Author: main-admin

ಅತ್ಯಾಚಾರಕ್ಕೊಳಗಾದ 15 ವರ್ಷದ ಬಾಲಕಿಯ ಗರ್ಭಪಾತಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಅತ್ಯಂತ ಮಹತ್ವದ ಅವಲೋಕನ ಮಾಡಿದೆ. “ಅತ್ಯಾಚಾರ ಸಂತ್ರಸ್ತೆಯರ ವಿಷಯದಲ್ಲಿ ಗರ್ಭಪಾತ ಮಾಡಿಸಿಕೊಳ್ಳಲು ಯಾವುದೇ ನಿರ್ದಿಷ್ಟ ಕಾಲಮಿತಿ ಇರಬಾರದು” ಎಂದು ನ್ಯಾಯಾಲಯ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಯಮಾಲ್ಯ ಬಾಗ್ಚಿ ಅವರಿದ್ದ ಪೀಠವು, 30 ವಾರಗಳ ಗರ್ಭಿಣಿಯಾಗಿರುವ ಬಾಲಕಿಯ ಪ್ರಕರಣವನ್ನು ಆಲಿಸಿತು. “ಗರ್ಭಪಾತ ಮಾಡಿಸಿಕೊಳ್ಳಬೇಕೇ ಅಥವಾ ಬೇಡವೇ ಎಂಬ ಅಂತಿಮ ನಿರ್ಧಾರ ಸಂತ್ರಸ್ತೆ ಮತ್ತು ಆಕೆಯ ಪೋಷಕರಿಗೆ ಬಿಟ್ಟಿದ್ದು. ವೈದ್ಯಕೀಯ ತಜ್ಞರು ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕಷ್ಟೇ” ಎಂದು ಕೋರ್ಟ್ ಸ್ಪಷ್ಟಪಡಿಸಿತು. ಅತ್ಯಾಚಾರದಿಂದ ಉಂಟಾದ ಗರ್ಭಧಾರಣೆಯನ್ನು ಮುಂದುವರಿಸುವಂತೆ ಬಾಲಕಿಯನ್ನು ಒತ್ತಾಯಿಸುವುದು ಆಕೆಗೆ ಮತ್ತಷ್ಟು ನೋವು ಮತ್ತು ಜೀವನಪರ್ಯಂತ ಮಾನಸಿಕ ಕಲೆಗಳನ್ನು ನೀಡುತ್ತದೆ. “ಆಕೆ ಕೇವಲ 15 ವರ್ಷದ ಮಗು, ಈಗ ಆಕೆ ಓದಬೇಕಾದ ವಯಸ್ಸು. ಇಂತಹ ಪರಿಸ್ಥಿತಿಯಲ್ಲಿ ಆಕೆಯನ್ನು ತಾಯಿಯನ್ನಾಗಿ ಮಾಡುವುದು ಎಷ್ಟು ಸರಿ? ಆಕೆ ಅನುಭವಿಸುತ್ತಿರುವ ಅವಮಾನ ಮತ್ತು ನೋವನ್ನು ಕಲ್ಪಿಸಿಕೊಳ್ಳಿ” ಎಂದು ಪೀಠವು…

Read More

ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ನೀರಕಟ್ಟೆ ಎಂಬಲ್ಲಿ ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ(ಏ.29) ನಡೆದಿದೆ. ಪೆರಿಯಡ್ಕ ಸಮೀಪದ ಬೊಳ್ಳಾವು ನಿವಾಸಿ ಶಿವಣ್ಣ ಸಪಲ್ಯ ಎಂಬವರ ಪುತ್ರ ಕಾರ್ತಿಕ್(19) ಅಪಘಾತದಲ್ಲಿ ಮೃತಪಟ್ಟ ಯುವಕ. ಈತ ಉಪ್ಪಿನಂಗಡಿ ಪದವಿ ಮಹಾವಿದ್ಯಾಲಯದ ಅಂತಿಮ ಬಿಎ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದನು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಯುವತಿ ಹಿರೆಬಂಡಾಡಿ ಗ್ರಾಮದ ಎಲಿಯ ನಿವಾಸಿಯಾಗಿರುವ ಅಧ್ಯಾಪಕಿಯೊಬ್ಬರ ಮಗಳು ಎಂದು ತಿಳಿದುಬಂದಿದೆ. ಚತುಷ್ಪಥ ರಸ್ತೆಯಾಗಿರುವ ನೀರಕಟ್ಟೆ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಘಟನೆಗೆ ಸ್ಕೂಟಿ ಸವಾರನ ಅತೀ ವೇಗದ ಚಾಲನೆ ಕಾರಣವೆಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಕಾರ್ತಿಕ್ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ವರದಿ…

