Author: main-admin

ಕಸ್ಟಮ್ಸ್ ಅಧಿಕಾರಿಗಳು 1 ಕೆ.ಜಿ. 625 ಗ್ರಾಂ ಚಿನ್ನ ವಶಕ್ಕೆ ಪಡೆದ ಘಟನೆ ಮಂಗಳೂರು ಏರ್ ಪೋರ್ಟ್ ನಲ್ಲಿ ನಡೆದಿದೆ. ಫೆಬ್ರವರಿ 1ರಿಂದ 15ರವರೆಗೆ ನಡೆಸಿದ ಕಾರ್ಯಾಚರಣೆಗಳಲ್ಲಿ ಅಧಿಕಾರಿಗಳು ದುಬೈ ಮತ್ತು ಬಹ್ರೇನ್ ನಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಈ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಳ್ಳಲಾದ ಚಿನ್ನದ ಮಾರುಕಟ್ಟೆ ಮೌಲ್ಯ 91 ಲಕ್ಷದ 35 ಸಾವಿರದ 850 ರೂಪಾಯಿ ಆಗಿದೆ. ಚಿನ್ನ ಮಾತ್ರವಲ್ಲದೇ ಭಾರತೀಯ ರೂಪಾಯಿ 6 ಲಕ್ಷದ 54 ಸಾವಿರದ 750 ರೂಪಾಯಿ ಮೌಲ್ಯದ ವಿದೇಶಿ ನೋಟುಗಳನ್ನು ಓರ್ವ ಪ್ರಯಾಣಿಕನಿಂದ ವಶಕ್ಕೆ ಪಡೆಯಲಾಗಿದೆ. ಚಿನ್ನವನ್ನು ಪೇಸ್ಟ್ ರೂಪದಲ್ಲಿ ಘನ ಗಮ್‌ ನೊಂದಿಗೆ ಬೆರೆಸಿ ಅಂಡಾಕಾರದ ಪ್ಯಾಕೆಟ್‌ ಗಳಾಗಿ ಮಾಡಿ ಗುದನಾಳದಲ್ಲಿ ಮರೆಮಾಚಿ, ಟ್ರಾಲಿ ಬ್ಯಾಗ್ ನ ಹ್ಯಾಂಡಲ್ ನಲ್ಲಿ ಮರೆಮಾಚಿದ್ದು, ರಟ್ಟಿನ ಪೆಟ್ಟಿಗೆಯಲ್ಲಿ ಪೇಸ್ಟ್ ರೂಪದಲ್ಲಿ ಮರೆಮಾಚಿದ್ದು ಸೇರಿ ವಿವಿಧ ರೂಪದಲ್ಲಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳು ಹೆಚ್ಚಿನ…

Read More

ಬೆಳ್ತಂಗಡಿ: ತಾಲೂಕಿನ ಕೊಕ್ರಾಡಿಯಲ್ಲಿ ಬೈಕಿಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಉಜ್ವಲ್ ಹೆಗ್ಡೆ (19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮನೆಯಿಂದ ಮೂಡಬಿದ್ರೆಯ ಕಾಲೇಜಿಗೆಂದು ಹೊರಟಿದ್ದ ಉಜ್ವಲ್ ಚಲಾಯಿಸುತ್ತಿದ್ದ ಬೈಕಿಗೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಡಿಕ್ಕಿಹೊಡೆದಿದೆ. ಪಿಕಪ್ ಚಾಲಕ ಹರೀಶ್ ಪೂಜಾರಿ ಎಂಬವರು ಅಜಾಗರೂಕತೆಯಿಂದ ವಾಹನ ಚಲಾಯಿಸಿ ಬೈಕಿಗೆ ಡಿಕ್ಕಿ ಹೊಡೆದಿದ್ದು, ಹೊಡೆತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಉಜ್ವಲ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು

Read More

ಕಾರ್ಕಳ : ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥೋತ್ಸವದ ಸಿಡಿಮದ್ದು ಪ್ರದರ್ಶನ ವೇಳೆ ಉಂಟಾದ ಅವಘಡದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಫೆ. 18ರ ರಾತ್ರಿ ಮಾಲೆ ಪಟಾಕಿ ಸಿಡಿಯುವ ವೇಳೆ ಅವಘಡವಾಗಿದ್ದು, ಇದರಿಂದ ಓರ್ವರು ಹಿರಿಯರು ಸೇರಿದಂತೆ ಮೂವರು ಮಕ್ಕಳಿಗೆ ಗಾಯವಾಗಿದೆ. ಗಾಯಗೊಂಡವರಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗಿದ್ದು, ಅಂದೇ ಅವರು ಮನೆಗೆ ತೆರಳಿರುತ್ತಾರೆ. ಧಾರ್ಮಿಕ ದತ್ತಿ ಇಲಾಖೆಗೊಳಪಟ್ಟ ಈ ದೇವಸ್ಥಾನದ ಜಾತ್ರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ. ದುರ್ಘಟನೆ ಸಂಭವಿಸಿದ ವೇಳೆ ಜನತೆ ದಿಕ್ಕಾಪಾಲಾಗಿ ಓಡಿದ್ದು ಈ ವೇಳೆ ಕೆಲವರು ಬಿದ್ದಿರುತ್ತಾರೆ. ಅದೃಷ್ಟವಶಾತ್‌ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಇಷ್ಟೊಂದು ಭಕ್ತರು ಸೇರುವ ಕಾರಣ ಮುನ್ನೆಚ್ಚರಿಕೆಯಾಗಿ ಅಗ್ನಿಶಾಮಕ ದಳದವರು, ಪ್ರಥಮ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಬೇಕಿತ್ತು ಎನ್ನುವುದು ಸಾರ್ವಜನಿಕರ ಅಭಿಪ್ರಾಯ.

Read More

ಬೆಂಗಳೂರು : ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ (90) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಿಧನರಾಗಿದ್ದಾರೆ. ಎಸ್..ಕೆ. ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಕನ್ನಡ ಚಿತ್ರರಂಗದ ಒಬ್ಬ ಹಿರಿಯ ನಿರ್ದೇಶಕರು ಹಾಗೂ ನಿರ್ಮಾಪಕರು. ಮತ್ತೊಬ್ಬ ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. 1966ರಲ್ಲಿ ಎಂ.ಸಿ. ನರಸಿಂಹಮೂರ್ತಿಯವರೊಡಗೂಡಿ ಸಂಧ್ಯಾರಾಗ ಸಿನೆಮಾ ನಿರ್ದೇಶಿಸಿದರು. ನಂತರ ದೊರೈ-ಭಗವಾನ್ ಜೋಡಿಯು ರಾಜಕುಮಾರ್ ನಾಯಕನಟನಾಗಿರುವ ‘ಜೇಡರ ಬಲೆ’ ಚಿತ್ರವನ್ನು ನಿರ್ದೆಶಿಸಿತು. ಇದು ಕನ್ನಡದಲ್ಲಿ ಜೇಮ್ಸ್ ಬಾಂಡ್‌ ಮಾದರಿಯ ಮೊದಲ ಚಿತ್ರವಾಗಿತ್ತು. ಮುಂದಿನ ಅವರ ಎಲ್ಲಾ ಚಿತ್ರಗಳನ್ನು ಈ ನಿರ್ದೇಶಕದ್ವಯರು ಜೋಡಿಯಾಗೇ ನಿರ್ದೇಶಿಸಿದರು. ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ವಸಂತ ಗೀತ’, ‘ಆಪರೇಷನ್…

Read More

ಉಳ್ಳಾಲ : ತಾಯಿ ಗದರಿದ್ದಕ್ಕೆ ಫೆಬ್ರವರಿ 14 ರಂದು ಕೀಟನಾಶ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ವಿಧ್ಯಾರ್ಥಿನಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ. ಮೃತಳನ್ನು ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ ಧನ್ಯಾ(17) ಎಂದು ಗುರುತಿಸಲಾಗಿದ್ದು, ಈಕೆ ರಾಮಕೃಷ್ಣ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದರು. ಫೆಬ್ರವರಿ 14 ರಂದು ಮನೆಗೆ ತಡವಾಗಿ ಬಂದಿದ್ದಕ್ಕೆ ತಾಯಿ ಗದರಿದ್ದರು, ಇದಕ್ಕೆ ಮನನೊಂದ ಧನ್ಯಾ ತಾಯಿ ಪಕ್ಕದ ಮನಗೆ ತೆರಳಿದ್ದ ವೇಳೆ ಮನೆಯೊಳಗಿದ್ದ ಗೆದ್ದಲು ಹೊಡೆಯುವ ಕೀಟನಾಶಕ ಸೇವಿಸಿದ್ದಾರೆನ್ನಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಧನ್ಯಾರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರಿಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Read More

