ಬಂಟ್ವಾಳ : ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳ ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ನಡೆದಿದೆ. ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ .ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿದೆಯಾ ಎಂಬ ಸಂಶಯ ವ್ಯಕ್ತವಾಗಿದೆ. ಸಾರ್ವಜನಿಕರು ಬೆಂಕಿಯನ್ನು ನೋಡಿ ಅಗ್ನಿಶಾಮಕ ದಳದ ವರಿಗೆ ಸಂಪರ್ಕ ಮಾಡಿದ್ದಾರೆ.ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡುತ್ತಿದ್ದಾರೆ.
Author: main-admin
ಮಂಗಳೂರು: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನಸಹಾಯಗಳನ್ನು ಪಡೆಯುತ್ತಿರುವ ಅನರ್ಹ ಕಾರ್ಮಿಕರು ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ನಿರ್ವಹಿಸದೇ ಇರುವ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಲು ಇದೇ ಫೆ.25ರವರೆಗೆ ಬೋಗಸ್ ಕಾರ್ಡು ರದ್ದತಿ ಅಭಿಯಾನವನ್ನು ಕೈಗೊಳ್ಳಲಾಗಿದೆ. ಅಭಿಯಾನದಲ್ಲಿ ಗುರುತಿನ ಚೀಟಿ ಪಡೆದಿರುವ ಅನರ್ಹ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಿ, ಮಂಡಳಿಯ ಯಾವುದೇ ಸೌಲಭ್ಯಗಳನ್ನು ನೀಡದಂತೆ ತಡೆಹಿಡಿಯಲು ಕ್ರಮವಹಿಸಲಾಗುವುದು.ಅನರ್ಹ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಲ್ಲಿ ಅಥವಾ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಹೊರತುಪಡಿಸಿ ಅನ್ಯವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಫಲಾನುಭವಿಗಳು ಕೂಡಲೇ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯನ್ನು ಸ್ವಯಂ ಇಚ್ಛೆಯಿಂದ ಫೆ.25ರೊಳಗೆ ಸಂಬಂಧಪಟ್ಟ ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ನಿರೀಕ್ಷಕರ ಕಚೇರಿಗೆ ಹಿಂತಿರುಗಿಸಿ ಸದಸ್ಯತ್ವ ರದ್ದುಗೊಳಿಸಬೇಕು.ತಪ್ಪಿದಲ್ಲಿ ಇಲಾಖಾ ಅಧಿಕಾರಿಗಳು, ನಿರೀಕ್ಷಕರು ಖುದ್ದಾಗಿ ಪರಿಶೀಲಿಸಿ ಅನರ್ಹ ಕಾರ್ಮಿಕರು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹೊರವಲಯದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೋಳ್ಯದಲ್ಲಿ ನಡೆದಿದೆ. ಪುತ್ತೂರು ದ್ವಾರಕ ಕನ್‌ಸ್ಟ್ರಕ್ಷನ್‌ನ ಶರಣ್ ಗಾಯಗೊಂಡವರು. ಶರಣ್ ಸೈಟ್ ಇನ್‌ಸ್ಪೆಕ್ಷನ್ ಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಪೋಳ್ಯ ಸಮೀಪ ವಿರುದ್ಧ ದಿಕ್ಕಿನಿಂದ ಬಂದ ಮಾರುತಿ ವ್ಯಾನ್ ಡಿಕ್ಕಿ ಹೊಡೆದಿದ್ದು, ಈ ಪರಿಣಾಮ ಘಟನೆಯಿಂದ ತೀವ್ರ ಗಾಯಗೊಂಡ ಶರಣ್ ಅವರನ್ನು ಅದೇ ದಾರಿಯಲ್ಲಿ ಬರುತ್ತಿದ್ದ ಡಾ. ದೇವಿಪ್ರಸಾದ್ ಅವರು ಎಂಬವರು ತನ್ನ ವಾಹನದಲ್ಲಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ : ಯಕ್ಷಗಾನ ವಿದ್ವಾಂಸ ಹಾಗೂ ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 11 ಮತ್ತು 12 ರಂದು ಉಡುಪಿಯ ಎಂ.