Author: main-admin

 ಬಂಟ್ವಾಳ: ಭೀಕರ ಗಾಳಿಗೆ ಬೃಹತ್‌ ಗಾತ್ರದ ಮರ ಬಿದ್ದು ಮನೆಯೊಂದು ಸಂಪೂರ್ಣ ಹಾನಿಗೊಳಗಾಗಿ ಮನೆಮಂದಿ ಅಪಾಯದಿಂದ ಪಾರಾದ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ನಿವಾಸಿ ಇಸ್ಮಾಯಿಲ್ ಮದನಿ ಉಸ್ತಾದರ ಮನೆಗೆ ರಾತ್ರಿ ವೇಳೆ ಬಂದ ಭೀಕರ ಗಾಳಿಗೆ ಬೃಹತ್‌ ಗಾತ್ರದ ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ,ಮನೆಯಲ್ಲಿ ಮಲಗಿದ್ದವರೆಲ್ಲಾ ಪವಾಡ ಸದೃಶ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Read More

ರೌಡಿ ಎಡಿಟ್ಸ್ ಎಂದು ಹೇಳಿ ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ರೀಲ್ಸ್ ಗಳು ಪ್ರತಿ ದಿನವೂ ಬಿಡುಗಡೆಯಾಗುತ್ತಿತ್ತು. ಪೊಲೀಸರಿಗೂ ಸಿಗದ ಈ ರೌಡಿಗಳ ಪೋಟೊಗಳು, ವಿಡಿಯೊ ರೀಲ್ಸ್ ಮಾಡುವವರಿಗೆ ಸಿಗುತ್ತಿತ್ತು. ಇದರಿಂದ ಸಹಜವಾಗಿಯೇ ಪೊಲೀಸರಿಗೂ ಅನುಮಾನ ಬಂದಿತ್ತು. ರೌಡಿಗಳಾದ ಸೈಲೆಂಟ್ ಸುನೀಲ, ವಿಲ್ಸನ್ ಗಾರ್ಡನ್ ನಾಗ, ಕಾಡುಬೀಸನಹಳ್ಳಿ ರೋಹಿತ್, ಕುಣಿಗಲ್ ಗಿರಿ ಇಂತಹ ನಟೋರಿಯಸ್ ರೌಡಿಗಳ ರೀಲ್ಸ್ ಗಳೇ ಹೆಚ್ಚಾಗಿವೆ. ಅಷ್ಟಲ್ಲದೆ ಆಯಾ ಏರಿಯಾದ ಪುಡಿ ರೌಡಿಗಳೂ ಕೂಡ ತಮ್ಮ ಹವಾ ಮೇಂಟೇನ್ ಮಾಡುವ ಸಲುವಾಗಿ ರೀಲ್ಸ್ ಮೊರೆ ಹೋಗುತ್ತಿದ್ದರು. ಕೆಲ ರೌಡಿಗಳ ಶಿಷ್ಯಂದಿರು ಬಾಸ್ ಎಂದು ರೀಲ್ಸ್ ಮಾಡಿದರೆ, ಉಳಿದವರು ಕೆಲಸವಿಲ್ಲದ ಕೆಲ ಹುಡುಗರಿಗೆ 500 ರೂ. ಕೊಟ್ಟು ರೀಲ್ಸ್ ಮಾಡಿ ಅಪ್ಲೋಡ್ ಮಾಡುವ ಕೆಲಸಗಳನ್ನು ನೀಡುತ್ತಿದ್ದರು. ಇನ್ನು ಏರಿಯಾದಲ್ಲಿ ತಮ್ಮ ಅಸ್ತಿತ್ವದ ಬಗ್ಗೆ ಇರುವಿಕೆಯನ್ನು ತೋರಿಸಿಕೊಳ್ಳಲು ಹಾಗೂ ಫ್ಯಾನ್ ಫಾಲೋವರ್ಸ್‌ಗಳನ್ನು ಹೆಚ್ಚಿಸಲು ಈ ರೀತಿಯ ಕೆಲಸಗಳನ್ನು ರೌಡಿಗಳ ಶಿಷ್ಯಂದಿರು ಮಾಡುತ್ತಿದ್ದರು. ಎಲ್ಲೋ ಕೂತ ಮುಖ್ಯ ರೌಡಿಯೇ ಈ ರೀತಿಯ…

