್ದಾರೆ. ಮನೆಯವರು ಈಕೆಯನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಆಕೆ ಸೋಮವಾರ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.
ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಬೈಲ್ ನಲ್ಲಿ ಮತ್ತಷ್ಟು ಸ್ಪೋಟಕ ಜಿಹಾದಿ ವಿಡಿಯೋಗಳನ್ನು ಪೊಲೀಸರು ಪತ್ತೆ ಹೆಚ್ಚಿದ್ದಾರೆ. ಮತಾಂಧ ಮನಃಸ್ಥಿತಿಯನ್ನು ಹೊಂದಿದ್ದ ಮಹಮ್ಮದ್ ಶಾರೀಕ್‌ನ ಮೊಬೈಲ್‌ನಲ್ಲಿ 1 ಸಾವಿರಕ್ಕೂ ಹೆಚ್ಚು ಜೆಹಾದಿ ವೀಡಿಯೋಗಳು ಪತ್ತೆಯಾಗಿವೆ.ಐಸಿಸ್ ಉಗ್ರರ ವಿಧ್ವಂಸಕ ಕೃತ್ಯಗಳ ವೀಡಿಯೋ ಸೇರಿದಂತೆ 55 ಜಿಬಿಗೂ ಅಧಿಕ ವೀಡಿಯೋ, ಪೊಟೋಗಳು ಆತನ ಮೊಬೈಲ್ ಮತ್ತು ಪೆನ್‌ಡ್ರೈವ್‌ನಲ್ಲಿ ಪತ್ತೆಯಾಗಿವೆ ಎನ್ನಲಾಗಿದೆ. ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಗ್ರ ಶಾರೀಕ್‍ನನ್ನೂ ಹತ್ಯೆಗೆ ಸಂಚಿನ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಶಾರೀಕ್ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಶಾರೀಕ್ ಕೊಠಡಿ ಪ್ರವೇಶದ ಬಳಿ ಮೆಟಲ್ ಡಿಟೆಕ್ಟರ್ ಅಳವಡಿಸಿಸಲಾಗಿದೆ.
ಸುಳ್ಯ : ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ನಿನ್ನೆ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳಿಂದ ಸಚಿವರಿಗೆ ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪರೀಕ್ಷೆ ನಡೆಸಿದ್ದು ಸಚಿವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಎರಡು ದಿನ ಸಚಿವರು ಸಾರ್ವಜನಿಕ ಸಂಪರ್ಕಕ್ಕೆ ಲಭ್ಯರಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ಕಡಬ: ಅನ್ಯಕೋಮಿನ ಜೋಡಿಯೊಂದು ರೂಂನಲ್ಲಿ ಇದೆ ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದು ಪೊಲೀಸರ ಮದ್ಯ ಪ್ರವೇಶದಿಂದ ವಿಚಾರ ತಿಳಿಗೊಳಿಸಿದ ಘಟನೆ ಪೆರಾಬೆ ಗ್ರಾಮದ ಕುಂತೂರಿನಲ್ಲಿ ನಡೆದಿದೆ. ಮುಡಿಪಿನ ಯುವಕ ಮಂಜೇಶ್ವರ ಮೂಲದ ಅನ್ಯ ಕೋಮಿನ ಯುತಿಯನ್ನು ಪೆರಾಬೆ ಬಳಿ ಬಾಡಿಗೆ ಕೋಣೆಗೆ ಕರೆತಂದಿದ್ದಾನೆ.ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದ್ದರು. ಕಟ್ಟಡದ ಮಾಲಕ ಸ್ಥಳಕ್ಕೆ ಬರುವಂತೆಯೂ ಆಗ್ರಹಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಕಡಬ ಠಾಣಾ ಎಸ್ .ಐ ಆಂಜನೇಯ ರೆಡ್ಡಿ ನೇತೃತ್ವದ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದು,ನೆರೆದವರನ್ನು ತೆರಳುವಂತೆ ಸೂಚಿಸಿದ್ದಾರೆ. ಯುವತಿಯನ್ನು ಪೊಲೀಸರು ಆಕೆಯ ಮನೆಗೆ ಕಳುಹಿಸಿರುವುದಾಗಿ ತಿಳಿದು ಬಂದಿದೆ.ಆದರೆ ಯುವಕ ಪರಾರಿಯಾಗಿದ್ದಾನೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಗಳೂರು: ತುಳುನಾಡಿನ ದೈವಾರಾಧನೆ ಹೆಸರಿನಲ್ಲಿ ಮತ್ತಷ್ಟು ಸಿನಿಮಾ ತೆಗೆಯುವಂತ ಇಂಗಿತವನ್ನು ಅನೇಕರು ಕಾಂತಾರ ಚಿತ್ರದ ನಂತ್ರ ವ್ಯಕ್ತ ಪಡಿಸಿದ್ದಾರೆ ಎನ್ನಲಾಗುತ್ತದೆ. ಈ ಹಿನ್ನಲೆಯಲ್ಲಿ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವವರ ವಿರುದ್ಧ ದೈವಾರಾಧಕರು ತೊಡೆತಟ್ಟಿ ನಿಂತಿದ್ದಾರೆ. ಅದೇ ದೈವಾರಾಧನೆ ಸಿನಿಮಾ ಮಾಡಿದ್ರೇ, ಮುಲಾಜಿಲ್ಲದೇ ವಿರೋಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇನ್ಮುಂದೆ ವ್ಯಾಪಾರದ ಹೆಸರಿನಲ್ಲಿ ದೈವಾರಾಧನೆಯನ್ನು ನಡೆಸಿದ್ರೇ ಕಾನೂನು ಕ್ರಮ ಹಾಗೂ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂಬುದಾಗಿ ದೇವಾರಾಧಕರು ಹೇಳಿದ್ದಾರೆ. ಅಲ್ಲದೇ ದೈವಾರಾಧನೆ ಸಿನಿಮಾ ಮಾಡಿದ್ರೇ ವಿರೋಧಿಸುವುದಾಗಿ ಹೇಳಿದ್ದಾರೆ. ದೈವದ ಕೋಲಾ ಸೇವೆಯ ಹೆಸರಿನಲ್ಲಿ ಲಕ್ಷಾಂತರ ಲೂಟಿ ಮಾಡಿರೋದಾಗಿಯೂ ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನಾ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿಗಳು ಆರೋಪಿಸಲಾಗಿವೆ. ಇಂದು ಮಂಗಳೂರಿನ ಕುತ್ತಾರು ಬಳಿಯ ಕೊರಗಜ್ಜನ ಆದಿಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಸಮಿತಿಗಳು ಸಲ್ಲಿಸಿದವು. ಈ ಸಂದರ್ಭದಲ್ಲಿಯೇ ದೈವಾರಾಧಕರು ತುಳುನಾಡ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವುದು ಸರಿಯಲ್ಲ ಎಂಬುದಾಗಿ ಕಿಡಿಕಾರಿದ್ದಾರೆ.
