ಇಸ್ಲಾಮಾಬಾದ್: ಪಾಕಿಸ್ತಾನದ ಜಲಗಡಿಯೊಳಗೆ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿ ಪಾಕ್ ಜೈಲಿನಲ್ಲಿದ್ದ 199 ಮಂದಿ ಭಾರತೀಯರನ್ನು ಮೇ 12ರ ಶುಕ್ರವಾರದಂದು ಪಾಕ್ ಅಧಿಕಾರಿಗಳು ಬಿಡುಗಡೆ ಮಾಡಲಿದ್ದಾರೆ. ಸಿಂಧ್‌ನ ಜೈಲು ವಿಭಾಗದ ಪೊಲೀಸ್ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಭಾರತೀಯ ಮೀನುಗಾರರನ್ನು ಲಾಹೋರ್‌ಗೆ ಕಳುಹಿಸಿ, ಅಲ್ಲಿಂದ ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ. ಸದ್ಯಕ್ಕೆ ಈ ಮೀನುಗಾರರು ಲಾಂಧಿ ಜೈಲಿನಲ್ಲಿ ಇರಿಸಲಾಗಿದೆ. 654 ಭಾರತೀಯ ಮೀನುಗಾರರು ಕರಾಚಿ ಜೈಲುಗಳಲ್ಲಿ ಇದ್ದಾರೆ. ಅಂದಾಜು 83 ಪಾಕಿಸ್ತಾನಿ ಮೀನುಗಾರರು ಭಾರತೀಯ ಜೈಲುಗಳಲ್ಲಿದ್ದಾರೆ. 654 ಭಾರತೀಯ ಮೀನುಗಾರರ ಪೈಕಿ 631 ಮಂದಿ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ.
Author: main-admin
ನವದೆಹಲಿ : ಕರ್ನಾಟಕದಲ್ಲಿ ನಾಳೆ (ಮೇ 10) ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಪ್ರಚಾರ ಕೊನೆಗೊಂಡ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಜ್ಯದ ಜನತೆಗೆ ಅವರ ಕನಸುಗಳನ್ನು ತಮ್ಮ ಕನಸು ಎಂಬ ಭರವಸೆ ನೀಡಿದರು. ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಪ್ರಧಾನಿ ಮೋದಿ, “ಪ್ರತಿಯೊಬ್ಬ ಕನ್ನಡಿಗನ ಕನಸು ನನ್ನ ಸ್ವಂತ ಕನಸು, ನಿಮ್ಮ ನಿರ್ಣಯವೇ ನನ್ನ ನಿರ್ಣಯ” ಎಂದು ಹೇಳಿದ್ದಾರೆ. ಇದೇ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಪ್ರಧಾನಿಗಳು ಮಾತಮಾಡಿದರು
ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮಾಟೋಗ್ರಾಫ್, ದೃಶ್ಯಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126 ರ ಪ್ರಕಾರ ನಿಷೇದಿಸಲಾಗಿದೆ. ಚುನಾವಣಾ ಸಂಬಂಧೀ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವಂತಹ ವಿಷಯಗಳಾಗಿರುತ್ತವೆ.ಈ ಕಾಯ್ದೆಯನ್ನು ಉಲ್ಲಂಘಿಸುವವರಿಗೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿದೆ.ಟಿವಿ/ರೇಡಿಯೋ/ಕೇಬಲ್ ನೆಟ್.ವರ್ಕ್ ಮತ್ತು ಎಲ್ಲ ಡಿಜಿಟಲ್ ಮಾಧ್ಯಮಗಳು ಮತದಾನಪೂರ್ವ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳು ಪ್ರಸಾರ ಮಾಡದಂತೆ ಕ್ರಮವಹಿಸಬೇಕು.ಕಾರ್ಯಕ್ರಮದಲ್ಲಿ ಭಾಗವಹಿಸುವವರು(ಪ್ಯಾನಲಿಸ್ಟ್) ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು/ಮನವಿಗಳು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಕೂಡ ಪ್ರಸಾರ ಮಾಡಕೂಡದು.ನಿಗದಿತ 48 ಗಂಟೆಗಳ ಅವಧಿಯಲ್ಲಿ ಓಪಿನಿಯನ್ ಪೋಲ್ ಫಲಿತಾಂಶ ಪ್ರಕಟಿಸುವುದು ಚರ್ಚೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು. ಅದೇ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು…
ಬೆಂಗಳೂರು: ಮಾರ್ಚ್ 29 ರಂದು ಜಾರಿಯಾದ ಚುನಾವಣೆ ನೀತಿ ಸಂಹಿತೆ ಆರಂಭವಾದ ಬಳಿಕ ₹ 147.46 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. 2018ರ ಚುನಾವಣೆಗೆ ಹೋಲಿಕೆ ಮಾಡಿದರೆ ಇದು ಶೇ 100 ರಷ್ಟು ಹೆಚ್ಚು. ಸುಮಾರು ₹ 100 ಕೋಟಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ವಶಪಡಿಸಿಕೊಳ್ಳಲಾಗಿದ್ದು, ₹ 24.22 ಕೋಟಿ ಮೌಲ್ಯದಷ್ಟು ಮತದಾರರಿಗೆ ವಿತರಿಸಲು ಸೀರೆ, ಕುಕ್ಕರ್ ಹಾಗೂ ಇನ್ನಿತರ ವಸ್ತುಗಳನ್ನು ಜಪ್ತಿಮಾಡಲಾಗಿದೆ.
