Author: main-admin

ಉಡುಪಿ: ದೂರವಾಣಿ ಕರೆ ಮಾಡಿದ ವ್ಯಕ್ತಿಯೊಬ್ಬ ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಎಂದು ಮಹಿಳೆಯೊಬ್ಬರನ್ನು ನಂಬಿಸಿ, ಕಾರ್ಡ್ ಸಂಖ್ಯೆ ಪಡೆದು ಬ್ಯಾಂಕ್ ಖಾತೆಯಿಂದ 1,04,500 ಹಣವನ್ನು ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ನಡೆದಿದೆ. ಪ್ರತಿಭಾ ಎಸ್. ಹೆಗ್ಡೆ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ, ತಾನು ಬ್ಯಾಂಕ್‌ ಅಧಿಕಾರಿ ಎಂದು ನಂಬಿಸಿ, ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಈ ಕೂಡಲೇ ರಿನೀವಲ್ ಮಾಡುವಂತೆ ತಿಳಿಸಿ, ಕಾರ್ಡ್ ನಂಬ್ರ ಹಾಗೂ ಒಟಿಪಿಯನ್ನು ಪಡೆದು, ಕೆನರಾ ಬ್ಯಾಂಕ್‌ ಬ್ರಹ್ಮಾವರ ಶಾಖೆಯಲ್ಲಿ ಹೊಂದಿದ್ದ ಖಾತೆಯಿಂದ ಕ್ರಮವಾಗಿ 50,000, 50,000, 2,000 ಮತ್ತು 2,500 ರೂ. ವರ್ಗಾವಣೆ ಮಾಡಿದ್ದಾರೆ ಎಂದು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಆಹಾರ ತಿನ್ನುವಾಗ ಗಂಟಲಿನಲ್ಲಿ ಸಿಲುಕಿಕೊಳ್ಳುವುದು ಬದಲು ಗುದನಾಳದಲ್ಲಿ ಸಿಲುಕಿರುವುದನ್ನು ಎಲ್ಲಿಯಾದರೂ ಕೇಳಿದ್ದೀರಾ ? ಆದರೆ ಕೊಲಂಬಿಯಾದ ಬಾರಾನೋವಾದಿಂದ ಬಂದ 40 ವರ್ಷದ ವ್ಯಕ್ತಿಯೊಬ್ಬನಿಗೆ ಹೀಗೆಯೇ ಆಗಿದೆ. ವಿಪರೀತ ಹಿಂಬದಿ ನೋವು ಅನುಭವಿಸುತ್ತಿದ್ದು, ನಡೆದಾಡಲು ಕಷ್ಟಪಡುತ್ತಿದ್ದ ಈ ವ್ಯಕ್ತಿಯನ್ನು ಪರಿಶೀಲಿಸಿದಾಗ ಗುದನಾಳದಲ್ಲಿ ಸೌತೆಕಾಯಿ ಇರುವುದು ತಿಳಿದುಬಂದಿದೆ. ಈ ಬಗ್ಗೆ ಕೇಳಿದಾಗ ವ್ಯಕ್ತಿ ತಾನು ಹೆಚ್ಚಿನ ಪ್ರಮಾಣದಲ್ಲಿ ಸೌತೆಕಾಯಿ ಸೇವಿಸುತ್ತೇನೆ. ಹೀಗಾಗಿ ಹೊಟ್ಟೆಯಲ್ಲಿ ಸೌತೆಕಾಯಿ ಬೆಳೆದು ಹೀಗಾಗಿರಬಹುದು ಎಂದಿದ್ದಾನೆ. ಆತನ ಮಾತಿಗೆ ವೈದ್ಯರು ದಂಗಾಗಿದ್ದಾರೆ. ತೀವ್ರ ನೋವಿನಿಂದ ಬಂದಾಗ ಎಕ್ಸ್​ರೇ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸೌತೆಕಾಯಿ ಸಿಲುಕಿ ಹಾಕಿಕೊಂಡಿರುವುದು ಗೋಚರಿಸಿದೆ. ಸೌತೆಕಾಯಿ ತನ್ನ ದೇಹದೊಳಗೆ ಹೇಗೆ ಸಿಲುಕಿಕೊಂಡಿದೆ ಎಂದು ತನಗೆ ತಿಳಿದಿಲ್ಲ ಎಂದು ವ್ಯಕ್ತಿ ಹೇಳಿದ್ದಾನೆ. ಬಹಳಷ್ಟು ಸೌತೆಕಾಯಿಗಳನ್ನು ತಿನ್ನುವ ಕಾರಣ ಸೌತೆಕಾಯಿ ಬೀಜದಿಂದಾಗಿ ಜೀರ್ಣಾಂಗ ವ್ಯವಸ್ಥೆಯೊಳಗೆ ಸೌತೆಕಾಯಿ ಬೆಳೆದಿರಬಹುದು ಎಂದು ಆತ ತಿಳಿಸಿದ್ದಾನೆ. ಇದು ಕಾರಣವಲ್ಲದಿದ್ದರೂ ವೈದ್ಯರು ಮಾತ್ರ ಈಗ ನಿಜ ಕಾರಣ ತಿಳಿಯಲು ಉತ್ಸುಕರಾಗಿದ್ದಾರೆ.

