ರಾಯ್ಪುರ: “ಯಾವುದೇ ಸಾಮಾಜಿಕ ಸಂಪ್ರದಾಯ ಅಥವಾ ಪದ್ಧತಿಗಳು ಕಾನೂನಿಗಿಂತ ಮಿಗಿಲಲ್ಲ,” ಎಂದು ಅಭಿಪ್ರಾಯಪಟ್ಟಿರುವ ಛತ್ತೀಸ್ಗಢ ಹೈಕೋರ್ಟ್, ಸೋದರ ಸಂಬಂಧಿಗಳ (ತಾಯಿಯ ತಂಗಿ ಅಥವಾ ಅಕ್ಕನ ಮಕ್ಕಳು ) ನಡುವಿನ ವಿವಾಹವು ಹಿಂದೂ ವಿವಾಹ ಕಾಯ್ದೆಯಡಿ ಅಸಿಂಧು ಎಂದು ಮಹತ್ವದ ತೀರ್ಪು ನೀಡಿದೆ.ಜಾಂಜ್ಗಿರ್-ಚಂಪಾ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಹಳೆಯ ಆದೇಶವನ್ನು ರದ್ದುಗೊಳಿಸಿರುವ ಹೈಕೋರ್ಟ್ನ ವಿಭಾಗೀಯ ಪೀಠವು ಈ ಸ್ಪಷ್ಟನೆ ನೀಡಿದೆ. ಪ್ರಕರಣದ ಹಿನ್ನೆಲೆ ಏನು? 2018ರಲ್ಲಿ ಜಾಂಜ್ಗಿರ್-ಚಂಪಾ ಜಿಲ್ಲೆಯ ಯುವಕನೊಬ್ಬ ತನ್ನ ಸೋದರ ಸಂಬಂಧಿಯನ್ನು (ದೊಡ್ಡಮ್ಮನ ಮಗಳು) ವಿವಾಹವಾಗಿದ್ದನು. ದಂಪತಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾದ ನಂತರ, ಪತಿಯು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, “ನಮ್ಮಿಬ್ಬರ ತಾಯಂದಿರು ಸೋದರಿಯರಾಗಿದ್ದು, ನಾವು ನಿಷೇಧಿತ ಸಂಬಂಧದ ವ್ಯಾಪ್ತಿಗೆ ಬರುತ್ತೇವೆ. ಆದ್ದರಿಂದ ಈ ವಿವಾಹವನ್ನು ರದ್ದುಗೊಳಿಸಬೇಕು,” ಎಂದು ಕೋರಿದ್ದನು. ಕೌಟುಂಬಿಕ ನ್ಯಾಯಾಲಯದ ಹಳೆಯ ತೀರ್ಪು ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ಫ್ಯಾಮಿಲಿ ಕೋರ್ಟ್, ಸ್ಥಳೀಯ ಪಟೇಲ್ ಸಮಾಜದ ‘ಬ್ರಹ್ಮ ವಿವಾಹ’ ಪದ್ಧತಿಯಲ್ಲಿ ಇಂತಹ ಮದುವೆಗಳಿಗೆ ಅವಕಾಶವಿದೆ…
Author: main-admin
ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಎಂಬ ಮಹಿಳೆ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ರಜಾದಿನವಾಗಿದ್ದರಿಂದ ಕಟೀಲು ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಮಲ್ಲಿಗೆಯಂಗಡಿ ಜಂಕ್ಷನ್‌ನಲ್ಲಿ ಭಾರಿ ವಾಹನಗಳನ್ನು ಕಿನ್ನಿಗೋಳಿಯತ್ತ ತಿರುಗಿಸಲಾಗುತ್ತಿತ್ತು ಮತ್ತು ಲಘು ವಾಹನಗಳನ್ನು ಮಾತ್ರ ದೇವಸ್ಥಾನದ ಕಡೆಗೆ ಬಿಡಲಾಗುತ್ತಿತ್ತು. ಮಧ್ಯಾಹ್ನದ ವೇಳೆಗೆ ಟೆಂಪೋ ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು, ತಮ್ಮ ವಾಹನವನ್ನು ದೇವಸ್ಥಾನದ ಕಡೆಗೆ ಬಿಡಬೇಕೆಂದು ಪಟ್ಟು ಹಿಡಿದು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.ಪೊಲೀಸರು ಪರಿಸ್ಥಿತಿಯನ್ನು ವಿವರಿಸಲು ಪ್ರಯತ್ನಿಸಿದರೂ, ಆ ಮಹಿಳೆ ರಸ್ತೆಯ ಮಧ್ಯೆ ನಿಂತು ಸಂಚಾರಕ್ಕೆ ಅಡ್ಡಿಪಡಿಸಿದರು. ಈ ಕುರಿತು ದೂರು ನೀಡಿರುವ ಬಜ್ಪೆ ಪೊಲೀಸ್ ಠಾಣೆಯ ಚಿದಾನಂದ ಕೇಟ್ ಅವರು, ಸಮವಸ್ತ್ರದಲ್ಲಿದ್ದ ಪೊಲೀಸರಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.ತಮ್ಮನ್ನು ಸಂಧ್ಯಾ ಎಂದು ಪರಿಚಯಿಸಿಕೊಂಡ ಆ ಮಹಿಳೆ, “ನಾವು ಬೆಂಗಳೂರಿನಿಂದ ಬಂದಿದ್ದೇವೆ, ನಿಮಗೆ ಪಾಠ ಕಲಿಸುತ್ತೇವೆ, ನಿಮ್ಮ ವಿಡಿಯೋ…
