Author: main-admin

ಬಂಟ್ವಾಳ: ಬೈಕ್ ಡಿಕ್ಕಿಹೊಡೆದ ಪರಿಣಾಮ ರಸ್ತೆದಾಟುತ್ತಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬೊಳ್ಳಿಕಲ್ಲು ಎಂಬಲ್ಲಿ ನಡೆದಬಗ್ಗೆ ವರದಿಯಾಗಿದೆ.ಮಾಣಿ ಪಾರ್ತಾಜೆ ನಿವಾಸಿ ಶುಭಕರರವರು ಮೃತದುರ್ದೈವಿ ಎಂದು ತಿಳಿದುಬಂದಿದೆ. ಶುಬಕರರವರು ತನ್ನ ಮನೆಯಿಂದ ವಿಟ್ಲಕಡೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಅವರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಗಂಭೀರ ಗಾಯಗೊಂಡಿದ್ದ ಅವರನ್ನು ಸೋಶಿಯಲ್ ಇಕ್ವಾ ಮಾಣಿ ಆಂಬುಲೆನ್ಸ್ ಮೂಲಕ ಆಸ್ಪತ್ರೆ ಕೊಂಡೊಯ್ಯಲಾಗಿತ್ತಾದರೂ ಆ. ವೇಳೆಗಾಗಲೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಮತ್ತು ನಿಂದನೆ ಆರೋಪದ ಹಿನ್ನೆಲೆಯಲ್ಲಿ ಕಾಮಿಡಿ ಕಿಲಾಡಿ ನಟಿ ನಯನಾ ವಿರುದ್ಧ ದೂರು ದಾಖಲಾಗಿದೆ. ಕಾಮಿಡಿ ಕಿಲಾಡಿಗಳು ಗ್ಯಾಂಗ್ಸ್ ನಲ್ಲಿ ನಟಿಸಿದ್ದ ಸೋಮಶೇಖರ್ ಎಂಬುವರು ನಯನಾ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಖಾಸಗಿ ಚಾನಲ್ ನಲ್ಲಿ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ನಲ್ಲಿ ದ್ವಿತೀಯ ಬಹುಮಾನ ಗೆದ್ದ ಪಿಯುಸಿ ತಂಡಕ್ಕೆ 3 ಲಕ್ಷ ರೂ. ಬಂದಿತ್ತು. ಅದರಲ್ಲಿ ಶೇ. 30 ರಷ್ಟು ಕಟ್ ಆಗಿ ಪ್ರತಿಯೊಬ್ಬರಿಗೆ 70 ಸಾವಿರ ರೂ. ನೀಡಲಾಗಿತ್ತು. ಆದರೆ ಇಬ್ಬರು ಸೀನಿಯರ್ ಗಳಿಗೆ ಹಣ ನೀಡಲು ನಯನಾ ಅವಾಜ್ ಹಾಕಿದ್ದಾರೆ ಎಂದು ಸೋಮಶೇಖರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Read More

ಮಂಗಳೂರು : ಮಂಗಳೂರಿನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ತನಿಖೆ ಚುರುಕಿನಿಂದ ನಡೆಯುತ್ತಿದೆ ಎಂದು ಹೇಳಿದರು. ದೇವನಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ಶಂಕಿತ ಉಗ್ರನಿಂದ ‘ಬೇರೆ ಕಡೆ ಬಾಂಬ್ ಸ್ಪೋಟಿಸುವ ಪ್ಲ್ಯಾನ್’ ಇತ್ತು, ತಪ್ಪಿ ಆಟೋದಲ್ಲಿ ಸ್ಪೋಟವಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಿನ್ನೆ ನಗರದಲ್ಲಿ ನಡೆದಿದ್ದಂತ ಆಟೋದಲ್ಲಿನ ಸ್ಪೋಟಕ ಪ್ರಕರಣಕ್ಕೆ ಕ್ಷಣಕ್ಕೊಂದು ತಿರುಪು ಪಡೆಯುತ್ತಿದೆ. ಇದೀಗ ಈ ಬ್ಲಾಸ್ಟ್ ಕೇಸ್ ಸಂಬಂಧ ಶಂಕಿತ ಉಗ್ರನ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಉನ್ನತ ಮೂಲಗಳಿಂಗ ಮಾಹಿತಿ ತಿಳಿದು ಬಂದಿದ್ದು, ಮಂಗಳೂರು ಸ್ಪೋಟಕ ಕೇಸ್ ನ ಶಂಕಿತ ವ್ಯಕ್ತಿ ಯೂನಸ್ ಖಾನ್ ಎಂದು ಹೇಳಲಾಗುತ್ತಿದೆ. ಈ ಮೊದಲು ಪ್ರೇಮ್ ರಾಜ್ ಎಂಬ ಹೆಸರಿನಲ್ಲಿ ಆಧಾರ್ ಕಾರ್ಡ್ ದೊರೆತಿದ್ದ ಆತನ ಮತ್ತೊಂದು ಹೆಸರು ಯೂನಸ್…

