ಚಿಕ್ಕಮಗಳೂರು: ಅಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಆಟೋದಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ಮೂಲದ ರೋಗಿಯನ್ನು ಮಂಗಳೂರು (Mangaluru) ಆಸ್ಪತ್ರೆಯಿಂದ ಮೂಡಿಗೆರೆ ಬಂದು ಬಿಟ್ಟು ಹೋಗುತ್ತಿದ್ದ ಅಂಬುಲೆನ್ಸ್ ಹಾಗೂ ಧರ್ಮಸ್ಥಳಕ್ಕೆ ಹೋಗಿ ದೇವರ ದರ್ಶನ ಮಾಡಿಕೊಂಡು ಬರುತ್ತಿದ್ದ ಆಟೋ ಚಾರ್ಮಾಡಿಯ ಒಂದನೇ ತಿರುವಿನಲ್ಲಿ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಆಟೋದಲ್ಲಿದ್ದ ನಾಲ್ವರನ್ನು ಬೆಳ್ತಂಗಡಿಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ಮೂಲತಃ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ್ದಾಗಿದೆ. ಅಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳು ಜಖಂ ಆಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Author: main-admin
‘ಉಡುಪಿ: ಸಂಬಂಧಿಕರ ರೋಸ್ (ಕ್ರೈಸ್ತರ ಸಂಪ್ರದಾಯದಂತೆ ಮದುವೆಯ ಮುನ್ನಾ ದಿನಾ ನಡೆಯುವ ಕಾರ್ಯಕ್ರಮ) ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳು ಕುಸಿದು ಬಿದ್ದು ಅಸ್ಥಸ್ಥಗೊಂಡಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಎಂದು ಗುರುತಿಸಲಾಗಿದೆ. ಜೋಸ್ನಾ ಅವರು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಕಾರ್ಯಕ್ರಮಕ್ಕೆ ತೆರಳಿದ್ದು ಅಲ್ಲಿ ಸುಮಾರು 8.30 ರ ಹೊತ್ತಿಗೆ ಕುಳಿತಲ್ಲೇ ಕುಸಿದುಬಿದ್ದಿದ್ದು, ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಜೋಸ್ನಾ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಕುಕ್ಕರ್ ಬಾಂಬರ್ ಶಾರೀಕ್‌ನಗುರಿ ಕದ್ರಿ ದೇವಸ್ಥಾನ ಆಗಿತ್ತು ಎಂದು ಉಗ್ರ ಸಂಘಟನೆ ಹೇಳಿದ್ದರೂ ಆತ ಮೊಬೈಲ್‌ನಲ್ಲಿ ಮಂಗಳೂರಿನ ಹಲವು ಪ್ರದೇಶಗಳನ್ನು ಸರ್ಚ್ ಮಾಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಹೌದು. ಶಾರೀಕ್ ಮೊಬೈಲ್‌ನಲ್ಲಿ ಯಾವ ಸ್ಥಳಗಳನ್ನು ಸರ್ಚ್ ಮಾಡಿದ್ದ ಎನ್ನುವುದು ಗೊತ್ತಾಗಿದೆ. ಸರ್ಕಾರಕ್ಕೆ ನೀಡಿದ ಪ್ರಾಥಮಿಕ ವರದಿಯಲ್ಲಿ ತನಿಖಾ ತಂಡ ಮೂರು ದೇವಸ್ಥಾನ ಮತ್ತು ಎರಡು ಸಾರ್ವಜನಿಕ ಸ್ಥಳದಲ್ಲಿ ಬಾಂಬ್ ಇಡಲು ಪ್ಲಾನ್ ಮಾಡಿದ್ದ ಎಂಬುದನ್ನು ಉಲ್ಲೇಖಿಸಿದೆ. ಎರಡು ಶಿವ ದೇವಸ್ಥಾನ, ಒಂದು