Author: main-admin

ಬೆಂಗಳೂರು : ಕುಡಿಯಲು ಹಣ ನೀಡದ ತಾತನನ್ನೇ ಮೊಮ್ಮಗ ಕೊಂದ ಘಟನೆ ಬೆಂಗಳೂರಿನ ಕಮ್ಮನಹಳ್ಳಿ ಸ್ಲಮ್ನಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜೋಸೆಫ್ (54) ಎಂದು ಗುರುತಿಸಲಾಗಿದೆ. ದಿನನಿತ್ಯ ಹಣಕ್ಕಾಗಿ ತಾತನೊಂದಿಗೆ ಜಗಳ ಮಾಡುತ್ತಿದ್ದ ಮೊಮ್ಮಗ ದೊಣ್ಣೆಯಿಂದ ಹಲ್ಲೆ ನಡೆಸಿ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಪ್ರಕರಣ ಸಂಬಂಧ ಆರೋಪಿ ಆಯಂಟೊನಿಯನ್ನು ಬಂಧಿಸಿರುವ ಬಾಣಸವಾಡಿ ಠಾಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರತಿನಿತ್ಯ ಕುಡಿದು ಬಂದು ಜಗಳವಾಡುತ್ತಿದ್ದ ಆಯಂಟೊನಿ ತಾತನೊಂದಿಗೆ ಜಗಳ ಮಾಡುತ್ತಿದ್ದನು. ತನಿಖೆ ಕೈಗೊಂಡ ಪೊಲೀಸರು ಪರಾರಿಯಾಗುತ್ತಿದ್ದ ಆಯಂಟೊನಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

Read More

ಮೂಡಿಗೆರೆ;ಯುವಕನನ್ನು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ ಆರೋಪದ ಮೇಲೆ ಮೂಡಿಗೆರೆ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ‌. ಮೂಡಿಗೆರೆ ಪೊಲೀಸ್ ಠಾಣೆಯ ಪೇದೆಗಳಾದ ವಸಂತ್, ಲೋಹಿತ್ ಅಮಾನತುಗೊಂಡವರಾಗಿದ್ದಾರೆ.ಇದರ ಜೊತೆಗೆಮೂಡಿಗೆರೆ ಠಾಣೆಯ ಸಬ್ ಇನ್ ಸ್ಪೆಕ್ಟರ್ ಆದರ್ಶ್ ವಿರುದ್ಧ ಇಲಾಖೆ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ. ಕಳ್ಳತನದ ಆರೋಪದ ದೂರಿನನ್ವಯ ಮೂಡಿಗೆರೆ ಠಾಣೆಯ ಪೊಲೀಸರು ದಾರದಹಳ್ಳಿ ಗ್ರಾಮದ ಮಂಜು ಎಂಬವರನ್ನು ಠಾಣೆಗೆ ಕರೆದೊಯ್ದು ಥಳಿಸಿದ್ದಾರೆಂದು ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದರು.

Read More

ಕಾಪು: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್‌ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಸಾವನ್ನಪ್ಪಿ, ಸವಾರ ಗಾಯಗೊಂಡ ಘಟನೆ ನಡೆದಿದೆ. ಮೃತ ಯುವತಿಯನ್ನು ರೋಶನಿ ಡಿಸೋಜಾ ಎಂದು ಗುರುತಿಸಲಾಗಿದೆ.ಉಡುಪಿ ಮಂಗಳೂರು ರಸ್ತೆಯಲ್ಲಿ ಮಂಗಳೂರು ಕಡೆಗೆ ರಸ್ತೆಯ ಬಲಬದಿಯಲ್ಲಿ ಡಿವೈಡರ್‌ ಪಕ್ಕದಲ್ಲಿ ಸ್ಕೂಟರ್ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಬಂದ ಬಸ್ಸಿನ ಚಾಲಕನು ತನ್ನ ಬಸ್ಸನ್ನು ಅತೀ ವೇಗ ಹಾಗೂ ನಿಲ೯ಕ್ಷ್ಯತನದಿಂದ ಚಲಾಯಿಸಿಕೊಂಡು ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದು ಏಕಾಏಕಿಯಾಗಿ ಬಸ್ಸನ್ನು ರಸ್ತೆಯ ಬಲಬದಿಗೆ ಚಲಾಯಿಸಿಕೊಂಡು ಬಂದು ಸ್ಕೂಟರ್‌ ಹಿಂದೆ ಕುಳಿತಿದ್ದ ರೋಶನಿಯವರ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದು ಬಸ್ಸನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.ಇನ್ನು ಬಸ್ಸು ರೋಶನಿಯ ಕಾಲಿಗೆ ಡಿಕ್ಕಿ ಹೊಡೆದ ಕಾರಣ ಸ್ಕೂಟರ್‌ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದ ಪರಿಣಾಮ ರೋಶನಿ ತಲೆಗೆ…

