ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಘಟನೆ ಪೆರುವಾಯಿ ಗ್ರಾಮದ ಮುಚ್ಚಿರಪದವು ಎಂಬಲ್ಲಿ ನ.13ರ ಬುಧವಾರ ನಡೆದಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ತಲೆಗೆ ಗಾಯವಾಗಿದೆ. ಹಲವು ಮಕ್ಕಳು ಕೂಡ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಪೆರುವಾಯಿ ಮಿತ್ತಮೂಲೆ ಎಂಬಲ್ಲಿದ್ದ ಮಕ್ಕಳನ್ನು ವಿಟ್ಲದ ಶಾಲೆಯ ಬಸ್ಸಿಗೆ ಹತ್ತಿಸಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಲಕ ಮುಳಿಯ ರಾಮಣ್ಣ ಅವರ ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
Author: main-admin
ಉಡುಪಿ: ಕಟಪಾಡಿ ವಿಶ್ವನಾಥ ಕ್ಷೇತ್ರದ ಬಳಿಯ ಬಾಡಿಗೆ ಮನೆಯಿಂದ ನಾಪತ್ತೆಯಾಗಿದ್ದ ಸುನೀಲ್ ಕುಮಾರ್ (54) ಅವರ ಶವವು ಕೊಳೆತ ಸ್ಥಿತಿಯಲ್ಲಿ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ಇರಂದಾಡಿಯ ಹಾಡಿಯಲ್ಲಿ ಪತ್ತೆಯಾಗಿದೆ. ಪ್ರಾಣಿಗಳು ಎಳೆದಾಡಿದಂತೆ ಛಿದ್ರವಾಗಿದ್ದ ದೇಹ, ತಲೆಬುರುಡೆ ಮತ್ತು ಸೊಂಟದ ಭಾಗಗಳನ್ನು ಹೊಂದಿದ್ದ ಮೃತದೇಹವನ್ನು ಎಲ್ಲೂರು ಗ್ರಾ.ಪಂ. ಸದಸ್ಯ ಯಶವಂತ ಶೆಟ್ಟಿ ಅವರು ನೋಡಿದ್ದು ಅಪರಿಚಿತ ಮೃತದೇಹ ಪತ್ತೆಯಾಗಿರುವ ಕುರಿತು ಪಡುಬಿದ್ರಿ ಠಾಣೆಗೆ ನ. 10ರ ರಾತ್ರಿ ದೂರು ನೀಡಿದ್ದರು. ಸುನಿಲ್ ಮನೆಯವರು ಶವದ ಮೈಮೇಲಿದ್ದ ಬಟ್ಟೆಗಳ ಆಧಾರದಲ್ಲಿ ಅವರ ಗುರುತು ಪತ್ತೆಹಚ್ಚಿದ್ದಾರೆ. ರಿಕ್ಷಾ ಚಾಲಕರಾಗಿದ್ದ ಸುನಿಲ್ ಬಳಿಕ ಪೀಠೊಪಕರಣಗಳ ಮಳಿಗೆಯಲ್ಲಿಯೂ ದುಡಿಯುತ್ತಿದ್ದರು. ವಿಪರೀತ ಮದ್ಯಪಾನದ ಚಟವಿದ್ದು ಸರಿಯಾಗಿ ಮನೆಗೂ ಬರುತ್ತಿರಲಿಲ್ಲ ಎನ್ನಲಾಗಿದೆ. ಮಾನಸಿಕ ಕಾಯಿಲೆಗೂ ಚಿಕಿತ್ಸೆ ನೀಡಲಾಗಿದ್ದರೂ ಪ್ರಯೋಜನವಾಗಿರಲಿಲ್ಲ ಎಂದು ತಿಳಿದುಬಂದಿದೆ. ಅವರು ಅಕ್ಟೋಬರ್ 23ರಂದು ಮನೆ ಬಿಟ್ಟಿದ್ದರು. ಕೆಲವು ಸಲ ಎರಡು-ಮೂರು ದಿನಗಳ ಬಳಿಕ ಮನೆಗೆ ಬರುತ್ತಿದ್ದ ಕಾರಣ ನ. 1ರಂದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅವರು…
ಬೆಳ್ತಂಗಡಿ: ಉಜಿರೆ ಕಾಲೇಜಿನ ಯುವ ಪ್ರತಿಭೆ, ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಅಸೌಖ್ಯದಿಂದ ನಿಧನ ಹೊಂದಿದ್ದರು. ಮೃತಪಟ್ಟ ಯುವಕ ಮಂಡ್ಯ ಮೂಲದ ಚಿನ್ಮಯ ಗೌಡ ಪಿ.ಕೆ. (18) ಎಂದು ತಿಳಿದು ಬಂದಿದೆ. ಅವರು ಹಾಸ್ಟೆಲ್‌ನಲ್ಲಿ ವಾಸ್ತವ್ಯವಿದ್ದು, ಉಜಿರೆ ಖಾಸಗಿ ಕಾಲೇಜಿಗೆ ತೆರಳುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಟ್ಟಿದ್ದರು. ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟರು. ಮೃತರು ತಂದೆ, ತಾಯಿಯನ್ನು ಅಗಲಿದ್ದಾರೆ.
