Author: main-admin

ಮಂಗಳೂರು: ಹಾಲು, ಮೊಸರು ದರ ಏರಿಕೆ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆ ಹಿಡಿದಿದ್ದಾರೆ. ಹಾಲು ಮತ್ತು ಮೊಸರಿನ ದರವನ್ನು 3ರೂಗೆ ಏರಿಕೆ ಮಾಡಿದ್ದ ಕೆಎಂಎಫ್​ನ ಆದೇಶವನ್ನು ಬೊಮ್ಮಾಯಿ ತಡೆ ಹಿಡಿದಿದ್ದಾರೆ. ಬೆಲೆ ಏರಿಕೆ ಬಗ್ಗೆ ನ.20ರಂದು ನಡೆಯುವ ಸಭೆ ಬಳಿಕ ನಿರ್ಧಾರ ಮಾಡಲಾಗುತ್ತದೆ ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಹಾಲು, ಮೊಸರು ಎರಡೂ ಉತ್ಪನ್ನಗಳ ದರ ಹೆಚ್ಚಿಸಿ ಸೋಮವಾರ ಬೆಳಗ್ಗೆ ಆದೇಶಿಸಿದ್ದರು. ಸೋಮವಾರ ಮಧ್ಯ ರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದೂ ಆದೇಶದಲ್ಲಿ ಉಲ್ಲೇಖವಿತ್ತು. ಹೀಗಾಗಿ ಮಂಗಳವಾರ ಮುಂಜಾನೆ ಹಾಲು, ಮೊಸರು, ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ ಇನ್ನಿತರ ಉತ್ಪನ್ನಗಳ ಖರೀದಿಗೆ ಹೆಚ್ಚಿನ ಹಣ ಹೊಂದಿಸಿಕೊಳ್ಳುವ ಪರಿಸ್ಥಿತಿ ಸೃಷ್ಟಿಯಾಗಿತ್ತು.

Read More

ಮಂಗಳೂರು: ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‍ಗಳಿಗೆ ಅಗ್ನಿಪಥ್ ಯೋಜನೆಯಡಿ ವಾಯು ಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು 2023ನೇ ಜನವರಿಯಲ್ಲಿ ನಡೆಯುವ ಆನ್‍ಲೈನ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಯಲ್ಲಿ(ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ.50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50% ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ ಯುವತಿಯರು 2002ನೇ ಜೂನ್ 27ರಿಂದ 25ರ ಡಿಸೆಂಬರ್ 27ರ ನಡುವೆ ಜನಿಸಿರುವವರು ವೆಬ್‍ಸೈಟ್https://agnipathvayu.cdac.in ಮೂಲಕ 2022ರ ನವೆಂಬರ್ 23ರೊಳಗೆ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://careerindianairforce.cdac.in ಪರಿಶೀಲಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ವಿಟ್ಲ:ಆಟೋ ಚಾಲಕನಿಗೆ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬೋಳಂತೂರು ಸಮೀಪದ ನಾಡಾಜೆ ಬಳಿ ನಡೆದಿದೆ. ಬೋಳಂತೂರು ಅಬುಬಕ್ಕರ್ ಅವರ ಪುತ್ರ ಶಾಕೀರ್ (30) ಹಲ್ಲೆಗೊಳಗಾದವರು.ಕಬಡ್ಡಿ ಮ್ಯಾಚ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ರಾತ್ರಿ 2 ಗಂಟೆ ಸುಮಾರಿಗೆ ತಂಡವೊಂದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ದಾಳಿಯ‌ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.ಕೃತ್ಯ ನಡೆಸಿರುವವರ ಬಗ್ಗೆ ಮಾಹಿತಿ ಇಲ್ಲ. ಯುವಕನಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ‌.ಯುವಕನಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಮಂಗಳೂರು : ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿಯವರಿಗೆ ಧನ್ಯವಾದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಮೋದಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನೊಂದು ಟ್ವೀಟ್ ನಲ್ಲಿ ‘ಬ್ರಹ್ಮಾಂಡ ಭ್ರಷ್ಟಾಚಾರದ ಜನಕರಾದ ಕಾಂಗ್ರೆಸ್ಸಿಗರು ಮತ್ತು ಭ್ರಷ್ಟಾಚಾರದ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದ ಡಿಕೆಶಿಗೆ ಜೀವನವನ್ನೇ ಸಮಾಜ, ದೇಶಕ್ಕಾಗಿ ಮುಡುಪಾಗಿಟ್ಟ ಶ್ರೇಷ್ಠ ಮಹನೀಯರನ್ನು ಮೋದಿ ಸ್ಮರಿಸುವಾಗ ಸಹಿಸಲು ಸಾಧ್ಯವಾಗದೇ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಜನರಿಗೆ ಗೊತ್ತಾಗಿದೆ’ ಎಂದು ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