ಬೆಂಗಳೂರು: ನಗರದಲ್ಲಿ ಪತಿ ಪತ್ನಿ ಕಲಹದಲ್ಲಿ ತಾಯಿಯೇ ಮಗು ಮಾರಾಟ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪತಿಯೊಂದಿಗೆ ಜಗಳ ಆಡಿ ಮೂರು ಮಕ್ಕಳೊಂದಿಗೆ ಮನೆ ಬಿಟ್ಟ ಪತ್ನಿ, ಇಬ್ಬರು ಮಕ್ಕಳನ್ನ ಮೆಜೆಸ್ಟಿಕ್ನಲ್ಲಿ ಬಿಟ್ಟು ಇನ್ನೊಂದು ಮಗುವನ್ನು ಮಾರಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ. ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸ ಮಾಡ್ತಿದ್ದ ರವಿ ಬಾಬು ದಂಪತಿ ಮದುವೆಯಾಗಿ 16 ವರ್ಷಗಳಾಗಿತ್ತು. ಆಗಾಗ ಗಂಡ ಹೆಂಡತಿ ನಡುವೆ ನಡೆಯುತ್ತಿದ್ದ ಜಗಳದ ಕಾರಣಕ್ಕೆ ಗಂಡನ ಮೇಲಿನ ಕೋಪದಿಂದ ಹೆಂಡತಿ ಮೂರು ಮಕ್ಕಳೊಂದಿಗೆ ಮನೆ ಬಿಟ್ಟು ಪರಾರಿಯಾಗಿದ್ದಳು. ಮಕ್ಕಳೊಂದಿಗೆ ಮನೆ ಬಿಟ್ಟ ಪತ್ನಿ ಇಬ್ಬರು ಮಕ್ಕಳನ್ನು ಮೆಜೆಸ್ಟಿಕ್ನಲ್ಲಿ ಬಿಟ್ಟು ಇನ್ನೊಂದು ಮಗುವನ್ನು ಕರೆದೊಯ್ದಿದ್ದಳು ಎನ್ನಲಾಗಿದೆ. ಮೆಜೆಸ್ಟಿಕ್ನಲ್ಲಿ ಬಿಟ್ಟಿದ್ದ ಇಬ್ಬರು ಮಕ್ಕಳು ಹೇಗೋ ಮನೆ ಹುಡುಕಿಕೊಂಡು ತಂದೆ ಬಳಿಗೆ ವಾಪಾಸ್ ಬಂದಿದ್ದಾರೆ. ಆದರೆ ಪತ್ನಿ ಕರೆದೊಯ್ದಿದ್ದ ಎರಡೂವರೆ ವರ್ಷದ ಗಂಡು ಮಗುವನ್ನು ಆಕೆಯೇ 5 ಲಕ್ಷ ರೂ.ಗೆ ಮಾರಾಟ ಮಾಡಿದ್ದಾಳೆಂದು ಪತಿ ರವಿ ಬಾಬು ಆರೋಪಿಸಿದ್ದಾರೆ. ತನ್ನ…
ಗುರುಗ್ರಾಮ್: ವಜೀರ್‌ಪುರ ಪ್ರದೇಶದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ನಾಲ್ವರು ಮಕ್ಕಳಿಗೆ ವಿಷ ನೀಡಿ ಹತ್ಯೆ ಮಾಡಿ, ತಾನು ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಮೊರಾದಾಬಾದ್ ನಿವಾಸಿಯಾದ ನಜೀಮ್ ಎಂಬಾತ ಗುರುಗ್ರಾಮ್‌ನಲ್ಲಿ ಸಲೂನ್ ನಡೆಸುತ್ತಾ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಸುಮಾರು ಏಳು ವರ್ಷಗಳ ಹಿಂದೆ ದೆಹಲಿ ಮೂಲದ ನಜ್ಮಾ ಅವರೊಂದಿಗೆ ಈತನ ಪ್ರೇಮ ವಿವಾಹವಾಗಿತ್ತು. ಶನಿವಾರ ರಾತ್ರಿ ನಜೀಮ್ ತನ್ನ ಪತ್ನಿ ನಜ್ಮಾ (35) ಹಾಗೂ ಮಕ್ಕಳಾದ ಇಕ್ರಾ (14), ಸಿಫಾ (12), ಖತಿನಾ (10), ಮತ್ತು ಅಯಾನ್ (8) ಅವರಿಗೆ ವಿಷಪ್ರಾಶನ ಮಾಡಿದ್ದಾನೆ. ಐವರೂ ಮೃತಪಟ್ಟ ನಂತರ ತಾನು ಕೂಡ ರಕ್ತನಾಳ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪ್ರಸ್ತುತ ನಜೀಮ್ ಗಂಭೀರ ಸ್ಥಿತಿಯಲ್ಲಿ ಸಿವಿಲ್ ಆಸ್ಪತ್ರೆಯಲ್ಲಿ ಪೊಲೀಸ್ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪೊಲೀಸರು ಸ್ಥಳದಿಂದ ಮುರಿದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಕೌಟುಂಬಿಕ ವಿವಾದ ಅಥವಾ ಮಾನಸಿಕ ಒತ್ತಡ ಈ ಹತ್ಯಾಕಾಂಡಕ್ಕೆ…