Read More

ಸುರತ್ಕಲ್: ಸುರತ್ಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಏಳನೇ ತರಗತಿ ಓದುತ್ತಿದ್ದ ಕಾಟಿಪಳ್ಳದ ಹರ್ಷಿತ್‌ (13) ಮೃತ ವಿದ್ಯಾರ್ಥಿ. ಪ್ರತೀ ವಾರದ ಕೊನೆಯಲ್ಲಿ ಸೂರಿಂಜೆಯಲ್ಲಿರುವ ತನ್ನ ಅಜ್ಜನ ಮನೆಗೆ ಹೋಗುವುದು ವಾಡಿಕೆ. ಈ ಬಾರಿಯೂ ಶಾಲೆ ಮುಗಿಸಿ ಶನಿವಾರ ತೆರಳಿದ್ದ ಹರ್ಷಿತ್‌ ರವಿವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈತನ ತಂದೆ ಸುಧಾಕರ ದೇವಾಡಿಗ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ಕಟೀಲು ಸಮೀಪದ ನಿಡ್ಡೋಡಿಯಲ್ಲಿ ಬಾವಿಯೊಳಗೆ ಬಿದ್ದಿದ್ದ ಸುಮಾರು ಒಂದು ವರ್ಷ ಪ್ರಾಯದ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ತಜ್ಞ ವೈದ್ಯರು ಮತ್ತು ಸ್ಥಳೀಯರ ನೆರವಿನಲ್ಲಿ ಕಾರ್ಯಾಚರಣೆ ನಡೆಸಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಾ ಮೇಘನಾ ಪೆಮ್ಯಯ್ಯ, ಡಾ.ಯಶಸ್ವಿ ನಾರಾವಿ, ಡಾ ಪೃಥ್ವಿ ಮತ್ತು ಡಾ. ನಫೀಸಾ ನೇತೃತ್ವದ ಮಂಗಳೂರಿನ ಚಿಟ್ಟೆಪಿಲಿ ರಕ್ಷಣಾ ತಂಡವು ಅರಣ್ಯ ಅಧಿಕಾರಿಗಳು ಮತ್ತು ಸ್ಥಳೀಯರ ಸಹಾಯದಿಂದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ತುಂಬಾ ಆಳವಾಗಿದ್ದ ಬಾವಿಯ ತಳಭಾಗದಲ್ಲಿ ಮಣ್ಣು ಜರಿದು ಬಿದ್ದು ಗುಹೆ ನಿರ್ಮಾಣವಾಗಿತ್ತು. ಅದೇ ಗುಹೆಯಲ್ಲಿ ಅಡಗಿದ್ದ ಚಿರತೆಯನ್ನು ತಜ್ಞ ವೈದ್ಯರಾದ ಡಾ. ಮೇಘನಾ ಬೋನಿನಲ್ಲಿ ಇಳಿದು ಬಂದೂಕಿನ ಮೂಲಕ ಅರಿವಳಿಕೆ ಔಷಧಿಯನ್ನು ಪ್ರಯೋಗಿಸಿದ್ದಾರೆ. ಬಳಿಕ ಬೋನಿನ ಮೂಲಕ ಬಾವಿಯಿಂದ ಚಿರತೆಯನ್ನು ಮೇಲಕ್ಕೆ ತರಲಾಗಿದೆ.

Read More

ಪುತ್ತೂರು: ಪುತ್ತೂರು ನಗರ ಠಾಣೆಯಲ್ಲಿ 2015ರಲ್ಲಿ ಚೆಕ್ ಅಮಾನ್ಯ ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತನನ್ನು ಶಾಂತಿಗೋಡು ಗ್ರಾಮದ ಅಕ್ಷಿತ್ ಶೆಟ್ಟಿ ಎಂದು ಗುರುತಿಸಲಾಗಿದೆ.ಅಕ್ಷಿತ್ ಶೆಟ್ಟಿಯನ್ನು ಪುತ್ತೂರು ನಗರ ಠಾಣಾ ಪರಮೇಶ್ವರ ಮತ್ತು ಪಿ ಸಿ ಗಿರಿಪ್ರಶಾಂತ್ ಅವರು ಇಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ಕಡಬ : ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಗುವೊಂದು ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರೆಂದು ಹೇಳಲಾಗುತ್ತಿದೆ.