Read More

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಗಳ ಮಧ್ಯೆ ನಡೆದ ಕಚ್ಚಾಟದಲ್ಲಿ ಸುಮಾರು 2 ವರ್ಷದ ಹುಲಿಮರಿಯೊಂದು ಕೆಲ ಸಮಯದ ಹಿಂದ ತೀವ್ರವಾಗಿ ಗಾಯಗೊಂಡಿದ್ದು, ಜೈವಿಕ ಉದ್ಯಾನವನದ ವೈದ್ಯಾಧಿಕಾರಿ ಡಾ. ವಿಷ್ಣು ದತ್, ಡಾ.ಮಧುಸೂದನ ಮತ್ತು ಡಾ.ಯಶಸ್ವಿ ಶಸ್ತ್ರ ಚಿಕಿತ್ಸೆ ನೀಡಿದ ಬಳಿಕ ಹುಲಿ ಚೇತರಿಸಿಕೊಂಡು ಸಹಜ ಸ್ಥಿತಿಗೆ ಮರಳಿತ್ತು. ಆದರೆ ನ.11 ರಂದು ಮಧ್ಯಾಹ್ನ ಹುಲಿ ಮರಿಯ ಆರೋಗ್ಯ ಏರುಪೇರುಗೊಂಡಿದ್ದು, ವೈದ್ಯಾಧಿಕಾರಿಗಳು ಶುಶ್ರೂಷೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದೆ.ಮೃತ ಹುಲಿ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದು, ಕಿಡ್ನಿ ಮತ್ತು ಅಂಗಾಂಗಳ ವೈಫಲ್ಯ ಸಮಸ್ಯೆ ಕಂಡು ಬಂದಿದೆ ಎಂದು ಡಾ. ವಿಷ್ಣು ದತ್ ತಿಳಿಸಿದ್ದಾರೆ. ಮೃತ ಹುಲಿಯ ಅಂಗಾಂಗಗಳ ಮಾದರಿಯನ್ನು ಪರೀಕ್ಷೆಗಾಗಿ ಉತ್ತರ ಪ್ರದೇಶದ ಐ.ವಿ.ಆರ್.ಐ., ಬರೇಲಿ ಮತ್ತು ಬೆಂಗಳೂರಿನ ಐ.ಎ.ಹೆಚ್.ಅಂಡ್ ವಿ.ಬಿ. ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಮರಿಯು ಪಿಲಿಕುಳದಲ್ಲಿಯೇ ಜನಿಸಿದ್ದಾಗಿದೆ. ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 11 ಕ್ಕೆ ಇಳಿದಿದೆ ಎಂದು ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನ ನಿರ್ದೇಶಕರು ತಿಳಿಸಿದ್ದಾರೆ.

