Author: main-admin

ಕೇರಳದ ಮಲಪ್ಪುರಂ ಜಿಲ್ಲೆಯ ತಾನೂರು ಬಳಿ ಪ್ರವಾಸಿ ದೋಣಿಯೊಂದು ಮುಳುಗಿ 21 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನಾ ಸ್ಥಳದಲ್ಲಿ ಇನ್ನೂ ಹಲವರು ನೀರಿನಲ್ಲಿ ಮುಳುಗಿದ್ದು, ರಕ್ಷಣಾಕಾರ್ಯ ಭರದಿಂದ ಸಾಗುತ್ತಿದೆ. ವರದಿಗಳ ಪ್ರಕಾರ ದೋಣಿಯಲ್ಲಿ ಸುಮಾರು 40 ಮಂದಿ ಇದ್ದರು. ನಿನ್ನೆ ರಾತ್ರಿ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಹೀಗಿದ್ದೂ, ಟಾರ್ಚ್​​ಗಳ ಸಹಾಯದಿಂದ ಹಲವರನ್ನು ರಕ್ಷಣೆ ಮಾಡಲಾಗಿದೆ.  ರಕ್ಷಣಾ ಕಾರ್ಯ ನಡೆಯುತ್ತಿದೆ. ರಾತ್ರಿ ಅಪಘಾತ ಸಂಭವಿಸಿದ್ದರಿಂದ ರಕ್ಷಣೆ ಮಾಡಲು ಕಷ್ಟವಾಗಿದೆ ಎಂದು ಕೇರಳ ಸಚಿವ ಅಬ್ದುರಹ್ಮಾನ್ ತಿಳಿಸಿದ್ದಾರೆ. ಇಂದು ಘಟನಾ ಸ್ಥಳಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ನೀಡಲಿದ್ದಾರೆ. ದುರಂತ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಗಳು ರದ್ದು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದ ಕೂಡ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಕೂಡ ದುರ್ಘಟನೆಗೆ ಕಂಬನಿ ಮಿಡಿದಿದ್ದಾರೆ.

Read More

ಬೆಂಗಳೂರು: ಮೇ.08ರಂದು (ಸೋಮವಾರ) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ನೀಡಿದೆ. ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ. ಇನ್ನು ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು. ಸೋಮವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, 11 ಗಂಟೆಯ ಬಳಿಕ ಜಾಲತಾಣದಲ್ಲಿ ವೀಕ್ಷಿಸಬಹುದು.

Read More

ಇಂಫಾಲ: ಈಶಾನ್ಯ ಭಾಗದ ಮಣಿಪುರ ರಾಜ್ಯದಲ್ಲಿ  ಮುಂದುವರಿದಿದ್ದು, ಇದೀಗ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ಕರೆ ನೀಡಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತರೂರ್ ಅವರು ಬರವಣಿಗೆಯಲ್ಲಿ ಹಂಚ್ಚಿಕೊಂಡಿದ್ದು ಹೀಗೆ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಂತೆ ಬಲ ಚಿಂತನೆಯುಳ್ಳ ಭಾರತೀಯರು ತಮಗೆ ಭರವಸೆ ನೀಡಿ ಉತ್ತಮ ಆಡಳಿತಕ್ಕೆ ಏನಾಯ್ತು ಎಂಬುದನ್ನು ತಮಗೆ ತಾವೇ ಕೇಳಿಕೊಳ್ಳಬೇಕು. ಮಣಿಪುರದ ಮತದಾರರು ತಮ್ಮ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಕೇವಲ 1 ವರ್ಷದ ಬಳಿಕ ದೊಡ್ಡ ದ್ರೋಹವನ್ನು ಅನುಭವಿಸುತ್ತಿದ್ದಾರೆ ಹಾಗೂ ಆಯ್ಕೆಯಾಗಿರುವುದಕ್ಕೆ ಕಾರಣವಾದ ಕೆಲಸಗಳನ್ನೇ ರಾಜ್ಯ ಸರ್ಕಾರ ಮಾಡಲು ಸಿದ್ಧವಾಗಿಲ್ಲ. ಇದೀಗ ರಾಷ್ಟ್ರಪತಿಗಳು ಆಳ್ವಿಕೆ ನಡೆಸಲು ಸಮಯ ಬಂದಿದೆ ಎಂದು ಹೇಳಿದ್ದಾರೆ.ಮಣಿಪುರದ ಆದಿವಾಸಿಗಳು ಹಾಗೂ ಬಹುಸಂಖ್ಯಾತ ಮೈತೆ ಸಮುದಾಯಕ್ಕೆ ಸೇರಿದ ಜನರ ನಡುವೆ ಹಿಂಸಾತ್ಮಕ ಘರ್ಷಣೆ ಬುಧವಾರದಂದು ಪ್ರಾರಂಭವಾಯಿತು, ಇದರ  ಪರಿಣಾಮ ಸಾವಿರಾರು ಜನರನ್ನು  ಸ್ಥಳಾಂತರಿಸಲಾಗಿದ್ದು, ಘರ್ಷಣೆಯಲ್ಲಿ 54 ಜನರು ಸಾವನ್ನಪ್ಪಿದ್ದಾರೆ.ಶನಿವಾರ ರಾಜ್ಯದಲ್ಲಿ ಶಾಂತಿಯ ಉಪಕ್ರಮಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ಪ್ರತಿ ವಿಧಾನಸಭಾ…

