Author: main-admin

ಕೇರಳ : ಕೇರಳದ ವಧುವೊಬ್ಬಳು ಬಿಳಿ ಕೋಟ್ ಧರಿಸಿ ಸ್ಕೆತಾಸ್ಕೋಪ್ ಹಿಡಿದು ಪ್ರಾಯೋಗಿಕ ಪರೀಕ್ಷೆ ಬರೆದಿರುವ ವಿಡಿಯೋ ವೈರಲ್ ಆಗಿದೆ. ಮದುವೆಯ ದಿನದಂದು ಪರೀಕ್ಷೆ ಬರೆಯಲು ಬಂದ ಯುವತಿ ನೆಟ್ಟಿಗರ ಮೆಚ್ಚುಗೆಗೆ ವ್ಯಕ್ತವಾಗಿದ್ದಾರೆ.ಈ ವೀಡಿಯೊವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳಲಾಗಿದ್ದು, ಮತ್ತು ಇತರ ಸಾಮಾಜಿಕ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಧು ಶ್ರೀ ಲಕ್ಷ್ಮಿ ಅನಿಲ್ ಎಂದು ಗುರುತಿಸಲಾಗಿದ್ದು, ಬೆಥನಿ ನವಜೀವನ್ ಕಾಲೇಜ್ ಆಫ್ ಫಿಸಿಯೋಥೆರಪಿಯ ವಿದ್ಯಾರ್ಥಿನಿ. ಆಕೆಯ ಪರೀಕ್ಷೆಯ ದಿನಾಂಕವು ತನ್ನ ಮದುವೆಯ ದಿನಾಂಕ ಒಟ್ಟಿಗೆ ಬಂದಿದ್ದರಿಂದ ಮದುವೆಯ ಉಡುಪು ಹಾಗೂ ಮೇಕ್‌ಅಪ್ , ಚಿನ್ನದ ಆಭರಣಗಳನ್ನು ಧರಿಸಿ ಪರೀಕ್ಷೆ ಬರೆದಿರುವ ವಿಡಿಯೋ ವೈರಲ್ ಆಗಿದೆ.

Read More

ಬೆಂಗಳೂರು : ಕಾಂತಾರ ಸಿನೆಮಾ ಬಂದ ಮೇಲೆ ದೈವದ ವೇಷ ಧರಿಸಿ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡುವುದು ಇದೀಗ ಹೆಚ್ಚಾಗಿದ್ದು, ಈ ನಡುವೆ ಬೆಂಗಳೂರಿನ ಕಾಲೇಜಿನಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ವರಾಹಂ ರೂಪಂ ಹಾಡಿಗೆ ನರ್ತಿಸುತ್ತಿದ್ದ ವಿಧ್ಯಾರ್ಥಿ ಮೇಲೆ ದೈವದ ಆವಾಹನೆ ಆಗಿರುವ ಘಟನೆ ನಡೆದಿದೆ. ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಹೊಂಬೇಗೌಡ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜಿನಲ್ಲಿ ನಡೆದಿದೆ. ದ್ವೀತಿಯ ಪಿಯುಸಿಯ ವಿಶಾಲ್ ದೈವ ಅವಾಹನೆಗೆ ಒಳಗಾದ ವಿದ್ಯಾರ್ಥಿ. ವಿಶಾಲ್ ಪಂಜುರ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದ. ದೈವ ಆವಾಹನೆಯಾಗುತ್ತಿದ್ದಂತೆ ವೇದಿಕೆ ಮೇಲಿಂದ ಕೆಳಗೆ ಬಂದು ನರ್ತಿಸಿದ್ದಾನೆ. ಕೂಡಲೇ ಎಚ್ಚೆತ್ತ ನಾಲ್ಕೈದು ಮಂದಿ ಬಂದರೂ ವಿಶಾಲ್​ನನ್ನು ಸಮಾಧಾನಪಡಿಸಲು ಸಾಧ್ಯವಾಗಿಲ್ಲ‌. ವಿಶಾಲ್ ಮೇಲೆ ದೈವ ಆವಾಹನೆಯಾಗಿ ಉದ್ವೇಗಕ್ಕೆ ಒಳಗಾಗುತ್ತಿದ್ದಂತೆ ಆಯೋಜಕರು ಹಾಡನ್ನು ಅರ್ಧಕ್ಕೇ ನಿಲ್ಲಿಸಿದ್ದಾರೆ. ವಿದ್ಯಾರ್ಥಿಯ ಆರ್ಭಟ ಕಂಡು ಕಾಲೇಜು ವಾರ್ಷಿಕೋತ್ಸವಕ್ಕೆ ಬಂದಿದ್ದ ನೋಡುಗರು ಶಾಕ್ ಆಗಿದ್ದಾರೆ.

