ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿ, ಖಾಸಗಿ ವಿಡಿಯೋಗಳನ್ನು ಮುಂದಿಟ್ಟು ಮಹಿಳೆಯರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಿರುತೆರೆ ನಟ ಹನಿಯೂರು ಚಂದ್ರೇಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಸರ್ಕಾರಿ ಅಧಿಕಾರಿ ಎಂದು ಹೇಳಿಕೊಂಡು 43 ವರ್ಷದ ಮೇಕಪ್ ಆರ್ಟಿಸ್ಟ್ ಸೇರಿದಂತೆ ಹಲವು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ. ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಒಂಟಿ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಚಂದ್ರೇಗೌಡ, ತಾನು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ), ವಕೀಲ ಅಥವಾ ಕಾಲೇಜು ಉಪನ್ಯಾಸಕ ಎಂದು ಸುಳ್ಳು ಹೇಳುತ್ತಿದ್ದ. ಸಂತ್ರಸ್ತರಿಗೆ ತಿಳಿಯದಂತೆ ಅವರ ಖಾಸಗಿ ಕ್ಷಣಗಳನ್ನು ವಿಡಿಯೋ ಮತ್ತು ಫೋಟೋ ಸೆರೆಹಿಡಿಯುತ್ತಿದ್ದ ಈತ, ಅವುಗಳನ್ನು ವೈರಲ್ ಮಾಡುವ ಬೆದರಿಕೆಯೊಡ್ಡಿ ಹಣ ಹಾಗೂ ಆಭರಣಗಳನ್ನು ವಸೂಲಿ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಮೊಬೈಲ್‌ನಲ್ಲಿ 20ಕ್ಕೂ ಹೆಚ್ಚು ಮಹಿಳೆಯರ ಜೊತೆಗಿನ ಖಾಸಗಿ ಫೋಟೋಗಳು ಪತ್ತೆಯಾಗಿದ್ದು, ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ. ತಾನು ಎಸ್ಪಿ ಎಂದು ನಕಲಿ ಗುರುತಿನ ಚೀಟಿ ಸೃಷ್ಟಿಸಿಕೊಂಡಿದ್ದ ಈತ, ಟೋಲ್‌ಗಳಲ್ಲಿ ಅದನ್ನು ಬಳಸುತ್ತಿದ್ದ…
Author: main-admin
ಬೆಂಗಳೂರು: ದೇಶದ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಏಕಾಏಕಿ ‘ಎಮರ್ಜೆನ್ಸಿ ಅಲರ್ಟ್’ ಸಂದೇಶಗಳು ಬಂದಿವೆ. ಆದರೆ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದು ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೆ ತಂದಿರುವ ‘ಸೆಲ್ ಬ್ರಾಡ್‌ಕಾಸ್ಟ್’ ವ್ಯವಸ್ಥೆಯ ಅಧಿಕೃತ ಪರೀಕ್ಷೆಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ದೆಹಲಿಯಲ್ಲಿ ಈ ಸ್ವದೇಶಿ ವಿಪತ್ತು ಸಂವಹನ ವ್ಯವಸ್ಥೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಭಾರತದ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳಲ್ಲಿ ಇಂದು ಈ ಪರೀಕ್ಷಾರ್ಥ ಸಂದೇಶಗಳನ್ನು ರವಾನಿಸಲಾಗಿದೆ.ಈ ತಂತ್ರಜ್ಞಾನವನ್ನು ದೂರಸಂಪರ್ಕ ಇಲಾಖೆ ಮತ್ತು ಸಿ-ಡಾಟ್ ಸಂಸ್ಥೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ. ಇದು ಇಂಟರ್ನೆಟ್ ಅಥವಾ ನೆಟ್‌ವರ್ಕ್ ದಟ್ಟಣೆಯ ಮೇಲೆ ಅವಲಂಬಿತವಾಗಿಲ್ಲ. ಬದಲಾಗಿ, ನಿರ್ದಿಷ್ಟ ಪ್ರದೇಶದ ಎಲ್ಲಾ ಮೊಬೈಲ್ ಟವರ್ ಮೂಲಕ ಏಕಕಾಲದಲ್ಲಿ ಸಂದೇಶಗಳನ್ನು ರವಾನಿಸುತ್ತದೆ. ಭೂಕಂಪ, ಸುನಾಮಿ, ಚಂಡಮಾರುತ, ಮಿಂಚು ಅಥವಾ ಅನಿಲ ಸೋರಿಕೆಯಂತಹ ತುರ್ತು ಸಂದರ್ಭಗಳಲ್ಲಿ ಜನರನ್ನು ಕೇವಲ ಸೆಕೆಂಡುಗಳಲ್ಲಿ ಎಚ್ಚರಿಸಿ ಸುರಕ್ಷಿತ…
