Author: main-admin

ಕಡಬ: ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ನೀಡಿದ ವಾಹನ ಮಾಲಕನಿಗೆ ಪುತ್ತೂರು ಎ.ಸಿ.ಜೆ. ಜೆ.ಎಮ್.ಎಫ್.ಸಿ ನ್ಯಾಯಾಲಯ 20 ಸಾವಿರ ದಂಡ ವಿಧಿಸಿದೆ. ಕೊಯಿಲ ಗ್ರಾಮದ ಕೆ.ಸಿ.ಫಾರ್ಮ್ ನಿವಾಸಿ ಅಬ್ದುಲ್ ರಹಿಮಾನ್ ದಂಡ ಪಾವತಿಸಿದವರು. 2020ರಲ್ಲಿ ಅಬ್ದುಲ್ ರಹಿಮಾನ್ ಅವರು ತಮ್ಮ ಅಪ್ರಾಪ್ತ ಪುತ್ರನಿಗೆ ಬೈಕ್ ಚಲಾಯಿಸಲು ನೀಡಿದ್ದರು. ಈ ಬೈಕ್ ಅಪಘಾತವಾದ ಹಿನ್ನೆಲೆಯಲ್ಲಿ ಬಾಲಕನ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೀಗ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು ಎ.ಸಿ.ಜೆ. ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಯೋಗೀಂದ್ರ ಶೆಟ್ಟಿ ಅವರು, ಅಪ್ರಾಪ್ತನಿಗೆ ಬೈಕ್ ನೀಡಿದ್ದಕ್ಕಾಗಿ ಬಾಲಕನ ತಂದೆ, ಬೈಕ್ ಮಾಲಕ ಅಬ್ದುಲ್ ರಹಿಮಾನ್ ಅವರಿಗೆ 20 ಸಾವಿರ ದಂಡ ಪಾವತಿಸುವಂತೆ ಆದೇಶಿಸಿದ್ದಾರೆ. ಸರಕಾರದ ಪರವಾಗಿ ಎ.ಪಿ.ಪಿ. ಕವಿತಾ ಅವರು ವಾದಿಸಿದ್ದರು.

Read More

ಮಂಗಳೂರು: ಸ್ವಾತಂತ್ರ್ಯ ಸಮರ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಇಂದು ಮಂಗಳೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಸಿಎಂ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದು ಸ್ವಾಮೀಜಿಗಳು, ಕೇಂದ್ರ, ರಾಜ್ಯದ ಸಚಿವರುಗಳೂ ಭಾಗಿಯಾಗಲಿದ್ದಾರೆ. ಭಾರತದ ಬಾವುಟವನ್ನು ಹಾರಿಸಿದ ಇಂದಿನ ಬಾವುಟಗುಡ್ಡೆಯ ಟಾಗೋರ್ ಪಾರ್ಕ್‍ಲ್ಲೇ ಪ್ರತಿಮೆ ನಿರ್ಮಿಸಲಾಗಿದ್ದು ಪಾಳು ಬಿದ್ದಿದ್ದ ಪಾರ್ಕ್‍ಗೂ ಮರು ಜೀವಬಂದಿದೆ. ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ ಸ್ವಾತಂತ್ರ್ಯದ 75 ನೇ ವರ್ಷದ ಸಂಭ್ರಮಾಚರಣೆಯಲ್ಲಿ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಸುಳ್ಯದಿಂದ ರೈತರ ಸೈನ್ಯ ಕಟ್ಟಿಕೊಂಡು ಮಂಗಳೂರುವರೆಗೂ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ ರಾಮಯ್ಯಗೌಡರ ಪ್ರತಿಮೆಯನ್ನ ಇಂದು ಸಿಎಂ ಬೊಮ್ಮಾಯಿ ಅನಾವರಣ ಮಾಡಲಿದ್ದಾರೆ. ಮಂಗಳೂರಿನ ಹೃದಯ ಭಾಗದಲ್ಲಿರುವ ಬಾವುಟ ಗುಡ್ಡೆಯ ಟಾಗೋರ್ ಪಾರ್ಕ್ (Tagore Park) ನಲ್ಲಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಸ್ವಾತಂತ್ರ್ಯದ 75 ನೇ ವರ್ಷಾಚರಣೆ ಹಿನ್ನಲೆಯಲ್ಲಿ ಪ್ರತಿಮೆ ಲೋಕಾರ್ಪಣೆ ಮಾಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿಯ ಡಾ.ನಿರ್ಮಲಾನಂದ ಶ್ರೀಗಳು, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ…

Read More

ಉಳ್ಳಾಲ: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ. ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವರಿಂದು ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು. ದಂಪತಿ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.

