ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳು, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನರ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
Author: main-admin
ಮಂಗಳೂರು: ಬದಿಯಡ್ಕದ ಹೆಸರಾಂತ ದಂತ ವೈದ್ಯ ಡಾ.ಕೃಷ್ಣಮೂರ್ತಿಯವರ ನಿಗೂಢ ಸಾವಿನ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ ಮನವಿ ಸಲ್ಲಿಸಲಾಯಿತು. ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ವಿಶ್ವ ಹಿಂದು ಪರಿಷತ್ ಸಚಿವರಿಗೆ ಮನವಿ ಸಲ್ಲಿಸಿದೆ. ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ಕಳೆದ 30 ವರ್ಷಗಳಿಂದ ದಂತ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಕೃಷ್ಣಮೂರ್ತಿಯವರು ನವೆಂಬರ್ 8ರಂದು ನಾಪತ್ತೆಯಾಗಿದ್ದರು. ಆದರೆ ನವೆಂಬರ್ 9ರಂದು ಅವರ ಮೃತದೇಹ ಕುಂದಾಪುರದ ತಲ್ಲೂರಿನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಮೃತದೇಹ ನೋಡಿದಾಗ ಇದೊಂದು ಕೊಲೆ ಕೃತ್ಯದ ರೀತಿಯಲ್ಲಿ ಸಂಶಯ ಮೂಡುತ್ತಿದೆ. ಈಗಾಗಲೇ ಈ ಪ್ರಕರಣದ ಬಗ್ಗೆ ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಕೇರಳ ಪೊಲೀಸರ ತನಿಖೆಯ ಮೇಲೆ ಭರವಸೆ ಇಲ್ಲದ ಹಿನ್ನಲೆಯಲ್ಲಿ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ಮನವಿ ಮಾಡಲಾಗಿದೆ.
ಬೆಳ್ಳಾರೆ:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನಿಗೆ ರಾಷ್ಟ್ರೀಯ ತನಿಖಾದಳ ಬಂಧಿಸಿದೆ. ನ.12ರಂದು ಕಾರ್ಯಾಚರಣೆ ನಡೆಸಿದ ಎನ್‌ಐಎ ತಂಡ, ಪ್ರಕರಣಕ್ಕೆ ಸಂಬಂಧಿಸಿ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅವರ ಬಾವ ಸಾಹಿದ್ ಬೆಳ್ಳಾರೆ(34)ಎಂಬವರನ್ನು ಬಂಧಿಸಿ ವಿಚಾರಣೆಗೊಳಪಡಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸಾಹಿದ್ ಬೆಳ್ಳಾರೆ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 14 ಮಂದಿ ಬಂಧನವಾಗಿದೆ. ಪ್ರವೀಣ್ ಕೊಲೆಗೆ ಸಂಬಂಧಿಸಿ ಇತ್ತೀಚೆಗೆ ಪೊಲೀಸರು ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ನಗದು ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಇಬ್ಬರ ಆರೋಪಿ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಆರೋಪಗಳ ಬಗ್ಗೆ ಮಾಹಿತಿ ತಿಳಿಸಿದರೆ 2 ಲಕ್ಷ ಬಹುಮಾನ ರೂ. ನಗದು ಬಹುಮಾನ ನೀಡುವವುದಾಗಿ ಎನ್‌ಐಎ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದ್ರೆ 5 ಲಕ್ಷ ರೂ.ಬಹುಮಾನ. ಇನ್ನು ಇಬ್ಬರು ಆರೋಪಿಗಳಾದ ಉಮರ್ ಫಾರೂಕ್ ಹಾಗೂ ಅಬೂಬಕರ್ ಸಿದ್ದಿಕ್ ಬಗ್ಗೆ…
