Author: main-admin

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ನೀಲಸಂದ್ರ ನಿವಾಸಿ ವಿದ್ಯಾರ್ಥಿಗಳಾದ ಇಮ್ರಾನ್ ಮತ್ತು ಜಿಬ್ರಾನ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಅಮಿತ್ ಶಾ ಬೆಂಗಳೂರಿನ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ ರವಿವಾರ ತಡರಾತ್ರಿ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳು ಅಮಿತ್ ಶಾ ಅವರ ಬೆಂಗಾವಲು ವಾಹನಗಳೊಂದಿಗೆ ಸಫೀನಾ ಪ್ಲಾಜಾದಿಂದ ಮಣಿಪಾಲ್ ಸೆಂಟರ್‍ ಗೆ ಹೇಗೋ ಹಠಾತ್ತನೆ ಮಧ್ಯೆ ಪ್ರವೇಶಿಸಿ ಪ್ರಯಾಣಿಸಿದ್ದಾರೆ. 300 ಮೀಟರ್‍ ವರೆಗೆ ಪೊಲೀಸರಿಂದ ತಪ್ಪುಸಿ ಪ್ರಯಾಣಿಸಿದ್ದರು. ಪೊಲೀಸರು ಮಣಿಪಾಲ ಕೇಂದ್ರದಲ್ಲಿ ಅವರನ್ನು ತಡೆದು ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಪರಾರಿಯಾಗಿದ್ದು ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ವಿದ್ಯಾರ್ಥಿಗಳು ಯಾವುದೇ ಅಪರಾಧ ಹಿನ್ನೆಲೆ ಅಥವಾ ಯಾವುದೇ ಕೆಟ್ಟ ಉದ್ದೇಶವನ್ನು ಹೊಂದಿಲ್ಲ.ಪೊಲೀಸರನ್ನು ಕಂಡು ಗಾಬರಿಗೊಂಡು ತೆರಳಿದ್ದಾರೆ ಎನ್ನಲಾಗಿದೆ. ಈ ಸಂಬಂಧ…

Read More

ಸುಳ್ಯ: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಸುಳ್ಯ ಪೇಟೆಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಚೇರಿಯನ್ನು ಜಪ್ತಿ ಮಾಡಿದೆ ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್​ನ ಮೊದಲ ಮಹಡಿಯಲ್ಲಿ ಪಿಎಫ್‌ಐ ಕಚೇರಿ ಇದ್ದು ಇದನ್ನು ವಶಕ್ಕೆ ಪಡೆದಿದೆ. ವಶಪಡಿಸಿಕೊಂಡ ಆಸ್ತಿಯ ಪ್ರತಿಯನ್ನು ಮಾಲೀಕರು, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಲಾಗಿದೆ. ಆಸ್ತಿಯನ್ನು ಗುತ್ತಿಗೆ ಅಥವಾ ಬಾಡಿಗೆಗೆ ನೀಡಬಾರದು ಪರಾಬಾರೆ ಮಾಡಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ. ಯಾವುದೇ ಆಸ್ತಿಯನ್ನು ಕಚೇರಿಯಿಂದ ಸ್ಥಳಾಂತರಿಸುವುದು ಅಥವಾ ನವೀಕರಣ ಕಾರ್ಯವನ್ನು ಕೈಗೊಳ್ಳದಂತೆ ನಿರ್ದೇಶನಗಳನ್ನು ಎನ್‌ಐಎ ನೀಡಿದೆ. ಇದೇ ಕಚೇರಿಯಲ್ಲಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ 20 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದು ,ಚಾರ್ಜ್ ಶೀಟ್‌ನಲ್ಲಿ 1,500 ಪುಟಗಳು ಮತ್ತು 240 ಸಾಕ್ಷಿಗಳ…

Read More

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಅವರ ಶಿಕಾರಿಪುರ ಪಟ್ಟಣದಲ್ಲಿರುವ ಮೈತ್ರಿ ನಿವಾಸದ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಬಂಜಾರ ಸಮುದಾಯದಿಂದ ಒಳಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದನ್ನು ವಿರೋದಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದು, ಮನೆಯ ಕಿಟಕಿ ಗಾಜು ಒಡೆದು ಹಾಕಿದ್ದಾರೆ.ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ ನೂಕಾಟ ಉಂಟಾಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಕೆಲವು ಪೊಲೀಸ್​ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಲಾಗಿದೆ.