Read More

ಮಂಗಳೂರು :  ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ XUV 500 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 132 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತ ಆರೋಪಿಗಳನ್ನು ರಮೀಝ್ ರಾಝ್ (ಪ್ರಾಯ 30 ), ವಾಸ : ಡೋರ್ ನಂಬ್ರ : 2-392 , ತೌಡುಗೋಳಿ ಕ್ರಾಸ್ , ನರಿಂಗಾನ ಗ್ರಾಮ, ಬಂಟ್ವಾಳ ತಾಲೂಕು ಮತ್ತು ಅಬ್ದುಲ್ ಖಾದರ್ ಹ್ಯಾರಿನ್ , (ಪ್ರಾಯ31 ) , ವಾಸ ಜೀಲಾನಿ ಮಂಝಿಲ್ , ಮದಂಗಳ ಕಟ್ಟ ಮೀಯಪದವು , ಮಂಜೇಶ್ವರ , ಕಾಸರಗೋಡು ಜಿಲ್ಲೆ , ಕೇರಳ ರಾಜ್ಯ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು. ಈ ಅಕ್ರಮ ಗಾಂಜಾ ಸಾಗಾಟದ ಸಮಯದಲ್ಲಿ ಪೊಲೀಸರು ಅಥವಾ ಸಾರ್ವಜನಿಕರು ನಿಲ್ಲಿಸಿದ್ದಲ್ಲಿ ಅವರಿಗೆ ತೊಂದರೆ ನೀಡುವ ಉದ್ದೇಶದಿಂದ…

Read More

ಮುಂಬೈ : ಸ್ವಂತ ತಂದೆ, ಚಿಕ್ಕಪ್ಪ ಮತ್ತು ಅಜ್ಜನೇ 17 ವರ್ಷದ ಹುಡುಗಿ ಮೇಲೆ ಹಲವಾರು ಬಾರಿ ಅತ್ಯಾಚಾರವೆಸಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ತಾನು ಪ್ರಸ್ತುತ ಓದುತ್ತಿರುವ ಪುಣೆಯ ಕಾಲೇಜಿನಲ್ಲಿ ಲೈಂಗಿಕ ಕಿರುಕುಳದ ಕುರಿತು ವಿಶಾಖಾ ಸಮಿತಿಯ ಸದಸ್ಯರ ಮುಂದೆ ಹುಡುಗಿ ಇತ್ತೀಚೆಗೆ ತನಗಾದ ಸಂಕಷ್ಟವನ್ನು ಹೇಳಿಕೊಂಡ ನಂತರ ಘಟನೆ ಬೆಳಕಿಗೆ ಬಂದಿದೆ. ಇದೀಗ ನಗರದಲ್ಲಿದ್ದ ಸಂತ್ರಸ್ತೆಯ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಪುಣೆ ಪೊಲೀಸರು ಈ ಘಟನೆ ಸಂಬಂಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿಭಾಗಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ.ಸಂತ್ರಸ್ತ್ರ ಹುಡುಗಿ, 2016 ಮತ್ತು 2018 ರ ನಡುವೆ ಉತ್ತರ ಪ್ರದೇಶದಲ್ಲಿ ತನ್ನ ತವರು ಮನೆಯಲ್ಲಿದ್ದಾಗ, ತನ್ನ ಚಿಕ್ಕಪ್ಪನಿಂದ ಅನೇಕ ಬಾರಿ ಅತ್ಯಾಚಾರವೆಸಗಿದ್ದು, ಅಜ್ಜ ಕಿರುಕುಳ ನೀಡಿದ್ದಾನೆ ಎಂದು ದೂರಿನ ಮೂಲಕ ಆರೋಪಿಸಿದ್ದಾಳೆ.

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, ರಾಜ್ಯ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರೈಲ್ವೆ ಪೊಲೀಸ್ ಎಸ್ಪಿ ಹುದ್ದೆಗೆ ಡಾ.ಎಸ್.ಕೆ.ಸೌಮ್ಯಲತಾ ಅವರನ್ನು ವರ್ಗಾವಣೆ ಮಾಡಲಾಗಿದೆ. ರೈಲ್ವೆ ಎಸ್ಪಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಡಿ.ಆರ್.ಸಿರಿಗೌರಿ ಅವರನ್ನು ವರ್ಗಾವಣೆ ಮಾಡಲಾಗಿದೆ.ಬೆಂಗಳೂರು ನಗರದ ಸಂಚಾರ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರ ಹುದ್ದೆಗೆ ಸಚ್ಚಿನ್ ಘೋರ್ಪಡೆ ಅವರನ್ನು , ಅಪರಾಧ ತನಿಖಾ ವಿಭಾಗದ ಎಸ್ಪಿ ಹುದ್ದೆಗೆ ಎಸ್.ಸವಿತಾ, ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಉಪ ಪ್ರಾಂಶುಪಾಲ ಹುದ್ದೆಗೆ ಡಾ.ಕೆ.ಅರುಣ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More