ಉತ್ತರ ಪ್ರದೇಶ : ಇತ್ತೀಚಿನ ಸ್ಮಾರ್ಟ್ಫೋನ್ ಯುಗದಲ್ಲಿ ಎಲ್ಲವೂ ಆಯೋಮಯ ಅನ್ನೋದಕ್ಕೆ ಇಂತಹ ಘಟನೆಗಳೇ ಜ್ವಲಂತ ಸಾಕ್ಷಿ. ಸಾಮಾಜಿಕ ಮಾಧ್ಯಮಕ್ಕಾಗಿ ವೀಡಿಯೊ ಚಿತ್ರೀಕರಿಸಲು ಹೋಗಿ 60 ಅಡಿ ಎತ್ತರದ ನೀರಿನ ಟ್ಯಾಂಕ್ ಹತ್ತಿದ ಐವರು ಮಕ್ಕಳ ಪೈಕಿ ಓರ್ವ ಬಾಲಕ ಮೃತಪಟ್ಟು, ಉಳಿದವರು ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ನಡೆದಿದೆ. ಶನಿವಾರ ಮಧ್ಯಾಹ್ನ ಐವರು ಮಕ್ಕಳು ಅಪಾಯಕಾರಿ ಸಾಹಸದ ರೀಲ್ಸ್ ಮಾಡಲು ನೀರಿನ ಟ್ಯಾಂಕ್ ಹತ್ತಿದ್ದರು. ವಾಪಸ್ ಇಳಿಯುವಾಗ ಏಣಿಯು ಮುರಿದು ಬಿದ್ದ ಪರಿಣಾಮ ಮೂವರು ಮಕ್ಕಳು ಸುಮಾರು 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದರು. ಈ ಅಪಘಾತದಲ್ಲಿ 13 ವರ್ಷದ ಸಿದ್ಧಾರ್ಥ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಮಕ್ಕಳು ಟ್ಯಾಂಕ್ ಮೇಲ್ಭಾಗದಲ್ಲೇ ಸಿಲುಕಿಕೊಂಡಿದ್ದರು. ಮಳೆ ಮತ್ತು ಜೌಗು ಪ್ರದೇಶದ ಕಾರಣ ಕ್ರೇನ್ ಬಳಸಲು ಸಾಧ್ಯವಾಗದಿದ್ದಾಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದಂತೆ ರಾಜ್ಯ ಸರಕಾರ ಭಾರತೀಯ ವಾಯುಪಡೆಯ ಸಹಕಾರ ಕೋರಿದೆ. ಈ ಹಿನ್ನಲೆ ಭಾರತೀಯ ವಾಯುಪಡೆಯ Mi-17…
ಚೆನ್ನೈ: ಫ್ಲೈಟ್‌ನಲ್ಲಿ 2 ಬಾರಿ ವಾಂತಿ ಮಾಡಿಕೊಂಡ ಪ್ರಯಾಣಿಕನೋರ್ವ ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ನಿರ್ಗಮನ ದ್ವಾರದಿಂದ ಹೊರಗೆ ಹಾರಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಶಾರ್ಜಾ-ಚೆನ್ನೈ ಏರ್ ಅರೇಬಿಯಾ ವಿಮಾನವು ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದು ಮುಂದೆ ಚಲಿಸುತ್ತಿತ್ತು. ಈ ವೇಳೆ ವಿಮಾನದಲ್ಲಿದ್ದ ಪುರುಷ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ಬಾಗಿಲು ತೆರೆದು ಹೊರಗೆ ಹಾರಿದ್ದಾನೆ.ವಿಮಾನವು ಮುಖ್ಯ ರನ್‌ವೇಯಿಂದ ಹೊರಬಂದು ಟ್ಯಾಕ್ಸಿವೇಯಲ್ಲಿ ನಿಧಾನವಾಗಿ ಚಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಪೈಲಟ್ ತಕ್ಷಣವೇ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದರು. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ತಕ್ಷಣ ವ್ಯಕ್ತಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ನವದೆಹಲಿ: ದೆಹಲಿಯ ಸಫ್ದರ್ಜಂಗ್ ಪ್ರದೇಶದ ಗ್ರೀನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಲ್ಲಿ ನ್ಯಾಯಾಧೀಶರೊಬ್ಬರು ಶನಿವಾರ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಮೃತರನ್ನು ಕಾರ್ಕಾರ್ಡೂಮಾ ನ್ಯಾಯಾಲಯಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಪೂರ್ಣ ಸಮಯದ ಕಾರ್ಯದರ್ಶಿಯಾಗಿದ್ದ ಅಮನ್ ಕುಮಾರ್ ಶರ್ಮಾ (30) ಎಂದು ಗುರುತಿಸಲಾಗಿದೆ. ಅಮನ್ ಅವರು ಸ್ನಾನಗೃಹದಲ್ಲಿ ದುಪಟ್ಟಾದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇವರು ನ್ಯಾಯಾಧೀಶೆಯಾಗಿರುವ ಪತ್ನಿಯೊಂದಿಗೆ ಜಗಳವಾಡುತ್ತಿದ್ದರು ಮತ್ತು ಘಟನೆಗೆ ಮುನ್ನ ತಂದೆಗೆ ಕರೆ ಮಾಡಿ ತಮಗೆ ಕಳೆದ ಎರಡು ತಿಂಗಳಿನಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಅಳುತ್ತಾ ಹೇಳಿಕೊಂಡಿದ್ದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಮನ್ ಅವರು ಮಾನಸಿಕ ಒತ್ತಡದಲ್ಲಿದ್ದರು ಮತ್ತು ಅವರಿಗೆ ಕಿರುಕುಳ ನೀಡಲಾಗಿತ್ತು ಎಂದು ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಅಮನ್ ಅವರು 2021ರಲ್ಲಿ ದೆಹಲಿ ನ್ಯಾಯಾಂಗ ಸೇವೆಗೆ ಸೇರ್ಪಡೆಗೊಂಡಿದ್ದರು. ಪೊಲೀಸರು ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಬಂಟ್ವಾಳ : ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ಅಕ್ರಮವಾಗಿ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಸಂಗ್ರಹಿಸಿಟ್ಟಿದ್ದ ಇಬ್ಬರು ಆರೋಪಿಗಳನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಂಧಿತರನ್ನು ಮುಹಮ್ಮದ್ ಸಮೀರ್ (28) ಮತ್ತು ಮಹಮ್ಮದ್ ಇರ್ಫಾನ್ (26) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಆರೋಪಿ ರಶೀದ್ ಕುಂಡಡ್ಕ ಎಂಬಾತ ಪರಾರಿಯಾಗಿದ್ದಾನೆ. ಮೇ 1ರಂದು ಸ್ವಿಫ್ಟ್ ಕಾರಿನಲ್ಲಿ ಖೋಟಾ ನೋಟುಗಳನ್ನು ಇಟ್ಟುಕೊಂಡಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಹಿನ್ನಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 2,38,000 ಮೌಲ್ಯದ 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಮಂಗಳೂರು: ಶನಿವಾರ ಸಂಜೆ ಮಂಗಳೂರಿನ ಮುಲ್ಕಿಯ ಹಳೆಯಂಗಡಿ ಜಂಕ್ಷನ್‌ನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಿಂದಾಗಿ ಹೆದ್ದಾರಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಂಗಳೂರಿನಿಂದ ಬಳ್ಳಾರಿಯತ್ತ ಕೆಮಿಕಲ್ ಸಾಗಿಸುತ್ತಿದ್ದ ಟ್ಯಾಂಕರ್, ಜಂಕ್ಷನ್‌ನಲ್ಲಿ ಇರಿಸಲಾಗಿದ್ದ ಬ್ಯಾರಿಕೇಡ್‌ಗಳ ಕಾರಣದಿಂದಾಗಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದೆ. ಈ ವೇಳೆ ಕಾಸರಗೋಡಿನಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳುತ್ತಿದ್ದ ಕುಟುಂಬವೊಂದು ಪ್ರಯಾಣಿಸುತ್ತಿದ್ದ ಕಾರು, ಟ್ಯಾಂಕರ್‌ನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮೊದಲ ಅಪಘಾತದ ಬೆನ್ನಲ್ಲೇ, ಮಂಗಳೂರಿನಿಂದ ಉಡುಪಿಯ ಕಡೆಗೆ ಹೋಗುತ್ತಿದ್ದ ಕಾರೊಂದು ಡಿವೈಡರ್ ಬಳಿ ತಿರುವು ಪಡೆಯಲು ಯತ್ನಿಸುತ್ತಿದ್ದಾಗ, ಹಿಂಬದಿಯಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಇದರಿಂದ ಕಾರಿನ ಬಲಬದಿಗೆ ಹಾನಿಯಾಗಿದೆ.ಈ ಸರಣಿ ಅಪಘಾತಗಳಿಂದಾಗಿ ಹೆದ್ದಾರಿಯಲ್ಲಿ ವಾಹನಗಳು ಪಾವಂಜೆ ದೇವಸ್ಥಾನದವರೆಗೆ ಸಾಲುಗಟ್ಟಿ ನಿಂತಿದ್ದವು. ಇದರ ಪರಿಣಾಮವಾಗಿ ಹಳೆಯಂಗಡಿಯ ಒಳರಸ್ತೆಗಳಲ್ಲೂ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು.ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಸಂಚಾರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ…
ಬಜಪೆ : ಕಟೀಲು ದೇವಸ್ಥಾನದ ಪರಿಸರದಲ್ಲಿ ಸಂಚಾರ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯನ್ನು ಸಾರ್ವಜನಿಕವಾಗಿ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬೆಂಗಳೂರು ಮೂಲದ ಸಂಧ್ಯಾ ಎಂಬ ಮಹಿಳೆಯ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ 1ರಂದು ಬುದ್ಧ ಪೂರ್ಣಿಮಾ ಮತ್ತು ರಜಾ ದಿನವಾದ್ದರಿಂದ ಕಟೀಲು ದೇವಸ್ಥಾನದಲ್ಲಿ ಅತೀ ಹೆಚ್ಚು ಭಕ್ತರ ದಟ್ಟಣೆ ಇತ್ತು. ಮಲ್ಲಿಗೆಯಂಗಡಿ ಜಂಕ್ಷನ್ ಬಳಿ ಬಜಪೆ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಹೆಚ್.ಎನ್. ಹಾಗೂ ಸಿಬ್ಬಂದಿ ವಾಹನ ದಟ್ಟಣೆ ನಿಯಂತ್ರಿಸುತ್ತಿದ್ದರು. ಮಧ್ಯಾಹ್ನ 1:45ರ ಸುಮಾರಿಗೆ ಬಿಳಿ ಬಣ್ಣದ ಟೆಂಪೋ ಟ್ರಾವೆಲರ್ಸ್‌ನಲ್ಲಿ ಬಂದ ಸಂಧ್ಯಾ ಎಂಬವರು, ಪೊಲೀಸರು ಸೂಚಿಸಿದ ಪಾರ್ಕಿಂಗ್ ಜಾಗಕ್ಕೆ ಹೋಗಲು ನಿರಾಕರಿಸಿ ವಿವಾದ ಸೃಷ್ಟಿಸಿದ್ದಾರೆ. ಪೊಲೀಸರು ಘನ ವಾಹನಗಳನ್ನು ಪಾರ್ಕಿಂಗ್ ಕಡೆಗೆ ಹೋಗುವಂತೆ ಸೂಚಿಸಿದಾಗ ಕೆರಳಿದ ಮಹಿಳೆ, “ಬೇರೆ ವಾಹನಗಳನ್ನು ಬಿಡುತ್ತಿದ್ದೀರಿ, ಅವರು ನಿಮ್ಮ ಅಪ್ಪನಾ.. ಅಮ್ಮನಾ..” ಎಂದು ಏರುಧ್ವನಿಯಲ್ಲಿ ಕೂಗಾಡಿದ್ದಾರೆ. ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ,…