ದೇವಿ ದೇವಸ್ಥಾನ, ಎರಡು ಸಾರ್ವಜನಿಕ ಸ್ಥಳ, ಒಂದು ಕಾರ್ಯಕ್ರಮ ಆತನ ಟಾರ್ಗೆಟ್ ಆಗಿತ್ತು ಎಂದು ಪೊಲೀಸ್ ಉನ್ನತ ಮೂಲಗಳು ಮಾಹಿತಿ ನೀಡಿವೆ. ಟಾರ್ಗೆಟ್ ಆಗಿದ್ದ ಸ್ಥಳಗಳು ಯಾವುದು? ಕದ್ರಿ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ(Kudroli Gokarnanatheshwara Temple) ಲಕ್ಷದೀಪೋತ್ಸವ ನಡೆಯಿತ್ತಿದೆ. ಕಾರ್ತಿಕ ಮಾಸದಲ್ಲಿ ನಡೆಯುವ ದೀಪೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿರುತ್ತಾರೆ. ಈ ಸಂದರ್ಭದಲ್ಲೇ ಸ್ಪೋಟ ಮಾಡುವ…
ಬೆಳ್ತಂಗಡಿ: ಧರ್ಮಸ್ಥಳದ ಕುದುರೆಯ ಎಂಬಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಮೃತಪಟ್ಟು ಏಳು ಜನರು ಗಾಯಗೊಂಡಿದ್ದಾರೆ. ಮೃತರನ್ನು ಮಂಡ್ಯದ ಚೆನ್ನಸಂದಾರ್ ನಿವಾಸಿ ಮಹದೇವ (63) ಎಂದು ಗುರುತಿಸಲಾಗಿದೆ. ಧರ್ಮಸ್ಥಳಕ್ಕೆ ತೆರಳುತ್ತಿದ್ದ ಮಂಡ್ಯದ 10 ಮಂದಿ ಕುಟುಂಬ ಕುದುರೆಯ ಬಳಿ ರಸ್ತೆಬದಿಯಲ್ಲಿ ಎಸ್‌ಯುವಿ ನಿಲ್ಲಿಸಿ ಸಮೀಪದ ಅಂಗಡಿಗೆ ತೆರಳಲು ವಾಹನದಿಂದ ಇಳಿಯುತ್ತಿದ್ದರು. ಧರ್ಮಸ್ಥಳದಿಂದ ಮೈಸೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಎಸ್‌ಯುವಿ ಹಾಗೂ ಪಕ್ಕದಲ್ಲಿ ನಿಂತಿದ್ದ ಜನರಿಗೆ ಢಿಕ್ಕಿ ಹೊಡೆದಿದೆ. ಐವರು ಮಹಿಳೆಯರು, ಓರ್ವ ಪುರುಷ ಮತ್ತು ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುತ್ತೂರು: ವೀರಮಂಗಲ ಸಮೀಪ ತೋಟದ ಕೆರೆಗೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ನ.24ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ವೀರಮಂಗಲ ನಿವಾಸಿ ಕೃಷ್ಣಪ್ಪ ಎಂಬವರ ಪತ್ನಿ ಅಕ್ಕಮ್ಮ ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ. ಅಕ್ಕಮ್ಮ ಅವರು ಬೆಳಿಗ್ಗೆ ಮನೆಯಿಂದ ನೀರು ತರಲೆಂದು ತೋಟದ ಕೆರೆಯ ಪಕ್ಕಕ್ಕೆ ಹೋದವರು ಅಲ್ಲಿ ಆಕಸ್ಮಿಕವಾಗಿ ಕರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ನೀರು ತರಲು ಹೋದ ಅಕ್ಕಮ್ಮ ಇನ್ನೂ ಬಾರದ ಹಿನ್ನೆಲೆಯಲ್ಲಿ ಮನೆ ಮಂದಿ ಹುಡುಕಾಟ ನಡೆಸಿದರು. ಈ ಸಂದರ್ಭ ಅವರ ಮೃತ ದೇಹ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಮೃತರು ಗಂಡ ಕೃಷ್ಣಪ್ಪ, ಪುತ್ರಿಯನ್ನು ಅಗಲಿದ್ದಾರೆ. ಇತ್ತೀಚೆಗಷ್ಟೆ ಅಕ್ಕಮ್ಮ ದಂಪತಿಯ ಪುತ್ರ ಚಂದ್ರಶೇಖರ್ ಅನಾರೋಗ್ಯದಿಂದ ಮೃತಪಟ್ಟಿದ್ದರು.
