Author: main-admin

ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಬುಧವಾರ ಸಂಜೆ ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆದ 51 ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಭವ್ಯ ಮೆರವಣಿಗೆಯಲ್ಲಿ ವಧು-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ತೆರಳಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಚಲನಚಿತ್ರ ನಟ ದರ್ಶನ್ ತೂಗುದೀಪ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಮತ್ತು ಗಣ್ಯ ಅತಿಥಿಗಳು ಮಂಗಲಸೂತ್ರವನ್ನು ವಿತರಿಸಿದರು. 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ವೇದ, ಮಂತ್ರ ಘೋಷ ಪಠಣದೊಂದಿಗೆ ವರನು ವಧುವಿಗೆ ಮಂಗಲಸೂತ್ರಧಾರಣೆ ಮಾಡಿ, ಆಯಾ ಜಾತಿ ಸಂಪ್ರದಾಯದಂತೆ ಮದುವೆಯ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು.

Read More

ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ಬಂದ್ ಆಗಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ಮೇ 8, 9, 10 ಮತ್ತು 13ರಂದು ಮದ್ಯ ಮಾರಾಟ ಬಂದ್ ಆಗಲಿದ್ದು, ಮೇ 8ರ ಬೆಳಿಗ್ಗೆ 6 ಗಂಟೆಯಿಂದಲೇ ಮದ್ಯದಂಗಡಿಗಳು ಬಂದ್ ಆಗಲಿದ್ದು, ಮೇ 10ರ ಮಧ್ಯರಾತ್ರಿ 12 ಗಂಟೆಯವರೆಗೆ ಇದು ಮುಂದುವರಿಯಲಿದೆ.ಎಣಿಕೆ ದಿನವಾದ ಮೇ 13 ರಂದು ಅಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯದಂಗಡಿಗಳು ಬಂದ್ ಇರಲಿದ್ದು, ಒಂದು ವೇಳೆ ಮರು ಮತದಾನ ನಡೆದ ಸಂದರ್ಭದಲ್ಲಿ ಅಲ್ಲಿಗೂ ಸಹ ಈ ಆದೇಶ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

Read More

ತುಮಕೂರು;ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ರಿಹರ್ಸಲ್ ವೇಳೆ ಅನಾಹುತ ಸಂಭವಿಸಿದೆ. ಮೇ.5ಕ್ಕೆ ತುಮಕೂರಿಗೆ ಮೋದಿ ಆಗಮಿಸಲಿದ್ದಾರೆ. ಆದ್ದರಿಂದ ಎರಡು ದಿನಗಳ ಮುಂಚಿತವಾಗಿ ಎಸ್‌ಪಿಜಿ ತಂಡದೊಂದಿಗೆ ಹೆಲಿಕಾಪ್ಟರ್ ರಿಹಸರ್ಲ್ ನಡೆಸುತ್ತಿದ್ದರು. ಈ ವೇಳೆ ತುಮಕೂರು ನಗರ ಡಿವೈಎಸ್ ಪಿ ಶ್ರೀನಿವಾಸ್ ಕಾನ್ ವೇ ರಿಹಸರ್ಲ್ ಪರಿಶೀಲನೆ ನಡೆಸುತ್ತಿದ್ದರು.ಹೆಲಿಕಾಪ್ಟರ್ ನ ಗಾಳಿಯ ರಭಸಕ್ಕೆ ತುಮಕೂರು ವಿಶ್ವವಿದ್ಯಾಲಯದ ಗೇಟ್ ಅಲುಗಾಡಿ ಪಕ್ಕದಲ್ಲಿಯೇ ನಿಂತುಕೊಂಡಿದ್ದ ಡಿವೈಎಸ್‌ಪಿ ಶ್ರೀನಿವಾಸ್‌ ತಲೆಗೆ ಬಡಿದಿದೆ. ಘಟಮೆಯಲ್ಲಿ ತೀವ್ರವಾಗಿ ಗಾಯಗೊಂಡು ಡಿವೈಎಸ್‌ಪಿ ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ತುಮಕೂರು ಯುನಿವರ್ಸಿಟಿ ಹೆಲಿಪ್ಯಾಡ್ ಬಳಿ ಹೆಲಿಕಾಪ್ಟರ್ ಲ್ಯಾಂಡಿಂಗ್ ನಿಂದ 100 ಮೀಟರ್ ದೂರದಲ್ಲಿ ಡಿವೈಎಸ್ ಪಿ ಶ್ರೀನಿವಾಸ್ ನಿಂತಿದ್ದರು. ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ‌ ಬಿಸಿದ ಗಾಳಿ ರಭಸಕ್ಕೆ ಯುನಿವರ್ಸಿಟಿ ಗೇಟ್ ಅಲುಗಾಡಿ ಪಕ್ಕದಲ್ಲಿಯೇ ಇದ್ದ ಶ್ರೀನಿವಾಸ್‌ ತಲೆಗೆ ಬಡಿದಿದೆ. ಇದರಿಂದ ಗಾಯಗೊಂಡಿದ್ದ ಶ್ರೀನಿವಾಸ್ ಅವರನ್ನ ಕೂಡಲೇ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಡಿವೈಎಸ್ಪಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅವರಿಗೆ ವೈದ್ಯರು ವಿಶ್ರಾಂತಿ…