Read More

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಸೆಪ್ಟೆಂಬರ್ 11 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ…

Read More

ಬಂಟ್ವಾಳ: ಠಾಣಾ ವ್ಯಾಪ್ತಿಯ ಕುಕ್ಕಾಜೆ ಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಾ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಕುಕ್ಕಾಜೆ ಪೇಟೆಯಲ್ಲಿ ಬೆಳ್ಳಂಬೆಳಗ್ಗೆಯೇ ನಂದಾವರ, ಲೊರೆಟ್ಟೊಪದವು ಮತ್ತು ಕುಕ್ಕಾಜೆಯ ಮೂವರು ಯುವಕರು ಡ್ರಗ್ ನಶೆಯಲ್ಲಿ ತೇಲಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು. ಕೆಲದಿನಗಳ ಹಿಂದಷ್ಟೇ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನಾರ್ಶ KPಬೈಲಿನ ಮನೆಯೊಂದರಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದಾಗ ಸಾರ್ವಜನಿಕರು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದರು. ವಿಟ್ಲ ಪೊಲೀಸರು ಬರುವಷ್ಟರಲ್ಲಿ ಸ್ಥಳದಿಂದ ಪರಾರಿಯಾಗಿದ್ದರೂ ಒಬ್ಬಾತ ನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದರು. ವಿಟ್ಲ ಮತ್ತು ಬಂಟ್ವಾಳ ಠಾಣಾ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಡ್ರಗ್ ವ್ಯಸನಿಗಳ ಸಂಖ್ಯೆ ಸಾಕಷ್ಟಿದ್ದು ಸಭ್ಯ ನಾಗರಿಕರಿಗೆ ಕಿರಿಕಿರಿಯಾಗುತ್ತಿದೆ ಎಂದು ಸಾರ್ವಜನಿಕರ ಆರೋಪ ಕೇಳಿಬಂದಿದೆ.

Read More

ಬಂಟ್ವಾಳ: ಇಲ್ಲಿನ ಪರಿಸರದಲ್ಲಿ ಸುರಿದ ಧಾರಾಕಾರ ಮಳೆ ಮತ್ತು ಗಾಳಿಗೆ ಹಲವು ವಿದ್ಯುತ್ ಕಂಬಗಳು, ಮೊಬೈಲ್ ಟವರ್, ಅಂಗಡಿ, ಹೊಟೇಲ್ ಗಳ ನಾಮಫಲಕಗಳು ಧರಾಶಾಹಿಯಾದ ಘಟನೆ  ಮಂಗಳವಾರ(ಜು.23) ರಾತ್ರಿ 10ರ ವೇಳೆಗೆ ನಡೆದಿದೆ.ಘಟನೆಯಿಂದಾಗಿ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದಿಂದ ಕೈಕಂಬದ ತನಕ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವೃತ್ತದ ಬಳಿ ವಿದ್ಯುತ್ ಕಂಬಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದಿದ್ದು ರಸ್ತೆ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು, ಅಗ್ನಿ ಶಾಮಕ ದಳದ ಸಿಬಂದಿ, ಬಂಟ್ವಾಳ ನಗರ ಹಾಗೂ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

Read More

ಮಂಗಳೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧರ ಮಾಡಿದೆ. ನಿಫಾ ವೈರಸ್‌ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಸಾವನ್ನಪ್ಪಿದ್ದ. ಹೀಗಾಗಿ ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಗಳಿಗಾಗಿ ಕೇರಳದಿಂದ ಅನೇಕ ಮಂದಿ ಆಗಮಿಸುತ್ತಾರೆ. ಹೀಗೆ ಆಗಮಿಸಿದವರಲ್ಲಿ ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈವರೆಗೆ ದ.ಕ ಜಿಲ್ಲೆಯಲ್ಲಿ ಯಾವುದೇ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