Read More

ವೀಳ್ಯದೆಲೆಯಲ್ಲಿ ಕ್ಯಾಲ್ಸಿಯಂ ಅಂಶವು ಹೇರಳವಾಗಿದೆ. ಜೊತೆಗೆ ಕೆಮ್ಮು, ಶೀತ ಸಮಸ್ಯೆಯಿರುವವರು ವೀಳ್ಯದೆಲೆಯಿಂದ ತಯಾರಿಸಿದ ರಸಂ ಸೇವಿಸಿ. ಇದನ್ನು ತಯಾರಿಸುವ ವಿಧಾನ ಹೇಗೆಂದು ನೋಡೋಣ. ಬೇಕಾಗುವ ಸಾಮಾಗ್ರಿಗಳು ವೀಳ್ಯದೆಲೆ 2 ಬೆಳ್ಳುಳ್ಳಿ 5 ಎಸಳುಕಾಳುಮೆಣಸು 10ಜೀರಿಗೆ 1/2 ಚಮಚಒಣಮೆಣಸಿನಕಾಯಿ 1ಟೊಮೆಟೊ 2ಹುಣಸೆ ರಸಕೊತ್ತಂಬರಿ ಸೊಪ್ಪು ಸ್ವಲ್ಪಕರಿ ಬೇವು ಸ್ವಲ್ಪಉಪ್ಪು ರುಚಿಗೆ ತಕ್ಕಷ್ಟುಎಣ್ಣೆ ಮಾಡುವ ವಿಧಾನ ಮೊದಲು ಮಿಕ್ಸಿ ಜಾರಿಗೆ ಬೆಳ್ಳುಳ್ಳಿ, ಕಾಳುಮೆಣಸು, ಜೀರಿಗೆ, ಒಣ ಮೆಣಸಿನಕಾಯಿ ಮತ್ತು ಸಣ್ಣಗೆ ಹೆಚ್ಚಿದ ವೀಳ್ಯದೆಲೆಯನ್ನು ಹಾಕಿ ತರಿತರಿಯಾಗಿ ಪುಡಿ ಮಾಡಿಕೊಳ್ಳಿ. ಹಾಗೇ ಟೊಮೆಟೊವನ್ನು ರುಬ್ಬಿಟ್ಟುಕೊಳ್ಳಿ. ಹಾಗು ಹುಣಸೆಹಣ್ಣನ್ನು ನೆನೆಸಿ ರಸ ತೆಗೆದಿಟ್ಟುಕೊಳ್ಳಿ. ಒಂದು ಪ್ಯಾನ್ ಗೆ ಸ್ವಲ್ಪ ಎಣ್ಣೆ ಹಾಕಿ ರುಬ್ಬಿದ ಪುಡಿ ಹಾಕಿ ಸ್ವಲ್ಪ ಹುರಿಯಿರಿ. ನಂತರ ಅದಕ್ಕೆ ರುಬ್ಬಿದ ಟೊಮೆಟೊ, ಸ್ವಲ್ಪ ಹುಣಸೆ ರಸ, ಅಗತ್ಯಕ್ಕೆ ತಕ್ಕಂತೆ ನೀರು ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಕುದಿಸಿ. ಕೊನೆಯಲ್ಲಿ ಕರಿಬೇವು ಮತ್ತು ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿ 5 ನಿಮಿಷಗಳ…