Read More

ಬೆಳ್ತಂಗಡಿ : ಖಾಸಗಿ ಬಸ್ಸೊಂದು ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾವೂರು ಬಳಿ ಶನಿವಾರ ನಡೆದಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಸುಂದರಿ (60) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಐವರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕುಂದಾಪುರ: ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಗೆ ಸ್ನೇಹಿತರೊಂದಿಗೆ ಜಲಕ್ರೀಡೆಯಾಡಲೆಂದು ಹೋಗಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ಶನಿವಾರ ಪತ್ತೆಯಾಗಿದೆ. ಸುಳ್ಯದ ನಿವಾಸಿ ಸುಹಾಸ್ ಎಂ (21) ಮೃತ ಯುವಕ.ಮೇ 5 ರಂದು ಸೌಡ ಸಮೀಪದ ಹೊಳೆಯಲ್ಲಿ ನೀರಿಗಿಳಿದ ಸುಹಾಸ್ ಆಕಸ್ಮಿಕವಾಗಿ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಜೊತೆಗಿದ್ದ ಯುವಕರು ತಕ್ಷಣ ಸ್ಥಳೀಯರಿಗೆ ಸುದ್ಧಿ ತಲುಪಿಸಿ ಹುಡುಕಾಟ ಆರಂಭಿಸಿದ್ದಾರೆ.ಇನ್ನು ಶನಿವಾರ ಬೆಳಗ್ಗೆ ಸುಹಾಸ್ ಮೃತದೇಹ ಮುಳುಗಿದ ಸ್ಥಳದಿಂದ ಸುಮಾರು 200 ಮೀಟರ್ ದೂರದಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕೋಟ ಪೊಲೀಸರು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಸುಹಾಸ್ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಬೆಳಿಗ್ಗೆಯಷ್ಟೇ ತನ್ನ ಮನೆಯಾದ ಐವರ್ನಾಡಿನ ಮಡ್ತಿಲದಿಂದ ಮೂಡಬಿದ್ರೆಗೆ ಬಂದಿದ್ದ. ಅಲ್ಲಿಂದ ಸ್ನೇಹಿತರೊಂದಿಗೆ ಸೌಡ ಹೊಳೆಗೆ ಆಟವಾಡಲು ಬಂದಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಟೆಕ್ಸಾಸ್(ಅಮೆರಿಕ): ಶನಿವಾರ ಡಲ್ಲಾಸ್‌ನ ಮಾಲ್‌ವೊಂದರಲ್ಲಿ ಬಂದೂಕುಧಾರಿಯೊಬ್ಬ ಒಂಬತ್ತು ಜನರನ್ನು ಗುಂಡಿಕ್ಕಿ ಕೊಂದಿದ್ದಾನೆ. ಈ ವೇಳೆ ಕನಿಷ್ಟ ಏಳು‌ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟೆಕ್ಸಾಸ್‌ನ ಅಲೆನ್‌ನಲ್ಲಿರುವ ಅಲೆನ್ ಪ್ರೀಮಿಯಂ ಔಟ್‌ಲೆಟ್‌ಗಳ ಮಾಲ್‌ನ ಹೊರಗೆ ಈ ಘಟನೆ‌ ನಡೆದಿದೆ. ಈ‌ ಮಾಲ್ ಡಲ್ಲಾಸ್‌ನಿಂದ 40 ಕಿಮೀ‌ ದೂರದಲ್ಲಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಅಧಿಕಾರಿಯೊಬ್ಬರು ಅಪರಿಚಿತ ಬಂದೂಕುಧಾರಿಯನ್ನು ಗುಂಡಿಟ್ಟು ಹತ್ಯೆಗೈದಿದ್ದಾರೆ ಎಂದು ನಗರದ ಪೊಲೀಸ್ ಮುಖ್ಯಸ್ಥ ಬ್ರಿಯಾನ್ ಹಾರ್ವೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿಗೆ ಮೇ 7ರಂದು(ಇಂದು) ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಇನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

