ಮುಲ್ಕಿ: ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ನಡೆದ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ರನ್ನು ಪೊಲೀಸರು ಬಂಧಿಸಿದ್ದಾರೆ.ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್ ಪಂಚರ್ ಆಗಿದ್ದು ಲಾರಿಯಲ್ಲಿದ್ದ ಮಧ್ಯಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂ ಕೇರಳ ನಿವಾಸಿ ಅನೀಶ್(42) ಎಂಬವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್ ತೆಗೆದು ದುರಸ್ತಿ ಮಾಡುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಚಲಿಸಿದ ಕಾರು ಲಾರಿಯ ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು. ಇದೀಗ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಆರೋಪಿ ಕಾರು ಚಾಲಕನನ್ನು ಹಳೆಯಂಗಡಿ ಇಂದ್ರ ನಗರ ನಿವಾಸಿ ಅರ್ಪಿತ್ ಎಂದು ಗುರುತಿಸಲಾಗಿದ್ದು, ಈತ ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ಎಂದು ತಿಳಿದು ಬಂದಿದೆ.
Author: main-admin
ಮುಂಬೈನಲ್ಲಿ ಭಯೋತ್ಪಾದನಾ ದಾಳಿ ನಡೆಸುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೇಲ್ ಸಂದೇಶ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ತಾಲಿಬಾನಿ ಸದಸ್ಯ ಎಂದು ಹೇಳಿಕೊಳ್ಳುವ ಅಪರಿಚಿತ ವ್ಯಕ್ತಿಯಿಂದ ಮೇಲ್ ಸ್ವೀಕರಿಸಲಾಗಿದೆ. ಹೀಗಾಗಿ ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ಅಲರ್ಟ್ ಆಗಿರಲು ಎನ್‌ಐಎ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. “ಬೆದರಿಕೆ ಮೇಲ್ ಕಳುಹಿಸಿದ ವ್ಯಕ್ತಿ ತನ್ನನ್ನು ತಾಲಿಬಾನಿ ಎಂದು ಹೇಳಿಕೊಂಡಿದ್ದಾನೆ. ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಯಲಿದೆ ಎಂದು ಆತ ಹೇಳಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ. ಬೆದರಿಕೆ ಮೇಲ್ ಬಂದ ನಂತರ, ಮುಂಬೈ ಪೊಲೀಸರೊಂದಿಗೆ ಎನ್‌ಐಎ ಜಂಟಿ ತನಿಖೆಯನ್ನು ಪ್ರಾರಂಭಿಸಿದೆ. ಈ ವರ್ಷದ ಜನವರಿಯಲ್ಲಿ ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಬೆದರಿಕೆ ಕರೆ ಬಂದಿತ್ತು. ಅದರಲ್ಲಿ ಅಪರಿಚಿತ ಕರೆ ಮಾಡಿದವರು ಶಾಲೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಗರದ ವಿವಿಧೆಡೆ ಬಾಂಬ್‌ಗಳನ್ನು ಇರಿಸಿರುವ ಬಗ್ಗೆ ಮಾಹಿತಿ ನೀಡುವ ಇದೇ ರೀತಿಯ ಕರೆ ಬಂದಿತ್ತು. ಪೊಲೀಸರ ಪ್ರಕಾರ, ಇನ್ಫಿನಿಟಿ ಮಾಲ್ ಅಂಧೇರಿ,…
ಬಂಟ್ವಾಳ:ಬಿಸಿರೋಡಿನ ರೈಲ್ವೆ ಓವರ್ ಬ್ರಿಡ್ಜ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಇಂದು ಬೆಳಿಗ್ಗೆ ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು, ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ನವದೆಹಲಿ: ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಐವರು ನೂತನ ನ್ಯಾಯಾಧೀಶರನ್ನು ನೇಮಕ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಇಂದು ತಿಳಿಸಿದೆ. ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ನೀಡಿರುವ ಶಿಫಾರಸುಗಳನ್ನು ಶೀಘ್ರವೇ ತೆರವುಗೊಳಿಸಲಾಗುವುದು ಎಂದು ಸರಕಾರ ಇಂದು ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ. ಎಲ್ಲಾ ಐದು ಹೆಸರುಗಳನ್ನು ಡಿಸೆಂಬರ್‌ನಲ್ಲಿ ಶಿಫಾರಸು ಮಾಡಲಾಗಿತ್ತು. ಐವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉನ್ನತ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆ 32 ಕ್ಕೆ ಏರಲಿದೆ. ಮುಖ್ಯ ನ್ಯಾಯಮೂರ್ತಿ ಸೇರಿದಂತೆ 34 ನ್ಯಾಯಾಧೀಶರು ಅಲ್ಲಿರಬಹುದು. ಪ್ರಸ್ತುತ ಇವರ ಸಂಖ್ಯೆ 27 ಇದೆ. ನ್ಯಾಯಾಧೀಶರ ನೇಮಕಾತಿ ವಿಳಂಬಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಇಂದು ನಡೆಸುತ್ತಿದೆ. ಕೊಲಿಜಿಯಂ ಶಿಫಾರಸು ಮಾಡಿರುವ ಐವರು ನ್ಯಾಯಮೂರ್ತಿಗಳ ಪದೋನ್ನತಿಯನ್ನು ಶೀಘ್ರವೇ ತೆರವುಗೊಳಿಸುವುದಾಗಿ ಸರ್ಕಾರ ಹೇಳಿದೆ. ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಎಎಸ್ ಓಕಾ ಅವರ ಪೀಠಕ್ಕೆ ಈ ಐದು ಹೆಸರುಗಳ ನೇಮಕಾತಿಯ ವಾರಂಟ್ ಅನ್ನು ಶೀಘ್ರದಲ್ಲೇ ಹೊರಡಿಸುವ…
ಪುತ್ತೂರು: ಕಾರಿಗೆ ಡಿಕ್ಕಿಯಾದ ನಾಯಿ ಕಾರ್‌ನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ಪುತ್ತೂರು ನಲ್ಲಿ ನಡೆದಿದೆ. ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 70 ಕಿಲೋಮೀಟರ್ ಸಾಗಿ ಯಾವುದೇ ಗಾಯಗಳಾಗದೆ ಸುರಕ್ಷಿತವಾಗಿ ಬಂಪರ್ ಒಳಗಿನಿಂದ ಇಳಿದು ಹೋಗಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಸ್ ತೆರಳುತ್ತಿದ್ದರು. ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಅಲ್ಲಿಂದ ಎಲ್ಲಿ ಹೋಗಿದೆ ಎನ್ನುವುದನ್ನು ಊಹಿಸಲೂ ಸುಬ್ರಹ್ಮಣ್ಯ ಅವರಿಗೆ ಕಷ್ಟವಾಗಿತ್ತು. ಅಲ್ಲಿಂದ ನೇರವಾಗಿ ಕಬಕದ ತನ್ನ ಮನೆಗೆ ಬಂದು ಕಾರನ್ನು ಪರಿಶೀಲಿಸಿದಾಗ ಬಂಪರ್‌ನ ಗ್ರಿಲ್ ತುಂಡಾಗಿರುವುದು ಗಮನಕ್ಕೆ ಬಂದಿತ್ತು. ತುಂಡಾದ ಗ್ರಿಲ್ ಮಧ್ಯೆ 70 ಕಿಲೋಮೀಟರ್ ಹಿಂದೆ ತನಗೆ ಡಿಕ್ಕಿಯಾದ ನಾಯಿ ಪ್ರತ್ಯಕ್ಷವಾಗಿದೆ. ನಾಯಿಯನ್ನು ಬಂಪರ್ ಒಳಗಿಂದ ತೆಗೆಯಲಾಗದ ಸ್ಥಿತಿಯಲ್ಲಿದ್ದ ಕಾರಣ ಪಕ್ಕದ ಗ್ಯಾರೇಜ್‌ಗೆ ತೆರಳಿ ನಾಯಿಯನ್ನು ಹೊರ ತೆಗೆಯಲು…
ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ವೇಳಾಪಟ್ಟಿಯ ಅನುಸಾರ ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯಲಿವೆ. ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮಾರ್ಚ್ 01, 2023 ರಂದು ಕೊನೆಗೊಳ್ಳಲಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಹೀಗಿದೆ: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ 23-02-2023 -ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ. 24-02-2023 – ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ. 25-02-2023 – ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ. 26-02-2023 –…
