ತಿರುವನಂತಪುರಂ: ಕೇರಳದಲ್ಲಿ ಡೆಂಗ್ಯೂ ಆತಂಕದ ಜೊತೆಗೆ 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಇದರ ಪರಿಣಾಮ ಇದೀಗ ಹೈ ಅಲರ್ಟ್ ಘೋಷಿಸಲಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಬಾಲಕನ ಮೊದಲ ಸಂಪರ್ಕಿತರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ ಎಂದಿದ್ದಾರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕನ ಮಾದರಿಗಳನ್ನು ಪುಣೆ ಎನ್‌ಐವಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇದೀಗ ವರದಿ ಬಂದಿದ್ದು, ನಿಫಾ ವೈರಸ್ ದೃಢಪಟ್ಟಿದೆ. ನಿಫಾ ವೈರಸ್ ಖಚಿತವಾಗುತ್ತಿದ್ದಂತ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬಾಲಕನನ್ನು ಇದೀಗ ಕೋಝಿಕೋಡ್ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದೀಗ ಬಾಲಕನ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಪೋಷಕರು ಸೇರಿದಂತೆ ಮೊದಲ ಸಂಪರ್ಕಿತರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದೆ. ಇವರ ಮಾದರಿಗಳನ್ನು ಸಂಗ್ರಹಿಸಿ ಪುಣೆಗೆ ಕಳುಹಿಸಲಾಗಿದೆ ಎಂದು ಸಚಿವೆ ತಿಳಿಸಿದ್ದಾರೆ. 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಸದ್ಯ ಬಾಲಕನಿಗೆ ವೆಂಟಿಲೇಟರ್ ಬೆಂಬಲದೊಂದಿಗೆ…
Author: main-admin
ಕುವೈತ್ ನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಬೆಂಕಿ ಅವಘಡಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವದಹನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಕುವೈತ್ ನ ಅಬ್ಬಾಸಿಯಾದ ಅಪಾರ್ಟ್ ಮೆಂಟ್ ನಿವಾಸದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಮ್ಯಾಥ್ಯೂಸ್ ವರ್ಗೀಸ್ ಮುಳಕಲ್ (40), ಪತ್ನಿ ಲಿನಿ ಅಬ್ರಹಾಂ (35), ಮಕ್ಕಳಾದ ಐರಿನ್ (14) ಹಾಗೂ ಇಸಾಕ್ (9) ಮೃತ ದುರ್ದೈವಿಗಳು. ಕೇರಳದ ಕೊಚ್ಚಿಯಲ್ಲಿನ ನೆಡುಂಬಸ್ಸರಿ ಮೂಲದ ಮ್ಯಾಥ್ಯೂಸ್ ಹಾಗೂ ಕುಟುಂಬ ಕಳೆದ 15 ವರ್ಷಗಳಿಂದ ಕುವೈತ್ ನ ಅಬ್ಬಾಸಿಯಾದಲ್ಲಿ ನೆಲೆಸಿದ್ದರು. ಲಿನಿ ಆರೋಗ್ಯ ಸಚಿವಾಲಯದ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಕ್ಕಳಾದ ಐರಿನ್ ಹಾಗೂ ಇಸಾಕ್ 9 ಹಾಗೂ 4ನೇ ತರಗತಿಯಲ್ಲಿ ಓದುತ್ತಿದ್ದರು. ತಡರಾತ್ರಿ ಮನೆಯ ರೂಮಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಮನೆಗೆ ವ್ಯಾಪಿಸಿದೆ. ನಾಲ್ವರು ಸಜೀವದಹನವಾಗಿದ್ದಾರೆ.