Read More

ಮಂಗಳೂರು : ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಅಂಬೇಡ್ಕರ್ ಸರ್ಕಲ್ (ಜ್ಯೋತಿ ಸರ್ಕಲ್) ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ ‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Read More

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ, ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್ ಐ ಹೊಂದಿತ್ತು. ಕೆಲವೇ ದಿನಗಳಲ್ಲಿ ಪಿಎಫ್ ಐ ನಾಯಕರು ಮತ್ತು ಕಾರ್ಯಕರ್ತರು ಸಂಚು ರೂಪಿಸಿ ಪ್ರವೀಣ್ ನೆಟ್ಟಾರು ಟಾರ್ಗೆಟ್ ಮಾಡಿದ್ದರು ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರವೀಣ್ ನೆಟ್ಟಾರು ಪ್ರಕರಣ ಸಂಬಂಧ ಎನ್ ಐಎ ಶಹೀದ್ ಬೆಳ್ಳಾರೆಯನ್ನು ಬಂಧಿಸಿದೆ. ಈ ಮೂಲಕ ಬಂಧಿತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.

Read More

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಹನ್ನೊಂದನೇ ತಿರುವಿನಲ್ಲಿ ಪೊಲೀಸ್ ಡಿಆರ್ ವಾಹನ ಕೆಟ್ಟು ನಿಂತ ಪರಿಣಾಮ ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಚಿಕ್ಕಮಗಳೂರಿನ ಪೊಲೀಸ್ ಡಿಆರ್ ವಾಹನ ರಸ್ತೆಗೆ ಕೆಟ್ಟು ನಿಂತಿದ್ದರಿಂದ ಪ್ರವಾಸಿಗರು ಪರದಾಡುವಂತಾಯಿತು. ಎರಡು ಬದಿಯಿಂದ ವಾಹನಗಳು ಏಕಕಾಲದಲ್ಲಿ ಸಂಚರಿಸಲಾಗದೇ ಕಿ.ಮೀ. ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಾಹನ ಕೆಟ್ಟು ನಿಂತಿದ್ದರಿಂದ ಒಂದು ಬದಿ ವಾಹನ ಸಾಗಲು ಹರಸಾಹಸ ಪಡಬೇಕಾಯಿತು. ವಾರಾಂತ್ಯವಾಗಿರುವುದರಿಂದ ವಾಹನಗಳ ಸಂಖ್ಯೆ ಕೂಡ ಹೆಚ್ಚಾಗಿತ್ತು. ಸಂಜೆ ಏಳು ಗಂಟೆ ವರೆಗೂ ವಾಹನ ರಿಪೇರಿ ಮಾಡಲಾಗುತ್ತಿತ್ತು. ಅಷ್ಟೊತ್ತಿನವರೆಗೂ ಟ್ರಾಫಿಕ್ ಜಾಮ್ ನಿಂದ ಜನರು ತೊಂದರೆ ಅನುಭವಿಸಬೇಕಾಯಿತು ಎಂದು ಪ್ರಯಾಣಿಕ ಸತೀಶ್ ಎಂಬವರು ತಿಳಿಸಿದರು.