ಕಾಸರಗೋಡು: ಬರೋಬ್ಬರಿ 18 ವರ್ಷಗಳ ಹಿಂದೆ ಕೆಲಸ ಮಾಡುತ್ತಿದ್ದ ಮನೆ ಮಾಲೀಕನಿಂದ ಹತ್ಯೆಯಾಗಿದ್ದ ಬಾಲಕಿಯ ತಲೆಬುರುಡೆಯನ್ನು ಧಾರ್ಮಿಕ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ಮಾಡಲು ಪೋಷಕರು ಸ್ವೀಕರಿಸಿದ ಘಟನೆ ಕಾಸರಗೋಡು ನ್ಯಾಯಾಲಯದಲ್ಲಿ ನಡೆದಿದೆ. ಗೋವಾದಲ್ಲಿ ಗುತ್ತಿಗೆದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಸರಗೋಡಿನ ಮುಳಿಯಾರ್ ನಿವಾಸಿ ಕೆ.ಸಿ. ಹಂಝ ಮನೆಯಲ್ಲಿ ಕರ್ನಾಟಕದ ಕೊಡಗು ಜಿಲ್ಲೆಯ ಅಯ್ಯಂಗೇರಿ ನಿವಾಸಿ ತನ್ನ 13ನೇ ವಯಸ್ಸಿನ ಸಫಿಯಾ ಕೆಲಸಕ್ಕಿದ್ದಳು. ಮನೆಗೆಲಸ ಮಾಡುತ್ತಿದ್ದ ಸಫಿಯಾಳಿಗೆ ಕೆಲಸದ ನಡುವೆ ಸುಟ್ಟ ಗಾಯಗಳಾಗಿತ್ತು. ಈ ವಿಚಾರ ಹೊರಗೆ ತಿಳಿಯುವುದು ಬೇಡವೆಂದು 2008ರ ಡಿಸೆಂಬರ್ ತಿಂಗಳಲ್ಲಿ ಹಂಝಾ ಹಾಗೂ ಆತನ ಪತ್ನಿ ಮೈಮುನಾ ಸಫಿಯಾಳನ್ನು ಕೊಲೆಗೈದು ಹಲವು ತುಂಡುಗಳನ್ನಾಗಿ ಮಾಡಿ ಹೂತು ಹಾಕಿದ್ದರೆಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿತ್ತು. 2008ರಲ್ಲಿ ಗೋವಾದ ಅಣೆಕಟ್ಟಿನ ಬಳಿ ಈ ಮೂಳೆಗಳು ಪತ್ತೆಯಾಗಿತ್ತು. ಪ್ರಕರಣದ ಒಂದನೇ ಆರೋಪಿ ಹಂಝಾಗೆ ವಿಚಾರಣಾ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ಬಳಿಕ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಯಿತು. ಚಾರ್ಜ್ ಶೀಟ್‌ನೊಂದಿಗೆ ತಲೆಬುರುಡೆ ಸೇರಿದಂತೆ ದೇಹದ ಭಾಗಗಳನ್ನು…
ಮಂಗಳೂರು : ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಅದರಂತೆ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನವೆಂಬರ್ 17 ಮತ್ತು 18 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ಪಿಲಿಕುಳ ಕಂಬಳವನ್ನು ಮುಂದೂಡಲಾಗಿರುತ್ತದೆ. ಪಿಲಿಕುಳ ಕಂಬಳ ಆಯೋಜನೆಯ ಮುಂದೂಡಲಾದ ದಿನಾಂಕವನ್ನು ನಂತರದ ದಿನಗಳಲ್ಲಿ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಕ ಪ್ರದೀಪ್ ಡಿ.ಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಲ್ಕಿ: ಕಳೆದ ಎರಡು ದಿನಗಳ ಹಿಂದೆಯಷ್ಟೇ ಸಹಕಾರಿ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ ಮೊದಲ ಪತ್ನಿ ಪ್ರಿಯಾಂಕ ಹಾಗೂ ಪುತ್ರ ಹೃದಯ್ ನನ್ನು ಕೊಲೆ ಮಾಡಿ, ಬಳಿಕ ಮಂಗಳೂರಿನ ಮುಲ್ಕಿ ಹೊರ ವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಕಾರ್ತಿಕ್ ನ ತಂದೆ, ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಎಂಬುವವರನ್ನು ಬಂಧಿಸಲಾಗಿದೆ. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್ ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮ ಸಂಸಾರ ಹಾಳು ಮಾಡಿದ್ದೇ ತಂದೆ, ತಾಯಿ, ಸಹೋದರಿ. ಇಂತಹ ತಂದೆ, ತಾಯಿ ಯಾರಿಗೂ ಸಿಗಬಾರದು. ನನ್ನ ಈ ಪರಿಸ್ಥಿತಿಗೆ ಇವರೇ ಕಾರಣ, ದಯವಿಟ್ಟು ನಮ್ಮ ಅಂತ್ಯಸಂಸ್ಕಾರವನ್ನು ಅತ್ತೆ ಮಾವ ನಡೆಸಿಕೊಡಬೇಕು ಎಂದು ಡೆತ್ ನೋಟ್‌ನಲ್ಲಿ ಮೃತ ಕಾರ್ತಿಕ್ ಬರೆದುಕೊಂಡಿದ್ದ.…
ಕೋಸ್ಟಲ್ ವುಡ್ ನಲ್ಲಿ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ 90 ಎಮ್ ಎಲ್ ಸಿನಿಮಾದ ಚಿತ್ರೀಕರಣದ ಕೆಲಸವು ಭರದಿಂದ ಸಾಗುತ್ತಿದೆ. ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಿಸಲಾಗುತ್ತಿರುವ ಈ ಸಿನಿಮಾದ ಒಟ್ಟು ಕಥಾಹಂದರವು ಉತ್ತಮ ಸಂದೇಶ, ಕೌಟುಂಬಿಕ ಮನೋರಂಜನೆ, ಪ್ರೀತಿ ಪ್ರೇಮ, ಸುಂದರ ಹಾಡುಗಳು, ಹಾಸ್ಯದೊಂದಿಗೆ ಸಾಕಷ್ಟು ಅಚ್ಚರಿಗಳನ್ನು ಕೂಡಾ ಒಳಗೊಂಡಿದೆ. ಡೋಲ್ಪಿ ಡಿ ಸೋಜ ನಿರ್ಮಾಪಕರಾಗಿರುವ, ರಂಜಿತ್ ಸಿ ಬಜಾಲ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ವಿನೀತ್ ಕುಮಾರ್ ನಾಯಕ ನಟನಾಗಿ ನಟಿಸುತ್ತಿದ್ದು, ನಾಯಕಿಯಾಗಿ ರುಹಾನಿ ಶೆಟ್ಟಿ ನಟಿಸುತ್ತಿದ್ದಾರೆ. 90 ಎಮ್ ಎಲ್ ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪುಷ್ಪರಾಜ್ ಬೊಳ್ಳೂರು, ಶೈಲಶ್ರೀ, ನಮಿತಾ ಸೇರಿದಂತೆ ಹಲವಾರು ಪ್ರಭುದ್ಧ ಕಲಾವಿದರು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ನವೆಂಬರ್ 1 ರಂದು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಈ ತುಳು ಚಲನಚಿತ್ರದ ಮುಹೂರ್ತ ಸಮಾರಂಭವು ನಡೆಯಿತು. ಒಟ್ಟು 20 ರಿಂದ 25 ದಿನಗಳ…