ದಾಂಡೇಲಿ/ಬೆಂಗಳೂರು: ರಾಜ್ಯದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೌಟುಂಬಿಕ ಕಲಹ ಹಾಗೂ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧ ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಇತ್ತ ರಾಜಧಾನಿ ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ರಾಜ್ಯದಲ್ಲಿ ನಡೆದ ಎರಡು ಬೇರೆ ಬೇರೆ ಕೌಟುಂಬಿಕ ಕಲಹದ ಘಟನೆಗಳಲ್ಲಿ ಇಬ್ಬರು ಬಲಿಯಾಗಿದ್ದಾರೆ. ದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧ ಹಾಗೂ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡರೆ, ಬೆಂಗಳೂರಿನಲ್ಲಿ ವರದಕ್ಷಿಣೆಗಾಗಿ ಕಿರುಕುಳ ನೀಡಿದ ಪರಿಣಾಮ ಗೃಹಿಣಿ ನೇಣಿಗೆ ಶರಣಾಗಿದ್ದಾರೆ. ಈ ಘಟನೆಗಳ ಕುರಿತು ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಹಾನಿಗೊಳಗಾಗಿವೆ. ನಷ್ಟದ ಒಟ್ಟು ಪ್ರಮಾಣದ ಬಗ್ಗೆ ಇನ್ನೂ ಮಾಹಿತಿ ತಿಳಿದುಬಂದಿಲ್ಲ ಅಗ್ನಿಶಾಮಕ ದಳ ಮತ್ತು ತುರ್ತು ಸಿಬ್ಬಂದಿಯ ಸಮಯೋಚಿತ ಕಾರ್ಯ ದೊಡ್ಡ ಅನಾಹುತವನ್ನು ತಪ್ಪಿಸಲು ಸಹಾಯ ಮಾಡಿತು. ಘಟನೆಯು ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಸಂಭವಿಸಿದ್ದರಿಂದ, ನಿವಾಸಿಗಳಲ್ಲಿ ಸ್ವಲ್ಪ ಸಮಯದವರೆಗೆ ಭಯಭೀತಗೊಂಡಿದ್ದರು
ಮಧ್ಯಪ್ರದೇಶ: ಇಲ್ಲಿನ ಉಮ್ರೆತ್ ಪೊಲೀಸ್ ಠಾಣೆ ವ್ಯಾಪ್ತಿಯ ಮುಜಾವರ್ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದು ನಾಟಕೀಯ ಅಂತ್ಯ ಕಂಡಿದೆ. ಹಸೆಮಣೆಯ ಮೇಲೆ ವರನಿಗೆ ಹಾರ ಹಾಕಬೇಕಿದ್ದ ವಧು, ಎಲ್ಲರ ಸಮ್ಮುಖದಲ್ಲೇ ವೇದಿಕೆಯಿಂದ ಕೆಳಗಿಳಿದು ಬಂದು ತನ್ನ ಪ್ರಿಯಕರನ ಕುತ್ತಿಗೆಗೆ ಹಾರ ಹಾಕಿದ ಘಟನೆ ನಡೆದಿದೆ. ಪರಸಿಯಾದಿಂದ ಬಂದಿದ್ದ ವರನ ಮೆರವಣಿಗೆಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು. ವೇದಿಕೆಯ ಮೇಲೆ ಹಾರ ವಿನಿಮಯದ (ವರಮಾಲಾ) ಶುಭ ಮುಹೂರ್ತ ಬಂದಾಗ, ವಧು ವರನತ್ತ ಹೆಜ್ಜೆ ಹಾಕುವ ಬದಲು ನೇರವಾಗಿ ಜನಸಂದಣಿಯಲ್ಲಿದ್ದ ತನ್ನ ಪ್ರಿಯಕರನತ್ತ ಓಡಿ ಹೋಗಿ ಆತನಿಗೆ ಹಾರ ಹಾಕಿದ್ದಾಳೆ. ಈ ಅನಿರೀಕ್ಷಿತ ಬೆಳವಣಿಗೆಯಿಂದ ವಿವಾಹ ಮಂಟಪದಲ್ಲಿದ್ದ ಅತಿಥಿಗಳು ಮತ್ತು ವರ ದಿಗ್ಭ್ರಮೆಗೊಂಡಿದ್ದಾರೆ. ವಧುವಿನ ಈ ಕೃತ್ಯದಿಂದ ಆಕ್ರೋಶಗೊಂಡ ಕುಟುಂಬಸ್ಥರು ಆಕೆಯನ್ನು ಥಳಿಸಿದ್ದಾರೆ. ಇದರಿಂದ ಉಭಯ ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಮದುವೆ ಮಂಟಪ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಕೊನೆಗೆ ವರನು ಮದುವೆಯನ್ನು ನಿರಾಕರಿಸಿ, ಮೆರವಣಿಗೆಯೊಂದಿಗೆ ವಧು ಇಲ್ಲದೆಯೇ ವಾಪಸ್ ತೆರಳಿದ್ದಾನೆ. ವಧು ಮತ್ತು ಆ ಯುವಕನ ನಡುವೆ…