Read More

ಬಂಟ್ವಾಳ: ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ. ವಾಹನದಲ್ಲಿ ಹಿಂಸಾತ್ಮಕವಾಗಿ ಕಟ್ಟಿಹಾಕಲಾಗಿದ್ದ ಎರಡು ಕರು, ಪಿಕಪ್ ವಾಹನ ಸೇರಿ ಒಟ್ಟು ಸುಮಾರು ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಉಪನಿರೀಕ್ಷಕನಾದ ಉದಯರವಿ ವೈಎಂ ಅವರು ಫರಂಗಿಪೇಟೆಯಲ್ಲಿ ರೌಂಡ್ಸ್ ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಪಿಕ್‌ ಅಪ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದೆ. ಇನ್ನು ಈ ವೇಳೆ ಅಮ್ಮೆಮ್ಮಾರ್‌ ರೈಲ್ವೆ ಕ್ರಾಸಿಂಗ್ ಬಳಿ ಪಿಕ್‌ ಅಪ್‌ ವಾಹನ ಬಂದಿದ್ದು, ಕೂಡಲೇ ವಾಹನವನ್ನು ನಿಲ್ಲಿಸಲು ಸೂಚನೆ ನೀಡಿದಾಗ ಸ್ವಲ್ಪ ಮುಂದಕ್ಕೆ ನಿಲ್ಲಿಸಿದ್ದು, ಬಳಿಕ ವಾಹನದ ಹತ್ತಿರ ಹೋದಾಗ ಚಾಲಕ ಪ್ರವೀಣ್ ಪೋಲೀಸರ ಬಲೆಗೆ…

Read More

ಮಂಗಳೂರು : ಮಂಗಳೂರು ನಗರದ ಮರೋಳಿ ಎಂಬಲ್ಲಿ ಆಯೋಜಿಸಿದ್ದ ಪಾರ್ಟಿಯನ್ನು ಅಡ್ಡಿಪಡಿಸಿದ ಆರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಇಂದು ಭಾನುವಾರ ರಂಗ್ ದೇ ಬರ್ಸಾ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು, ಡಿಜೆ ಪಾರ್ಟಿ ಮಾಡುತ್ತಾ ಹೋಳಿ ಎರಚಿ ಸಂಭ್ರಮಿಸುತ್ತಿದ್ದರು. ಅಶ್ಲೀಲ ವರ್ತನೆ ನಡೆಯುತ್ತಿದೆ ಎಂದು ಆರೋಪಿಸಿ ಬಜರಂಗ ದಳ ಆರೋಪಿಸಿ ದಾಳಿ ನಡೆಸಿದರು. ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ನುಗ್ಗಿದ ಬಜರಂಗದಳ ಕಾರ್ಯಕರ್ತರು ಅಲ್ಲಿದ್ದ ವಸ್ತುಗಳನ್ನು ಕಿತ್ತೆಸೆದು ಬ್ಯಾನರ್ ಹರಿದುಹಾಕಿ ದಾಂಧಲೆ ನಡೆಸಿದ್ದಾರೆ. ನಂತರ ಕಾರ್ಯಕ್ರಮ ಆಯೋಜಕರ ಮೇಲೂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಂಕನಾಡು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬೆನ್ನಲ್ಲೆ ಹೋಳಿ ಆಚರಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಬಜರಂಗದಳದ ಆರು ಸದಸ್ಯರನ್ನು ಮಂಗಳೂರು ಪೊಲೀಸರು ಬಂಧಿಸಿದ್ದು, ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Read More

ಮಂಗಳೂರು: ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಜೂಜು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಜೂಜು ಅಡ್ಡೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಿನಲ್ಲಿ ನಿರತರಾಗಿದ್ದ 14ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧಿತರಿಂದ 78,810 ರೂ. ನಗದು, 2 ಬೈಕ್ ಗಳು ಹಾಗೂ 11 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರು ಪಿಎಸ್ ವ್ಯಾಪ್ತಿಯಲ್ಲಿ ಜೂಜು ದಾಳಿ ನಡೆದಿದೆ. ಒಟ್ಟು 14 ಮಂದಿ, ನಗದು ವಶ , 2 ಬೈಕ್ ವಶಪಡಿಸಿಕೊಳ್ಳಲಾಗಿದೆ.