Read More

ಬೇಕಾಗುವ ಪದಾರ್ಥಗಳು: ಚಿಕನ್ 1 ಕೆಜಿ, ಈರುಳ್ಳಿ 4, ಬೆಳ್ಳುಳ್ಳಿ 4 ಎಸಳು, ಹಸಿಮೆಣಸಿನಕಾಯಿ 2, ಮೊಸರು 1 ಕಪ್, ಗರಂ ಮಸಾಲ 1 ಚಮಚ, ತೆಂಗಿನ ತುರಿ ಕಾಲು ಕಪ್, ಸ್ವಲ್ಪ ಶುಂಠಿ, ಸಾಸಿವೆ ಅರ್ಧ ಚಮಚ, ಅರಿಶಿನ ಪುಡಿ, ಉಪ್ಪು ರುಚಿಗೆ ತಕ್ಕಷ್ಟು. ಮಾಡುವ ವಿಧಾನ: ಚಿಕನ್ ಅನ್ನು ತುಂಡು ತುಂಡಾಗಿ ಕತ್ತರಿಸಿ ತೊಳೆಯಿರಿ. ತೆಂಗಿನ ತುರಿ, ಖಾರದಪುಡಿ, ಅರಿಶಿನ ಪುಡಿ, ಬೆಳ್ಳುಳ್ಳಿ ಹಾಕಿ ಚೆನ್ನಾಗಿ ರುಬ್ಬಿ ಆ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಮಿಶ್ರಣ ಮಾಡಿ 1 ಗಂಟೆ ಕಾಲ ಇರಿಸಿ. ಪಾತ್ರೆಯನ್ನು ಬಿಸಿ ಮಾಡಿ ಅದಕ್ಕೆ ಎಣ್ಣೆಯನ್ನು ಸುರಿದು ಆ ಎಣ್ಣೆಯು ಬಿಸಿಯಾದಾಗ ಸಾಸಿವೆ, ಈರುಳ್ಳಿ ಮತ್ತು ಹಸಿಮೆಣಸಿನಕಾಯಿ ಹಾಕಿ. ಈರುಳ್ಳಿ ಕಂದು ಬಣ್ಣ ಬರುವವರೆಗೂ ಹುರಿಯಿರಿ. ಆ ನಂತರ ಮಸಾಲೆಯಲ್ಲಿ ಮಿಶ್ರಣ ಮಾಡಿರುವ ಚಿಕನ್ ಹಾಕಿ ಮೂರ್ನಾಲ್ಕು ನಿಮಿಷ ಸೌಟ್ ನಿಂದ ಆಡಿಸಿ, ಬಳಿಕ ಮೊಸರು ಹಾಕಿ ಗರಂ ಮಸಾಲ ಬೆರೆಸಿ ರುಚಿಗೆ ತಕ್ಕಷ್ಟು…

Read More

ಮಂಗಳೂರು : ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿರುವಾಗಲೇ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ. ಪಂಪ್‌ವೆಲ್ ವೃತ್ತದ ಬಳಿ ಈ ಕುಕ್ಕರ್ ಬಾಂಬ್ ಸ್ಫೋಟಿಸಲು ಸಂಚು ರೂಪಿಸಲಾಗಿತ್ತು ಎಂಬ ಅನುಮಾನ ವ್ಯಕ್ತವಾಗಿದ್ದು, ಶನಿವಾರ ಸಂಜೆ ನಾಗುರಿ ಸಮೀಪ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ವಸ್ತುವೊಂದು ಸ್ಪೋಟಗೊಂಡು ರಿಕ್ಷಾ ಚಾಲಕ ಪುರುಷೋತ್ತಮ ಹಾಗೂ ಅಪರಿಚಿತ ವ್ಯಕ್ತಿಯೊಬ್ಬರು ಗಾಯಗೊಂಡಿದ್ದರು. ಸದ್ಯ ಸ್ಪೋಟಕ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು, ಬೋಲ್ಟ್ ಪತ್ತೆ ಹಚ್ಚಿದ್ದಾರೆ. ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತುಗಳು ಪತ್ತೆಯಾಗಿದ್ದು, ಲಘು ತೀವ್ರ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದ್ದು, ವಸ್ತುಗಳನ್ನು ಪರೀಕ್ಷೆಗಾಗಿ ಎಫ್ ಎಸ್ ಎಲ್ ತಂಡಕ್ಕೆ ಕಳುಹಿಸಲಾಗಿದೆ.