Read More

ಮಂಜೇಶ್ವರ: ಕಾರಿನಲ್ಲಿ ಸಾಗಿಸುತ್ತಿದ್ದ 50 ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಅಲಂಪಾಡಿಯ ಸಿ ಎ.ಮುಹಮ್ಮದ್ ಸಹಲ್ , ಎರ್ನಾಕುಲಂ ನ ಅರುಣ್ ಕುಮಾರ್, ವಡಗರದ ಎಂ. ಪಿ ಅನೂಷ್ ಬಂಧಿತರು. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಪಾವೂರು ಸಮೀಪ ಸ್ವಿಫ್ಟ್ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಎಂಡಿಎ ಎ ಪತ್ತೆಯಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More

ಎಂಸಿಸಿ ಬ್ಯಾಂಕ್ ವತಿಯಿಂದ 2026 ಏಪ್ರಿಲ್ 25 ಮತ್ತು 26ರಂದು ಗೋವಾದ Courtyard by Marriottನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳು, ಮುಂದಿನ ವ್ಯವಸ್ಥಾಪಕರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗಳನ್ನು ಚರ್ಚಿಸುವುದು ಹಾಗೂ ಅಂತರರಾಜ್ಯ ಸಹಕಾರವನ್ನು ಉತ್ತೇಜಿಸುವುದು ಈ ಸಂವಾದದ ಮುಖ್ಯ ಉದ್ದೇಶವಾಗಿತ್ತು. ಈ ಸಂವಾದದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗೋವಾ ಬೀನೌಲಿಂನ ಕ್ಯಾಟೆಕೆಟಿಕ್ಸ್ ಆಯೋಗದ ಕಾರ್ಯದರ್ಶಿ ವಂದನೀಯ ಫಾ| ವಿಜಯ ಮಚಾದೊ, ಗೋವಾ ಅರ್ಬನ್ ಸಹಕಾರ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಶ್ರೀ ಗೋಪಾಲಕೃಷ್ಣ ವೈ. ನಾಯಕ್, IIM Kozhikode ನ ವಿಸಿಟಿಂಗ್ ಪ್ರೊಫೆಸರ್ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಸಿಜೆ ಲಾಯ್ನಲ್ ಅರಾನ್ಹಾ, ದೈಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಶ್ರೀ ವಾಲ್ಟರ್ ನಂದಳಿಕೆ,…

Read More

ಮಂಗಳೂರು: ಉಳ್ಳಾಲದ ಮುಕ್ಕಚೇರಿಯಲ್ಲಿ 2017ರ ಅ.4ರಂದು ರಾತ್ರಿ ಝುಬೇರ್ ಎಂಬವರ ಕೊಲೆ ಮತ್ತು ಇಲ್ಯಾಸ್ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮುಕ್ಕಚೇರಿಯ ಅಬ್ದುಲ್ ರಹ್ಮಾನ್ ಸುಹೇಲ್ ಎಂಬಾತನಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಝುಬೇರ್ ಮತ್ತು ಇಲ್ಯಾಸ್ ಮಾತನಾಡುತ್ತಿದ್ದ ವೇಳೆ ತಂಡವೊಂದು ಮಾರಕಾಯುಧದಿಂದ ದಾಳಿ ನಡೆಸಿ ಝುಬೇರ್‌ನನ್ನು ಕೊಲೆ ಮಾಡಿತ್ತು. ತಡೆಯಲು ಹೋದ ಇಲ್ಯಾಸ್ ನಿಗೂ ತಲವಾರಿನಿಂದ ದಾಳಿ ಮಾಡಿ ಗಂಭೀರ ಗಾಯಗೊಳಿಸಿತ್ತು. ಈ ಬಗ್ಗೆ ಅಂದಿನ ಇನ್‌ಸ್ಪೆಕ್ಟರ್ ಗೋಪಿಕೃಷ್ಣ ಕೆ.ಆರ್. ಆರೋಪಿಗಳಾದ ಅಬ್ದುಲ್ ರಹಿಮಾನ್ ಸುಹೃಲ್, ನಿಝಾಮ್ ಯಾನೆ ನಿಝಾಮುದ್ದೀನ್, ತಾಜುದ್ದೀನ್, ಮುಸ್ತಫಾ ಯಾನೆ ಮುಹಮ್ಮದ್ ಮುಸ್ತಫಾ, ಅಲ್ತಾಫ್, ಆಸೀಫ್ ಯಾನೆ ಮಂದ ಆಸೀಫ್, ನಾಸೀರ್ ಯಾನೆ ಕಡಪ್ಪರ ನಾಸಿರ್ ಎಂಬವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಿಝಾಮ್ ಯಾನೆ ನಿಝಾಮುದ್ದೀನ್, ತಾಜುದ್ದೀನ್, ಮುಸ್ತಫಾ ಎಂಬವರಿಗೆ 2022ರ ಎಪ್ರಿಲ್ 20ರಂದು ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು. ಆಸೀಫ್…

