ಮಂಗಳೂರು ನಗರದ ಪಾವೂರು ಗ್ರಾಮದ ಮಲಾರ್ ಅರಸ್ತಾನದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ಮೇಲಿನ ಆರೋಪ ಸಾಬೀತಾಗಿದೆ. ಐವರು ಆರೋಪಿಗಳು ಕೂಡ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಹಂಝ (44), ಅಝರುದ್ದೀನ್ (27), ಅಮೀರ್ ಶೇಖ್ ಯಾನೆ ಅಮ್ಮಿ (26), ಅರ್ಫಾಝ್ ಅಬ್ದುಲ್ ರಝಾಕ್ (20) ಅಥಾವುಲ್ಲ ಯಾನೆ ಅಲ್ತಾಫ್ ಅವರ ಮೇಲಿನ ಆರೋಪವು ಸಾಬೀತಾಗಿದೆ. ಪಾವೂರು ಗ್ರಾಮದ ಮಲಾರ್‌ನ ಪಳ್ಳಿಯಬ್ಬ ಯಾನೆ ಪಳ್ಳಿಯಾಕ (75) ನಾಪತ್ತೆಯಾದ ಬಗ್ಗೆ 2020ರ ಅ.29ರಂದು ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಅವರ ಮೃತದೇಹವು ಇರಾ ಗ್ರಾಮದ ಪದವು ಬಳಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹಣದ ವಿಚಾರದಲ್ಲಿ ಇವರನ್ನು ದುಷ್ಕರ್ಮಿಗಳು ಅತ್ಯಂತ ವ್ಯವಸ್ಥಿತವಾಗಿ ಹತ್ಯೆಗೈದು ಹೂತು ಹಾಕಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿತ್ತು. ಈ ಬಗ್ಗೆ ಕೊಣಾಜೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. ನ್ಯಾಯಾಧೀಶ ಬಸಪ್ಪಬಾಳಪ್ಪ…
Author: main-admin
ಮಂಗಳೂರು: ಮಕ್ಕಳಿಬ್ಬರಿಗೆ ಕುಣಿಕೆ ಬಿಗಿದು ತಾಯಿಯೊಬ್ಬಳು ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಕೊಡಿಯಾಲ ಗುತ್ತುವಿನಲ್ಲಿ ಬುಧವಾರ ನಡೆದಿದೆ. ಘಟನೆಯಲ್ಲಿ ತಾಯಿ ಹಾಗೂ ನಾಲ್ಕು ವರ್ಷದ ಪುತ್ರಿ ಸಾವಿಗೀಡಾಗಿದ್ದಾರೆ. 12ರ ಪುತ್ರಿ ಸಾವಿನ ದವಡೆಯಿಂದ ಪಾರಾಗಿದ್ದಾಳೆ. ನಗರದ ಕೊಡಿಯಾಲ ಗುತ್ತು ನಿವಾಸಿ ವಿಜಯಾ(33), ಶೋಭಿತಾ(4) ಸಾವನ್ನಪ್ಪಿದವರು. ಯಜ್ಞಾ(12) ಎಂಬಾಕೆ ಸಾವಿನ ದವಡೆಯಿಂದ ಪಾರಾಗಿದ್ದಾಳೆ. ವಿಜಯಾ ಅವರಿಗೆ ಎರಡು ವಿವಾಹವಾಗಿತ್ತು. ಆದರೆ ಮೊದಲ ಪತಿ ಮೃತಪಟ್ಟಿದ್ದರು. ಆ ಬಳಿಕ ಆರೇಳು ವರ್ಷದ ಹಿಂದೆ ವಿಜಯ ಅವರಿಗೆ ಎರಡನೇ ವಿವಾಹವಾಗಿತ್ತು. ಆದರೆ ಕೆಲ ತಿಂಗಳ ಹಿಂದೆ ಎರಡನೇ ಪತಿಯೂ ಮೃತಪಟ್ಟಿದ್ದಾರೆ. ನೇಣಿನಿಂದ ಪಾರಾದ ಯಜ್ಞಾ ಎಂಬ ಬಾಲಕಿ ಅವರ ಮೊದಲ ಪತಿಯ ಪುತ್ರಿ. ಇಂದು ಸಂಜೆ ವೇಳೆಗೆ ವಿಜಯಾ ತನ್ನಿಬ್ಬರು ಮಕ್ಕಳನ್ನು ನೇಣಿಗೆ ಹಾಕಿ ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಯಜ್ಞಾ ಎಂಬ ಪುತ್ರಿಯ ಕಾಲಡಿಗೆ ಟೇಬಲ್ ಸ್ಪರ್ಶವಾಗಿದೆ. ಪರಿಣಾಮ ಆಕೆ ಸಾವಿನ ದವಡೆಯಿಂದ ಪಾರಾಗಿದ್ದಾಳೆ. ಇದರಿಂದ ಆಕೆ ತನ್ನ ನೇಣು…