Read More

ಮಂಗಳೂರು: ಬೆಸಿಗೆ ಜೊತೆಗೆ ಮಳೆ ಬಾರದ ಕಾರಣ ತುಂಬೆ ಡ್ಯಾಂ ನಲ್ಲಿ ನೀರಿನ ಮಟ್ಟ ತೀವ್ರ ಕುಸಿತಗೊಂಡಿದ್ದು ಇದೀಗ ಮಂಗಳೂರು ನಗರಕ್ಕೆ ನೀರು ಪೂರೈಕೆಯಲ್ಲಿ ಸಮಸ್ಯೆಯಾಗಲಾರಂಭಿಸಿದೆ. ಈ ಹಿನ್ನಲೆ (ಮೇ 4) ರಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ರೇಷನಿಂಗ್‌ ಮೂಲಕ ನೀರಿನ ಪೂರೈಕೆ ಮಾಡಲಾಗುವುದು ಎಂದು ಜಿಲ್ಲಾಡಳಿತ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ತುಂಬೆ ಡ್ಯಾಂನಲ್ಲಿ ಲಭ್ಯವಿರುವ ನೀರನ್ನು ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್‌ (ಮಂಗಳೂರು ಉತ್ತರ) ಭಾಗಕ್ಕೆ ʻಪರ್ಯಾಯ ದಿನʼಗಳಲ್ಲಿ ನೀರು ಬಿಡಲು ಸೂಚಿಸಲಾಗಿದೆ. ಈ ಸೂಚನೆಯಂತೆ ದಿನಾಂಕ 05- 05- 2023 ರಂದು ಮಂಗಳೂರು ನಗರ ಉತ್ತರಕ್ಕೆ, ದಿನಾಂಕ 06-05-2023 ರಂದು ಮಂಗಳೂರು ನಗರ ದಕ್ಷಿಣ ಹೀಗೆ ಕ್ರಮಾನುಗತವಾಗಿ ಈ ಮೇಲೆ ತಿಳಿಸಿದಂತೆ ನೀರು ಪೂರೈಕೆ ಮಾಡಲು ನಿರ್ಧರಿಸಲಾಗಿದೆ.ಲಭ್ಯವಿರುವ ನೀರನ್ನು ಈ ರೀತಿಯಾಗಿ ಪೂರೈಕೆ ಮಾಡುವುದು ಅನಿವಾರ್ಯವಾಗಿದ್ದು ಸಾರ್ವಜನಿಕರು ನಗರ ಪಾಲಿಕೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

