ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ತೆರಿಗೆ ವಂಚಿಸಿ ವ್ಯಾಪಾರ ಮಾಡುತ್ತಿದ್ದ ಚಿನ್ನದ ವ್ಯಾಪಾರಿಗಳ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಯನಗರ, ಬಸನಗೌಡ, ಯಶವಂತಪುರ, ಚಿಕ್ಕಪೇಟೆ ಸೇರಿದಂತೆ 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಚಿನ್ನದ ಅಂಗಡಿಗಳ ಮಾಲೀಕರ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
Author: main-admin
ದೆಹಲಿಯ ಪಶ್ಚಿಮ ವಿಹಾರ್ ನಲ್ಲಿ ಸೋಮವಾರ 32 ವರ್ಷದ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಪೊಲೀಸರ ಪ್ರಕಾರ, ಮೃತರನ್ನು ಜ್ಯೋತಿ ಎಂದು ಗುರುತಿಸಲಾಗಿದ್ದು, ಘಟನೆ ಸಂಭವಿಸಿದಾಗ ಸಂಜೆ 7:30 ರ ಸುಮಾರಿಗೆ ತನ್ನ ಕಚೇರಿಯಿಂದ ಹಿಂತಿರುಗುತ್ತಿದ್ದರು. ಮಹಿಳೆ ಫ್ಲಿಪ್ ಕಾರ್ಟ್ ನ ಕೊರಿಯರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಮೃತಳ ಪತಿ ದೀಪಕ್ ಅವರು ತಮ್ಮ ಮನೆಗೆ ಹೋಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಬೈಕ್ ನಲ್ಲಿ ಬಂದಿದ್ದು, ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ.
ಮಂಗಳೂರು: ತುಳು ಚಿತ್ರರಂಗ ರಂಗಭೂಮಿ ಹಾಸ್ಯನಟ ಅರವಿಂದ್ ಬೋಳಾರ್‌ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೊಳಗಾದ ಘಟನೆ ಮಂಗಳೂರು ಪಂಪ್‌ವೆಲ್ ಬಳಿ ನಡೆದಿದೆ. ತುಳುನಾಡ ಮಾಣಿಕ್ಯ ಖ್ಯಾತಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಚಲಾಯಿಸುತ್ತಿದ್ದ ಆಕ್ಟೀವಾ ಹೊಂಡಾ ಸ್ಕಿಡ್ ಹೊಡೆದು ಅಪಘಾತಕ್ಕೊಳಗಾಗಿದೆ. ಚಿಕಿತ್ಸೆಗಾಗಿ ಎನೆಪೋಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿದ್ದು, ಆಪರೇಷನ್ ನಡೆಸುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದ್ದು. ಹೆಚ್ಚಿನ ಮಾಹಿತಿ ಇನ್ನಷ್ಟು ತಿಳಿಯಬೇಕಿದೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 34 ಡಿವೈಎಸ್ಪಿಗಳನ್ನು ವರ್ಗಾವಣೆ ( DYSP