Author: main-admin

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಪುನಾರಂಭಿಸಲು ಜಿಲ್ಲಾಡಳಿತವು ಮತ್ತೆ ಗ್ರೀನ್ ಸಿಗ್ನಲ್ ನೀಡಿದೆ. ಜಿಲ್ಲಾ‍ಧಿಕಾರಿ ರವಿಕುಮಾರ್ ಎಂ ಆರ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕರಾವಳಿ ನಿಯಂತ್ರಣ ವಲಯದಲ್ಲಿ ಮರಳುಗಾರಿಕೆ ಪುನಾರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ ಹೈಕೋರ್ಟ್ ತೀರ್ಪಿನಂತೆ ಸಿ ಆರ್ ಜೆಡ್ ವ್ಯಾಪ್ತಿಯಲ್ಲೂ ಸಾಂಪ್ರದಾಯಿಕ ಮರಳುಗಾರಿಕೆಗೆ ಅವಕಾಶ ಕಲ್ಪಿಸಲು ಏಳು ಮಂದಿ ಸದಸ್ಯರ ಸಮಿತಿಯಲ್ಲಿ ನಿರ್ಧಾರ ಕೈಗೊಳ್ಳಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದಾರೆ. ಸಿ ಆರ್ ಜೆಡ್ ವ್ಯಾಪ್ತಿಯಲ್ಲಿ ಪಾರಂಪರಿಕ ಕಾರ್ಮಿಕರಿಗೆ ಮಾತ್ರಅವಕಾಶ ನೀಡಲಾಗಿದೆ. ಯಾವುದೇ ಅಕ್ರಮ ನಡೆಸುವಂತಿಲ್ಲ, ಯಂತ್ರಗಳನ್ನು ಬಳಸುವಂತಿಲ್ಲ, ಮರಳು ದಿಬ್ಬಗಳ ಬಳಿ ಸಿಸಿಟಿವಿ ಅಳವಡಿಸಿ ನಿಗಾ ಇಡುತ್ತೇವೆ, ಆಯಪ್ ಮೂಲಕ ಮಾತ್ರ ಮರಳು ಹಂಚಿಕೆಗೆ ಅವಕಾಶ ನೀಡಿದ್ದೇವೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.