ವೆಲ್ಲೂರು : ಸುಪ್ರೀಂಕೋರ್ಟ್ ಆದೇಶದ ಒಂದು ದಿನದ ಬಳಿಕ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ ಶ್ರೀಹರನ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನ 31 ವರ್ಷಗಳ ಜೈಲುವಾಸದ ನಂತರ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿ ಆದೇಶದ ಬಳಿಕ ನಳಿನಿ ಶ್ರೀಹರನ್ ಶನಿವಾರ ಸಂಜೆ ಬಿಡುಗಡೆಯಾಗಿದ್ದಾರೆ. ಪೆರೋಲ್ ಷರತ್ತುಗಳ ಭಾಗವಾಗಿ ತನ್ನ ಉಪಸ್ಥಿತಿಯನ್ನ ಗುರುತಿಸಲು ಆಕೆ ಇಂದು ಬೆಳಿಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಳು. ಅಂದ್ಹಾಗೆ, ಮೇ ತಿಂಗಳಲ್ಲಿ, ಸರ್ವೋಚ್ಚ ನ್ಯಾಯಾಲಯವು ತನ್ನ ಅಸಾಧಾರಣ ಅಧಿಕಾರವನ್ನು ಬಳಸಿಕೊಂಡು ಪೆರಾರಿವಾಲನ್ ಎಂಬ ಏಳನೇ ಅಪರಾಧಿಯನ್ನ ಬಿಡುಗಡೆ ಮಾಡಿತ್ತು. ಇದೇ ಆದೇಶವು ಉಳಿದ ಅಪರಾಧಿಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಬೆಂಗಳೂರು: ಪೋಸ್ಕೋ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ಮುರುಘ ಶ್ರೀಗಳ ಲೈಂಗಿಕ ಕಿರುಕುಳದ ಬಗ್ಗೆ ಸಂತ್ರಸ್ಥ ಮಕ್ಕಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ತಮ್ಮ ನೋವನ್ನು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಮುರುಘ ಮಠದ ಅಡುಗೆ ಸಹಾಯಕಿಯರ ಪುತ್ರಿಯರಿಂದ ಪತ್ರದಿಂದ ಬರೆದಿದ್ದು, ವಾರ್ಡನ್ ರಶ್ಮಿಯವರು ನಮ್ಮನ್ನು ಶ್ರೀಗಳ ಬಳಿಗೆ ಕರೆದುಕೊಂಡು ಹೋಗಿದ್ದು, ಶ್ರೀಗಳು ನಮ್ಮ ಬಳಿ ಕೆಟ್ಟದಾಗಿ ನಡೆದುಕೊಂಡಿದ್ದರು, ನಮ್ಮ ಅಮ್ಮ ಈ ಮಾಹಿತಿ ಕೇಳಿ ರಶ್ಮಿಯವರಿಗೆ ಬೈದು ಇದ್ದರು, ಅಲ್ಲಿಗೆ ನನ್ನ ಮಕ್ಕಳನ್ನು ಕರೆದುಕೊಂಡು ಹೋಗಬೇಡ ಅಂತ ಹೇಳಿದ್ದರು. ನಾನು ನನ್ನ ಅಕ್ಕ ಶ್ರೀಗಳನ್ನು ಭೇಟಿಯಾಗಿದ್ದ ವೇಳೆಯನ್ನು ನನ್ನ ತೊಡೆ ಮೇಲೆ ಕೂರಿಸಿಕೊಂಡು ನನ್ನ ಮೇಲ್ಭಾಗವನ್ನು ಮುಟ್ಟಿದ್ದರು. ಇದರಿಂದ ನಾನು ಗಾಬರಿಗೊಂಡು ನಾನು ಎದ್ದು ಬಂದೇ, ಇದನ್ನು ನಾನು ನನ್ನ ತಾಯಿ ಬಳಿ ಹೇಳಿಕೊಂಡಿದ್ದೇ. ಇದಾದ ಬಳಿಕ ಮತ್ತೆ ಹೋಗಿದ್ದ ವೇಳೇಯಲ್ಲಿ, ನನಗೆ ಚಾಕ್‌ಲೇಟ್ ನೀಡಿದ್ದು, ಚಾಕಲೇಟ್ ತಿಂದ ಬಳಿಕ ನಾನು ನಿದ್ದೆಗೆ ಜಾರಿಗೆ ಜಾರಿದ್ದ ಬಳಿಕ ನನ್ನ ಮೇಲೆ ದೌರ್ಜನ್ಯವಾಗಿದೆ ಅಂತ…