Officer Transfer ) ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ಆದೇಶ ಹೊರಡಿಸಲಾಗಿದ್ದು, ಚುನಾವಣಾ ಆಯೋಗದ ಸೂಚನೆಯ ಮೇರೆಗೆ ವಿವಿಧೆಡೆ ಕೆಲ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಂತ 34 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಅಂದಹಾಗೇ ಬಳ್ಳಆರಿ ನಗರ ಉಪ ವಿಭಾಗದ ಡಿವೈಎಸ್ಪಿಯಾಗಿದ್ದಂತ ಶೇಖರಪ್ಪ ಹೆಚ್ ಅವರನ್ನು ಗಂಗಾವತಿ ಉಪ ವಿಭಾಗಕ್ಕೆ, ಚಿಂಚೋಳಿ ಉಪ ವಿಭಾಗದ ಬಸವರಾಜು ಕೆ ಅವರನ್ನು ಬಳ್ಳಾರಿ ನಗರ ಉಪ ವಿಭಾಗಕ್ಕೆ, ವಿರೇಶ್ ಟಿ ದೊಡ್ಡಮನಿ ಅವರನ್ನು ಬಳ್ಳಾರಿ ವಲಯ ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಎಸ್ ವಿ ಗಿರೀಶ್ ಅವರನ್ನು ಹುಬ್ಬಳ್ಳಿ-ಧಾರವಾಡ ನಗರ ಸಿಸಿಬಿ ಡಿವೈಎಸ್ಪಿಯಾಗಿ, ಗೋಪಾಲಕೃಷ್ಣ ಬಿ ಗೌಡರ್ ಅವರನ್ನು ಬೆಳಗಾವಿ ಗ್ರಾಮಾಂತರ ಉಪ ವಿಭಾಗಕ್ಕೆ, ನಾರಾಯಣ ಬರಮನಿ ಅವರನ್ನು ಹುನಗುಂದ ಉಪ ವಿಭಾಗಕ್ಕೆ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲದ ರಾ.ಹೆ. 66 ರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ. ಉಪ್ಪಳ ಹಿದಾಯತ್ ನಗರ ನಿವಾಸಿ ಬಷಾರ ಅಹಮ್ಮದ್ (22) ಮೃತರಾಗಿದ್ದಾರೆ. ಇನ್ನೋರ್ವ ಗಾಯಾಳು ಗುರುತು ಪತ್ತೆಯಾಗಿಲ್ಲ. ಕೇರಳ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ. ನಾಲ್ವರಿದ್ದ ಕಾರು ಕೊಲ್ಯ- ಅಡ್ಕ ಬಳಿ ರಸ್ತೆ ವಿಭಜಕವನ್ನು ಏರಿ, ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಂಭೀರ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿ ನಿಯಾಗಿದ್ದಾರೆ. ನಾಲ್ವರು ಗೆಳೆಯರಾಗಿದ್ದರೆಂದು ತಿಳಿದುಬಂದಿದೆ. ಅಪಘಾತ ನಡೆದ ಸ್ಥಳಕ್ಕೆ ಸಂಚಾರಿ ಹಾಗೂ ಉಳ್ಳಾಲ ಠಾಣಾ ಪೊಲೀಸರು ತಡವಾಗಿ ಆಗಮಿಸಿದ್ದರು ಎಂದು ಆರೋಪಿಸಿ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು.…