Read More

ಕುಂಬಳೆ: ನಗರದ ತರವಾಡು ಮನೆಗೆ ನುಗ್ಗಿದ ಕಳ್ಳರು ಬೇರೆ ಬೇರೆ ದೈವಗಳ ಆಯುಧ, ಚಿನ್ನಾಭರಣ, ಬೆಳ್ಳಿ, ತಾಮ್ರ, ಹಿತ್ತಾಳೆಯ ವಿವಿಧ ವಸ್ತುಗಳು, ಹಣವನ್ನು ಎಗರಿಸಿದ ಘಟನೆ ಸಂಭವಿಸಿದೆ. ಕುಂಬಳೆ ಪೇಟೆಯಲ್ಲಿರುವ ಶಬರ ಶಂಕರ ಸೇವಾ ಸಮಿತಿಯ ಕುನ್ನಿಲ್‌ಪಾರ ತರವಾಡು ಕ್ಷೇತ್ರ ಹಾಗೂ ತರವಾಡು ಮನೆಯಿಂದ ಚಿನ್ನಾಭರಣ, ಭಂಡಾರ ಸಹಿತ ವಿವಿಧ ಸೊತ್ತುಗಳು ಕಳವಿಗೀಡಾಗಿದೆ. ಚಿನ್ನದಿಂದ ತಯಾರಿಸಲಾದ ಒಂದು ಹೂವು, ಹಾಗೂ ಕತ್ತಿ ಕಳವಿಗೀಡಾಗಿದೆ. ತರವಾಡು ಕ್ಷೇತ್ರದಿಂದ ಶ್ರೀ ವಯನಾಟು ಕುಲವನ್ ದೈವದ ಬೆಳ್ಳಿಯಿಂದ ತಯಾರಿಸಲಾದ ಆಯುಧ, ವಿಷ್ಣುಮೂರ್ತಿ ದೈವದ ಎರಡು ಆಯುಧಗಳು, ತೊಂಡಚ್ಚಮ್ಮಾರ್ ದೈವದ ಆಯುಧ, ಹಿತ್ತಾಳೆಯ ಮೂರು ಪಾತ್ರೆಗಳು, 25 ಕಾಲುದೀಪಗಳು, ಚೆಂಬು, ಕಾಣಿಕೆ ಹುಂಡಿ, ವೆಂಕಟ್ರಮಣ ದೇವರ ಮುಡಿಪು ಕಳವಿಗೀಡಾಗಿದೆ. ಕಾಣಿಕೆ ಹುಂಡಿಯಲ್ಲಿ ಸುಮಾರು 1 ಸಾವಿರ ರೂಪಾಯಿ, ಮುಡಿಪಿನಲ್ಲಿ ಸುಮಾರು 15 ಸಾವಿರ ರೂಪಾಯಿಗಳಿತ್ತೆಂದು ಸಂಬಂಧಪಟ್ಟವರು ತಿಳಿಸಿದ್ದಾರೆ. ಜು. 21 ರ ಸಂಜೆ ಕ್ಷೇತ್ರದಲ್ಲಿ ದೀಪ ಹಚ್ಚಲು ಹೋದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ತರವಾಡು ಕ್ಷೇತ್ರ…

Read More

ಬೆಂಗಳೂರು: ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಲ್ಲಿ ನೀವು ಏನನ್ನು ನೋಡಬಹುದು ಎಂದು ಹೇಳಲು ಸಾಧ್ಯವಿಲ್ಲ. ಬೆಳಗ್ಗಿನಿಂದ ಸಂಜೆಯವರೆಗೂ ವಿವಿಧ ರೀತಿಯ ವೀಡಿಯೋಗಳು ವೈರಲ್ ಆಗಿದ್ದು, ಇದರಲ್ಲಿ ಫೈಟಿಂಗ್, ಡ್ಯಾನ್ಸ್ ಮತ್ತು ವಿಚಿತ್ರ ಕೃತ್ಯಗಳನ್ನು ಮಾಡುವ ವೀಡಿಯೊಗಳು ಸೇರಿವೆ. ರೀಲ್ಸ್​​ ಮಾಡಬೇಕು ಹೆಚ್ಚಿನ ಜನರು ವೀಕ್ಷಣೆ ಮಾಡಬೇಕು ಬೇಗನೆ ಜನಪ್ರಿಯತೆ ಪಡೆಯಬೇಕು ಎಂದು ಹಕವರು ಹಂಬಲಿಸುತ್ತಿರುತ್ತಾರೆ. ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ ಅವರು ಬಿಸಿ ಮುಟ್ಟಿಸಿದ್ದಾರೆ. ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿರುವ ಅವರು, ಇಲಾಖೆಗೆ ಸಂಬಂಧಪಡದೇ ಇರುವ ವಿಷಯಗಳು ಇಲಾಖೆಯ ಘನತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ. ಪೊಲೀಸ್ ಸಮವಸ್ತ್ರವು ಪೊಲೀಸರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ. ಡಿಜಿಟಲ್ ಫೋರಮ್​​ನಲ್ಲಿ ಇದರ ಬಳಕೆಯು ಈ ಮೌಲ್ಯಗಳನ್ನು ಪ್ರತಿಬಿಂಬಿಸುವಂತಿರಬೇಕಾಗುತ್ತದೆ. ಹಾಗಾಗಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವವರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು, ಇತ್ತೀಚಿನ ದಿನಗಳಲ್ಲಿ…

Read More

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-2025ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಬಜೆಟ್ 2024 ರ ನಂತರ ಅಗ್ಗವಾಗಲಿರುವ ವಿಷಯಗಳಲ್ಲಿ ಮೊಬೈಲ್ ಫೋನ್ಗಳು, ಚಾರ್ಜರ್ಗಳು ಸೇರಿವೆ, ಅವುಗಳ ಮೇಲೆ 15% ಕಸ್ಟಮ್ ಸುಂಕವನ್ನು ಕಡಿತಗೊಳಿಸಲಾಗಿದೆ. ಕ್ಯಾನ್ಸರ್ ಔಷಧಿಗಳು ಮತ್ತು ಮೊಬೈಲ್ ಫೋನ್ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಗಮನಾರ್ಹವಾಗಿ ಕಡಿಮೆ ಮಾಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಕಟಿಸಿದ್ದಾರೆ. ಹೆಚ್ಚುವರಿಯಾಗಿ, ಆಮದು ಮಾಡಿದ ಚಿನ್ನ, ಬೆಳ್ಳಿ, ಚರ್ಮದ ಸರಕುಗಳು ಮತ್ತು ಸಮುದ್ರಾಹಾರದ ಬೆಲೆಯೂ ಕಡಿಮೆಯಾಗುವ ನಿರೀಕ್ಷೆಯಿದೆ. ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇಕಡಾ 6 ಕ್ಕೆ ಇಳಿಸಲಾಗುವುದು ಮತ್ತು ಪ್ಲಾಟಿನಂ ಮೇಲಿನ ಸುಂಕವನ್ನು ಶೇಕಡಾ 6.5 ಕ್ಕೆ ಇಳಿಸಲಾಗುವುದು. 25 ನಿರ್ಣಾಯಕ ಖನಿಜಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸರ್ಕಾರ ವಿನಾಯಿತಿ ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ‘ಮೋದಿ 3.0’ ನ ಮೊದಲ ಬಜೆಟ್ ಭಾರತದ ಆರ್ಥಿಕ ಭೂದೃಶ್ಯದ…

Read More

ಬಂಟ್ವಾಳ: ಕಳೆದ ಐದು ದಿನದಿಂದ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮಾಣಿಮಜಲು ಗ್ರಾಮದಿಂದ ಯುವಕನೊಬ್ಬ ಕಾಣೆಯಾಗಿದ್ದಾನೆ. ಸಮದ್ ನಾಪತ್ತೆಯಾದ ಯುವಕ. ಸಮದ್ ಮೂರು ಮಕ್ಕಳ ತಂದೆಯಾಗಿದ್ದು, ಆತ ಎಲ್ಲಿಯಾದರೂ ಕಂಡು ಬಂದಲ್ಲಿ ತಕ್ಷಣ ಬಂಟ್ವಾಳ ಟೌನ್ ಪೋಲಿಸ್ ಠಾಣೆಗೆ ತಿಳಿಸುವಂತೆ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಅಥವಾ +91 90082 18612, +91 9901090586 ನಂಬರಿಗೆ ತಿಳಿಸಬೇಕಾಗಿ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More