ಬಜಪೆ: ಇಲ್ಲಿನ ಪರಿಸರದಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ ಮುಂದುವರಿದಿದ್ದು, ಹಲವು ಮನೆ ಗಳಿಗೆ ಹರಡಿದೆ. ಮಕ್ಕಳಲ್ಲಿ ಹೆಚ್ಚು ಕಾಣಿಸಿಕೊಂಡಿದೆ. ಇದರಿಂದ ಮಿದುಳು ಜ್ವರ ವಿರುದ್ಧ ಲಸಿಕೆಯ ಸರ್ವೇಗೆ ಮನೆ ಮನೆಗೆ ತೆರಳುವ ಆಶಾ ಕಾರ್ಯಕರ್ತೆಯರಿಗೂ ಸಮಸ್ಯೆ ಎದುರಾಗಿದೆ. ಬಜಪೆ ಪ. ಪಂ.ನ ಪಡೀಲ್ ಪ್ರದೇಶದಲ್ಲಿದ್ದ ಕೆಂಗಣ್ಣು ಕಾಯಿಲೆ ಈಗ ಜರಿನಗರದ ಹಲವು ಮನೆಗಳಲ್ಲಿ ಕಾಣಿಸಿ ಕೊಂಡಿದೆ. ಇತರೆಡೆ ಕೆಲವು ಮನೆಗಳಲ್ಲಿ ಕಂಡು ಬಂದಿರುವ ಈ ಸಮಸ್ಯೆ ಇತರ ಗ್ರಾಮಗಳಿಗೆ ಹರಡಿದೆ. ತಿಂಗಳ ಚುಚ್ಚುಮದ್ದಿಗಾಗಿ ಪ್ರಾಥ ಮಿಕ ಆರೋಗ್ಯ ಕೇಂದ್ರಕ್ಕೆ ಕರೆದು ಕೊಂಡು ಬರುವ ಕೆಂಗಣ್ಣು ಸಮಸ್ಯೆ ಇದ್ದ ತಾಯಿ ಹಾಗೂ ಮಕ್ಕಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಒಂದು ವಾರ ಬಿಟ್ಟು ಬರಲು ಸೂಚನೆ ನೀಡಲಾಗಿದೆ. ಕೆಲವೆಡೆ ಮನೆಯ ಎಲ್ಲರಿಗೂ ಕೆಂಗಣ್ಣು ಸಮಸ್ಯೆ ಇದ್ದರೂ ಅವರು ಖರೀದಿಗಾಗಿ ಪೇಟೆಗೆ ಬರುವ ಕಾರಣ ಕೆಂಗಣ್ಣು ಸಮಸ್ಯೆ ಉಲ್ಬಣಗೊಳ್ಳಲು ಕಾರಣವಾಗಿದೆ. ಡಿ.5ರಿಂದ ಮಕ್ಕಳಿಗೆ ಮಿದುಳು ಜ್ವರ ವಿರುದ್ಧ ಲಸಿಕೆ ಕಾರ್ಯಕ್ರಮ ಆರಂಭವಾಗಲಿದೆ.
ಪುತ್ತೂರು : ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ದಕ್ಷಿಣ ಕನ್ನಡ, ಉಡುಪಿ ಕ್ಷೇತ್ರದ 14 ಮಂದಿ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಮನೆ ನಿರ್ಮಿಸಲಾಗುತ್ತಿದೆ. ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ದಕ್ಷಿಣ ಕನ್ನಡ, ಉಡುಪಿ ಬಿಲ್ಲವ ಪ್ರಮುಖರು 45 ಲಕ್ಷ ರೂ.ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುತ್ತೇವೆ ಎಂದು ಹೇಳಿದ್ದು, ಇದೀಗ ಅವಕಾಶ ಇಲ್ಲದ ನಿಟ್ಟಿನಲ್ಲಿಇದೇ ಹಣದಿಂದ ಪ್ರವೀಣ್ ನೆಟ್ಟಾರು ಸ್ಮರಣಾರ್ಥ ದಕ್ಷಿಣ ಕನ್ನಡ, ಉಡುಪಿ ವಿಧಾನಸಭೆ ಕ್ಷೇತ್ರದ 14 ಮಂದಿ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಬಿಲ್ಲವ ಸಮಾಜದ ಮುಖಂಡ ಜಯಂತ ನಡುಬೈಲು ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಅವರ ಶ್ರದ್ಧಾಂಜಲಿ ಸಭೆಯಲ್ಲಿಅವರ ಕುಟುಂಬದವರಿಗೆ ಮನೆ ನಿರ್ಮಿಸುವ ಭರವಸೆ ನೀಡಲಾಗಿತ್ತು. ಅಲ್ಲದೆ ಮನೆಯ 3ಡಿ ವಿನ್ಯಾಸದ ಜತೆ ಮನೆ ನಿರ್ಮಾಣಕ್ಕೆ ಏಳು ಲಕ್ಷ ರೂ. ಮುಂಗಡ ಹಣವನ್ನು…
