ನವದೆಹಲಿ: ಯಾವುದೇ ದ್ವೇಷ ಭಾಷಣ ( Hate Speech ) ಮಾಡಿದಾಗ, ಯಾವುದೇ ದೂರುಗಳಿಲ್ಲದೆ ಎಫ್‌ಐಆರ್ ದಾಖಲಿಸಲು ಸ್ವಯಂಪ್ರೇರಿತ ಕ್ರಮ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ( Supreme Court ) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಸಂವಿಧಾನದ ಪೀಠಿಕೆಯಲ್ಲಿ ಸೂಚಿಸಿರುವ ಭಾರತದ ಜಾತ್ಯತೀತ ಗುಣಲಕ್ಷಣವನ್ನು ಸಂರಕ್ಷಿಸಲು ಭಾಷಣ ಮಾಡಿದ ವ್ಯಕ್ತಿಗಳ ಧರ್ಮವನ್ನು ಲೆಕ್ಕಿಸದೆ ಅಂತಹ ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ದ್ವೇಷ ಭಾಷಣ ಪ್ರಕರಣಗಳನ್ನು ದಾಖಲಿಸುವಲ್ಲಿನ ವಿಳಂಬವನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ದ್ವೇಷ ಭಾಷಣವನ್ನು ಗಂಭೀರ ಅಪರಾಧವೆಂದು ಕರೆದಿದೆ, ಇದು ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಸಾಮರ್ಥ್ಯವನ್ನು ಹೊಂದಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದೆ.
Author: main-admin
ಸವಣೂರು: ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಿಂದ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34 ವ.) ಎಂದು ಗುರುತಿಸಲಾಗಿದೆ. ಗೋಪಾಲಕೃಷ್ಣ ಅವರು ಪಾಲ್ತಾಡಿ ಗ್ರಾಮದ ಕಾಪುತಮೂಲೆ ಎಂಬಲ್ಲಿರುವ ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಒಬ್ಬನೇ ತೆರಳಿದವನು ವಾಪಾಸು ಬಾರದೇ ಇದ್ದುದರಿಂದ ಮನೆಯವರು ಕೆರೆಯ ಬಳಿ ಹೋಗಿ ನೋಡಿದಾಗ ಗೋಪಾಲಕೃಷ್ಣನ ಚಪ್ಪಲಿ ಕೆರೆಯ ನೀರಿನಲ್ಲಿ ತೇಲುತ್ತಿದ್ದುರಿಂದ ಸಂಶಯಗೊಂಡು ಮರದ ದೋಂಟಿಯೊಂದನ್ನು ಕೆರೆಯ ನೀರಿಗೆ ಹಾಕಿ ನೋಡಿದಾಗ ಗೋಪಾಲಕೃಷ್ಣನ ಅಂಗಿ ದೋಂಟಿಯ ಕೊಕ್ಕೆ ಸಿಕ್ಕಿಕೊಂಡಿದ್ದು, ದೂರುದಾರ ಮೃತರ ತಂದೆ ಮೋನಪ್ಪ ನಾಯ್ಕ ಅವರು ಕೂಡಲೇ ಅಣ್ಣ ಶೇಷಪ್ಪ ನಾಯ್ಕ ಮತ್ತು ಅವರ ಮಗ ಸುಬ್ರಾಯ ನಾಯ್ಕರವರನ್ನು ಕರೆದು ಗೋಪಾಲಕೃಷ್ಣನ ದೇಹವನ್ನು ಮೇಲಕ್ಕೆತ್ತಿ ಆಟೋ ರಿಕ್ಷಾವೊಂದರಲ್ಲಿ ಕೆಯ್ಯೂರುವರೆಗೆ ತೆಗೆದುಕೊಂಡು ಬಂದು ಅಲ್ಲಿಂದ ಅಂಬ್ಯುಲೆನ್ಸ್ ವಾಹನವೊಂದರಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ…
ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ. ಅಮ್ಟಾಡಿ ನಿವಾಸಿ 35 ವರ್ಷದ ಸಂದೀಪ್ ಲೋಬೊ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಅಕಾಶ್ ಎಂಬಾತ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು ಬಿಸಿರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲಕ ಕಾರು ಚಲಾಯಿಸಿಕೊಂಡು ಬಂದ ಪರಿಣಾಮ ಈ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಸಂದೀಪ್ ಲೋಬೋ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅಸುನೀಗಿದ್ದು, ಆಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸ್…