ಮಂಗಳೂರು: ನಗರದ ಕೆ.ಎಸ್‌. ರಾವ್‌ ರಸ್ತೆಯ ನಲಪಾಡ್‌ ಅಪ್ಸರಾ ಚೇಂಬರ್ಸ್‌ ಕಟ್ಟಡದ ನೆಲ ಮಹಡಿಯಲ್ಲಿರುವ ಹೂವಿನ ಅಂಗಡಿಯಿಂದ 9 ಲಕ್ಷ ರೂ. ಕಳವಾಗಿದೆ. ಕಂಕನಾಡಿ ನಿವಾಸಿ ಉಮರಬ್ಬ ಅವರಿಗೆ ಸೇರಿದ ಅಂಗಡಿಯಾಗಿದ್ದು, ಕಳೆದ 12 ವರ್ಷಗಳಿಂದ ಹೋಲ್‌ಸೇಲ್‌ ಹೂವಿನ ವ್ಯಾಪಾರ ಮಾಡಿಕೊಂಡಿದ್ದರು. ಅವರು ಪ್ರತಿನಿತ್ಯ ವ್ಯಾಪಾರದ ಹಣ ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಬುಧವಾರ ಹೂವಿನ ರೈತರಿಗೆ ಕೊಡಬೇಕಾದ ಸುಮಾರು 9 ಲಕ್ಷ ರೂ. ಹಣವನ್ನು ಅಂಗಡಿಯ ಟೇಬಲ್‌ನ ಡ್ರಾವರ್‌ನಲ್ಲಿ ಇಟ್ಟು ಲಾಕ್‌ ಮಾಡಿ ಸಂಜೆ 6 ಗಂಟೆಗೆ ಆಂಗಡಿ ಮುಚ್ಚಿ ತೆರೆಳಿದ್ದರು. ಗುರುವಾರ ಬೆಳಗ್ಗೆ 6 ಗಂಟೆಗೆ ಅವರ ಮಗ ರಿಯಾಜ್‌ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಮುಖ್ಯ ದ್ವಾರದ ಶಟರ್‌ನ ಸೆಂಟರ್‌ ಲಾಕ್‌ ಮುುರಿದಿರುವುದು ಕಂಡುಬಂದಿತ್ತು. ತತ್‌ಕ್ಷಣ ಅವರು ಉಮರಬ್ಬ ಅವರಿಗೆ ಕರೆ ಮಾಡಿ ತಿಳಿಸಿದ್ದು, ಅವರು ಬಂದು ಅಂಗಡಿಯ ಶಟರ್‌ ಬಾಗಿಲನ್ನು ಮೇಲಕ್ಕೆತ್ತಿ ಒಳಗಡೆ ನೋಡಿದಾಗ ಟೇಬಲ್‌ನ ಡ್ರಾವರ್‌ ಲಾಕ್‌ ಮುರಿದು ಅದರಲ್ಲಿದ್ದ 9 ಲಕ್ಷ ರೂ.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇಂದು ಇರಿಸಲಾಗಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶ್ರೀಗಂಧ ನೀತಿ-2022ಕ್ಕೆ ( Sandalwood Policy-2022 ) ಅನುಮೋದನೆ ನೀಡಲಾಗಿದೆ. ಇದರಿಂದಾಗಿ ರೈತರು ಶ್ರೀಗಂಧ ಬೆಳೆದು, ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ( Karnataka Cabinet Meeting ) ನಡೆಯಿತು. ಈ ಸಭೆಯ ಬಳಿಕ ಸಂಪುಟ ಸಭೆಯ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ ಸಚಿವ ಡಾ.ಕೆ ಸುಧಾಕರ್ ಹಂಚಿಕೊಂಡರು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಶ್ರೀಗಂಧ ನೀತಿ-2022ಕ್ಕೆ ಅನುಮೋದನೆ ನೀಡಲಾಗಿದೆ ಎಂದರು. ರಾಜ್ಯ ಸರ್ಕಾರದಿಂದ ಶ್ರೀಗಂಧ ನೀತಿ-2022ಕ್ಕೆ ಅನುಮೋದನೆ ನೀಡಿದ್ದರಿಂದಾಗಿ ಇನ್ಮುಂದೆ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆಯಬಹುದಾಗಿದೆ. ಮುಕ್ತ…