ಜಿ.ಎA ಕ್ರೀಡಾಂಗಣದಲ್ಲಿ ನಡೆಯುವ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಹೇಳಿದರು. ಅವರು ಸೋಮವಾರ ನಗರದ ಎಂ.ಜಿ.ಎ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಯಕ್ಷಗಾನ ಸಮ್ಮೇಳನದ ಪೂರ್ವಭಾವಿ ತಯಾರಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಯಕ್ಷಗಾನ ಸಮ್ಮೇಳನವು ಸಾಹಿತ್ಯ ಸಮ್ಮೇಳನದ ಮಾದರಿಯಲ್ಲಿ ಅದ್ಧೂರಿ ಮೆರವಣಿಗೆಯೊಂದಿಗೆ ಪ್ರಾರಂಭವಾಗಲಿದ್ದು, ಮಾನ್ಯ ಮುಖ್ಯಮಂತ್ರ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಚಿವರು, ಶಾಸಕರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದರು. ಸಮ್ಮೇಳನದಲ್ಲಿ ಎರಡು ದಿನ ಗೋಷ್ಠಿ, ಸನ್ಮಾನ, ಹಾಗೂ ಯಕ್ಷಗಾನ ಪ್ರದರ್ಶನ ನಡೆಯಲಿದ್ದು, ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಎರಡು ದಿನ ಊಟ, ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು. ಯಕ್ಷಗಾನ ಸಂಬAಧಿಸಿದ ಕರಕುಶಲ ವಸ್ತುಗಳು, ವೇಷಭೂಷಣ, ವಾದ್ಯ ಪರಿಕರ ಹಾಗೂ ಪುಸ್ತಕಗಳ ಮಳಿಗೆಗಳು ಸಮ್ಮೇಳನದ ಪ್ರಧಾನ…
ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜ.30 ರಂದು ಸಂಜೆ ಪ್ರಕರಣ ಬೆಳಕಿಗೆ ಬಂದಿತ್ತು. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು. ಬಾಡಿಗೆ ಮನೆ ಮಾಲೀಕರು ವೃದ್ದರಾಗಿದ್ದು ಅಸೌಖ್ಯದಿಂದಿದ್ದಾರೆ. ಕೆಳಗಿನ ಅಂತಸ್ತಿನಲ್ಲಿ ಮಾಲೀಕರಿದ್ದರೆ, ಮೇಲಿನ ಅಂತಸ್ತಿನಲ್ಲಿ ಬಾಡಿಗೆ ಕುಟುಂಬ ವಾಸ್ತವ್ಯವಿತ್ತು. ಸರಿತಾ ವರ್ಮ ವಿಶೇಷ ಚೇತನರಾಗಿದ್ದು, ಬಾಯಿ ಮತ್ತು ಕಿವಿ ಕೇಳದ ಸ್ಥಿತಿಯಲ್ಲಿದ್ದರು. ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಸಂಶಯಕ್ಕೆ ಕಾರಣವಾಗಿದ್ದು, ಹತ್ಯೆ ನಡೆಸಿದ ಬಳಿಕ ಯುವತಿಯನ್ನು ನೇಣುಹಾಕಿದರೆ ಅನ್ನುವ ಸಂಶಯವನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ. ಕೆಳಗಿನ…
ಮಂಗಳೂರು: ಚುನಾವಣೆ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಭಗವಾನ್ ಸೋನಾವಣೆ ಅವರನ್ನು ವರ್ಗಾವಣೆ ಮಾಡಲಾಗಿದ್ದು. ಇದೀಗ ಅವರ ಜಾಗಕ್ಕೆ ನೂತನ ಎಸ್‌ಪಿಯಾಗಿ ಗುಪ್ತಚರ ವಿಭಾಗದ ಅಮಾಟೆ ವಿಕ್ರಮ್ ಅವರನ್ನು ನಿಯೋಜಿಸಲಾಗಿದೆ. 2015ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಹೃಷಿಕೇಶ್ ಅವರು 2021ರ ಎಪ್ರಿಲ್‌ನಲ್ಲಿ ದ.ಕ. ಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಕೊರೊನಾ ಸಂದರ್ಭ ಯಶಸ್ವಿ ನಿರ್ವಹಣೆ, ಕೋಮು ಸಾಮರಸ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಭಾರೀ ಸವಾಲಾಗಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸೇರಿದಂತೆ ಹಕವು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದರು.