Read More

ಮಂಗಳೂರು: ನಗರದ ಮರೋಳಿಯಲ್ಲಿ ಹೋಳಿ ಸಂಭ್ರಮದ ಡಿಜೆ ಪಾರ್ಟಿ ನಡೆಯುತ್ತಿದ್ದ ಸ್ಥಳದಲ್ಲಿ ಬಜರಂಗದಳ ಕಾರ್ಯಕರ್ತರು ದಾಂಧಲೆ ನಡೆಸಿದ ಘಟನೆ ನಡೆದಿದೆ. ‘ರಂಗ್ ದೇ ಬರ್ಸಾ’ ಎಂಬ ಹೆಸರಿನಲ್ಲಿ ಹೋಳಿ ಆಚರಣೆ ನಡೆಯುತ್ತಿತ್ತು. ಈ ವೇಳೆ ಡಿಜೆ ಪಾರ್ಟಿಯೊಂದಿಗೆ ಯುವಕ-ಯುವತಿಯರು ಬಣ್ಣ ಎರಚಿ ಸಂಭ್ರಮಿಸುತ್ತಿದ್ದರು. ಆದ್ದರಿಂದ ಅಶ್ಲೀಲ ವರ್ತನೆ ಎಂದು ಆರೋಪಿಸಿ ಹೋಳಿ ಸಂಭ್ರಮ ನಡೆಯುತ್ತಿದ್ದ ಸ್ಥಳಕ್ಕೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಅಲ್ಲದೆ ಅನ್ಯಕೋಮಿನ ಯುವಕರೊಂದಿಗೆ ಹೋಳಿ ಆಚರಣೆ ಎಂದು ಆರೋಪಿಸಲಾಗಿದೆ. ಹೋಳಿ ಸಂಭ್ರಮದ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದು ದಾಂಧಲೆ ನಡೆಸಲಾಗಿದೆ‌. ಈ ವೇಳೆ ಬಜರಂಗದಳ ಕಾರ್ಯಕರ್ತರು ಹಾಗೂ ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಆಯೋಜಕರು ಹಾಗೂ ಹಲವರ ಮೇಲೆ ಹಲ್ಲೆಗೂ ಯತ್ನಿಸಿದ ಘಟನೆ ನಡೆದಿದೆ. ತಕ್ಷಣ ಪೊಲೀಸರು ಮಧ್ಯ ಪ್ರವೇಶಿಸಿ ಆರು ಮಂದಿ ಬಜರಂಗದಳ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Read More

ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಯೋರ್ವಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಸ್ ನಿವಾರ್ಹಕನನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ನಿವಾಸಿ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ನಿರ್ವಾಹಕ ದವಾಳ್ ಸಾಬ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿ ಇಲ್ಲಿನ ಕಲ್ಲಡ್ಕ ವಿದ್ಯಾ ಕೇಂದ್ರವೊಂದರ ವಿದ್ಯಾರ್ಥಿನಿಯಾಗಿದ್ದು, ಶನಿವಾರ ಮಧ್ಯಾಹ್ನದ ವೇಳೆ ಶಾಲೆಯಿಂದ ಮನೆಗೆ ಕಲ್ಲಡ್ಕದಿಂದ ಬಿ.ಸಿ.ರೋಡಿಗೆ ಬರುವ ವೇಳೆ ನಿವಾರ್ಹಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ನೊಂದ ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಆರೋಪಿ ದವಾಳ್ ಸಾಬ್ ಕಲ್ಲಡ್ಕದಿಂದ ಬರುವ ವೇಳೆ ಪಾಣೆಮಂಗಳೂರು ಬಸ್ ಸ್ಟಾಪ್‌ನಲ್ಲಿ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದು ಹೋಗಿದ್ದರು. ಅ ಸಂದರ್ಭದಲ್ಲಿ ಬಸ್‌ ನಲ್ಲಿ ನೊಂದ ಬಾಲಕಿ, ಬಸ್ ಚಾಲಕ ಮತ್ತು ನಿರ್ವಾಹಕ ಮೂರೇ ಜನ ಇದ್ದ ವೇಳೆ ಈತ ಲೈಗಿಂಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಾದ ಅರ್ಧ ಗಂಟೆಯಲ್ಲಿ…