ಕಡಬ: ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಕಾಡಂಚಿನ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾಡನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(21) ಎಂಬವರು ಸೊಸೈಟಿ ಗೆ ಮನೆಯಿಂದ ಕಾಡಂಚಿನ ದಾರಿಯಲ್ಲಿ ಹೋಗುತ್ತಿದ್ದ ವೇಳೆ ನೈಲ ಎಂಬಲ್ಲಿ ಆನೆ ದಾಳಿ ನಡೆಸಿದೆ. ಯುವತಿ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೆ ಆನೆ ಅಟ್ಟಹಾಸ ಮೆರೆದಿದೆ. ರಮೇಶ್ ರೈ (55) ಸ್ಥಳದಲ್ಲಿ ಮೃತಪಟ್ಟರೆ ರಂಜಿತ ಅವರು ನೆಲ್ಯಾಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ .

Read More

ಹೊಟ್ಟೆ ಹುಳಗಳ ಸಮಸ್ಯೆ ಬಹುತೇಕ ಎಲ್ಲರಲ್ಲೂ ಇದೆ. ಜಂತು ಹುಳಗಳು ಹೊಟ್ಟೆಯಲ್ಲಿ ಸೇರಿಕೊಂಡಾಗ ಆಹಾರದ ಮೂಲಕ ನಾವು ಪಡೆಯಬೇಕಾದ ಎಲ್ಲಾ ಪೋಷಕಾಂಶಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದಾಗಿ, ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗುತ್ತದೆ, ಕ್ರಮೇಣ ದೇಹವು ದುರ್ಬಲಗೊಳ್ಳಲು ಪ್ರಾರಂಭಿಸುತ್ತದೆ. ಶುಚಿತ್ವದ ಬಗ್ಗೆ ಕಾಳಜಿ ವಹಿಸದೇ ಇದ್ದಾಗ ಜಂತು ಹುಳಗಳಾಗುತ್ತವೆ. ಜೊತೆಗೆ ಅನಾರೋಗ್ಯಕರ ಆಹಾರ ಸೇವನೆಯೂ ಇದಕ್ಕೆ ಕಾರಣ. ಅದರಲ್ಲೂ ಚಿಕ್ಕ ಮಕ್ಕಳಿಗೆ ಜಂತು ಹುಳಗಳ ತೊಂದರೆ ಸಾಮಾನ್ಯ. ಇದಕ್ಕೆ ಕೆಲವೊಂದು ಮನೆಮದ್ದುಗಳಲ್ಲಿ ಪರಿಹಾರವಿದೆ. ಕಲೋಂಜಿ : ನಮ್ಮ ಹೊಟ್ಟೆಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾದ ಅನೇಕ ಆಯುರ್ವೇದ ಗುಣಗಳು ಕಲೋಂಜಿಯಲ್ಲಿ ಕಂಡುಬರುತ್ತವೆ. 10 ಗ್ರಾಂ ಕಲೋಂಜಿ ಪುಡಿಯನ್ನು 3 ಚಮಚ ಜೇನುತುಪ್ಪದೊಂದಿಗೆ ಬೆರೆಸಿ ರಾತ್ರಿ ಮಲಗುವ ಮುನ್ನ ತಿಂದರೆ ಹುಳಗಳು ನಿವಾರಣೆಯಾಗುತ್ತವೆ. ಕಾಳುಮೆಣಸು: ಆಯುರ್ವೇದ ಔಷಧಗಳಲ್ಲಿ ಮಾತ್ರವಲ್ಲ ನಿತ್ಯದ ಅಡುಗೆಗೂ ನಾವು ಕಾಳುಮೆಣಸು ಬಳಸುತ್ತೇವೆ. ಈ ಮಸಾಲೆ ಪದಾರ್ಥ ಅತ್ಯಂತ ಪರಿಣಾಮಕಾರಿ ಔಷಧಗಳಲ್ಲೊಂದು. ಒಂದು ಲೋಟ ಮಜ್ಜಿಗೆಗೆ ಸ್ವಲ್ಪ ಕಾಳುಮೆಣಸಿನ ಪುಡಿಯನ್ನು ಬೆರೆಸಿ ರಾತ್ರಿ ಕುಡಿದರೆ ಹೊಟ್ಟೆ…

Read More

ಉಜಿರೆ : ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶಿಕ ಮೊಕ್ತೇಸರರು ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ನಾಯರು ಫೆ.19 ರಂದು ನಿಧನರಾದರು. ಮೃತರು ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು.