Read More

ಉಡುಪಿ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಯುವತಿಯೋರ್ವಳು ಮೃತಪಟ್ಟು, ಬೈಕ್ ಸವಾರ ಯುವಕ ಗಾಯಗೊಂಡ ಘಟನೆ ಉಚ್ಚಿಲದಲ್ಲಿ ನಡೆದಿದೆ. ಕಾಟಿಪಳ್ಳ ನಿವಾಸಿ ನಿಹಾಳ (19) ಮೃತಪಟ್ಟ ಯುವತಿ. ಅಪಘಾತದಲ್ಲಿ ಬೈಕ್ ಸವಾರ ಬೆಳಪುವಿನ ಆಸೀಫ್ ಎಂಬವರು ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ಉಡುಪಿ ಕಡೆಯಿಂದ ಪಲ್ಸರ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಉಚ್ಚಿಲ ರಾ.ಹೆ ಸಮೀಪದ ರಿಕ್ಷಾ ನಿಲ್ದಾಣದ ಬಳಿ ಬೈಕ್ ಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ನಿಹಾಳ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಆಸೀಫ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ನಿಹಾಳ ಮತ್ತು ಆಸೀಫ್ ಇಬ್ಬರಿಗೆ ವಿವಾಹ ನಿಶ್ಚಯವಾಗಿತ್ತು. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚೆನ್ನೈ: ಪ್ರತಿಭಾವಂತ ಫುಟ್ಬಾಲ್ ಆಟಗಾರ್ತಿಯೊಬ್ಬಳ ಕಾಲಿನಲ್ಲಿ ಆಗಿದ್ದ ಸಣ್ಣ ಗಾಯಕ್ಕೆ ವೈದ್ಯರು ನಡೆಸಿದ ಅರೆಬರೆ ಸರ್ಜರಿಗೆ ಆಕೆಯ ಬಹು ಅಂಗಾಂಗ ವೈಫಲ್ಯಕ್ಕೆ ಕಾರಣವಾಗಿ ಪ್ರಾಣವನ್ನೇ ಬಲಿಪಡೆದುಕೊಂಡ ಹೃದಯ ವಿದ್ರಾವಕ ಘಟನೆ ಚೆನ್ನೈಯಲ್ಲಿ ನಡೆದಿದೆ. ಪ್ರಿಯಾ ಆರ್ (17) ಅವರಿಗೆ ಬಲಗಾಲಿನ ಅಸ್ಥಿರಜ್ಜು (ಲಿಗಮೆಂಟ್) ನೋವು ಪ್ರಾರಂಭವಾಗಿತ್ತು. ತಮಿಳುನಾಡಿನ ಪೆರಿಯಾರ್ ನಗರದಲ್ಲಿನ ಸರ್ಕಾರಿ ಪೆರಿಫೆರಲ್ ಆಸ್ಪತ್ರೆಯಲ್ಲಿ ನವೆಂಬರ್ 7ರಂದು ಪ್ರಿಯಾ, ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು. ಅದು ಮೊಣಕಾಲಿನ ಕೆಳಗಿನ ಆಕೆಯ ಬಲಗಾಲನ್ನು ಕತ್ತರಿಸುವುದು ಸೇರಿದಂತೆ ಮತ್ತೆರಡು ಆಘಾತಕಾರಿ ಆಪರೇಷನ್‌ಗಳಿಗೆ ಎಡೆಮಾಡಿಕೊಟ್ಟಿತ್ತು. ವೈದ್ಯರು ಮಾಡಿದ್ದ ಎಡವಟ್ಟಿನಿಂದಾಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಪ್ರಿಯಾ ಸಾವನ್ನಪ್ಪಿದ್ದಾಳೆ. ಆರ್ಥ್ರೋಸ್ಕೋಪಿಕ್ ಲಿಗಮೆಂಟ್ ಸರಿಪಡಿಸುವ ಶಸ್ತ್ರಚಿಕಿತ್ಸೆ ನಡೆಸಿದ್ದ ಸರ್ಕಾರಿ ಆಸ್ಪತ್ರೆಯ ಇಬ್ಬರು ವೈದ್ಯರನ್ನು, ವೈದ್ಯಕೀಯ ನಿರ್ಲಕ್ಷ್ಯದ ಆರೋಪದಡಿ ಅಮಾನತು ಮಾಡಲಾಗಿದೆ. ಇವಳ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿ ಮಾತನಾಡಿದ ಕ್ವೀನ್ ಮೇರಿಸ್ ಕಾಲೇಜಿನ ದೈಹಿಕ ತರಬೇತಿ ಶಿಕ್ಷಕಿ ವಸಂತ ಕುಮಾರಿ ‘ಕ್ರೀಡಾ ಕೋಟಾದಡಿ ಪ್ರಿಯಾ ಕಾಲೇಜು ಪ್ರವೇಶಾತಿಗೆ ಅರ್ಜಿ…