ಬ್ರಹ್ಮಾವರ: ಮದುವೆಗೆಂದು ಲಾಕರ್‌ನಿಂದ ತಂದಿದ್ದ 180.5 ಗ್ರಾಂ ತೂಕದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಹೂಡೆಯ ಅಫ್ರೀನ್ ಬಾನು ಅವರು ಹೊನ್ನಾಳದ ತಾಯಿ ಮನೆ ಸಮೀಪ ಸಂಬಂಧಿಕರ ಮನೆಯಲ್ಲಿ ಮದುವೆ ಸಮಾರಂಭ ಮುಗಿಸಿ ಮನೆಗೆ ಹೊರಡುವಾಗ ಚಿನ್ನಾಭರಣವಿದ್ದ ಬ್ಯಾಗನ್ನು ಕಾರಿನಲ್ಲಿ ಇಟ್ಟಿದ್ದರು. ಇನ್ನು ತಾಯಿ ಮನೆಯಲ್ಲಿ ಚಹಾ ಕುಡಿದು 15 ನಿಮಿಷದಲ್ಲಿ ಹಿಂದಿರುಗಿದ್ದರು. ಮನೆಗೆ ಮರಳಿ ಸ್ವಲ್ಪ ಸಮಯದಲ್ಲಿ ಬ್ಯಾಗ್ ತೆರೆದು ನೋಡುವಾಗ ಚಿನ್ನಾಭರಣ ಕಾಣೆಯಾಗಿತ್ತು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇರಳ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಕಣ್ಣೂರಿನ ಜಿಲ್ಲಾ ಸರಕಾರಿ ಆಸ್ಪತ್ರೆ ಬಳಿ ನಡೆದಿದೆ. ಮೃತ ದಂಪತಿಗಳನ್ನು ಕುಟ್ಟಿಯತ್ತೂರು ಕರಂಬುವಿನ ಪ್ರಜಿತ್(32) ಮತ್ತು ಅವರ ಪತ್ನಿ ರೀಶಾ (26) ಎಂದು ಗುರುತಿಸಲಾಗಿದೆ. ಇಬ್ಬರೂ ಕುಟ್ಟಿಯತ್ತೂರಿನಿಂದ ಜಿಲ್ಲಾ ಆಸ್ಪತ್ರೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.ಪ್ರಜಿತ್ ಮತ್ತು ರೀಶಾ ಇಬ್ಬರೂ ಕಾರಿನ ಮುಂದಿನ ಸೀಟ್ ನಲ್ಲಿ ಕುಳಿತಿದ್ದರು. ಕಾರಿನ ಹಿಂದಿನ ಸೀಟಿನಲ್ಲಿ ಮಗು ಸೇರಿದಂತೆ ಇನ್ನೂ ನಾಲ್ವರು ಪ್ರಯಾಣಿಕರಿದ್ದರು. ಕಾರಿಗೆ ಬೆಂಕಿ ಹೊತ್ತಿಕೊಂಡಾಗ ಆ ನಾಲ್ವರು ಕಾರಿನಿಂದ ಜಿಗಿದಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬೆಂಕಿ ಹೊತ್ತಿಕೊಂಡಾಗ ಕಾರು ಚಲಾಯಿಸುತ್ತಿದ್ದ ಪ್ರಜಿತ್ ಹಿಂಬಾಗಿಲು ತೆರೆದು ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರು ಪಾರಾಗಲು ಸಹಾಯ ಮಾಡಿದ್ದಾರೆ. ಆದರೆ ತಾವು ಪಾರಾಗಲು ಮುಂದಿನ ಬಾಗಿಲು ತೆರೆಯಲು ಯತ್ನಿಸಿ ವಿಫಲವಾಗಿದ್ದಾರೆ ಎಂದು…
ಉಳ್ಳಾಲ: ಉಳ್ಳಾಲದ ಮುಕ್ಕಚ್ಚೇರಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವೃದ್ಧ ಮಹಿಳೆಯ ಮೃತದೇಹ ಇಂದು ಪತ್ತೆಯಾಗಿದೆ. ವಾರೀಸುದಾರರಿದ್ದಲ್ಲಿ ಉಳ್ಳಾಲ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಕೋರಲಾಗಿದೆ. ಸುಮಾರು 60-70 ರ ಹರೆಯದ ಮಹಿಳೆ ಮೃತದೇಹ ಇದಾಗಿದೆ. ಸೀರೆ ಉಟ್ಟಿರುವ ಮಹಿಳೆ ಇಂದೇ ಸಮುದ್ರಕ್ಕೆ ಬಿದ್ದಿರುವ ಶಂಕೆಯಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮ್ಮರ್ ಸ್ಯಾಂಡ್ ಹಿಂಭಾಗದಲ್ಲಿ ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಉಳ್ಳಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಅದರಂತೆ ಪೊಲೀಸರು ಗೃಹರಕ್ಷಕ ದಳದ ಸಿಬ್ಬಂದಿ ಮೊಗವೀರಪಟ್ನ ನಿವಾಸಿ ಪ್ರಸಾದ್ ಸುವರ್ಣ ಅವರಿಗೆ ಮಾಹಿತಿ ನೀಡಿದ್ದು, ಅವರು ಖುದ್ದಾಗಿ ಸಮುದ್ರದಲ್ಲಿ ಈಜಿ ಮೃತದೇಹವನ್ನು ದಡಕ್ಕೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರಕಾರ ದ.ಕ. ಜಿಲ್ಲಾ ಎಸ್ಪಿಯಾಗಿದ್ದ ಸೋನಾವಾನೆ ಋಷಿಕೇಶ್ ಭಗವಾನ್ ಅವರನ್ನು ಗುಪ್ತಚರ ಎಸ್ಪಿಯಾಗಿ ವರ್ಗಾಯಿಸಿತ್ತು. ಗುಪ್ತಚರ ಎಸ್ಪಿಯಾಗಿದ್ದ ವಿಕ್ರಮ್ ಅವರನ್ನು ದ.ಕ. ಎಸ್ಪಿಯಾಗಿ ಮಂಗಳವಾರ ನಿಯೋಜಿಸಿತ್ತು. ಎಸ್ಪಿ ವಿಕ್ರಮ್ ಅಮ್ಟೆ ಅವರು ಈ ಹಿಂದೆ ದ.ಕ. ಮತ್ತು ಶಿವಮೊಗ್ಗದಲ್ಲಿ ಜಿಲ್ಲಾ ಹೆಚ್ಚುವರಿ ಎಸ್ಪಿಯಾಗಿ, ಬೆಳಗಾವಿ ಡಿಸಿಪಿಯಾಗಿ ಸೇವೆ ಸಲ್ಲಿಸಿದ್ದಾರೆ.