Read More

ಕಾಸರಗೋಡು;ರ‍್ಯಾಗಿಂಗ್‌ ಪ್ರಕರಣವೊಂದು ಪೈವಳಿಕೆ ಸರಕಾರಿ ಶಾಲೆಯಲ್ಲಿ‌ ನಡೆದಿದ್ದು, 12ನೇ ತರಗತಿ ವಿದ್ಯಾರ್ಥಿಯೋರ್ವನ ಮೇಲೆ ವಿದ್ಯಾರ್ಥಿಗಳು ಹಲ್ಲೆ ಮಾಡಿರುವುದಾಗಿ ದೂರಲಾಗಿದೆ. ಪೈವಳಿಕೆ ಕಾಯರ್ ಕಟ್ಟೆ ಜಿ.ಎಚ್.ಎಸ್ ಶಾಲೆಯ ವಿದ್ಯಾರ್ಥಿ ಮುಹಮ್ಮದ್ ಅದ್ನಾನ್ (17) ಹಲ್ಲೆಗೆ ಒಳಗಾದ ವಿದ್ಯಾರ್ಥಿ.ಈತನ ತಲೆ ಮತ್ತು ಹಣೆಗೆ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ ಎಂದು ದೂರಲಾಗಿದೆ. ಅದ್ನಾನ್ ಶುಕ್ರವಾರ ತರಗತಿ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯಾರ್ಥಿಗಳ ತಂಡ ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದೆ.ಇದೀಗ ಆತನಿಗೆ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ‌.

Read More

ಪ್ರಸಿದ್ಧ ವಿಹಾರ ತಾಣ ಪಣಂಬೂರು ಬೀಚ್ ನಲ್ಲಿ ಫೆ.19ರ ಸಂಜೆ 4:30ರಿಂದ ಡಿಜೆ ಪಾರ್ಟಿಯೊಂದನ್ನು ಆಯೋಜಿಸಲಾಗಿದ್ದು ಈಗಾಗಲೇ ಅದರ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. ಈ ಮಧ್ಯೆ ಡಿಜೆ ಪಾರ್ಟಿ ಹೆಸರಲ್ಲಿ ಕಾಲೇಜ್ ವಿದ್ಯಾರ್ಥಿ ವಿದ್ಯಾರ್ಥಿನಿಯರು ದಾರಿ ತಪ್ಪುತ್ತಿದ್ದಾರೆ, ಪೊಲೀಸ್ ಇಲಾಖೆ ಅನುಮತಿ ನೀಡಿದ್ದಾದರೂ ಹೇಗೆ ಎಂದು ಹಿಂದೂ ಸಂಘಟನೆಗಳು ಕೆಂಗಣ್ಣು ಬೀರಿವೆ. ಬೀಚ್ ಪ್ರವಾಸೋದ್ಯಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕಾಡೆ ಮಲಗಿದೆ. ಸಂಜೆ ಆರು ಗಂಟೆಯ ಬಳಿಕ ಜನಸಾಮಾನ್ಯರ ವಿಹಾರಕ್ಕೆ ಪೊಲೀಸರೇ ಇಲ್ಲಸಲ್ಲದ ಕಾರಣ ಹೇಳಿ ಅಡ್ಡಿಪಡಿಸುತ್ತಿದ್ದಾರೆ ಎಂಬ ಆರೋಪವಿದೆ. ಹೀಗಿರುವಾಗ 4:30ರಿಂದ ಬೀಚ್ ನಲ್ಲಿ ಓಪನ್ ಆಗಿ ಗುಂಡು ತುಂಡಿನ ಡಿಜೆ ಪಾರ್ಟಿ ಆಯೋಜನೆಗೆ ಅನುಮತಿ ನೀಡಲು ಕಾರಣವೇನು ಅನ್ನೋದು ಜನರ ಪ್ರಶ್ನೆ. ಮಂಗಳೂರಲ್ಲಿ ಪಬ್ ಗಳಲ್ಲಿ ಮ್ಯೂಸಿಕ್ ಹಾಕುವಂತಿಲ್ಲ ಎಂಬ ಹೊಸ ನಿಯಮವನ್ನು ಕೆಳದಿನಗಳಿಂದ ಪೊಲೀಸ್ ಇಲಾಖೆ ಹೊಸದಾಗಿ ಜಾರಿಗೆ ತಂದಿದೆ. ಇದರಿಂದ ಪಬ್ ಖಾಲಿಯಾಗಿ ಮಾಲಕರು ಕಂಗಲಾಗಿದ್ದು ಹೊರಗಿನ ಪ್ರವಾಸಿಗರು ಮಂಗಳೂರಿನ ಸಹವಾಸವೇ ಬೇಡ…

Read More