Read More

ದಾವಣಗೆರೆ: ಹೊನ್ನಾಳಿ BJP ಶಾಸಕ ರೇಣುಕಾಚಾರ್ಯ ( Renukacharya) ಅವರ ತಮ್ಮನ ಮಗ ಚಂದ್ರಶೇಖರ್ ಮೃತದೇಹವು ತುಂಗಾ ಕಾಲುವೆಯಲ್ಲಿ ಪತ್ತೆಯಾದ ಪ್ರಕರಣ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಇನ್ನೂ ಪ್ರಕರಣ ತಾರ್ಕಿಕ ಅಂತ್ಯ ಕಂಡುಕೊಂಡಿಲ್ಲ. ಇದರ ನಡುವೆ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಚಂದ್ರಶೇಖರ್ ಸಾವಿನ ಬಗ್ಗೆ ಉಲ್ಲೇಖಿಸಲಾಗಿದೆ.ಚಂದ್ರಶೇಖರ್ ದೇಹದ ಮೇಲೆ ಯಾವುದೇ ಹಲ್ಲೆಯ ಕಲೆಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ರೇಣುಕಾಚಾರ್ಯ ಕುಟುಂಬ ಆರೋಪಿಸಿದಂತೆ ಹಲ್ಲೆ ನಡೆದಿಲ್ಲ, ಚಂದ್ರು ದೇಹದ ಮೇಲೆ ಯಾವುದೇ ಆಯುಧದ ಕಲೆಗಳಿಲ್ಲ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಚಂದ್ರು ಕೈಗೆ ಹಗ್ಗದಿಂದ ಕಟ್ಟಿದ ಯಾವುದೇ ಗುರುತು ಇಲ್ಲ, ತಲೆಗೆ ಹಿಂದಿನಿಂದ ಹಲ್ಲೆ ಮಾಡಿದ ಯಾವುದೇ ಗುರುತು ಇಲ್ಲ, ದೇಹದ ಮೇಲೆ ಯಾವುದೇ ಆಯುಧಗಳಿಂದ ಹಲ್ಲೆ ಮಾಡಿಲ್ಲ ಎಂದು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಇನ್ನೂ, ಚಂದ್ರಶೇಖರ್ ಗೆ ಏನಾದರೂ ಇಂಜೆಕ್ಟ್ ಮಾಡಿದ್ದಾರಾ ಎಂಬುದರ ಬಗ್ಗೆ ಪರೀಕ್ಷೆ ನಡೆಸಲಾಗುತ್ತದೆ. ಇನ್ನೂ, ಎಫ್‌ಎಸ್‌ಎಲ್ ವರದಿ ಪ್ರಕಾರ ಕಾರು ವೇಗವಾದ…

Read More

ದಕ್ಷಿಣ ಕನ್ನಡ : ಕಡಬ ತಾಲೂಕಿನ ಯೇನೆಕಲ್ಲಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯೇನೆಕಲ್ಲಿನ ಮುಖ್ಯರಸ್ತೆಯ ಸೇತುವೆಯ ಕೆಳಭಾಗದಲ್ಲಿ ಹೊಳೆ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಧರ್ಮಪಾಲ (46) ಹಾಗೂ ಚೊಕ್ಕಾಡಿಯ ಬೆಳ್ಳಪ್ಪ (49) ಎಂದು ಗುರುತಿಸಲಾಗಿದೆ. ಹೊಳೆಯಲ್ಲಿದ್ದ ಪಂಪಿನ ಪೂಟ್ ವಾಲ್ ತೆಗೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾರೆಂದು ಶಂಕಿಸಲಾಗಿದ್ದು, ಸದ್ಯ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲವು ಬುಧವಾರದಿಂದ (ನ 16) ತೆರೆಯಲಿದ್ದು, ಗುರುವಾರದಿಂದ (ನ 17) ಎರಡು ತಿಂಗಳ ಅವಧಿಗೆ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ. ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ದೇಗುಲದ ಹಾಲಿ ಪ್ರಧಾನ ಅರ್ಚಕರಾದ (ತಂತ್ರಿ) ಕಂಡರಾರು ರಾಜೀವರು ಮತ್ತು ಹಿಂದ ಪ್ರಧಾನ ಅರ್ಚಕರಾದ ಎನ್.ಪರಮೇಶ್ವರನ್ ನಂಬೂದಿರಿ ಅವರ ಸಮಕ್ಷಮದಲ್ಲಿ ದೇಗುಲದ ಗರ್ಭಗೃಹವನ್ನು ಇಂದು ಸಂಜೆ 5 ಗಂಟೆಗೆ ತೆರೆಯಲಾಗುವುದು. ನಂತರ ಅಯ್ಯಪ್ಪ ಮತ್ತು ಮಲಿಕಾಪುರಮ್ ದೇಗುಲಗಳ ಮುಖ್ಯ ಅರ್ಚಕರು ಪೂಜಾ ವಿಧಿಗಳನ್ನು ಆರಂಭಿಸುವ ಮೂಲಕ ಜವಾಬ್ದಾರಿಯನ್ನು ಸ್ವೀಕರಿಸಲಿದ್ದಾರೆ. 41 ದಿನಗಳ ಮಂಡಲ ಪೂಜಾ ವಿಧಿಗಳು ಡಿ 27ಕ್ಕೆ ಮುಕ್ತಾಯವಾಗಲಿದೆ. ನಂತರ ಮೂರು ದಿನಗಳ ಕಾಲ ದೇಗುಲದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಡಿ 30ರಿಂದ ಮಕರವಿಳುಕ್ಕು ಯಾತ್ರೆಗಾಗಿ ದೇಗುಲವನ್ನು ಮತ್ತೆ ತೆರೆಯಲಾಗುವುದು. ಜನವರಿ 14ರಂದು ಮಕರವಿಳಕ್ಕು ಕಾರ್ಯಕ್ರಮವಿದೆ. ಸಂಕ್ರಾಂತಿ ಜ್ಯೋತಿಯ ದರ್ಶನ ಮತ್ತಿತರರ ಪೂಜಾ ವಿಧಿಗಳ ನಂತರ ಜನವರಿ 20ರಂದು ದೇಗುಲವನ್ನು ಮುಚ್ಚಲಾಗುವುದು. ಅಲ್ಲಿಗೆ ಈ…

Read More

ಕಲಬುರಗಿ: ಹಾಡಹಗಲೇ ಗ್ಯಾಂಗ್ ವಾರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮಂಗಳವಾರ ತಡರಾತ್ರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಲೆಯಾದ ವಿದ್ಯಾರ್ಥಿ ಇಲ್ಲಿನ ಶರಣಬಸಪ್ಪ ಅಪ್ಪಾ ಮಹಾವಿದ್ಯಾಲಯದಲ್ಲಿ ಓದುತ್ತಿದ್ದ ಮೊಹಮ್ಮದ್ ಮುದ್ದಸೀರ್(19) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಛೋಟಾ ರೋಜಾ ಬಡಾವಣೆಯ ಬೌವುಲಿಗಲ್ಲಿಯ ಅಮಿರ್ ಗುಲಶನ್ ಫಂಕ್ಷನ್ ಹಾಲ್ ಹತ್ತಿರ ಆರೋಪಿಗಳು ಮಾರಾಕಾಸ್ತ್ರದಿಂದ ದಾಳಿ ನಡೆಸಿ ಕೊಚ್ಚಿ ಪರಾರಿಯಾಗಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುದ್ದಸೀರ್ ನನ್ನು ನಗರದ ಮಣೂರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸತತ ಚಿಕಿತ್ಸೆಯ ಬಳಿಕವೂ ತಡ ರಾತ್ರಿ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡಿರುವ ಘಟನೆ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿತ್ತು. ನಗರದಲ್ಲಿ ಹಗಲಿನಲ್ಲಿ ಹತ್ಯೆಗಳು ನಡೆಯುತ್ತಿದ್ದು, ಪೊಲೀಸ್ ಇಲಾಖೆಯ ವೈಫಲ್ಯ ಕಾರಣ,ತಕ್ಷಣ ಕೊಲೆ ಮಾಡಿರುವ ಆರೋಪಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಿಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ನಗರದಲ್ಲಿ ಘಟನೆ ಮರುಕಳಿಸದ ರೀತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡಬೇಕೆಂದು ಮುದ್ದಸೀರ್ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

Read More

ಸುಳ್ಯ:ಲಾರಿ ಮತ್ತು ಬಸ್‌ ನಡುವೆ ಢಿಕ್ಕಿ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸಂಜೆ ಕಲ್ಲುಗುಂಡಿಯ ಕಡಪಾಲದಲ್ಲಿ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬಸ್‌ಗೆ ಕಡಪಾಲ ಸೇತುವೆ ಬಳಿ ಲಾರಿ ಢಿಕ್ಕಿ ಹೊಡೆದಿದೆ.ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದೆ. ಬಸ್-ಲಾರಿ ನಡುವೆ ಸಿಕ್ಕಿ ಹಾಕಿಕೊಂಡ ಲಾರಿ ಚಾಲಕನನ್ನು ಸ್ಥಳೀಯರು ರಾಡ್‌ ಕತ್ತರಿಸಿ ಹೊರತೆಗೆದಿದ್ದಾರೆ.ಆತನಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳನ್ನು‌ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಮತ್ತು ಕೊಡಗು, ಸಂಪಾಜೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಳೆಯಿಂದಾಗಿ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Read More