ಮಂಗಳೂರು: ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ, ಮತದಾರರು ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ, ಮೇ.10ರ ಬುಧವಾರ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳು) ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಡಿಪಿಎಆರ್‌ನ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಮತದಾನವು ಮೇ 10ರಂದು ಪೂರ್ವಾಹ್ನ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಜರುಗಲಿದ್ದು, ಈ ಬಗ್ಗೆ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ತಿಳಿಸಿದರು. ಅವರು ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ವಿವರಣೆ ನೀಡಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಮತದಾನವು ಮೇ ೧೦ರಂದು ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಜರುಗಲಿದ್ದು, ಈ ಬಗ್ಗೆ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ.ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳಿಗೆ ಅಂತಿಮ ಮತದಾರರ ಪಟ್ಟಿಯ ಪ್ರತಿಯನ್ನು ನೀಡಲಾಗಿದೆ. ಎಲ್ಲಾ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಮತಗಟ್ಟೆಗಳ ಪಟ್ಟಿಯನ್ನು ಒದಗಿಸಲಾಗಿದೆ.ಮತದಾರರು EPIC CARD ಅಥವಾ ಚುನಾವಣಾ ಆಯೋಗ ಅನುಮೋದಿಸಿದ ಆಧಾರ್ ಕಾರ್ಡ್,ನರೇಗಾ ಉದ್ಯೋಗ ಗುರುತಿನ ಚೀಟಿ,, ಅಂಚೆ ಕಛೇರಿ ಮತ್ತು ಬ್ಯಾಂಕ್‌ಗಳಲ್ಲಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ ಗುರುತಿನ ದಾಖಲೆಗಳೊಂದಿಗೆ ಹಾಜರಾಗಬೇಕು.ವಿಶೇಷ ಚೇತನ…
ಪುತ್ತೂರು:ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇ 8ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಮೇ13ರಂದು ಮಧ್ಯರಾತ್ರಿಯವರೆಗೆ ಸೇರಿದಂತೆ ಮೂರು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ. ಈ ಸಂಬಂಧ ಜಿಲ್ಲಾಡಳಿತದಿಂದ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಮತದಾನದ ಪ್ರಯುಕ್ತ ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಏಣಿಕೆ ಪ್ರಯುಕ್ತ ಮೇ13ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆಯವೆರೆಗ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತದಾನ ಮತ್ತು ಮತಎಣಿಕೆಯ ಸಂದರ್ಭದಲ್ಲಿ ಮದ್ಯದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಿ, ಶುಷ್ಕ ದಿನ(ಡ್ರೈ ಡೇ)ಎಂದು ಘೋಷಿಸಿ ಆದೇಶಿಸಿದೆ. ಈ ದಿನಗಳಂದು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ತರಹದ ಮದದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮದ್ಯ ಮಾರಾಟವನ್ನು ಸಂಪೂರ್ಣ…