ಕರಾವಳಿಯ ಪುತ್ತೂರಿನಲ್ಲಿ ನಡೆಯುತ್ತಿರುವ ಕಂಬಳದಲ್ಲಿ ಬಿಗ್ಬಾಸ್ ಖ್ಯಾತಿಯ ನಟಿ ಸಾನ್ಯಾ ಐಯ್ಯರ್ ಅವರ ಕೈ ಹಿಡಿದು ಎಳೆದ ಘಟನೆ ನಡೆದಿದೆ. ನಟಿ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಐ ಲವ್ ಯೂ ಎಂದು ಹೇಳಿ ಕಿರುಚುತ್ತಿದ್ದ ಅಭಿಮಾನಿ ಬಳಿಕ ವೇದಿಕೆಯಿಂದ ಇಳಿದ ನಟಿಯ ಕೈ ಹಿಡಿದಿದ್ದಾನೆ. ಈ ದಿಢೀರ್ ಘಟನೆಯಿಂದ ನಟಿ ಮುಜುಗರಕ್ಕೊಳಗಾಗಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅದ್ಧೂರಿ ಕಂಬಳ ನಡೆಯುತ್ತಿದೆ. ಜಾತ್ರೆಯಂತೆ ಅದ್ಧೂರಿಯಾಗಿ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ವೀಕ್ಷಿಸಲು ನೆರೆಯ ಕೇರಳದಿಂದಲೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ನಟಿ ಸಾನ್ಯಾ ಐಯ್ಯರ್ ಅವರು ಬಿಗ್ಬಾಸ್ ಕನ್ನಡ ಒಟಿಟಿ ಹಾಗೂ ಬಿಗ್ಬಾಸ್ ಸೀಸನ್ 9ರಲ್ಲಿ ಭಾಗವಹಿಸಿ ಹೆಚ್ಚು ಫೇಮಸ್ ಆಗಿದ್ದರು. ಇವರು ಕನ್ನಡ ಕಿರುತೆರೆಗೆ ಬಾಲನಟಿಯಾಗಿ ಎಂಟ್ರಿ ಕೊಟ್ಟು ಹಲವಾರು ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಮಂಗಳೂರು: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆಯಾಗಿದ್ದಾಳೆ. ನಾಪತ್ತೆಯಾಗಿದ್ದ ಕಮಲಾಕ್ಷ ಎಂಬವರ ಪುತ್ರಿ, ನಗರದ ಫೈನಾನ್ಸ್ ಕಂಪನಿಯೊಂದರ ಉದ್ಯೋಗಿ ಶಿವಾನಿ (20)ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದು, ಪೊಲೀಸರು ತಂತ್ರಜ್ಞಾನ ಮಾಹಿತಿ ಆಧಾರದಲ್ಲಿ ಪತ್ತೆ ಮಾಡಿ ಕರೆ ತಂದಿದ್ದಾರೆ.ಜ.24ರಂದು ನಗರದ ಕಂಕನಾಡಿ ಠಾಣೆಯ ಪೊಲೀಸ್ ಆಧಿಕಾರಿಗಳ ಮುಂದೆ ಹಾಜರಾಗಿ ತಾನು ಪ್ರೀತಿಸಿದವನನ್ನು ಸ್ವಯೇಚ್ಚೆಯಿಂದ ಮದುವೆಯಾಗಿದ್ದಾಗಿ ಹೇಳಿಕೆ ನೀಡಿದ್ದು ಪತಿಯೊಂದಿಗೆ ಬಾಳುವುದಾಗಿ ಲಿಖಿತ ಹೇಳಿಕೆ ನೀಡಿದ್ದಾಳೆ. ಜಿಹಾದ್ ಆತಂಕದ ನಡುವೆ ಒಂದುವಾರ ಪೊಲೀಸರು ಪತ್ತೆಗೆ ಪ್ರಯತ್ನಿಸಿದ್ದರು. ಗೋವಾ, ಮುಂಬೈಗೆ ತೆರಳಿದ್ದ ಜೋಡಿ ಹಣದ ಸಮಸ್ಯೆ ಎದುರಾದಾಗ ಎರಡು ಮೊಬೈಲ್ ಮಾರಿ ಅದರ ಹಣದಿಂದ ಸ್ವಲ್ಪ ಸಮಯ ಕಳೆದಿದ್ದರು. ಸ್ನೇಹಿತರ ಜತೆ ಸಂಪರ್ಕ ಹೊಂದಿದ್ದನ್ನು ಪತ್ತೆ ಹಚ್ಚಿದ ಪೊಲೀಸರು ಯುಪಿಐ ಹಣವನ್ನು ಹಾಕಿದ ವಿಳಾಸ ಪತ್ತೆ ಮಾಡಿ ಈ ಜೋಡಿಯ ಸಂಪರ್ಕ ಸಾಧಿಸಿದ್ದರು.