Read More

ಮಂಗಳೂರು: ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ-ಐಜಿಪಿ ಪ್ರವೀಣ್ ಸೂದ್ ಆಘಾತಕಾರಿ ಮಾಹಿತಿ ಬಹಿರಂಗಗೊಳಿಸಿದ್ದು, ಇದು ಅನಿರೀಕ್ಷಿತ ಸ್ಫೋಟವಲ್ಲ ಉಗ್ರರ ಕೃತ್ಯ ಎಂದು ತಿಳಿಸಿದ್ದಾರೆ. ಮಂಗಳೂರಿನ ನಾಗರಿ ಬಳಿ ನಿನ್ನೆ ಸಂಜೆ ಚಲಿಸುತ್ತಿದ್ದ ಆಟೋದಲ್ಲಿ ಸಂಭವಿಸಿದ್ದ ನಿಗೂಢ ಸ್ಫೋಟ ಪ್ರಕರಣ ಸಂಬಂಧ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಡಿಜಿಪಿ, ಇದು ಉಗ್ರರ ಕೃತ್ಯವಾಗಿದ್ದು, ಉದ್ದೇಶಪೂರ್ವಕವಾಗಿ ಹಾನಿ ಉಂಟು ಮಾಡಲು ಪ್ಲಾನ್ ಮಾಡಲಾಗಿತ್ತು. ಸಾವು, ನೋವು ಹಾನಿ ಉಂಟು ಮಾಡಲು ದುಷ್ಕರ್ಮಿಗಳು ಯೋಜನೆ ರೂಪಿಸಿದ್ದರು ಎಂದು ತಿಳಿಸಿದ್ದಾರೆ. ಕರ್ನಾಟಕ ಪೊಲೀಸರಿಂದ ಸೂಕ್ಷ್ಮ ಹಾಗೂ ಆಳವಾದ ತನಿಖೆ ನಡೆಯುತ್ತಿದೆ. ಕೇಂದ್ರ ತನಿಖಾ ತಂಡದಿಂದಲೂ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Read More

ಮಂಗಳೂರು: ನಗರದ ಆಟೋದಲ್ಲಿ ಕುಕ್ಕರ್ ಸ್ಫೋಟ ಪ್ರಕರಣ ತನಿಖೆಯ ಚುರುಕುಗೊಂಡಿದ್ದು ಪರಿಶೀಲನೆ ವೇಳೆ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿದ್ದು ಹೈ ಅಲರ್ಟ್‌ ಘೋಷಣೆಯಾಗಿದೆ. ನಟ್, ಬೋಲ್ಟ್‌, ಬ್ಯಾಟರಿ, ಸರ್ಕಿಟ್ ರೀತಿಯ ವೈರಿಂಗ್ ಇರುವ ವಸ್ತುಗಳು ಪತ್ತೆಯಾಗಿದೆ. ಲಘು ತೀವ್ರತೆ ಇರುವ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ(FSL), ಬಾಂಬ್ ನಿಷ್ಕ್ರೀಯ ದಳದಿಂದ ತೀವ್ರ ಪರಿಶೀಲನೆ ನಡೆಯುತ್ತಿದೆ. ಬಾಕ್ಸ್ ಮತ್ತು ಬ್ಯಾಗ್‌ನಿಂದಲೇ ನಿಗೂಢ ಸ್ಪೋಟ ಸಂಭವಿಸಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸ್ಪೋಟದ ತೀವ್ರತೆಗೆ ಪ್ರಯಾಣಿಕನ ದೇಹ ಶೇ.50ರಷ್ಟು ಸುಟ್ಟು ಹೋಗಿದ್ದು ಚಿಕಿತ್ಸೆ ಮುಂದುವರಿದಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವವನ್ನು ನಾಗುರಿ ಬಳಿ ಪ್ರಯಾಣಿಕ ಹತ್ತಿದ್ದ. ಆಟೋ ಒಂದು ಕಿ.ಮೀ ಕ್ರಮಿಸುವಷ್ಟರಲ್ಲಿ ನಿಗೂಢ ಸ್ಫೋಟಗೊಂಡಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ. ಪರಿಶೀಲನೆ ವೇಳೆ ಪ್ರೇಮ್ ರಾಜ್ ಕನೋಗಿ ಎಂಬ ಹೆಸರಿ‌ನ ಐಡಿ ದಾಖಲೆ ಪತ್ತೆಯಾಗಿದೆ. ದಾಖಲೆಯಲ್ಲಿ ಮೈಸೂರಿನ ವಿಳಾದ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸ್‌ ತಂಡ ಮೈಸೂರಿಗೆ ತೆರಳಿದೆ. ಪ್ರಯಾಣಿಕನ ಬಳಿ 30…