ಮಂಗಳೂರು; ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದ ಋಷಿಕೇಷ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ಅವರನ್ನು ಎಸ್ ಪಿಯಾಗಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ. 2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್’ಪಿಯಾಗಿ ನೇಮಕಗೊಂಡಿದ್ದರು. ಇನ್ನು ಬೀದರ್ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ಹಾಗೂ ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ ಚೆನ್ನಬಸವಣ್ಣ ಅವರನ್ನು ಬೀದರ್ ಜಿಲ್ಲೆಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಳ್ತಂಗಡಿ: ಮಾಲಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಮಗುಚಿ ಬಿದ್ದು ಎಳೆಯ ಮಗುವೊಂದು ದಾರುಣವಾಗಿ ಮೃತಪಟ್ಟ ಘಟನೆ ಮಾಲಾಡಿಯಲ್ಲಿ ಸೋಮವಾರ ಸಂಭವಿಸಿದೆ. ಕಾರ್ಕಳ ನಿಟ್ಟೆ ನಿವಾಸಿಗಳಾಗಿರುವ ಸಂತೋಷ್ ಹಾಗೂ ಗೀತಾ ದಂಪತಿಗಳ ಒಂದು ವರ್ಷದ ಮಗುವೇ ಅಪಘಾತದಲ್ಲಿವಮೃತಪಟ್ಟ ಮಗುವಾಗಿದೆ. ಇವರು ಸಂಬಂಧಿಕರ ಮನೆಗೆಂದು ಬಂದವರಾಗಿದ್ದಾರೆ. ಕೊಲ್ಪೆದ ಬೈಲಿನಿಂದ ಗರ್ಡಾಡಿಗೆ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಅಪಘಾತದ ತೀವ್ರತೆಗೆ ಮಗು ತಾಯಿಯ ಕೈಯಿಂದ ರಸ್ತೆಗೆ ಎಸೆಯಲ್ಪಟ್ಟಿದೆ. ರಿಕ್ಷಾದಲ್ಲಿದ್ದ ಮಗುವಿನ ತಾಯಿ ಗೀತಾ ಹಾಗೂ ರತ್ನ ಎಂಬವರಿಗೆ ಗಾಯಗಳಾಗಿದೆ. ರಿಕ್ಷಾ ಚಾಲಕನಿಗೂ ಗಾಯಗಳಾಗಿದೆ. ರಸ್ತೆಗೆ ಎಸೆಯಲ್ಪಟ್ಟ ಮಗುವಿಗೆ ಹೊರನೋಟಕ್ಕೆ ಯಾವುದೇ ಗಾಯಗಳಾಗಿರಲಿಲ್ಲ, ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ಕೊಂಡೊಯ್ಯದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮಗು ಮೃತಪಟ್ಟಿತ್ತು ಎನ್ನಲಾಗಿದೆ. ಘಟನೆಯ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು:ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಎಂಬಲ್ಲಿ ನಡೆದಿದೆ ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ.ಈತ ಹೆಚ್ಚು ಮೊಬೈಲ್ ಪೋನ್ ಬಳಕೆ ಮಾಡುತ್ತಿದ್ದ.ಇದಕ್ಕೆ ತಾಯಿ ಮೊಬೈಲ್ ಬಳಸದಂತೆ ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದು ಬಾಗಿಲು ಹಾಕಿಕೊಂಡು ಜ್ಞಾನೇಶ್ ಕುಳಿತುಕೊಂಡಿದ್ದ.ಕೆಲ ಸಮಯದ ಬಳಿಕ ಪೋಷಕರು ನೋಡಿದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ. ತಕ್ಷಣ ಬಾಗಿಲು ತೆರೆದು ನೇಣನ್ನು ಕತ್ತರಿಸಿ ಕೆಳಗೆ ಇಳಿಸಿ ನೋಡಿದಾಗ ಬಾಲಕ ಮೃತಪಟ್ಟಿರುವುದು ಕಂಡು ಬಂದಿದೆ.
ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, 148 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ. 2023 ರ ವಿಧಾನಸಭೆ ಚುನಾವಣೆ ಹಿನ್ನಲೆ 148 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಚುನಾವಣಾ ಆಯೋಗ ಸೂಚನೆ ಮೇರೆಗೆ ವರ್ಗಾವಣೆ ಮಾಡಲಾಗಿದೆ.