Read More

ಕುಂದಾಪು: ಸರ್ವೀಸ್ ಸ್ಟೇಷನ್‌‌ನಿಂದ ಹೆದ್ದಾರಿಗೆ ಬಂದು ಯೂ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್‌‌ನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಗಾಯಗೊಂಡಿರುವ ಘಟನೆ ಕುಂದಾಪುರ ತಾಲೂಕಿನ ತಲ್ಲೂರು ಸಮೀಪ ಪ್ರವಾಸಿ ಪೆಟ್ರೋಲ್ ಬಂಕ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ನಡೆದಿದ್ದು, ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಕುಮುಟಾ ಡಿಪೋದ ಕೆಎಸ್ಆರ್‌‌ಟಿಸಿ ಬಸ್ ಚಾಲಕ ಅಶೋಕ ಎಂಬುವರು ತಲ್ಲೂರಿನಲ್ಲಿರುವ ಅಶೋಕ ಲೇಲ್ಯಾಂಡ್ ಶೋ ರೂಮಿಗೆ ಬಸ್ಸನ್ನು ಕೊಂಡೊಯ್ದಿದ್ದು, ಸರ್ವೀಸ್ ಮಾಡಿಸಿಕೊಂಡು ವಾಪಾಸ್ಸು ಕುಮುಟಾಕ್ಕೆ ಹೋಗಲೆಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರ ಕಡೆಗೆ ಬಂದು ಪ್ರವಾಸಿ ಪೆಟ್ರೋಲ್ ಬಂಕ್ ಸಮೀಪ ಯೂಟರ್ನ್ ತೆಗೆದುಕೊಳ್ಳುತ್ತಿದ್ದರು. ಇದೇ ಸಂದರ್ಭ ಕುಂದಾಪುರದಿಂದ ಗಂಗೊಳ್ಳಿಗೆ ಪ್ರಯಾಣಿಕರನ್ನು ತುಂಬಿಸಿಕೊಂಡು ಬರುತ್ತಿದ್ದ ಭಾರತಿ ಬಸ್ ಚಾಲಕ ಮನೋಹರ ನೇರವಾಗಿ ಬಂದು ಸರ್ಕಾರೀ ಬಸ್ಸಿನ ಹಿಂದುಗಡೆಗೆ ಡಿಕ್ಕಿ ಹೊಡೆದಿದ್ದಾನೆ. ಈ ಸಂದರ್ಭ ಖಾಸಗಿ ಬಸ್ಸಿನಲ್ಲಿದ್ದವರ ಪೈಕಿ ಒಂದು ಮಗು ಸಹಿತ ಮೂವರು…

Read More

ಮೂಲ್ಕಿಯ ಕೋಳ್ನಾಡುವಿನಲ್ಲಿ ನವಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಮೀನುಗಾರರ ಸಂಕಷ್ಟಗಳು ಕಣ್ಣಿಗೆ ಕಾಣಲಿಲ್ಲ. ಉಡುಪಿಯಲ್ಲಿ ನನ್ನ ಸಹೋದರರ ಮೀನುಗಾರರ ಕುಟುಂಬಗಳಿವೆ ಎಂದು ಮೋದಿಗೆ ಗೊತ್ತಿತ್ತು. ಇದೇ ಕಾರಣಕ್ಕೆ ಮೀನುಗಾರರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗಿದೆ ಎಂದರು.ಕರ್ನಾಟಕದ ಮೀನುಗಾರರಿಗೆ ಕಾಂಗ್ರೆಸ್ ದ್ರೋಹ ಬಗೆದಿದೆ. ದೆಹಲಿಯಲ್ಲಿ ಕುಳಿತಿರುವ ಸರ್ಕಾರಕ್ಕೆ ಮೀನುಗಾರಿಕೆ ಅಸ್ತಿತ್ವದಲ್ಲಿದೆ ಎಂದು ತಿಳಿದಿರಲಿಲ್ಲ! ಮತ್ತು ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ನಾವು ಪ್ರತ್ಯೇಕ ಮೀನುಗಾರಿಕೆ ಸಚಿವಾಲಯವನ್ನು ಸ್ಥಾಪಿಸಿದ್ದೇವೆ ಎಂದರು. ಸ್ವಾತಂತ್ರ್ಯದ ನಂತರ 2014 ರವರೆಗೆ ಒಳನಾಡು ಮೀನುಗಾರಿಕೆಯು 60 ಲಕ್ಷ ಟನ್‍ಗಳಷ್ಟು ಉತ್ಪಾದನೆಯನ್ನು ಹೊಂದಿತ್ತು. ಆದಾಗ್ಯೂ, ನಂತರ ಬಿಜೆಪಿ ನೇತೃತ್ವದ ಸರಕಾರ 2014ರಲ್ಲಿ ಬಂದ ಸರಕಾರ ಕೇವಲ 9 ವರ್ಷಗಳಲ್ಲಿ 120 ಲಕ್ಷ…