Read More

ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಮಾಹಿತಿ ಹೊರಬೀಳುತ್ತಿದೆ. ಸಧ್ಯ ಶ್ರದ್ಧಾಳ ತಂದೆ, ಈ ಹತ್ಯೆಯಲ್ಲಿ ಅಫ್ತಾಬ್ ಮಾತ್ರವಲ್ಲ ಆತನ ಕುಟುಂಬದ ಸದಸ್ಯರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಶ್ರದ್ಧಾಳ ತಂದೆ, ‘ತಾನೊಮ್ಮೆ ಮದುವೆಯ ಪ್ರಸ್ತಾಪದೊಂದಿಗೆ ಅಫ್ತಾಬ್ ಮನೆಗೆ ಹೋಗಿದ್ದ. ಆದ್ರೆ, ಅಫ್ತಾಬ್ ಮದುವೆಗೆ ನಿರಾಕರಿಸಿದ್ದ. ಅಷ್ಟೇ ಅಲ್ಲ ಅಫ್ತಾಬ್ ಮನೆಯವರೂ ಈ ಮದುವೆಗೆ ಸಿದ್ಧರಿರಲಿಲ್ಲ. ಶ್ರದ್ಧಾ ಕೊಲೆಯಲ್ಲಿ ಅಫ್ತಾಬ್ ಮತ್ತು ಆತನ ಕುಟುಂಬದವರೂ ಭಾಗಿಯಾಗಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಂದ್ಹಾಗೆ, ಶ್ರದ್ಧಾ ಹತ್ಯೆಯ ಸುದ್ದಿಯ ನಂತ್ರ ಅಫ್ತಾಬ್ ಕುಟುಂಬವೂ ಇನ್ನೂ ನಾಪತ್ತೆಯಾಗಿದೆ. ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಅವರ ವಿರುದ್ಧ ಸಾಕ್ಷ್ಯ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ.

Read More

ಮಂಗಳೂರು: ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಲೋಕಾರ್ಪಣೆ ಮಾಡಿದರು. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಯಿ.ಟಿ. ಖಾದರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

Read More

ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯ ಪ್ರಮುಖ ವೃತ್ತಗಳಿಗೆ ಮಹಾಪುರುಷರ, ಗಣ್ಯವ್ಯಕ್ತಿಗಳ ಹೆಸರಿಡುವ ಪ್ರಸ್ತಾವನೆಗೆ ರಾಜ್ಯ ಸರಕಾರ ಅನುಮತಿ ನೀಡಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಯಂತೆ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ, ನಿರ್ಣಯ ಕೈಗೊಂಡು ಸಾರ್ವಜನಿಕರ ಆಕ್ಷೇಪಣೆ, ಶಾಂತಿ ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧೀಕ್ಷಕರ ವರದಿಯನ್ನೂ ಕೇಳಲಾಗಿತ್ತು. ಎಲ್ಲಾ ವೃತ್ತ/ಜಂಕ್ಷನ್‌ಗಳಿಗೆ ನಗರಸಭೆ ನಿರ್ಣಯಕ್ಕೆ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆಯಿಲ್ಲದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿದ್ದರು. ಯಾವ ವೃತ್ತ/ಜಂಕ್ಷನಿಗೆ ಯಾರ ಹೆಸರು? ಬನ್ನಂಜೆ ವೃತ್ತ : ನಾರಾಯಣಗುರು ವೃತ್ತ ,ಕಲ್ಸಂಕ ವೃತ್ತ:ಮಧ್ವಾಚಾರ್ಯ ವೃತ್ತ ,ಡಯಾನಾ ಸರ್ಕಲ್: ವಾದಿರಾಜ ವೃತ್ತ , ಸಂತೆಕಟ್ಟೆ ಕಲ್ಯಾಣಪುರ ರಸ್ತೆ ಜಂಕ್ಷನ್: ಕೋಟಿ ಚೆನ್ನಯ ವೃತ್ತ , ಬ್ರಹ್ಮಗಿರಿ ದೊಡ್ಡ ಸರ್ಕಲ್: ಆಸ್ಕರ್ ಫರ್ನಾಂಡಿಸ್ ವೃತ್ತ , ಪರ್ಕಳದಿಂದ ಕೋಡಂಗೆ, ಕೋಡಂಗೆ ಯಿಂದ ಸರಳೇಬೆಟ್ಟು ನಡುವಿನ ವೃತ್ತ: ಶ್ರೀರಾಮ ವೃತ್ತ.

Read More