Read More

ಮಂಗಳೂರು : ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಆತ್ಮಹತ್ಯೆ ಮಾಡಿಕೊಂಡವರು  ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು , ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ. ಮೃತರನ್ನು ಮೈಸೂರಿನ ವಾಣಿ ವಿಲಾಸ ಬಡಾವಣೆಯ ದೇವೆಂದ್ರಪ್ಪ, ಅವರ ಪತ್ನಿ ನಿರ್ಮಲಾ ,ಮತ್ತಯ ಅವರ ಅವಳಿ ಮಕ್ಕಳಾದ ಚೈತ್ರಾ ಮತ್ತು ಚೈತ್ರಿಯಾ ಎಂದು ಗುರುತ್ತಿಸಲಾಗಿದೆ. ಆರ್ಥಿಕ ಮುಗ್ಗಟ್ಟಿನಿಂದ ಈ ಕುಟುಂಬ ಮಂಗಳೂರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ದೇವೇಂದ್ರಪ್ಪ ಪತ್ನಿ ಮತ್ತು ಮಕ್ಕಳಿಗೆ ಮೊದಲು ವಿಷ ಉಣಿಸಿ ಬಳಿಕ ತಾನು ನೇಣಿಗೆ ಕೊರಳೊಡ್ಡಿದ್ದಾನೆ. ಸಾವಿಗೂ ಮುನ್ನ ಡೆತ್ ನೋಟನ್ನು ಬರೆದಿದ್ದು ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಭಮದು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಮೃತರ ಕುಟುಂಬ್ಥರನ್ನು ಸಂಪರ್ಕಿಸುವ ಪ್ರಯತ್ನ ನಡೆಸಲಾಗುತ್ತಿದೆ.

Read More

ಕಾರ್ಕಳ : ನಗರದ ಬಂಗ್ಲೆಗುಡ್ಡೆಯಲ್ಲಿ ಆ್ಯಂಬುಲೆನ್ಸ್‌ ಪಲ್ಟಿಯಾದ ಘಟನೆ ಮಾ. 30ರ ಸಂಜೆ ನಡೆದಿದ್ದು, ಪರಿಣಾಮ ಅದರಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಕಾರ್ಕಳ ರೋಟರಿ ಆಸ್ಪತ್ರೆಯ ಆ್ಯಂಬುಲೆನ್ಸ್‌ ಕಾರ್ಕಳದಿಂದ ಎಳ್ಳಾರೆ ಸಾಗುತ್ತಿದ್ದ ವೇಳೆ ಬಂಗ್ಲೆಗುಡ್ಡೆಯಲ್ಲಿ ಬೈಕ್‌ ಒಂದು ಅಡ್ಡ ಬಂದ ಪರಿಣಾಮ ಆ್ಯಂಬುಲೆನ್ಸ್‌ ಚಾಲಕ ಅದನ್ನು ತಪ್ಪಿಸಲು ಯತ್ನಿಸಿದ್ದರು. ಈ ಸಂದರ್ಭ ಆ್ಯಂಬುಲೆನ್ಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಆ್ಯಂಬುಲೆನ್ಸ್‌ನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಎಳ್ಳಾರೆ ಭಾಗದ ನಾಲ್ವರು ರೋಟರಿ ಆಸ್ಪತ್ರೆಯಲ್ಲಿ ಕಣ್ಣಿನ ಶಿಬಿರದಲ್ಲಿ ಸರ್ಜರಿ ಮಾಡಿಸಿಕೊಂಡು ಆಸ್ಪತ್ರೆಯ ಆ್ಯಂಬುಲೆನ್ಸ್‌ ನಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಚಾಲಕ ಯಾವುದೇ ರೀತಿಯ ಗಾಯವಾಗದೇ ಪಾರಾಗಿದ್ದಾರೆ. ಗಾಯಗೊಂಡವರನ್ನು ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆಯೊಯ್ಯಲಾಗಿದ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ.