ಉಡುಪಿ: ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದಲ್ಲಿ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ. ತೀರಾ ಬಸವಳಿದ ಸ್ಥಿತಿಯಲ್ಲಿದ್ದ ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ. ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ. ಗಾಯಗೊಂಡ ಎಲ್ಲರು ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳೀಯವಲ್ಲದ ಎಲ್ಲಿಂದಲೋ ಬಂದ ಈ ನಾಯಿಗೆ ಹುಚ್ಚು ಹಿಡಿದಿರುವುದನ್ನು ಸ್ಥಳೀಯರು ಗಮನಿಸಿದರು. ಬಳಿಕ ನಾಯಿಯು ತೀರಾ ಸುಸ್ತಾಗಿ ಉಡುಪಿಯ ನಾರ್ತ್ ಶಾಲೆಯ ಆವರಣದಲ್ಲಿ ಬಂದು ಬಿದ್ದಿರುವುದನ್ನು ಸಾರ್ವಜನಿಕರು ಗುರುತಿಸಿ, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಿಗೆ ತಿಳಿಸಿದರು. ನಿತ್ಯಾನಂದ ಒಳಕಾಡು ತಕ್ಷಣ ನಗರಸಭೆ ಪೌರಾಯುಕ್ತ ರಾಯಪ್ಪ ಹಾಗೂ ಪ್ರಾಣಿದಯಾ ಸಂಘದವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಹಾಗೂ ಪ್ರಾಣಿದಯಾ ಸಂಘದ ಮಂಜುಳಾ ಹಾಗೂ ಪೃಥ್ವಿ ಪರಿಶೀಲನೆ ನಡೆಸಿದರು. ನಂತರ ಪಶು ವೈದ್ಯರನ್ನು ಕರೆಸಿ ನಾಯಿಗೆ ಚಚ್ಚುಮದ್ದು ನೀಡಲಾಯಿತು ಎಂದು ತಿಳಿದುಬಂದಿದೆ.
ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ವೊಂದು ಕಾರಿಗೆ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ (ಜು.20) ಕೊಪ್ಪಲಂಗಡಿಯಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುವಾಗ ಅದೇ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ -ಕಾರು ಪರಸ್ಪರ ಮುಖಾಮುಖಿ ಢಿಕ್ಕಿಯಾದ ಪರಿಣಾಮ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ. ಮೃತಪಟ್ಟ ಬೈಕ್ ಸವಾರ ತಮಿಳುನಾಡು ಮೂಲದ ಯುವಕನಾಗಿದ್ದು, ಈ ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಅಪಘಾತದ ಹೊಡೆತಕ್ಕೆ ಸ್ಥಳದಲ್ಲಿದ್ದ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಸ್ಥಳಕ್ಕೆ ಕಾಪು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಮಡಿಕೇರಿ: ದಂಪತಿಯ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಟೋಳಿ ಗ್ರಾಮದಲ್ಲಿ ಜು.20ರ ಶನಿವಾರ ನಡೆದಿದೆ. ಶಿಲ್ಪಾ ಸೀತಮ್ಮ (38) ಗುಂಡೇಟಿನಿಂದ ಮೃತಪಟ್ಟಿರುವ ಮಹಿಳೆಯಾಗಿದ್ದು, ಗುಂಡು ಹಾರಿಸಿದ ಪತಿ ನಾಯಕಂಡ ಸಿ.ಬೋಪಣ್ಣ (43) ಬಂದೂಕಿನೊಂದಿಗೆ ಪೊಲೀಸರಿಗೆ ಶರಣಾಗಿದ್ದಾರೆ. ಪತಿ-ಪತ್ನಿ ನಡುವೆ ಕಳೆದ ಕೆಲ ದಿನಗಳಿಂದ ಕೌಟುಂಬಿಕ ಕಲಹ ನಡೆಯುತ್ತಿದ್ದು, ಇಂದು (ಜು.20ರ ಶನಿವಾರ) ಬೆಳಿಗ್ಗೆ ಇದು ವಿಕೋಪಕ್ಕೆ ತಿರುಗಿ ಬೋಪಣ್ಣ ಅವರು ಶಿಲ್ಪಾ ಸೀತಮ್ಮ ಅವರ ಮೇಲೆ ಗುಂಡು ಹಾರಿಸಿರುವುದಾಗಿ ತಿಳಿದು ಬಂದಿದೆ. ನಾಯಕಂಡ ಸಿ.