Author: main-admin

ಉಳ್ಳಾಲ: ರಾ.ಹೆ66 ರ ಕೋಟೆಕಾರು ಬಳಿಯಿಂದ ಪಿಕಪ್ ವಾಹನ ಕಳವು ನಡೆಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಆತನಿಂದ ಕಳವು ನಡೆಸಿದ ಪಿಕಪ್ ವಾಹನ ವಶಪಡಿಸಿಕೊಳ್ಳಲಾಗಿದೆ. ಕೇರಳ ಮೇಲ್ಪರಂಬ ಮಾಂಗಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ. ಜ.3 ರಂದು ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು.ಈ ಕುರಿತು ಮಾಲೀಕ ಮಹಮ್ಮದ್ ಶರೀಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಪೊಲೀಸರು ಅಂತರಾಜ್ಯ ವಾಹನ ಕಳ್ಳರ ಜಾಡು ಹಿಡಿದಾಗ, ಆರೋಪಿ ರಮ್ಸಾನ್ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ ಪಿಕಪ್ ವಾಹನ ಕಳವು ಬೆಳಕಿಗೆ ಬಂದಿದೆ. ಆರೋಪಿ ವಿರುದ್ದ ಉಳ್ಳಾಲ, ಬೆಳ್ತಂಗಡಿ, ಮಡಿಕೇರಿ, ಕೇರಳದ ಹೊಸದುರ್ಗ, ಕಾಸರಗೋಡು, ಕುಂಬಳೆ, ಬೇಡಗಂ, ಬೇಕಲ ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣಗಳು ಇವೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್, ಎಸ್.ಐ ಕೃಷ್ಣ ಕೆ.ಹೆಚ್, ಸಂತೋಷ್, ಮಂಜೇಶ್ವರ ಚಂದಾವರ, ಎಎಸ್ ಐ ಶೇಖರ…

Read More

ಉಡುಪಿ: ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶ ವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗಲಿದ್ದು, ಇಂತಹ ಅಕ್ರಮಗಳನ್ನು ತಡೆಯಲು ಹಾಗು ಇವುಗಳ ವಿರುದ್ದ ತ್ವರಿತಗತಿಯಲ್ಲಿ, ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸಿ ವಿಜಿಲ್ (cVIGIL) ಆಯಪ್‌ನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಚುನಾವಣಾ ಸಮಯದಲ್ಲಿ ಮತದಾರರಿಗೆ ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯ ಅಮಿಷ ನೀಡಬಹುದಾದ, ಹಣ ವಿತರಣೆ, ಉಡುಗೊರೆಗಳು ಹಾಗೂ ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿಯಿಲ್ಲದ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಆಸ್ತಿ ವಿರೂಪ, ಧಾರ್ಮಿಕ ಅಥವಾ ಕೋಮು ಭಾಷಣಗಳು/ಸಂದೇಶಗಳು, ಮತಗಟ್ಟೆಯ 200 ಮೀ.ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದ ಯಾವುದೇ ರೀತಿಯ ಪ್ರಲೋಭನೆ ಹಾಗೂ ಬೆದರಿಕೆ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ…

Read More

ಕುಂದಾಪುರ:  ವಿದ್ಯಾರ್ಥಿಯೊಬ್ಬ ನೀರುಪಾಲಾಗಿ ನಾಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಪಾಲ್ಸ್ ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಘಟನೆಯಲ್ಲಿ ನಾಪತ್ತೆಯಾದ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ(20) ಎಂದು ತಿಳಿದುಬಂದಿದೆ. ಮಂಗಳೂರಿನ ಬಳ್ಳಾಲ್ ಭಾಗ್ ನ ಶ್ರೀ ದೇವಿ ಕಾಲೇಜ್ ನಲ್ಲಿ ಎರಡನೇ ವರ್ಷದ ಬಿಕಾಂ ಜೊತೆಗೆ ಏವಿಯೇಷನ್‌ ಕೊರ್ಸ ಕಲಿಯುತ್ತಿದ್ದ ಚಿರಾಂತ್ ಶೆಟ್ಟಿ ಪಿಜಿಯಲ್ಲಿ ಉಳಿದುಕೊಂಡಿದ್ದ. ಗುಡ್ ಪ್ರೈಡೆ ರಜೆ ಕಳೆಯಲು ತನ್ನ ತರಗತಿಯ ಹಾಗೂ ಪಿಜಿಮೆಟ್ ಬೈಂದೂರಿನ ಕಿರ್ತನ್ ದೇವಾಡಿಗ (20), ಅಕ್ಷಯ್ ಆಚಾರಿ (20) ರವರ ಮನೆಗೆ ತನ್ನ ತರಗತಿಯವರಾದ ಆಲ್ವಿನ್, ಧರಣ್, ರೆಯಾನ್ ರವರೊಂದಿಗೆ ಬೈಂದೂರಿಗೆ ಗುರುವಾರ ರಾತ್ರಿ ಬಂದು ಅಕ್ಷಯ್ ಆಚಾರಿ ಮನೆಯಲ್ಲಿ ಉಳಿದುಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೀರ್ತನ್ ದೇವಾಡಿಗನ ಮನೆಯಲ್ಲಿ ಊಟ ಮುಗಿಸಿ 3.30ರ ಸುಮಾರಿಗೆ ಬೈಕ್ ನಲ್ಲಿ ಕೊಸಳ್ಳಿ ಪಾಲ್ಸ್ ಗೆ ಹೋಗಿದ್ದರು. ಚಿರಾಂತ್ ಶೆಟ್ಟಿ ಹೊರತು ಪಡಿಸಿ…