Read More

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್‌ಗೆ ಬೆಂಗಳೂರಿನ ವಿಶೇಷ ಎನ್‌ಐಎ (NIA) ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.ವಿಚಾರಣೆ ವೇಳೆ ಶಾರೀಕ್ ತನ್ನ ಮೇಲಿನ ಎಲ್ಲಾ ಆರೋಪಗಳನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಶಿಕ್ಷೆಯನ್ನು ಪ್ರಕಟಿಸಿದೆ. ನವೆಂಬರ್ 19, 2022 ರಂದು ಮಂಗಳೂರಿನ ಕಂಕನಾಡಿ ಸಮೀಪ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ತನಿಖಾಧಿಕಾರಿಗಳ ವರದಿಯ ಪ್ರಕಾರ, ಆರೋಪಿ ಶಾರೀಕ್ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನವನ್ನು ಗುರಿಯಾಗಿಸಿಕೊಂಡು ಬಾಂಬ್ ಇಡಲು ತೆರಳುತ್ತಿದ್ದ. ಆದರೆ ಮಾರ್ಗಮಧ್ಯೆ ಗರೋಡಿ ಎಂಬಲ್ಲಿ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದ್ದರಿಂದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿತ್ತು. ಈ ಸ್ಫೋಟದಲ್ಲಿ ಶಾರೀಕ್ ಸ್ವತಃ ಗಂಭೀರವಾಗಿ ಗಾಯಗೊಂಡಿದ್ದಲ್ಲದೆ, ಅಮಾಯಕ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರೂ ತೀವ್ರವಾಗಿ ಗಾಯಗೊಂಡಿದ್ದರು. ಸುಮಾರು ಮೂರು ತಿಂಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಎನ್‌ಐಎ…

Read More

ಇಂದೋರ್:  ರಸ್ತೆಯಲ್ಲಿ ಸಂಚರಿಸುವಾಗ ಸಣ್ಣದೊಂದು ಅಚಾತುರ್ಯ ನಡೆದರೂ ಸಂಯಮ ಕಳೆದುಕೊಳ್ಳುವ ‘ರೋಡ್ ರೇಜ್’ ಪ್ರಕರಣಗಳು ಸಮಾಜದಲ್ಲಿ ಆತಂಕ ಮೂಡಿಸುತ್ತಿವೆ. ಇದಕ್ಕೆ ಇತ್ತೀಚಿನ ಸಾಕ್ಷಿಯೆಂಬಂತೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಕಾರು ಸ್ವಲ್ಪ ತಾಗಿದ್ದಕ್ಕೆ ವ್ಯಕ್ತಿಯೊಬ್ಬ ಅತಿರೇಕದ ವರ್ತನೆ ತೋರಿದ್ದಾನೆ. ಕಾರಿನೊಳಗೆ ಪುಟ್ಟ ಮಕ್ಕಳಿದ್ದಾರೆ ಎಂದು ಪೋಷಕರು ಕೈಮುಗಿದು ಅಳುತ್ತಾ ಬೇಡಿಕೊಂಡರೂ ಕಿಂಚಿತ್ತೂ ಕರುಣೆ ತೋರದ ಆ ವ್ಯಕ್ತಿ, ಕೋಲು ಹಿಡಿದು ಹಲ್ಲೆಗೆ ಮುಂದಾಗಿರುವ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಇಂದೋರ್‌ನ ಜನನಿಬಿಡ ರಸ್ತೆಯೊಂದರಲ್ಲಿ ಎರಡು ವಾಹನಗಳ ನಡುವೆ ಸಣ್ಣ ಮಟ್ಟದ ಡಿಕ್ಕಿ ಸಂಭವಿಸಿತ್ತು. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಲಿ ಅಥವಾ ವಾಹನಗಳಿಗೆ ದೊಡ್ಡ ಮಟ್ಟದ ಹಾನಿಯಾಗಲಿ ಸಂಭವಿಸಿರಲಿಲ್ಲ. ಆದರೆ, ಇದರಿಂದ ಕೆರಳಿದ ಮತ್ತೊಂದು ವಾಹನದ ಚಾಲಕ ಕೂಡಲೇ ತನ್ನ ವಾಹನದಿಂದ ಕೆಳಗಿಳಿದು ದೊಡ್ಡದೊಂದು ಕೋಲನ್ನು ಹಿಡಿದು ರಸ್ತೆಯಲ್ಲೇ ಪುಂಡಾಟಿಕೆ ಆರಂಭಿಸಿದ್ದಾನೆ. ಕುಟುಂಬವಿದ್ದ ಕಾರಿನ ಹತ್ತಿರ ಬಂದ ಆತ, ವಿಂಡ್‌ಶೀಲ್ಡ್ ಮತ್ತು ಕಿಟಕಿಗಳ ಮೇಲೆ ಹೊಡೆಯಲು ಮುಂದಾಗಿದ್ದಾನೆ.…