ಕಾರ್ಕಳ: ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರಪಾದೆ ಬಳಿ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕುಕ್ಕುಂದೂರು ನಿವಾಸಿ ಉಮೇಶ (32), ಶಾಂತಿಪಲ್ಕೆಯ ಸುರೇಶ (24), ಶಂಕರಬೆಟ್ಟುವಿನ ಪ್ರಜ್ವಲ್ (25) ಬಂಧಿತ ಆರೋಪಿಗಳು. ಉಳಿದ 4 ಮಂದಿ ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಧಿತರಿಂದ ಪೊಲೀಸರು 3600ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಮಂಗಳೂರು : ಅವಿಭಜಿತ ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ( ಕೆಂಗಣ್ಣು) ಸಮಸ್ಯೆ ಹೆಚ್ಚಾಗಿದ್ದು, ಕಣ್ಣು ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ಇಂತಹ ಸಮಸ್ಯೆಗಳ ಸರತಿ ಸಾಲು ಉದ್ದವಾಗುತ್ತಿದೆ. ಮಕ್ಕಳಾದರೆ ಶಾಲೆಗೆ ಬರಬೇಡಿ ದೊಡ್ಡವರಾದರೆ ಕಚೇರಿಗೆ ಬರಬೇಡಿ ಎಂದು ಬೇಡುವ ಸ್ಥಿತಿ ಉದ್ಭವಾಗಿದೆ. ಎಲ್ಲಕ್ಕೂ ಹವಾಮಾನ ವೈಪರೀತ್ಯವೇ ಕಾರಣ ಎನ್ನುವುದು ಆರೋಗ್ಯ ತಜ್ಞರ ಮಾತು. ಇದು ಕಣ್ಣು ನೋವು (ಮದ್ರಾಸ್‌ ಐ) ಬರುವ ಸಮಯವಲ್ಲ. ಹೆಚ್ಚಾಗಿ ಮಾನ್ಸೂನ್‌ ಸಮಯದಲ್ಲಿ ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಈಗ ಬಿಟ್ಟು ಬರುವ ಮಳೆಯ ಜತೆಗೆ ಚಳಿಯ ಪ್ರವೇಶ ಎರಡು ಜತೆಗೂಡಿದಾಗ ಈ ವಿಶೇಷ ವೈರಸ್‌ ಯಾವುದೇ ವಯಸ್ಸು ನೋಡದೇ ಕಣ್ಣುಗಳ ಮೇಲೆ ದಾಳಿ ಇಡುತ್ತಾ ಕಣ್ಣು ನೋವು ತರಿಸುತ್ತಿದೆ. ಬೇಸಿಗೆ ಬಿಟ್ಟು ಚಳಿಯಲ್ಲಿ ಕಾಣಿಸಿತು: ಐ ಕಾಂಜಂಕ್ಟಿವಿಟಿಸ್‌ ಅಥವಾ ಮದ್ರಾಸ್‌ ಐ ಸಮಸ್ಯೆಯು ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತದೆ. ಆದರೆ ಈ ಬಾರಿ ಮಳೆಗಾಲ ಮುಗಿದು ಚಳಿಗಾಲದ ಆರಂಭದಲ್ಲೇ ವಕ್ಕರಿಸಿದೆ. ಇದಕ್ಕೆ ಬಹುಮುಖ್ಯವಾದ ಕಾರಣ ಇತ್ತೀಚೆಗೆ ಕಾಣಿಸಿಕೊಂಡ ಆಗಾಗಿನ ಮಳೆ. ಇದರ…

Read More