Read More

ಬೆಂಗಳೂರು;ಟಿಕೆಟ್ ಕೈತಪ್ಪಿದ ಹಿನ್ನೆಲೆ ಪಕ್ಷದ ವಿರುದ್ಧ ಬಂಡಾಯವೆದ್ದು ಪಕ್ಷೇತರರಾಗಿ ಕಣಕ್ಕಿಳಿದ 24 ಮಂದಿಯನ್ನುಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಉಚ್ಚಾಟಿಸಿದೆ. ಗದಗದ ಶಿರಹಟ್ಟಿಯ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿತುಮಕೂರಿನ ಕುಣಿಗಲ್ ನ ಮಾಜಿ ಶಾಸಕ ಬಿಬಿ ರಾಮಸ್ವಾಮಿಗೌಡ,ಬಳ್ಳಾರಿಯ ಹರಪ್ಪನಹಳ್ಳಿಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಪಿ ಲತಾ ಮಲ್ಲಿಕಾರ್ಜುನ, ಕಾಂಗ್ರೆಸ್‌ ನಾಯಕ ಕೃಷ್ಣೇಗೌಡ (ಅರಕಲಗೂಡು), ಕೆಪಿಸಿಸಿ ಸಂಯೋಜಕ ಚಂದ್ರಾ ಸಿಂಗ್‌ (ಬೀದರ್‌ ದಕ್ಷಿಣ), ಚಿಕ್ಕಮಗಳೂರು ಡಿಸಿಸಿ ಉಪಾಧ್ಯಕ್ಷ ಗೋಪಿಕೃಷ್ಣ (ತರೀಕೆರೆ), ಬೆಳಗಾವಿ ಯುವ ಕಾಂಗ್ರೆಸ್‌ ಮುಖಂಡ ಇರ್ಫಾನ್‌ ತಾಳಿಕೋಟೆ (ಖಾನಾಪುರ), ಕಿಸಾನ್‌ ಸೆಲ್‌ ಉಪಾಧ್ಯಕ್ಷ ಪದ್ಮಜಿತ್‌ ನಾಡಗೌಡ (ತೇರದಾಳ‌), ಬಸವರಾಜ್‌ ಮಲ್ಕಾರಿ ( ಹುಬ್ಬಳ್ಳಿ–ಧಾರವಾಡ ಪಶ್ಚಿಮ), ಉಮಾದೇವಿ (ನೆಲಮಂಗಲ), ಯೂಸುಫ್‌ ಅಲಿ ಜಾಮದಾರ್‌ (ಬೀದರ್‌ ದಕ್ಷಿಣ), ನಾರಾಯಣ ಬಂಗಿ (ಬೀದರ್‌ ದಕ್ಷಿಣ), ವಿಜಯಕುಮಾರ್‌ ಬರೂರು (ಬೀದರ್‌ ದಕ್ಷಿಣ), ಸವಿತಾ ಮಲ್ಲೇಶ್‌ ನಾಯಕ್ (ಮಾಯಕೊಂಡ), ಪಿ.ಎಚ್. ಚಂದ್ರಶೇಖರ್‌ (ಶ್ರೀರಂಗಪಟ್ಟಣ), ಪುಟ್ಟ ಆಂಜನಪ್ಪ (ಶಿಡ್ಲಘಟ್ಟ), ಶಂಭು ಕೋಲ್ಕರ್‌ (ರಾಯಬಾಗ್‌),…