Read More

ಉಡುಪಿ: ಅಕ್ರಮ ಮರಳು ಸಾಗಣೆ ಮತ್ತು ಓವರ್‌ಲೋಡ್ ನಿಯಂತ್ರಣಕ್ಕಾಗಿ ಉಡುಪಿ ಜಿಲ್ಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 13 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ರಸ್ತೆಗಳಲ್ಲಿ, ಚೆಕ್‌ಪೋಸ್ಟ್‌ಗಳಲ್ಲಿ ಮತ್ತು ಪ್ರಮುಖ ಮಾರ್ಗಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಇಟ್ಟುಕೊಂಡು ಈ ಕಾರ್ಯಾಚರಣೆ ಕೈಗೊಳ್ಳಲಾಯಿತು. ಅನುಮತಿಸಲಾದ ಮಿತಿಗಿಂತ ಹೆಚ್ಚಿನ ಮರಳನ್ನು ಸಾಗಿಸುತ್ತಿದ್ದ ಹಾಗೂ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ವಾಹನಗಳನ್ನು ತಡೆದು ಪರಿಶೀಲನೆ ನಡೆಸಲಾಯಿತು.ತಪಾಸಣೆ ವೇಳೆ ಹಲವಾರು ಲಾರಿಗಳು ಓವರ್‌ಲೋಡ್, ಅಗತ್ಯ ದಾಖಲೆಗಳ ಕೊರತೆ ಮತ್ತು ಪರವಾನಗಿ ಉಲ್ಲಂಘನೆಗಳಲ್ಲಿ ತೊಡಗಿರುವುದು ಪತ್ತೆಯಾಯಿತು. ಈ ಹಿನ್ನೆಲೆಯಲ್ಲಿ ಒಟ್ಟು 13 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಎಲ್ಲಾ ಲಾರಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ. ಸಂಬಂಧಿತ ಕಾನೂನುಗಳ ಅಡಿಯಲ್ಲಿ ದಂಡ ಸೇರಿದಂತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.ವಾಹನ ಮಾಲೀಕರು ಮತ್ತು ಚಾಲಕರಿಗೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆಯ ನಿರ್ದೇಶನದಂತೆ ಏಪ್ರಿಲ್ 25ರಂದು ಈ ಕಾರ್ಯಾಚರಣೆ ನಡೆದಿದ್ದು, ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿ,…