ಮಂಗಳೂರು: ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಬಸ್ಸಿನಲ್ಲಿ ಸಂಚರಿಸುತ್ತಿದ್ದ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮುತ್ತು(18), ಪ್ರಕಾಶ್(21) ಮತ್ತು ರಾಕೇಶ್(23) ಎಂಬವರು ಬಂಧಿತ (Arrest) ಆರೋಪಿಗಳಾಗಿದ್ದಾರೆ. ಕಾರ್ಕಳದ ಖಾಸಗಿ ಕಾಲೇಜು ವಿದ್ಯಾರ್ಥಿ ಸೈಯದ್ ರಶೀಮ್ ಉಮರ್(20) ಎಂಬವರ ಮೇಲೆ ನ.24ರಂದು ಬಸ್ಸಿನಲ್ಲಿ ಹಲ್ಲೆ ನಡೆದಿತ್ತು. ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸೈಯದ್ ರಶೀಮ್ ಉಮರ್‌ಗೆ ಅಂದು ಸಂಜೆ ನಗರದ ನಂತೂರು ಜಂಕ್ಷನ್ ಬಳಿ ತಂಡವೊಂದು ಹಲ್ಲೆ ನಡೆಸಿತ್ತು. ಬಸ್ಸಿನೊಳಗೆ ನುಗ್ಗಿದ ತಂಡ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆ ಮತ್ತು ಬೆತ್ತದಿಂದ ಹಲ್ಲೆ ನಡೆಸಿರುವುದಾಗಿ ರಶೀಮ್ ಉಮರ್ ಕದ್ರಿ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದರು. ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಲ್ಲದೆ ಬಸ್ಸಿನಿಂದ ಕೆಳಗೆ ಇಳಿಸಿ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂಬುದಾಗಿ ಜೀವ ಬೆದರಿಕೆಯೊಡ್ಡಿದೆ ಎಂದು ಸೈಯದ್ ರಶೀಮ್ ಉಮರ್ ದೂರಿನಲ್ಲಿ ಆರೋಪಿಸಿದ್ದರು. ಈ…
ಉಡುಪಿ : ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡ ಘಟನೆ ಉಡುಪಿಯ ಹೊಟೇಲ್ ಒಂದರಲ್ಲಿ ನಡೆದಿದೆ. ಬೆಳಗ್ಗೆ ಏಳು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್ ಹೋಟೆಲ್ ನಲ್ಲಿನ ಗ್ಯಾಸ್ ಸಿಲಿಂಡರ್ ನಲ್ಲಿ ಸೋರಿಕೆ ಉಂಟಾಗಿತ್ತು ಇದರಿಂದ ಬೆಂಕಿ ಕಾಣಿಸಿಕೊಂಡು ಕೆಲವು ಸುತ್ತುಗಳಿಗೆ ಹಾನಿಯಾಗಿತ್ತು. ಕೂಡಲೆ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಸಂಭವಿಸಬಹುದ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ : ಮಂಗಳೂರಿನ ಕುಕ್ಕರ್ ಬಾಂಬರ್ ಶಾರೀಕ್ ನ ಕುರಿತು ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗಗೊಂಡಿದ್ದು, ಶಾರಿಕ್ ಮೈಸೂರು, ಮಂಗಳೂರು ಅಷ್ಟೇ ಅಲ್ಲದೇ ಉಡುಪಿಯ ಶ್ರೀ ಕೃಷ್ಣ ಮಠಕ್ಕೂ ಭೇಟಿ ನೀಡಿದ್ದ ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಶಂಕಿತ ಉಗ್ರ ಶಾರಿಕ್ ಉಡುಪಿಯ ಶ್ರೀಕೃಷ್ಣ ಮಠ, ರಥಬೀದಿಯಲ್ಲಿ, ನಗರದ ಬಸ್ ನಿಲ್ದಾಣದಲ್ಲೆಲ್ಲಾ ಓಡಾಡಿದ್ದ, 2022ರ ಅಕ್ಟೋಬರ್ 11ರಂದು ಶ್ರೀಕೃಷ್ಣ ಮಠ ಹಾಗೂ ಉಡುಪಿಯ ರಥಬೀದಿಯಲ್ಲಿ ಸುತ್ತಾಡಿರೋ ಬಗ್ಗೆ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯ ಮಂಗಳೂರು ಪೋಲಿಸರ ತಂಡ ಉಡುಪಿ ಶ್ರೀ ಕೃಷ್ಣ ಮಠ, ರಥಬೀದಿ ಪರಿಸರದಲ್ಲಿ ತಪಾಸಣೆ ನಡೆಸಿದ್ದಾರೆ. ಉಡುಪಿ ರಥಬೀದಿಯಲ್ಲಿ ಶಾರೀಕ್ ಸುತ್ತಾಡುತ್ತಿದ್ದ ವೇಳೆ ಇಲ್ಲಿಂದಲೇ ಕೆಲವರಿಗೆ ಫೋನ್ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.