Read More

ಲಾಹೋರ್: ನಿಯೋಜಿತ ಭಯೋತ್ಪಾದಕ ಮತ್ತು ಖಲಿಸ್ತಾನ್ ಕಮಾಂಡೋ ಫೋರ್ಸ್ (ಕೆಸಿಎಫ್) ಮುಖ್ಯಸ್ಥ ಪರಮ್‌ಜಿತ್ ಸಿಂಗ್ ಪಂಜ್ವಾರ್ ಅವರನ್ನು ಪಾಕಿಸ್ತಾನದ ಲಾಹೋರ್‌ನ ಜೋಹರ್ ಟೌನ್‌ನಲ್ಲಿ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಗುಪ್ತಚರ ಮೂಲಗಳು ಈ ಮಾಹಿತಿಯನ್ನು ದೃಢಪಡಿಸಿವೆ. ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಜೋಹರ್ ಟೌನ್‌ನಲ್ಲಿರುವ ಸೂರ್ಯಕಾಂತಿ ಸೊಸೈಟಿಯಲ್ಲಿರುವ ಅವರ ಮನೆಯ ಸಮೀಪ ಪರಮ್‌ಜಿತ್ ಸಿಂಗ್ ಪಂಜ್ವಾರ್ ಅಲಿಯಾಸ್ ಮಲಿಕ್ ಸರ್ದಾರ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ ಅವರ ಬಂದೂಕುಧಾರಿ ಗಾಯಗೊಂಡಿದ್ದಾರೆ. ಪಂಜ್ವಾರ್ ಗ್ರಾಮದಲ್ಲಿ ಜನಿಸಿದ 59 ವರ್ಷದ ಪರಮ್‌ಜಿತ್ ಸಿಂಗ್ ಪಂಜ್ವಾರ್, ಸಿಖ್ ದಂಗೆ, ಕೊಲೆ, ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯನ್ನು ಪುನರುಜ್ಜೀವನಗೊಳಿಸುವಲ್ಲಿ ತೊಡಗಿಸಿಕೊಂಡಿದ್ದ. ಸಿಂಗ್ 1986 ರಲ್ಲಿ ಕೆಸಿಎಫ್‌ಗೆ ಸೇರಿದ್ದ, ಅದಕ್ಕೂ ಮೊದಲು ಅವರು ಸೋಹಾಲ್‌ನ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ. ಪಂಜ್ವಾರ್ 1990ರ ದಶಕದಲ್ಲಿ ಕೆಸಿಎಫ್‌ನ ಉಸ್ತುವಾರಿ ವಹಿಸಿಕೊಂಡಿದ್ದ. ಹೆಂಡತಿ ಮತ್ತು ಮಕ್ಕಳು ಜರ್ಮನಿಗೆ ಸ್ಥಳಾಂತರಗೊಂಡಾಗ ಲಾಹೋರ್‌ನಲ್ಲಿಯೇ ಸಿಂಗ್ ವಾಸಿಸುತ್ತಿದ್ದ.…