ಪುತ್ತೂರು : ಪುತ್ತೂರಿನಲ್ಲಿ ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಒಂದು ಕಟೌಟ್ ಕಾಣಿಸಿಕೊಂಡಿದ್ದು ಲವ್ ಜಿಹಾದ್ – ನೀವು ಇದಕ್ಕೆ ಬಲಿಯಾಗಬೇಡಿ’ ಎಂಬ ಬ್ಯಾನರ್ ಒಂದನ್ನು ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಅರಣ್ಯ ಇಲಾಖೆಯ ಕಚೇರಿಯ ಎದುರು ಹಾಕಲಾಗಿದೆ. ಹಿಂದೂ ಹುಡುಗಿ ಶ್ರದ್ಧಾಳ ಹತ್ಯೆ. ದೇಹವನ್ನು 35 ತುಂಡು ಮಾಡಿದರು. ಕಾರಣ ಲವ್ ಜಿಹಾದ್. ಇದಕ್ಕೆ ನೀವು ಬಲಿಯಾಗಬೇಡಿ’ ಎಚ್ಚರಿಸುವ ಕಟೌಟ್ ಅನ್ನು ವೈದ್ಯ, ಹಿಂದುತ್ವ ಪರ ಸಂಘಟನೆಗಳಲ್ಲಿ ಸಕ್ರಿಯರಾಗಿರುವ ಡಾ.ಎಂ.ಕೆ. ಪ್ರಸಾದ್ ಅವರ ಹೆಸರಿನಲ್ಲಿ ಅಳವಡಿಸಲಾಗಿದೆ. ನಾನು ಯಾವುದೇ ಧರ್ಮ ಅಥವಾ ಸಮುದಾಯದ ವಿರುದ್ಧ ಅಲ್ಲ. ಆದರೆ, ನಮ್ಮ ಸುತ್ತಮುತ್ತಲ ಬೆಳವಣಿಗೆ ಬಗ್ಗೆ ಹದಿಹರೆಯದವರಿಗೆ ಅರಿವು ಇರಬೇಕು. ಬಣ್ಣದ ಆಮಿಷಗಳನ್ನು ಒಡ್ಡಿ ಏನೇನು ಮಾಡುತ್ತಾರೆ ಎಂಬುದೂ ಗೊತ್ತಿರಬೇಕು. ಅದಕ್ಕಾಗಿ ನಾನೇ ಈ ಫಲಕ ಹಾಕಿಸಿದ್ದೇನೆ. ಸ್ಥಳೀಯ ಎಲ್ಲ ಕಾಲೇಜುಗಳಿಗೂ ಭಿತ್ತಿಪತ್ರಗಳನ್ನು ಕಳುಹಿಸಿದ್ದೇನೆ. ಯಾವುದೇ ಸಂಘಟನೆ ಅಥವಾ ಸಂಘ–ಸಂಸ್ಥೆ ಪರವಾಗಿ ಮಾಡಿಲ್ಲ. ವೈಯಕ್ತಿಕ ಹೆಸರಿನಲ್ಲಿಯೇ ಕಳುಹಿಸಿದ್ದೇನೆ’ ಎಂದು ಡಾ.ಎಂ.ಕೆ. ಪ್ರಸಾದ್…
ಬೆಂಗಳೂರು: ಕೆಲ ದಿನಗಳ ಹಿಂದೆ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುತ್ತಿರೋದಾಗಿ ಕೆ ಎಂಎಫ್ ನಿಂದ ಘೋಷಣೆ ಮಾಡಲಾಗಿತ್ತು. ಆದ್ರೇ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬ್ರೇಕ್ ಹಾಕಿದ್ದರು. ಈ ಬಳಿಕ ಸಭೆ ನಡೆಸಿ ಯಾವುದೇ ತೊಂದರೆಯಾಗದಂತೆ ದರ ಹೆಚ್ಚಳಕ್ಕೆ ಸಭೆಯಲ್ಲಿ ಸಲಹೆ ಮಾಡಿದ್ದರು. ಸಿಎಂ ಸಲಹೆಯಂತೆ ಇಂದು ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ಈ ಕುರಿತಂತೆ ಇಂದಿನ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಂದಿನ ಉತ್ಪನ್ನಗಳ ದರ ಹೆಚ್ಚಳ ಸಂಬಂಧ ಮಹತ್ವದ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಹಲವು ಅಧಿಕಾರಿಗಳು, ನಾಯಕರು ಭಾಗಿಯಾಗಿದ್ದರು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಂದಿನಿ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳದ…
ಮಂಗಳೂರು : ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್ ಐ ಎ ತನಿಖೆಗೆ ನೀಡುವ ಬಗ್ಗೆ ಎರಡು ದಿನದಲ್ಲಿ ನಿರ್ಧರಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸ್ಪೋಟ ಪ್ರಕರಣ ಹಿನ್ನೆಲೆ ಮಂಗಳೂರಿಗೆ ಆಗಮಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಸುದ್ದಿಗಾರರ ಜೊತೆ ಮಾತನಾಡಿದರು.ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ತನಿಖೆಯನ್ನು ಎನ್ ಐ ಗೆ ನೀಡುವ ಕುರಿತು ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು. ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತುಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.