Read More

ಮಂಗಳೂರು : ಬಸವರಾಜ ಬೊಮ್ಮಾಯಿ ಅವರೇ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಪುತ್ತೂರಿನಲ್ಲಿ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅಮಿತ್ ಶಾ, ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಸ್ಪಷ್ಟ ಸಂದೇಶ ರವಾನಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕೈ ಬಲಪಡಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಬಿಜೆಪಿಯ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತಂತೆ ವಿಪಕ್ಷಗಳು ಎತ್ತಿರುವ ದ್ವನಿಗೆ ಪೂರ್ಣ ವಿರಾಮ ಹಾಕಿರುವ ಅಮಿತ್ ಶಾ ಅವರು ರಾಜ್ಯ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ಮಂಗಳೂರು ಬಂದರಿನ ಅಭಿವೃದ್ಧಿಗೆ ನಾವು ಪಣ ತೊಟ್ಟಿದ್ದೇವೆ. 2.5 ಸಾವಿರ ಕೋಟಿ ವೆಚ್ಚದ 5 ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ. ಹಾಗಾಗಿ,ನೀವು ಜೆಡಿಎಸ್‌ಗೆ ಮತ ಹಾಕಿದರೆ ಕಾಂಗ್ರೆಸ್‌ಗೆ ಮತ ಹಾಕಿದಂತೆ. ಬಿಜೆಪಿಗೆ ಮತ ಹಾಕಿದರೆ ನವಭಾರತ, ನವ ಕರ್ನಾಟಕ ನಿರ್ಮಾಣಕ್ಕಾಗಿ ಮತ ಚಲಾಯಿಸಿದಂತೆ ಎಂದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ನಿಟ್ಟಿನಲ್ಲಿ ಇಂದು 14 ಐಎಎಸ್ ಹಾಗೂ ಓರ್ವ ಕೆಎಎಸ್ ಅಧಿಕಾರಿಯನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ಸರ್ಕಾರವು, ಕಾಮರ್ಸ್ ಮತ್ತು ಇಂಡಸ್ಟ್ರೀಯಲ್ ಡಿಪಾರ್ಮೆಂಟ್ ನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದತಂತ ಡಾ.ರಮಣ ರೆಟ್ಟಿ ಇ.ವಿ ಅವರನ್ನು ಗೌರ್ನಮೆಂಟ್ ಕಮ್ ಡೆವಲಪ್ ಮೆಂಟ್ ಕಮೀಷನರ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನಿಯೋಜಿಸಿದೆ. ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಕಪೀಲ್ ಮೋಹನ್ ಅವರಿಗೆ, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ, ಹೆಚ್ಚುವರಿ ಹೊಣೆಗಾರಿಕೆ ವಹಿಸಿದೆ. ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಕುಮಾರ್ ನಾಯಕ್ ಜಿ ಅವರನ್ನು ಬಿಡಿಎ ಕಮೀಷನರ್ ಆಗಿ ನೇಮಕ ಮಾಡಿದೆ. ಉಮಾಶಂಕರ್ ಎಸ್ ಆರ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ, ರಶ್ಮಿ ವಿ ಮಹೇಶ್ ಅವರನ್ನು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಡಾ.ಸೆಲ್ವಕುಮಾರ್…