Read More

ಸಂಗಾರೆಡ್ಡಿ:ತೆಲಂಗಾಣದ ಆಘಾತಕಾರಿ ಘಟನೆಯೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಹಾಸ್ಟೆಲ್ ಆವರಣದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಪ್ರಾಂಶುಪಾಲರು ಮಗುವನ್ನು 15 ಕಿಮೀ ದೂರದ ಕಸದ ತೊಟ್ಟಿಯಲ್ಲಿ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ ಮಾಧ್ಯಮ ವರದಿಯ ಪ್ರಕಾರ, ಈ ಘಟನೆಯು ನಾರಾಯಣಖೇಡ್‌ನ ತೆಲಂಗಾಣ ಅಲ್ಪಸಂಖ್ಯಾತರ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಜೂನಿಯರ್ ಕಾಲೇಜಿನಲ್ಲಿ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ ಎಂಬಿಟಿ (ಮಜ್ಲಿಸ್ ಬಚಾವೋ ತೆಹ್ರೀಕ್) ವಕ್ತಾರ ಅಮ್ಜೆದ್ ಉಲ್ಲಾ ಖಾನ್ ಅವರು ಪೊಲೀಸರ ಬಳಿ ಘಟನೆಯ ಬಗ್ಗೆ ವಿಚಾರಿಸಿದ್ದಾರೆ. ವಿದ್ಯಾರ್ಥಿನಿಯು ಅಪ್ರಾಪ್ತ ವಯಸ್ಸಿನವಳಾಗಿದ್ದು, ಪ್ರಸ್ತುತ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ ಎನ್ನಲಾಗಿದೆ. ಎಂಬಿಟಿ (ಮಜ್ಲಿಸ್ ಬಚಾವೋ ತೆಹ್ರೀಕ್) ವಕ್ತಾರ ಅಮ್ಜೆದ್ ಉಲ್ಲಾ ಖಾನ್ ಮಾತನಾಡಿ ಮಾರ್ಚ್ 24 ರಂದು, ಖಾಜಾಪುರ ಗ್ರಾಮದ ನಿವಾಸಿಗಳು ಕಸದ ತೊಟ್ಟಿಯಲ್ಲಿ ಮಗುವನ್ನು ಎಸೆದಿರುವುದನ್ನು ಕಂಡು, ನಂತರ ಅವರು ಘಟನೆಯನ್ನು ಸಿರ್ಗಾಪುರ ಪೊಲೀಸರಿಗೆ ತಿಳಿಸಿದರು. ಪೊಲೀಸ್ ಸಿಬ್ಬಂದಿ ಹೆಣ್ಣು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿ ಚಿಕಿತ್ಸೆ ನೀಡಿದ ನಂತರ…

Read More

ಪುತ್ತೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಡ್ರೈವರ್ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಎ.7 ರಂದು ನಡೆದಿದೆ. ಮೃತರನ್ನು ಬೆಳಂದೂರು ಗ್ರಾಮದ ಅಬೀರ ಕುಸುಮಾಧರ ಎಂದು ಗುರುತಿಸಲಾಗಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಇವರು ಸುಮಾರು 9 ವರ್ಷಗಳಿಂದ ಕೆ.ಎಸ್.ಆರ್.ಟಿ.ಸಿ ಉದ್ಯೋಗಿಯಾಗಿದ್ದು, ಡ್ರೈವರ್ ಕಮ್ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ರಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read More

ಮೂಡುಬಿದಿರೆ : ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

Read More

ಮಂಗಳೂರು: ವಿದೇಶದಲ್ಲಿ ಉದ್ಯೋಗ, ವೀಸಾ ಕೊಡಿಸುವುದಾಗಿ ಹೇಳಿಕೊಂಡು ಹಲವಾರು ಮಂದಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸುಧೀರ್ ರಾವ್ ವಿ.ಆರ್.(42) ಎಂದು ಗುರುತಿಸಲಾಗಿದೆ. ಬಲ್ಗೇರಿಯಾ ದೇಶದಲ್ಲಿ ಉದ್ಯೋಗ-ವೀಸಾ ದೊರಕಿಸಿಕೊಡುವುದಾಗಿ ಹೇಳಿಕೊಂಡು 30ಕ್ಕೂ ಅಧಿಕ ಮಂದಿಯಿಂದ 50 ಲಕ್ಷ ರೂಪಾಯಿಗೂ ಅಧಿಕ ಹಣ ಪಡೆದು ಬಳಿಕ ವಂಚಿಸಿರುವ ಆರೋಪ ಈತನ ಮೇಲೆ ಇದೆ. ಈ ಬಗ್ಗೆ ಮೂಡಬಿದ್ರೆ ಮತ್ತು ಬಂಟ್ವಾಳ ನಗರ ಠಾಣೆಯಲ್ಲಿ 8 ಪ್ರಕರಣಗಳು ದಾಖಲಾಗಿವೆ. ಈ ಹಿಂದೆಯೂ ಸುಧೀರ್ ರಾವ್ ಕಾರು ಖರೀದಿಸುವ ಸಲುವಾಗಿ ನಕಲಿ ದಾಖಲೆ ಪತ್ರ ಸೃಷ್ಟಿಸಿ ಸೊಸೈಟಿಯಲ್ಲಿ ಅದನ್ನಿಟ್ಟು ಕಾರು ಖರೀದಿಸಿದ್ದ. ಬಳಿಕ ಕಂತು ಪಾವತಿಸದೆ ವಂಚಿಸಿದ್ದ. ಇದರಿಂದ ಜಾಮೀನು ನಿಂತವರು ಸಂಕಷ್ಟಕ್ಕೀಡಾಗಿದ್ದರು. ಈ ಬಗ್ಗೆ ಸುರತ್ಕಲ್‌ನಲ್ಲಿ 2, ಕದ್ರಿಯಲ್ಲಿ 2, ಕಂಕನಾಡಿ ನಗರ ಮತ್ತು ಪಾಂಡೇಶ್ವರ ಠಾಣೆಯಲ್ಲಿ ತಲಾ ಒಂದು ಸಹಿತ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ಆರೋಪಿಯು ಪ್ರಕರಣ ದಾಖಲಾದ ಬಳಿಕ ಪೊಲೀಸರ ಕೈಗೆ ಸಿಗದೆ…

Read More

ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮದ್ಯೆ ಗುರುವಾರ ಮಾರಾಮಾರಿ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದ ಮೆರೆವಣಿಗೆಯ ವೇಳೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮೆರೆವಣಿಗೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆನ್ನಲಾಗಿದ್ದು, ಈ ವೇಳೆ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಮುಖಂಡರ 10ಕ್ಕೂ ಹೆಚ್ಚು ಕಾರುಗಳು ಜಖಂಗೊಂಡಿವೆ. ಕಾರುಗಳ ಗಾಜು ಪುಡಿ ಪುಡಿಯಾಗಿವೆ. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಲ್ಕೈದು ಜನ ಕಾರ್ಯಕರ್ತರೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Read More

ಬಂಟ್ವಾಳ : ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿತ್ತು. ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು. ರಸ್ತೆಯ ಎರಡೂ ಬಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿರ ಬೇಕು ಎಂದು ಹೇಳಲಾಗುತ್ತಿದೆಯಾದರೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ. ಬಿಸಿರೋಡು ಮುಖ್ಯ ಪೇಟೆ ಹಾಗೂ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಇಕ್ಕೆಲಗಳಲ್ಲಿ ಬೆಂಕಿ ಬಿದ್ದ ಕಾರಣ ಕೆಲ ಹೊತ್ತು ಆತಂಕದ ವಾತವರಣ ನಿರ್ಮಾಣ ವಾಗಿತ್ತು. ಬಂಟ್ವಾಳ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಜನರನ್ನು ಚದುರಿಸಲು ಬಂಟ್ವಾಳ ನಗರ ಠಾಣಾ ಎಸ್ ಐ ರಾಮಕೃಷ್ಣ ಮತ್ತು ತಂಡದವರು ಹರಸಾಹಸ ಪಟ್ಟರು.

Read More

ಉಪ್ಪಿನಂಗಡಿ : ಮಹಿಳೆಯೋರ್ವರು ಪ್ರತಿಷ್ಠಿತ ರಾಜಕಾರಣಿ ಹಾಗೂ ಜನಪ್ರತಿನಿಧಿಯ ಜೊತೆಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ಮಹಿಳೆಯು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಈ ಹಿಂದೆ ರಾಜಕೀಯದಲ್ಲಿ ಸಕ್ರಿಯವಾಗಿದ್ದ ನೆಕ್ಕಿಲಾಡಿ ಸಮೀಪದ ಮಹಿಳೆ ಎ.5 ರಂದು ಸಂಜೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಪೋಟೊವನ್ನು ನಕಲು ಮಾಡಲಾಗಿದೆಯೋ ಎಂಬ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಫೋಟೊಗಳು ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದ್ದು, ಮುಂಬರುವ ವಿಧಾನ ಸಭಾ ಚುನಾವಣೆಯ ಮೇಲೆ ಈ ಫೋಟೋಗಳು ಪರಿಣಾಮ ಬೀರುವ ಸಾಧ್ಯತೆಯಿದೆಯೆಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ..

Read More