ಕಡಬ: ಅಸ್ವಸ್ಥಗೊಂಡು ತಿರುಗಾಡುತ್ತಿದ್ದ ಕಾಡಾನೆಯೊಂದು ಕಡಬ ಸಮೀಪದ ಕೊಂಬಾರು ಸಮೀಪದ ಬಗ್ಪುಣಿ ಎಂಬಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕಾಡಾನೆಯುವ ಸಂಪೂರ್ಣ ನಿತ್ರಾಣಗೊಂಡ ಸ್ಥಿತಿಯಲ್ಲಿ ಕೊಂಬಾರು ನಿನ್ನೆ ಚೇರು ಎಂಬಲ್ಲಿ ಬಳಿ ಹಳ್ಳವೊಂದರಲ್ಲಿ ನಿತ್ರಾಣ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಎರ್ಮಾಯಿಲ್ ಎಂಬಲ್ಲಿ ರಸ್ತೆಯಲ್ಲೇ ನಡೆದಾಡಲು ಕಷ್ಟಪಡುವ ರೀತಿಯಲ್ಲಿ ಈ ಕಾಡಾನೆ ಸ್ಥಳೀಯರಿಗೆ ಕಾಣಸಿತ್ತು. ಅರಣ್ಯ ಅಧಿಕಾರಿಗಳ ತಂಡ ಮಾಹಿತಿ ಮಾಹಿತಿ ಲಭ್ಯವಾದ ತಕ್ಷಣವೇ ನುರಿತ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲನೆಗೂ ಮುಂದಾಗಿದ್ದರು.ವೈದ್ಯಕೀಯ ತಜ್ಞರು ಹೇಳುವ ಪ್ರಕಾರ ವಯೋ ಸಹಜ ತೊಂದರೆಗಳಿಂದ ಬಳಲುತ್ತಿರುವುದಲ್ಲದೆ ಆನೆಯ ಹಲ್ಲುಗಳು ಉದುರಿರುವ ಶಂಕೆ ವ್ಯಕ್ತಪಡಿಸಿದ್ದರು.
ಗಡಿ ಪ್ರದೇಶಗಳು ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಎಫ್‌ಎಂ ರೇಡಿಯೊ ಸಂಪರ್ಕವನ್ನು ಹೆಚ್ಚಿಸುವ ಕ್ರಮದಲ್ಲಿ 18 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಧಾನಿ ಮೋದಿ ನಾಳೆ 91 ಎಫ್‌ಎಂ ರೇಡಿಯೋ ವಾಹಿನಿಗಳನ್ನು ಉದ್ಘಾಟಿಸಲಿದ್ದಾರೆ. ಮಹತ್ವಾಕಾಂಕ್ಷೆಯ ಜಿಲ್ಲೆಗಳು ಮತ್ತು ಗಡಿ ಪ್ರದೇಶಗಳು ಪ್ರಯತ್ನದ ಮೊದಲ ಕೇಂದ್ರಗಳಾಗಿವೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಈ ಹೊಸ ರೇಡಿಯೊ ಸೇವೆಗಳು ಇದುವರೆಗೆ ಮಾಧ್ಯಮಕ್ಕೆ ಪ್ರವೇಶವನ್ನು ಹೊಂದಿರದ ಹೆಚ್ಚುವರಿ ಎರಡು ಕೋಟಿ ಜನರನ್ನು ತಲುಪಲಿದೆ ಮತ್ತು ಸುಮಾರು 35,000 ಚದರ ಕಿ.ಮೀ ಪ್ರದೇಶದಲ್ಲಿ ವ್ಯಾಪ್ತಿ ಮತ್ತಷ್ಟು ಹೆಚ್ಚಾಗುತ್ತದೆ. ಪ್ರಧಾನಿಯವರ ಮಾಸಿಕ ರೇಡಿಯೋ ಕಾರ್ಯಕ್ರಮವಾದ ಮನ್ ಕಿ ಬಾತ್‌ನ ಹೆಗ್ಗುರುತಾಗಿರುವ 100 ನೇ ಸಂಚಿಕೆಗೆ ಎರಡು ದಿನಗಳ ಮೊದಲು ರೇಡಿಯೋ ಚಾನೆಲ್ ಗಳನ್ನು ವಿಸ್ತರಿಸುವ ಕ್ರಮದಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ. ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ, ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಛತ್ತೀಸ್‌ಗಢ, ಲಡಾಖ್ ಮತ್ತು ಅಂಡಮಾನ್…