ಕಿನ್ನಿಗೋಳಿ: ಕಿನ್ನಿಗೋಳಿಸಮೀಪದ ದಮಸ್ ಕಟ್ಟೆ ಪೊಂಪೈ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗ ಇಳಿಜಾರು ಪ್ರದೇಶಕ್ಕೆ ಇಂದು ಮಧ್ಯಾಹ್ನದ ಹೊತ್ತಿಗೆ ಆಕಸ್ಮಿಕ ಬೆಂಕಿ ತಗುಲಿ ನಂದಿಸಲು ಸ್ಥಳೀಯರು ಹರಸಾಹಸ ಪಡೆಯಬೇಕಾಯಿತು.ಬೆಂಕಿಯ ಕೆನ್ನಾಲಿಗೆಯಿಂದ ಮರ ಗಿಡಗಳು ಬೆಂಕಿಗಾಹುತಿಯಾಗಿದ್ದು , ಕೂಡಲೇ ಕಾರ್ಯಪ್ರವೃತ್ತರದ ದಾಮಸ್ ಕಟ್ಟೆಯ ರೆಮೆದಿ ಅಮ್ಮ ನವರ ಇಗರ್ಜಿಯ ಧರ್ಮಗುರುಗಳು ಮತ್ತು ಸ್ಥಳಿಯರು ಸಹಕಾರದಿಂದ ಹಾಗೂ ಮೂಡಬಿದ್ರೆಯ ಅಗ್ನಿಶಾಮಕದಳ ತಂಡದಿಂದ ಬೆಂಕಿಯನ್ನು ನಂದಿಸಿ ಹೆಚ್ಚಿನ ಅಪತ್ತನ್ನು ತಪ್ಪಿಸಿದ್ದಾರೆ.
ಐಸಿಸ್ ಉಗ್ರರ ಸೋಲಿನ ನಂತರ ಸಿರಿಯಾದ ರಕ್ಷಣಾ ಶಿಬಿರಗಳಲ್ಲಿರುವ ಕೆಲ ಐಸಿಸ್ ಮಹಿಳೆಯರು ತಮ್ಮ ಇಸ್ಲಾಮಿಕ್ ಜನಸಂಖ್ಯೆಯನ್ನು ಹೆಚ್ಚಿಸುವ ದುರುದ್ದೇಶದಿಂದ ಅಲ್ಲಿನ ಹದಿಹರೆಯದ ಬಾಲಕರ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಘಟನೆಗಳು ಈಗ ಬೆಳಕಿಗೆ ಬಂದಿವೆ. 13 ವರ್ಷದ ಪುಟ್ಟ ಬಾಲಕರ ಬಳಿ ಲೈಂಗಿಕ ಸಂಬಂಧ ಬೆಳೆಸಿ ತಮ್ಮನ್ನು ಗರ್ಭವತಿಯನ್ನಾಗಿಸುವಂತೆ ಕೆಲವು ಕಟ್ಟರ್ ಐಸಿಸ್ ಮಹಿಳೆಯರು ರಕ್ಷಣಾ ಶಿಬಿರದಲ್ಲಿ ಒತ್ತಾಯಿಸುತ್ತಿದ್ದಾರೆ. ಈಶಾನ್ಯ ಸಿರಿಯಾದ ರಕ್ಷಣಾ ಶಿಬಿರ ಅಲ್-ಹೌಲ್‌ನಲ್ಲಿ ಅಹ್ಮತ್ ಮತ್ತು ಹಮೀದ್ ಎಂಬ ಇಬ್ಬರು ಬಾಲಕರು ಅಲ್ಲಿನ ಭದ್ರತಾ ಸಿಬ್ಬಂದಿಯ ಬಳಿ ತಮ್ಮನ್ನು ಮಹಿಳೆಯರು ಪೀಡಿಸುತ್ತಿದ್ದಾರೆ. ದಯವಿಟ್ಟು ನಮ್ಮನ್ನು ಬಿಡಿಸಿ ಎಂದು ವಿನಂತಿಸಿಕೊಂಡಿದ್ದಾರೆ ಈ ಘಟನೆಯ ನಂತರ ತನಿಖೆ ನಡೆಸಿದಾಗ ಈ ಕರಾಳತೆ ಬಯಲಾಗಿದೆ. 2019ರಲ್ಲಿ ಐಸಿಸ್ ಉಗ್ರರ ಸೋಲಿನ ನಂತರ ಸುಮಾರು 8 ಸಾವಿರದಷ್ಟು ಐಸಿಸ್ ಮಹಿಳೆಯರು ಮತ್ತು ಮಕ್ಕಳನ್ನು ಸಿರಿಯನ್ ಸರ್ಕಾರವು ಬಂಧಿಸಿದೆ. ಇವರ ಪೈಕಿ ವಯಸ್ಕ ಪುರುಷರನ್ನು ಪ್ರತ್ಯೇಕ ಶಿಬಿರಗಳಲ್ಲಿ ಇರಿಸಲಾಗಿದೆ. ಬಂಧಿತ ಮಹಿಳೆಯರಲ್ಲಿ ಕೆಲವರು ಐಸಿಸ್…
ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಸಾಬೀತಾಗಿರುವ ಹಿನ್ನಲೆಯಲ್ಲಿ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ಮತ್ತು ಎಫ್ ಟಿಎಸ್ಸಿ-1 (ಪೊಕ್ಸೊ) ನ್ಯಾಯಾಲಯ ಮೂರು ವರ್ಷ ಸಾದಾ ಶಿಕ್ಷೆ ವಿಧಿಸಿದೆ. ಬಜ್ಜೆ ನಿವಾಸಿ ಅಬ್ದುಲ್ ಹಮೀದ್ (50) ಶಿಕ್ಷೆಗೊಳಗಾದ ಅಪರಾಧಿ. ಅಬ್ದುಲ್ ಹಮೀದ್ 2021ರ ಜೂ.3ರಂದು ನೆರೆಮನೆಯ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಬಜ್ಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ರಾಘವೇಂದ್ರ ನಾಯ್ಕ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮತ್ತು ಎಫ್ಟಿಎಸ್ಸಿ-1(ಪೊಕ್ಸೊ) ನ್ಯಾಯಾಲಯದಲ್ಲಿ ಈತನ ಮೇಲಿದ್ದ ಆರೋಪ ಸಾಬೀತಾಗಿತ್ತು. ಈ ಹಿನ್ನಲೆಯಲ್ಲಿ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅಪರಾಧಿ ಅಬ್ದುಲ್ ಹಮೀದ್ಗೆ ಪೊಕ್ಸೊ ಕಾಯ್ದೆಯ ಕಲಂ 8ರಡಿ 3 ವರ್ಷ ಸಾದಾ ಸಜೆ ಮತ್ತು 5,000 ರೂ. ದಂಡ, ಐಪಿಸಿ ಸೆಕ್ಷನ್ 448ರಡಿ 6 ತಿಂಗಳ…
ಮಂಗಳೂರು : ಮೀನು ಸಾಗಾಟದ ಲಾರಿಯೊಂದು ಚಾಲಕನ ನಿರ್ಲಕ್ಷತನದ ಚಾಲನೆಯಿಂದ ಕಾರೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಡು ಪಣಂಬೂರು ಕೀರು ಸೇತುವೆ ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕೇರಳ ಕಡೆಗೆ ಹೋಗುತ್ತಿದ್ದ ಮೀನಿನ ಲಾರಿ ಪಡುಪಣಂಬೂರು ಕಿರು ಸೇತುವೆ ಬಳಿ ಚಾಲಕನ ನಿರ್ಲಕ್ಷ ಚಾಲನೆಯಿಂದ ಅದೇ ದಿಕ್ಕಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿದ್ದ ಸಂದೇಶ್ ಪೂಜಾರಿ ಹಾಗೂ ಅವರ ಪತ್ನಿ ಹಾಗೂ ಮಗು ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಕೆಲ ಹೊತ್ತು ಮಾತಿನ ಚಕಮಕಿ ನಡೆದಿದ್ದು, ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತು. ಕೂಡಲೇ ಸ್ಥಳಕ್ಕೆ ಧಾವಿಸಿದ ಟ್ರಾಫಿಕ್ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಬೆಂಗಳೂರು: 7ನೇ ವೇತನ ಆಯೋಗ ಜಾರಿ, ಹಳೆ ಪಿಂಚಣಿ ವ್ಯವಸ್ಥೆಯ ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಬೆನ್ನಲ್ಲೇ ಅನಧಿಕೃತವಾಗಿ ಕೆಲಸಕ್ಕೆ ಗೈರಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಆದೇಶದಲ್ಲಿ ಖಡಕ್ ಎಚ್ಚರಿಕೆ ನೀಡಿದೆ. ಈ ಬಗ್ಗೆ ಐಎಂಎ ಹಾಗೂ ಇತರೆ ವಂಚನೆ ಪ್ರಕರಣಗಳ ವಿಶೇಷಾಧಿಕಾರಿ ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ನೌಕರರು ಕಚೇರಿಗೆ ಅನಿವಾರ್ಯ ಕಾರಣಗಳಿಂದ ಹಾಜರಾಗಲು ಸಾಧ್ಯವಾಗದೇ ಇದ್ದಲ್ಲಿ, ಮುಂಚಿತವಾಗಿಯೇ, ಅಧಿಕೃತವಾಗಿ ರಜೆ ಮಂಜೂರಾತಿಯನ್ನು ಪಡೆಯುವಂತೆ ಸೂಚಿಸಲಾಗಿದೆ. ಇನ್ನೂ ಒಂದು ವೇಳೆ ಪೂರ್ವಭಾವಿಯಾಗಿ ರಜೆ ಮಂಜೂರಾತಿ ಪಡೆಯದೇ ಕರ್ತವ್ಯಕ್ಕೆ ಗೈರು ಹಾಜರಾದಲ್ಲಿ Dies Non ಎಂದು ಪರಿಗಣಿಸಿ, ಶಿಸ್ತು ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಲಾಗಿದೆ. ನಿನ್ನ ತಡರಾತ್ರಿಯವರೆಗೆ ಸಿಎಂ ಬೊಮ್ಮಾಯಿ ಹಾಗೂ ಸರ್ಕಾರಿ ನೌಕರರ ಸಂಘದ ನಡುವೆ ಬೇಡಿಕೆ ಈಡೇರಿಕೆ ಸಂಬಂಧ ಸಭೆಯಲ್ಲಿ ಚರ್ಚಿಸಲಾಗಿದೆ. ಸಿಎಂ ಬೊಮ್ಮಾಯಿಯವರು ಶೇ.7 ರಿಂದ 8ರಷ್ಟು ಮಧ್ಯಂತರ ವೇತನ ಜಾರಿಗೊಳಿಸೋದಾಗಿ…
ಬೆಂಗಳೂರು: ಡಿಜಿಪಿ ಡಿ.ರೂಪ ವಿರುದ್ದ ಮಾನನಷ್ಟ, ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ಇದೇ ವೇಳೆ ಇಂದು ಬೆಂಗಳೂರು ಮಾಜಿಸ್ಟ್ರೇಟ್ ನ್ಯಾಯಾಲದಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ನ್ಯಾಯಾಧೀಶರು ಮಾರ್ಚ್ ಮೂರಕ್ಕೆ ವಾದ ವಿವಾದವನ್ನು ಆಲಿಸುವುದಾಗಿ ನ್ಯಾಯಾಧೀಶರು ಮುಂದೂಡಿದರು. ಇದೇ ವೇಳೆ ನ್ಯಾಯಾಲದಲ್ಲಿ ರೋಹಿಣಿ ಸಿಂಧೂರಿಯವರು ಡಿ.ರೂಪ ಅವರು ವೈಯುಕ್ತಿಕವಾಗಿ ನನ್ನ ಮೇಲೆ ದಾಳಿ ನಡೆಸುತ್ತಿದ್ದು, ನನ್ನ ಮೇಲಿನ ಕೇಸ್‌ಗಳಲ್ಲಿ ಈಗಾಗಲೇ ಕ್ಲೀನ್ ಚೀಟ್ ನೀಡಲಾಗಿದೆ. ಇದರ ಹೊರತಾಗಿ ಕೂಡ ಇದರಿಂದ ನನಗೆ ನೋವಾಗುತ್ತಿದೆ. ಇದಲ್ಲದೇ ಕೋರ್ಟ್ ಕೂಡ ನನ್ನ ವಿರುದ್ದ ಮಾತನಾಡುತ್ತಿದ್ದಾರೆ. ಅಂಥ ಹೇಳಿದ್ದಾರೆ ಎನ್ನಲಾಗಿದೆ. ಇನ್ನೂ ರೋಹಿಣಿ ಸಿಂಧೂರಿಯವರ ವಿರುದ್ದ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆದೇಶ ನೀಡಿದೆ. ಈ ನಡುವೆ ತಮ್ಮ ಸಾಮಾಜಿಕ ಅಕೌಂಟ್‌ನಲ್ಲಿ ರೋಹಿಣಿ ಯವರ ವಿರುದ್ದ ರೂಪ ಅವರು ಹಲವು ಪೋಸ್ಟ್‌ಗಳನ್ನು