Read More

ಬೆಂಗಳೂರು: ಹೊರರಾಜ್ಯದ ವಿದ್ಯಾರ್ಥಿಗಳ ನಡುವಿನ ಕ್ಷುಲ್ಲಕ ಗಲಾಟೆ ದರೋಡೆ ಮತ್ತು ಕೊಲೆ ಯತ್ನದಂತಹ ಗಂಭೀರ ಅಪರಾಧಕ್ಕೆ ತಿರುಗಿದೆ. ಕಾಲೇಜಿನ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ದರೋಡೆ ಮಾಡಿದ್ದ ತಮಿಳುನಾಡು ಮೂಲದ ಆರು ಮಂದಿ ವಿದ್ಯಾರ್ಥಿಗಳನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ನಗರದ ಖಾಸಗಿ ಕಾಲೇಜಿನಲ್ಲಿ ಹೋಟೆಲ್ ಮ್ಯಾನೇಜ್‌ಮೆಂಟ್ ಪದವಿ ವ್ಯಾಸಂಗ ಮಾಡುತ್ತಿರುವ ಕೇರಳ ಮೂಲದ ಇರ್ಫಾನ್ ಮೊಹಮ್ಮದ್ ಮತ್ತು ಅವರ ಸ್ನೇಹಿತರು ಕೋಣನಕುಂಟೆಯ ಪವಮಾನ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಏಪ್ರಿಲ್ 17ರ ರಾತ್ರಿ ಇರ್ಫಾನ್, ಆದರ್ಶ್ ಮತ್ತು ಡಾರ್ವಿನ್ ಮನೆಯಲ್ಲಿದ್ದಾಗ, ರಾತ್ರಿ ಸುಮಾರು 10:25ಕ್ಕೆ ಹಿಂಬಾಗಿಲಿನ ಮೂಲಕ ಒಳನುಗ್ಗಿದ ಆರು ಮಂದಿಯ ತಂಡ ಚಾಕು ತೋರಿಸಿ ಬೆದರಿಸಿದೆ. ಹಣ ನೀಡಲು ನಿರಾಕರಿಸಿದಾಗ ಮನಬಂದಂತೆ ಹಲ್ಲೆ ನಡೆಸಿ, ನಾಲ್ಕು ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ಹಾಗೂ ಯುಪಿಐ ಮೂಲಕ ಬಲವಂತವಾಗಿ ಹಣವನ್ನು ವರ್ಗಾಯಿಸಿಕೊಂಡು ಪರಾರಿಯಾಗಿದ್ದರು. ತನಿಖೆಯ ವೇಳೆ ಬಯಲಾದ ಸ್ಫೋಟಕ ಸತ್ಯದ ಪ್ರಕಾರ,…

Read More

ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಹಾಡಹಗಲೇ ಮನೆಗೆ ಬಂದು ಮನೆಯಲ್ಲಿ ಮಹಿಳೆಯರೇ ಇರುವುದನ್ನು ಖಚಿತಪಡಿಸಿಕೊಂಡು ಮನೆಗೆ ನುಗ್ಗಿ ಬಾಗಿಲ ಚಿಲಕ ಹಾಕಿ ಮನೆ ಮಂದಿಯನ್ನು ಭೀತಿಗೊಳಪಡಿಸಿದ್ದ ಅಪರಿಚಿತ ವ್ಯಕ್ತಿಯನ್ನು ಉಪ್ಪಿನಂಗಡಿಯ ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಇಲ್ಲಿನ ಬ್ಯಾಂಕ್ ರಸ್ತೆಯ ಬಳಿ ವೃದ್ದೆಯೋರ್ವರು ಮಾತ್ರ ಮನೆಯಲ್ಲಿದ್ದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ವ್ಯಕ್ತಿಯು ವೃದ್ದೆ ನೀರು ತರಲೆಂದು ಅಡುಗೆ ಕೋಣೆಗೆ ಹೋದ ವೇಳೆ ನೇರವಾಗಿ ಮನೆಗೆ ನುಗ್ಗಿದವನೇ ಮನೆಯ ಬಾಗಿಲ ಚಿಲಕ ಹಾಕಿದ್ದ ಇದನ್ನು ಕಂಡು ವೃದ್ದೆ ಭೀತಿಯಿಂದ ಬೊಬ್ಬಿರಿಸಿದಾಗ ಅಲ್ಲಿಂದ ಓಡಿ ಹೋಗಿ ಸನಿಹದಲ್ಲೇ ಇದ್ದ ಇನ್ನೊಂದು ಒಂಟಿ ಮಹಿಳೆ ಇರುವ ಮನೆಯ ಕಟ್ಟಡದ ಕೊಠಡಿಯೊಂದಕ್ಕೆ ನುಗ್ಗಿ ಬಾಗಿಲ ಚಿಲಕ ಹಾಕಲೆತ್ನಿಸಿದ್ದ. ಇದನ್ನು ಗಮನಿಸಿದ ಮನೆ ಮಹಿಳೆ ಮತ್ತು ಸ್ಥಳೀಯರು ಬೊಬ್ಬೆ ಹೊಡೆದಾಗ ಅಲ್ಲಿಂದ ಪರಾರಿಯಾದ ಈತ ಉದ್ಯಮಿಯೋರ್ವರ ಮನೆಯ ಹಿಂಭಾಗದ ಕಟ್ಟಡದಲ್ಲಿ ಅವಿತು ಕೂತಿದ್ದ. ಅವನನ್ನು ಹಿಂಬಾಲಿಸಿಕೊಂಡು ಬಂದ ಸ್ಥಳೀಯರು ಈ ಬಗ್ಗೆ ಉದ್ಯಮಿಗೆ ಮಾಹಿತಿ ನೀಡಿ…

Read More