ಪುತ್ತೂರು: ನಗರದಲ್ಲಿ ನಡೆಯುತ್ತಿರುವ ಕೋಟಿ-ಚೆನ್ನಯ ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಅಭಿಮಾನಿಯೊಬ್ಬ ಕಿರಿಕ್ ಮಾಡಿರುವ ಘಟನೆ ನಡೆದಿದೆ. ಚಿತ್ರನಟಿ ಸಾನಿಯಾ ಅಯ್ಯರ್ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ಅತಿಥಿಯಾಗಿ ಆಗಮಿಸಿದ್ದು, ವೇದಿಕೆಯಿಂದ ಇಳಿದು ಬರುವ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಸೆಲ್ಫಿ ಕೆಳುವ ನೆಪದಲ್ಲಿ ಸಾನಿಯಾ ಅಯ್ಯರ್ ಕೈ ಹಿಡಿದು ಎಳೆದಿರುವ ಆರೋಪ ಎದುರಾಗಿದೆ, ಇದರಿಂದ ಸಾನಿಯ ಅಯ್ಯರ್ ಮುಜುಗರಕ್ಕೊಳಗಾಗಿದ್ದರೆ. ಇದೇ ಅಭಿಮಾನಿ ಸಾನಿಯಾ ಅಯ್ಯರ್ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಐ ಲವ್ ಯೂ ಹೇಳುತ್ತಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷೀಕೇಶ್ ಸೊನವಣೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರೈ (73) ಅವರು ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರೈ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಇಂದು ಸಂಜೆ ಮಂದೀಪ್ ರಾಯ್ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.ಕಳೆದ ವರ್ಷದ ಡಿಸೆಂಬರ್ ನಲ್ಲಿ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟು ಮಿಂಚಿನ ಓಟ, ಬೆಂಕಿಯ ಬಲೆ, ಏಳು ಸುತ್ತಿನ ಕೋಟೆ, ಆಕಸ್ಮಿಕ, ರೇ, ಆಪ್ತ ರಕ್ಷಕ, ಅಮೃತಧಾರೆ, ಕುರಿಗಳು ಸಾರ್ ಕುರಿಗಳು ಸೇರಿದಂತೆ 500 ಕ್ಕೂ ಹೆಚ್ಚು ಸಿನಿಮಗಳಲ್ಲಿ ನಟಿಸಿದ್ದಾರೆ.
ಮಂಗಳೂರು: ಪ್ರಸ್ತುತ ದೇಶದಲ್ಲಿ ಸರಕಾರದಿಂದ ಮಂಜೂರಾಗುವ 100 ರೂ. ಅನುದಾನದಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆಯಾಗುತ್ತಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ. ರೋಟರಿ ಜಿಲ್ಲೆ 3181ರ ವತಿಯಿಂದ ಶನಿವಾರ ಮಂಗಳೂರಿನಲ್ಲಿ ಆಯೋಜಿಸಿದ ಜಿಲ್ಲಾ ಸಮಾವೇಶ “ಪರಿಕಲ್ಪನೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 1985ರಲ್ಲಿ ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದಾಗ ಸರಕಾರದಿಂದ ಮಂಜೂರಾಗುವ ಪ್ರತೀ 1 ರೂ. ಅನುದಾನದಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗಾಗಿ ಬಳಕೆಯಾಗುತ್ತದೆ ಎನ್ನುವ ಮಾತು ಚಾಲ್ತಿಯಲ್ಲಿತ್ತು. ಇಂದಿನ ಪರಿಸ್ಥಿತಿ ಅದನ್ನೂ ಮೀರಿ ಹೋಗಿದ್ದು, ನಮ್ಮ ದುರಾಸೆ ಮಾತ್ರ ವೃದ್ಧಿಯಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಕೇಂದ್ರ, ರಾಜ್ಯ ಸರಕಾರಗಳು ಬೊಕ್ಕಸದಿಂದ ಕೋಟ್ಯಂತರ ರೂಪಾಯಿ ವ್ಯಯಿಸುತ್ತವೆ. ಆದರೆ ನಾವು ಯಾವ ರೀತಿಯ ಅಭಿವೃದ್ಧಿ ಕಾಣುತ್ತಿದ್ದೇವೆ ಎಂದು ಪ್ರಶ್ನಿಸಿದರು. ದೇಶದಲ್ಲಿ ಶ್ರೀಮಂತರಾಗಲು ಪೈಪೋಟಿ ಉಂಟಾಗಿದ್ದು, ಇದು ಸಮಾಜದಲ್ಲಿ ಬಿಕ್ಕಟ್ಟು ಸೃಷ್ಟಿಸಲಿದೆ. ದುರಾಸೆ ಎಂಬ ರೋಗ ಎಲ್ಲೆಡೆ ಹರಡುತ್ತಿದೆ. ಇದು ಎಲ್ಲಿಗೆ ತಲುಪುತ್ತದೆ ಎಂದು ಯೋಚಿಸುವಾಗ ಭಯವಾಗುತ್ತದೆ ಎಂದರು.