Read More

ತರಕಾರಿ ಇಷ್ಟ ಪಡುವವರಲ್ಲಿ ಹೆಚ್ಚಿನ ಮಂದಿ ತೊಂಡೆಕಾಯಿ ಸೇವಿಸುತ್ತಾರೆ. ಇದರಲ್ಲಿ ಹೆಚ್ಚು ಫೈಬರ್ ಅಂಶವಿದೆ. ಜೊತೆಗೆ ವಿಟಮಿನ್ ಎ, ಬಿ1, ಸಿ ಮತ್ತು ಕ್ಯಾಲ್ಸಿಯಂ ಇದ್ದು, ಕೊಲೆಸ್ಟ್ರಾಲ್ ನಿಯಂತ್ರಣ ಮಾಡುವುದರಲ್ಲಿ ಇದು ಉಪಯೋಗಕ್ಕೆ ಬರುತ್ತದೆ. ಕಿಡ್ನಿ ಸ್ಟೋನ್ ಸಮಸ್ಯೆಯೂ ಪರಿಹಾರವಾಗುತ್ತದೆ. ಕಫ ಸಮಸ್ಯೆ ದೂರವಾಗುತ್ತದೆ. ಮಲಬದ್ಧತೆ ನಿವಾರಣೆಯಾಗಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ತೊಂಡೆಕಾಯಿ ಎಲೆ ರಸವನ್ನು ನೀರಿನಲ್ಲಿ ಬೆರೆಸಿ ದಿನಕ್ಕೆ 3 ಬಾರಿ ಸೇವಿಸಿದರೆ ದೇಹದ ಉಷ್ಣತೆ ಕಡಿಮೆ ಆಗುತ್ತದೆ. ಎರಡು ಚಮಚ ತೊಂಡೆಕಾಯಿ ಎಲೆ ರಸಕ್ಕೆ ಅರ್ಧ ಬಟ್ಟಲು ಮೊಸರು ಬೆರೆಸಿ ಕುಡಿದರೆ ಬೇಧಿ ನಿಲ್ಲುತ್ತದೆ. ತೊಂಡೆಕಾಯಿ ಹಸಿ ಹಣ್ಣನ್ನು ದಿನಕ್ಕೆ ಎರಡರಂತೆ ಸೇವಿಸಿದರೆ ಒಣಗಿರುವ ಚರ್ಮ ಮೃದು ಆಗುತ್ತದೆ. ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ. ದೇಹದ ಯಾವುದೇ ಭಾಗದಲ್ಲಿ ಹುಳು ಕಚ್ಚಿ ಗಾಯ, ಗುಳ್ಳೆಗಳಿದ್ದರೆ ತೊಂಡೆಕಾಯಿ ಎಲೆಯನ್ನು ಚಚ್ಚಿ ಹಚ್ಚುವುದರಿಂದ ಅದು ನಿವಾರಣೆ ಆಗುತ್ತದೆ. ಪೊಟ್ಯಾಷಿಯಂ ಹೆಚ್ಚಿರುವ ತೊಂಡೆಕಾಯಿ ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

Read More

ವೇಣೂರು: ಒಂಟಿ ಮಹಿಳೆ ಇರುವ ಮನೆಗೆ ಬಂದ ನಾಲ್ವರು ಮುಸುಕುದಾರಿಗಳು ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನ.12 ರಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪದ ಅರಸಿಕಟ್ಟೆಯ ಪ್ರಭಾವತಿ ನಾಯ್ಕ ಎಂಬವರ ಮನೆಯಲ್ಲಿ ಈ ದರೋಡೆ ಪ್ರಕರಣ ನಡೆದಿದೆ. ಪ್ರಭಾವತಿ ನಾಯ್ಕರ ಮನೆಗೆ ಏಕಾಏಕಿ ಬಂದ ಮುಸುಕುದಾರಿಗಳು ಅವರ ಬಾಯಿಗೆ ಬಟ್ಟೆ ತುರುಕಿಸಿ, ಹಗ್ಗದಿಂದ ಕೈಕಾಲನ್ನು ಕಟ್ಟಿ ಹಾಕಿ, ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಬೆಂಡೋಲೆಯನ್ನು ಬಲಾತ್ಕಾರವಾಗಿ ತೆಗೆದು ಬಳಿಕ ಮನೆಯೊಳಗಿದ್ದ 3 ಚಿನ್ನದ ಬಳೆಗಳು, 3 ಚಿನ್ನದ ಉಂಗುರಗಳು, ಚಿನ್ನದ ಚೈನ್ ಹಾಗೂ ಒಂದು ಮೊಬೈಲ್‌ನ್ನು ದೋಚಿ ʼಎಂಕ್ಲು ಬತ್ತಿನಾ ಕೆಲಸ ಆಂಡ್ʼ ಎಂದು ತುಳುವಿನಲ್ಲಿ ಹೇಳುತ್ತಲೇ ದರೋಡೆಕೋರರು ಪರಾರಿಯಾಗಿದ್ದಾರೆ. ಆರೋಪಿತರು ದೋಚಿದ ಚಿನ್ನದ ಅಂದಾಜು ಮೌಲ್ಯ ಒಟ್ಟು ರೂ. 4,60,000 ಆಗಬಹುದೆಂದು ಅಂದಾಜಿಸಲಾಗಿದೆ. ವೇಣೂರು ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ. ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,…

Read More