ಕಡಬ: ಅಸ್ವಸ್ಥಗೊಂಡು ತಿರುಗಾಡುತ್ತಿದ್ದ ಕಾಡಾನೆಯೊಂದು ಕಡಬ ಸಮೀಪದ ಕೊಂಬಾರು ಸಮೀಪದ ಬಗ್ಪುಣಿ ಎಂಬಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕಾಡಾನೆಯುವ ಸಂಪೂರ್ಣ ನಿತ್ರಾಣಗೊಂಡ ಸ್ಥಿತಿಯಲ್ಲಿ ಕೊಂಬಾರು ನಿನ್ನೆ ಚೇರು ಎಂಬಲ್ಲಿ ಬಳಿ ಹಳ್ಳವೊಂದರಲ್ಲಿ ನಿತ್ರಾಣ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಎರ್ಮಾಯಿಲ್ ಎಂಬಲ್ಲಿ ರಸ್ತೆಯಲ್ಲೇ ನಡೆದಾಡಲು ಕಷ್ಟಪಡುವ ರೀತಿಯಲ್ಲಿ ಈ ಕಾಡಾನೆ ಸ್ಥಳೀಯರಿಗೆ ಕಾಣಸಿತ್ತು. ಅರಣ್ಯ ಅಧಿಕಾರಿಗಳ ತಂಡ ಮಾಹಿತಿ ಮಾಹಿತಿ ಲಭ್ಯವಾದ ತಕ್ಷಣವೇ ನುರಿತ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲನೆಗೂ ಮುಂದಾಗಿದ್ದರು.ವೈದ್ಯಕೀಯ ತಜ್ಞರು ಹೇಳುವ ಪ್ರಕಾರ ವಯೋ ಸಹಜ ತೊಂದರೆಗಳಿಂದ ಬಳಲುತ್ತಿರುವುದಲ್ಲದೆ ಆನೆಯ ಹಲ್ಲುಗಳು ಉದುರಿರುವ ಶಂಕೆ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್, ವಿಮೆ, ಹಾಗೂ ಮೀನುಗಾರ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಈ ಪ್ರಮುಖ ಮೂರು ಯೋಜನೆಯ ಭರವಸೆಯನ್ನು ರಾಹುಲ್ ಗಾಂಧಿ ಘೋಷಿಸಿದ್ದಾರೆ. ಕಾಪುವಿನ ಉಚ್ಚಿಲ ಶಾಲಿನಿ ಡಾ.ಜಿ. ಶಂಕರ್ ಸಭಾಂಗಣದಲ್ಲಿ ಆಯೋಜಿಸಿದ ಮೀನುಗಾರರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೀನುಗಾರರಿಗೆ 10 ಲಕ್ಷ ವಿಮೆ, ಮೀನುಗಾರ ಮಹಿಳೆಯರಿಗೆ ಒಂದು ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಹಾಗೂ ಪ್ರತಿದಿನ 500 ಲೀಟರ್‌ಗೆ ಮೀನುಗಾರರಿಗೆ 25 ರೂ. ಸಬ್ಸಿಡಿ ನೀಡುವುದಾಗಿ ಭರವಸೆ ನೀಡಿದ್ದಾರೆ.ಸಹಸ್ರ ಸಂಖ್ಯೆಯಲ್ಲಿ ಮೀನುಗಾರ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶಕ್ಕೆ ಆಗಮಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಮಾಧ್ಯಮ ಜೊತೆ ಮಾತನಾಡಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ವಾಗ್ದಾಳಿ ನಡೆಡಿಸಿದ್ದಾರೆ.ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ, ದೇವಸ್ಥಾನದ ದುಡ್ಡು ಹೊಡೆದ, ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ ಅರುಣ್ ಪುತ್ತಿಲ, ಗೋ ಸಾಗಾಟ ಮಾಡುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದಾಗ ಅರುಣ್ ಕೂಡಾ ಅದರಲ್ಲಿ ಒಬ್ಬನಾಗಿದ್ದ ಅಷ್ಟೇ. ಅದು ಬಿಟ್ಟು ಬೇರೆ ಹಿಂದುತ್ವದ ಕಾರ್ಯ ಅವನಿಂದ ನಡೆಯಲಿಲ್ಲ, ಕೇಂದ್ರದ ಗೃಹಸಚಿವ ಅಮಿತ್ ಶಾ ಮಾತನಾಡುವುದಾಗಿ ಹೇಳಿದಾಗ ಧಿಕ್ಕರಿಸಿದ ವ್ಯಕ್ತಿ ಅರುಣ್ ಪುತ್ತಿಲ, ಕಾರ್ಯಕರ್ತರು ಕೆಲವರು ಈ ವಿಚಾರ ತಿಳಿಯದೆ ಅವನ ಹಿಂದೆ ಓಡಾಡುತ್ತಿದ್ದಾರೆಅವರಿಗೆ ಸದ್ಯದಲ್ಲೇ ಈ ವಿಚಾರ ತಿಳಿಯಲಿದೆ ಎಂದು ಪ್ರಭಾಕರ್ ಭಟ್ ಹೇಳಿದ್ದಾರೆ.
ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಎಂಬವರನ್ನು ಜೀವ ಬೆದರಿಕೆಯೊಡ್ಡಿ ನಾಮಪತ್ರ ವಾಪಸ್ ಪಡೆದಿರುವ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಿಬ್ಬರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ ಪುರಸಭೆಯ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಾದ ಮುಸ್ತಾಫ ಯಾನೆ ಖಬುರು ಮುಸ್ತಾಫ, ಉಸ್ಮಾನ್ ಕಲ್ಲಾಪು , ರಿಯಾಝ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಎ.21 ರಂದು ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಎ ಮತ್ತು ಬಿ ಫಾರಂ ಪಡೆದು ಉಳ್ಳಾಲ ನಗರಸಭೆ ಚುನಾವಣಾ ಕಚೇರಿಯಲ್ಲಿ ಅಲ್ತಾಫ್ ಕುಂಪಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆಯಲ್ಲಿ ಸಿಂಧುತ್ವಗೊಂಡ ಘೋಷಣೆ ನಂತರ ಅದೇ ದಿನ ಸಂಜೆ 3 ಗಂಟೆಗೆ ಮೇಲಂಗಡಿ ದರ್ಗಾ ಹಿಂಭಾಗದಲ್ಲಿ ಮುಸ್ತಾಫ, ಉಸ್ಮಾನ್, ರಿಯಾಝ್ ಹಾಗೂ ಇತರರು ಸೇರಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಅವರನ್ನು ಬೆದರಿಕೆ ಹಾಕಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ, ಬೆದರಿಕೆ ಒಡ್ಡಿ,…
ಪುತ್ತೂರು: ನವ ವಿವಾಹಿತೆಯೋರ್ವರು ಎರಡು ತಿಂಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈಕೆ ತವರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ ಏ.25ರಂದು ನಡೆದಿದೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಪೂಜಾರಿಯವರ ಪುತ್ರಿ ಹರ್ಷಿತಾ(28ವ.) ಮೃತಪಟ್ಟವರು. ಹರ್ಷಿತಾ ಮತ್ತು ಬಲ್ನಾಡು ದಿ.ನಾರಾಯಣ ಪೂಜಾರಿಯವರ ಮಗ, ಕೆಮ್ಮಿಂಜೆ ದೇವಳದ ಮ್ಯಾನೇಜರ್ ಆಗಿರುವ ಪ್ರಶಾಂತ್ ಅವರ ವಿವಾಹವು ಇದೇ ಫೆ.10 ರಂದು ನಡೆದಿತ್ತು. ಮದುವೆಯಾದ ಬಳಿಕ ಗಂಡನ ಮನೆಯಲ್ಲಿ ವಾಸ್ತವ್ಯವಿದ್ದ ಹರ್ಷಿತಾರವರು ಏ.23ರಂದು ತನ್ನ ತಾಯಿ ಮನೆಯ ನೆರೆಮನೆಯಲ್ಲಿ ನಡೆದ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹೋಗಲೆಂದು ಪತಿ ಮನೆಯಿಂದ ತಾಯಿ ಮನೆಗೆ ಹೋಗಿದ್ದರು. ಅಲ್ಲಿ ಏ.24 ರಂದು ರಾತ್ರಿ ಬಚ್ಚಲು ಮನೆಗೆ ಹೋಗಿ ಬಂದ ಆಕೆ, ತಾನು ಕ್ರಿಮಿನಾಶಕ ವಿಷ ಪದಾರ್ಥವನ್ನು ಸೇವಿಸಿರುವುದಾಗಿ ತಾಯಿಯೊಂದಿಗೆ ಹೇಳಿ ಅಸ್ವಸ್ಥಗೊಂಡಿದ್ದರು. ಬಳಿಕ ತಾಯಿ, ಮಗ ಮತ್ತು ಸಂಬಂಧಿ ಅಣ್ಣ ಚೆನ್ನಪ್ಪ ಅಂಚನ್‌ರವರು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ…