Read More

ಮುಂಬೈ: ಹಣಕಾಸು ಬಿಕ್ಕಟ್ಟಿನ ಕಾರಣ ‘ಗೋ ಫಸ್ಟ್’ ವಿಮಾನಯಾನ ಕಂಪನಿಯು ಮೇ. 12ರವರೆಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ. ಕಾರ್ಯಾಚರಣೆಯ ಕಾರಣಗಳಿಂದಾಗಿ 2023 ರ ಮೇ 12 ರವರೆಗೆ ನಿಗದಿಯಾಗಿದ್ದ ಎಲ್ಲಾ ಗೋ ಫಸ್ಟ್ ವಿಮಾನಗಳ ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಟ್ವೀಟ್‌ನಲ್ಲಿ ತಿಳಿಸಿದೆ. ವಾಡಿಯಾ ಸಮೂಹ-ಮಾಲೀಕತ್ವದ ವಿಮಾನಯಾನ ಕಂಪನಿ, ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮುಂದೆ ಸ್ವಯಂಪ್ರೇರಿತ ದಿವಾಳಿತನ ಪರಿಹಾರ ಪ್ರಕ್ರಿಯೆಗಾಗಿ ಮನವಿ ಸಲ್ಲಿಸಿತ್ತು ಮತ್ತು ನ್ಯಾಯಮಂಡಳಿ ಮೇ.4 ರಂದು ತನ್ನ ಆದೇಶವನ್ನು ಕಾಯ್ದಿರಿಸಿತು. ಆರಂಭದಲ್ಲಿ ಮೇ 3 ರಿಂದ ಎಲ್ಲಾ ವಿಮಾನಗಳ ಸೇವೆಯನ್ನು ‘ಗೋ ಫಸ್ಟ್’ ವಿಮಾನಯಾನ ಕಂಪನಿ ರದ್ದುಗೊಳಿಸಿತ್ತು. ನಂತರ ನಂತರ ಅದನ್ನು ಮೇ 9 ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಮತ್ತೆ ಮೇ 12 ರವರೆಗೆ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ವಿಮಾನಯಾನ ಸಂಸ್ಥೆಯು ಮೇ 15 ರವರೆಗೆ ಟಿಕೆಟ್‌ಗಳ ಮಾರಾಟವನ್ನು ಸ್ಥಗಿತಗೊಳಿಸಿದೆ ಎಂದು ವಿಮಾನಯಾನ ನಿಯಂತ್ರಕ ಡಿಜಿಸಿಎ ಗುರುವಾರ ಹೇಳಿತ್ತು. ಸಂಬಂಧಿತ ನಿಯಮಾವಳಿಗಳಲ್ಲಿ ಪ್ರಯಾಣಿಕರಿಗೆ ಮರುಪಾವತಿ…

Read More

ಗುವಾಹಟಿ : ಮಣಿಪುರದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ನಡೆದ ಹಿಂಸಾಚಾರಕ್ಕೆ ಇಂಫಾಲ್‌ನಲ್ಲಿ ನಿಯೋಜನೆಗೊಂಡ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಕಂದಾಯ ಸೇವಾ ಸಂಘ ಶುಕ್ರವಾರ ತಿಳಿಸಿದೆ. ಇಂಫಾಲ್‌ನಲ್ಲಿ ತೆರಿಗೆ ಸಹಾಯಕರಾದ Sh. ಲೆಟ್ಮಿಂಥಾಂಗ್ ಹಾಕಿಪ್ ಅವರ ಸಾವಿಗೆ ಕಾರಣವಾದ ಹಿಂಸಾಚಾರದ ಭೀಕರ ಕೃತ್ಯವನ್ನು ಸಂಘ ಬಲವಾಗಿ ಖಂಡಿಸುತ್ತದೆ. ಯಾವುದೇ ಸಿದ್ಧಾಂತ ಕರ್ತವ್ಯದಲ್ಲಿದ್ದ ಅಮಾಯಕ ಅಧಿಕಾರಿಯ ಹತ್ಯೆಯನ್ನು ಸಮರ್ಥಿಸುವುದಿಲ್ಲ” ಇತ್ತೀಚಿನ ಟ್ವೀಟ್‌ನಲ್ಲಿ ಸಂಘ ಹೇಳಿದೆ. ಇನ್ನು ಮಣಿಪುರ ಹಿಂಸಾಚಾರವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ 355ನೇ ವಿಧಿ ಜಾರಿಗೊಳಿಸಿ, ಭದ್ರತೆಯ ಸಂಪೂರ್ಣ ಹೊಣೆ ವಹಿಸಿಕೊಂಡಿದೆ. 355ನೇ ವಿಧಿಯು ಆಂತರಿಕ ಅಡಚಣೆಗಳು ಮತ್ತು ಬಾಹ್ಯ ಆಕ್ರಮಣಗಳ ವಿರುದ್ಧ ರಾಜ್ಯವನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಕೇಂದ್ರಕ್ಕೆ ಅಧಿಕಾರ ನೀಡುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲು ಕರ್ನಾಟಕ ಚುನಾವಣಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ ಗುರುವಾರ ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ…

Read More