Read More

ಮಂಗಳೂರು : ಮಂಗಳೂರಿನ ಮೀನುಗಾರ ಬೋಟುಗಳ ಮೇಲೆ ಕಲ್ಲು ಎಸೆದು ದಾಳಿ ನಡೆಸಿ ಹಲ್ಲೆಗೈದ ದುರಂತ ಘಟನೆ ಬೆಳಕಿಗೆ ಬಂದಿದೆ. ಕನ್ಯಾಕುಮಾರಿ ಬಳಿ ತಮಿಳುನಾಡು ವೀನುಗಾರರು ಈ ದುಷ್ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿದೆ. 7-8 ಅಡಿ ಆಳದಲ್ಲಿ ಮೀನುಗಾರಿಗೆ ತೆರಳಿದ್ದ ಮಂಗಳೂರಿನ ಬೋಟುಗಳನ್ನು ಸುತ್ತುವರಿದು ಹಿಗ್ಗಾಮುಗ್ಗಾ ಕಲ್ಲುಗಳನ್ನು ಎಸೆಯುವ ಮೂಲಕ ಈ ದಾಳಿ ನಡೆಸಿದ್ದಾರೆ. ಕಲ್ಲೇಟಿನಿಂದ ಮಂಗಳೂರಿನ ಮೀನುಗಾರರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Read More

ವಿಟ್ಲ: ಮಂಗಳೂರಿನ ಅಡ್ಯಾರ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಮಾಣಿಲ ನಿವಾಸಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಪಕಳಕುಂಜ ಬಾಳೆಕಾನ ನಿವಾಸಿ ಗೋಪಾಲಕೃಷ್ಣ ಮಣಿಯಾಣಿರವರ ಪುತ್ರ ಕಾರ್ತಿಕ್ (24) ಮೃತ ದುರ್ದೈವಿ. ಕಾರ್ತಿಕ್ ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಯಾರ್ ಬಳಿ ಅಪಘಾತ ನಡೆದಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿಅಲ್ ಖೈದಾ ಉಗ್ರ ಸಂಘಟನೆ ಜೊತೆಗೆ ಸಂಪರ್ಕದಲ್ಲಿದ್ದ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಧಣಿಸಂದ್ರದ ಮಂಜುನಾಥ ನಗರದಲ್ಲಿ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳಿಂದ ಕಾರ್ಯಾಚರಣೆ ನಡೆಸಿ ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ ಆರೀಫ್ ನನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಶಂಕಿತ ಉಗ್ರ ಆರೀಫ್ ಅಲ್ ಖೈದಾ ಉಗ್ರ ಸಂಘಟನೆ ಜೊತೆಗೆ ಸಂಪರ್ಕದಲ್ಲಿದ್ದ ಎನ್ನಲಾಗಿದ್ದು, ಸದ್ಯ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ಅಧಿಕಾರಿಗಳು ಆರೀಫ್ ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ.