Read More

ಬೆಂಗಳೂರು: ದಿನಾಂಕ 10-05-2023ರ ಬುಧವಾರದಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಂದು ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ, ಸಂಘ-ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ. ಅಲ್ಲದೇ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವಂತ ಅಧಿಕಾರಿ, ಸಿಬ್ಬಂದಿ ಹಾಜರಾಗುವುದು ಕಡ್ಡಾಯಗೊಳಿಸಿದೆ. ಅಲ್ಲದೇ ಮತಗಟ್ಟೆ ಕೇಂದ್ರ, ಮತಏಣಿಕೆ ಕೇಂದ್ರಗಳಿಗೆ ರಜೆಯನ್ನು ಘೋಷಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ ಅಂದರೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಸರ್ಕಾರವು ಆಯಾ ಚುನಾವಮಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲು ದಿನಾಂಕದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ…

Read More

ಪುತ್ತೂರು:ಪುತ್ತೂರಿನಲ್ಲಿ ಅನೈತಿಕ ಪೊಲೀಸ್ ಗಿರಿ ನಡೆದಿದ್ದು, ಅಮಾಯಕ ಕಾಲೇಜು ವಿದ್ಯಾರ್ಥಿ ಮೇಲೆ ಸಹಪಾಠಿ ಜೊತೆ ಮಾತನಾಡಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಗಂಭೀರ ಗಾಯಗೊಂಡಿದ್ದು, ಯುವಕನಿಗೆ ಒಂದು ಕಿವಿ ಕೇಳಿಸದಂತಾಗಿದೆ ಎಂದು ತಿಳಿದು ಬಂದಿದೆ. ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ರೂಂ ಒಂದರಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಂತ್ರಸ್ತ ಫಾರಿಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಪಾರಿಶ್‌ ಹೇಳಿದ್ದೇನು? ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೊಹಮ್ಮದ್‌ ಪಾರಿಶ್‌, ಬಜರಂಗದಳದ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. ನನ್ನ ಕ್ಲಾಸ್‌ಮೇಟ್‌ ಮತ್ತು ನಾನು ಇಬ್ಬರೂ ಅಂಗಡಿಯಲ್ಲಿ ಜ್ಯೂಸ್‌ ಕುಡಿಯುತ್ತಿದ್ದೆವು. ಇದಾದ ಬಳಿಕ 15 ಜನ ನನ್ನನ್ನು ಕರೆದರು. ನಾನು ಹೆಸರು ಹೇಳಿದ ಬಳಿಕ ನಿನ್ನಲ್ಲಿ ಮಾತನಾಡಲಿದೆ ಎಂದು ನನ್ನನ್ನು ರೂಂ ಒಂದಕ್ಕೆ ಕರೆದೊಯ್ದರು. ಅಲ್ಲಿ ಸುಮಾರು 50 ಮಂದಿ ಸೇರಿಕೊಂಡು ನನ್ನ ಮೇಲೆ ವೈರ್ ಮತ್ತು…

Read More

ಮಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ವಿವಿಧ ಪಕ್ಷದ ಪ್ರಮುಖ ನಾಯಕರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದಿನ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಗೆ ಆಗಮಿಸಲಿದ್ದು, ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಭದ್ರತೆ ಹಾಗೂ ಸಂಚಾರ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಬೆಳಗ್ಗೆ 7ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ಸಮಾವೇಶ ಸ್ಥಳದ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕುದೀಪ್ ಕುಮಾರ್ ಜೈನ್ ಹೇಳಿದ್ದಾರೆ. ಬೆಳಗ್ಗೆ 10:30ರ ನಂತರ ಮೂಲ್ಕಿಯ ಕೊಲ್ನಾಡ್ ನ ಹೆಲಿಪ್ಯಾಡ್ ನಿಂದ ಕಾರ್ಯಕ್ರಮಕ್ಕೆ ಹೋಗುವ ಸ್ಥಳದಲ್ಲಿ ಹಾಗೂ ಹಳೆಯಂಗಡಿ ಜಂಕ್ಷನ್ ಬಳಿಯ ಕಾರ್ನಾಡ್ ಬೈಪಾಸ್ ಬಳಿ ಕಾರ್ಯಕ್ರಮಕ್ಕೆ ಬರುವ ವಾಹನವನ್ನು ಬಿಟ್ಟು ಉಳಿದ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಸದ್ಯ ಉಡುಪಿ ಕಡೆಯಿಂದ ಮಂಗಳೂರು ಹಾಗೂ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುವವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುವ…

Read More