ಕುಂಬಳೆ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ಕಾಸರಗೋಡಿನಿಂದ ಆಲುವಾ ನ್ಯಾಯಾಲಯಕ್ಕೆ ಸಾಗಿಸುತ್ತಿದ್ದಾಗ ಆರೋಪಿ ದಾರಿ ಮಧ್ಯೆ ರೈಲಿನಿಂದ ಹೊಳೆಗೆ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ, ಈ ವೇಳೆ ಪೊಲೀಸರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೊಳೆಗೆ ಹಾರಿ ಆತನನ್ನು ಬಂಧಿಸಿದ ಘಟನೆ ನಡೆದಿದೆ. ಇಡುಕ್ಕಿ ನಿವಾಸಿ ಸನೀಶ್ (40) ಹೊಳೆಗೆ ಹಾರಿದ ಆರೋಪಿ. ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಈತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದರು. ಈತನನ್ನು ಇಬ್ಬರು ಪೊಲೀಸರ ಭದ್ರತೆಯೊಂದಿಗೆ ಮಂಗಳೂರು-ತಿರುವನಂತಪುರ ಏರನಾಡು ಎಕ್ಸ್‌ಪ್ರೆಸ್ ರೈಲಿನಲ್ಲಿ ಆಲುವಾಕ್ಕೆ ಸಾಗಿಸಲಾಗುತ್ತಿತ್ತು. ರೈಲು ಶೋರ್ನೂರು ಭಾರತಪುಳದ ಸೇತುವೆ ಬಳಿ ತಲುಪಿದಾಗ ಆರೋಪಿ ತನಗೆ ಶೌಚಾಲಯಕ್ಕೆ ಹೋಗಬೇಕೆಂದು ಪೊಲೀಸರಲ್ಲಿ ತಿಳಿಸಿದ್ದಾನೆ. ಆಗ ಪೊಲೀಸರು ಆತನ ಕೈಕೋಳ ಕಳಚಿ ಶೌಚಾಲಯ ಬಳಿ ಸಾಗಿಸಲೆತ್ನಿಸಿದಾಗ ಪೊಲೀಸರ ಕೈಯಿಂದ ತಪ್ಪಿಸಿ ಸೇತುವೆಯಿಂದ ನದಿಗೆ ಹಾರಿದ್ದ. ಕೂಡಲೇ ಪೊಲೀಸರೂ ಹೊಳೆಗೆ ಹಾರಿ ಆತನನ್ನು ಬಂಧಿಸಿದರು. ರೈಲು ಸೇತುವೆಯಲ್ಲಿ ಸಾಗುವಾಗ ವೇಗವನ್ನು ಕಡಿಮೆಗೊಳಿಸಲಾಗಿತ್ತು. ಹೊಳೆಗೆ ಹಾರಿದ ಸನೀಶ್ ಪ್ರಜ್ಞೆ ತಪ್ಪಿದ್ದು, ತೃಶ್ಶೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169ರ ಮಿಜಾರು ತೋಡಾರಿನಲ್ಲಿರುವ ಇಂಜಿನಿಯರಿಂಗ್ ಕಾಲೇಜೊಂದರ ಸಮೀಪ ನ.11ರ ಬೆಳಗ್ಗೆ ಖಾಸಗಿ ಬಸ್ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸವಾರೆ, ಸಹಸವಾರೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಸ್ಥಳೀಯರು, ವಿದ್ಯಾರ್ಥಿಗಳ ಸಹಿತ ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಸ್ಕೂಟರ್ ಸವಾರೆ ಸುಮಿತ್ರಾ ಹಾಗೂ ಸಹಸವಾರೆ ಅವರ ಸಂಬಂಧಿ ಸಾನ್ವಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ಸುಮಾರು 3 ಗಂಟೆಗಳ ಕಾಲ ಪ್ರತಿಭಟನೆ ನಡೆದಿದ್ದಾರೆ. ಹೀಗೆ ನಿರ್ಲಕ್ಷ್ಯದಿಂದ ಬಸ್ ಚಲಾಯಿಸುವ ಚಾಲಕರು ಮತ್ತು ಬೇಜವಾಬ್ದಾರಿಯಿಂದ ವರ್ತಿಸುವ ಮಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಘಟನೆ ನಡೆದ ತತ್‌ಕ್ಷಣ ರಿಕ್ಷಾವೊಂದು ಅಲ್ಲಿಗೆ ಬಂದ ಕಾರಣ ಬಸ್ಸಿನ ಚಾಲನೆಗೆ ತಡೆಯೊಡ್ಡಿದಂತಾಗಿ ಹತ್ತಿರವೇ ಇದ್ದ ವಿದ್ಯಾರ್ಥಿಗಳು ಜೀವಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಇನ್ನು ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಚಾಲಕ ಅತಿ ವೇಗದಿಂದ ಚಲಾಯಿಸಿಕೊಂಡು ಬಂದಿದ್ದಾನೆ. ಮೈಟ್ ಕಾಲೇಜಿನ ತಿರುವು ಬಳಿಯಲ್ಲಿ ಬಸ್ ನಿಯಂತ್ರಣ ಕಳೆದುಕೊಂಡಿದ್ದು, ಮೊದಲು ಕಾಲೇಜು…
ಉಳ್ಳಾಲ: ಜೈಲಿನಿಂದ ಬಿಡುಗಡೆ ಹೊಂದಿರುವ ವ್ಯಕ್ತಿಯ ಕೊಲೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್, ಇಡ್ಯ, ಈಶ್ವರ ನಗರ ನಿವಾಸಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು(24), ತಲಪಾಡಿ, ನಾರ್ಲ ಪಡೀಲ್ ನಿವಾಸಿ ಸಚಿನ್(24), ಬಂಟ್ವಾಳ ತಾಲೂಕಿನ, ಪಜೀರ್ ಪೋಸ್ಟ್, ಕಂಬ್ಲಪದವು, ಪಾದಲ್ ಕೋಡಿ ನಿವಾಸಿ ಖುಷಿತ್(18) ಬಂಧಿತ ಆರೋಪಿಗಳು. ನವಂಬರ್ 8ರಂದು ಸಂಜೆ 6.40ರ ಸುಮಾರಿಗೆ ತಲಪಾಡಿ ಗ್ರಾಮದ ಕೆ.ಸಿ.ರೋಡ್-ಉಚ್ಚಿಲ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಳೆಯ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆ ಹೊಂದಿದ್ದ ಮೊಹಮದ್ ಆಸೀಫ್ ಎಂಬಾತ ತನ್ನ ಮನೆಯವರೊಂದಿಗೆ ವಾಹನದಲ್ಲಿ ಮಂಗಳೂರಿನಿಂದ ಕೇರಳ ಕಡೆಗೆ ಹೋಗುತ್ತಿದ್ದ. ಈ ಆರೋಪಿಗಳು ಮೊಹಮ್ಮದ್ ಆಸೀಫ್‌ರವರನ್ನು ಮಾರಕಾಯುಧಗಳಿಂದ ದಾಳಿ ಮಾಡಿ ಕೊಲೆ ಮಾಡಲು ಯತ್ನಿಸಿದ್ದರು. ಈ ಬಗ್ಗೆ ಮೊಹಮದ್ ಆಸೀಫ್ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸಿ ನವೆಂಬರ್ 11ರಂದು ರಾತ್ರಿ 8ಗಂಟೆಗೆ ಬಂಧಿಸಿದ್ದಾರೆ.