Read More

ಮಂಗಳೂರು: ಭಾರತೀಯ ತಟರಕ್ಷಣ ಪಡೆಗೆ ಸೇರ್ಪಡೆಗೊಳ್ಳಲಿರುವ ಬೆಂಗಳೂರಿನ ಎಚ್‌ಎಎಲ್‌ ನಿರ್ಮಿತ “ಅತ್ಯಾಧುನಿಕ ಹಗುರ ಹೆಲಿಕಾಪ್ಟರ್‌(ಎಎಲ್‌ಎಚ್‌) ಸಿಜಿ 870′ ಸ್ವೀಕಾರ ಸಮಾರಂಭ ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಮಂಗಳವಾರ ಜರಗಿತು. ಈ ಹೆಲಿಕಾಪ್ಟರ್‌ ಚೆನ್ನೈಯಲ್ಲಿ ಸೇವೆಗೆ ಸೇರ್ಪಡೆಗೊಳ್ಳಲಿದೆ. ಇದರೊಂದಿಗೆ ಎಚ್‌ಎಎಲ್‌ನೊಂದಿಗೆ ತಟರಕ್ಷಣ ಪಡೆ 2017ರ ಮಾ. 29ರಲ್ಲಿ ನಡೆಸಿದ ಒಪ್ಪಂದ ಮುಕ್ತಾಯಗೊಳ್ಳಲಿದ್ದು ಮುಂದೆ 9 ಸುಸಜ್ಜಿತ ಎಎಲ್‌ಎಚ್‌ ಎಂಕೆ-3 ಹೆಲಿಕಾಪ್ಟರ್‌ಗಳ ಉತ್ಪಾದನೆಗೆ ಎಚ್‌ಎಎಲ್‌ನೊಂದಿಗೆ ಒಡಂಬಡಿಕೆ ನಡೆಸಲು ಮುಂದಾಗಿದೆ. ಸಮಾರಂಭದಲ್ಲಿ ಭಾರತೀಯ ತಟರಕ್ಷಣ ಪಡೆ (ಪೂರ್ವ ವಿಭಾಗ) ಯ ಮಹಾನಿರ್ದೇಶಕ ವಿ.ಎಸ್‌. ಪಠಾನಿಯಾ ಮಾತನಾಡಿ, ಕಳೆದೆರಡು ದಶಕಗಳಲ್ಲಿ ಭಾರತೀಯ ಸಮುದ್ರ ತಟರಕ್ಷಣೆಯಲ್ಲಿ ಮಹತ್ವದ ಬೆಳವಣಿಗೆಗಳಾಗಿವೆ. ಕಣ್ಗಾವಲು, ಗುಪ್ತಚರ ಮಾಹಿತಿ ಸಂಗ್ರ ಮತ್ತು ಸಂಬಂಧಿಸಿದ ಭದ್ರತಾ ಸಂಸ್ಥೆಗಳೊಂದಿಗೆ ಮಾಹಿತಿ ವಿನಿಮಯ, ತುರ್ತು ಸಂದರ್ಭದಲ್ಲಿ ಪರಿಣಾಮಕಾರಿ ಸ್ಪಂದನೆ ಮಾಡಲಾಗುತ್ತಿದೆ. ತಟರಕ್ಷಣ ಪಡೆಯ ಜವಾಬ್ದಾರಿಗಳು ಹೆಚ್ಚಿರುವುದರಿಂದ ನಾಲ್ಕು ಎಎಲ್‌ಎಚ್‌ ಎಂಕೆ -3 ಹೆಲಿಕಾಪ್ಟರ್‌ಗಳ ಸೇರ್ಪಡೆ ಮಿಷನ್‌ ಆರಂಭಿಸಲಾಗಿದ್ದು ಇದು “ಎಎಲ್‌ಎಚ್‌ ಸಿಜಿ 870′ ಸೇರ್ಪಡೆಯೊಂದಿಗೆ ಪೂರ್ಣಗೊಳ್ಳುತ್ತಿದೆ’ ಎಂದರು. ತಟರಕ್ಷಣ ಪಡೆಯ ಹೆಚ್ಚುವರಿ…

Read More

ಮಂಗಳೂರು:- ಕ್ರಿಸ್ತ ಶಕ 1837 ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಗುವುದು, ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತಿಳಿಸಿದರು.ಅವರು ನ.15ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿಮ ಪ್ರತಿಮೆಯ ಲೋಕಾರ್ಪಣೆ ಕುರಿತಂತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ನ.19ರ ಶನಿವಾರದಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಯಾಗಲಿದೆ, ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕು, ಕನಿಷ್ಠ 25,000 ಜನರು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಗಳಿದ್ದು, ಸಂಬಂಧಿಸಿದ ಇಲಾಖೆಗಳು ಕೂಡಲೇ ಅಗತ್ಯ…

Read More