ಮಂಗಳೂರು ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ಭೇಟಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಗಾಯಾಳು ಆಟೋ ಚಾಲಕ ಪುರುಷೋತ್ತಮ್ ನನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಸಚಿವರು ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ. ಮಂಗಳೂರು…
ಮಂಗಳೂರು: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಡಿಜಿಪಿ ಪ್ರವೀಣ್ ಸೂದ್ ಅವರು ಗರೋಡಿ ಬಳಿಯ ಆಟೋರಿಕ್ಷಾ ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅವರು ಅಲ್ಲಿಯೇ ಇರಿಸಲಾಗಿರುವ ಆಟೋರಿಕ್ಷಾವನ್ನು ವೀಕ್ಷಿಸಿ ಘಟನೆಯ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದರು. ನವೆಂಬರ್ 19ರಂದು ಸಂಜೆ ಶಂಕಿತ ಭಯೋತ್ಪಾದಕ ಶಾರೀಕ್ ಪಂಪ್ ವೆಲ್ ಕಡೆಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆತನಲ್ಲಿದ್ದ ಕುಕ್ಕರ್ ಬಾಂಬ್ ಗರೋಡಿ ಬಳಿಯಲ್ಲಿ ಸ್ಪೋಟಗೊಂಡಿತ್ತು. ಆ ಬಳಿಕ ಆಟೋದಲ್ಲಿ ಸ್ಫೋಟ ನಡೆದಿರುವ ಸ್ಥಳವನ್ನು ಬ್ಯಾರಿಕೇಡ್ ಹಾಕಿ ಯಾರೂ ಅಲ್ಲಿ ಓಡಾಟ ನಡೆಸದಂತೆ ರಸ್ತೆಯಿಂದ ಪ್ರತ್ಯೇಕಿಸಲಾಗಿದೆ. ಸ್ಥಳದಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ. ಬಳಿಕ ಆರಗ ಜ್ಞಾನೇಂದ್ರ ಹಾಗೂ ಪ್ರವೀಣ್ ಸೂದ್ ನಗರದ ಕಂಕನಾಡಿ ಆಸ್ಪತ್ರೆಗೆ ಭೇಟಿ ನೀಡಿ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಹಾಗೂ ಆರೋಪಿ ಶಾರೀಕ್ ಆರೋಗ್ಯ ವಿಚಾರಿಸಿದರು. ಈ ವೇಳೆ ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್, ಡಿಸಿಪಿಗಳಾದ…
ಮಂಗಳೂರು: ಒಂದೊಮ್ಮೆ ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದ್ದಲ್ಲಿ ನಿರ್ಲಕ್ಷ್ಯ ವಹಿಸಬೇಡಿ. ಬಾಂಬ್ ಬ್ಲಾಸ್ಟ್ ಪ್ರಕರಣ ನಿಮಗೊಂದು ನಿದರ್ಶನ ಆಗಲಿ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾರಿಕ್ ಬಳಿ ಇದ್ದಿದ್ದು ಪ್ರೇಮ್‌ರಾಜ್ ಎನ್ನುವವರ ಆಧಾರ್‌ಕಾರ್ಡ್. ಪ್ರೇಮ್‌ರಾಜ್ ತನ್ನ ಆಧಾರ್‌ಕಾರ್ಡ್ ಕಳೆದುಕೊಂಡಿದ್ದರು. ಈ ಪ್ರಕರಣದಲ್ಲಿ ಪ್ರೇಮ್‌ರಾಜ್ ಆರೋಪಿ ಆಗುವ ಸಾಧ್ಯತೆ ಇತ್ತು. ಆದರೆ ಎಡಿಜಿಪಿ ಅಲೋಕ್ ಕುಮಾರ್ ಪ್ರೇಮ್‌ರಾಜ್ ಜತೆ ಮಾತುಕತೆ ನಡೆಸಿದ್ದರು. ಹೀಗಾಗಿ ಸತ್ಯ ವಿಚಾರ ಬಹಿರಂಗೊಂಡ ಹಿನ್ನಲೆ ಯಾವುದೇ ಕೇಸ್ ಆಗಿಲ್ಲ ಎಂದಿದ್ದಾರೆ.ಒಂದೊಮ್ಮೆ ಸಮರ್ಪಕ ಮಾಹಿತಿ ಸಿಗದೇ ಇದ್ದಿದ್ದಲ್ಲಿ ಪ್ರೇಮ್ ರಾಜ್ ಅವರು ಸಮರ್ಪಕ ಮಾಹಿತಿ ನೀಡದೇ ಇದ್ದಿದ್ದರೇ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇತ್ತು ಎಂದಿದ್ದಾರೆ. ಹೀಗಾಗಿ ಆಧಾರ್‌ಕಾರ್ಡ್ ಕಳೆದುಕೊಂಡವರಿಗೆ ಎಡಿಜಿಪಿ ಅಲೋಕ್ ಮನವಿ ಮಾಡಿದ್ದಾರೆ. ಆಧಾರ್ ಕಳೆದುಕೊಂಡವರು ಒಂದು ಕೇಸ್ ದಾಖಲಿಸಿ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.