ಬೋಪಣ್ಣ ಅವರು ವಿರಾಜಪೇಟೆ ಪೊಲೀಸರಿಗೆ ಶರಣಾಗಿದ್ದು, ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಕೊಲೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವಿರಾಜಪೇಟೆ ನಗರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಅಪರಾಧ ಪತ್ತೆ ದಳದ ತಜ್ಞರ ತಂಡ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಮಂಗಳೂರು: ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರಾವಳಿಯನ್ನು ಹೊರ ಜಿಲ್ಲೆಗಳ ಜತೆಗೆ ಬೆಸೆಯುವ ಎಲ್ಲ ಘಾಟಿ ರಸ್ತೆಗಳಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್ ಅವರಿಗೆ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಪತ್ರ ಬರೆದು ವಿನಂತಿಸಿದ್ದರು. ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳು ಬೆಂಗಳೂರು ಮಂಗಳೂರು ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸದ್ದಾರೆ. ಸಂಚರಿಸಲಿರುವ ರೈಲುಗಳು : ಜುಲೈ 19ರಂದು ರೈಲು ಸಂಖ್ಯೆ 06547 ಎಸ್‌ಬಿಸಿ ಬೆಂಗಳೂರಿನಿಂದ ಹೊರಡಲಿದೆ. ಜುಲೈ 20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿದೆ. ಜುಲೈ 21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್‌ಗೆ ಬರಲಿದೆ. ಜುಲೈ 21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು…
ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಎಂಬಲ್ಲಿ ನಡೆದಿದೆ. ಆಶ್ನಿ (21) ಮೃತ ವಿದ್ಯಾರ್ಥಿನಿ. ಆಶ್ನಿ ತಂದೆಯ ಜೊತೆ ಗದ್ದೆಗೆ ದನ ಕಟ್ಟಲು ಹೋದ ವೇಳೆ ಈ ಘಟನೆ ನಡೆದಿದೆನ್ನಲಾಗಿದೆ. ಮೊದಲಿಗೆ ಮನೆಯ ಸಾಕು ನಾಯಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ನಾಯಿ ಹೊರಳಾಡುವುದನ್ನು ನೋಡಿ ರಕ್ಷಣೆಗೆ ಮುಂದಾದ ಆಶ್ನಿ, ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಮಂಗಳೂರು ನಗರದ ಪಣಂಬೂರು ಸಮೀಪದ ತೋಟಬೆಂಗ್ರೆಯಲ್ಲಿ ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ಮನೆಯ ಹಿಂಭಾಗದಿಂದ ಯುವಕನೊಬ್ಬ ವೀಡಿಯೋ ಮಾಡುತ್ತಿದ್ದಾಗ ಸಿಕ್ಕಿಬಿದ್ದು, ಸ್ಥಳೀಯರಿಂದ ಏಟು ತಿಂದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಬೆಂಗ್ರೆ ನಿವಾಸಿ ಮೊಹಮ್ಮದ್ ರಂಶಿದ್ (21)ಆರೋಪಿ ಎಂದು ಗುರುತಿಸಲಾಗಿದೆ ಈತ ಮಾದಕ ದ್ರವ್ಯ ವ್ಯವಸನಿಯೂ ಆಗಿದ್ದ ಎನ್ನಲಾಗಿದೆ. ಈತನನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸರು ಆರೋಪಿಯ ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು : ಗಂಧದ ಮರ ಕಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಗಂಧದ ಮರ ಕಡಿದು ಕಳುವು ಮಾಡಲು ಯತ್ನಿಸಿದ ಆರೋಪಿಗೆ 10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ದಂಡದ ಮೊತ್ತವನ್ನು 50 ಸಾವಿರಕ್ಕೆ ಹೆಚ್ಚಿಸಿ 5 ವರ್ಷ ಶಿಕ್ಷೆ ಖಾಯಂಗೊಳಿಸಿದೆ. ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ದೇವಾರಾಜಾಚಾರಿ ಎಂಬುವವರಿಗೆ ಈ ಶಿಕ್ಷೆನೀಡಲಾಗಿದೆ. ಸೆಕ್ಷನ್ 86 ಹಾಗೂ 87 ಅಡಿಯಲ್ಲಿ ತಲಾ 50 ಸಾವಿರ ದಂಡಕ್ಕೆ ಏರಿಕೆ ಆದೇಶಿಸಿದೆ. ಹಾಗೂ ಕೃತ್ಯ ಎಸಗಿದವರಿಗೆ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ಮತ್ತು 50 ಸಾವಿರಕ್ಕಿಂತ ಕಡಿಮೆ ದಂಡ ವಿಧಿಸುವಂತಿಲ್ಲ ಎಂದು ಹೇಳಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 20-07-2024 ರಂದು ರಜೆಯನ್ನು ಘೋಷಿಸಲಾಗಿದೆ.