ಉಳ್ಳಾಲ: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್‍ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಸಂಭವಿಸಿದೆ. ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾದವರು. ನಾಟೆಕಲ್ ಸಮೀಪ ಅಸೈಗೋಳಿಯಿಂದ ಚೆಂಬುಗುಡ್ಡೆ ಸಾರ್ವಜನಿಕ ಸಭೆಗೆ ತೆರಳುತ್ತಿದ್ದ ಕಾಂಗ್ರೆಸ್ ಪ್ರಚಾರದ ವಾಹನ ಎಸ್ ಡಿಪಿಐ ಅವರ ರ್‍ಯಾಲಿಗೆ ನಾಟೆಕಲ್ ಸಮೀಪ ಎದುರಾಗಿತ್ತು. ಈ ಸಂದರ್ಭ ಎಸ್ ಡಿಪಿಐ ಕಾರ್ಯಕರ್ತರ ಬೈಕ್ ಹಾಗೂ ರಿಕ್ಷಾ ರ್‍ಯಾಲಿಯಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಇದೇ ಸಂದರ್ಭ ಕಾಂಗ್ರೆಸ್ ಪರವಾದ ಹಾಡನ್ನು ಚುನಾವಣಾ ಪ್ರಚಾರ ವಾಹನದಲ್ಲಿ ಹಾಕಲಾಗಿತ್ತು. ಇದನ್ನು ಎಸ್‍ಡಿಪಿಐ ಕಾರ್ಯಕರ್ತರು ಆಕ್ಷೇಪಿಸಿ, ನಿಲ್ಲಿಸುವಂತೆ ಸೂಚಿಸಿದ್ದರು. ಗಣನೆಗೆ ತೆಗೆದುಕೊಳ್ಳದ ಚಾಲಕ ವಾಹನಕ್ಕೆ ಅಡ್ಡ ಇದ್ದವರಿಗೆ ಹಾರ್ನ್ ಹಾಕಲು ಆರಂಭಿಸಿದ್ದಾರೆ. ಇದರಿಂದ ಕೆರಳಿದ ಎಸ್ ಡಿಪಿಐ ಕಾರ್ಯಕರ್ತರು ಚಾಲಕ ನೌಫಾಲ್ ಕಾಲರ್ ಪಟ್ಟಿ ಹಿಡಿದೆಳೆದು ಕೆನ್ನೆಗೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ…
ಜೈಪುರ: ರಾಜಸ್ಥಾನದ ಹನುಮಾನ್ ಗಢ್ ಬಳಿ ಮಿಗ್-21 ಯುದ್ಧ ವಿಮಾನ ಪತನಗೊಂಡು ಇಬ್ಬರು ಸ್ಥಳೀಯರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ವಿಮಾನದಲ್ಲಿದ್ದ ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಐಎಎಫ್ ಮೂಲಗಳ ಪ್ರಕಾರ, ಯುದ್ಧವಿಮಾನವು ಸೂರತ್‌ಗಢದಿಂದ ಹೊರಟಿತ್ತುಎನ್ನಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಮೈಸೂರು: ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ಸಾಗುತ್ತಿದ್ದ ಬಲರಾಮ (67) ಇದೀಗ ಸಾವನ್ನಪ್ಪಿದ್ದಾನೆ. ಬರೋಬ್ಬರಿ 14 ಬಾರಿ ಅಂಬಾರಿಯನ್ನು ಹೊತ್ತಿದ್ದ ಸೌಮ್ಯ ಸ್ವಭಾವದ ಬಲರಾಮನ ಬಾಯಲ್ಲಿ ಹುಣ್ಣಾಗಿತ್ತು. ಕಳೆದ ಹತ್ತು ದಿನಗಳಿಂದ ನೋವಿನಿಂದ ಬಳಲುತ್ತಿದ್ದ ಬಲರಾಮನಿಗೆ ಆಹಾರ ಸೇವನೆ ಕಷ್ಟವಾಗುತ್ತಿತ್ತು. ಕೂಡಲೇ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ವಿಶ್ವ ಪ್ರಸಿದ್ಧ ಮೈಸೂರು ದಸರಾ ಮೆರವಣಿಗೆಯ ಪ್ರಮುಖ ಆನೆಗಳಲ್ಲಿ ಬಲರಾಮನೂ ಒಬ್ಬನಾಗಿದ್ದ. ಬಲರಾಮನನ್ನು 1987 ರಲ್ಲಿ ಕರ್ನಾಟಕದ ಕೊಡಗು ಪ್ರದೇಶದ ಸೋಮವಾರಪೇಟೆ ಬಳಿಯ ಕಟ್ಟೆಪುರ ಅರಣ್ಯದಲ್ಲಿ ಸೆರೆಹಿಡಿಯಲಾಗಿತ್ತು. ನಂತರ ಈತನನ್ನು ತರಬೇತಿ ಮೂಲಕ ಪಳಗಿಸಲಾಗಿತ್ತು. ದ್ರೋಣನ ನಂತರ ಅಂಬಾರಿಯನ್ನು ಹೊರಲು ಬಲರಾಮ ಆಯ್ಕೆಯಾದನು. ಆದರೆ ಅಂಬಾರಿ ಹೊರಲು ಬಲರಾಮ ಮೊದಲ ಆಯ್ಕೆಯಾಗಿರಲಿಲ್ಲ. 5,600 ಕಿಲೋ ತೂಕ ಇರುವ ಆನೆ ಅರ್ಜುನ, ಆಕಸ್ಮಿಕವಾಗಿ ಮಾವುತನನ್ನು ಕೊಂದಿದ್ದಕ್ಕಾಗಿ ಅಂಬಾರಿ ಹೊರುವ ಅವಕಾಶದಿಂದ ವಂಚಿತನಾಗಿದ್ದನು. ಹೀಗಾಗಿ ಬಲರಾಮನನ್ನು ಆಯ್ಕೆ…