Read More

ಮಸೀದಿ ಪ್ರವೇಶಿಸಲು ಮುಸ್ಲಿಂ ಮಹಿಳೆಯರಿಗೆ ಯಾವುದೇ ರೀತಿಯ ನಿರ್ಬಂಧ ಇರಬಾರದು. ಹಾಗೇ ನಿರ್ಬಂಧವನ್ನು ಹೇರಿದ್ದಲ್ಲಿ ಅದನ್ನು ಅಕ್ರಮ ಎಂದು ಘೋಷಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯ ಕುರಿತಂತೆ ಸದ್ಯ, ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸ್ಪಷ್ಟನೆ ನೀಡಿದೆ. ಫೆಬ್ರುವರಿ 2020ರಲ್ಲಿ ವಕೀಲರಾದ ಸಂದೀಪ್ ತಿವಾರಿ ಮತ್ತು ರಾಮೆಶ್ವರ್ ಗೋಯಲ್ ಅವರ ಸುಪ್ರೀಂಕೋರ್ಟ್​ಗೆ ಫರ್​ಹಾ ಅನ್ವರ್ ಶೇಖ್ ಅವರು ಈ ಕುರಿತಾಗಿ ಅರ್ಜಿ ಸಲ್ಲಿಸಿದ್ದರು. ಮಸೀದಿ ಪ್ರವೇಶಕ್ಕೆ ಇರುವ ನಿರ್ಬಂಧವನ್ನು ಅಸಂವಿಧಾನಿಕ ಜೊತೆಗೆ ಅಕ್ರಮ ಎಂದು ಘೋಷಿಸಬೇಕೆಂದು ಮನವಿ ಸಲ್ಲಿಸಿದ್ದರು. ಇದಕ್ಕೆ ಕಾರಣವನ್ನು ಕೂಡ ಅರ್ಜಿದಾರರು ನೀಡಿದ್ದು, ಈ ನಿರ್ಬಂಧವು ಎಲ್ಲ ಭಾರತೀಯರಿಗೆ ಸಮಾನತೆ, ತಾರತಮ್ಯ ಇಲ್ಲದ ಬದುಕು ಮತ್ತು ಧಾರ್ಮಿಕ ಸ್ವಾತಂತ್ರ್ಯವನ್ನು ಖಚಿತಪಡಿಸುವ ಸಂವಿಧಾನದ 14, 15, 21, 25 ಮತ್ತು 29ನೇ ವಿಧಿಗಳನ್ನು ಉಲ್ಲಂಘಿಸುತ್ತವೆ ಎಂಬ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದರು.ಇಸ್ಲಾಂ ಧರ್ಮದ ಪವಿತ್ರ ಗ್ರಂಥವಾದ ಕುರಾನ್ ಅಥವಾ ಪ್ರವಾದಿ ಮೊಹಮದ್ ಪೈಗಂಬರ್ ಅವರ ವಾಣಿಗಳಲ್ಲಿ ಮಹಿಳೆಯರಿಗೆ ಮಸೀದಿ ಪ್ರವೇಶ…

Read More

ಹರಿಯಾಣ : ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರನ್ನು ರೋಗಿಗಳು ಗುರುತಿಸಲು ಸುಲಭವಾಗಲು ಹರಿಯಾಣ ಸರ್ಕಾರ ಹೊಸ ಡ್ರೆಸ್ ಕೋಡ್ ನೀತಿಯನ್ನು ಜಾರಿಗೆ ತಂದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರಿಗೆ ಏಕರೂಪತೆಯನ್ನು ತರಲು ಆಸ್ಪತ್ರೆಯ ಸಿಬ್ಬಂದಿ ಡೆನಿಮ್ ಜೀನ್ಸ್, ಪಲಾಝೋ ಪ್ಯಾಂಟ್, ಬ್ಯಾಕ್‌ಲೆಸ್ ಟಾಪ್ಸ್ ಹಾಗೂ ಸ್ಕರ್ಟ್ಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಮಹಿಳಾ ವೈದ್ಯರು ಮೇಕಪ್ ಹಾಗೂ ಭಾರವಾದ ಆಭರಣಗಳನ್ನು ಧರಿಸುವಂತಿಲ್ಲ ಮಾತ್ರವಲ್ಲದೇ ಉಗುರುಗಳನ್ನು ಉದ್ದವಾಗಿ ಬೆಳೆಸುವಂತಿಲ್ಲ. ಪುರುಷರು ತಮ್ಮ ಕಾಲರ್‌ಗಿಂತಲೂ ಉದ್ದವಾಗಿ ಕೂದಲನ್ನು ಬೆಳೆಸುವಂತಿಲ್ಲ ಎನ್ನಲಾಗಿದೆ. ‘ಡ್ರೆಸ್ ಕೋಡ್ ಅನ್ನು ಅನುಸರಿಸದ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ. ವೈದ್ಯರನ್ನು ರೋಗಿಗಳು ಗುರುತಿಸಲು ಸುಲಭವಾಗಲು ಈ ಹೊಸ ರೂಲ್ಸ್‌ ಜಾರಿಗೆ ಮಾಡಲಾಗಿದೆ ಎಂದು ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಮಾಹಿತಿ ನೀಡಿದ್ದಾರೆ.

Read More