Read More

ಪುತ್ತೂರು: ಕಬಕ -ಪುತ್ತೂರು ರೈಲ್ವೇ ನಿಲ್ದಾಣದ ಸಮೀಪ ಟ್ರ್ಯಾಕ್ ನ ಬಲ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಶವ ಕೊಳೆತ ಸ್ಥಿತಿಯಲ್ಲಿದ್ದರಿಂದ ಗುರುತು ಪತ್ತೆಯಾಗಿಲ್ಲ. ಗೆಜ್ಜೆ, ಸೀರೆ ಮೇಲ್ನೊಟಕ್ಕೆ ಕಾಣಿಸುತ್ತಿದ್ದು, ತಲೆ ಭಾಗ ಯಾವುದೋ ಪ್ರಾಣಿ ತಿಂದಿರುವಂತೆ ಮತ್ತು ಹುಳವಾಗಿರುವುದರಿಂದ ಮುಖ ಗುರುತು ಸಿಗುತ್ತಿಲ್ಲ. ಇನ್ನು ಸುಮಾರು 35 ರಿಂದ 40 ವರ್ಷದ ಮಹಿಳೆ ಆಗಿರಬಹುದೆಂದು ಊಹಿಸಲಾಗಿದ್ದು, ಎರಡು ಮೂರು ದಿನದ ಹಿಂದೆಯೇ ಮಹಿಳೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು, ರೈಲ್ವೇ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಚಾಮರಾಜನಗರ: ಅಪ್ರಾಪ್ತೆ ವಾಹನ ಚಾಲನೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಚಾಮರಾಜನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ನ್ಯಾಯಾಲಯದ ಮೆಟ್ಟಿಲೇರಿ ಈಗ ಲೋಕಾ ಅದಾಲತ್ ಅಲ್ಲಿ 12.500 ರೂ ಇತ್ಯರ್ಥವಾಗಿದೆ ಎಂದು ತಿಳಿದುಬಂದಿದೆ. ಪಟ್ಟಣದಲ್ಲಿ ದಿನೆ ದಿನೆ ಅಪ್ರಾಪ್ತರಿಂದ ವಾಹನ ಚಾಲನೆ, ಶಿರಸ್ತ್ರಾಣ ಧರಿಸದೆ ವಾಹನ ಸಂಚಾರ ಮಾಡುವ ಪ್ರಕರಣಗಳು ಕೂಡ ಹೆಚ್ಚುತ್ತಿದೆ ಎಂದು ಸವಿಸ್ತೃತವಾಗಿ ನಿಮ್ಮ ಕನ್ನಡ ನ್ಯೂಸ್‌ ನೌ ವರದಿ ಪ್ರಕಟಿಸಲಾಗಿತ್ತು. ಕೆಲವು ಅಪ್ರಾಪ್ತರು ವಾಹನ ಚಾಲನೆ ಮಾಡುತ್ತಿರುವ ಸಂಬಂದ ಕೆಲ ಪೊಲೀಸರು ಗೊತ್ತಿದ್ದು ಗೊತ್ತಿಲ್ಲದಂತೆ ಮೌನವಾಗಿದ್ದರು..ಕೆಲ ಪೊಲೀಸರೂ ಕೂಡ ತಮ್ಮ ಮಕ್ಕಳು ಅಪ್ರಾಪ್ತರೆಂದು ಗೊತ್ತಿದ್ದರೂ , ವಾಹನ ಚಾಲನೆ ಮಾಡೊದು ತಪ್ಪೆಂದು ಗೊತ್ತಿದ್ದರೂ ಕಾನೂನಿನ ಅರಿವಿನ ಬಗ್ಗೆ ಬೇಜವಬ್ದಾರಿತನ ಪ್ರದರ್ಶನ ಮಾಡಿದ್ದಾರೆ..ಮಾಡುತ್ತಿದ್ದಾರ ಬಗ್ಗೆ ಸುದ್ದಿ ಹಾಕಲಾಗಿತ್ತು. ಚಾಮರಾಜನಗರ ಪಟ್ಟಣದಲ್ಲಿ ಶಾಲಾ ಮಕ್ಕಳಿಂದ ವಾಹನ ಚಾಲನೆಯನ್ನ ಚಾಲನೆ ಮಾಡಿಸೊದು ತಪ್ಪು ಎಂದು ತಿಳಿದಿದ್ದರೂ ಪೋಷಕರು ಮಾತ್ರ ಉದ್ದಟತನ ಪ್ರದರ್ಶಿಸಿದ್ದಾರೆ. ಜಿಲ್ಲೇಲಿ ಇಷ್ಟು ಅಪ್ರಾಪ್ತ ಮಕ್ಕಳಿಂದ ವಾಹನ ಚಾಲನೆ ಮಾಡುತ್ತಿದ್ದರೂ ಯಾವ್ದೆ…

Read More

ಸುರತ್ಕಲ್‌: ಕ್ಷುಲಕ ಕಾರಣಕ್ಕೆ ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶನಿವಾರ ರಾತ್ರಿ ಕುಳಾಯಿ ಬಳಿ ನಡೆದಿದೆ. ಮೃತ ಯುವಕನ್ನು ಬಿಹಾರ ಮೂಲದ ಚೋಟು ಕುಮಾರ್ (21) ಎಂದು ಗುರುತಿಸಲಾಗಿದೆ. ಮೃತ ಯುವಕ ಮತ್ತು ಆರೋಪಿಗಳು ಕುಳಾಯಿಯ ಮಾರ್ಬಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಶನಿವಾರ ರಾತ್ರಿ ಊಟಕ್ಕೆ ಸಂಬಂಧಿಸಿಂತೆ ಮೂವರ ಮಧ್ಯೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ಮೂವರೂ ಗಾಯಗೊಂಡಿದ್ದು, ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಛೋಟು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡಿದ್ದ ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More