ಮಂಗಳೂರು : ಇಡೀ ದೇಶವೆ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನೆಮಾ ವಿರುದ್ದ ಇದೀಗ ಆಕ್ರೋಶ ಕೇಳಿ ಬಂದಿದ್ದು, ದೈವಾರಾಧನೆಯಲ್ಲಿ ತೊಡಗಿರುವ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಕಾಂತಾರದಲ್ಲಿ ಕೀಳಾಗಿ ತೋರಿಸಲಾಗಿದೆ ಎಂದುಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ ಆಕ್ಷೇಪ ವ್ಯಕ್ತಪಡಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂತಾರ ಚಲನಚಿತ್ರದ ಕೆಲವು ದೃಶ್ಯಗಳಲ್ಲಿ ಕೀಳಾಗಿ ಬಿಂಬಿಸಲಾಗಿದೆ. ದೈವಾರಾಧನೆಯನ್ನು ವಿಕೃತಗೊಳಿಸಿ ಹಿಂಸೆಯನ್ನು ಪ್ರಚೋದಿಸಲಾಗಿದೆ ಈ ಹಿನ್ನಲೆ ಈ ಸಿನಿಮಾದಲ್ಲಿರುವ ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕಬೇಕು. ಅಲ್ಲಿಯವರೆಗೆ ಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಬೇಕು’ ಎಂದು ಒತ್ತಾಯಿಸಿದರು. ದೈವಾರಾಧನೆಯಲ್ಲಿ ಮಾನವ ವಿರೋಧಿ ಹಿಂಸೆಗೆ ಅವಕಾಶ ಇಲ್ಲ. ಈ ಚಿತ್ರದ ಕೆಲವು ದೃಶ್ಯಗಳಿಂದ ದೈವನಿಂದನೆ ಆಗಿದೆ. ಆದರೂ ಈ ಸಿನಿಮಾಕ್ಕೆ ಚಲನಚಿತ್ರ ಸೆನ್ಸಾರ್ ಮಂಡಳಿಯು ಯು/ಎ ಪ್ರಮಾಣಪತ್ರವನ್ನು ನೀಡಿದೆ. ಈ ಕ್ರಮ ಸರಿಯಲ್ಲ’ ಎಂದರು. ‘ಅಸ್ಪೃಶ್ಯತಾ ಆಚರಣೆ ಮತ್ತು ಪರಿಶಿಷ್ಟ ಸಮುದಾಯಗಳ ಅವಮಾನ, ದೌರ್ಜನ್ಯಗಳು ಶಿಕ್ಷಾರ್ಹ ಅಪರಾಧ. ಕಾಂತಾರ ಸಿನಿಮಾದಲ್ಲಿ ಇಂತಹ ಕೆಲವು ದೃಶ್ಯಗಳು ಕಂಡು…
ಉಡುಪಿ: ಗೂಡ್ಸ್ ಟೆಂಪೋ ರಿಕ್ಷಾವೊಂದು ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ನಗರದ ಶಿರಿಬೀಡು ಎಂಬಲ್ಲಿ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಗೂಡ್ಸ್ ರಿಕ್ಷಾ ಚಾಲಕ ಸಹಿತ ಇಬ್ಬರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಆಗಮಿಸುತ್ತಿದ್ದ ಬಸ್ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್ ಟೆಂಪೋ ರಿಕ್ಷಾ ಡಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದಿಂದ ಟೆಂಪೋ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದೆ ಸ್ಥಳಕ್ಕೆ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿದ್ದಾರೆ.
ಬಂಟ್ವಾಳ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ವಾಮದಪದವು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕೌಡೋಡಿ ನಿವಾಸಿ ಕರಿಯ ಎಂಬವರ ಮಗ ಲೋಕೇಶ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಕೂಲಿ ಕೆಲಸ ಮಾಡುತ್ತಿದ್ದು ಮದ್ಯ ಸೇವನೆ ಅಭ್ಯಾಸ ಹೊಂದಿದ್ದ. ನಿನ್ನೆ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.