Read More

ಸಂಜೆಯ ಸ್ನ್ಯಾಕ್ಸ್ ಗೆ ಏನಾದರೂ ಥಟ್ಟಂತ ಆಗುವ ರೆಸಿಪಿ ಇದ್ದರೆ ಚೆನ್ನಾಗಿರುತ್ತದೆ. ಇಲ್ಲಿ ಸುಲಭವಾಗಿ ಮಾಡುವಂತಹ ಎಗ್ ಬ್ರೆಡ್ ಟೋಸ್ಟ್ ಇದೆ. ಇದು ಬೇಗ ಆಗುವುದಲ್ಲದೇ ಹೊಟ್ಟೆಯೂ ತುಂಬುತ್ತದೆ. ಬೇಕಾಗುವ ಸಾಮಗ್ರಿಗಳು: 2 ಸ್ಲೈಸ್ ಬ್ರೆಡ್, 1 ಮೊಟ್ಟೆ, 1 ಸಣ್ಣ – ಈರುಳ್ಳಿ, 1 – ಸಣ್ಣ ಟೊಮೆಟೊ, 2 – ಹಸಿಮೆಣಸು, ಚೀಸ್ – 2 ಸ್ಲೈಸ್, ಉಪ್ಪು – ರುಚಿಗೆ ತಕ್ಕಷ್ಟು, ಚಿಟಿಕೆ – ಅರಿಶಿನ, 1 ಟೇಬಲ್ ಸ್ಪೂನ್ – ಕೊತ್ತಂಬರಿ ಸೊಪ್ಪು, 2 ಟೀ ಸ್ಪೂನ್ – ಬೆಣ್ಣೆ. ಮಾಡುವ ವಿಧಾನ: ಮೊದಲಿಗೆ ಒಂದು ಬೌಲ್ ಗೆ ಉಪ್ಪು, ಅರಿಶಿನ, ಈರುಳ್ಳಿ, ಟೊಮೆಟೊ, ಹಸಿಮೆಣಸು, ಕೊತ್ತಂಬರಿ ಸೊಪ್ಪನ್ನು ಚಿಕ್ಕದ್ದಾಗಿ ಕತ್ತರಿಸಿ ಹಾಕಿಕೊಳ್ಳಿ. ನಂತರ ಇದಕ್ಕೆ ಮೊಟ್ಟೆ ಒಡೆದು ಹಾಕಿ ಮಿಕ್ಸ್ ಮಾಡಿ. ಗ್ಯಾಸ್ ಮೇಲೆ ಒಂದು ಪ್ಯಾನ್ ಇಟ್ಟು ಅದಕ್ಕೆ ಬೆಣ್ಣೆ ಹಾಕಿ ಅದು ಕರಗುತ್ತಿದ್ದಂತೆ ಬ್ರೆಡ್ ಸ್ಲೈಸ್ ಅನ್ನು ಮೊಟ್ಟೆಯಲ್ಲಿ ಅದ್ದಿ ಪ್ಯಾನ್…

Read More

ಹೈದರಾಬಾದ್: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಹೈದರಾಬಾದ್‌ನ ಕುಶೈಗುಡಾ ಪ್ರದೇಶದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಶುಕ್ರವಾರ (ಮಾ. 24 ) ಈ ಘಟನೆ ನಡೆದಿದ್ದು, ಶನಿವಾರ ( ಮಾ.20 ರಂದು) ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ತಂದೆ, ತಾಯಿ ಹಾಗೂ ಅವರ ಮಕ್ಕಳಿಬ್ಬರು ವಿಷ ಸೇವಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿಯ ಮಕ್ಕಳಿಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದರು. (ಇಬ್ಬರೂ ಮಾನಸಿಕ ಅಸ್ವಸ್ಥರಾಗಿದ್ದರು) ಆದರೂ ದಂಪತಿ ಮಕ್ಕಳನ್ನು ನೋಡಿಕೊಳ್ಳುತ್ತಿತ್ತು. ಆದರೆ ಮಕ್ಕಳು ಇಬ್ಬರ ಆರೋಗ್ಯ ದಿನೇ ದಿನೇ ಕಳೆದಂತೆ ಬಿಗಾಡಿಸುತ್ತಿತ್ತು. ಇದರಿಂದ ದಂಪತಿ ಖಿನ್ನತೆಗೆ ಒಳಗಾಗಿತ್ತು. ಇದೇ ಕಾರಣದಿಂದ ಈ ರೀತಿ ಮಾಡಿಕೊಂಡಿರಬಹುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಕುಶೈಗುಡ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪಿ ವೆಂಕಟೇಶ್ವರಲು ತಿಳಿಸಿದ್ದಾರೆ.…

Read More