Read More

ಬೆಳ್ತಂಗಡಿ: ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಸವಣಾಲಿನಲ್ಲಿ ನಡೆದಿದೆ. ಸವಣಾಲು ಮಸೀದಿ ಬಳಿ ಎರಡು ಬೈಕ್‌ ಗಳು ಮುಖಾಮುಖಿ ಢಿಕ್ಕಿಯಾಗಿದ್ದು ಈ ವೇಳೆ ಅಳದಂಗಡಿಯ ಕುರ್ದಲಬೆಟ್ಟು ನಿವಾಸಿ ಹೆನ್ರಿ ಡಿಸೋಜಾ (62) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೋರ್ವ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ಕರುಣಾಕರ ಹೆಗ್ಡೆ (60) ಗಂಭೀರ ಗಾಯಗೊಂಡಿದ್ದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Read More

ಮಂಗಳೂರು: ನಗರದ ಬೆಂದೂರ್ ವೆಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ತರಕಾರಿ ತಗೊಂಡು ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬಸ್ ಬಡಿದಿದ್ದು ಮಹಿಳೆ ಸ್ಥಳದಲ್ಲೇ ಒದ್ದಾಡಿ ಪ್ರಾಣ ಬಿಟ್ಟಿದ್ದು ಘಟನೆ ಬಳಿಕ ಚಾಲಕ ಬಸ್ ನೊಂದಿಗೆ ಪರಾರಿಯಾಗಿದ್ದಾನೆ. ಬಸ್ ಪತ್ತೆ ಹಚ್ಚಲು ಪೊಲೀಸರು ಸಿಸಿ ಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಪಟ್ಟ ಮಹಿಳೆ ಗುರುತು ಪತ್ತೆಯಾಗಿಲ್ಲ. ಖಾಸಗಿ ಬಸ್ ನ ಧಾವಂತಕ್ಕೆ ಒಂದು ವಾರದ ನಡುವೆ ಎರಡನೇ ಘಟನೆ ಇದಾಗಿದೆ. ಮಂಗಳೂರು ನಗರದಲ್ಲಿ ಬಸ್‌ ಗಳ ಮೇಲಾಟ ದಿನೇ ದಿನೇ ಜಾಸ್ತಿಯಾಗುತ್ತಿದ್ದು ಕಿಲ್ಲರ್ ಬಸ್‌ ಗಳ ಧಾವಂತಕ್ಕೆ ಅಮಾಯಕರು ಬಲಿಯಾಗುತ್ತಿದ್ದಾರೆ. ನಗರದ ಬೆಂದೂರು ಬಳಿ ಮೊನ್ನೆ ತಾನೆ ತಾಯಿ- ಮಗು ಪ್ರಯಾಣಿಸುತ್ತಿದ್ದ ಸ್ಕೂಟಿ ಮೇಲೆ ಬಸ್ ಹರಿದು ಮಗು ದಾರುಣವಾಗಿ ಮೃತಪಟ್ಟ ಸ್ಥಳದಲ್ಲೇ ಇಂದು ಮದ್ಯಾಹ್ನ ಮತ್ತೊಂದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸಂಚಾರಿ ಎಸಿಪಿ ಮತ್ತಿತರ ಅಧಿಕಾರಿಗಳು…

Read More

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಸಾವನ್ನಪ್ಪಿದ ಘಟ ಇಂದು ಬೆಳಿಗ್ಗೆ ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನಪ್ಪಿದ ದುರ್ದೈವಿ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆತಂದರೂ ಪ್ರಯೋಜನವಾಗಿಲ್ಲ.

Read More

ಮಂಗಳೂರು: ಹೊಸತಾಗಿ ಎಸಿ ಮೆಷಿನ್ ಕನೆಕ್ಟ್ ಮಾಡುತ್ತಿದ್ದ ವೇಳೆ ಬಹುಮಹಡಿ ಕಟ್ಟಡದ 9ನೇ ಮಹಡಿಯಿಂದ ಆಯತಪ್ಪಿ ಬಿದ್ದು ಯುವಕನೋರ್ವನು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಜೆ 6 ಗಂಟೆ ನಗರದ ನಂತೂರಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಣಿಹಳ್ಳ ನಿವಾಸಿ ವಿನಯ್ ತಾವೋ(23) ಮೃತಪಟ್ಟ ದುರ್ದೈವಿ. ವಿನಯ್ ತಾವ್ರೋ ನಂತೂರಿನ ಹಮಾರಾ ರೆಫ್ರಿಜರೇಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ಇಂದು ನಂತೂರಿನಲ್ಲಿರುವ ಮೌಂಟ್ ಟಿಯಾರಾ ಅಪಾರ್ಟೆಂಟ್ ನಲ್ಲಿ ಹೊಸದಾಗಿ ಎಸಿ ಮೆಷಿನ್ ಕನೆಕ್ಟ್ ಮಾಡಲು ತೆರಳಿದ್ದರು. ಈ ಅಪಾರ್ಟ್ ಮೆಂಟ್ ನ 9ನೇ ಮಹಡಿಯ ಮನೆಯ ಆವರಣ ಗೋಡೆಯ ಹೊರಭಾಗದಲ್ಲಿ ವಿನಯ್ ತಾವ್ರೋ ಹಾಗೂ ಮತ್ತೋರ್ವ ಯುವಕ ಮೆಷಿನ್ ಫಿಟ್ ಮಾಡುತ್ತಿದ್ದರು. ಈ ವೇಳೆ ವಿನಯ್ ಏಕಾಏಕಿ ಆಯತಪ್ಪಿ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಯುವಕನ ತಲೆ ಒಡೆದು ರಕ್ತಸ್ರಾವದಿಂದ ಮೃತನಾಗಿದ್ದಾನೆ. ಸ್ಥಳಕ್ಕೆ ಕದ್ರಿ ಪೊಲೀಸರು ಭೇಟಿ ನೀಡಿದ್ದು ವಿನಯ್ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ವಿನಯ್ ಇತ್ತೀಚೆಗಷ್ಟೆ ಎಸಿ ಕಂಪೆನಿಗೆ…

Read More

ಮಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ಬೆಳಿಗ್ಗೆಯಿಂದಲೇ ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನಿರ್ದೇಶನ ನೀಡಿದರು. ಅವರು ಮಾ.29ರ ಬುಧವಾರ ಈ ಕುರಿತು ಹಮ್ಮಿಕೊಂಡಿದ್ದ ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ, ಕಾರಣ ಅಧಿಕೃತ ಹಾಗೂ ಅನಧಿಕೃತವಾಗಿ ಹಾಕಲಾಗಿರುವ ಎಲ್ಲಾ ರೀತಿಯ ಜಾಹೀರಾತುಗಳನ್ನು ತೆರವುಗೊಳಿಸಬೇಕು, ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು, ಯಾವುದೇ ಸರ್ಕಾರಿ ಕಚೇರಿಯಲ್ಲಿ, ಸರ್ಕಾರದ ಅಧಿಕೃತ ವೆಬ್‍ಸೈಟ್‍ಗಳಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳನ್ನು ಈ ಕೂಡಲೇ ತೆರವುಗೊಳಿಸಬೇಕು ಎಂದ ಅವರು, 24, 72 ಗಂಟೆಯೊಳಗೆ ನಿರ್ವಹಿಸಬೇಕಾದ ಕರ್ತವ್ಯಗಳನ್ನು ವಿವರಿಸಿದರು ಒಮ್ಮೆ ತೆರವು ಮಾಡಲಾದ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಹಾಗೂ ಕಟ್‍ಔಟ್‍ಗಳನ್ನು ಪುನಃ ಅಳವಡಿಸಿದ್ದಲ್ಲಿ ಪ್ರಜಾಪ್ರತಿನಿಧಿ…

Read More

ಧರ್ಮಸ್ಥಳ: ಪತಿ, ಪತ್ನಿ ನಡುವೆ ಜಗಳ ನಡೆದು ಪತಿ ಮೃತಪಟ್ಟ ಘಟನೆ ಧರ್ಮಸ್ಥಳ ಕನ್ಯಾಡಿ ಗಂಗೆತ್ಯಾರ್ ಎಂಬಲ್ಲಿ ನಡೆದಿದೆ. ರಾಮಣ್ಣ ಗೌಡ ಮೃತಪಟ್ಟ ವ್ಯಕ್ತಿ. ರಾಮಣ್ಣ ಪತ್ನಿ ಚೆನ್ನಕ್ಕಗೆ ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ. ಪತ್ನಿಯೊಂದಿಗೆ ಜಗಳವಾಡಿದ ರಾಮಣ್ಣ ಗೌಡಗೆ ರಕ್ತದ ಒತ್ತಡ ಹೆಚ್ಚಿದ ಪರಿಣಾಮ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.

Read More