ಹಾಕುತ್ತಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಮಣಿಪಾಲ: ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಕೊಡೇರಿ ಶಿಲ್ಪಾ ಮಾಧವ ಅವರು ಅಂಗಾಂಗ ದಾನದ ಮೂಲಕ 6 ಜೀವಗಳಿಗೆ ಬೆಳಕಾಗಿದ್ದಾರೆ. ಫೆಬ್ರವರಿ 25ರಂದು ಬೈಂದೂರು ತಾಲೂಕಿನ ಮರವಂತೆ ಬಳಿಯಲ್ಲಿ ಶಿಲ್ಪಾ ಮಾಧವ ಅವರಿಗೆ ಅಪಘಾತವಾಗಿತ್ತು. ಅವರನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ದಾಖಲಿಸಲಾಗಿತ್ತು. ಅಪಘಾತದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರ ಮೆದುಳು ನಿಷ್ಕ್ರಿಯವಾಗಿತ್ತು. ಆಸ್ಪತ್ರೆಯ ನುರಿತ ವೈದ್ಯರು ಶಿಲ್ಪಾ ಅವರನ್ನು ಉಳಿಸಲು ಸಾಕಷ್ಟು ಪ್ರಯತ್ನ ನಡೆಸಿದರೂ ಅವರು ಚೇತರಿಸಿಕೊಳ್ಳಲಿಲ್ಲ. ಕೊನೆಗೆ ಪರಿಣತ ವೈದ್ಯರು ಶಿಲ್ಪಾ ಅವರ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿದರು. ಶಿಲ್ಪಾ ಅವರ ಜೀವ ಉಳಿಸಲು ಸಾಧ್ಯವಾಗದ ವೇಳೆ ಶಿಲ್ಪಾ ಅವರ ಪತಿ ಪ್ರಸನ್ನ ಕುಮಾರ್ ಮತ್ತು ಕುಟುಂಬದ ಸದಸ್ಯರು ಅಂಗಾಂಗ ದಾನಕ್ಕೆ ಮುಂದಾದರು. ಅಂತೆಯೇ ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳನ್ನು ದಾನ ಮಾಡಲಾಯಿತು. ಈ ಮೂಲಕ ಶಿಲ್ಪಾ ಮಾಧವ ಅವರು 6 ಜೀವಗಳನ್ನು ಉಳಿಸುವ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಯಕೃತ್ ಅನ್ನು ಬೆಂಗಳೂರಿನ ಅಸ್ಟರ್ ಸಿ…
ಮಂಗಳೂರು: ಹಗ್ಗಜಗ್ಗಾಟದಲ್ಲಿ ಗೆದ್ದ ಖುಷಿಯಲ್ಲಿದ್ದಾಗಲೇ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಜೆಪ್ಪುವಿನಲ್ಲಿ ನಡೆದಿದೆ. ಕುಶಲನಾಥ ಶೆಟ್ಟಿ(50) ಮೃತ ದುರ್ದೈವಿ. ಜೆಪ್ಪು ಬಂಟರ ಸಂಘದ ವತಿಯಿಂದ ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕುಶಲನಾಥ ಶೆಟ್ಟಿ(50) ಪಾಲ್ಗೊಂಡಿದ್ದರು. ಸ್ಪರ್ಧೆಯಲ್ಲಿ ಅವರಿದ್ದ ತಂಡ ಗೆಲುವು ಸಾಧಿಸಿತ್ತು, ಸ್ಪರ್ಧೆಯ ಬಳಿಕ ಕುಳಿತಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡಿತು, ಹಾಗೂ ವಾಂತಿ ಮಾಡಿಕೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.