ಮಂಗಳೂರು : ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾ ಬಂಧಿಯೊಬ್ಬ ಕಾರಾಗೃಹಕ್ಕೆ ಮರಳುವಾಗ ಗುದದ್ವಾರದಲ್ಲಿ ಮೊಬೈಲ್ ಫೋನ್ ಅಡಗಿಸಿಟ್ಟು ತಂದಿದ್ದ ಘಟನೆ ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಈ ಸಂಬಂಧ ಕಾರಾಗೃಹದ ಅಧೀಕ್ಷಕ ಶರಣಬಸಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಮೊಹಮ್ಮದ್ ತೋಹಿದ್ ಎಂಬ ವಿಚಾರಣಾ ಬಂಧಿಯನ್ನು ಏಪ್ರಿಲ್ 24ರಂದು ಚಿಕಿತ್ಸೆಗಾಗಿ ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಪ್ರಿಲ್ 29ರಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಸಂಜೆ 5:15ಕ್ಕೆ ಬೆಂಗಾವಲು ಸಿಬ್ಬಂದಿಯೊಂದಿಗೆ ಕಾರಾಗೃಹದ ಮುಖ್ಯದ್ವಾರಕ್ಕೆ ಆತನನ್ನು ಕರೆತರಲಾಯಿತು. ಮುಖ್ಯದ್ವಾರದಲ್ಲಿ ಕರ್ತವ್ಯದಲ್ಲಿದ್ದ ಕೆಎಸ್‌ಐಎಸ್‌ಎಫ್ (KSISF) ಸಿಬ್ಬಂದಿಗಳು ಎಚ್‌ಎಚ್‌ಎಂಡಿ (HHMD) ಯಂತ್ರದ ಮೂಲಕ ತಪಾಸಣೆ ನಡೆಸಿದಾಗ ಬಂಧಿಯ ಗುದದ್ವಾರದ ಬಳಿ ಅನುಮಾನಾಸ್ಪದ ಶಬ್ದ ಕೇಳಿಬಂದಿದೆ. ಅಧೀಕ್ಷಕರು ಸ್ಥಳಕ್ಕೆ ಬಂದು ವಿಚಾರಿಸಿದಾಗ, ತಾನು ಗುದದ್ವಾರದಲ್ಲಿ ಮೊಬೈಲ್ ಇಟ್ಟುಕೊಂಡಿರುವುದಾಗಿ ತೋಹಿದ್ ಒಪ್ಪಿಕೊಂಡಿದ್ದಾನೆ. ಕೂಡಲೇ ಆತನನ್ನು ಮತ್ತೆ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದಾಗ, ಆತನ ಗುದದ್ವಾರದಿಂದ ಒಂದು ಸಣ್ಣ ಗಾತ್ರದ ಮೊಬೈಲ್ ಫೋನ್ (SIA VANTAGE Pro Mini27)…
ಬೆಳ್ತಂಗಡಿ : ಮನೆಯಲ್ಲಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ರಮ (19) ಎಂಬ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾರೆ. ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿಯ ಪುತ್ರಿಯಾಗಿರುವ ರಮ, ವಾಮದಪದವು ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಏಪ್ರಿಲ್ 19ರಂದು ರಾತ್ರಿ ಮನೆಯಲ್ಲಿ ವಿಷ ಸೇವಿಸಿದ್ದ ಇವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ 10 ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿದ ರಮ, ಏಪ್ರಿಲ್ 29ರಂದು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಏಪ್ರಿಲ್ 30ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬೆಂಗಳೂರು: ಸಿಟಿಇ ಪರೀಕ್ಷೆ ವೇಳೆ ವಸ್ತ್ರಸಂಹಿತೆಯಿಂದ ಸಮಸ್ಯೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ವರು ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಆಗಿದೆ. ಹಾಗಾಗಿ ಆ ವಿದ್ಯಾರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ. ಜನಿವಾರ ಹಾಗೂ ಹಿಜಬ್‌ಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಎರಡು ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಆಗಿತ್ತು. ಆದ್ದರಿಂದ ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಮನವಿ ಮಾಡಿದ್ದರು. ಹೀಗಾಗಿ ತೊಂದರೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ ಮಾತ್ರ ಅನ್ವಯ ಆಗುವಂತೆ ಮರುಪರೀಕ್ಷೆ ನಡೆಸುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ. ಪರೀಕ್ಷೆ ಗೊಂದಲಕ್ಕೆ ಒಳಗಾದ ಪರೀಕ್ಷಾರ್ಥಿಗಳಿಗೆ ಗ್ರೇಸ್ ಅಂಕ ಕೊಡೋದು ಸಮಂಜಸ ಅಲ್ಲ. ಹಾಗಾಗಿ ಮರು ಪರೀಕ್ಷೆ ಮಾಡುತ್ತೇವೆ, ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕಳೆದ ಬಾರಿ ಕೂಡ ಗೊಂದಲ ಆಗಿತ್ತು. ಈ ಬಾರಿ ಮರು ಪರೀಕ್ಷೆ ಮಾಡೋದು ಸೂಕ್ತ ಅಂತ ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ ಸಚಿವರು.…
ಕಾಸರಗೋಡು: ಪೊಲೀಸ್ ಜೀಪು ಹಾಗೂ ಆಟೋ ರಿಕ್ಷಾ ನಡುವೆ ಉಂಟಾದ ಅಪಘಾತದಲ್ಲಿ ಆಟೋ ಚಾಲಕ ಮೃತಪಟ್ಟ ಘಟನೆ ವೆಳ್ಳರಿಕುಂಡು ಎಂಬಲ್ಲಿ ನಡೆದಿದೆ. ಆಟೋ ಚಾಲಕ ಪೂಂಗಮ್ ಚಾಲದ ರಾಜು ಮೃತಪಟ್ಟವರು. ಪೊಲೀಸ್ ಜೀಪಿನಲ್ಲಿದ್ದ ಎ ಎಸ್ ಐ ಗಾಯಗೊಂಡಿದ್ದಾರೆ. ಗುರುವಾರ ಸಂಜೆ 7:30 ರ ಸುಮಾರಿಗೆ ತಾಲೂಕು ಕಚೇರಿ ಪ್ರದೇಶದ ಬಳಿಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಪೊಲೀಸ್ ಜೀಪ್ ಮತ್ತು ಆಟೋರಿಕ್ಷಾ ಡಿಕ್ಕಿ ಹೊಡೆದಿದ್ದು. ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.
ರಾಜ್ಯದ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಹಾಗೂ ಎಎಸೈ ದರ್ಜೆಗಿಂತ ಕೆಳಹಂತದ ಪೊಲೀಸ್ ಸಿಬ್ಬಂದಿಗಳು ನಿಯಮಬಾಹಿರವಾಗಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸರ್ಕಾರಿ ವಾಹನಗಳನ್ನು ಬಳಸಿಕೊಂಡು ವಾಹನ ತಪಾಸಣಾ ನೆಪದಲ್ಲಿ ಸಾರ್ವಜನಿಕರಿಗೆ ಕಿರುಕುಳ, ಪ್ರಕರಣ ದಾಖಲಿಸುವುದಾಗಿ ಹೆದರಿಸಿ, ಬೆದರಿಸಿ ಅನಧಿಕೃತವಾಗಿ ಹಣ ವಸೂಲಿ ಮಾಡುತ್ತಿರುವ ಘಟನೆಗಳನ್ನು ಕೂಡಲೇ ನಿಲ್ಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಡಿಜಿ & ಐಜಿಪಿರವರಿಗೆ ಪತ್ರ ಬರೆದ ನಿಮಿತ್ಯ ಆಯಾ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತ ಚಟುವಟಿಕೆಗಳ ವಿರುದ್ಧ ವಿಶೇಷ ಮತ್ತು ನಿರಂತರ ಕಾರ್ಯಾಚರಣೆ ಕೈಗೊಂಡು ಸಿಬ್ಬಂದಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಠಾಣೆಯಲ್ಲಿ ಪ್ರತಿದಿನದ ರೋಲ್ ಕಾಲ್ ಸಮಯದಲ್ಲಿ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ರಾಜ್ಯದ ಎಲ್ಲಾ ಘಟಕಾಧಿಕಾರಿಗಳಿಗೆ ಪೊಲೀಸ್ ಪ್ರಧಾನ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ! -ಮೋಹನ್ ಕುಮಾರ್ ದಾನಪ್ಪಸದಸ್ಯರು,ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ










